Author: Author AIN

ಇಡೀ ರಾಜ್ಯವೇ ಬೆಚ್ಚಿಬೀಳುವಂತಹ ವರದಿಯನ್ನು ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಪೋರ್ಟಲ್‌ ನೀಡಿದೆ. ಆರ್ ಸಿ ಎಚ್ ವರದಿ ಪ್ರಕಾರ ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರಿದ್ದು,ಅದರಲ್ಲಿಯೂ ಬೆಂಗಳೂರಲ್ಲೇ ಅತಿ ಹೆಚ್ಚು ಬಾಲ ಗರ್ಭಿಣಿಯರಿದ್ದಾರೆ ಎಂದು ಮಾಹಿತಿ ನೀಡಿದೆ. ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಗಾಗಿ ವಿವಿಧ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ‘ಕೇಂದ್ರ ಕಾರ್ಯಪಡೆ’ ರಚನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇತ್ತೀಚೆಗೆ ತುಮಕೂರು ಜಿಲ್ಲೆಯ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಬಾಲ ಗರ್ಭಿಣಿ ಪತ್ತೆಯಾದ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಏಪ್ರಿಲ್ 15, 2024 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಬುಡಕಟ್ಟು ಕಲ್ಯಾಣ ಮತ್ತು ಗೃಹ ಇಲಾಖೆಗಳಿಗೆ ಪತ್ರ ಬರೆದು, ಈ ಬೆಳವಣಿಗೆಯನ್ನು ತಡೆಯಲು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಹಾಸ್ಟೆಲ್‌ಗಳಲ್ಲಿ ಕಟ್ಟುನಿಟ್ಟಿನ…

Read More

ಟಾಲಿವುಡ್ ಬ್ಯೂಟಿ ಕೀರ್ತಿ ಸುರೇಶ್ ಸೋಷಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಸೀರೆಯುಟ್ಟು ಫೋಟೋಗೆ ಫೋಸ್ ನೀಡಿರುವ ನಟಿಯ ಗ್ಲಾಮರಸ್ ಲುಕ್ ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್ ಆಗಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಆಗಾಗ ಫೋಟೋಶೂಟ್ ಮೂಲಕ ಮಿಂಚುತ್ತಿರುತ್ತಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಕೀರ್ತಿ ಸುರೇಶ್ ಸದ್ಯ ನಾಲ್ಕೈದು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೀರ್ತಿ ಇತ್ತೀಚಿಗೆ ಸಿನಿಮಾಗಿಂತ ಹೆಚ್ಚಾಗಿ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ, ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ. ಸದ್ಯ ಕೀರ್ತಿ ಹೋಸ ಫೂಟೋಶೂಟ್ ಫೋಟೋಗಳನ್ನು ಶೇರ್ ಮಾಡಿದ್ದು ಮಹಾನಟಿ ಸೀರೆಯಲ್ಲಿ ಮಿಂಚಿದ್ದಾರೆ. ದುಬಾರಿ ಬೆಲೆಯ ಸೀರೆ ಉಟ್ಟು ನಟಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಅವರ ಸ್ಟೈಲ್ ನೋಡಿದ ನೆಟ್ಟಿಗರು ವಾವ್ ಎಂದಿದ್ದಾರೆ. ಕೀರ್ತಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮಹಾನಟಿ ಸಿನಿಮಾ ಬಳಿಕ ಕೀರ್ತಿ ಸುರೇಶ್ ಅವರಿಗೆ ಹೇಳಿಕೊಳ್ಳುವಷ್ಟು ಸಕ್ಸಸ್ ಸಿಕ್ಕಿಲ್ಲ.ಹಾಗಂತ ಸಿನಿಮಾ ಅವಕಾಶಗಳು ಕಡಿಮೆಯಾಗಿಲ್ಲ.  ಮತ್ತೊಂದು ದೊಡ್ಡ ಹಿಟ್ ಗಾಗಿ ಕಾಯುತ್ತಿರುವ ಕಾರ್ತಿ ಸದ್ಯ…

Read More

ತೈವಾನ್ ರಾಜಧಾನಿ ಇಂದು ಸಂಜೆ ಪ್ರಬಲ ಭೂಕಂಪ ಉಂಟಾಗಿದೆ ಎಂದು ಎಎಫ್ಪಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಪೂರ್ವ ಹುವಾಲಿಯನ್ನಲ್ಲಿ 5.5 ತೀವ್ರತೆಯ ಭೂಕಂಪನವಾಗಿದೆ ಎಂದು ಕೇಂದ್ರ ಹವಾಮಾನ ಆಡಳಿತ ತಿಳಿಸಿದೆ. 5.5 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದ್ದರಿಂದ ತೈವಾನ್ ಜನತೆ ಮನೆಯಿಂದ ಓಡಿ ಬಂದು ಕೆಲ ಕಾಲ ಬೀದಿಯಲ್ಲಿ ಆತಂಕದಿಂದ ಕಳೆಯುವಂತೆ ಆಯ್ತು ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Read More

ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಟಿ. ಎಸ್. ನಾಗಾಭರಣ ನಿರ್ದೇಶನದಲ್ಲಿ ಕೆಂಪೇಗೌಡ ಸಿನಿಮಾ ಮೂಡಿ ಬರಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಕೆಂಪೇಗೌಡರ ಪಾತ್ರಕ್ಕೆ ಡಾಲಿ ಧನಂಜಯ್ ಆಯ್ಕೆಯಾಗಿದ್ದು, ಚಿತ್ರದ ಪೂರ್ವಸಿದ್ಧತೆಗಳು ಭರದಿಂದ ಸಾಗಿದೆ. ಈ ಮಧ್ಯೆ ಧರ್ಮಭೀರು ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಸಿನಿಮಾವೊಂದು ಘೋಷಣೆ ಆಗಿದ್ದು, ಈ ಸಿನಿಮಾವನ್ನು ನಿಲ್ಲಿಸುವಂತೆ ನಾಗಾಭರಣ ಕೋರ್ಟ್ ಮೆಟ್ಟಿಲು ಏರಿದ್ದರು. ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ಆದೇಶದ ಅನುಸಾರ, ನಿರ್ಮಾಪಕ ಕಿರಣ್ ತೋಟಂಬೈಲ್, ಚೇತನ್ ರಾಜ್, ಧರ್ಮೇಂದ್ರ ಕುಮಾರ್ ಅರೇಹಳ್ಳಿ ಮತ್ತು ದಿನೇಶ್ ಬಾಬೂ, ಅವರ ಉದ್ಯೋಗಿಗಳು, ಏಜೆಂಟರು, ಪಾಲುದಾರರು, ಸಹವರ್ತಿ, ಅಧಿಕಾರಿ, ಪ್ರತಿನಿಧಿ ಮತ್ತು ಅವರ ಪರವಾಗಿ ವರ್ತಿಸುವ ಇತರ ಎಲ್ಲ ವ್ಯಕ್ತಿಗಳ ವಿರುದ್ಧ  ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಶೀರ್ಷಿಕೆಯ ಚಲನಚಿತ್ರವನ್ನು ಅಥವಾ ಆ ವಿಷಯವನ್ನು ಹೊಂದಿರುವ ಯಾವುದೇ ಚಲನಚಿತ್ರವನ್ನು ನಿರ್ಮಾಣ, ಪ್ರಸಾರ, ಸಾರ್ವಜನಿಕರಿಗೆ ಸಂವಹನ, ಪುನರುತ್ಪಾದನೆ, ಧ್ವನಿಮುದ್ರಣ, ವಿತರಣೆ, ಪ್ರಸಾರ, ಜಾಹೀರಾತು, ನಿರ್ದೇಶನ ಅಥವಾ…

Read More

ಬಹುನಿರೀಕ್ಷಿತ ಉತ್ತರಕಾಂಡ ಸಿನಿಮಾದಲ್ಲಿ ಸಾಕಷ್ಟು ಖ್ಯಾತ ನಟ, ನಟಿಯರು ಬಣ್ಣ ಹಚ್ಚುತ್ತಿದ್ದಾರೆ. ದಿನಕ್ಕೊಂದರಂತೆ ಚಿತ್ರತಂಡ ಹೊಸ ಹೊಸ ಪಾತ್ರಗಳ ಪರಿಚಯ ಮಾಡಿಕೊಡುತ್ತಿದೆ. ಅಂತೆಯೇ ಇಂದು ಹಿರಿಯ ನಟಿ ಉಮಾಶ್ರೀ ಪೋಸ್ಟರ್ ರಿಲೀಸ್ ಆಗಿದ್ದು ಚಿತ್ರದಲ್ಲಿ ಉಮಾಶ್ರೀ ಪಂಢರಿಬಾಯಿ ಪಾತ್ರದಲ್ಲಿ ಕಾಣಿಸಿಕೊಲ್ಳುತ್ತಿದ್ದಾರೆ. ಈಗಾಗಲೇ ಎಲ್ಲೆಡೆ ಸಂಚಲನ ಮೂಡಿಸಿರುವ ಬಹು ನಿರೀಕ್ಷಿತ ‘ಉತ್ತರಕಾಂಡ’ ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು ನಟಿಸಲಿದ್ದಾರೆ. ಬಂಡೆ ಕಾಕಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಕಳೆದ ಎರಡು ದಿನಗಳ ಹಿಂದೆ ರಂಗಾಯಣ ರಘು ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಉತ್ತರಾಕಾಂಡದಲ್ಲಿನಟಿಸುತ್ತಿದ್ದು, ಪಾಟೀಲ್ ಎಂಬ  ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ಮೊನ್ನೆಯಷ್ಟೇ ನಟ ದೂದ್ ಪೇಡಾ ದಿಗಂತ್ ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ. ಇದೀಗ ಉಮಾಶ್ರೀ ಪೋಸ್ಟರ್ ರಿಲೀಸ್ ಮಾಡಲಾಗಿದೆ.

Read More

ಯುವ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಸಿನಿ ಇಂಡಸ್ಟ್ರಿಗೆ ಭರ್ಜರಿಯಾಗಿ ಎಂಟ್ರಿಕೊಟ್ಟಿರುವ ನಟ ಯುವರಾಜ್ ಕುಮಾರ್ ಗೆ ನಾಳೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ನಟನ ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಆದರೆ, ಅಭಿಮಾನಿಗಳಿಗೆ ನಿರಾಸೆಯಾಗಿದೆ. ತಾವು ಆ ದಿನದಂದು ಮನೆಯಲ್ಲಿ ಇರೋದಿಲ್ಲ. ಹಾಗಾಗಿ ನೀವು ಇದ್ದಲ್ಲಿಂದಲೇ ಹಾರೈಸಿ ಎಂದು ಯುವರಾಜ್ ಕುಮಾರ್ ವಿಡಿಯೋ ಮೂಲಕ ತಿಳಿಸಿದ್ದಾರೆ. ಚುನಾವಣೆ ಮತ್ತು ಇತರ ಕಾರಣಗಳಿಂದಾಗಿ ಈ ಬಾರಿ ಯುವ ರಾಜ್ ಕುಮಾರ್, ಮನೆಯಲ್ಲಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ಮನೆಯಲ್ಲಿ ಅಂದು ಇರೋದಿಲ್ಲವೆಂದದು ಸ್ವತಃ ಯುವರಾಜ್ ಅವರೇ ವಿಡಿಯೋ ಸಂದೇಶ ಕಳುಹಿಸಿದ್ದಾರೆ. ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ…

Read More

ರೋರಿಂಗ್ ಸ್ಟಾರ್ ಶ್ರೀಮುರಳಿ ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ‘ಬಘೀರ’ ಸಿನಿಮಾದ ಚಿತ್ರೀಕರಣದ ವೇಳೆ ಈ ಅವಘಡ ನಡೆದಿದ್ದು, ಕೂಡಲೇ ಶ್ರೀಮುರಳಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಬಘೀರ’ ಸಿನಿಮಾದ ಟೀಸರ್ ಈ ಮೊದಲು ರಿಲೀಸ್ ಆಗಿತ್ತು. ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಗೊತ್ತಾಗಿದೆ. ಡ್ಯೂಪ್ ಬಳಸದೆ ಸ್ವತಃ ಶ್ರೀಮುರಳಿ ಅವರೇ ಸ್ಟಂಟ್​ಗಳನ್ನು ಮಾಡುತ್ತಿದ್ದಾರೆ. ಈ ಮೊದಲು ಈ ಚಿತ್ರದ ಶೂಟಿಂಗ್​ನ ಫೈಟಿಂಗ್ ಸೀನ್ ವೇಳೆ ಅವರ ಕಾಲಿಗೆ ಪೆಟ್ಟಾಗಿತ್ತು. ಹೀಗಾಗಿ ಅವರು ಸರ್ಜರಿಗೆ ಒಳಗಾಗಿ ಎರಡು ತಿಂಗಳು ರೆಸ್ಟ್ ಮಾಡಿದ್ದರು. ಇದೀಗ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ‘ಬಘೀರ’ ಚಿತ್ರಿಕರಣದ ಸಮಯದಲ್ಲಿ ಚಿತ್ರದಲ್ಲಿನ ಮುಖ್ಯವಾಗಿ ನಡೆಯುವ ಸನ್ನಿವೇಶದ ಬಹು ದೊಡ್ಡ ಸ್ಟಂಟ್ ಸೀನ್ ವೇಳೆ ಶ್ರೀಮುರಳಿ ಅವರಿಗೆ ಕಾಲಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೂರಿ ನಿರ್ದೇಶನದ ‘ಬಘೀರ’ ಸಿನಿಮಾವನ್ನು ‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣ ಮಾಡುತ್ತಿದೆ. ರುಕ್ಮಿಣಿ ವಸಂತ್, ಪ್ರಕಾಶ್…

Read More

ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ನಡೆಸಿ ಚಿತ್ರಹಿಂಸೆ ನೀಡುತ್ತಿದ್ದ ಆರೋಪಿಯ ಮನೆಯನ್ನು ಸ್ಥಳೀಯರು ಜೆಸಿಬಿಯಿಂದ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಅಧಿಕಾರಿಗಳು ಇಂದು ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ನೆಲಸಮಗೊಳಿಸಿದ್ದಾರೆ. ಆರೋಪಿಯ ಮನೆಯನ್ನು ಜೆಸಿಬಿಯಿಂದ ಕೆಡವುತ್ತಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ. ಆರೋಪಿ ಅಯಾನ್ ಪಠಾಣ್ ಎಂಬಾತ ತನ್ನ ನೆರೆ ಮನೆಯಲ್ಲಿ ವಾಸಿಸುತ್ತಿದ್ದ 23 ವರ್ಷದ ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ ನೀಡಿದ್ದನು . ಕೂಲಿ ಕೆಲಸ ಮಾಡುತ್ತಿದ್ದ ಅಯಾನ್ ಮಹಿಳೆಯ ತಾಯಿಯ ಹೆಸರಿನಲ್ಲಿರುವ ಆಸ್ತಿಯ ಮೇಲೆ ಕಣ್ಣಿಟ್ಟಿದ್ದನು. ಆಕೆಯ ಆಸ್ತಿಯನ್ನು ತನಗೆ ನೀಡಲು ನಿರಾಕರಿಸಿದ ಕಾರಣಕ್ಕೆ ಮಹಿಳೆಯನ್ನು ಹೊಡೆದು ಆಕೆಯ ಕಣ್ಣು ಮತ್ತು ಬಾಯಿಗೆ ಮೆಣಸಿನ ಪುಡಿಯನ್ನು ತುಂಬಿದ್ದ. ಅಷ್ಟೇ ಅಲ್ಲದೇ ಹೊರಗಡೆ ಆಕೆಯ ಧ್ವನಿ ಕೇಳದೇ ಇರಲು ಬಾಯಿಗೆ ಅಂಟುಗಳನ್ನು ಹಾಕಿದ್ದನು ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ತನ್ನ ಸಂಬಂಧಿಕರ ನೆರವಿನಿಂದ ಮಹಿಳೆಗೆ ಹಲವು…

Read More

ಉತ್ತರ ನೇಪಾಳದ ಮನಾಸ್ಲು ಪರ್ವತದ ಇಳಿಜಾರಿನ ಪ್ರದೇಶದಲ್ಲಿ ಭಾರಿ ಹಿಮಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕೆಳಗೆ ಇರುವ ಬೀರೇಂದ್ರ ಸರೋವರದಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಘಟನೆಯಿಂದ ಇದುವರೆಗೂ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಸರೋವರದಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ತಗ್ಗು ಪ್ರದೇಶದಲ್ಲಿರುವ ಜನರಿಗೆ ಎಚ್ಚರಿಕೆಯಿಂದಿರಲು ಗೃಹ ಸಚಿವಾಲಯ ಸೂಚನೆ ನೀಡಿದೆ. ಪ್ರವಾಹ ಸ್ಥಿತಿ ಎದುರಾದರೆ ಪರಿಸ್ಥಿತಿ ಬಿಗಡಾಯಿಸಲಿದೆ. ಸಮಯಕ್ಕೆ ಸರಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಲ್ಲಿನ ಪ್ರದೇಶಗಳಲ್ಲಿನ ಜನರಿಗೆ ನಾವು ಮನವಿ ಮಾಡಿದ್ದೇವೆ. ತಕ್ಷಣದ ಪ್ರತಿಕ್ರಿಯೆಯಾಗಿ ಆ ಪ್ರದೇಶಕ್ಕೆ ಭದ್ರತಾ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರ ನಾರಾಯಣ ಪ್ರಸಾದ್‌ ಭಟ್ಟಾರೈ ತಿಳಿಸಿದ್ದಾರೆ.

Read More

ಕನ್ನಡದ ಖ್ಯಾತ ಬಹುಭಾಷಾ ಗಾಯಕ ವಿಜಯ್ ಪ್ರಕಾಶ್ ಗೆ ಟೊರೆಂಟೋದಲ್ಲಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯಿತು. ವಿಜಯ್ ಅವರ ಕಲಾ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಟೊರೆಂಟೋದಲ್ಲಿ ವಿಜಯ್ ಪ್ರಕಾಶ್ ಲೈವ್ ಕಾರ್ಯಕ್ರಮ ಆಯೋಜನೆಯಾಗಿತ್ತು. ಅದರಲ್ಲಿ ಭಾಗಿಯಾಗಿದ್ದ ವೇಳೆ ರಿಚ್ಮಂಡ್ ಗ್ಯಾಬ್ರಿಯಾಲ್ ಯೂನಿವರ್ಸಿಟಿ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದೆ. ಈ ಖುಷಿ ವಿಚಾರವನ್ನು ಅವರೇ ಖುದ್ದಾಗಿ ಹಂಚಿಕೊಂಡಿದ್ದಾರೆ. ವಿಜಯ್ ಪ್ರಕಾಶ್ ಜೊತೆಗೆ ತಮಿಳು ಮೂಲದ ಗಾಯಕ ಶ್ರೀನಿವಾಸನ್ ಗೂ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ. ಇಬ್ಬರನ್ನೂ ಒಂದೇ ವೇದಿಕೆಯಲ್ಲಿ ಸನ್ಮಾನ ಮಾಡಲಾಗಿದೆ. ಈ ಖುಷಿಯ ಕ್ಷಣಗಳನ್ನು ವಿಜಯ್ ಪ್ರಕಾಶ್ ಹಂಚಿಕೊಂಡಿದ್ದು ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಕವಿತೆ ಕವಿತೆ ಹಾಡಿನ ಮೂಲಕ ಕನ್ನಡಿಗರ ಮನಗೆದ್ದಿದ್ದ ಗಾಯಕ ವಿಜಯ್ ಪ್ರಕಾಶ್ ಇಂದು ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಬಹುಭಾಷೆಗಳಲ್ಲಿ ಅನೇಕ ಹಾಡು ಹಾಡಿ ಕನ್ನಡಕ್ಕೆ ಹೆಮ್ಮೆ ತಂದಿದ್ದಾರೆ. ದೇಶ-ವಿದೇಶಗಳಲ್ಲೂ ಕಾರ್ಯಕ್ರಮ ನೀಡುತ್ತಲೇ ಇರುತ್ತಾರೆ. ಇದು ಅವರ ಕಲಾಸೇವೆಯನ್ನು ಗುರುತಿಸಿ ನೀಡಲಾಗುತ್ತಿರುವ…

Read More