ಹುಬ್ಬಳ್ಳಿ : ಬಡ ಮಕ್ಕಳಿಗೆ ವಿತರಣೆ ಮಾಡಬೇಕಿದ್ದ ಅಂಗನವಾಡಿ ಆಹಾರ ಪದಾರ್ಥಗಳನ್ನು, ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗೋಡನ್ ನಲ್ಲಿ ಸಂಗ್ರಹಿಸಿಟ್ಟು, ಪ್ರಕರಣ ಬೆಳಕಿಗೆ ಬರುತ್ತಲೇ ತಲೆ ಮರೆಸಿಕೊಂಡಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಕಾಂಗ್ರೆಸ್ ಮುಖಂಡೆ ಬತುಲ್ಲಾ ಕಿಲ್ಲೆದಾರ ಶ್ರೀಘ್ರ ಬಂಧನಕ್ಕೆ ಆಗ್ರಹಿಸಿ ಮತ್ತು ಅವರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಕೈವಾಡಯಿದೆ ಅಂತ ಆರೋಪಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. https://ainlivenews.com/give-free-land-to-construction-workers-citu-taluk-president-honnoor-saheb/ ಹುಬ್ಬಳ್ಳಿ ದುರ್ಗದಬೈಲ್ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರ ಆಕ್ರೋಶ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಸಿಎಂ ಸಿದ್ದರಾಮಯ್ಯ, ಶಾಸಕ ಪ್ರಸಾದ ಅಬ್ಬಯ್ಯಯೊಂದಿಗೆ ಇರುವ ಆರೋಪಿ ಫೋಟೋ ಹಿಡಿದು ಘೋಷಣೆ ಕೂಗಿ, ಪ್ರಸಾದ ಅಬ್ಬಯ್ಯ ಅವರ ಪೋಷಿತ ಕಳ್ಳಿ, ಕಾಂಗ್ರೆಸ್ ಪಕ್ಷದ ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದಲೇ ಈ ಕಳ್ಳತನ ನಡೆದಿದೆ ಎಂದು ಆರೋಪಿಸಿದ್ದಾರೆ.
Author: Author AIN
ಮೆಲ್ಬೋರ್ನ್: ಸಮುದ್ರ ತೀರದಲ್ಲಿ ಸುಮಾರು 150 ತಿಮಿಂಗಲಗಳು ಬಂದು ಬಿದ್ದಿರುವ ಘಟನೆ ಆಸ್ಟ್ರೇಲಿಯಾದ ವಾಯುವ್ಯ ಪ್ರಾಂತ್ಯದ ತಾಸ್ಮಾನಿಯಾ ರಾಜ್ಯದ ಅರ್ಥೂರ್ ನದಿ ಸಮುದ್ರವನ್ನು ಸಂಗಮಿಸುವ ಸ್ಥಳದಲ್ಲಿ ನಡೆದಿದೆ. ಈ 150 ತಿಮಿಂಗಿಲಗಳ ಪೈಕಿ 136 ತಿಮಿಂಗಿಲಗಳು ಇನ್ನೂ ಜೀವಂತವಿದ್ದು, ಉಳಿದವು ಮೃತಪಟ್ಟಿವೆ. ಜೀವಂತವಿರುವ ತಿಮಿಂಗಿಲಗಳ ಪೈಕಿ ಕೆಲವು ಜೀವನ್ಮರಣದ ಹೋರಾಟ ನಡೆಸುತ್ತಿವೆ ಎಂದು ಆಸ್ಟ್ರೇಲಿಯಾದ ಪರಿಸರ ಸಚಿವಾಲಯದ ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಿಮಿಂಗಿಲಗಳು ಇಷ್ಟು ದೊಡ್ಡ ಪ್ರಮಾಣದಲ್ಲಿ ಸಮುದ್ರ ತೀರಕ್ಕೆ ಬಂದು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಾಸ್ಮಾನಿಯಾ ರಾಜ್ಯದ ಅರ್ಥೂರ್ ನದಿ ಸಮುದ್ರವು ಜನವಸತಿ ರಹಿತ ಹಾಗೂ ಸಾರಿಗೆ ಸಂಪರ್ಕಗಳಿಲ್ಲದ ಪ್ರದೇಶವಾಗಿರುವುದರಿಂದ, ಅಲ್ಲಿಗೆ ಪರಿಹಾರ ಕಾರ್ಯಾಚರಣೆ ತಂಡ ತಲುವುದಕ್ಕೆ ತುಂಬಾ ಸಮಸ್ಯೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೀಗಿದ್ದೂ, ಕೆಲವು ಮರಿ ತಿಮಿಂಗಿಲಗಳನ್ನು ಆಳ ಸಮುದ್ರಕ್ಕೆ ಡೂಡುವ ಪ್ರಯತ್ನ ನಡೆದಿದೆ ಎಂದು ಅವರು ಹೇಳಿದ್ದಾರೆ ಇಷ್ಟೊಂದು ದೊಡ್ಡ ಪ್ರಮಾಣದ ತಿಮಿಂಗಿಲಗಳು ಸಮುದ್ರದ ತೀರಕ್ಕೆ ಬಂದು…
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವ ಕಾರಣ ಬೆಂಗಳೂರು ನಗರದ ಹಲವೆಡೆ ಫೆಬ್ರವರಿ 20ರಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ನೀರು ಪೂರೈಕೆ ಸ್ಥಗಿತವಾಗಲಿದೆ. ಈ ಬಗ್ಗೆ ಬೆಂಗಳೂರು ಜಲ ಮಂಡಳಿ ಮಾಹಿತಿ ನೀಡಿದೆ. ಮಾರತ್ತಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. https://ainlivenews.com/bumper-offer-from-modi-government-women-will-get-rs-7000-under-this-scheme/ ಮಾರತ್ತಹಳ್ಳಿಯ ಜೀವಿಕಾ ಆಸ್ಪತ್ರೆ ಬಳಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ 20 ರಂದು ನಗರದ ವಿವಿಧ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಪ್ರಕಟಣೆ ತಿಳಿಸಿದೆ. ಎಷ್ಟು ಗಂಟೆಯ ವರಗೆ ನೀರು ಪೂರೈಕೆ ಇರಲ್ಲ? ನಾಲ್ಕನೇ ಹಂತದ ಕಾವೇರಿ ನೀರಿನ ಪೂರೈಕೆ ಯೋಜನೆಯ ಕಾಮಗಾರಿ ಗುರುವಾರ ಬೆಳಗ್ಗೆ 9 ರಿಂದ ರಾತ್ರಿ 9 ರ ವರೆಗೆ ನಡೆಯಲಿದೆ. ಇದರಿಂದಾಗಿ ಈ ಅವಧಿಯಲ್ಲಿ ನೀರು ಪೂರೈಕೆ ಸ್ಥಗಿತವಾಗಲಿದೆ. ಎಲ್ಲೆಲ್ಲಿ ನೀರು ಪೂರೈಕೆ ಸ್ಥಗಿತ? ಮಾರತ್ತಹಳ್ಳಿ, ದೊಡ್ಡಾನೆಕುಂದಿ, ಮುನ್ನೆಕೊಳಲು, ಓಎಂಬಿಆರ್‌ಲೇಔಟ್, ಎಚ್‌ಆರ್‌ಬಿಆರ್‌ಲೇಔಟ್, ಸಿಗೇಹಳ್ಳಿ, ಬಟ್ಟರ ಹಳ್ಳಿ, ಮೇಡೆಹಳ್ಳಿ, ಟಿ.ಸಿ.ಪಾಳ್ಯ,…
ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. “ಅಣ್ಣಯ್ಯ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ವಿಕಾಶ್ ಉತ್ತಯ್ಯ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು ನಿರ್ದೇಶಿಸಿದ್ದಾರೆ. ಹಿರಿಯ ಚಲನಚಿತ್ರ ಪತ್ರಕರ್ತೆ ಸರಸ್ವತಿ ಜಾಗಿರದಾರ್, ಚಲನಚಿತ್ರ ಸ್ಥಿರ ಛಾಯಾಗ್ರಾಹಕರಾದ ಮನು, ಮೋಕ್ಷೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತಾ ಬಂದಿರುವ ಕನ್ನಡಪರ ಹೋರಾಟಗಾರರು, ಕ್ಯಾಬ್ ಹಾಗೂ ಆಟೋ ಚಾಲಕರು, ಯವಕರು ಸೇರಿದಂತೆ ವಿವಿಧ ರೀತಿಯಲ್ಲಿ ಗುರುತಿಸಿಕೊಂಡಿರುವ ಗಣ್ಯರು ಟ್ರೇಲರ್ ಬಿಡುಗಡೆಗೆ ಸಾಥ್ ನೀಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಕನ್ನಡ ಚಿತ್ರರಂಗದ ವಿವಿಧ ಆಯಾಮಗಳಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ, ಇದು ಸಸ್ಪೆನ್ಸ್ ಥ್ರಿಲ್ಲರ್…
ಈ ಹಿಂದೆ ‘ಯುದ್ಧ ಮತ್ತು ಸ್ವಾತಂತ್ರ್ಯ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ವಿದ್ಯಾ, ಈಗ ಒಂದು ಸಣ್ಣ ಗ್ಯಾಪ್‍ನ ನಂತರ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿದ್ಯಾ ಸದ್ಯ ‘ಬೇಬೋ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚಿಗೆ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಟ ಕೌಶಿಕ್, ಅನಂತು ಮುಂತಾದ ಗಣ್ಯರು ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ‘ಬೇಬೋ’ ಚಿತ್ರಕ್ಕೆ ‘ಆದ್ರೆ ಇವ್ಳು ಕರೀನಾ ಅಲ್ಲ’ ಎಂಬ ಅಡಿಬರಹವಿದ್ದು, ಈ ಚಿತ್ರವನ್ನು ಜಯ ಹರಿಪ್ರಸಾದ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರವನ್ನು ವಿ.ಕೆ. ಕಂಬೈನ್ಸ್ ಬ್ಯಾನರ್ ಅಡಿ ವಿದ್ಯಾ ಅವರ ಸಂಬಂಧಿಕರಾದ ಸಂತೋಷ್ ವಿಜಯ್ ಮತ್ತು ಸುಪ್ರೀತ್ ವಿಜಯ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ವಿ. ಮನೋಹರ್ ಅವರ ಸಂಗೀತ ಸಂಯೋಜನೆ ಮತ್ತು ಸುರೇಶ್ ಚಿಕ್ಕಣ್ಣ ಅವರ ಛಾಯಾಗ್ರಹಣವಿದೆ. ಈ ಚಿತ್ರದ ಕುರಿತು ಮಾತನಾಡುವ ನಾಯಕಿ ವಿದ್ಯಾ,…
ಬೆಂಗಳೂರು: ನಾನು ಖರೀದಿಸಿರುವ ಜಮೀನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ಕೇತಗಾನಹಳ್ಳಿ ಜಮೀನು ಸರ್ವೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೇತಗಾನಹಳ್ಳಿ ಜಮೀನು ನಾನು 40 ವರ್ಷಗಳ ಹಿಂದೆ ಭೂಮಿ ಖರೀದಿ ಮಾಡಿದ್ದು. 40 ವರ್ಷಗಳ ಹಿಂದೆ ಹತ್ತಾರು ಬಾರಿ ಸರ್ವೆ ಮಾಡಿಕೊಂಡಿದ್ದಾರೆ. ಹತ್ತಾರು ಬಾರಿ ಎಲ್ಲಾ ರೀತಿ ತನಿಖೆಗಳು ನಡೆದಿವೆ. ತನಿಖೆ ಮಾಡೋಕೆ ನಾನು ಮುಕ್ತವಾಗಿ ಇದ್ದೇನೆ. ನಿನ್ನೆ ಕೆಲವು ಕಾಂಗ್ರೆಸ್ ಪುಡಾರಿಗಳು ಕರೆದುಕೊಂಡು ಬಂದು ರಿಯಾಕ್ಷನ್ ಕೊಡಿಸಿದ್ದಾರೆ ನೋಡಿದ್ದೇನೆ. 40 ವರ್ಷಗಳಿಂದ ನನ್ನ ಹತ್ರ ಯಾರು ಬಂದಿರಲಿಲ್ಲ. ಈಗ ಎಲ್ಲಿಂದ ಉದ್ಬವ ಆದ್ರು ದೂರುದಾರರು ಅಂತ ಪ್ರಶ್ನೆ ಮಾಡಿದ್ರು. https://ainlivenews.com/does-armpit-sweat-cause-bad-odor-if-so-heres-the-solution-to-this-problem/ 1986 ರಲ್ಲಿ ಸಿಎಂ ಲಿಂಗಪ್ಪ ಮತ್ತು ರಾಮಚಂದ್ರ ಹೆಸರಿನ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರು ಇದೇ ಜಮೀನು ವಿಷಯದಲ್ಲಿ ಆಗಿನ ಪ್ರಧಾನ ಮಂತ್ರಿ, ಗೃಹ ಮಂತ್ರಿಯವರಿಗೆ ಪತ್ರ ಬರೆದಿದ್ದರು, ತಮ್ಮ ದೂರಿನಲ್ಲಿ ಅವರು ಖರೀದಿಸಿದ್ದಾರೆ ಅಂತ ಹೇಳಿದ್ದರೇ ಹೊರತು ಕಬಳಿಸಿದ್ದಾರೆ ಅಂತ ಹೇಳಿರಲಿಲ್ಲ…
ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಇದಕ್ಕಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ ಈ ಸಿನಿಮೋತ್ಸವದಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ಹಲವರು ತಕರಾರು ತೆಗೆದಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ನಲ್ಲಿ ಸಿನಿಮಾಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. 9 ಸಿನಿಮಾ ನಿರ್ಮಾಣ ಸಂಸ್ಥೆಗಳಿಂದ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಆಗಿದೆ. ತಮ್ಮ ಸಿನಿಮಾಗಳನ್ನು ಫಿಲ್ಮ್ ಫೆಸ್ಟಿವಲ್ಗೆ ಪರಿಗಣಿಸಿಲ್ಲ. ಸಿನಿಮಾಗಳನ್ನು ವೀಕ್ಷಿಸದೇ ಆಯ್ಕೆ ಅಂತಿಮಗೊಳಿಸಲಾಗಿದೆ ಎಂದು ನಿರ್ಮಾಣ ಸಂಸ್ಥೆಗಳು ಆರೋಪ ಮಾಡಿವೆ. ಮಾರ್ಚ್ 1ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಆರಂಭ ಆಗಲಿದೆ. ಆದರೆ ಆಯ್ಕೆ ಪ್ರಕ್ರಿಯೆ ಸರಿಯಾಗಿ ಆಗಿಲ್ಲ ಎಂಬ ಕಾರಣದಿಂದ ಫಿಲ್ಮ್ ಫೆಸ್ಟಿವಲ್ ಮುಂದೂಡಬೇಕು ಎಂದು ಅರ್ಜಿದಾರರು ಮನವಿ ಮಾಡಿಕೊಂಡಿದ್ದಾರೆ. ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಈ…
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಕುರಟಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಸಾಗುತ್ತಿದ್ದ ಐವರನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ತಂದೆ, ಮಗಳು, ಮೊಮ್ಮಗ ಸೇರಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. https://ainlivenews.com/a-2-year-old-child-died-after-being-run-over-by-a-jcb-while-he-was-playing/ ತಡರಾತ್ರಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು, ಚಿಕ್ಕಬಳ್ಳಾಪುರದ ಸಿಇಎನ್ ಠಾಣಾ ಪೊಲೀಸರು ಐವರ ಬಂಧಿಸಿದ್ದು, ಬರೋಬ್ಬರಿ 17.50 ಲಕ್ಷ ರೂ. ಮೌಲ್ಯದ 35 ಕೆಜಿ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಗರಿಗರೆಡ್ಡಿಪಾಳ್ಯ ನಿವಾಸಿಗಳಾದ ತಾಯಿ ದೇವಮ್ಮ ಹಾಗೂ ಮಗ ಆಂಜಿ ಹಾಗೂ ಪಲ್ಲಿಕುಂಟೆ ನಿವಾಸಿ ಮಾರಪ್ಪ , ವೆಂಕಟರಮಣ ಹಾಗೂದಂತೆ ಆದಿನಾರಾಯಣನನ್ನ ಬಂಧಿಸಲಾಗಿದೆ.
ಹುಬ್ಬಳ್ಳಿ ಧಾರವಾಡ : ನಗರದ ಬನಶಂಕರಿ ಬಡಾವಣೆಯ ವಿದ್ಯಾನಗರದಲ್ಲಿ ಕೊಂಕಣ್ ಮರಾಠ ಸಮಾಜದ ವತಿಯಿಂದ ಶಿವಾಜಿ ಮಹಾರಾಜರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. https://ainlivenews.com/minister-hk-patil-hit-back-at-mp-jagdish-shetters-statement/ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷರಾದ ಶ್ರೀ ರವಿ ನಾಯಕ ವಹಿಸಿ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹಾರಾಜರು ಹಿಂದೂ ಧರ್ಮವನ್ನುಕಟ್ಟಿ ಭಾರತ ದೇಶದಲ್ಲೆಡೆ ಒಟ್ಟುಗೂಡಿಸಿದ ಮಹಾನ್ ವ್ಯಕ್ತಿ. ಅವರು ಕಿರಿಯ ವಯಸ್ಸಿನಲ್ಲಿದ್ದಾಗ ಹೋರಾಟದ ಮನೋವೃತ್ತಿ ಹೊಂದಿದ್ದವರು ಎಂದರು. ಮೊಘಲರ ವಿರುದ್ಧ ಹೋರಾಡಿ ಹೆಮ್ಮೆಟ್ಟಿಸಿದ್ದರು ಅವರ ಇತಿಹಾಸ ಎಂದಿಗೂ ಪ್ರಸ್ತುತ. ಶಿವಾಜಿ ಮಹಾರಾಜರು ಜಗತ್ತಿನ ಶ್ರೇಷ್ಠ ವ್ಯಕ್ತಿ ಅವರ ತತ್ವ ಆದರ್ಶಗಳನ್ನು ಇಂದಿನ ಯುವಕರು ಬಳಸಿಕೊಳ್ಳಬೇಕು ಎಂದು ಯುವಜನತೆಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸುರೇಂದ್ರ ಗಾಂವಕರ್ ಹಾಗೂ ಅರುಣ್ ಕುಮಾರ ಸಾಲುಂಕೆ, ಸುನಿಲ್ ನಾಯ್ಕ್ ವಿನೋದ್ ಸೈಲ, ವಿನಾಯಕ ಗಾಂವಕಾರ, ರಾಜೀವ ನಾಯ್ಕ್ , ರಾಜಶೇಖರ ನಾಯ್ಕ್ ಸಾರ್ಥಕ ಕದಂ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಂಗಳೂರು: ಮುಡಾ ತೂಗುಗತ್ತಿಯಿಂದ ಸಿಎಂ ರಿಲೀಫ್ ಪಡೆದಿದ್ದಾರೆ. ಹೌದು ಮುಡಾ ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ನ್ಯಾಯಾಲಯಲಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಆದ್ರೆ, ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್ಚಿಟ್ ನೀಡಲಾಗಿದೆ. https://ainlivenews.com/does-armpit-sweat-cause-bad-odor-if-so-heres-the-solution-to-this-problem/ ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ. ನಾಳೆ ಕೇವಲ 4 ಜನರ ವಿರುದ್ಧ ಅಂತಿಮ ವರದಿ ಸಲ್ಲಿಕೆ A1 ಸಿದ್ದರಾಮಯ್ಯ A2 ಪಾರ್ವತಿ A3 ಮಲ್ಲಿಕಾರ್ಜುನ ಸ್ವಾಮಿ A4 ದೇವರಾಜು ಇನ್ನು ಪ್ರಕರಣ ತನಿಖೆ ವರದಿ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ತಿಳಿಸಿದೆ. ತನಿಖಾಧಿಕಾರಿಗಳಿಗೆ ಸಿವಿಲ್ ಸ್ವರೂಪದ್ದೆಂದು ತನಿಖೆ ನಡೆಸಲು ತಕ್ಕುದಲ್ಲವೆಂದು ಸಂಗತಿ ಅಥವಾ ಕಾನೂನಿನ ತಪ್ಪು ತಿಳುವಳಿಕೆಯೆಂದು…