Author: Author AIN

ಸಕ್ಕರೆ ಮುಕ್ತ ಶ್ವೆಪ್ಪಸ್ ಜಿಂಜರ್ ಮದ್ಯದಲ್ಲಿ ಸಂಪೂರ್ಣ ಸಕ್ಕರೆ ಅಂಶ ಇದ್ದ ಕಾರಣದಿಂದ ಇಡೀ ಉತ್ಪನ್ನವನ್ನೆ ಪೆಪ್ಸಿಕೋ ಹಿಂಪಡೆದಿದೆ. ಸಂಸ್ಥೆ ಸ್ವಯಂ ಪ್ರೇರಿತವಾಗಿ ಈ ಉತ್ಪನ್ನವನ್ನು ಹಿಂಪಡೆದಿದೆ ಎಂದು ಆಹಾರ ಮತ್ತು ಔಷಧ ನಿಯಂತ್ರಕ ತಿಳಿಸಿದೆ. ಶ್ವೆಪ್ಪಸ್ ಜಿಂಜರ್ ಮದ್ಯದ ಉತ್ಪನ್ನ ಸಕ್ಕರೆ ಮುಕ್ತ ಹಾಗೂ ಕೆಫೀನ್ ಮುಕ್ತ ಎಂದು ಪೆಪ್ಸಿಕೋ ಮುದ್ರಿಸಿತ್ತು. ಆದರೆ ಈ ಉತ್ಪನ್ನಗಳು ಸಾಮಾನ್ಯ ಸಕ್ಕರೆಯ ಅಂಶವನ್ನು ಹೊಂದಿದ್ದು, ಮಧುಮೇಹವನ್ನು ನಿರ್ವಹಿಸುವ ಅಥವಾ ಸಕ್ಕರೆ-ನಿರ್ಬಂಧಿತ ಆಹಾರವನ್ನು ಅನುಸರಿಸುವ ಜನರಿಗೆ ಅಪಾಯಕಾರಿ ಎಂಬ ಅಂಶ ಪತ್ತೆಯಾಗಿದೆ. ಮೇರಿಲ್ಯಾಂಡ್, ಪೆನ್ಸಿಲ್ವೇನಿಯಾ ಮತ್ತು ವೆಸ್ಟ್ ವರ್ಜೀನಿಯಾಕ್ಕೆ ಕಳುಹಿಸಲಾದ 7.5-ಔನ್ಸ್ ಕ್ಯಾನ್‌ಗಳ 233 ಕೇಸ್ ಗಳನ್ನು ಸಂಸ್ಥೆ ಹಿಂಪಡೆದಿದೆ. ಹಿಂಪಡೆಯುವ ಪ್ರಕ್ರಿಯೆಯನ್ನು ಮಾರ್ಚ್ 9 ರಂದು ಪ್ರಾರಂಭಿಸಲಾಯಿತು ಎಂದು ಎಬಿಸಿ ವರದಿ ಮಾಡಿದೆ. ಪೆಪ್ಸಿಕೋದ ಆಂತರಿಕ ತನಿಖೆಯ ನಂತರ, ಕಂಪನಿ “ಶೂನ್ಯ ಸಕ್ಕರೆ” ಎಂದು ಲೇಬಲ್ ಮಾಡಲಾದ ಉತ್ಪನ್ನಗಳನ್ನು ಬಹಿರಂಗಪಡಿಸುವುದರ ಮೇಲೆ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿತು ಎಂದು FDA ಹೇಳಿದೆ. ಉತ್ಪನ್ನಗಳಿಂದಾಗಿ ಸದ್ಯಕ್ಕೆ,…

Read More

ಮಹಾನ್ ವ್ಯಕ್ತಿ, ತುಂಬಾ ಜನ ಹುಟ್ತಾರೆ ಸಾಯ್ತಾರೆ. ಆದರೆ ಈ ಬದುಕಿನ ಅವಕಾಶವನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ದ್ವಾರಕೀಶ್ ಅವರಿಂದ ಕಲಿತುಕೊಳ್ಳಬೇಕು. ಅವರ ಯಾವಾಗಲೂ ಸ್ಫೂರ್ತಿ ಆಗಿದ್ದರು. ಕನ್ನಡ ಚಿತ್ರರಂಗ ಇರೋವರೆಗೂ ಅವರ ಸೇವೆಯನ್ನು ಮರೆಯೋಲ್ಲ. ಅವರ ಕುಟುಂಬಕ್ಕೆ ಈ ದುಖಃವನ್ನು ತೆಡೆದುಕೊಳ್ಳುವ ಶಕ್ತಿ ನೀಡಲಿ ಎಂದು ನಟ ಯಶ್ ಹೇಳಿದ್ದಾರೆ. ದ್ವಾರಕೀಶ್ ಅವರ ಚಿತೆಗೆ ಅಗ್ನಿಸ್ಪರ್ಷ ಮಾಡುವ ಮುನ್ನ ಪೊಲೀಸ್ ಇಲಾಖೆಯು ಪೊಲೀಸ್ ಗೌರವವನ್ನು ಸಲ್ಲಿಸಲಾಯಿತು. ನಂತರ ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಯಿತು. ನಿನ್ನೆ ಬೆಳಗ್ಗೆ ದ್ವಾರಕೀಶ್ ಅವರು ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದರು. ನಿನ್ನೆಯಿಂದ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕನ್ನಡ ಚಿತ್ರೋದ್ಯಮದ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದರು. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ, ಸೂಪರ್ ಸ್ಟಾರ್ ರಜನಿಕಾಂತ್…

Read More

ಕನ್ನಡ‍ಕ್ಕೆ ಮತ್ತು ಕನ್ನಡ ಸಿನಿಮಾ ರಂಗಕ್ಕೆ ದ್ವಾರಕೀಶ್ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ದ್ವಾರಕೀಶ್ ಬಹಳಷ್ಟು ಏಳುಬೀಳುಗಳನ್ನ ಕಂಡಿದ್ದರು. ಎಷ್ಟೇ ಕಷ್ಟಬಂದರು ಸಹಿಸಿಕೊಂಡು ಕನ್ನಡಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಹೆಚ್ಚಾಗಿ ಅವರು ಸಹ ಮೈಸೂರಿನವರು. ಅನೇಕ ವಿಚಾರಗಳನ್ನ ಅವರೊಂದಿಗೆ ಚರ್ಚೆ ಮಾಡಿದ್ದೆ. ಕನ್ನಡ ಸೇವೆ ಮಾಡಿದ ಅಪರೂಪ ನಟ. ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ದೃಷ್ಟಿ ಕೊಡುವಂತವ ಕೆಲಸ ಮಾಡಿರೋದು ಶ್ಲಾಘನೀಯ. ಕನ್ನಡ ಚಿತ್ರರಂಗ ಅವರ ಸಾವಿನಿಂದ ಬಹಳ ಬಡವಾಯಿತು. ಒಬ್ಬ ಕನ್ನಡ ಪ್ರೇಮಿ ಕಳೆದುಕೊಂಡಿದ್ದೇವೆ. ಅವರ ಧರ್ಮಪತ್ನಿ ಕಾಲವಾದ ದಿನವೇ ಅವರು ಕಾಲವಾಗಿದ್ದಾರೆ ಎಂದು ಹೇಳಿದರು. ದ್ವಾರಕೀಶ್ ಅವರ ಚಿತೆಗೆ ಅಗ್ನಿಸ್ಪರ್ಷ ಮಾಡುವ ಮುನ್ನ ಪೊಲೀಸ್ ಇಲಾಖೆಯು ಪೊಲೀಸ್ ಗೌರವವನ್ನು ಸಲ್ಲಿಸಲಾಯಿತು. ನಂತರ ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ…

Read More

ಹಬ್ಬ, ಹರಿದಿನಗಳ ಬಂತು ಅಂದ್ರೆ ಸಾಮಾನ್ಯವಾಗಿ ಮಹಿಳೆಯರು ಚಿನ್ನ ಬೆಳ್ಳಿಯನ್ನು ಖರೀದಿಸಲು ಮುಂದಾಗುತ್ತಾರೆ. ಆದರೆ ಹೆಚ್ಚುತ್ತಿರುವ ಬೆಲೆಯಿಂದಾಗಿ ಮಹಿಳೆಯರ ಆಸೆಗೆ ತಣ್ಣೀರೆರಚಿದಂತಾಗಿದೆ. ಇಂದು ರಾಮನವಮಿ ಹಿನ್ನೆಲೆಯಲ್ಲಿ ಚಿನ್ನ ಬೆಳ್ಳಿ ಕೊಂಡುಕೊಳ್ಳಬೇಕು ಎಂದು  ಕೊಂಡವರಿಗೆ ಬೆಲೆ ಏರಿಕೆ ಮತ್ತೆ ಆಭರಣ ಖರೀದಿಗೆ ತಣ್ಣೀರೆರಚಿದೆ. 22 ಕ್ಯಾರೆಟ್‌ ಚಿನ್ನದ ಬೆಲೆ ಇಂದು 1 ಗ್ರಾಂ ಚಿನ್ನಕ್ಕೆ 6,795 ರೂ. ಇದೆ. ನಿನ್ನೆ 6,705 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 90 ರೂ ಏರಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 54,360 ರೂ. ನೀಡಬೇಕು. ನಿನ್ನೆ 53,640 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 720 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನಕ್ಕೆ 67,950 ರೂ ಇದೆ. ನಿನ್ನೆ 67,050 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 900 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,79,500 ರೂ. ನೀಡಬೇಕು. ನಿನ್ನೆ 6,70,500 ರೂ. ಇದ್ದು ಈ ದರಕ್ಕೆ…

Read More

ದಕ್ಷಿಣ ಲೆಬನಾನ್ ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಇಬ್ಬರು ಕಮಾಂಡರ್ ಗಳು ಸೇರಿದಂತೆ ಮೂವರು ಹಿಜ್ಬುಲ್ಲಾ ಉಗ್ರರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ  ಮಾಹಿತಿ ನೀಡಿದೆ. ಐಡಿಎಫ್ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, “ರಾಡ್ವಾನ್ ಪಡೆಗಳ ಪಶ್ಚಿಮ ವಲಯದ ರಾಕೆಟ್ ಗಳ ಹಾಗೂ ಕ್ಷಿಪಣಿಗಳ ಘಟಕದ ಕಮಾಂಡರ್ ಮುಹಮ್ಮದ್ ಹುಸೇನ್ ಶಹೌರಿ ದಕ್ಷಿಣ ಲೆಬನಾನ್ನ ಕಫರ್ ಡೌನೈನ್ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.” “ತನ್ನ ಪಾತ್ರದ ಭಾಗವಾಗಿ, ಮುಹಮ್ಮದ್ ಲೆಬನಾನ್ನ ಮಧ್ಯ ಮತ್ತು ಪಶ್ಚಿಮ ಪ್ರದೇಶಗಳಿಂದ ಇಸ್ರೇಲಿ ಭೂಪ್ರದೇಶದ ಕಡೆಗೆ ರಾಕೆಟ್ ಮತ್ತು ಕ್ಷಿಪಣಿ ಉಡಾವಣೆಗಳನ್ನು ಯೋಜಿಸಿದರು ಮತ್ತು ಉತ್ತೇಜಿಸಿದರು” ಎಂದು ಐಡಿಎಫ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಐಡಿಎಫ್ ಪ್ರಕಾರ, ಹಿಜ್ಬುಲ್ಲಾದ ರಾಕೆಟ್ಸ್ ಮತ್ತು ಕ್ಷಿಪಣಿ ಘಟಕದ ಕಾರ್ಯಕರ್ತ ಮಹಮೂದ್ ಇಬ್ರಾಹಿಂ ಫದ್ಲಲ್ಲಾ ಕೂಡ ಅದೇ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮೊದಲು, ಐಡಿಎಫ್ ಪ್ರತ್ಯೇಕ ಹೇಳಿಕೆಯಲ್ಲಿ, “ಲೆಬನಾನ್ನ ಐನ್ ಎಬೆಲ್ ಪ್ರದೇಶದಲ್ಲಿ ಹಿಜ್ಬುಲ್ಲಾದ ಕರಾವಳಿ ವಲಯದ ಕಮಾಂಡರ್ ಇಸ್ಮಾಯಿಲ್ ಯೂಸುಫ್…

Read More

ಖ್ಯಾತ ನಟ ದ್ವಾರಕೀಶ್ ನಿನ್ನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟ ಕಿಚ್ಚ ಶೂಟಿಂಗ್ ಬ್ರೇಕ್ ಹಾಕಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಗಾಗಿ ಚೆನ್ನೈನಲ್ಲಿದ್ದ ಸುದೀಪ್, ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ದ್ವಾರಕೀಶ್ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾರೆ. ದ್ವಾರಕೀಶ್ ಬ್ಯಾನರ್ ನಲ್ಲಿ ಸುದೀಪ್ ಸಿನಿಮಾ ಮಾಡಿದ್ದರು. ವಿಷ್ಣುವರ್ಧನ್ ಹೆಸರಿನ ಈ ಸಿನಿಮಾ ದ್ವಾರಕೀಶ್ ಅವರ ಆರ್ಥಿಕ ಸ್ಥಿತಿಯನ್ನು ಚೇತರಿಕೆ ಕಾಣುವಂತೆ ಮಾಡಿತ್ತು ರವೀಂದ್ರ ಕಲಾಕ್ಷೇತ್ರದಲ್ಲಿ ಸದ್ಯ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಟಿ.ಆರ್ ಮಿಲ್ ರುದ್ರಭೂಮಿಯಲ್ಲಿ ಮಾಡುವುದಾಗಿ ದ್ವಾರಕೀಶ್ ಅವರ ಪುತ್ರ ಯೋಗೀಶ್ ತಿಳಿಸಿದ್ದಾರೆ. ಬ್ರಾಹ್ಮಣರ ವಿಧಿ ವಿಧಾನದ ರೀತಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದ್ದು, ದ್ವಾರಕೀಶ್ ಅವರ ಹಿರಿಯ ಪುತ್ರ ವಿಧಿ ವಿಧಾನಗಳನ್ನು ನೆರವೇರಿಸಲಿದ್ದಾರೆ. ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ…

Read More

ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಎದುರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಲ್ಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮುಂಬೈನ ಬಾಂದ್ರಾ ನಿವಾಸದಲ್ಲಿ ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಿದ ಶಿಂಧೆ ಗುಂಡಿನ ದಾಳಿಯ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಸಲ್ಮಾನ್​ ಖಾನ್​ ತಂದೆ ಸಲೀಂ ಖಾನ್​ ಜೊತೆ ಏಕನಾಥ್​ ಶಿಂಧೆ ಅವರು ಮಾತುಕಥೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಲ್ಮಾನ್ ಖಾನ್ ವಿರೋಧಿಗಳಿಗೆ ಖಡಕ್​ ಎಚ್ಚರಿಗೆ ನೀಡಿದ್ದಾರೆ. ‘ನಾನು ಸಲ್ಮಾನ್​ ಖಾನ್​ ಅವರನ್ನು ಭೇಟಿ ಮಾಡಿದ್ದೇವೆ. ಅವರ ಜೊತೆ ನಮ್ಮ ಸರ್ಕಾರ ಇದೆ ಎಂದು ಭರವಸೆ ನೀಡಿದ್ದೇನೆ. ಈ ಘಟನೆಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿದ್ದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದು ಮಹಾರಾಷ್ಟ್ರ. ಇಲ್ಲಿ ಯಾವುದೇ ಗ್ಯಾಂಗ್​ ಉಳಿದುಕೊಂಡಿಲ್ಲ. ಎಲ್ಲ ಗ್ಯಾಂಗ್​ ಮತ್ತು ಗೂಂಡಾಗಳನ್ನು ಕಿತ್ತು ಹಾಕುತ್ತೇವೆ. ಇಲ್ಲಿ ಯಾವುದೇ…

Read More

ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ತಮ್ಮ 81 ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ದ್ವಾರಕೀಶ್ ಜೊತೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್​ ಕಲಾವಿದರು ಕೆಲಸ ಮಾಡಿದ್ದರು. ಅವರು ನಿರ್ಮಾಣ ಮಾಡಿದ್ದ ‘ಆಪ್ತಮಿತ್ರ’ ಚಿತ್ರದಲ್ಲಿ ರಮೇಶ್​ ಅರವಿಂದ್​ ನಟಿಸಿದ್ದರು. ದ್ವಾರಕೀಶ್​ ಅವರ ಅಗಲಿಕೆಯ ವಿಷಯ ತಿಳಿದು ರಮೇಶ್​ ಮರುಗಿದ್ದಾರೆ. ದ್ವಾರಕೀಶ್​ ಅವರ ವ್ಯಕ್ತಿತ್ವ ಎಂಥದ್ದು ಎಂಬುದನ್ನು ರಮೇಶ್​ ಅರವಿಂದ್ ಮೆಲುಕು ಹಾಕಿದ್ದಾರೆ. ‘ನಾವೆಲ್ಲ ವಿದ್ಯಾರ್ಥಿಗಳಾಗಿದ್ದಾಗ ‘ಕಳ್ಳ ಕುಳ್ಳ’, ‘ಸಿಂಗಾಪುರದಲ್ಲಿ ರಾಜಾ ಕುಳ್ಳ’, ‘ಕಿಟ್ಟು ಪುಟ್ಟು’ ಮುಂತಾದ ಸಿನಿಮಾಗಳನ್ನು ನೋಡಿ ಬಹಳ ಇಷ್ಟ ಆಗಿತ್ತು. ದ್ವಾರಕೀಶ್​ ಅವರ ಮನೆ ನಮ್ಮ ಮನೆ ಬಳಿಯೇ ಇತ್ತು. ಎನ್​.ಆರ್​. ಕಾಲೋನಿಯಲ್ಲಿ ಇರುವ ಅವರ ಮನೆಯ ಸುತ್ತ ನಾವು ಸೈಕಲ್​ನಲ್ಲಿ ರೌಂಡ್​ ಹೊಡೆಯುತ್ತಿದ್ದೆವು. ಇದೇ ದ್ವಾರಕೀಶ್​ ಅವರ ಮನೆ ಎಂದು ಹೇಳಿಕೊಂಡು ಹೋಗುತ್ತಿದ್ದೆವು. ಕೆಲವು ವರ್ಷಗಳ ನಂತರ, ನಾವು ಕಾಲೇಜಿಗೆ ಬಂದಾಗ ಆ ಮನೆಯನ್ನು ದ್ವಾರಕೀಶ್​ ಸರ್​ ಮಾರಿಬಿಟ್ಟಿದ್ದರು ಅಂತ ಕೇಳಿದೆವು. ನಮಗೆ ಆಗ ಅಯ್ಯೋ ಎನಿಸಿತು’…

Read More

ಸ್ಯಾಂಡಲ್‌ವುಡ್ ನಟ ಕಮ್ ನಿರ್ದೇಶಕ ದ್ವಾರಕೀಶ್ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ದ್ವಾರಕೀಶ್ ನೇತ್ರದಾನ ಮಾಡುವ ಮೂಲಕ ಯುವಜನತೆಗೆ ಮಾದರಿಯಾಗಿದ್ದಾರೆ. ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು. ಈಗ ದ್ವಾರಕೀಶ್ ಕೂಡ ತಮ್ಮ ಸಾವಿನ ನಂತರ ನೇತ್ರ ದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾಗಿದ್ದಾರೆ. ದ್ವಾರಕೀಶ್ ಕಣ್ಣನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಿದ್ದಾರೆ. ಕುಟುಂಬದ ಸಮ್ಮತಿಯ ಮೇರೆಗೆ ಡಾ.ಶೈಲಜಾ ನೇತೃತ್ವದಲ್ಲಿ ನೇತ್ರ ಕಸಿ ಕಾರ್ಯ ನಡೆದಿದೆ. ಈ ಬಗ್ಗೆ ವೈದ್ಯೆ ಶೈಲಜಾ ಮಾತನಾಡಿದ್ದಾರೆ.  ದ್ವಾರಕೀಶ್ ಅವರ ಕಣ್ಣನ್ನು ಇಂದು ಪರೀಕ್ಷೆ ಮಾಡಲಾಗುತ್ತದೆ. ಆ ನಂತರ ಇಂದೆ ಇನ್ನೊಬ್ಬರಿಗೆ ಕಣ್ಣು ಹಾಕಲಾಗುತ್ತದೆ.  ಕಣ್ಣು ದಾನದಿಂದ ಸಮಾಜಕ್ಕೆ ಕೊಟ್ಟಿರುವ ಕೊಡುಗೆಯಾಗಿದೆ. ಇದರಿಂದ ಇಬ್ಬರಿಗೆ ಕಣ್ಣು ಬರುತ್ತದೆ ಎಂದು ಡಾ.ಶೈಲಜಾ ಪ್ರತಿಕ್ರಿಯೆ ನೀಡಿದ್ದಾರೆ. ದ್ವಾರಕೀಶ್ ಅವರ ಮರಣದ ನಂತರ ಕುಟುಂಬಸ್ಥರಿಗೆ ಕರೆ ಮಾಡಿದಾಗ 10 ನಿಮಿಷದಲ್ಲಿ ನೇತ್ರದಾನ ಮಾಡಲು ಅನುಮತಿ ನೀಡಿದರು. ಮೃತಪಟ್ಟ 14 ಘಂಟೆಯೊಳಗೆ ಕಣ್ಣು ದಾನ ಮಾಡಬಹುದು. ಸಂಪೂರ್ಣ ಕಣ್ಣುನ್ನು ನಾವು…

Read More

ಸ್ಯಾಂಡಲ್‌ವುಡ್ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಫೆ.16ರಂದು ತಮ್ಮ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಚಿತ್ರರಂಗಕ್ಕೆ ದ್ವಾರಕೀಶ್ ಕೊಡಗೆ ಅಪಾರವಾಗಿದ್ದು, ಅವರ ನಿಧನದಿಂದ ಬೇಸರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ಚಿತ್ರೋದ್ಯಮಕ್ಕೆ ದ್ವಾರಕೀಶ್ ಕೊಡುಗೆ ಅಪಾರವಾಗಿದೆ. ದಶಕಗಳ ಕಾಲ ಮರೆಯಲಾಗದ ಸಿನಿಮಾಗಳು ಮತ್ತು ನಟನೆಯ ಮೂಲಕ ತಲುಪಿದ್ದಾರೆ. ಪ್ರೇಕ್ಷಕರನ್ನು ರಂಜಿಸಿ, ಹೊಸಬರನ್ನು ಬೆಂಬಲಿಸುವುದರ ಜೊತೆಗೆ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಪಾತ್ರ ಕೂಡ ದೊಡ್ಡದು ಎಂದಿದ್ದಾರೆ. ಅವರ ನಿಧನದಿಂದ ದುಃಖವಾಗಿದೆ. ಅವರನ್ನು ಸದಾ ಸ್ಮರಿಸುತ್ತೇವೆ. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮೋದಿ ಬರೆದುಕೊಂಡಿದ್ದಾರೆ. ಹಿರಿಯ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದರ. ನಂತರ ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.

Read More