ದಕ್ಷಿಣ ಕನ್ನಡ ಹಾಗೂ ಬಾಲಿವುಡ್ನ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಹಾಗೂ ಬಿಜೆಪಿ ವಕ್ತಾರೆ ಆಗಿರುವ ಕಸ್ತೂರಿ ಶಂಕರ್ ಅವರನ್ನು ಚೆನ್ನೈ ಪೊಲೀಸರು ಹೈದರಾಬಾದ್ ನ ಗಚ್ಚಿಬೋಲಿ ಪ್ರದೇಶದಲ್ಲಿ ಬಂಧಿಸಿದ್ದಾರೆ. ನಟಿ ಕಸ್ತೂರಿ ಶಂಕರ್ ವಿರುದ್ಧ ಕೆಲ ದಿನಗಳ ಹಿಂದೆ ಚೆನ್ನೈ ಸೇರಿದಂತೆ ತಮಿಳುನಾಡಿನ ಇನ್ನೂ ಕೆಲವು ಕಡೆ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೆ ನಟಿ ಕಸ್ತೂರಿ ಶಂಕರ್ ರಾಜ್ಯ ಬಿಟ್ಟು ಪರಾರಿಯಾಗಿದ್ದರು. ಅದರ ಜೊತೆಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರಾದರೂ ಸಹ ನ್ಯಾಯಾಲಯವು ಅರ್ಜಿ ನಿರಾಕರಿಸಿದ ಬೆನ್ನಲ್ಲೆ ಇದೀಗ ನಟಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನವೆಂಬರ್ ಮೊದಲ ವಾರ ಹಿಂದೂ ಮಕ್ಕಳ್ ಕಚ್ಚಿ ಸಂಘಟನೆ ಚೆನ್ನೈನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಟಿ ಕಸ್ತೂರಿ ಶಂಕರ್, ತೆಲುಗು ಜನರ ವಿರುದ್ಧ, ಅಬ್ರಾಹ್ಮಣರ ವಿರುದ್ಧ, ಅಬ್ರಾಹ್ಮಣ ಸರ್ಕಾರಿ ಸಿಬ್ಬಂದಿ ಬಗ್ಗೆ ಆಡಿದ್ದ ಮಾತುಗಳು ತೀವ್ರ ವಿವಾದ ಎಬ್ಬಿಸಿದ್ದವು. ನಟಿ ಕಸ್ತೂರಿ ಶಂಕರ್ ವಿರುದ್ಧ ತೆಲುಗು ರಾಜ್ಯದಲ್ಲಿ ಸೇರಿದಂತೆ ತಮಿಳುನಾಡಿನಲ್ಲಿಯೂ ಪ್ರತಿಭಟನೆಗಳು ನಡೆದಿದ್ದವು. ತಮಿಳುನಾಡಿನ…
Author: Author AIN
ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದಾರೆ. ಟ್ರಂಪ್ ಜನವರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದು ಈ ಮಧ್ಯೆ ತಮ್ಮ ಸರ್ಕಾರದ ಪ್ರಮುಖ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದೀಗ ಕಾರ್ಯದಕ್ಷತಾ ಇಲಾಖೆ (ಡಿಒಜಿಇ) ಉಸ್ತುವಾರಿಯಾಗಿ ನೇಮಕ ಆಗಿರುವ ಭಾರತ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ಅಮೆರಿಕದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಬೃಹತ್ ಪ್ರಮಾಣದಲ್ಲಿ ಕಡಿತಗೊಳಿಸುವ ಸುಳಿವನ್ನು ನೀಡಿದ್ದಾರೆ. ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವೇಕ್ ಜೊತೆಗೆ ಟೆಸ್ಲಾ ಮಾಲೀಕ ಇಲಾನ್ ಮಸ್ಕ್ ಅವರನ್ನೂ ಡಿಒಜಿಇ ಉಸ್ತುವಾರಿಯಾಗಿ ನೇಮಿಸಿದ್ದಾರೆ. ‘ಮಸ್ಕ್ ಹಾಗೂ ನಾನು ಡಿಒಜಿಇ ಜವಾಬ್ದಾರಿ ವಹಿಸಿಕೊಂಡ ನಂತರ, ಸರ್ಕಾರದಲ್ಲಿ ನೇರವಾಗಿ ಆಯ್ಕೆಯಾಗದ ನೌಕರರನ್ನು ಸಾಮೂಹಿಕವಾಗಿ ತೆಗೆಯಲು ಕ್ರಮಕೈಗೊಳ್ಳುತ್ತೇವೆ. ಇದು ನಾವು ದೇಶರಕ್ಷಣೆಗೆ ಕೈಗೊಳ್ಳುವ ಕ್ರಮವಾಗಿದೆ’ ಎಂದು ತಿಳಿಸಿದ್ದಾರೆ. ಫ್ಲಾರಿಡಾದ ಮರ್-ಅ- ಲಾಗೊದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ‘ನಾಲ್ಕು ವರ್ಷಗಳಲ್ಲಿ ದೇಶ ಸಾಕಷ್ಟು ಹಿನ್ನಡೆ ಅನುಭವಿಸಿದೆ. ನಾವೆಲ್ಲರೂ ಇದರ ವಿರುದ್ಧ ಹೋರಾಡಬೇಕಿದೆ. ದೇಶವು ಹಿನ್ನಡೆ ಅನುಭವಿಸುವಾಗ ಸುಮ್ಮನಿರಲು ಸಾಧ್ಯವಿಲ್ಲ. ದೇಶಕ್ಕೆ ಮುಂದಿನ ದಿನಗಳು…
ಸೌತ್ ಸಿನಿಮಾ ಇಂಡಸ್ಟ್ರಿಯ ಲೇಡಿ ಸೂಪರ್ ಸ್ಟಾರ್ ನಯನತಾರಾಹಾಗೂ ತಮಿಳಿನ ಸ್ಟಾರ್ ನಟ ಧನುಷ್ ನಡುವಿನ ಮನಸ್ತಾಪ ಪಬ್ಲಿಕ್ ಆಗಿದೆ. ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ ‘ನಯನತಾರಾ: ಬಿಯಾಂಡ್ ದಿ ಫೇರಿಟೇಲ್’ ವಿವಾದದ ಕುರಿತು ನಟಿ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘ ಪತ್ರ ಬರೆದಿದ್ದಾರೆ. ನಟ ಧನುಷ್ ಅವರ ನೀಚ ಬುದ್ದಿಯಿಂದಾಗಿ ನಾವು ಸಾಕ್ಷ್ಯಚಿತ್ರವನ್ನು 2 ವರ್ಷಗಳಿಂದ ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಅವರ ಒಂದು ಅನುಮತಿಗಾಗಿ ಕಾಯುತ್ತಲೇ ಇದ್ದೆ. ಆದ್ರೆ ಧನುಷ್ ಅನುಮತಿ ನೀಡಲು 10 ಕೋಟಿ ಕೇಳಿದ್ರು ಎಂಬ ವಿಚಾರವನ್ನು ನಯನತಾರಾ ಬಯಲು ಮಾಡಿದ್ದಾರೆ. ಧನುಷ್ ಅನುಮತಿ ನೀಡದಿದ್ದಾಗ 2015ರಲ್ಲಿ ತೆರೆಕಂಡ ‘ನಾನುಮ್ ರೌಡಿ ದಾ’ ಚಿತ್ರದ ಹಾಡನ್ನು ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ ‘ನಯನತಾರಾ: ಬಿಯಾಂಡ್ ದಿ ಫೇರಿಟೇಲ್’ ನಲ್ಲಿ ಡಿಲೀಟ್ ಮಾಡಲಾಗಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಸುದೀರ್ಘ ಪತ್ರ ಬರೆಯುವ ಮೂಲಕ ನಟಿ ನಯನತಾರಾ ಧನುಷ್ ಮೇಲಿನ ಕೋಪವನ್ನು ಹೊರ ಹಾಕಿದ್ದಾರೆ. ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ ‘ನಯನತಾರಾ: ಬಿಯಾಂಡ್ ದಿ ಫೇರಿಟೇಲ್’…
ಬಿಗ್ ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಮಿಂಚಿದ ಲಾಯರ್ ಜಗದೀಶ್ ಎರಡೇ ವಾರಲ್ಲೆ ದೊಡ್ಮನೆಯಿಂದ ಹೊರ ಹೋದರು. ಬಿಗ್ ಬಾಸ್ ಮನೆಯಲ್ಲಿ ಮಾಡಿಕೊಂಡ ಜಗಳದಿಂದ ಜಗದೀಶ್ ಆಚೆ ಬರುವಂತಾಯ್ತು.ಬಿಗ್ ಬಾಸ್ ಮನೆಯಿಂದ ಹೊರ ಹೋದ ಬಳಿಕ ಜಗದೀಶ್ ಮತ್ತಷ್ಟು ಸದ್ದು ಮಾಡ್ತಿದ್ದಾರೆ. ಇದೀಗ ಹಿಂದಿ ಬಿಗ್ ಬಾಸ್‌ಗೆ ಜಗದೀಶ್ ಕಾಲಿಡುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. ಸ್ವತಃ ಲಾಯರ್ ಜಗದೀಶ್ ಸ್ಪಷ್ಟನೆ ಕೊಟ್ಟಿದ್ದಾರೆ. ಜಗದೀಶ್ ಅವರು ಹಿಂದಿ ಬಿಗ್ ಬಾಸ್‌ಗೆ ಎಂಟ್ರಿ ಕೊಡುವ ಪೊಸ್ಟ್ ಸಖತ್ ವೈರಲ್ ಆಗುತ್ತಿದೆ. ಸ್ವತಃ ಈ ಬಗ್ಗೆ ಜಗದೀಶ್ ಅವರು ಮಾತನಾಡಿರುವ ಆಡಿಯೋ ಕ್ಲಿಪ್ ವೈರಲ್ ಆಗುತ್ತಿದೆ. ಕರ್ನಾಟಕದ ಬಾಲಿವುಡ್ ಎಂಟ್ರಿ, ಐಶ್ವರ್ಯಾ ರೈ, ಪ್ರಕಾಶ್ ರೈ, ಹೀಗೆ ಆ ಅದೃಷ್ಟ ನನಗೂ ಬಂದಿದೆ ಅನಿಸುತ್ತೆ. ಈಗ ದೇವರು ಬಾಲಿವುಡ್‌ನಲ್ಲಿ ಮಿಂಚಲು ನನಗೆ ಅವಕಾಶ ಕೊಟ್ಟಿದ್ದಾನೆ. ನಾನು ನಿಮ್ಮ ಪ್ರೀತಿಯ ಜಗ್ಗುದಾದ. ಎಲ್ಲರೂ ನನ್ನನ್ನು ಜಗ್ಗುದಾದ ಮತ್ತು ಜಗ್ಗಿ ಎಂದು ಕರೆಯುತ್ತಾರೆ ನಿಜಕ್ಕೂ ಇಷ್ಟವಾಗುತ್ತದೆ. ಮಹಾರಾಣಿ…
ಶಿವಕಾರ್ತಿಕೇಯನ್ ನಟನೆಯ ಅಮರನ್ ಸಿನಿಮಾ ಎರಡು ವಾರಗಳ ಹಿಂದಷ್ಟೇ ಬಿಡುಗಡೆಯಾಗಿದ್ದು ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಎನಿಸಿಕೊಂಡಿದೆ. ಆದರೆ ಕೆಲವರು ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಅಮರನ್’ ಸಿನಿಮಾ ಬಿಡುಗಡೆ ಆದ ಮೊದಲಲ್ಲಿ ಜಾತಿಯ ಕಾರಣಕ್ಕೆ ಕೆಲವು ವಿವಾದಾದ್ಮಕ ಹೇಳಿಕೆಗಳು ಕೇಳಿಬಂದಿತ್ತು. ಇತ್ತೀಚೆಗೆ ಸಂಘಟನೆಯೊಂದು ಧರ್ಮದ ಕಾರಣಕ್ಕೆ ಸಿನಿಮಾದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿತು. ಇದೀಗ ‘ಅಮರನ್’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದ ಮೇಲೆ ಪೆಟ್ರೋಲ್ ಬಾಂಬ್ ಹಾಕಲಾಗಿದೆ. ತಮಿಳುನಾಡಿನ ತಿರುನಾಲ್ವೇಲಿಯ ಅಲಂಗಾರ್ ಚಿತ್ರಮಂದಿರದಲ್ಲಿ ‘ಅಮರನ್’ ಸಿನಿಮಾ ಕಳೆದ ಎರಡು ವಾರಗಳಿಂದಲೂ ಪ್ರದರ್ಶನಗೊಳ್ಳುತ್ತಿತ್ತು. ಆದರೆ ಶನಿವಾರ ಬೆಳ್ಳಂಬೆಳಿಗ್ಗೆ ಬೈಕ್ನಲ್ಲಿ ಬಂದ ಇಬ್ಬರು ಮೂರು ಪೆಟ್ರೋಲ್ ಬಾಂಬ್ಗಳನ್ನು ಚಿತ್ರಮಂದಿರದ ಮೇಲೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾರೆ. ಬೈಕ್ನಲ್ಲಿ ಬಂದವರು ಪೆಟ್ರೋಲ್ ಬಾಂಬ್ ಎಸೆಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ‘ಅಮರನ್’ ಸಿನಿಮಾದ ನಾಯಕ ಪಾತ್ರ ಮೇಜರ್ ಮುಕುಂದನ್ ಅವರ ಜಾತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗಿದೆ ಎಂದು ಒಂದು ಸಮುದಾಯದ ಗುಂಪಿನವರು ಮೊದಲಿಗೆ ಆಕ್ಷೇಪ ಎತ್ತಿದ್ದರು. ಇದಕ್ಕೆ ಸ್ಪಷ್ಟನೆ…
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಆದರೆ ಇದರಿಂದ ಸರ್ಕಾರಕ್ಕೆ ಸಾಕಷ್ಟು ಹೊರೆಯಾಗುತ್ತಿದೆ. ಈ ಹೊರೆಯನ್ನ ತಪ್ಪಿಸಲು ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನೇ ಕಡಿಮೆ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 11 ಲಕ್ಷ ಪಡಿತರ ಚೀಟಿಗಳನ್ನ ರದ್ದು ಮಾಡಲಾಗಿದೆ ಎಂದು ಬಿಜೆಪಿ ನಾಯಕ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಗಂಭಿರ ಆರೋಪ ಮಾಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಒಟ್ಟು 83 ರೇಷನ್ ಕಾರ್ಡ್‌ಗಳು ರದ್ದು ಮಾಡಲಾಗಿದೆ. ಒಟ್ಟು 3925 ಬಿಪಿಎಲ್ ಕಾರ್ಡ್‌ಗಳು ಎಪಿಎಲ್ ಕಾರ್ಡ್‌ಗಳಾಗಿ ಬದಲಾವಣೆ ಮಾಡಲಾಗಿದೆ. ಟ್ಯಾಕ್ಸ್ ಪಾವತಿಸುತ್ತಿದ್ದಾರೆ ಎಂಬ ಕಾರಣಕ್ಕೆ 3408 ಬಿಪಿಎಲ್ ಕಾರ್ಡ್‌ಗಳು ಎಪಿಎಲ್ ಕಾರ್ಡ್‌ಗಳಾಗಿ ಬದಲಾವಣೆ ಮಾಡಲಾಗಿದೆ. 1,20,000ಕ್ಕಿಂತ ಹೆಚ್ಚಿನ ಆದಾಯ ಕಾರಣದಿಂದ 415 ಬಿಪಿಎಲ್ ಪಡಿತರ ಕಾರ್ಡ್‌ಗಳು ಎಪಿಎಲ್ ಕಾರ್ಡ್‌ಗಳಾಗಿ ಬದಲಾವಣೆ ಮಾಡಲಾಗಿದೆ. ಸರ್ಕಾರಿ ನೌಕರರು ಎಂಬ ಕಾರಣಕ್ಕೆ 102 ಕಾರ್ಡ್‌ಗಳು ಬದಲಾವಣೆ. ಅದೇ ರೀತಿಯಾಗಿ ಸಾವಿರಾರು ಕಾರ್ಡ್‌ಗಳು ವಿವಿಧ ತಾಂತ್ರಿಕ ಕಾರಣದಿಂದ ಅಮಾನತು ಮಾಡಲಾಗಿದೆ.…
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ತಮ್ಮ ಪ್ರಚಾರದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಪ್ರಧಾನಿ ಮೋದಿ ಮತ್ತು ಬಿಜೆಪಿಗರ ವಿರುದ್ಧ ಕಿಡಿ ಕಾರಿದ್ರು. ಚುನಾವಣಾ ಪ್ರಚಾರದ ಬಳಿಕ ಸೋಲಾಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ. ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ಅಂತ ಸವಾಲು ಹಾಕಿದ್ದೀನಿ. ಆದರೆ ಮೋದಿ ಏಕೆ ನನ್ನ ಸವಾಲು ಸ್ವೀಕರಿಸುತ್ತಿಲ್ಲ, ಏನು ಭಯ ಅವರಿಗೆ ಎಂದು ಪ್ರಶ್ನಿಸಿದರು. ಗ್ಯಾರಂಟಿ ಬಗ್ಗೆ ಸಿಎಂ ಮಾತು ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ. ಶಕ್ತಿ ಯೋಜನೆಯಲ್ಲಿ325 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಗೃಹಜ್ಯೋತಿಯಡಿ ಒಂದು ಕೋಟಿ 62 ಸಾವಿರ ಕುಟುಂಬಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಅನ್ನಭಾಗ್ಯದಡಿ ಒಂದು ಕೋಟಿ 20…
ಬೆಂಗಳೂರು: ತಮ್ಮ ಜೊತೆಗೆ ಅನುಚಿತ ವರ್ತನೆ ತೋರಿದ್ದಾರೆ ಎಂದು ದರ್ಶನ್ ಅಭಿಮಾನಿಗಳ ವಿರುದ್ಧ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ದೂರು ನೀಡಿದ್ದಾರೆ. ನಿನ್ನೆ ದರ್ಶನ್ ಫ್ಯಾನ್ಸ್ ಹೋಟೆಲ್ ವೊಂದರಲ್ಲಿ ತನ್ನನ್ನು ನಿಂದಿಸಿದ್ದಾರೆಂದು ಆರೋಪಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇದರ ಬೆನ್ನಲ್ಲೇ ಪ್ರಥಮ್ ಮಾಗಡಿ ರಸ್ತೆಯ ಡಿಸಿಪಿ ಕಚೇರಿಗೆ ಭೇಟಿ ನೀಡಿ, ಡಿಸಿಪಿ ಗಿರೀಶ್ ಅವರಿಗೆ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ್ದಾರೆ. https://www.youtube.com/watch?v=k1qiUfjPKRY ಈ ವೇಳೆ ಮಾತನಾಡಿರುವ ಪ್ರಥಮ್, ಗೂಂಡಾಗಳ ವಿರುದ್ಧ ದೂರು ದಾಖಲಿಸಿದ್ದೇನೆ. ನಿನ್ನೆ ಹೊಟೇಲ್ ವೊಂದರಲ್ಲಿ ದರ್ಶನ್ ಅವರ ಕೆಲ ಅಭಿಮಾನಿಗಳ ಅತಿರೇಕದ ವರ್ತನೆ ತೋರಿದರು. ಡಿಸಿಪಿ ಗಿರೀಶ್ ಅವರು ಕ್ರಮ ತಗೆದುಕೊಳ್ಳುವುದಾಗಿ ತಿಳಿಸಿದರು. ಇನ್ನು ಕೆಲವೇ ಹೊತ್ತಲ್ಲಿ ತಪ್ಪು ಮಾಡಿದವರು ಒಳಗೆ ಹೋಗುತ್ತಾರೆ. ಅವರಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ನಿನ್ನೆ ಹೋಟೆಲ್ ಗೆ ಹೋಗಿದ್ದಾಗ, ನನ್ನ ಬಳಿ ಏಕಾಏಕಿ ಬಂದು ಜೈ ಡಿಬಾಸ್ ಅಂತಾ ಕೂಗಿ ಎಂದು ಗಲಾಟೆ ಮಾಡಿದರು. ಅಲ್ಲದೇ ಅಶ್ಲೀಲ ಪದ…
ಬೆಂಗಳೂರು: ಆರ್.ಆರ್ ನಗರ ವಲಯದಲ್ಲಿ ನಕ್ಷೆ ಮಂಜೂರಾತಿಗಿಂತ ಹೆಚ್ಚುವರಿಯಾಗಿ ಅನಧಿಕೃತವಾಗಿ ನಿರ್ಮಿಸಿದ 2 ಅಂತಸ್ತುಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು. ವಲಯ ಆಯುಕ್ತರಾದ ಬಿ.ಸಿ ಸತೀಶ್ ನೇತೃತ್ವದಲ್ಲಿ ಹೆಮ್ಮಿಗೆ ಪುರ ವಾರ್ಡ್ ವ್ಯಾಪ್ತಿಯ ಬಾಲಾಜಿ ಹೆಚ್.ಬಿ.ಸಿ.ಎಸ್ ವಾಜರಹಳ್ಳಿಯಲ್ಲಿ ತೆರವು ಕಾರ್ಯಾಚರಣೆ ನಡೆಯಿತು. https://www.youtube.com/watch?v=qikhBuAopU4 ಕಟ್ಟಡ ಮಾಲೀಕರು ಪಾಲಿಕೆಯಿಂದ ನೆಲ ಮಹಡಿ ,ಮೊದಲನೇ ಹಾಗೂ ಎರಡನೇ ಮಹಡಿ ನಿರ್ಮಾಣ ಮಾಡಲು ಅನುಮತಿ ಪಡೆದಿದ್ದರು. ಆದರೆ ಸ್ವತ್ತಿನಲ್ಲಿ ನಕ್ಷೆ ಮಂಜೂರಾತಿ ಉಲ್ಲಂಘಿಸಿ ಅನಧಿಕೃತವಾಗಿರುವ 3ನೇ ಮತ್ತು 4 ಅಂತಸ್ತುಗಳನ್ನು ನಿರ್ಮಾಣ ಮಾಡಿದ್ದರು. ಈ ಬಗ್ಗೆ ಕಟ್ಟಡ ಮಾಲೀಕರಿಗೆ ನಾಲ್ಕು ಬಾರಿ ನೋಟಿಸ್ ಗಳನ್ನು ಜಾರಿ ಮಾಡಿದರೂ ಸಹ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕಟ್ಟಡದ ವ್ಯತಿರಿಕ್ತ ಭಾಗಗಳನ್ನು ತೆರವುಗೊಳಿಸುವ ಬಗ್ಗೆ ಪಾಲಿಕೆಗೆ ಯಾವುದೇ ಮಾಹಿತಿ ಸಲ್ಲಿಸಿಲ್ಲವಾದ ಕಾರಣ ಇಂದು ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ 2 ಮಹಡಿ ಹಾಗೂ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.
ಬೆಂಗಳೂರು: ಸಚಿವ ಜಮೀರ್ ಮಾತು ಮತ್ತು ನಡವಳಿಕೆ ಕಾಂಗ್ರೆಸ್ ಗೆ ಒಂದು ರೀತಿ ಇರಿಸುಮುರಿಸು ತರುವಂತಿದೆ. ಮೊದಲಿಗೆ ವಕ್ಫ್ ವಿಚಾರದಲ್ಲಿನ ಅವರ ನಡೆ. ಆ ಬಳಿಕ ಚನ್ನಪಟ್ಟಣ ಉಪಚುನಾವಣಾ ಕಣದಲ್ಲಿ ಕುಮಾರಸ್ವಾಮಿ ಕುರಿತಾದ ಕರಿಯಾ ಎಂಬ ಹೇಳಿಕೆಗೆ ಸ್ವಪಕ್ಷೀಯರೇ ಆಕ್ಷೇಪವ್ಯಕ್ತಪಡಿಸಿದ್ದಾರೆ. ಈಗಾಗಲೇ ಸಚಿವ ಜಮೀರ್ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವು ಕೇಳಿ ಬಂದಿದ್ದು, ಹೈಕಮಾಂಡ್ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಪತ್ರ ಬರೆದಿದ್ದಾರೆ. ಈತನ್ಮಧ್ಯೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ಜಮೀರ್ ಮಾತಾಡಿದ್ದು ಸರಿಯಲ್ಲ ಎಂದು ಹೇಳಿಕೆ ನೀಡಿದ್ದಾರೆ. https://www.youtube.com/watch?v=TH0pC_EQyXw ಚನ್ನಪಟ್ಟಣ ಉಪಚುನಾವಣೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹೇಳಿಕೆ ಬೆನ್ನಲ್ಲೇ ಜಮೀರ್ ಮಾತಿನಿಂದ ಆಗಬಹುದಾದ ಹಾನಿ ಬಗ್ಗೆ ಕಾಂಗ್ರೆಸ್‌ಗೂ ಅರಿವಾದಂತಿದೆ. ಡಿಸಿಎಂ ಡಿಕೆಶಿ ಅವರ ಹೇಳಿಕೆಯೇ ಇದಕ್ಕೆ ನಿದರ್ಶನವಾಗಿದ್ದು, ಜಮೀರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿವಕುಮಾರ್, ಜಮೀರ್ ಮಾತನಾಡಿದ್ದು ತಪ್ಪು ಎಂದಿದ್ದಾರೆ. ಆದರೆ ಜಮೀರ್ ಮಾತಾಡಿದ್ದನ್ನು ತಪ್ಪು ಅಂತ ಅಂಗೀಕರಿಸಿರುವ ಅವರು ಶಿಸ್ತುಕ್ರಮ ಜರುಗಿಸಲಾಗುತ್ತದೆಯೇ ಇಲ್ಲವೇ ಅಂತ ಬಹಿರಂಗಪಡಿಸಲಾಗದು ಎಂದು ಹೇಳಿದರು.…