Author: Author AIN

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಡಾ||ಎಸ್ ನಾರಾಯಣ್ ನಿರ್ದೇಶನದ,  ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ”. ಜೆಸ್ಸಿಗಿಫ್ಟ್ ಸಂಗೀತ ನೀಡಿರುವ ಹಾಗೂ ಎಸ್ ನಾರಾಯಣ್ ಅವರು ಬರೆದಿರುವ ಐದು ಹಾಡುಗಳು “ಮಾರುತ” ಚಿತ್ರದಲ್ಲಿದೆ. ಖ್ಯಾತ ಗಾಯಕ ಸೋನು ನಿಗಮ್ ಅವರು ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ಉಳಿದ ಹಾಡುಗಳ ವಾಯ್ಸ್ ಮಿಕ್ಸ್ ಬೆಂಗಳೂರಿನ ರೇಣು ಸ್ಟುಡಿಯೋದಲ್ಲಿ ನಡೆದಿದ್ದು, ಹರಿಚರಣ್, ಅನುರಾಧ ಭಟ್,‌ಅನನ್ಯ ಭಟ್, ಶಮಿತಾ ಮಲ್ನಾಡ್ ಹಾಗೂ ಚಂದನ್ ಶೆಟ್ಟಿ “ಮಾರುತ” ಚಿತ್ರದ ಹಾಡುಗಳನ್ನು ಮಧುರವಾಗಿ ಹಾಡಿದ್ದಾರೆ.  ಆದಷ್ಟು ಬೇಗ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.  ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿರುವ “ಮಾರುತ” ಚಿತ್ರದ‌ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.‌ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಎಸ್ ನಾರಾಯಣ್, ತಮ್ಮ ಅಮೋಘ ಅಭಿನಯದಿಂದಲೇ…

Read More

ಬೆಳಗಾವಿ : ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. https://ainlivenews.com/real-estate-businessman-kidnapped-in-belgaum/ ಮೃತಪಟ್ಟ ಶಿಕ್ಷಕನನ್ನು  ಭೈರಪ್ಪ ಆರ್  ಸಾತಗೊಂಡನವರ (55) ಎನ್ನಲಾಗಿದ್ದು, ಮೃತ ಶಿಕ್ಷಕ ಇಬ್ಬರು ಪುತ್ರಿಯರನ್ನು, ಅಪಾರ ಬಂಧು-ಬಳಗವನ್ನ ಅಗಲಿದ್ದಾರೆ.

Read More

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್‌ ಜಾಮೀನು ಪಡೆದು ಹೊರ ಬಂದಿದ್ದಾರೆ. ಹೈಕೋರ್ಟ್​ನಲ್ಲಿ ದರ್ಶನ್‌ ಎಂಡ್‌ ಗ್ಯಾಂಗ್‌ ಸದಸ್ಯರಿಗೆ ಜಾಮೀನು ಸಿಕ್ಕಿದ್ದರೂ ಪೂರ್ಣ ಪ್ರಮಾಣದಲ್ಲಿ ರಿಲೀಫ್ ಸಿಕ್ಕಿಲ್ಲ. ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಾಗಾಗಿ ದರ್ಶನ್​ ಹಾಗೂ ಇನ್ನುಳಿದ ಆರೋಪಿಗಳಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸುಪ್ರೀಂ ಕೋರ್ಟ್​ನಲ್ಲಿ ತಮ್ಮ ಪರ ವಾದ ಮಾಡಲು ಖ್ಯಾತ ವಕೀಲ ಕಪಿಲ್‌ ಸಿಬಲ್‌ ರನ್ನು ದರ್ಶನ್‌ ಸಂಪರ್ಕಿಸಿದ್ದಾರೆ ಎನ್ನಲಾಗುತ್ತಿದೆ. ಅನೇಕ ಹೈಪ್ರೊಫೈಲ್ ಕೇಸ್​ಗಳನ್ನು ನಿಭಾಯಿಸಿದ ಖ್ಯಾತಿ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್‌ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹೈಕೋರ್ಟ್​ನಲ್ಲಿ ನಡೆದ ವಾದ-ಪ್ರತಿವಾದ ಹಾಗೂ ಕೇಸ್ ಹಿಸ್ಟರಿಯ ಮಾಹಿತಿಯನ್ನು ಅವರಿಗೆ ನೀಡಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಪರವಾಗಿ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್​ನಲ್ಲಿ ವಾದ ಮಾಡಲಿದ್ದಾರಂತೆ. ಮಾರ್ಚ್ 18ರಂದು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ವಿಚಾರಣೆ ನಡೆಯಲಿದೆ. ಹೀಗಾಗಿ ಖ್ಯಾತ ಹಿರಿಯ…

Read More

ಬೆಳಗಾವಿ : ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ಕಳೆದ ಫೆ.14ರಂದು ಗೋಕಾಕ್ ತಾಲೂಕಿನ ದಂಡಾಪುರ ಕ್ರಾಸ್ ನಲ್ಲಿ ಉದ್ಯಮಿ ಅಪಹರಣ ನಡೆದಿದೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ಕಿಡ್ನ್ಯಾಪ್ ಆಗಿದ್ದು, ಬಸವರಾಜ್ ಬಾಗಲಕೋಟೆ ಜಿಲ್ಲೆಯ ಜಮಖಂಡಿ, ತೇರದಾಳದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದರು. ಫೆ.14ರಂದು ಕಾರಿನಲ್ಲಿ ಬಂದಿದ್ದ ಆರೋಪಿಗಳು ಬಸವರಾಜ್ ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ್ ತಳವಾರ ಕಿಡ್ನ್ಯಾಪ್ ಮಾಡಿದ್ದು, 5 ಕೋಟಿಗೆ ಬೇಡಿಕೆ ಇಟ್ಟದ್ದಾರೆ. ಬಸವರಾಜ್ ಪತ್ನಿ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಿಡ್ನ್ಯಾಪ್ ಮಾಡಿದ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. https://www.youtube.com/watch?v=ykrwcXwJseo ಕಿಡ್ನ್ಯಾಪ್ ಮಾಡಿ ಬಸವರಾಜ್ ಮೊಬೈಲ್ ನಿಂದ ಪತ್ನಿಗೆ ಕರೆ ಮಾಡಿ ಹಣ ತರುವಂತೆ ಡಿಮಾಂಡ್ ಮಾಡಿದ್ದಾರೆ. ನಿಪ್ಪಾಣಿ ತಾಲೂಕಿನ ಬಳಿಕ ಹಣ ತೆಗೆದುಕೊಂಡು ಬರಲು ಡಿಮ್ಯಾಂಡ್ ಮಾಡಿದ್ದು, ಬಸವರಾಜ್ ಅವರ ಮಗ ಕೆಲವರನ್ನ ಕರೆದುಕೊಂಡು ಹಣ ತೆಗೆದುಕೊಂಡು ಹೋಗಿದ್ದಾಗ.…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ನಿರ್ಮಾಣಕ್ಕಾಗಿ 25ನೇ ಫೆಬ್ರವರಿ 2025ರ ಒಳಗಾಗಿ ಅರ್ಜಿ ಸಲ್ಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಾಗರಿಕರಲ್ಲಿ ಮನವಿ ಮಾಡಿದರು. ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ’ದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಿಗೆ ಸ್ಪಂದಿಸುವ ವೇಳೆ, 30ಕ್ಕೂ ಹೆಚ್ಚು ನಾಗರಿಕರು ಒಂಟಿ ಮನೆ ಯೋಜನೆಯಲ್ಲಿ ಅನುದಾನ ಒದಗಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಯಿಸಿ, 2022 ರಿಂದ 24 ರವರೆಗೆ ಒಂಟಿ ಮನೆಗಾಗಿ ಬಂದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರ ಅನುದಾನ ಒದಗಿಸಲಾಗುವುದೆಂದು ತಿಳಿಸಿದರು. ಒಂಟಿ ಮನೆ ನಿರ್ಮಾಣಕ್ಕಾಗಿ ಇದುವರೆಗೆ ಅರ್ಜಿ ಸಲ್ಲಿಸದೇ ಇರುವವರು ಕೂಡಲೆ ಪಾಲಿಕೆ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಪಡೆದು 25ನೇ ಫೆಬ್ರವರಿ 2025ರ ಒಳಗಾಗಿ ಆಯಾ ವಲಯದ ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದರು. ಸಸಿಗಳಿಗೆ ಸಂಸ್ಕರಣ ನೀರು ಉಪಯೋಗಿಸಲು ಸೂಚನೆ:…

Read More

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್‌ ಇತ್ತೀಚೆಗೆ ಆಪ್ತರ ಜೊತೆ ಸಿಂಪಲ್‌ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್‌ ಸದ್ಯ ಕೊಂಚ ಸುಧಾರಿಸಿಕೊಂಡಿದ್ದು ಸದ್ಯದಲ್ಲೇ ಶೂಟಿಂಗ್‌ ನಲ್ಲಿ ಭಾಗಿಯಾಗಲಿದ್ದಾರೆ. ಈ ಮಧ್ಯೆ ದರ್ಶನ್‌ ಗೆ ಮೈಸೂರಿಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ದರ್ಶನ್‌ ಗೆ ಮೈಸೂರಿನ ಮೇಲೆ ವಿಶೇಷ ಪ್ರೀತಿ. ಹೀಗಾಗಿ ಬಿಡುವು ಸಿಕ್ಕಾಗೆಲ್ಲಾ ಮೈಸೂರಿಗೆ ತೆರಳುತ್ತಿದ್ದರು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಜೈಲು ಸೇರಿದ ಬಳಿಕ ಅದು ಸಾಧ್ಯವಾಗಿರಲಿಲ್ಲ. ಸದ್ಯ ಜಾಮೀನಿನ ಮೇಲೆ ಹೊರ ಬಂದಿರುವ ದರ್ಶನ್‌ ನ್ಯಾಯಾಲಯದ ಅನುಮತಿ ಪಡೆದು ಬೇರೆ ಊರುಗಳಿಗೆ ಪ್ರಯಾಣಿಸಬೇಕಾಗಿದೆ. ಈ ಮೊದಲು ಕೂಡ ಅವರು ಕೋರ್ಟ್ ಅನುಮತಿ ಪಡೆದು ಮೈಸೂರಿಗೆ ತೆರಳಿದ್ದರು. ಈಗ ಇನ್ನೊಮ್ಮೆ ಅವರಿಗೆ ನ್ಯಾಯಾಲಯದಿಂದ ಅನುಮತಿ ಸಿಕ್ಕಿದೆ. ಫೆಬ್ರವರಿ 20ರ ತನಕ ಮೈಸೂರಿಗೆ ತೆರಳಲು ಆರೋಪಿ ದರ್ಶನ್​ಗೆ ಕೋರ್ಟ್​ ಅನುಮತಿ ನೀಡಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್​​ನಿಂದ ದರ್ಶನ್…

Read More

ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ 9ನೇ ಆವೃತ್ತಿ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ 8 ರಾಷ್ಟ್ರಗಳು ಭಾಗವಹಿಸಿರುವ ಐಸಿಸಿ ಪ್ರಾಯೋಜಿತ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟ ಶುರುವಾಗುತ್ತಿದೆ. ಮೊದಲ ಪಂದ್ಯ ಆತಿಥೇಯ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ (Pak vs NZ) ವಿರುದ್ಧ ಕರಾಚಿ ಮೈದಾನದಲ್ಲಿ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ. https://ainlivenews.com/do-you-know-what-are-the-health-benefits-of-wearing-silver-anklets/ ಎ- ಗುಂಪಿನಲ್ಲಿ ಭಾರತ, ನ್ಯೂಜಿಲೆಂಡ್‌, ಪಾಕಿಸ್ತಾನ, ಬಾಂಗ್ಲಾದೇಶ ಇದ್ದರೆ, ಬಿ-ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್‌ ತಂಡಗಳಿವೆ. ಭಾರತ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಫೆ.20ರಂದು ಬಾಂಗ್ಲಾದೇಶದ ವಿರುದ್ಧ ಆಡಲಿದೆ ಮತ್ತು ಪಾಕಿಸ್ತಾನದ ವಿರುದ್ದದ ಹೈವೋಲ್ಟೇಜ್ ಪಂದ್ಯ ಫೆ.23ರ ಸೂಪರ್‌ ಸಂಡೇನಲ್ಲಿ ನಡೆಯಲಿದೆ. ನೇರ ಪ್ರಸಾರ ಎಲ್ಲಿ? ಸ್ಟಾರ್ ಸ್ಫೋಟ್ಸ್‌ ವಾಹಿನಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ. ಜಿಯೋಹಾಟ್‌ಸ್ಟಾರ್ (ಆಪ್‌) ಚಾಂಪಿಯನ್ಸ್ ಟ್ರೋಫಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಮಾಡಲಿದೆ. ಭಾರತದ ಮೂವರಿಗೆ ಕೊನೆಯ ಆಟ? ಹೌದು. ಏಕದಿನ ಮಾದರಿಯ ಚಾಂಪಿಯನ್ಸ್‌ ಟ್ರೋಫಿ ಟೀಂ ಇಂಡಿಯಾ ದಿಗ್ಗಜರಾದ ರೋಹಿತ್‌…

Read More

ನಟ, ಶಾಸಕ ನಂದಮೂರಿ ಬಾಲಕೃಷ್ಣ ನಟನೆಯ ‘ಡಾಕೂ ಮಹಾರಾಜ್’ ಸಿನಿಮಾ ಸೂಪರ್‌ ಹಿಟ್‌ ಆಗಿದೆ. ಬಾಕ್ಸ್‌ ಆಫೀಸ್‌ ನಲ್ಲಿ ಡಾಕೂ ಮಹಾರಾಜ್‌ ಭರ್ಜರಿ ಕಲೆಕ್ಷನ್‌ ಮಾಡಿದ್ದು ಇದೇ ಖುಷಿಯಲ್ಲಿ ಸಿನಿಮಾದ ಸಂಗೀತ ನಿರ್ದೇಶಕ ತಮನ್‌ ಅವರಿಗೆ ಬಾಲಕೃಷ್ಣ ದುಬಾರಿ ಉಡುಗೊರೆಯೊಂದನ್ನು ನೀಡಿದ್ದಾರೆ. ‘ಡಾಕೂ ಮಹಾರಾಜ್’ ಸಿನಿಮಾ ವಿಶ್ವದಾದ್ಯಂತ ಸುಮಾರು 150 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದ್ದು ಚಿತ್ರತಂಡ ಸಖತ್‌ ಖುಷಿಲ್ಲಿದ. ಬಾಲಕೃಷ್ಣ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುವುದರ ಜೊತೆಗೆ ಸಹ ನಿರ್ಮಾಪಕ ಕೂಡ ಹೌದು. ಸಿನಿಮಾ ಸಕ್ಸಸ್‌ ಆದ ಖುಷಿಯಲ್ಲಿ ಸಿನಿಮಾದ ಯಶಸ್ಸಿಗೆ ಮೂಲ ಕಾರಣಕರ್ತರಲ್ಲಿ ಒಬ್ಬರಾದ ಸಂಗೀತ ನಿರ್ದೇಶಕ ಎಸ್​ಎಸ್ ತಮನ್​ಗೆ ದುಬಾರಿ ಉಡುಗೊರೆ ನೀಡಿದ್ದಾರೆ. ಸಂಗೀತ ನಿರ್ದೇಶಕ ಎಸ್​ಎಸ್ ತಮನ್​ಗೆ ಐಶಾರಾಮಿ ಪೋರ್ಶೆ ಕಾರನ್ನು ನಂದಮೂರಿ ಬಾಲಕೃಷ್ಣ ಉಡುಗೊರೆಯಾಗಿ ನೀಡಿದ್ದಾರೆ. ಎಸ್​ಎಸ್ ತಮನ್​, ಕಾರುಗಳ ಬಗ್ಗೆ ಕ್ರೇಜ್ ಉಳ್ಳ ವ್ಯಕ್ತಿ. ಇದೇ ಕಾರಣಕ್ಕೆ ನಂದಮೂರಿ ಬಾಲಕೃಷ್ಣ ಇದೀಗ ಎಸ್​ಎಸ್ ತಮನ್​ಗೆ ಪೋರ್ಶೆ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಕಾರಿನ ಬೆಲೆ…

Read More

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಜೈಲು ಸೇರಿದದ್ದ ನಟ ದರ್ಶನ್‌ ಜಾಮೀನಿನ ಮೇಲೆ ಹೊರ ಬಂದಿದ್ದು ನಿಧಾನಕ್ಕೆ ಸಾಮಾನ್ಯ ಜೀವನ ಶೈಲಿಗೆ ಮರಳುತ್ತಿದ್ದಾರೆ. ಕುಟುಂಬ ಸದಸ್ಯರ ಜೊತೆ ಹಬ್ಬಗಳಲ್ಲಿ ಭಾಗಿಯಾಗುತ್ತಿರುವ ನಟ ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಸಿಂಪಲ್‌ ಇದೀಗ ತಮ್ಮ ಅಭಿಮಾನಿಗಳು ಮಾಡಿರುವ ಸಾಮಾಜಿಕ ಕಾರ್ಯದ ಚಿತ್ರಗಳನ್ನು ಹಂಚಿಕೊಂಡು ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ತಮ್ಮ ಅಭಿಮಾನಿಗಳು ಮಾಡಿರುವ ಸಮಾಜ ಸೇವೆಯ ಹಲವು ಚಿತ್ರಗಳನ್ನು ನಟ ದರ್ಶನ್ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಎಲ್ಲ ಚಿತ್ರಕ್ಕೂ ‘ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಹೃದಯಪೂರ್ವಕ ಧನ್ಯವಾದಗಳು’ ಎಂದು ಕ್ಯಾಪ್ಷನ್ ನೀಡಿದ್ದಾರೆ. ಅಭಿಮಾನಿಗಳು ಮಾಡಿರುವ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ, ಆಸ್ಪತ್ರೆಯಲ್ಲಿ ಆರೋಗ್ಯ ಕಿಟ್ ವಿತರಣೆ, ಅನಾಥಾಶ್ರಮ, ವೃದ್ಧಾಶ್ರಮಗಳಲ್ಲಿ ಭೋಜನ ವ್ಯವಸ್ಥೆ, ಉಚಿತ ಅನ್ನದಾನ, ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರಗಳ ಫೋಟೊಗಳನ್ನು ನಟ ದರ್ಶನ್ ಹಂಚಿಕೊಂಡಿದ್ದಾರೆ. ಸುಮಾರು 18 ವಿವಿಧ ಕಾರ್ಯಕ್ರಮಗಳನ್ನು ದರ್ಶನ್ ಹಂಚಿಕೊಂಡಿದ್ದಾರೆ.…

Read More

ದೇಶದಲ್ಲಿ ಆಧಾರ್ ಕಾರ್ಡ್  ಅತೀಮುಖ್ಯ ದಾಖಲೆಗಳಲ್ಲಿ ಒಂದಾಗಿದೆ. ಎಲ್ಲ ಪ್ರಮುಖ ದಾಖಲೆಗಳಿಗೂ ಆಧಾರ್ ಕಾರ್ಡ್ ಲಿಂಕ್ ಮಾಡೋದು ಅಗತ್ಯ. ಈ ನಡುವೆ 10 ವರ್ಷಗಳಿಗಿಂತ ಹಳೆಯದಾದ ಆಧಾರ್ ಕಾರ್ಡ್ ಅಪ್ಡೇಟ್ ಮಾಡೋದು ಕಡ್ಡಾಯ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತಿಳಿಸಿದೆ ಕೂಡ. ಅಲ್ಲದೆ, ಯಾವುದೇ ಶುಲ್ಕವಿಲ್ಲದೆ ಆನ್ ಲೈನ್ ಮೂಲಕ ಆಧಾರ್ ಕಾರ್ಡ್ ನಲ್ಲಿ ಮಾಹಿತಿಗಳನ್ನು ಅಪ್ಡೇಟ್ ಮಾಡಲು ಯುಐಡಿಎಐ ಅವಕಾಶ ಕಲ್ಪಿಸಿದೆ. ಈ ನವೀಕರಣವು ಸಂಪೂರ್ಣವಾಗಿ ಉಚಿತವಾಗಿದೆ. ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ದಯವಿಟ್ಟು ಗಮನಿಸಿ, ಗಡುವಿನ ನಂತರ ನವೀಕರಣಗಳಿಗೆ 50 ರೂ. ಶುಲ್ಕವಿರುತ್ತದೆ. ಆಧಾರ್ ಕಾರ್ಡ್ ಉಚಿತ ನವೀಕರಣದ ಗಡುವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆಧಾರ್ ಕಾರ್ಡ್ ಉಚಿತ ನವೀಕರಣಕ್ಕೆ ಕೊನೆಯ ದಿನಾಂಕ ಕಳೆದ ವರ್ಷ ಡಿಸೆಂಬರ್ 14 ಆಗಿತ್ತು. ಆದರೆ ನಂತರ ಕೇಂದ್ರವು ಮತ್ತೊಮ್ಮೆ ಗಡುವನ್ನು ವಿಸ್ತರಿಸಿತು. ಈ ಉಚಿತ ಆಧಾರ್ ನವೀಕರಣಕ್ಕೆ ಕೊನೆಯ ದಿನಾಂಕ ಈ ವರ್ಷ ಜೂನ್ 14 ಆಗಿದೆ.…

Read More