Author: Author AIN

ದಿವಂಗತ ನಟಿ ಶ್ರೀದೇವಿ ಅವರ ಎರಡನೇ ಮಗಳು ಖುಷಿ ಕಪೂರ್ ಗ್ಲಾಮರ್ ​ನಲ್ಲಿ ಅಕ್ಕನನ್ನೇ ಮೀರಿಸುವಂತಿದ್ದಾರೆ. ಸದ್ಯ ಖುಷಿಯ ಹಾಟ್‌ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾಲಿವುಡ್ ಸೂಪರ್​ಸ್ಟಾರ್ ಶ್ರೀದೇವಿ ಮಗಳು ಖುಷಿ ಕಪೂರ್ ಬಾಲಿವುಡ್ ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಸೌಂದರ್ಯದಲ್ಲಿ ಅಕ್ಕನನ್ನೇ ಮೀರಿಸುವಂತಿದ್ದು ನಟಿಯ ಸೌಂದರ್ಯಕ್ಕೆ ಫ್ಯಾನ್ಸ್ ಕ್ಲೀನ್ ಬೋಲ್ಡ್ ಆಗಿದ್ದಾರೆ. ಖುಷಿ ಕಪೂರ್ ಇದುವರೆಗೂ ಯಾವುದೇ ಸಿನಿಮಾ ಮಾಡಿಲ್ಲ . ಆದರೂ ಆಕೆಯ ಮೇಲಿರೋ ಕ್ರೇಜ್ ಅಷ್ಟಿಷ್ಟಲ್ಲ. ಸೋಷಿಯಲ್‌ ಮೀಡಿಯಾದಲ್ಲಿ ಕಾಲ ಕಾಲಕ್ಕೆ ಗ್ಲಾಮರಸ್‌ ಫೊಟೋ ಹಂಚಿಕೊಳ್ಳುವ ಸುಂದರಿಗೆ, ಸಾಕಷ್ಟು ಪ್ಯಾನ್ಸ್‌ ಫಾಲೋಯಿಂಗ್‌ ಇದೆ.  ಇದೀಗ ಖುಷಿ ಕಪೂರ್ ಹಾಸಿಗೆಯ ಮೇಲೆ ಮಲಗಿ ಪೋಸ್ ಕೊಟ್ಟಿರುವ ಫೋಟೋಸ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಖತ್ ವೈರಲ್ ಆಗಿವೆ. ಖುಷಿ ಕಪೂರ್ ಇದುವರೆಗೂ ಯಾವುದೇ ಸಿನಿಮಾನು ಮಾಡಿಲ್ಲ. ಆದರೆ ಆಕೆಗಿರೋ ಫ್ಯಾನ್ಸ್ ಫಾಲೋವರ್ಸ್ ಮಾತ್ರ ಕಮ್ಮಿ ಇಲ್ಲ. ಖುಷಿ ಯಾವಾಗ ನಾಯಕಿಯಾಗಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಾರೆ ಎಂದು ಅಭಿಮಾನಿಗಳು…

Read More

ಇದುವರೆಗೂ ಕೆನಡಾ ದೇಶದ ಪೌರತ್ವ ಹೊಂದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚೆಗಷ್ಟೇ ಭಾರತದ ಪೌರತ್ವ ಪಡೆದುಕೊಂಡಿದ್ದರು. ಹಾಗಾಗಿ ಇದೇ ಮೊದಲ ಬಾರಿಗೆ ಅಕ್ಷಯ್ ಭಾರತದಲ್ಲಿ ಮತದಾನ ಮಾಡಿದ್ದಾರೆ. ಮತದಾನ ಮಾಡಿದ ಬಳಿಕ ಮಾತನಾಡಿದ ಅಕ್ಷಯ್, ಭಾರತದ ಅಭಿವೃದ್ಧಿ ಮತ್ತು ಬಲಿಷ್ಠ ರಾಷ್ಟ್ರಕ್ಕಾಗಿ ಮತದಾನ ಮಾಡಿ ಎಂದಿದ್ದಾರೆ. ಇಂದು ಲೋಕಸಭೆಗೆ ಐದನೇ ಹಂತದಲ್ಲಿ ಮತದಾನ ನಡೆಯುತ್ತಿದೆ. 6ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. ಬಿಹಾರದ 5, ಜಮ್ಮು ಮತ್ತು ಕಾಶ್ಮೀರದ 1, ಜಾರ್ಖಂಡ್‌ನ 3, ಲಡಾಖ್‍ನ 1, ಮಹಾರಾಷ್ಟ್ರದ 13, ಒಡಿಶಾದ 5, ಉತ್ತರ ಪ್ರದೇಶದ 14 ಮತ್ತು ಪಶ್ಚಿಮ ಬಂಗಾಳದ 7 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಮೇಥಿ, ರಾಯ್ ಬರೇಲಿ, ಲಕ್ನೋ, ಕೈಸರ್ ಗಂಜ್, ಸರನ್ ಮತ್ತು ಮುಂಬೈನ ಎಲ್ಲಾ ಕ್ಷೇತ್ರಗಳು ಹೈವೊಲ್ಟೇಜ್ ಕ್ಷೇತ್ರಗಳಾಗಿವೆ. ಉತ್ತರ ಪ್ರದೇಶದ ಅಮೇಥಿಯಿಂದ ಸ್ಮೃತಿ ಇರಾನಿ ಮತ್ತು ಕೆಎಲ್ ಶರ್ಮಾ, ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ದಿನೇಶ್ ಪ್ರತಾಪ್ ಸಿಂಗ್, ಲಕ್ನೋದಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರದ ಸರಣ್‍ನಿಂದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ಮಹಾರಾಷ್ಟ್ರ ಕಲ್ಯಾಣದಿಂದ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ, ಮುಂಬೈ ಉತ್ತರದಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಹಿರಿಯ ವಕೀಲ ಉಜ್ವಲ್ ನಿಕಮ್, ಮಧ್ಯ ಮುಂಬೈ ವರ್ಷಾ ಗಾಯಕ್ವಾಡ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ದಿನೇಶ್ ಪ್ರತಾಪ್ ಸಿಂಗ್, ರಾಯ್ ಬರೇಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್, ಮುಂಬೈ ಉತ್ತರ ಬಿಜೆಪಿ ಅಭ್ಯರ್ಥಿ ಪಿಯೂಷ್ ಗೊಯೇಲ್, ಅಮಿರ್ ಪುರ್ ನಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಹಾಗೂ ಕೈಸರಗಂಜ್ ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತದಾನ ಮಾಡಿದ್ದಾರೆ.

Read More

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು ಘಟನೆಯಲ್ಲಿ ರೈಸಿ ಸಜೀವ ದಹನವಾಗಿದ್ದಾರೆ. ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ ಇರಾನ್​​ನಲ್ಲಿ ಆಡಳಿತ ಚುಕ್ಕಾಣಿಯನ್ನು ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ವಹಿಸಿಕೊಂಡಿದ್ದಾರೆ. ಇರಾನ್​​ ಸಂವಿಧಾನದ ಪ್ರಕಾರ ಅಧ್ಯಕ್ಷರು ಸಾವನ್ನಪ್ಪಿದರೆ, ಅವರ ನಂತರ ಉಪಧ್ಯಾಕ್ಷರು ಅಲ್ಲಿ ಮುಂದುವರಿಯುತ್ತಾರೆ. ಭಾನುವಾರ ರಾತ್ರಿ ಇರಾನ್-ಅಜೆರ್ಬೈಜಾನಿ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟಿನ ಉದ್ಘಾಟನೆಯ ನಂತರ ಇರಾನಿನ ನಗರವಾದ ತಬ್ರಿಜ್‌ಗೆ ತೆರಳುತ್ತಿದ್ದ ವೇಳೆ ಹೆಲಿಕಾಪ್ಟರ್ ಅಪಘಾತಗೊಂಡಿದೆ. ಈ ಅಪಘಾತದಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಕೂಡ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಇಬ್ರಾಹಿಂ ರೈಸಿ ಸಾವಿನ ನಂತರ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಇರಾನ್​​ನಲ್ಲಿ ಆಡಳಿತ ನಡೆಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರು ಇಬ್ರಾಹಿಂ ರೈಸಿ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದು, ಆಡಳಿತದಲ್ಲಿ ಗಮನಾರ್ಹ ಕೆಲಸವನ್ನು ಮಾಡಿದ್ದಾರೆ. ಹಾಗೂ ರಾಜಕೀಯ ಅನುಭವನ್ನು ಹೊಂದಿದ್ದಾರೆ. ಈ ಹಿಂದೆ ಅವರು ಸರ್ಕಾರಿ ಸ್ವಾಮ್ಯದ ಸೆಟಾಡ್‌ನ ಮುಖ್ಯಸ್ಥರಾಗಿದ್ದರು.…

Read More

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ಇರಾನ್‍ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಇರಾನ್‍ನ ಜನರು ಈ ದುಃಖದ ಸಮಯದಲ್ಲಿ ಇರಾನ್‍ನೊಂದಿಗೆ ನಿಂತಿದ್ದಾರೆ ಎಂದಿದ್ದಾರೆ. ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ ಬೈಜಾನ್‍ನ ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನಗೊಂಡಿತ್ತು. ಕಡಿದಾದ ಪರ್ವತ ಶ್ರೇಣಿಯ ಕಣಿವೆ ಭಾಗದಲ್ಲಿ ಪ್ರತಿಕೂಲ ವಾತಾವರಣದ ನಡುವೆ ಹಲವು ಗಂಟೆಗಳ ಶೋಧ ಕಾರ್ಯದ ಬಳಿಕ ಡ್ರೋನ್ ಮೂಲಕ ಪತನಗೊಂಡ ಹೆಲಿಕಾಪ್ಟರ್ ಅವಶೇಷ ಪತ್ತೆ ಮಾಡಲಾಗಿತ್ತು. ಹೆಲಿಕಾಪ್ಟರ್ ಸುಟ್ಟು ಭಸ್ಮವಾಗಿದೆ ಎಂದು ಅಧಿಕಾರಿ…

Read More

ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್‌ ಮಾಧ್ಯಮಗಳು ವರದಿ ಮಾಡಿವೆ. ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ರೈಸಿ ನೆರೆಯ ರಾಷ್ಟ್ರವಾದ ಅಝರ್ಬೈಜಾನ್​ನಲ್ಲಿ ಆ ದೇಶದ ಅಧ್ಯಕ್ಷ ಇಲ್ಹಾಮ್ ಅಲಿಯಎವ್ ಜತೆ ಅಣೆಕಟ್ಟು ಉದ್ಘಾಟಿಸಿದ್ದರು. ಉಭಯ ರಾಷ್ಟ್ರಗಳು ಅರಾಸ್​ ನದಿಗೆ ನಿರ್ಮಿಸಿದ ಮೂರನೇ ಅಣೆಕಟ್ಟು ಇದಾಗಿದೆ. ರೈಸಿ ಅವರಿದ್ದ ಹೆಲಿಕಾಪ್ಟರ್​ನೊಂದಿಗೆ ಪ್ರಯಾಣಿಸುತ್ತಿದ್ದ ಇತರೆ ಎರಡು ಬೆಂಗಾವಲು ಹೆಲಿಕಾಪ್ಟರ್​ಗಳು ಸುರಕ್ಷಿತವಾಗಿ ಹಿಂದಿರುಗಿವೆ. ಬೆಂಗಾವಲು ಹೆಲಿಕಾಪ್ಟರ್​ಗಳಲ್ಲಿ ಇಂಧನ ಸಚಿವ ಅಲಿ ಅಕ್ಬರ್ ಮೆಹ್ರಾಬಿಯಾನ್ ಹಾಗೂ ವಸತಿ ಸಚಿವ ಮೆಹ್ರದಾದ್ ಇದ್ದು…

Read More

ಬಾಲಿವುಡ್ ನಟ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಸಿನಿಮಾಗಿಂತ ಹೆಚ್ಚಾಗಿ ಖಾಸಗಿ ವಿಚಾರಗಳಿಂದ ಹೆಚ್ಚೆಚ್ಚು ಸುದ್ದಿಯಾಗ್ತಿದ್ದಾರೆ. ಇತ್ತೀಚೆಗೆ ಬಾಲಿವುಡ್ ನಟ ಆದಿತ್ಯಾ ರಾಯ್ ಕಪೂರ್ ಜೊತೆ ಸಾರಾ ಡೇಟಿಂಗ್ ಸುದ್ದಿ ಕೇಳಿ ಬಂದಿತ್ತು. ಇದೀಗ ಸಾರಾ ಮದುವೆಗೆ ರೆಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು ಉದ್ಯಮಿ ಜೊತೆ ಹಸೆಮಣೆ ಏರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಟೌನ್‌ನಲ್ಲಿ ಸಾರಾ ಬಗ್ಗೆ ಮದುವೆ ಸುದ್ದಿ ಜೋರಾಗಿಯೇ ಕೇಳಿ ಬರ್ತಿದೆ. ಉದ್ಯಮಿಯೊಬ್ಬರ ಜೊತೆ ಈಗಾಗಲೇ ಸಾರಾ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ನಟಿ ಮದುವೆಗೆ ತಯಾರಿ ಮಾಡಿಕೊಳ್ತಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲಿಯೇ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವಿಚಾರ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಆದರೆ ನಟಿಯ ಕುಟುಂಬದಿಂದ ಈ ಬಗ್ಗೆ ಯಾವುದೇ ಸ್ಟಷ್ಟನೆ ಇಲ್ಲ. ಸಾರಾ ಹೆಸರು ಸುಶಾಂತ್ ಸಿಂಗ್ ರಜಪೂತ್, ಕಾರ್ತಿಕ್ ಆರ್ಯನ್, ಆದಿತ್ಯಾ, ಕ್ರಿಕೆಟಿಗ ಶುಭಮನ್ ಗಿಲ್ ಜೊತೆ ಕೇಳಿ ಬಂದಿತ್ತು. ಈಗ ಉದ್ಯಮಿ ಜೊತೆಗಿನ ಸಾರಾ ಮದುವೆ ಸೆನ್ಸೇಷನ್‌…

Read More

ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ನಟನೆಯ ರೋಮ್-ಕಾಮ್ ಮಿಸ್ಟರ್ ಅಂಡ್ ಮಿಸಸ್ ಮಹಿ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಅವರಿಗೆ ನಾಯಕಿಯಾಗಿ ಜಾನ್ವಿ ಕಪೂರ್ ನಟಿಸಿದ್ದಾರೆ. ಶರಣ್ ಶರ್ಮಾ ನಿರ್ದೇಶನದ ಜೀ ಸ್ಟುಡಿಯೋಸ್ ಮತ್ತು ಧರ್ಮ ಪ್ರೊಡಕ್ಷನ್ಸ್ ನಿರ್ಮಾಣದ ಈ ಸಿನಿಮಾ ಮೇ 31ರಂದು ಬಿಡುಗಡೆಯಾಗುತ್ತಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಕರಣ್ ಜೋಹರ್ ಅವರೊಂದಿಗಿನ ಸಂದರ್ಶನದಲ್ಲಿ, ರಾತ್ರೋರಾತ್ರಿ ಚಲನಚಿತ್ರದಲ್ಲಿ ಸ್ಟಾರ್ ಕಿಡ್‌ನಿಂದ ಬದಲಾಯಿಸಲ್ಪಟ್ಟ ಅನುಭವವನ್ನು ಬಹಿರಂಗಪಡಿಸಿದರು ಮತ್ತು ಅದನ್ನು ‘ನ್ಯಾಯವಲ್ಲ’ ಎಂದು ಹೇಳಿದ್ದಾರೆ. ಒಂದು ದಿನ ಹೇಳದೆ ಕೇಳದೆ ರಾತ್ರೋರಾತ್ರಿ ನನ್ನ ಪಾತ್ರಕ್ಕೆ ನನ್ನ ಬದಲಿಗೆ ಸ್ಟಾರ್ ಕಿಡ್ಡನ್ನು ಹಾಕಿದ್ದರು. ಇದು ಖಂಡಿತಾ ಸರಿಯಲ್ಲ. ಅವರು ವಿಷಯಗಳ ಮೇಲೆ ಹಿಡಿತ ಹೊಂದಿದ್ದಾರೆಂದ ಮಾತ್ರಕ್ಕೆ, ಜನರ ಪರಿಚಯವಿದೆ ಎಂದ ಮಾತ್ರಕ್ಕೆ ಹೀಗೆ ಮಾಡೋದು ಸರಿಯಲ್ಲ’ ಎಂದು ಹೇಳಿದ್ದಾರೆ. ಒಮ್ಮೆ ರಾಜ್‌ಕುಮಾರ್ ಆಡಿಷನ್‌ನಲ್ಲಿ ಭಾಗವಹಿಸುವಾಗ ತಮ್ಮ ಬಳಿ ಕೇವಲ ರೂ.18 ಉಳಿದಿದ್ದನ್ನು ಬಹಿರಂಗಪಡಿಸಿದ್ದರು.  ರಣವೀರ್ ಅಲಹಬಾದಿಯಾ ಅವರೊಂದಿಗಿನ ಹಿಂದಿನ ಸಂಭಾಷಣೆಯಲ್ಲಿ, ರಾಜ್‌ಕುಮಾರ್…

Read More

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಭಾಷಾ ಬೇಡಿಕೆಯ ನಾಯಕಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಬಳಿಕ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ್ದ ನಟಿ ಇದೀಗ ಹಿಂದಿ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾರೆ.  ಅಲ್ಲು ಅರ್ಜುನ್, ರಣ್‌ಬೀರ್ ಕಪೂರ್, ಸಲ್ಮಾನ್ ಖಾನ್ ನಂತರ ತಮಿಳಿನ ಸ್ಟಾರ್ ನಟನ ಜೊತೆ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸಲ್ಮಾನ್ ಖಾನ್‌ ನಟನೆಯ ಮುಂದಿನ ಸಿಖಂದರ್ ಸಿನಿಮಾಗೆ ನಾಯಕಿಯಾಗುವ ಮೂಲಕ ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು. ಈಗ ತಮಿಳಿನ ನಟ ಶಿವಕಾರ್ತಿಕೇಯನ್ ಚಿತ್ರಕ್ಕೆ ನಟಿ ಆಯ್ಕೆಯಾಗಿದ್ದಾರೆ. ಶಿವಕಾರ್ತಿಕೇಯನ್ ಅವರ ಮುಂಬರುವ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮೊದಲ ಬಾರಿಗೆ ಶಿವಕಾರ್ತಿಕೇಯನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಳ್ಳುವ ಸಿನಿಮಾ ಬಗ್ಗೆ ಸುದ್ದಿ ಹಬ್ಬಿದೆ. ಚಿತ್ರತಂಡ ಈಗಾಗಲೇ ನಟಿಯನ್ನು ಸಂಪರ್ಕಿಸಿ ಕಥೆ ಕೂಡ ಹೇಳಿದ್ದಾರೆ. ಆದರೆ ‘ಪುಷ್ಪ’ನಟಿ ಹೊಸ ಪ್ರಾಜೆಕ್ಟ್ಗೆ ಗ್ರೀನ್ ಸಿಗ್ನಲ್ ಕೊಟ್ರಾ? ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಚಿತ್ರತಂಡ ಅಧಿಕೃತ ಘೋಷಣೆ ಮಾಡುವವರೆಗೂ ಕಾಯಬೇಕಿದೆ. ಸದ್ಯ…

Read More

ಆರ್‌ಸಿಬಿ ರೋಚಕವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಈ ಬಾರಿ ಆರ್‌ಸಿಬಿ ನಿಜಕ್ಕೂ ಹೊಸ ಅಧ್ಯಾಯವನ್ನೇ ಸೃಷ್ಟಿಸಿದೆ. ಸಿಎಸ್‌ಕೆ ಮುಂದೆ ಗೆದ್ದು ಬೀಗಿದೆ. ಹೀಗಿರುವಾಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯವನ್ನು ನೇರವಾಗಿ ವೀಕ್ಷಿಸಿದ ನಟ ರಿಷಬ್ ಶೆಟ್ಟಿ ಅದರ ಅನುಭವವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ವಿವರಿಸಿದ್ದಾರೆ. ತುಂಬಾ ಖುಷಿಯಾಗುತ್ತಿದೆ. ವಿಷಯ ಏನೆಂದರೆ ನಾನು ಮೊದಲ ಬಾರಿಗೆ ಸ್ಟೇಡಿಯಂನಲ್ಲಿ ಮ್ಯಾಚ್ ನೋಡ್ತಾ ಇರೋದು. ಪ್ಲೇ-ಆಪ್ ಹೋಗಬೇಕು ಎಂಬ ಆಸೆಯಿದೆ ಎಂದಿದ್ದಾರೆ ರಿಷಬ್ ಶೆಟ್ಟಿ. ಮುಂಚೆಯಿಂದ ಕೂಡ ನಮ್ಮ ಬೆಂಗಳೂರು ಟೀಮ್ ಬೆಂಬಲಿಸುತ್ತಿದ್ದೆ. ಚಿಕ್ಕವಯಸ್ಸಿನಿಂದಲೂ ಕ್ರಿಕೆಟ್‌ಗೆ ಫ್ಯಾನ್ ನಾನು. ಐಪಿಎಲ್‌ ಬಂದ ಮೇಲೆ ಆರ್‌ಸಿಬಿ ಎನ್ನುವ ಹೋರಾಟ ನಮ್ಮ ಸರ್ಕಲ್‌ನಲ್ಲಿ ನಡೆಯುತ್ತಿತ್ತು. ನನಗೆ ಕ್ರಿಕೆಟ್‌ನಲ್ಲಿ ಬ್ಯಾಟಿಂಗ್ ಇಷ್ಟ ಎಂದು ಹೇಳಿದ್ದಾರೆ. ಈ ವೇಳೆ, ಆರ್‌ಸಿಬಿ ಹೆಸರು ಬದಲಿಸಿದ ಪ್ರೋಮೋ ಬಗ್ಗೆ ಮಾತನಾಡಿದ್ದಾರೆ. ತಂಡ ನನಗೆ ಅಪ್ರೋಚ್ ಮಾಡಿದಾಗ ಕಾಲ್‌ನಲ್ಲಿ ಡ್ಯಾನೀಶ್ ಸೇಠ್ ಕೂಡ ಇದ್ದರು. ಹೊಂಬಾಳೆ ಸಂಸ್ಥೆ ನಿರ್ಮಾಪಕರು ಕೂಡ ಇದ್ದರು. ವಿಭಿನ್ನವಾಗಿ ಪ್ರೋಮೋ…

Read More

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌, ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿದೆ ಎಂದು ಇರಾನ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್‌ಬೈಜಾನ್‌ನ ಗಡಿಗೆ ಭೇಟಿ ನೀಡಿ ಹಿಂತಿರುಗುವ ಮಾರ್ಗದಲ್ಲಿ ದಟ್ಟ ಮಂಜಿನಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ಅಪಘಾತಕ್ಕೀಡಾಗಿದೆ ಎನ್ನಲಾಗುತ್ತಿದೆ. ಹೆಲಿಕಾಪ್ಟರ್ ಅಪಘಾತದಿಂದಾಗಿ ರೈಸಿ ಮತ್ತು ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ದೊಲ್ಲಾಹಿಯಾನ್ ಅವರು ಅಪಾಯದಲ್ಲಿದ್ದಾರೆ. ಅವರಿಗೆ ಏನೂ ಆಗಿಲ್ಲ ಎಂಬ ಭರವಸೆಯಲ್ಲಿದ್ದೇವೆ. ಆದರೆ ಅಪಘಾತದ ಸ್ಥಳದ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಕೆಟ್ಟ ಹವಾಮಾನವು ರಕ್ಷಣಾ ಪ್ರಯತ್ನಗಳನ್ನು ಸಂಕೀರ್ಣಗೊಳಿಸುತ್ತಿದೆ. ಭಾರೀ ಮಂಜಿ ಇರುವ ಪರ್ವತ ಪ್ರದೇಶದಲ್ಲಿ ರಕ್ಷಣಾ ತಂಡಗಳು ಕಾಲ್ನಡಿಗೆಯಲ್ಲಿ ಹುಡುಕಾಟದಲ್ಲಿ ಕಾರ್ಯನಿರತವಾಗಿವೆ. ದೇಶದಾದ್ಯಂತ ರೈಸಿಗಾಗಿ ಪ್ರಾರ್ಥಿಸಲಾಗುತ್ತಿದೆ. 63 ವಯಸ್ಸಿನ ರೈಸಿ 2021 ರಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಧಿಕಾರ ವಹಿಸಿಕೊಂಡಾಗಿನಿಂದ ನೈತಿಕತೆಯ ಕಾನೂನುಗಳನ್ನು ಬಿಗಿಗೊಳಿಸುವಂತೆ ಆದೇಶಿಸಿದ್ದರು.

Read More