Author: Author AIN

ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ರಿಷಬ್ ಶೆಟ್ಟಿ ಈ ಮಧ್ಯೆ ಮಾಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ಭೇಟಿ ಮಾಡಿದ್ದಾರೆ.ಮೋಹನ್ ಲಾಲ್ ಅವರನ್ನು ಭೇಟಿಯಾದ ವೇಳೆ ತೆಗೆದ ಫೋಟೋಗಳನ್ನು ರಿಷಬ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ’ ಪಾರ್ಟ್ 1 ಸಿನಿಮಾ ಕೆಲಸದಲ್ಲಿ ರಿಷಬ್ ಬ್ಯುಸಿಯಾಗಿದ್ದಾರೆ. ಇದರ ನಡುವೆ ಖ್ಯಾತ ನಟ ಮೋಹನ್‌ಲಾಲ್ ಅವರನ್ನು ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಭೇಟಿಯಾಗಿದ್ದು, ನೆಚ್ಚಿನ ನಟನ ಜೊತೆ ಕೆಲ ಕಾಲ ಸಮಯ ಕಳೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಈ ಭೇಟಿ ಯಾಕೆ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ರಿಷಬ್ ಬಿಟ್ಟುಕೊಟ್ಟಿಲ್ಲ. ಕಳೆದ ಎರಡು ದಿನಗಳ ಹಿಂದಷ್ಟೇ ಮೋಹನ್‌ಲಾಲ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮುಂಜಾನೆ ಮಹಾಮಂಗಳಾರತಿಯಲ್ಲಿ ನಟ ಪಾಲ್ಗೊಂಡಿದ್ದರು.

Read More

ತೆಲುಗಿನ ‘ಹನುಮಾನ್’ ಸಿನಿಮಾ ಮೂಲಕ ಸಕ್ಸಸ್ ಕಂಡಿರುವ ಯುವ ನಟ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕಾರ್ತಿಕೇಯ, ಕಾರ್ತಿಕೇಯ-2, ಧಮಾಕ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಕಾರ್ತಿಕ್ ಗಟ್ಟಮ್ನೇನಿ ತೇಜ್ ಸಜ್ಜಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಹನುಮಾನ್’ ಸಿನಿಮಾದಲ್ಲಿ ಚಾಕೆಲೇಟ್ ಹೀರೋ ಆಗಿ ಕಾಣಿಸಿಕೊಂಡಿದ್ದ ತೇಜ್ ಈ ಭಾರಿ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೈಯಲ್ಲಿ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ. ತೇಜ್ ಸಜ್ಜಾ ಹೊಸ ಸಿನಿಮಾ ‘ಮಿರಾಯ್’ ಎಂಬ ಟೈಟಲ್ ಇಡಲಾಗಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ. ‘ಮಿರಾಯ್’ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ಅನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್…

Read More

ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ವ್ಯಕ್ತಿಯ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತ ಹಾಕಿ ಎಂದು ನಟ ದರ್ಶನ್ ಮನವಿ ಮಾಡಿದ್ದಾರೆ. ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ ಅಂದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ. ಹಲಗೂರು ಗ್ರಾಮಕ್ಕೆ ದರ್ಶನ್ ಬರುತ್ತಿದ್ದಂತೆಯೇ ಅಭಿಮಾನಿಗಳಿಂದ ಜೈಕಾರ ಕೇಳಿ ಬಂತು. ಡಿ ಬಾಸ್ ಡಿ ಬಾಸ್ ಎಂದು ಘೋಷಣೆ ಮೊಳಗಿಸಿ ಸಂಭ್ರಮಿಸಿದ್ದಾರೆ ಅಭಿಮಾನಿಗಳು. ಬೃಹತ್ ಗುಲಾಬಿ ಹೂವಿನ ಹಾರವನ್ನು ಕ್ರೇನ್ ಮೂಲಕ ಹಾಕಿ ನೆಚ್ಚಿನ ನಟನಿಗೆ ಸ್ವಾಗತ ಕೋರಿದರು.

Read More

ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳಿಂದ ಬ್ರೇಕ್ ಪಡೆದುಕೊಂಡಿರುವ ನಟಿ ಪ್ರಚಾರದಲ್ಲ ಫುಲ್ ಬ್ಯುಸಿಯಾಗಿದ್ದಾರೆ.  ಮತದಾರರನ್ನು ಸೆಳೆಯಲು ನಟಿ ಸಾಕಷ್ಟು ಕಸರತ್ತುಗಳನ್ನು ಮಾಡುತ್ತಿದ್ದಾರೆ. ಮಂಡಿ ಕ್ಷೇತ್ರದ ಭರ್ಮೌರ್ ಗೆ ಭೇಟಿ ನೀಡಿರುವ ಕಂಗನಾ, ಅಲ್ಲಿನ ಪುರಾತನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಚಂಬಾ ಗಡ್ಡಿ ಸಮುದಾಯದ ಸಾಂಪ್ರದಾಯಿಕ ಉಡುಪನ್ನು ಧರಿಸಿ, ಮತಯಾಚನೆ ಮಾಡಿದ್ದಾರೆ. ಇನ್ನೂ ಚುನಾವಣಾ ಪ್ರಚಾರದ ನಡುವೆ ಕಂಗನಾ ರಣಾವತ್ ಮಂಡಿಯಲ್ಲಿ ಮಾಜಿ ಸಿಎಂ ಜೈರಾಮ್ ಠಾಕೂರ್ ಅವರೊಂದಿಗೆ ನೆಲದ ಮೇಲೆ ಕುಳಿತು ಆಹಾರ ಸೇವಿಸಿದರು. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ವಿರೋಧ ಪಕ್ಷದ ನಾಯಕಿ ಮತ್ತು ಕಂಗನಾ ರಣಾವತ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೈರಾಮ್ ಠಾಕೂರ್ ಐದು ವರ್ಷಗಳ ಕಾಲ ಧುಮಾಲ್ ಅವರನ್ನು ನೆನಪಿಸಿಕೊಳ್ಳಲಿಲ್ಲ. ಇವರು ತಮ್ಮ ಹಿತಾಸಕ್ತಿಗಾಗಿ ಸಮೀರಪುರದ ಸುತ್ತ ತಿರುಗುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ…

Read More

ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿರುವ ರಶ್ಮಿಕಾ ಇನ್ಸ್ಟಾದಲ್ಲಿ ಚೆಂದದ ಫೋಟೋ ಶೇರ್ ಮಾಡಿದ್ದಾರೆ. ಬ್ಲ್ಯಾಕ್ ಡ್ರಸ್, ನ್ಯೂಸ್ ​ ಹೇರ್​ಸ್ಟೈಲ್​, ಕ್ಯೂಟ್ ಲುಕ್​ನಲ್ಲಿ ರಶ್ಮಿಕಾ ಮಂದಣ್ಣ ಮಿಂಚಿದ್ದು ನಟಿಯನ್ನು ನೋಡಿದ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಆ ಬಳಿಕ ಮುಟ್ಟಿದೆಲ್ಲಾ ಚಿನ್ನವಾಗುತ್ತಲೇ ಹೋಯಿತು. ಸ್ಯಾಂಡಲ್ ವುಡ್ ಬಳಿಕ ಟಾಲಿವುಡ್ ಗೆ ಹಾರಿ ಆ ಬಳಿಕ ಬಾಲಿವುಡ್ ನಲ್ಲೂ ಕೂರ್ಗ್ ಚೆಲುವೆ ಮಿಂಚುತ್ತಿದ್ದಾರೆ. ಸದ್ಯ ರಶ್ಮಿಕಾ ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಫ 2 ಸಿನಿಮಾ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ. ಇತ್ತೀಚೆಗೆ ಹಿಂದಿಯಲ್ಲಿ ಪ್ಯಾನ್ ಇಂಡಿಯಾ ಫಿಲ್ಮ್ ಅನಿಮಲ್ ನಲ್ಲಿ ರಶ್ಮಿಕಾ ನಟಿಸಿದ್ರು. ಈ ಸಿನಿಮಾ ಮೂಲಕ ಮತ್ತೊಂದು…

Read More

ಮಕ್ಕಳಿಂದ ವಯೋವೃದ್ಧರವರೆಗೆ ಎಲ್ಲರಿಗೂ ಒಂದು ಯೋಜನೆಯನ್ನು ನೀಡುತ್ತಿರುವ ಅಂಚೆ ಕಚೇರಿ ಹಿರಿಯ ನಾಗರಿಕರಿಗೆ ಉತ್ತಮ ಯೋಜನೆ ಜಾರಿಗೊಳಿಸಿದೆ. ಹೋಡಿಕೆಯಿಂದ ಪ್ರತಿ ತಿಂಗಳು 20,500 ರೂ. ಪಡೆಯಬಹುದಾಗಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಕನಿಷ್ಠ ರೂ.1000 ರಿಂದ ಗರಿಷ್ಠ ರೂ.30 ಲಕ್ಷದವರೆಗೆ ಹೂಡಿಕೆ ಮಾಡಬಹುದು. ಆದರೆ ನಮಗೆ ಬರುವ ಆದಾಯವು ನಾವು ಎಷ್ಟು ಹೂಡಿಕೆ ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಪ್ರಾಸಂಗಿಕವಾಗಿ ಈ ಯೋಜನೆಯಲ್ಲಿನ ಹೂಡಿಕೆಯು ಸೆಕ್ಷನ್ 80C ಅಡಿಯಲ್ಲಿ ತೆರಿಗೆ ವಿನಾಯಿತಿಯನ್ನು ಹೊಂದಿದೆ. ಸೆಕ್ಷನ್ 80ಸಿ ಅಡಿಯಲ್ಲಿ ರೂ.15 ಲಕ್ಷದವರೆಗೆ ತೆರಿಗೆ ವಿನಾಯಿತಿ ಇದೆ. 60 ವರ್ಷ ಮೇಲ್ಪಟ್ಟವರನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ರೂಪಿಸಲಾಗಿದೆ. ನೀವು ಈ ಯೋಜನೆಗೆ ಸೇರಿದರೆ.. ನಿವೃತ್ತಿಯ ನಂತರ ನೀವು ನಿಯಮಿತ ಆದಾಯವನ್ನು ಪಡೆಯಬಹುದು. ಅಲ್ಲದೆ ನಿವೃತ್ತರು ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಈ ಯೋಜನೆಯಲ್ಲಿ ಹೂಡಿಕೆ ಮಾಡುವವರಿಗೆ ಸರ್ಕಾರವು ಪ್ರಸ್ತುತ 8.2 ಪ್ರತಿಶತದವರೆಗೆ ಬಡ್ಡಿಯನ್ನು ಪಾವತಿಸುತ್ತಿದೆ. ಈ ಯೋಜನೆಯಲ್ಲಿ, ಹಿರಿಯ ನಾಗರಿಕರು ಒಟ್ಟಾಗಿ…

Read More

ತಮಿಳು ಹಾಗೂ ತೆಲುಗಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ಸ್ನೇಹಾ ಕನ್ನಡಿಗರಿಗೂ ಚಿರ ಪರಿಚಿತ. ಕನ್ನಡದಲ್ಲಿ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟಿ ತಮ್ಮ ಸೌಂದರ್ಯದಿಂದಲೇ ಲಕ್ಷಾಂತರ ಅಭಿಮಾನಿಗಳ ಮನ ಗೆದ್ದಾಕೆ. ವೃತ್ತಿ ಜೀವನದಲ್ಲಿ ಉತ್ತುಂಗದಲ್ಲಿರುವಾಗಲೇ ನಟ ಪ್ರಸನ್ನ ಅವರ ಪ್ರೀತಿಯ ಬಲೆಯಲ್ಲಿ ಬಿದ್ದು 2012ರಲ್ಲಿ ಮದುವೆಯಾದ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸದ್ಯ ಸಿನಿಮಾಗಳಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನಟಿಸುತ್ತಿರುವ ಸ್ನೇಹಾ ಹೊಸ ಸೀರೆ ವ್ಯಾಪಾರ ಶುರು ಮಾಡಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ಪತಿ-ಪತ್ನಿಯ ನಡುವಿನ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಸಂಬಂಧದಲ್ಲಿ ಪೊಸೆಸಿವ್​ನೆಸ್ ಇರಬೇಕು ಆದರೆ ಅತಿಯಾಗಬಾರದು. ಅತಿಯಾದರೆ ನಾವು ನಂಬಿಕೆ ಕಳೆದುಕೊಳ್ಳುತ್ತೇವೆ. ಯಾಕೆ ಹೊರಗೆ ಹೋಗುತ್ತಿದ್ದೀರಿ? ಇಷ್ಟೊತ್ತು ಏನ್​ ಮಾಡ್ತಿದ್ರಿ? ಎಂಬಿತ್ಯಾದಿ ಪ್ರಶ್ನೆಗಳು ಉದ್ಭವಿಸಲೇಬಾರದು. ಒಬ್ಬರೊನ್ನೊಬ್ಬರು ಸರಿಯಾಗಿ ಅರ್ಥ ಮಾಡಿಕೊಂಡರೆ ಈ ಪ್ರಶ್ನೆಗಳು ಉದ್ಭವಿಸುವುದಿಲ್ಲ. ದಂಪತಿ ಮಧ್ಯೆ ಪರಸ್ಪರ ನಂಬಿಕೆ ಇಟ್ಟುಕೊಳ್ಳಬೇಕು ಎಂದು ಸ್ನೇಹಾ ಹೇಳಿದ್ದಾರೆ. ಇನ್ನೊಬ್ಬರು ನಮ್ಮನ್ನು ಕೇಳುವ ಮೊದಲು ಎಲ್ಲಿಗೆ ಹೋಗುತ್ತಿದ್ದೇವೆ ಮತ್ತು ಯಾವ ಸಮಯಕ್ಕೆ ಮನೆಗೆ…

Read More

ನಾವು ಭಾರತೀಯರನ್ನು ಬಂಧಿಸಿಲ್ಲ. ಇಲ್ಲಿ ಹವಾಮಾನ ಸರಿ ಇಲ್ಲದ ಕಾರಣಕ್ಕಾಗಿ ಅವರನ್ನು ಇಲ್ಲಿ ಇರಿಸಲಾಗಿದೆ. ಖಂಡಿತ ಅವರು ಬಯಸಿದಾಗ ಭಾರತಕ್ಕೆ ಹೋಗಬಹುದು ಎಂದು ಇರಾನ್ ರಾಯಭಾರಿ ಇರಾಜ್ ಇಲಾಹಿ ಹೇಳಿದ್ದಾರೆ. ಇರಾನ್ ವಶಪಡಿಸಿಕೊಂಡಿದ್ದ ಇಸ್ರೇಲ್​​​ಗೆ ಸಂಬಂಧಿಸಿದ ಹಡಗಿನಲ್ಲಿ 17 ಭಾರತೀಯ ಸಿಬ್ಬಂದಿಗಳಿದ್ದರು, ಅವರನ್ನು ಇರಾನ್​​ ಬಂಧಿಸಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಇರಾನ್​​ ನಾವು ಭಾರತೀಯರನ್ನು ಬಂಧಿಸಿಲ್ಲ. ಇಲ್ಲಿ ಹವಾಮಾನ ಸರಿ ಇಲ್ಲ ಅದಕ್ಕಾಗಿ ಅವರನ್ನು ಇಲ್ಲಿ ಇರಿಸಲಾಗಿದೆ. ಖಂಡಿತ ಅವರು ಬಯಸಿದಾಗ ಭಾರತಕ್ಕೆ ಹೋಗಬಹುದು ಎಂದು ಇರಾನ್ ರಾಯಭಾರಿ ಇರಾಜ್ ಇಲಾಹಿ ಹೇಳಿದ್ದಾರೆ. ಇದೀಗ ಈ ಹೇಳಿಕೆ ಭಾರತ ರಾಜತಾಂತ್ರಿಕತೆಗೆ ಮತ್ತೊಂದು ಜಯ ಎಂದು ಹೇಳಲಾಗಿದೆ. ಇರಾನ್ ರಾಯಭಾರಿ ಪ್ರಕಾರ, ಪರ್ಷಿಯನ್ ಕೊಲ್ಲಿಯಲ್ಲಿ ಹವಾಮಾನ ಪರಿಸ್ಥಿತಿ ಉತ್ತಮವಾಗಿಲ್ಲ, ಆ ಕಾರಣದಿಂದ ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿಗಳು ಇಲ್ಲಿದ್ದಾರೆ. ಹವಾಮಾನ ಸುಧಾರಿಸಿದ ನಂತರ ಅವರು ಭಾರತಕ್ಕೆ ಹೋಗಬಹುದು. ಭಾರತಕ್ಕೆ ಹೋಗಲು ಅವರು ಹಡಗನ್ನು ಬಳಸಬಹುದು ಎಂದು ಹೇಳಿದ್ದಾರೆ. ಹಡಗಿನಲ್ಲಿರುವ ರಷ್ಯಾ, ಪಾಕಿಸ್ತಾನ ಮತ್ತು…

Read More

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾಗೆ ಸೇರಿದ ಸುಮಾರು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಆಸ್ತಿಯಲ್ಲಿ ಮುಂಬೈನ ಪ್ರತಿಷ್ಠಿತ ಜುಹುವಿನಲ್ಲಿರುವ ಅಪಾರ್ಟ್ ಮೆಂಟ್ ಕೂಡ ಸೇರಿದೆ. 2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಇಡಿ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಲ್ಲಿ ಪುಣೆಯಲ್ಲಿರುವ ಬಂಗ್ಲೆ, ಫ್ಲಾಟ್ ಹಾಗೂ ಇಕ್ವಿಟಿ ಷೇರು ಕೂಡ ಹೊಂದಿವೆ. ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಸಂಸ್ಥೆಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಸಂಸ್ಥೆಯ ಮೂಲಕ ಅಮಿತ್ ಭಾರದ್ವಾಜ್, ವಿವೇಕ್, ಅಜಯ್, ಮಹೇಂದರ್ ಹೀಗೆ ಹಲವಾರು ಏಜೆಂಟರ್ ಗಳು ಬಿಟ್ ಕಾಯಿನ್ ರೂಪದಲ್ಲಿ 2017ರಲ್ಲಿ 6,600 ಕೋಟಿ ರೂ. ಹಣ ಸಂಗ್ರಹಿಸಿದ್ದರು. ಇವರ ಜೊತೆ…

Read More

ಬಾಲಿವುಡ್​ನ ಕ್ಯೂಟ್​​ ಕಪಲ್​​ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮೊದಲ​​​ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಈ ಸಂತೋಷದ ವಿಚಾರವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಗರ್ಭಿಣಿ ದೀಪಿಕಾ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಸದ್ಯ ದೀಪಿಕಾ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ನಟಿ ಶೂಟಿಂಗ್ ನಲ್ಲಿ ಭಾಗಿಯಾರಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗರ್ಭಿಣಿಯಾಗಿರುವ ದೀಪಿಕಾ ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸಿ ಎಲ್ಲರಿಗೂ ಶಾಕ್ ನೀಡಿದ್ದಾರೆ.ಗರ್ಭಿಣಿ ದೀಪಿಕಾ  ಹೊಟ್ಟೆಯಲ್ಲಿ ಮಗುವನಿಟ್ಟುಕೊಂಡು ಶೂಟಿಂಗ್ ನಲ್ಲಿ ಭಾಗವಹಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಸಿಂಗಂ ಸಿನಿಮಾದಲ್ಲಿ ದೀಪಿಕಾ ನಟಿಸಲಿದ್ದಾರೆ. ದೀಪಿಕಾ ಜೊತೆಗೆ ಅಜಯ್ ದೇವಗನ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಮತ್ತು ಕರೀನಾ ಕಪೂರ್ ಕೂಡ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದೀಪಿಕಾ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ದೀಪಿಕಾ ಬೇಬಿ ಬಂಪ್ ಇರುವ ಫೋಟೋಗಳು ವೈರಲ್ ಆಗಿವೆ.

Read More