Author: Author AIN

ಯುದ್ಧ ಪೀಡಿತ ಗಾಜಾಗೆ ಜೀವರಕ್ಷಕ ನೆರವು ಹರಿದು ಬರಬೇಕಾದ ಸಮಯ ಇದು. ಅಲ್ಲಿಯವರ ಹಸಿವು ನೈತಿಕ ಅಕ್ರೋಶ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್‌ ಹೇಳಿದ್ದಾರೆ. ಅಲ್ಲದೆ ತಕ್ಷಣವೇ ಯುದ್ಧ ನಿಲ್ಲಿಸಬೇಕು ಎಂದು ಇಸ್ರೇಲ್ ಹಾಗೂ ಹಮಾಸ್ ಜೊತೆ ಅವರು ಮನವಿ ಮಾಡಿದ್ದಾರೆ. ರಫಾ ನಗರದ ಸಮೀಪ ಇರುವ ಗಾಜಾದ ಈಜಿಪ್ಟ್ ಭಾಗದ ಗಡಿಯಲ್ಲಿ ಪ್ರತಿಕ್ರಿಯಿಸಿದ ಅವರು, ಹೆಚ್ಚಿನ ಆಕ್ರಮಣವು ಪರಿಸ್ಥಿತಿಯನ್ನು ಮತ್ತಷ್ಟು ಕಠಿಣಗೊಳಿಸಲಿವೆ. ಪಾಲೆಸ್ಟೀನಿಯನ್ನರಿಗೆ ಹಾಗೂ ಒತ್ತೆಯಾಳುಗಳಿಗೆ ಮತ್ತಷ್ಟು ಸಂಕಷ್ಟ ಉಂಟುಮಾಡಲಿವೆ ಎಂದಿದ್ದಾರೆ. ಗಾಜಾಗೆ ನೆರವು ಸಾಗಿಸುವುದಕ್ಕೆ ಉಂಟಾಗಿರುವ ತೊಂದರೆಗಳ ಬಗ್ಗೆ ಅವರು ಪದೇ ಪದೇ ಪ್ರಸ್ತಾಪಿಸಿದರು.’ಈ ಗಡಿ ಭಾಗದಿಂದ ಹೃದಯ ವಿದ್ರಾವಕ ಹಾಗೂ ಹೃದಯ ಶೂನ್ಯ ಪರಿಸ್ಥಿತಿಗಳನ್ನು ನಾವು ನೋಡಬಹುದು. ‍‍ಪರಿಹಾರ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳ ಉದ್ದದ ಸರತಿ ಸಾಲು ಒಂದು ಕಡೆಯಾದರೆ, ಇನ್ನೊಂದು ಬದಿಯಲ್ಲಿ ಹಸಿವಿನ ಕರಾಳತೆ ಕಾಣಿಸುತ್ತದೆ’ ಎಂದರು. ಗಾಜಾಗೆ ಮಾನವೀಯ ನೆರವು ಸಿಗುವಂತೆ, ಸಹಾನುಭೂತಿಯ ರಂಜಾನ್ ಮನೋಭಾವದಲ್ಲಿ ಇಸ್ರೇಲ್ ಗಟ್ಟಿ ನಿರ್ಧಾರ ತೆಗೆದುಕೊಳ್ಳುವ…

Read More

ಆಗ್ನೇಯ ಬ್ರೆಜಿಲ್ ನಲ್ಲಿ ಸಂಭವಿಸಿದ ಭೀಕರ ಚಂಡಮಾರುತದ ಪರಿಣಾಮ 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ರಾಜಧಾನಿಯಿಂದ 70 ಕಿಲೋಮೀಟರ್ (45 ಮೈಲಿ) ಒಳನಾಡಿನ ಪೆಟ್ರೋಪೊಲಿಸ್ ನಗರದಲ್ಲಿ ಚಂಡಮಾರುತದಿಂದಾಗಿ ಮನೆ ಕುಸಿದಿದ್ದು, ನಾಲ್ವರು ಮತಪಟ್ಟಿದ್ದಾರೆ ಎಂದು ರಿಯೊ ರಾಜ್ಯ ಸರ್ಕಾರ ತಿಳಿಸಿದೆ. 16 ಗಂಟೆಗಳಿಗೂ ಹೆಚ್ಚು ಕಾಲ ಅವಶೇಷಗಳಡಿ ಹೂತುಹೋಗಿದ್ದ ಬಾಲಕಿಯನ್ನು ಎಎಫ್ಪಿ ತಂಡ ರಕ್ಷಿಸಿದೆ. ಸಾಂತಾ ಕ್ರೂಜ್ ಡಾ ಸೆರ್ರಾದಲ್ಲಿ ಈ ಹಿಂದೆ ಟ್ರಕ್ ನದಿಗೆ ಬಿದ್ದಾಗ ವ್ಯಕ್ತಿಯೊಬ್ಬರು ಮುಳುಗಿ ಸಾವನ್ನಪ್ಪಿದ್ದರು. ಟೆರೆಸೊಪೊಲಿಸ್ನಲ್ಲಿ, ಮನೆ ಕುಸಿತದಲ್ಲಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ ಅರೈಯಲ್ ಡೊ ಕ್ಯಾಬೊದಲ್ಲಿ, ಅಲ್ಲಿ ಒಬ್ಬ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ತೀವ್ರ ಮಳೆ ಮತ್ತು ಕ್ವಿಟಾಂಡಿನ್ಹಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪೆಟ್ರೋ ಪೊಲಿಸ್ ನಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ರಿಯೊ ಗವರ್ನರ್ ಕ್ಲಾಡಿಯೊ ಕ್ಯಾಸ್ಟ್ರೊ ತಿಳಿಸಿದ್ದಾರೆ.

Read More

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಕ್ರೇನ್ ಭಾನುವಾರ ರೆಡ್ ಅಲರ್ಟ್ ಘೋಷಿಸಿದೆ. ದಾಳಿಯ ಮೊದಲು ಉಕ್ರೇನ್ ನ ಹಲವಾರು ಭಾಗಗಳಿಗೆ ವಾಯು ದಾಳಿಯ ಎಚ್ಚರಿಕೆಯನ್ನು ಘೋಷಿಸಲಾಯಿತು. ಉಕ್ರೇನ್ ಅಲಾರಂ ನಕ್ಷೆಯು ಪ್ರಸ್ತುತ ದೇಶದ ಎಲ್ಲಾ ಭಾಗಗಳನ್ನು ರೆಡ್ ಅಲರ್ಟ್ ಅಡಿಯಲ್ಲಿ ತೋರಿಸುತ್ತದೆ. ಕ್ರಿಮಿಯಾದ ಸೆವಾಸ್ಟೋಪೋಲ್ ನಗರದ ಕಡೆಗೆ ಉಕ್ರೇನ್ ಹಾರಿಸಿದ ಕ್ಷಿಪಣಿಗಳ ಚಂಡಮಾರುತವನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾ ಹೇಳಿಕೆಯಲ್ಲಿ ತಿಳಿಸಿದೆ. ಕ್ಷಿಪಣಿ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ನಗರದ ಗವರ್ನರ್ ಮಿಖಾಯಿಲ್ ರಜ್ವೊಝಾಯೆವ್ ತಿಳಿಸಿದ್ದಾರೆ. “ಆರಂಭಿಕ ಮಾಹಿತಿಯ ಪ್ರಕಾರ, 10 ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ” ಎಂದು ರಜ್ವೊಝಾಯೆವ್ ಟೆಲಿಗ್ರಾಮ್ನಲ್ಲಿ ತಿಳಿಸಿದ್ದಾರೆ. ಈ ವಾರದ ಆರಂಭದಲ್ಲಿ, ರಷ್ಯಾ ಉಕ್ರೇನ್ ನ ಇಂಧನ ಮೂಲಸೌಕರ್ಯದ ಮೇಲೆ ಬೃಹತ್ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಪ್ರಾರಂಭಿಸಿತು, ಇದು ಕನಿಷ್ಠ ಐದು ಜನರನ್ನು ಕೊಂದಿತು ಮತ್ತು ಒಂದು ದಶಲಕ್ಷಕ್ಕೂ ಹೆಚ್ಚು ಜನರನ್ನು ವಿದ್ಯುತ್ ಇಲ್ಲದೆ ಮಾಡಿತು. ವೈಮಾನಿಕ ದಾಳಿಯಲ್ಲಿ 60 ಕ್ಕೂ…

Read More

ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸೀತಾ ರಾಮ ಧಾರವಾಹಿ ಅಭಿಮಾನಿಗಳ ಮನ ಗೆದ್ದಿದ್ದ. ಧಾರವಾಹಿ ಶುರುವಾದ ಆರಂಭದಲ್ಲೇ ರೇಟಿಂಗ್ ನಲ್ಲಿ ಮೊದಲ ಸ್ಥಾನದಲ್ಲಿದ್ದ ಸೀತಾ ರಾಮ ಇದೀಗ ಹಿಂದಿಗೂ ರಿಮೇಲ್ ಆಗುತ್ತಿದೆ. ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದೀಗ ಈ ಧಾರಾವಾಹಿ ಹಿಂದಿಗೆ ರಿಮೇಕ್ ಆಗುತ್ತಿದ್ದು ಪ್ರೋಮೊ ವೈರಲ್ ಆಗಿದೆ.  ಹಿಂದಿ ಧಾರವಾಹಿಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ‘ಸೀತಾ ರಾಮ’ ಧಾರಾವಾಹಿ ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿದೆ. ಜೀ ಮರಾಠಿಯಲ್ಲಿ 2021 ಆಗಸ್ಟ್​ ತಿಂಗಳಿಂದ 2023 ಜನವರಿವರೆಗೆ ಈ ಧಾರಾವಾಹಿ ಪ್ರಸಾರ ಕಂಡಿತ್ತು. ಈ ಧಾರಾವಾಹಿ ಒಟ್ಟೂ 458 ಎಪಿಸೋಡ್​ಗಳನ್ನು ಹೊಂದಿತ್ತು. ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಧಾರಾವಾಹಿಯನ್ನು ಕನ್ನಡಕ್ಕೆ ‘ಸೀತಾ ರಾಮ’ ಹೆಸರಲ್ಲಿ ರಿಮೇಕ್…

Read More

ವರನಟ ಡಾ.ರಾಜ್ ಕುಮಾರ್ ಮೊಮ್ಮಗ, ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ನಟನೆಯ ಯುವ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬೇರೊಂದು ಸಿನಿಮಾ ಮೂಲಕ ಲಾಂಚ್ ಆಗಬೇಕಿದ್ದ ಯುವ ರಾಜ್​ಕುಮಾರ್ ಗೆ ಹೊಂಬಾಳೆ ಬ್ಯಾನರ್ ನಲ್ಲಿ ಸಂತೋಷ್ ಆನಂದ್ ರಾಮ್ ನಿರ್ದೇಶನದ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದಾರೆ. ಅಂದ ಹಾಗೆ  ಇದಕ್ಕೆಲ್ಲ ಕಾರಣವಾಗಿದ್ದು ಆ ಒಂದು ಕರೆ. ನಿನ್ನೆ (ಮಾರ್ಚ್ 23) ರಂದು ಹೊಸಪೇಟೆಯಲ್ಲಿ ಅದ್ಧೂರಿಯಾಗಿ ‘ಯುವ’ ಸಿನಿಮಾ ಪ್ರೀ ರಿಲೀಸ್ ಇವೆಂಟ್ ನಡೆದಿದೆ. ಕಾರ್ಯಕ್ರಮದಲ್ಲಿ ಭಾವುಕರಾಗಿ ಮಾತನಾಡಿದ ಸಂತೋಷ್ ಆನಂದ್​ರಾಮ್ ‘ಯುವ’ ಸಿನಿಮಾ ಹೇಗೆ ನಿರ್ಮಾಣವಾಯಿತು ಎಂಬ ಬಗ್ಗೆ ಮಾತನಾಡಿದ್ದಾರೆ. ‘ಯುವರತ್ನ’ ಸಿನಿಮಾದ ಪ್ರಚಾರಕ್ಕಾಗಿ ಇಲ್ಲಿಗೆ (ಹೊಸಪೇಟೆ) ಬಂದಿದ್ದೆವು. ‘ಯುವರತ್ನ’ದಿಂದ ‘ಯುವ’ ವರೆಗೆ ನನ್ನದು ಬಹಳ ಸವಾಲಿನ ಪಯಣ. ಈ ನಡುವೆ ನಾನು ಸಾಕಷ್ಟು ಕಳೆದುಕೊಂಡಿದ್ದೇನೆ. ನನ್ನ ಅಣ್ಣ ಪುನೀತ್ ರಾಜ್​ಕುಮಾರ್ ಅವರನ್ನು ನಾನು ಕಳೆದುಕೊಂಡೆ. ನನ್ನನ್ನು ಒಬ್ಬಂಟಿಯಾಗಿ ಬಿಡದೆ, ನನ್ನನ್ನು ಮತ್ತೆ…

Read More

ಮಾರ್ಚ್ 23ರಂದು ಶನಿವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ಪಂದ್ಯದ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ಮಾಲೀಕ, ಬಾಲಿವುಡ್ ನಟ ಶಾರುಖ್ ಖಾನ್ ಧೂಮಪಾನ ಮಾಡಿದ್ದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈಡನ್ ಗಾರ್ಡನ್ಸ್ ಆವರಣದಲ್ಲಿ ಶಾರುಖ್ ಖಾನ್ ಸ್ಮೋಕ್ ಮಾಡಿದ್ದು ಅದರ ವಿಡಿಯೋಗಳು ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸ್ಟೇಡಿಯಂನಲ್ಲಿನ ವಿಐಪಿ ಬಾಕ್ಸ್‌ನೊಳಗೆ ಶಾರುಖ್ ಅವರು ಧೂಮಪಾನ ಮಾಡುತ್ತಿರುವುದನ್ನು ವಿಡಿಯೋ ಮತ್ತು ಫೋಟೋದಲ್ಲಿ ಕಾಣಬಹುದು. ಆದರೆ ಈ ವಿಡಿಯೋ ಎಲ್ಲಿಯದ್ದು? ಯಾವಾಗಿನದ್ದು? ಎನ್ನುವ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪಂದ್ಯದ ವೇಳೆ ಅವರ ವರ್ತನೆಯನ್ನು ನೆಟ್ಟಿಗರು ಟೀಕಿಸಿದ್ದಾರೆ. ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್‌ಎಲ್) ಫೈನಲ್‌ನಲ್ಲಿ ಇಮಾದ್ ವಾಸಿಮ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಸಿಗರೇಟ್ ಸೇದುವ ದೃಶ್ಯ ವೈರಲ್ ಆದಾಗಾಲೂ ಇದೇ ರೀತಿಯ ಘಟನೆ ಸಂಭವಿಸಿದೆ. ಕೆಕೆಆರ್ ತಂಡ 150 ಕೋಟಿ ಲಾಭ ಗಳಿಸಿದ್ದು, ಇದರಲ್ಲಿ ಶಾರುಖ್ ಖಾನ್ ಶೇ 55ರಷ್ಟು ಪಾಲು ಹೊಂದಿದ್ದಾರೆ. ಈ…

Read More

ನಟ ಕಿಚ್ಚ ಸುದೀಪ್ ಕ್ರಿಕೆಟ್ ಪಂದ್ಯ ಮುಗಿಸಿ ಮ್ಯಾಕ್ಸ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಮ್ಯಾಕ್ಸ್ ಚಿತ್ರದ ಶೂಟಿಂಗ್ ಆಲ್ ಮೋಸ್ಟ್ ಮುಗಿದಿದ್ದು ಇನ್ನೂ ಹದಿನೈದು ದಿನಗಳಲ್ಲಿ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ. ಮೇ ತಿಂಗಳಿನಲ್ಲಿ ಚಿತ್ರ ರಿಲೀಸ್ ಆಗಬಹುದು ಎಂದು ಸುದೀಪ್ ಹೇಳಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ಮ್ಯಾಕ್ಸ್ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಇದೇ ಕಾರಣಕ್ಕೆ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಭಿಮಾನಿಗಳು ಪದೇ ಪದೇ ಅಪ್‌ಡೇಟ್ ಕೇಳುತ್ತಲೇ ಇರುತ್ತಾರೆ. ಅದಕ್ಕೆ ಈ ಹಿಂದೆಯೂ ಪ್ರತಿಕ್ರಿಯೆ ನೀಡಿದ್ದರು ಸುದೀಪ್,  ‘ನಿಮ್ಮ ಪ್ರೀತಿ, ಕ್ಯೂರಿಯಾಸಿಟಿ ನನಗೆ ಅರ್ಥವಾಗುತ್ತದೆ. ಆದರೆ, ಸಿನಿಮಾ ಶೂಟ್ (ಪೂರ್ಣಗೊಳ್ಳದೆ ಆ ಬಗ್ಗೆ ಅಪ್‌ಡೇಟ್ ನೀಡೋದು ಹೇಗೆ’ ಅನ್ನೋದು ಸುದೀಪ್ ಅವರ ಪ್ರಶ್ನೆಯಾಗಿತ್ತು. ನವೆಂಬರ್‌ನಲ್ಲಿ ಮಳೆಯಿಂದ ಶೂಟ್ ಮಾಡಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್‌ನಲ್ಲಿ ಕೆಲವು ಅಡೆತಡೆಗಳು ಎದುರಾದವು. ಈಗ ಸಂಕ್ರಾಂತಿ ಬಳಿಕ ಮತ್ತೆ ‘ಮ್ಯಾಕ್ಸ್’ ಶೂಟಿಂಗ್ ಶುರು ಆಗಿದೆ ಎಂದು ತಿಳಿಸಿದ್ದರು.…

Read More

ನಿರ್ದೇಶಕ ವಿಜಯ್ ಪ್ರಸಾದ್ ನಿರ್ದೇಶನದ ಸಿದ್ಲಿಂಗು ಸಿನಿಮಾ ಸೂಪರ್ ಹಿಟ್ ಆಗಿದ್ದು ಇದೀಗ ಸಿದ್ಲಿಂಗು ಪಾರ್ಟ್ 2 ಮಾಡಲು ಮುಂದಾಗಿದ್ದಾರೆ. ಈ ಹಿಂದೆ ಲೂಸ್ ಮಾದ ಯೋಗಿ ಹಾಗೂ ರಮ್ಯಾ ಅವರನ್ನು ಆಯ್ಕೆ ಮಾಡಿಕೊಂಡು ಸಿದ್ಲಿಂಗು ಕಥೆ ಹೇಳಿದ್ದ ನಿರ್ದೇಶಕರು ಈ ಬಾರಿ ರಮ್ಯಾ ಬದಲು ಸೋನು ಗೌಡ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಸಿಂಪಲ್ ಆಗಿ ಸಿನಿಮಾದ ಮುಹೂರ್ತ ಮಾಡಲಾಗಿದ್ದು, ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಾಯಕ ಯೋಗಿ, ನಾಯಕಿ ಸೋನು ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಿದ್ಲಿಂಗು ಸಿನಿಮಾದ ಕೊನೆಯಲ್ಲಿ ನಾಯಕಿ ಸಾವನ್ನಪ್ಪುತ್ತಾಳೆ. ಹಾಗಾಗಿ ಸಿದ್ಲಿಂಗು 2 ಸಿನಿಮಾದ ಕಥೆಯು ಹೇಗೆ ಶುರುವಾಗಬಹುದು ಎನ್ನುವ ಅಭಿಮಾನಿಗಳಲ್ಲಿ ಶುರುವಾಗಿದೆ. 2012ರಲ್ಲಿ ತೆರೆಗೆ ಬಂದಿದ್ದ ಸಿದ್ಲಿಂಗು ಸಿನಿಮಾ ಸೂಪರ್ ಹಿಟ್ ಆಗಿತ್ತು. ಮೊದಲ ಬಾರಿಗೆ ರಮ್ಯಾ ಜೊತೆ ಯೋಗಿ ನಟಿಸಿದ್ದರಿಂದ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಇದೀಗ ಹನ್ನೆರಡು ವರ್ಷಗಳ ಬಳಿಕ ವಿಜಯ್ ಪ್ರಸಾದ್ ಅದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಆರಂಭದಲ್ಲಿಯೇ ಸಿದ್ಲಿಂಗು 2…

Read More

ಭಾರತವು ತಮ್ಮ ದೇಶದ ನಿಕಟ ಮಿತ್ರನಾಗಿ ಮುಂದುವರಿಯುತ್ತದೆ ಎಂದು ಹೇಳಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ದ್ವೀಪಸಮೂಹ ರಾಷ್ಟ್ರಕ್ಕೆ ಸಾಲ ಪರಿಹಾರವನ್ನ ನೀಡುವಂತೆ ಭಾರತಕ್ಕೆ ಮನವಿ ಮಾಡಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರ ಸ್ಥಳೀಯ ಮಾಧ್ಯಮಕ್ಕೆ ನೀಡಿದ ಮೊದಲ ಸಂದರ್ಶನದಲ್ಲಿ, ಮಾಲ್ಡೀವ್ಸ್ ಗೆ ನೆರವು ನೀಡುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ ಮತ್ತು ಹೆಚ್ಚಿನ ಸಂಖ್ಯೆಯ ಯೋಜನೆಗಳನ್ನ ಜಾರಿಗೆ ತಂದಿದೆ ಎಂದು ಮುಯಿಝು ಹೇಳಿದರು. ಭಾರತವು ಮಾಲ್ಡೀವ್ಸ್ನ ನಿಕಟ ಮಿತ್ರನಾಗಿ ಮುಂದುವರಿಯುತ್ತದೆ ಮತ್ತು ಅದರ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ ಎಂದು ಮಾಲ್ಡೀವ್ಸ್ ಸುದ್ದಿ ಪೋರ್ಟಲ್ Edition.mv ತನ್ನ ಧಿವೇಹಿ ಭಾಷೆಯ ಸಹೋದರಿ-ಪ್ರಕಾಶನ ಮಿಹಾರುಗೆ ಮುಯಿಝು ಅವರ ಸಂದರ್ಶನದ ಆಯ್ದ ಭಾಗಗಳನ್ನು ಒಳಗೊಂಡ ವರದಿಯಲ್ಲಿ ತಿಳಿಸಿದೆ. ಯೋಜಿಸಿದಂತೆ ಈ ತಿಂಗಳು ಭಾರತೀಯ ಮಿಲಿಟರಿ ಸಿಬ್ಬಂದಿಯ ಮೊದಲ ಬ್ಯಾಚ್ ದ್ವೀಪ ರಾಷ್ಟ್ರವನ್ನ ತೊರೆದ ನಂತರ ಭಾರತವನ್ನ ಶ್ಲಾಘಿಸುವ ಮುಯಿಝು ಅವರ ಹೇಳಿಕೆಗಳು ಬಂದಿವೆ. ಮೇ 10 ರೊಳಗೆ, ಮೂರು ಭಾರತೀಯ ವಾಯುಯಾನ ಪ್ಲಾಟ್ಫಾರ್ಮ್ಗಳನ್ನು ನಿರ್ವಹಿಸುವ…

Read More

ರಷ್ಯಾದ ಮಾಸ್ಕೊದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 150 ಕ್ಕೆ ಏರಿಕೆಯಾಗಿದ್ದು, ನಾಲ್ವರು ಬಂದೂಕುಧಾರಿಗಳು ಸೇರಿದಂತೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ. ಘಟನೆ ನಡೆದು  ಸಾಕಷ್ಟು ಸಮಯ ಕಳೆದಿದ್ದರು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ದಾಳಿಯ ಬಗ್ಗೆ ಇನ್ನೂ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿಲ್ಲ.ಕಳೆದ 20 ವರ್ಷಗಳಲ್ಲಿ ರಷ್ಯಾದಲ್ಲಿ ನಡೆದ ಅತ್ಯಂತ ಭೀಕರ ದಾಳಿಯ ಹೊಣೆಯನ್ನು ಉಗ್ರ ಸಂಘಟನೆ ದಾಯೆಶ್ ಹೊತ್ತುಕೊಂಡಿದೆ. ಆದರೆ ಉಕ್ರೇನ್ ಅಧ್ಯಕ್ಷೀಯ ಸಲಹೆಗಾರ ಮೈಖೈಲೊ ಪೊಡೊಲ್ಯಾಕ್ ಅವರ ಹೇಳಿಕೆಯ ಹೊರತಾಗಿಯೂ, ರಷ್ಯಾ ಉಕ್ರೇನಿಯನ್ ಸಂಪರ್ಕವನ್ನು ಅನುಸರಿಸುತ್ತಿದೆ ಎಂಬ ಸೂಚನೆಗಳಿವೆ. ಉಕ್ರೇನ್ ಗಡಿಗೆ ಹೋಗುವಾಗ “ಎಲ್ಲಾ ನಾಲ್ವರು ಭಯೋತ್ಪಾದಕರನ್ನು” ಬಂಧಿಸಲಾಗಿದೆ ಮತ್ತು ಅವರು ಉಕ್ರೇನ್ನಲ್ಲಿ ಸಂಪರ್ಕಗಳನ್ನು ಹೊಂದಿದ್ದಾರೆ ಎಂದು ಎಫ್‌ಎಸ್ಬಿ ಭದ್ರತಾ ಸೇವೆ ತಿಳಿಸಿದೆ. ಪ್ರಮುಖ ಅಪರಾಧಗಳ ತನಿಖೆ ನಡೆಸುತ್ತಿರುವ ರಷ್ಯಾದ ತನಿಖಾ ಸಮಿತಿ, ರಕ್ಷಣಾ ಕಾರ್ಯಕರ್ತರು ಕಟ್ಟಡದಿಂದ ಶವಗಳನ್ನು ಹೊರತೆಗೆಯುತ್ತಿದ್ದು ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಸಂಗೀತ ಕಚೇರಿ ಆಯೋಜನೆ ಮಾಡಲು ಸಿದ್ಧತೆ ನಡೆಸಿದ್ದ ಕ್ರೋಕಸ್…

Read More