Author: Author AIN

ಟಾಲಿವುಡ್ ಪ್ರಿನ್ಸ್ ನಟ ಮಹೇಶ್ ಬಾಬು ಮಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದ್ದಾರೆ. ಇದನ್ನೇ ಬಳಸಿಕೊಂಡಿರೋ ವಂಚಕರು ವಂಚನೆಗೆ ಇಳಿದಿದ್ದಾರೆ. ಮಹೇಶ್ ಬಾಬು ಅವರ ತಂಡ ಈಗಾಗಲೇ ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ, ಸಿತಾರಾ ಅವರ ತಾಯಿ, ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಈ ವಂಚನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಸಂದೇಶವನ್ನು ಸಹ ನೀಡಿದ್ದಾರೆ. ವ್ಯಕ್ತಿಯೋರ್ವ ಸಿತಾರಾ ಗಟ್ಟಿಮನೇನಿಯ ಚಿತ್ರ, ವಿಡಿಯೋ ಹಾಗೂ ಹೆಸರು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಕೆಲವು ಲಿಂಕ್​ಗಳನ್ನು ಹಂಚಿಕೊಳ್ಳುತ್ತಿದ್ದಾನೆ. ಅಲ್ಲದೆ ಬಂಡವಾಳ ಹೂಡಿಕೆ ಯೋಜನೆಗಳ ಮಾರಾಟ, ಲೋನ್ ಕೊಡಿಸುವುದಾಗಿ ಹೇಳಿ ಲಿಂಕ್ ಕಳಿಸುವುದು, ಷೇರು ಮಾರುಕಟ್ಟೆಗೆ ಸಂಬಂಧಿಸಿದ ಹೂಡಿಕೆ ಐಡಿಯಾಗಳನ್ನು ಕೊಡುವುದಾಗಿ ಹೇಳಿಕೊಂಡು ಹಲವರನ್ನು ಸಂಪರ್ಕ ಮಾಡಿದ್ದಾನೆ. ಸದ್ಯ ಪೊಲೀಸರು ವಂಚನೆ ಎಸಗಿದ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಜನರು ಸಾಮಾಜಿಕ ಜಾಲತಾಣದಲ್ಲಿ ತಮಗೆ ಬಂದ ಹೂಡಿಕೆ ಮಾಹಿತಿಯನ್ನು ನಿಜವೆಂದು ನಂಬುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡಿಕೊಳ್ಳಿ…

Read More

ಇಸ್ಲಾಮಾಬಾದ್‌: ಫೆಬ್ರುವರಿ 8ರಂದು ನಡೆದ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಶ್ನಿಸಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಇಸ್ಲಾಮಾಬಾದ್‌, ಲಾಹೋರ್, ಸಿಂಧ್‌ ಹೈಕೋರ್ಟ್‌ಗಳಲ್ಲಿ ಅರ್ಜಿ ಸಲ್ಲಿಸಿದ್ದಾರೆ. ರಾತ್ರೋರಾತ್ರಿ ಫಲಿತಾಂಶ ತಿರುಚಿದ್ದಲ್ಲದೆ, ಕ್ಷೇತ್ರದ ಮತ ಎಣಿಕೆ ವೇಳೆ ಪ್ರಕ್ರಿಯೆಗಳನ್ನು ಪಾಲನೆ ಮಾಡಿಲ್ಲ ಎಂದು ಅರ್ಜಿಗಳಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಸ್ಲಾಮಾಬಾದ್‌ ಹೈಕೋರ್ಟ್‌ನಲ್ಲಿ ಎರಡು, ಸಿಂಧ್‌ ಹೈಕೋರ್ಟ್‌ನಲ್ಲಿ ಮೂರು ಹಾಗೂ ಲಾಹೋರ್ ಹೈಕೋರ್ಟ್‌ನಲ್ಲಿ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಲಾಹೋರ್‌ ಪ್ರಾಂತ್ಯದ ಕ್ಷೇತ್ರಗಳಲ್ಲಿ ಪಿಎಂಎಲ್‌-ಎನ್‌ ಮುಖ್ಯಸ್ಥ ನವಾಜ್ ಷರೀಫ್‌ ಮತ್ತು ಅವರ ಪುತ್ರಿ ಮರಿಯಂ ನವಾಜ್‌ ಅವರು ಗೆಲುವು ಸಾಧಿಸಿದ್ದಾರೆಂದು ಘೋಷಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಪಾಕಿಸ್ತಾನ ನ್ಯಾಷನಲ್ ಅಸೆಂಬ್ಲಿಯ 265 ಕ್ಷೇತ್ರಗಳ ಪೈಕಿ 259 ಸ್ಥಾನಗಳ ಫಲಿತಾಂಶವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು 102 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನ್‌ ಮುಸ್ಲಿಂ ಲೀಗ್‌-ನವಾಜ್‌ (ಪಿಎಂಎಲ್‌-ಎನ್‌) 74, ಪಾಕಿಸ್ತಾನ್‌…

Read More

ಕೈರೋ: ಅಕ್ಟೋಬರ್ 7ರಿಂದ ಇದುವರೆಗು ಗಾಜಾದ ಮೇಲೆ ಇಸ್ರೇಲ್‌ ಸೇನೆ ನಡೆಸಿದ್ದು ದಾಳಿಯಲ್ಲಿ ಒಟ್ಟು 28,176 ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ವರದಿ ನೀಡಿದೆ. ದಾಳಿಯಲ್ಲಿ 67,784ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವಾಲಯ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 112 ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದು, 173 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಗಾಜಾದ ನಾಗರಿಕರು, ಹಮಾಸ್ ಬಂಡುಕೋರರು ಸೇರಿದ್ದಾರೆ ಎನ್ನಲಾಗಿದೆ. ತನ್ನ ಶತ್ರುಗಳ ಮೇಲೆ ಹಮಾಸ್ ಹಾರಿಸಿದ ರಾಕೆಟ್‌ ಆಕಸ್ಮಿಕವಾಗಿ ಗಾಜಾದಲ್ಲಿ ಸ್ಪೋಟಿಸಿಯೂ ಕೆಲವು ಸಾವುಗಳು ಸಂಭವಿಸಿವೆ. ಇಸ್ರೇಲ್‌ ಸೇನೆ ಪ್ರಕಾರ, ದೇಶದೊಳಗೆ ಸುಮಾರು 1 ಸಾವಿರ ಹಮಾಸ್ ಬಂಡುಕೋರರನ್ನು ಸದೆಬಡಿದಿದ್ದು, ಗಾಜಾದೊಳಗೆ ಸುಮಾರು 10 ಸಾವಿರ ಬಂಡುಕೋರರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Read More

ಇಸ್ಲಾಮಾಬಾದ್: ಚುನಾವಣೆಯಲ್ಲಿ ಇವಿಎಂ ಬಳಸಿದ್ದರೆ ಪಾಕಿಸ್ತಾನ ಚುನಾವಣಾ ಫಲಿತಾಂಶ ಬರುವುದು ಇಷ್ಟು ತಡವಾಗುತ್ತಿರಲಿಲ್ಲ ಎಂದು ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಹತಾಶೆ ವ್ಯಕ್ತಪಡಿಸಿದ್ದಾರೆ. ಆಯೋಗದ ಉನ್ನತ ಹಕ್ಕುಗಳ ಹೊರತಾಗಿಯೂ, ಪಾಕಿಸ್ತಾನದ ಚುನಾವಣಾ ಆಯೋಗದ ಹೊಸ ಚುನಾವಣಾ ನಿರ್ವಹಣಾ ವ್ಯವಸ್ಥೆ ವಿಫಲವಾಗಿದೆ ಎಂದು ಅಲ್ವಿ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅಧ್ಯಕ್ಷ ಅಲ್ವಿ ಅವರು, ಇಂದು ಇವಿಎಂಗಳು ಇದ್ದಿದ್ದರೆ, ನನ್ನ ಪ್ರೀತಿಯ ಪಾಕಿಸ್ತಾನ ಈ ಬಿಕ್ಕಟ್ಟಿನಿಂದ ಪಾರಾಗುತ್ತಿತ್ತು. ಅಧ್ಯಕ್ಷ ಸ್ಥಾನದಲ್ಲೇ 50 ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ನಂತರ ಇವಿಎಂ ಬಳಸದಿರಲು ತೀರ್ಮಾನಿಸಲಾಯಿತು. ಇವಿಎಂಗಳಿಗಾಗಿ ನಮ್ಮ ಸುದೀರ್ಘ ಹೋರಾಟವನ್ನು ನೆನಪಿಸಿಕೊಳ್ಳಿ. ಇವಿಎಂ ಕೈಯಿಂದ ಪ್ರತ್ಯೇಕವಾಗಿ ಎಣಿಕೆ ಮಾಡಬಹುದಾದ ಕಾಗದದ ಮತಪತ್ರಗಳನ್ನು ಹೊಂದಿತ್ತು (ಇಂದು ಇದನ್ನು ಮಾಡಲಾಗುತ್ತದೆ) ಆದರೆ ಇದು ಪ್ರತಿ ಮತದ ಬಟನ್ ಒತ್ತಿದ ಸರಳ ಎಲೆಕ್ಟ್ರಾನಿಕ್ ಕ್ಯಾಲ್ಕುಲೇಟರ್ ಅನ್ನು ಸಹ ಹೊಂದಿದೆ ಎಂದು ಅವರು ಹೇಳಿದರು. ಯಂತ್ರಗಳನ್ನು ಬಳಸಿದರೆ ಮತದಾನ ಮುಗಿದ ಐದು ನಿಮಿಷಗಳಲ್ಲಿ ಪ್ರತಿ…

Read More

ಆರ್ ಆರ್ ಆರ್ ಸಿನಿಮಾ ಸೂಪರ್ ಹಿಟ್ ಆದ  ಬಳಿಕ ನಟ ರಾಮ್ ಚರಣ್ ಗೆ ಸಾಕಷ್ಟು ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಇದುವರೆಗೂ ಟಾಲಿವುಡ್ ನಲ್ಲಿ ಸಖತ್ ಸದ್ದು ಮಾಡ್ತಿದ್ದ ಹೀರೋ ಇದೀಗ ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಚಿತ್ರಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವೇಳೆ ರಾಮ್ ಚರಣ್ ಬಾಲಿವುಡ್‌ನ ಬಿಗ್ ಪ್ರಾಜೆಕ್ಟ್‌ವೊಂದನ್ನು ಒಪ್ಪಿಕೊಂಡಿದ್ದಾರೆ. ಬಾಲಿವುಡ್ ಚಿತ್ರರಂಗದಲ್ಲಿ ಸೌತ್ ನಟ ನಟಿಯರಿಗೆ ಮಣೆ ಹಾಕಲಾಗುತ್ತಿದೆ. ಈಗಾಗ್ಲೆ ಸಾಕಷ್ಟು ಸೌತ್ ಕಲಾವಿದರು ಬಾಲಿವುಡ್ ಚಿತ್ರರಂಗದಲ್ಲಿ ಮಿಂಚು ಹರಿಸಿದ್ದಾರೆ.ಇದೀಗ ರಾಮ್ ಚರಣ್ ಕೂಡ ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ನಿರ್ದೇಶಕ ಸಂಜಯ್ ಲೀಲಾ ಬನ್ಸಲಿ ರಾಮ್ ಚರಣ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಅಮಿಶ್ ಅವರ ‘ದಿ ಲೆಜೆಂಡ್ ಆಫ್ ಸುಹೇಲ್ದೇವ್’ ಪುಸ್ತಕವನ್ನು ಆಧರಿಸಿ ಸಂಜಯ್ ಲೀಲಾ ಬನ್ಸಾಲಿ ಸಿನಿಮಾ ಮಾಡಲು ಮುಂದಾಗಿದ್ದಾರಂತೆ. ಈ ಕಥೆಯ ನಾಯಕನಾಗಿ ರಾಮ್ ಚರಣ್ ಕಾಣಿಸಿಕೊಳ್ತಿದ್ದಾರೆ. ಅದಕ್ಕಾಗಿ ಈಗಾಗಲೇ ಮುಂಬೈನಲ್ಲಿ ಬನ್ಸಾಲಿ ಅವರನ್ನು ರಾಮ್…

Read More

ಖಾಸಗಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಬೃಂದಾವನ ಧಾರವಾಹಿ ಸಖತ್ ಸದ್ದು ಮಾಡುತ್ತಿದೆ. ಕೂಡ ಕುಟುಂಬದ ಕಥೆಯನ್ನು ಮನೆ ಮಂದಿ ಮೆಚ್ಚಿಕೊಂಡಿದ್ದು ಧಾರವಾಹಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೃಂದಾವನ ಧಾರವಾಹಿಯನ್ನು ನಾಯಕ ಆಕಾಶ್ ಪಾತ್ರಧಾರಿಯಾಗಿ ನಟಿಸುತ್ತಿರುವ ವರುಣ್ ಆರಾಧ್ಯ ನಟನೆಯನ್ನು ಜನ ಮೆಚ್ಚಿಕೊಂಡಿದ್ದಾರೆ. ಬೃಂದಾವನ ಧಾರವಾಹಿಗೂ ಬರುವ ಮುನ್ನವೇ ವರಣ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಫೇಮಸ್ ಆಗಿದ್ದರು. ಸಾಮಾಜಿಕ ಜಾಲಾ ತಾಣದಲ್ಲಿ ರೀಲ್ಸ್ ಗಳನ್ನು ಮಾಡುತ್ತಲೇ ಖ್ಯಾತಿ ಘಳಿಸಿದ್ದ ವರುಣ್ ಪ್ರೇಯಸಿ ವರ್ಷಾ ಕಾವೇರಿ ಜೊತೆ ರೀಲ್ಸ್ ಮಾಡಿ ಮತ್ತಷ್ಟು ಖ್ಯಾತಿ ಘಳಿಸಿದರು. ಸಾಕಷ್ಟು ಸದ್ದು ಮಾಡುತ್ತಿರುವಾಗ್ಲೆ ವರುಣ್ ಹಾಗೂ ವರ್ಷ ಮಧ್ಯೆ ಬಿರುಕು ಮೂಡಿ ಇಬ್ಬರು ದೂರ ದೂರವಾದರು. ಇಬ್ಬರು ಸಾಮಾಜಿಕ ಜಾಲಾ ತಾಣದಲ್ಲಿ ದೂರವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಆದರೆ ದೂರವಾಗಲು ಕಾರಣ ಮಾತ್ರ ತಿಳಿಸಿರಲಿಲ್ಲ. ಇದೀಗ ವರುಣ್ ಹಾಗೂ ವರ್ಷ ದೂರವಾಗಿರುವ ಕುರಿತು ಸ್ವತಃ ವರುಣ್ ಆರಾಧ್ಯ ಸ್ಪಷ್ಟನೆ ನೀಡಿದ್ದಾರೆ. ವರುಣ್ ಹಾಗೂ ವರ್ಷ ಇಬ್ಬರು ಬಿಗ್ ಬಾಸ್…

Read More

ವಾಷಿಂಗ್ಟನ್ : ಪಾಕಿಸ್ತಾನದಲ್ಲಿ ಫೆಬ್ರವರಿ 8ರಂದು ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ವ್ಯಾಪಕ ಹಿಂಸಾಚಾರ, ಅಕ್ರಮ ನಡೆದಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅಮೆರಿಕ, ಬ್ರಿಟನ್ ಮತ್ತು ಯುರೋಪಿಯನ್ ಚುನಾವಣಾ ಪ್ರಕ್ರಿಯೆಯ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿವೆ. ಮಾಜಿ ಪ್ರಧಾನಿಗಳಾದ ನವಾಝ್ ಷರೀಫ್ ಅವರ ಪಿಎಂಎಲ್-ಎನ್ ಪಕ್ಷ ಹಾಗೂ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್(ಪಿಟಿಐ) ಪಕ್ಷದ ಬೆಂಬಲಿತರ ನಡುವೆ ನಿಕಟ ಸ್ಫರ್ಧೆ ನಡೆದಿದ್ದು ಎರಡೂ ಪಕ್ಷಗಳು ಚುನಾವಣೆಯಲ್ಲಿ ಗೆಲುವು ತಮ್ಮದೇ ಎಂದು ಘೋಷಿಸಿವೆ. ರಾಷ್ಟ್ರೀಯ ಅಸೆಂಬ್ಲಿಯ 265 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಸರಳ ಬಹುಮತಕ್ಕೆ 133 ಸ್ಥಾನಗಳ ಅಗತ್ಯವಿದೆ. ಚುನಾವಣೆಯಲ್ಲಿ ಹಸ್ತಕ್ಷೇಪ, ಅಕ್ರಮ, ವಂಚನೆ, ಮತದಾರರನ್ನು ಬೆದರಿಸಿರುವುದು, ಕಾರ್ಯಕರ್ತರ ಬಂಧನ, ಪ್ರಮುಖ ಮುಖಂಡರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಿರುವುದು, ಮತ ಎಣಿಕೆಯಲ್ಲಿ ಅಕ್ರಮ ಮುಂತಾದ ಆರೋಪಗಳ ಬಗ್ಗೆ ಸಂಪೂರ್ಣ ತನಿಖೆ ನಡೆಯುವ ಅಗತ್ಯವಿದೆ ಎಂದು ಅಮೆರಿಕ ಹಾಗೂ ಯುರೋಪಿಯನ್ ಯೂನಿಯನ್ ಆಗ್ರಹಿಸಿದೆ. https://ainlivenews.com/with-imran-khan-backed-independents-gaining-majority-pakistans-powerful-army-calls-for-a-unified-government/ ವಾಕ್‍ಸ್ವಾತಂತ್ರ್ಯ, ಸಭೆ ಸೇರುವ ಸ್ವಾತಂತ್ರ್ಯ, ಇಂಟರ್‍ನೆಟ್ ಸಂಪರ್ಕ ನಿರ್ಬಂಧಿಸಿರುವುದು,…

Read More

ಕಾಂತಾರ ಸಿನಿಮಾದ ಬಳಿಕ ತುಳು ನಾಡಿನ ದೈವಾರಾಧನೆ ಕುರಿತು ಸಾಕಷ್ಟು ಸುದ್ದಿಯಾಗಿದೆ. ಆದರೆ ಇದೀಗ ‘ಕಾವೇರಿ ಕನ್ನಡ ಮೀಡಿಯಂ’ ಧಾರಾವಾಹಿಯಲ್ಲಿ ದೈವಾರಾಧನೆ ದೃಶ್ಯಗಳನ್ನು ಪ್ರದರ್ಶಿಸಿರುವ ವಿಚಾರವಾಗಿ ಮಂಗಳೂರು, ಪಂಜೇಶ್ವರಗಳಲ್ಲಿ ಕೆಲವರು ಧಾರಾವಾಹಿ ವಿರುದ್ಧ ದೂರು ನೀಡಿದ್ದಾರೆ. ದೈವಾರಾಧನೆಯನ್ನು ಹಣ ಮಾಡುವ ದಂಧೆಯಾಗಿ ಬಳಸಿಕೊಳ್ಳಲಾಗುತ್ತಿದೆ. ಧಾರಾವಾಹಿ, ಸಿನಿಮಾಗಳಲ್ಲಿ ತಮ್ಮ ಆಚರಣೆಗಳ ಅನುಕರಣೆ ಮಾಡುತ್ತಿರುವುದು ತುಳು ನಾಡಿನ ಜನತೆಯ ಭಾವನೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೈವದ ದೃಶ್ಯಗಳನ್ನು ಧಾರಾವಾಹಿಯಿಂದ ತೆಗೆದುಹಾಕಬೇಕು, ದೈವಾರಾಧಕರ ಭಾವನೆಗೆ ಧಕ್ಕೆ ತಂದಿರುವ ಧಾರಾವಾಹಿಯ ತಂಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗಿದೆ. ‘ಕಾವೇರಿ ಕನ್ನಡ ಮೀಡಿಯಂ’ ಧಾರಾವಾಹಿಯನ್ನು ಪ್ರೀತಮ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. ದೈವಾರಾಧನೆಯ ದೃಶ್ಯವನ್ನು ಚಿತ್ರೀಕರಿಸಿರುವುದರ ಕುರಿತು ಪ್ರತಿಕ್ರಿಯಿಸಿರುವ ನಿರ್ದೇಶಕ ಪ್ರೀತಮ್ ಶೆಟ್ಟಿ, ‘2019 ಪಿಂಗಾರ ಸಿನಿಮಾನ ನಿರ್ದೆಶನ ಮಾಡಿದ್ದೇ ಅದು ಕಂಪ್ಲೀಟ್ ಆಗಿ ದೈವಾರಾಧನೆ ಬಗ್ಗೆಯೇ ಮಾಡಿದ ಸಿನಿಮವಾಗಿತ್ತು. ಆ ಚಿತ್ರಕ್ಕೆ ನ್ಯಾಷನಲ್ ಅವಾರ್ಡ್ ಜೊತೆ ಸಾಕಷ್ಟು ಪ್ರಶಸ್ತಿಗಳನ್ನ ಪಡೆದಿದ್ದೇನೆ. 2016 ರಲ್ಲಿ ಮೀನಾಕ್ಷಿ ಮದುವೆ…

Read More

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ, ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಲಾಲ್ ಸಲಾಂ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಹೇಳಿಕೊಳ್ಳುವ ಮಟ್ಟಿಗೆ ಸದ್ದು ಮಾಡುತ್ತಿಲ್ಲ. ಮೊದಲ ದಿನವೇ ಚಿತ್ರದ ಕಲೆಕ್ಷನ್ ಸಪ್ಪೆಯಾಗಿದ್ದು ಈ ಮಧ್ಯೆ ರಜನಿ ಹೊಸ ಸಿನಿಮಾದ ಅಪ್ ಡೇಟ್ ನೀಡಿದ್ದಾರೆ. ಸದ್ಯ ರಜನಿಕಾಂತ್ ವೆಟ್ಟೈಯನ್ ಚಿತ್ರದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದು ಈ ಚಿತ್ರದ ಮಾಹಿತಿಯನ್ನು ರಜನಿಕಾಂತ್ ಹಂಚಿಕೊಂಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ರಜನಿಕಾಂತ್ ಲಾಲ್ ಸಲಾಂ ಚಿತ್ರಕ್ಕೆ ‘ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಚಿತ್ರತಂಡದವರು ಹೇಳಿದ್ದಾರೆ. ಇಂಥ ಸಿನಿಮಾವನ್ನು ನಿರ್ಮಾಣ ಮಾಡಿದ ಲೈಕಾ ಪ್ರೊಡಕ್ಷನ್ಸ್​ ಸಂಸ್ಥೆ ಹಾಗೂ ನಿರ್ದೇಶನ ಮಾಡಿದ ಐಶ್ವರ್ಯಾಗೆ ಧನ್ಯವಾದಗಳು’ ಎಂದಿದ್ದಾರೆ. ‘ಲಾಲ್​ ಸಲಾಂ’ ಸಿನಿಮಾ ನಿರ್ಮಾಣ ಮಾಡಿರುವ ‘ಲೈಕಾ ಪ್ರೊಡಕ್ಷನ್ಸ್’ ಸಂಸ್ಥೆಯೇ ‘ವೆಟ್ಟೈಯನ್​’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ‘ಈ ಸಿನಿಮಾ ಶೂಟಿಂಗ್ ಶೇಕಡ 80ರಷ್ಟು ​ಮುಕ್ತಾಯ ಆಗಿದೆ. ಇನ್ನುಳಿದ ಶೇಕಡ 20ರಷ್ಟು ಕೆಲಸಗಳು ಭರದಿಂದ ಸಾಗುತ್ತಿವೆ’ ಎಂದು ರಜನಿಕಾಂತ್​ ಮಾಹಿತಿ ನೀಡಿದ್ದಾರೆ.

Read More

ನಟ ಡಾರ್ಲಿಂಗ್ ಕೃಷ್ಣ ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೃಷ್ಣ ಆರ್ ಚಂದ್ರು ನಿರ್ದೇಶನದ ಫಾದರ್ ಚಿತ್ರಕ್ಕೆ  ಬಣ್ಣ ಹಚ್ಚಲಿದ್ದಾರೆ. ಈ ತಿಂಗಳ ಕೊನೆಯಲ್ಲಿ ಸಿನಿಮಾ ಆರಂಭವಾಗಲಿದ್ದು ಚಿತ್ರಕ್ಕೆ ಫಾದರ್ ಎಂದು ನಾಮಕರಣ ಮಾಡಲಾಗಿದೆ. ಆರ್ ಚಂದ್ರು ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ಫಾದರ್ ಸಿನಿಮಾದಲ್ಲಿ ದೊಡ್ಡ ತಾರಾ ಬಳಗವೇ ಇದೆ. ಇದೀಗ ಚಿತ್ರತಂಡಕ್ಕೆ ಮತ್ತೋರ್ವ ಖ್ಯಾತ ನಟನ ಸೇರ್ಪಡೆಯಾಗಿದೆ. ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣನ ತಂದೆಯ ಪಾತ್ರದಲ್ಲಿ ನಟ ಪ್ರಕಾಶ್ ರೈ ಬಣ್ಣ ಹಚ್ಚಲಿದ್ದಾರೆ. ಫಾದರ್ ಡಾರ್ಲಿಂಗ್ ಕೃಷ್ಣ ಮತ್ತು ಪ್ರಕಾಶ್ ರೈ ಕಾಂಬಿನೇಷನ್ ನ ಮೊದಲ. ಈ ಸಿನಿಮಾ ಪ್ಯಾನ್ ಇಂಡಿಯಾ ಪರಿಕಲ್ಪನೆಯಲ್ಲಿ ಮೂಡಿ ಬರಲಿದೆ.

Read More