ಭಾರತವನ್ನು ಹಸಿರು ಆರ್ಥಿಕತೆಯನ್ನಾಗಿ ಮಾಡುವ ಉದ್ದೇಶದಿಂದ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹೈಬ್ರಿಡ್ ವಾಹನಗಳ ಮೇಲಿನ ಜಿಎಸ್ಟಿ ಯನ್ನು ಕಡಿತಗೊಳಿಸಲು ಮುಂದಾಗಿದ್ದಾರೆ ಜೊತೆಗೆ 36 ಕೋಟಿಗೂ ಹೆಚ್ಚು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ದೇಶವನ್ನು ಮುಕ್ತ ಗೊಳಿಸಲು ಮುಂದಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ತೊಡೆದುಹಾಕಲು ಭಾರತಕ್ಕೆ ಸಾಧ್ಯವೇ ಎಂದು ಕೇಳಿದಾಗ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಅವರು “ನೂರು ಪ್ರತಿಶತ” ಎಂದು ಹೇಳಿದ್ದಾರೆ. “ಇದು ಕಷ್ಟ ಆದರೆ ಅಸಾಧ್ಯವಲ್ಲ. ಇದು ನನ್ನ ದೃಷ್ಟಿಕೋನ” ಎಂದು ಗಡ್ಕರಿ ಸಂದರ್ಶನದಲ್ಲಿ ಹೇಳಿದ್ದಾರೆ. ಭಾರತವು ಇಂಧನ ಆಮದಿಗಾಗಿ 16 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ ತಿಳಿಸಿದ್ದಾರೆ. ಇದೇ ವೇಳೇ ಅವರು ಮಾತನಾಡಿ, ಈ ಹಣವನ್ನು ರೈತರ ಜೀವನವನ್ನು ಸುಧಾರಿಸಲು ಬಳಸಲಾಗುವುದು, ಗ್ರಾಮಗಳು ಸಮೃದ್ಧವಾಗುತ್ತವೆ ಮತ್ತು ಯುವಕರಿಗೆ ಉದ್ಯೋಗ ಸಿಗುತ್ತದೆ ಎಂದು ಸಚಿವರು ಹೇಳಿದರು. ಹಸಿರು ಇಂಧನದ ಪ್ರತಿಪಾದಕರು ಸಹ ನಂಬುವ ಈ ಮಹತ್ವಾಕಾಂಕ್ಷೆಯ ಗುರಿಯನ್ನು ತಲುಪಲು ಗಡ್ಕರಿ…
Author: Author AIN
ರವಿಚಂದ್ರನ್ ನಟನೆಯ ದೃಶ್ಯ ಸಿನಿಮಾದಲ್ಲಿ ನಟಿಸಿದ್ದ ಮಲಯಾಳಂ ನಟಿ ನವ್ಯಾ ನಾಯರ್ ಹಲವು ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ನಟನೆ ಹಾಗೂ ಮುಗ್ದ ಮುಖದಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಘಳೀಸಿರೋ ನಟಿ ಇದೀಗ ಒಳ್ಳೆಯ ಕೆಲಸ ಮಾಡುವ ಮೂಲಕ ಅಭಿಮಾನಿಗಳ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ಆಗಾಗ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ತಾವು ಬಳಸಿದ ಸೀರೆಗಳನ್ನು ಮಾರಾಟ ಮಾಡಲು ನಟಿ ಮುಂದಾಗಿದ್ದಾರೆ. ತಾವು ಬಳಸಿದ ಸೀರೆಗಳನ್ನು ಮಾರಾಟ ಮಾಡುತ್ತಿರುವ ನಟಿ ಅದಕ್ಕಾಗಿ ಇನ್ಸ್ಟಾಗ್ರಾಂ ಖಾತೆಯನ್ನು ತೆರೆದಿದ್ದಾರೆ. ನಟಿ ಸೀರೆ ಮಾರಾಟಕ್ಕಿಳಿದ ಬಗ್ಗೆ ಭಾರೀ ಟೀಕೆಗಳು ಕೇಳಿ ಬಂದಿತ್ತು. ಎಷ್ಟೇ ದುಡ್ಡು ಮಾಡಿದ್ರೂ ಮತ್ತೆ ದುಡ್ಡು ಮಾಡ್ಬೇಕು ಅನ್ನೋ ಆಸೆ ಹೆಚ್ಚು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ರು. ಆದರೆ ಬಾಲಿವುಡ್ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ನಟಿಯರು ಈ ರೀತಿ ಸೀರೆ ಮಾಡ್ತಾರೆ ಎಂದು ಅಭಿಮಾನಿಗಳು ನವ್ಯಾಗೆ ಬೆಂಬಲ ನೀಡಿದ್ರು. ಕಾಂಜೀವರಂ ಸೀರೆಗಳು 4000-4600 ರೂ ಇದೆ. ನವ್ಯಾ…
ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಕುರಿತು ದಿನಕ್ಕೊಂದರಂತೆ ಸುದ್ದಿಗಳು ಕೇಳಿ ಬಂದಿತ್ತು. ಗೋವಾ, ಶ್ರೀಲಂಕಾ, ಲಂಡನ್ ಹೀಗೆ ನಾನಾ ಕಡೆ ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಡೆಯುತ್ತಿದೆ ಎಂದು ಸುದ್ದಿ ಹರಡಿತ್ತು. ಆದರೆ ಇದೀಗ ಏಪ್ರಿಲ್ 15ರಿಂದ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯಲಿದೆ ಎಂಬ ಸ್ಪಷ್ಟನೆ ಸಿಕ್ಕಿದೆ. ಏಪ್ರಿಲ್ 15ರಿಂದ ಬೆಂಗಳೂರಿನಿಂದಲೇ ಮೊದಲ ಹಂತದ ಚಿತ್ರೀಕರಣ ಶುರುವಾಗಲಿದೆಯಂತೆ. ಅದಕ್ಕಾಗಿ ಬೆಂಗಳೂರಿನ ಎಚ್.ಎಂ.ಟಿ ಫ್ಯಾಕ್ಟರಿಯಲ್ಲಿ ಬೃಹತ್ ಸೆಟ್ ಹಾಕಲಾಗಿದೆಯಂತೆ. ಮಾಲಿವುಡ್ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕಿ ಗೀತು ಮೋಹನ್ ದಾಸ್ ಜೊತೆ ಯಶ್ ನಟನೆಯ ಟಾಕ್ಸಿಕ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಯಶ್ ನಟನೆಯ 19ನೇ ಚಿತ್ರವಾಗಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ನಡುವೆ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ನಟಿಸ್ತಾರಾ? ಇಂಥದ್ದೊಂದು ಪ್ರಶ್ನೆ ಹಲವು ತಿಂಗಳ ಹಿಂದೆಯೇ ಶುರುವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಈ ಚಿತ್ರದಲ್ಲಿ ಕರೀನಾ ನಟಿಸುತ್ತಿದ್ದಾರಂತೆ. ಅದೂ ಯಶ್ ಅವರ ಸಹೋರಿಯ ಪಾತ್ರ ಎಂದು ಹೇಳಲಾಗುತ್ತಿದೆ.
ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಈ ಬಾರಿಯ ಚುನಾವಣೆಯ ಕುರಿತಂತೆ ಏಪ್ರಿಲ್ 3ರಂದು ಮಂಡ್ಯದಲ್ಲೇ ಮಹತ್ವದ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಟ ದರ್ಶನ್ ಕೂಡ ಹಾಜರಿರಲಿದ್ದಾರೆ ಎಂದಿದ್ದಾರೆ. ಮಹತ್ವದ ಘೋಷಣೆ ಕುರಿತಂತೆ ಸ್ವತಃ ಸುಮಲತಾ ಅವರೇ ತಮ್ಮ ಅಭಿಮಾನಿಗಳನ್ನು ಮತ್ತು ಹಿತೈಷಿಗಳನ್ನು ಉದ್ದೇಶಿಸಿ ಮಾತನಾಡಿದ್ದು, ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ. ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಏಪ್ರಿಲ್ 3ನೇ ತಾರೀಖು ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಮಂಡ್ಯದಲ್ಲಿ ಪ್ರಕಟಿಸುತ್ತೇನೆ. ತಮ್ಮ ಸಲಹೆ ಮತ್ತು…
ನಟಿ ಅನುಪಮಾ ಪರಮೇಶ್ವರನ್ ‘ಟಿಲ್ಲು ಸ್ಕ್ವೇರ್’ ಸಿನಿಮಾ ಮೂಲಕ ಸಾಕಷ್ಟ ಸುದ್ದಿಯಾಗಿದ್ದಾರೆ. ಚಿತ್ರದಲ್ಲಿ ಸಖತ್ ಬೋಲ್ಡ್ ಎಂಡ್ ಹಾಟ್ ಆಗಿ ಕಾಣಿಸಿಕೊಂಡಿದ್ದು ಲಿಪ್ ಲಾಕ್ ಮಾಡಿ ಸದ್ದು ಮಾಡಿದ್ದರು. ಇದೀಗ ಚಿತ್ರಕ್ಕಾಗಿ ನಟಿ ದುಬಾರಿ ಸಂಭಾವನೆ ಪಡೆದಿದ್ದಾರೆ ‘ಟಿಲ್ಲು ಸ್ಕ್ವೇರ್’ ಚಿತ್ರ ಈಗಾಗಲೇ ರಿಲೀಸ್ ಆಗಿದ್ದು ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದುವರೆಗೂ ಹೋಮ್ಲಿ ಲುಕ್ ನಲ್ಲಿ ಕಾಣಿಸಿಕೊಳ್ತಿದ್ದ ನಟಿ ಈಭಾರಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ನಟ ಸಿದ್ದು-ಅನುಪಮಾ ಲಿಪ್‌ಲಾಕ್ ಸೀನ್ ನೋಡಿ ಫ್ಯಾನ್ಸ್ ಬೆರಗಾಗಿದ್ದಾರೆ. ಈ ಪಾತ್ರದಲ್ಲಿ ನಟಿಸಲು ನಟಿ 2 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ‘ಟಿಲ್ಲು ಸ್ಕ್ವೇರ್’ ಸ್ವೀಕೆಲ್ ಸಿನಿಮಾವಾಗಿದ್ದು, ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ `ಡಿಜೆ ಟಿಲ್ಲು’ ಸಿನಿಮಾದ ಮುಂದುವರೆದ ಭಾಗವಾಗಿದೆ. ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ. ಮಾರ್ಚ್ 29ರಂದು ವಿಶ್ವದಾದ್ಯಂತ ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಿರ್ದೇಶಕ ಆರ್ ಚಂದ್ರು ಇತ್ತೀಚೆಗೆ ‘ಆರ್ ಸಿ ಸ್ಟುಡಿಯೋ’ ಆರಂಭಿಸಿ ಬ್ಯಾಕ್ ಟು ಬ್ಯಾಕ್ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಇದೀಗ ಆರನೇ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈ ಭಾರಿ ಶಿವರಾಜ್ ಕುಮಾರ್ ಜೊತೆ ಸಿನಿಮಾ ಘೋಷಿಸಿರುವ ಚಂದ್ರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. 2010ರಲ್ಲಿ ಶಿವರಾಜ್ಕುಮಾರ್ ನಟನೆಯ ‘ಮೈಲಾರಿ’ ಸಿನಿಮಾವನ್ನು ಆರ ಚಂದ್ರ ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಮುಹೂರ್ತ ನಡೆದು ಇಂದಿಗೆ (ಏಪ್ರಿಲ್ 1) 14 ವರ್ಷಗಳು ಕಳೆದಿವೆ. ಈ ಬಗ್ಗೆ ಆರ್ ಚಂದ್ರು ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಜೊತೆಗೆ ಅವರ ಜೊತೆ ಹೊಸ ಸಿನಿಮಾ ಘೋಷಿಸಿದ್ದಾರೆ. ‘ಕನ್ನಡದ ಸೂಪರ್ ಹಿಟ್ ಚಿತ್ರ ಮೈಲಾರಿ ಮುಹೂರ್ತಕ್ಕೆ 14 ವರ್ಷಗಳು ತುಂಬಿವೆ. ಈ ಶುಭ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್ಕುಮಾರ್ ಅವರ ಜೊತೆ ಹೊಸ ಚಿತ್ರ ಆರಂಭಿಸುತ್ತಿರುವುದು ಮತ್ತಷ್ಟು ಖುಷಿ ತಂದಿದೆ. ತಮ್ಮೆಲ್ಲರ ಆಶೀರ್ವಾದ ಇರಲಿ. ಧನ್ಯವಾದಗಳು, ಆರ್ ಸಿ ಸ್ಟುಡಿಯೋಸ್’ ಎಂದು ಅವರು…
ಬಾಲಿವುಡ್ನ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಪುತ್ರಿ ನಟಿ ಜಾನ್ವಿ ಕಪೂರ್ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ಬಳಿಕ ದಕ್ಷಿಣ ಭಾರತದ ಸಿನಿಮಾಗಳತ್ತ ಮುಖ ಮಾಡಿರುವ ಜಾನ್ವಿ ಲಕ್ಷಾಂತರ ಅಭಿಮಾನಿಗಳ ನೆಚ್ಚಿನ ನಟಿ. ಆದರೆ ಜಾನ್ವಿ ಮನಸ್ಸು ಗೆದ್ದಿರೋದು ಶಿಖರ್ ಪಹಾರಿಯಾ. ಇದೀಗ ಮಗಳ ಬಾಯ್ ಫ್ರೆಂಡ್ ಬಗ್ಗೆ ಬೋನಿ ಕಪೂರ್ ಪ್ರತಿಕ್ರಿಯೆ ನೀಡಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಬೋನಿ ಕಪೂರ್, ‘ನನಗೆ ಶಿಖರ್ ಅಂದರೆ ಪ್ರೀತಿ. ಜಾನ್ವಿ ಅವನ ಜೊತೆ ಕಾಣಿಸಿಕೊಳ್ಳದೇ ಇರುವಾಗಲೂ ನನಗೆ ಅವರ ಜೊತೆ ಒಳ್ಳೆಯ ಫ್ರೆಂಡ್ಶಿಪ್ ಇತ್ತು. ಅವರು ಎಂದಿಗೂ ನನ್ನ ಮಗಳನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ ಎಂದು ನನಗೆ ಅನಿಸಿತು. ಯಾವುದಾದರೂ ಸಹಾಯ ಬೇಕಾದರೆ ಅವರು ಯಾವಾಗಲೂ ಓಡಿ ಬರುತ್ತಾರೆ. ಅವರು ನನ್ನೊಂದಿಗೆ, ಜಾನ್ವಿ ಮತ್ತು ಅರ್ಜುನ್ ಅವರೊಂದಿಗೆ ಒಳ್ಳೆಯ ಸ್ನೇಹ ಹೊಂದಿದ್ದಾರೆ. ಹಾಗಾಗಿ ಅವರಂತಹ ವ್ಯಕ್ತಿ ನಮ್ಮ ಜೀವನದಲ್ಲಿ ಸಿಕ್ಕಿರುವುದು ನಮ್ಮ ಅದೃಷ್ಟ’ ಎಂದು ಹೇಳಿದ್ದಾರೆ. ಜಾನ್ವಿ ಕಪೂರ್ ಅವರು ಶಿಖರ್ ಜೊತೆಗಿನ…
ಉತ್ತರ ಸಿರಿಯಾದ ಶಾಪಿಂಗ್ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡಿದ್ದು ಪರಿಣಾಮ ಎಂಟು ಮೃತಪಟ್ಟು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲೆಪ್ಪೊ ಪ್ರಾಂತ್ಯದ ಅಜಾಜ್ನಲ್ಲಿ ಮಧ್ಯರಾತ್ರಿಯ ವೇಳೆ ಸ್ಫೋಟ ಸಂಭವಿಸಿದ್ದು. ಮುಸ್ಲಿಮರ ಪವಿತ್ರ ರಂಜಾನ್ ಉಪವಾಸದ ಸಮಯದಲ್ಲಿ ಜನ ಶಾಪಿಂಗ್ ಮಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಜನಪ್ರಿಯ ಮಾರುಕಟ್ಟೆಯ ಮಧ್ಯದಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಾಗ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಸಿರಿಯನ್ ಮಾನವ ಹಕ್ಕುಗಳ ವೀಕ್ಷಣಾಲಯ ತಿಳಿಸಿದೆ.
ಬ್ರಿಟನ್‌ನಲ್ಲಿ ಪ್ರಸಕ್ತ ಆಡಳಿತದಲ್ಲಿರುವ ಕನ್ಸರ್ವೇಟಿವ್ ಪಕ್ಷವು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಅನುಭವಿಸುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಜೊತೆಗೆ ಬ್ರಿಟನ್ ಪ್ರಧಾನಿ, ಇನ್ಪಿ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ ಉತ್ತರ ಯಾರ್ಕ್‌ಷೈರ್‌ನ ತಮ್ಮ ಸ್ವಕ್ಷೇತ್ರದಲ್ಲಿ ಗೆಲುವು ಸಾಧಿಸುವುದಕ್ಕೂ ಹೆಣಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಚುನಾವಣೆ ಪೂರ್ವ ಸಮೀಕ್ಷೆಯೊಂದು ಹೇಳಿದೆ. ಚುನಾವಣೆ ಪ್ರಚಾರ ಸಂಸ್ಥೆ ಸಿವಿಲ್ ಸೊಟೈಟಿಯು 15,029 ವ್ಯಕ್ತಿಗಳ ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆಯ ವರದಿ ನೀಡಿದೆ. ಅದರ ಪ್ರಕಾರ ಬ್ರಿಟನ್‌ನ ಆಡಳಿತಾರೂಢ ಪಕ್ಷ ಕನ್ಸರ್ವೇಟಿವ್‌ಗಿಂತ 19 ಪಾಯಿಂಟ್‌ಗಳಷ್ಟು ಹೆಚ್ಚು ಮತಗಳನ್ನು ವಿಪಕ್ಷ ಲೇಬರ್ ಪಕ್ಷ ಪಡೆದುಕೊಳ್ಳಲಿದೆ ಎಂದಿದೆ. ಈ ವರ್ಷಾಂತ್ಯಕ್ಕೆ ಬ್ರಿಟನ್‌ನಲ್ಲಿ ಸಾರ್ವಜನಿಕ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಹುಲಿಯೊಂದು ಪಂಜರದಿಂದ ತಪ್ಪಿಸಿಕೊಂಡು ಬಂದು ಇಬ್ಬರು ವ್ಯಕ್ತಿಗಳನ್ನು ಗಾಯಗೊಳಿಸಿರುವ ಘಟನೆ ಪಾಕಿಸ್ತಾನ ಪಂಜಾಬ್ ಪ್ರಾಂತ್ಯದ ಮುಲ್ತಾನ್ ಎಂಬಲ್ಲಿ ನಡೆದಿದೆ. ಹುಲಿಯನ್ನು ಅದರ ಮಾಲೀಕ ವಾಕಸ್ ಅಹ್ಮದ್ ಎನ್ನುವವರು ಲಾಹೋರ್‌ನಿಂದ ಮುಲ್ತಾನ್ ನ ಮೃಗಾಲಯಕ್ಕೆ ಸಾಗಿಸುತ್ತಿದ್ದರು. ಮೃಗಾಲಯದ ಹೊರ ವಲಯಲ್ಲಿದ್ದ ಗಾಡಿ ನಿಲ್ಲಿಸಿದ್ದ ವೇಳೆ ಪಂಜರದಲ್ಲಿದ್ದ ಹುಲಿ ಸರಳುಗಳನ್ನು ಮುರಿದು ಹೊರಗೆ ಬಂದಿತ್ತು. ಈ ವೇಳೆ ಹುಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪಂಜಾಬ್ ಪ್ರಾಂತ್ಯದ ವನ್ಯಜೀವಿ ಇಲಾಖೆಯ ನಿರ್ದೇಶಕ ಮುದಾಸರ್ ರಿಯಾಜ್ ಮಲೀಕ್ ತಿಳಿಸಿದ್ದಾರೆ ಹುಲಿ ಪಂಜರದಿಂದ ತಪ್ಪಿಸಿಕೊಂಡ ಸುದ್ದಿ ತಿಳಿದು ನಮ್ಮ ತಂಡ ಭಾರಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದೆ. ಅದನ್ನು ಮುಲ್ತಾನ್‌ನ ಮೃಗಾಲಯಕ್ಕೆ ಬಿಡಲಾಗುವುದು ಎಂದಿದ್ದು, ನಮ್ಮ ಇಲಾಖೆಗೆ ಮೊದಲೇ ಮಾಹಿತಿ ನೀಡದೇ ಹುಲಿಯನ್ನು ಸಾಗಿಸುತ್ತಿದ್ದ ಅದರ ಮಾಲೀಕನಿಗೆ ದಂಡ ವಿಧಿಸಲಾಗಿದೆ ಎಂದು ರಿಯಾಜ್ ಮಲೀಕ್ ತಿಳಿಸಿದ್ದಾರೆ.