Author: Author AIN

ಅಗಲಿದ ಹಿರಿಯ ನಟ ದ್ವಾರಕೀಶ್ ಅವರಿಗೆ ಇಬ್ಬರು ಪತ್ನಿಯರು. ಇದನ್ನು ಸ್ವತಃ ನಟ ದ್ವಾರಕೀಶ್ ಬಹಿರಂಗ ಪಡಿಸಿದ್ದರು. ಮೊದಲು ಕೈ ಹಿಡಿದಿದ್ದು ಅಂಬುಜಾ ಅವರನ್ನು ಬಳಿಕ ಮದುವೆಯಾಗಿದ್ದು ಶೈಲಜಾ ಅವರನ್ನು. ಎರಡನೇ ಮದುವೆ ಆದಾಗ ದ್ವಾರಕೀಶ್ ಅವರಿಗೆ 51 ವರ್ಷ. ಈ ಸಮಯದಲ್ಲಿ ದ್ವಾರಕೀಶ್ ಗೌರಿ ಕಲ್ಯಾಣ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದರು. ಇವರದ್ದೇ ಬ್ಯಾನರ್ ನಲ್ಲಿ ಮೂಡಿ ಬಂದಿದ್ದ ಶ್ರುತಿ ಸಿನಿಮಾ ಸೂಪರ್ ಹಿಟ್ ಆಗಿತ್ತು. ದ್ವಾರಕೀಶ್ ಅವರ ನಿರ್ಮಾಣದಲ್ಲಿ ಮತ್ತೊಂದು ಸಿನಿಮಾ ಬರುತ್ತಿದೆ ಎಂದಾಗ, ಆ ಸಿನಿಮಾದಲ್ಲಿ ತನ್ನ ತಂಗಿಗೆ ಅವಕಾಶ ಕೇಳಲು ಬಂದವರು ಈ ಶೈಲಜಾ. ಈ ಭೇಟಿಯೇ ಮುಂದೆ ಪ್ರೀತಿಯಾಗಿ, ಮದುವೆಯೂ ಆಯಿತು. ಪ್ರತಿಷ್ಠಿಯ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಶೈಲಜಾ, ತಂಗಿಗಾಗಿ ಪಾತ್ರ ಕೇಳಲು ಬಂದವರು ಬಳಿಕ ದ್ವಾರಕೀಶ್ ಪ್ರೀತಿಗೆ ಮನಸೋತು ಎರಡನೇ ಮದುವೆ ಅಂತ ಗೊತ್ತಿದ್ದರೂ ಗ್ರೀನ್ ಸಿಗ್ನಲ್ ನೀಡಿದರು. ಶೈಲಜಾ ಹಾಗೂ ದ್ವಾರಕೀಶ್ ಇಷ್ಟ ಪಡುತ್ತಿರುವ ಮತ್ತು ದ್ವಾರಕೀಶ್ ಮತ್ತೊಂದು ಮದುವೆ ಆಗುವ…

Read More

ಸ್ಯಾಂಡಲ್‌ವುಡ್ ನ ಹಿರಿಯ ನಟ ದ್ವಾರಕೀಶ್ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಫೆ.15ರಂದು ದ್ವಾರಕೀಶ್ ಸ್ವಗ್ರಹದಲ್ಲಿ ನಿಧನರಾಗಿದ್ದು ದ್ವಾರಕೀಶ್ ಅಗಲಿಕೆಯಿಂದ ಶಾಕ್ ಆಗಿದೆ ಎಂದು ಪತ್ನಿ ಶೈಲಜಾ ಹೇಳಿದ್ದಾರೆ. ದ್ವಾರಕೀಶ್ ಅವರನ್ನು ನಮ್ಮ ಕುಟುಂಬದವರು ತುಂಬಾ ಮಿಸ್ ಮಾಡಿಕೊಳ್ತಿದ್ದೀವಿ. ಯುಗಾದಿ ಹಬ್ಬಕ್ಕೆ ಊರಿಗೆ ಹೋಗ್ತಿದ್ದೆ, ಆದರೆ ಅವರಿಗೆ ಕಳುಹಿಸೋಕೆ ಮನಸ್ಸು ಇರಲಿಲ್ಲ. ಅಂದು ಸುಮಾರು ವರ್ಷಗಳಿಂದ ಅವರು ಮಾತಾಡದೇ ಇರುವ ಮಾತುಗಳನ್ನಾಡಿದ್ದರು. ಅದೇ ನನಗೆ ಇವತ್ತು ಶಾಕ್ ಆಗ್ತಿದೆ. ನನ್ನನ್ನು ಪ್ರೀತಿಯಿಂದ ಪುಟ್ಟ ಅಂತ ಕರೆಯುತ್ತಿದ್ದರು ಎಂದು ಶೈಲಜಾ ಭಾವುಕರಾಗಿ ನುಡಿದಿದ್ದಾರೆ. ಅಂಬುಜಾ ಅಕ್ಕ ಮತ್ತು ಅವರ ಮಕ್ಕಳು ನನ್ನ ಯಾವತ್ತೂ ಬೇರೆಯವರ ಥರ ನೋಡ್ಲಿಲ್ಲ. ಅವರಿಗೆ ನಾನು ಚಿರಋಣಿ. ಪ್ರತಿದಿನ ಬೆಳಗ್ಗೆ 11 ಗಂಟೆಗೆ ಏಳ್ತಿದ್ದವ್ರು ನಿನ್ನೆ 7 ಗಂಟೆಗೆ ಎದ್ದಿದ್ದೇ ಸೋಜಿಗ. ಅವರನ್ನು ತುಂಬಾ ಮಿಸ್ ಮಾಡಿಕೊಳ್ತಿನಿ ಎಂದು ಪತ್ನಿ ಶೈಲಜಾ ಭಾವುಕರಾಗಿದ್ದಾರೆ. ಇಂದು ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ…

Read More

ಸ್ಯಾಂಡಲ್ ವುಡ್ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಇಂದು ಕೊನೆಯುಸಿರೆಳೆದಿದ್ದಾರೆ. ದ್ವಾರಕೀಶ್ ಅವರನ್ನು ಕಳೆದುಕೊಂಡಿದ್ದು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಆಗಿದೆ. ರಾಜ್​ಕುಮಾರ್, ವಿಷ್ಣುವರ್ಧನ್ ಸೇರಿ ಹಲವು ಕಲಾವಿದರ ಜೊತೆ ದ್ವಾರಕೀಶ್ ನಟಿಸಿ ಖ್ಯಾತಿ ಘಳಿಸಿದ್ದರು. ನಟ ಸಾಹಸಸಿಂಹ ವಿಷ್ಣುವರ್ಧನ್ ಅವರ ಜೊತೆ ದ್ವಾರಕೀಶ್ ಅವರಿಗೆ ಉತ್ತಮ ಬಾಂಧವ್ಯ ಇತ್ತು. ಆದರೆ, ನಂತರ ಇಬ್ಬರೂ ಬೇರೆ ಆಗುವಂತಾಯಿತು. 1975ರಲ್ಲಿ ರಿಲೀಸ್ ಆದ ‘ಕಳ್ಳ ಕುಳ್ಳ’ ಸಿನಿಮಾದಲ್ಲಿ ದ್ವಾರಕೀಶ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ನಟಿಸಿದರು. ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆಯಲು ಈ ಸಿನಿಮಾ ಸಹಕಾರಿ ಆಯಿತು. 1977ರ ‘ಕಿಟ್ಟು ಪುಟ್ಟು’, ‘ಸಿಂಗಾಪುರದಲ್ಲಿ ರಾಜ ಕುಳ್ಳ’, ‘ಗುರು ಶಿಷ್ಯರು’, ‘ಪ್ರಚಂಡ ಕುಳ್ಳ’, ‘ಆಪ್ತಮಿತ್ರರು’ ಸಿನಿಮಾಗಳಲ್ಲಿ ವಿಷ್ಣು, ದ್ವಾರಕೀಶ್ ಒಟ್ಟಾಗಿ ನಟಿಸಿದ್ದರು. ಈ ಪೈಕಿ ಕೆಲವು ಸಿನಿಮಾಗಳನ್ನು ದ್ವಾರಕೀಶ್ ಅವರೇ ನಿರ್ಮಾಣ ಮಾಡಿದ್ದರು. ದ್ವಾರಕೀಶ್ ಮಾಡಿದ 50 ಚಿತ್ರಗಳಲ್ಲಿ 19 ಸಿನಿಮಾಗಳಲ್ಲಿ ವಿಷ್ಣುವರ್ಧನ್ ನಟಿಸಿದ್ದರು. ‘ರಾಯರು ಬಂದರು ಮಾವನ ಮನೆಗೆ’ ಸಿನಿಮಾ ಮಾಡಲು ವಿಷ್ಣುವರ್ಧನ್ ಡೇಟ್ಸ್​​​ಗಾಗಿ ನಾಲ್ಕು…

Read More

ಅಮೆರಿಕದಲ್ಲಿ ಹಿಂದೂಗಳು ಮತ್ತು ಹಿಂದೂ ಧರ್ಮದ ವಿರುದ್ಧದ ದಾಳಿಗಳು ಗಣನೀಯವಾಗಿ ಹೆಚ್ಚಾಗುತ್ತಿವೆ ಎಂದು ಭಾರತೀಯ ಅಮೆರಿಕನ್​ ಸೆನೆಟರ್​ಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕನ್​ ಸೆನೆಟರ್ ಥಾನೇದಾರ್, ಈ ನಡುವೆ ಅಮೆರಿಕದಲ್ಲಿ ಹಿಂದೂ ಧರ್ಮದವರ ಮೇಲೆ ಗಣನೀಯ ಪ್ರಮಾಣದಲ್ಲಿ ದಾಳಿಗಳು ನಡೆಯುತ್ತಿರುವುದನ್ನು ನೋಡಿದರೆ ಇದು ಸಂಘಟಿತ ಹಿಂದೂ ವಿರೋಧಿ ದಾಳಿಯಾಗಿದೆ ಎಂದು ಶಂಕೆ ವ್ಯಕ್ತವಾಗುತ್ತಿದೆ. ಹಿಂದೂಗಳ ವಿರುದ್ಧ ಆನ್‌ಲೈನ್ ಸೇರಿದಂತೆ ಮತ್ತಿತರೆಡೆ ತಪ್ಪು ಮಾಹಿತಿ ಪ್ರಸಾರ ಮಾಡಲಾಗುತ್ತಿದೆ ಎಂದು ಹೇಳಿದರು. ಥಾನೇದಾರ್ ಸೇರಿದಂತೆ ಇತರ ನಾಲ್ವರು ಭಾರತೀಯ ಅಮೆರಿಕನ್ ಸೆನೆಟರ್‌ಗಳಾದ ರೋ ಖನ್ನಾ, ರಾಜಾ ಕೃಷ್ಣಮೂರ್ತಿ, ಅಮಿ ಬೇರಾ ಮತ್ತು ಪ್ರಮೀಳಾ ಜಯಪಾಲ್ ಇತ್ತೀಚೆಗೆ ಹಿಂದೂ ದೇವಾಲಯಗಳು ಮತ್ತು ಪೂಜಾ ಸ್ಥಳಗಳ ಮೇಲಿನ ದಾಳಿಗಳ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಂಗ ಇಲಾಖೆಗೆ ಪತ್ರ ಬರೆದಿದ್ದಾರೆ. ದಾಳಿ ನಡೆಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಯಾರನ್ನೂ ಬಂಧಿಸಿಲ್ಲ. ಇದು ಮುಂದಿನ ದಿನಗಳಲ್ಲಿ ದಾಳಿ ಹೆಚ್ಚಾಗಲು ಕಾರಣವಾಗುತ್ತದೆ. ಸಮುದಾಯದ ವಿರುದ್ಧ…

Read More

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ, ನಿರ್ಮಾಪಕ ಹಾಗೂ ನಿರ್ದೇಶಕ ದ್ವಾರಕೀಶ್ ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ನಾಳೆ ಬೆಳಗ್ಗೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ದ್ವಾರಕೀಶ್ ನಿಧನದ ಹಿನ್ನಲೆಯಲ್ಲಿ ನಾಳೆ ಒಂದು ದಿನ ಕನ್ನಡ ಚಿತ್ರರಂಗದ ಎಲ್ಲಾ ಕಾರ್ಯವನ್ನು ಬಂದ್ ಮಾಡಿ, ಸಂತಾಪ ಸೂಚಿಸೋ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಫಿಲ್ಮಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್, ದ್ವಾರಕೀಶ್ ಚಿತ್ರರಂಗದ ದೊಡ್ಡ ಆಸ್ತಿ. ಅವರ ಅಗಲಿಕೆ ಎಲ್ಲರಿಗೂ ತುಂಬಾ ನೋವಾಗಿದೆ. ಅವರು ಕೇವಲ ನಟರಲ್ಲ ನಿರ್ದೇಶಕ, ನಿರ್ಮಾಪಕ ಕೂಡ ಹೌದು. ಹಾಗಾಗಿ ನಾಳೆ ಚಿತ್ರರಂಗ ಬಂದ್ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಸ್ವಯಂಪ್ರೇರಿತವಾಗಿ ಬಂದ್ ಮಾಡಬೇಕು ಅಂತ ಕೇಳಿಕೊಳ್ತೀನಿ ಎಂದಿದ್ದಾರೆ. ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ಬಗ್ಗೆ ಸರ್ಕಾರದ ಜೊತೆ ಮಾತನಾಡ್ತಿದ್ದೇವೆ. ಅವರನ್ನು ಗೌರವಪೂರ್ವಕವಾಗಿ ಕಳುಹಿಸಿಕೊಡಬೇಕಿದೆ. ಆ ಕೆಲವನ್ನು ಸರ್ಕಾರ ಮಾಡೋ ನಿರೀಕ್ಷೆಯಿದೆ…

Read More

ಇಂದು ಬೆಳಗ್ಗೆ ಸ್ಯಾಂಡಲ್ ವುಡ್ ಸಿನಿಮಾ ರಂಗದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನರಾಗಿದ್ದಾರೆ. ಕಾಕತಾಳೀಯ ಎಂಬಂತೆ ಪತ್ನಿ ನಿಧನರಾದ ದಿನವೇ ದ್ವಾರಕೀಶ್ ಕೂಡ ಕೊನೆಯುಸಿರು ಎಳೆದಿದ್ದಾರೆ. ದ್ವಾರಕೀಶ್ ಪತ್ನಿ ಅಂಬುಜಾ 16 ಜುಲೈ 2021ರಂದು ನಿಧನರಾಗಿದ್ದರು. ದ್ವಾರಕೀಶ್ ಕೂಡ ಇದೇ ದಿನ ಮೃತಪಟ್ಟಿದ್ದಾರೆ. ಮುಂಜಾನೆ 9.45ಕ್ಕೆ ಅಂಬುಜಾ ಅವರು ಪ್ರಾಣಬಿಟ್ಟಿದ್ದರೆ, ದ್ವಾರಕೀಶ್ ಕೂಡ ಅದೇ ಹೊತ್ತಿಗೆ ಉಸಿರು ನಿಲ್ಲಿಸಿದ್ದರು ಎಂದು ಅವರ ಪುತ್ರ ಯೋಗೀಶ್ ತಿಳಿಸಿದ್ದಾರೆ. ಮೊದಲ ಪತ್ನಿ ಅಂಬುಜಾ ಅವರು ದ್ವಾರಕೀಶ್ ದೂರದ ಸಂಬಂಧಿ. ಚಿತ್ರದುರ್ಗ ಅವರ ಊರಾಗಿತ್ತು. ಅಂಬುಜನಾ ಪ್ರೀತಿಸುತ್ತಿದ್ದರು ದ್ವಾರಕೀಶ್. ಇದನ್ನು ಪತ್ರದ ಮೂಲಕ ಹೇಳಿಕೊಂಡಿದ್ದರು. ದ್ವಾರಕೀಶ್ ಪ್ರೀತಿಯನ್ನು ಅವರು ಒಪ್ಪಿದ್ದರು. ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಅಂಬುಜಾ ಬಳಿ ಹೇಳಿಕೊಂಡಿದ್ದರು ದ್ವಾರಕೀಶ್. ಇದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದರು ಅಂಬುಜಾ. ಮದುವೆ ಆದ ಬಳಿಕ ದ್ವಾರಕೀಶ್ ಅವರ ಸಣ್ಣ ಸಣ್ಣ ಆಸೆಯನ್ನೂ ಅಂಬುಜಾ ಈಡೇರಿಸುತ್ತಿದ್ದರಂತೆ. ದಯಾನಂದ ಕಾಲೇಜಿನಲ್ಲಿ ಅಂಬುಜಾ ಪ್ರೊಫೆಸರ್ ಆಗಿದ್ದರು. 62 ವರ್ಷ ಒಟ್ಟಿಗೆ ಸಂಸಾರ…

Read More

ಇಂದು ಮೃತಪಟ್ಟ ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ದ್ವಾರಕೀಶ್ ಚಿತ್ರರಂಗದ ದೊಡ್ಡ ಆಸ್ತಿ. ಅವರ ಅಗಲಿಕೆ ಎಲ್ಲರಿಗೂ ತುಂಬಾ ನೋವಾಗಿದೆ. ಅವರು ಕೇವಲ ನಟರಲ್ಲ ನಿರ್ದೇಶಕ, ನಿರ್ಮಾಪಕ ಕೂಡ ಹೌದು. ಹಾಗಾಗಿ ನಾಳೆ ಚಿತ್ರರಂಗ ಬಂದ್ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಸ್ವಯಂಪ್ರೇರಿತವಾಗಿ ಬಂದ್ ಮಾಡಬೇಕು ಅಂತ ಕೇಳಿಕೊಳ್ತೀನಿ. ಅವರು ಎಲ್ಲರಿಗೂ ದೊಡ್ಡ ಆಸ್ತಿ. ಅಂತ್ಯಕ್ರಿಯೆ ಬಗ್ಗೆ ಸರ್ಕಾರದ ಜೊತೆ ಮಾತಾಡ್ತಿದ್ದೇವೆ ಎಂದಿದ್ದಾರೆ. ದ್ವಾರಕೀಶ್ ಮತ್ತು ರಜನಿಕಾಂತ್ ಬಹುಕಾಲದ ಗೆಳೆಯರು. ದ್ವಾರಕೀಶ್ ಹೇಳಿದವರಿಗೆ ರಜನಿಕಾಂತ್ ಕಾಲ್ ಶೀಟ್ ಕೊಡುತ್ತಿದ್ದರು ಎಂದು ಸ್ವತಃ ದ್ವಾರಕೀಶ್ ಅವರೇ ಹೇಳಿದ್ದಾರೆ. ಅಡ್ಡ…

Read More

ಏ. 13ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಶಾಪಿಂಗ್ ಮಾಲ್​ವೊಂದರಲ್ಲಿ ವ್ಯಕ್ತಿಯೋರ್ವ ಐವರು ಮಹಿಳೆಯರು ಸೇರಿದಂತೆ ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಹತ್ಯೆ ನಡೆಸಿದ ಆರೋಪಿಯು 40 ವರ್ಷದ ಜೋಯಲ್ ಕೌಚಿಯಾಗಿದ್ದು ಹಲ್ಲೆ ನಡೆಸಿದ ದಿನವೇ ವೆಸ್ಟ್​ಫೀಲ್ಡ್ ಬಾಂಡಿ ಜಂಕ್ಷನ್ ಮಾಲ್​ನಲ್ಲಿ ಈತನನ್ನು ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ. ಮೃತರದಲ್ಲಿ ಆರು ಜನರಲ್ಲಿ ಐವರು ಮಹಿಳೆಯರೇ ಆಗಿದ್ದಾರೆ. ಗಾಯಗೊಂಡವರೆಲ್ಲರೂ ಮಹಿಳೆಯರೇ ಆಗಿದ್ದಾರೆ. ಮೇಲ್ನೋಟಕ್ಕೆ ನೋಡಿದರೂ ಈತನ ಟಾರ್ಗೆಟ್ ಮಹಿಳೆಯರೇ ಆಗಿದ್ದಾರೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಸಿಸಿಟಿವಿ ಫೂಟೇಜ್​ನಲ್ಲಿ ಕಂಡಿರುವ ದೃಶ್ಯದ ಪ್ರಕಾರ ಜೋಯಲ್ ಕೌಚಿ ಮಹಿಳೆಯರನ್ನು ನೋಡಿ ನೋಡಿಯೇ ಹಲ್ಲೆ ಮಾಡಿದಂತಿದೆ. ಅಪರಾಧಿಯು ಪುರುಷರನ್ನು ಬಿಟ್ಟು ಮಹಿಳೆಯರನ್ನೇ ಗುರಿ ಮಾಡಿದ್ದು ಸ್ಪಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮ್ಮ ಮಗನಿಗೆ ಒಬ್ಬ ಗರ್ಲ್ ಫ್ರೆಂಡ್ ಕೂಡ ಸಿಕ್ಕಿಲ್ಲ. ಈ ಹತಾಶೆಯಲ್ಲಿದ್ದ ಈತನಿಗೆ ಸಿಜೋಫ್ರೆನಿಯಾ ರೋಗ ಇತ್ತು. ಅವನಿಗೆ ಗರ್ಲ್​ಫ್ರೆಂಡ್ ಬೇಕಿತ್ತು. ಆದರೆ ಸೋಷಿಯಲ್ ಸ್ಕಿಲ್ ಇರಲಿಲ್ಲ. ಇದರಿಂದ ಹುಚ್ಚನಂತಾಗಿದ್ದ. ಅವ ನನ್ನ ಮಗ. ನಿಮಗೆ ಆತ…

Read More

ಸರ್ಕಾರವು ಬಡ ಹಾಗೂ ಮದ್ಯಮ ವರ್ಗದವರಿಗೆ ಅನೇಕ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಅದರಲ್ಲೂ ಆರೋಗ್ಯದ ಕುರಿತಾದ ಯೋಜನೆಗಳಿಂದ ಸಾಕಷ್ಟು ಮಂದಿ ಪ್ರಯೋಜನೆ ಪಡೆಯುತ್ತಿದ್ದಾರೆ. ಅದರಲ್ಲೂ ಆಯುಷ್ಮಾನ್ ಕಾರ್ಡ್ ಅನೇಕರ ಬಾಳಿಗೆ ಸಂಜೀವಿನಿಯಾಗಿದೆ. ನೀವು ಕೂಡ ಆಯುಷ್ಮಾನ್ ಕಾರ್ಡ್ ಪಡೆಯಬೇಕು ಅಂದರೆ ಈಗಲೇ ಅರ್ಜಿ ಸಲ್ಲಿಸಿ. ಅರ್ಹರು ಅರ್ಜಿ ಸಲ್ಲಿಸಲು ತಮ್ಮ ಹತ್ತಿರದ ಸಾರ್ವಜನಿಕ ಸೇವಾ ಕೇಂದ್ರಕ್ಕೆ ಭೇಟಿ ನೀಡಬಹುದು ಇಲ್ಲಿಗೆ ಹೋಗುವ ಮೂಲಕ, ನಿಮ್ಮ ಅರ್ಹತೆಯನ್ನು ಪರಿಶೀಲಿಸಲಾಗುತ್ತದೆ ಮತ್ತು ನಿಮಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ ನಂತರ ಪರೀಕ್ಷೆಯು ಸರಿಯಾಗಿದೆ ಎಂದು ಕಂಡುಬಂದಾಗ, ಅರ್ಜಿಯನ್ನು ನೀಡಲಾಗುತ್ತಿದೆ. ಈ ಕಾರ್ಡ್ ಮೂಲಕ ಆಯುಷ್ಮಾನ್ ಯೋಜನೆಯಡಿ ನೋಂದಾಯಿತ ಆಸ್ಪತ್ರೆಯಲ್ಲಿ ಐದು ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಆಯುಷ್ಮಾನ್ ಕಾರ್ಡ್ ಪಡೆಯಲು ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುವವರು, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವವರು, ನಿರ್ಗತಿಕರು ಅಥವಾ ಬುಡಕಟ್ಟು ಜನರು, ಪರಿಶಿಷ್ಟ ಜಾತಿ ಅಥವಾ ಪಂಗಡಗಳಿಗೆ ಸೇರಿದ ಜನರು ಬಿಪಿಎಲ್ ಕಾರ್ಡ್ ಹೊಂದಿರುವವರು…

Read More

ಕನ್ನಡದ ಖ್ಯಾತ ನಟ ದ್ವಾರಕೀಶ್ ನಿಧನಕ್ಕೆ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಕಂಬನಿ ಮಿಡಿದ್ದಾರೆ. ಹಿರಿಯ ನಟಿ ಬಿ.ಸರೋಜಾದೇವಿ, ಭವ್ಯ, ಜಯಮಾಲಾ, ನಿರ್ದೇಶಕ ಭಾರ್ಗವ, ನಟ ದೊಡ್ಡಣ್ಣ, ರಮೇಶ್ ಅರವಿಂದ್, ಶಿವರಾಜ್ ಕುಮಾರ್ ಸೇರಿದಂತೆ ಹಲವರು ಅಗಲಿದ ಹಿರಿಯ ನಟನಿಗೆ ಸಂತಾಪ ಸೂಚಿಸಿದ್ದಾರೆ. ನಟ ದರ್ಶನ್, ಶರಣ್, ನೀನಾಸಂ ಸತೀಶ್, ನಿರ್ದೇಶಕ ಆರ್. ಚಂದ್ರು ಸೇರಿದಂತೆ ಹಲವು ಗಣ್ಯರು ಸೋಷಿಯಲ್ ಮೀಡಿಯಾದ ಮೂಲಕ ತಮ್ಮ ಸಂತಾಪವನ್ನೂ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ ‘ಪ್ರಚಂಡ ಕುಳ್ಳ’ನಾಗಿ 5 ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ  ಎಂದು ನಟ ದರ್ಶನ್ ಬರೆದುಕೊಂಡಿದ್ದಾರೆ. ನಮ್ಮ ಕನ್ನಡ ಚಿತ್ರರಂಗದ ಹಿರಿಯರನ್ನು ಕಳೆದುಕೊಂಡ ಅನಾಥ ಭಾವನೆ ಕಾಡುತ್ತಿದೆ. ದ್ವಾರಕೀಶ್ ರವರ ಸಾಧನೆಗಳ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ.…

Read More