ಪಾಕಿಸ್ತಾನದಲ್ಲಿ ಇಂದು ಮುಂಜಾನೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಭಾರತೀಯ ಕಾಲಮಾನದ ಪ್ರಕಾರ ಮುಂಜಾನೆ 2:57 ಕ್ಕೆ ಭೂಕಂಪ ಸಂಭವಿಸಿದ್ದು, ಅದರ ಆಳವನ್ನು 105 ಕಿ.ಮೀ ಎಂದು ಅಳೆಯಲಾಗಿದೆ. 5.5 ತೀವ್ರತೆಯ ಭೂಕಂಪವು 20-03-2024, 02:57:11 ಭಾರತೀಯ ಕಾಲಮಾನ, ಲಾಟ್: 29.74 ಮತ್ತು ಉದ್ದ: 65.93, ಆಳ: 105 ಕಿ.ಮೀ, ಸ್ಥಳ: ಪಾಕಿಸ್ತಾನ” ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಸಾಮಾಜಿಕ ಮಾಧ್ಯಮದಲ್ಲಿ ಬರೆದಕೊಂಡಿದೆ.
Author: Author AIN
ಸ್ಟಾರ್ ನಟಿ ಸಮಂತಾ ಸದ್ಯ ವರುಣ್ ಧವನ್ ಜೊತೆಗಿನ ‘ಹನಿ ಬನಿ’ ವೆಬ್ ಸರಣಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಸಮಂತಾ ನಟಿ ತಮನ್ನಾ ಭಾಟಿಯಾ ಬಾಯ್‌ಫ್ರೆಂಡ್ ವಿಜಯ್ ವರ್ಮಾ ಜೊತೆ ಕಾಣಿಸಿಕೊಂಡಿದ್ದಾರೆ. ಸಮಂತಾ ಹಾಗೂ ವಿಜಯ್ ವರ್ಮಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಟಿಟಿ ಕಾರ್ಯಕ್ರಮವೊಂದರಲ್ಲಿ ವಿಜಯ್ ವರ್ಮಾ ಜೊತೆ ಸಮಂತಾ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ವೈರಲ್ ಆಗಿರುವ ವಿಡಿಯೋವೊಂದರಲ್ಲಿ ವಿಜಯ್ ಜೊತೆ ಮಾತನಾಡುತ್ತಾ ನಗು ನಗುತ್ತಾ ಸಮಂತಾ ಬರುತ್ತಿದ್ದಾರೆ. ಸಾಮಾನ್ಯವಾಗಿ ಸಿನಿಮಾ ರಂಗದಲ್ಲಿ ಸೆಲೆಬ್ರಿಟಿಗಳು ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗೋದಿಲ್ಲ. ಇದೇ ಕಾರಣಕ್ಕೆ ಸ್ಟಾರ್ಸ್ ಗಳ ಕಾರ್ಯಕ್ರಮದಲ್ಲಿ ಮತ್ತೋರ್ವ ಸ್ಟಾರ್ಸ್ ಕಾಣಿಸೋದಿಲ್ಲ. ಆದರೆ ಈ ಮಾತನ್ನು ಸಮಂತಾ ತಮನ್ನಾ ಹುಸಿ ಮಾಡಿದ್ದಾರೆ. ಒಟಿಟಿ ಕಾರ್ಯಕ್ರಮದಲ್ಲಿ ಹಲವು ತಿಂಗಳುಗಳ ಬಳಿಕ ವಿಜಯ್ ಜೊತೆಯೇ ತಮನ್ನಾ ಅವರು ಸಮಂತಾರನ್ನು ಭೇಟಿಯಾಗಿದ್ದಾರೆ. ಇಬ್ಬರು ಖುಷಿಯಿಂದ ತಬ್ಬಿಕೊಂಡು ಫೋಟೋ ತೆಗೆದುಕೊಂಡಿದ್ದಾರೆ. ಅಸಲಿಗೆ ಆ ಫೋಟೋವನ್ನು ಕ್ಲಿಕ್ ಮಾಡಿದ್ದೇ ವಿಜಯ್ ವರ್ಮಾ.…
ರಕ್ಷಿತ್ ಶೆಟ್ಟಿ ನಟನೆಯ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಿರ್ದೇಶನ ಮಾಡಿದ್ದ ಸಚಿನ್ ರವಿ ಇದೀಗ ಬಾಲಿವುಡ್ ಸ್ಟಾರ್ ಶಾಹಿದ್ ಕಪೂರ್‌ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಈಗಾಗಲೇ ಟೈಟಲ್ ಇಡಲಾಗಿದ್ದು, ಮುಂಬೈನಲ್ಲಿ ನಡೆದ ಒಟಿಟಿ ಕಾರ್ಯಕ್ರಮದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ಸಚಿನ್ ರವಿ ಹಾಗೂ ಶಾಹಿದ್ ಕಪೂರ್ ಕಾಂಬಿನೇಷನ್ ನ ಸಿನಿಮಾಗೆ ‘ಅಶ್ವತ್ಥಾಮ: ದಿ ಸಾಗಾ ಕಂಟಿನ್ಯೂಸ್’ ಎಂಬ ಟೈಟಲ್ ಇಡಲಾಗಿದೆ. ಈ ಕಥೆಯಲ್ಲಿ ಅಶ್ವತ್ಥಾಮ ವರ್ತಮಾನದಲ್ಲಿರುವ ನಾಯಕ. ಅಮರತ್ವದ ಪರಿಕಲ್ಪನೆಯನ್ನು ಶೋಧಿಸುವ ಕೆಲಸ ಆತನದ್ದು. ಇಷ್ಟನ್ನಷ್ಟೇ ಹೇಳಬಲ್ಲೆ. ಆದರೆ ಈ ಚಿತ್ರ ಅದ್ಭುತ ಆ್ಯಕ್ಷನ್ ಇರುವ, ಮತ್ತು ಎಲ್ಲಾ ತಲೆಮಾರಿನ ವೀಕ್ಷಕರನ್ನೂ ಸೆಳೆಯಬಲ್ಲ ಚಿತ್ರವಾಗಲಿದೆ. ಅಶ್ವತ್ಥಾಮನಂತೆ ಅಮರತ್ವ ಹೊಂದಿರುವ ವ್ಯಕ್ತಿಗಳನ್ನು ಚಿತ್ರದಲ್ಲಿ ತರುವ ಪ್ರಯತ್ನವೂ ಇರಲಿದೆ. ಕಾಲ್ಪನಿಕ ಸನ್ನಿವೇಶನಗಳ ಅನ್ವೇಷಣೆ ಹಾಗೂ ಅದರ ಸಾಧ್ಯತೆ ಕುರಿತು ಕಥೆ ರಚಿಸಿ, ಸಾಧ್ಯವಾಗಿಸುವುದು ಚಿತ್ರ ನಿರ್ದೇಶನಕಾಗಿ ಸವಾಲಿನ ಕೆಲಸ. ನನ್ನ ಬಾಲ್ಯದಿಂದಲೂ ಅಶ್ವತ್ಥಾಮನ ಪಾತ್ರ ನನ್ನ ಮೇಲೆ ಬಹಳಷ್ಟು ಪ್ರಭಾವ…
ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜೆಂಟೀನಾದ ಟಾಪ್ ಫ್ಲೈಟ್ ಕ್ಲಬ್ ವೆಲೆಜ್ ಸಾರ್ಸ್ಫೀಲ್ಡ್ನ ನಾಲ್ವರು ಫುಟ್ಬಾಲ್ ಆಟಗಾರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಲ್ಕೀಪರ್ ಸೆಬಾಸ್ಟಿಯನ್ ಸೋಸಾ, ಡಿಫೆಂಡರ್ ಬ್ರೈನ್ ಕು-ಫ್ರು , ಮಿಡ್ಫೀಲ್ಡರ್ ಜೋಸ್ ಇಗ್ನಾಸಿಯೊ -ಪ್ರೊರೆಂಟಿನ್ ಮತ್ತು ಸ್ಟ್ರಜೈಕರ್ ಅಬಿಯೆಲ್ ಒಸೊರಿಯೊ ಎಂಬುವವರನ್ನು ಬಂಧಿಸಲಾಗಿದೆ. ಕಳೆದ ಮಾರ್ಚ್ 3 ರಂದು ಮಹಿಳೆಯೋರ್ವಳು ಆಟಗಾರನೊಂದಿಗೆ ರೂಮಿಗೆ ತೆರಳಿದ್ದಾಳೆ. ಈ ವೇಳೆ ಅಲ್ಲಿದ್ದ ಮೂವರು ಪುರುಷರು ಆಕೆಯನ್ನು ಅತ್ಯಾಚಾರ ಎಸಗಿದ್ದಾರೆ. ಸ್ಯಾನ್ ಮಿಗುಯೆಲ್ ಡಿ ಟುಕುಮಾನ್ನಲ್ಲಿ ಕೇಸ್ ಪ್ರಾಸಿಕ್ಯೂಟರ್ ಮರಿಯಾ ಯುಜೆನಿಯಾ ಪೊಸ್ಸೆ ಅವರ ಸೂಚನೆ ಮೇರೆಗೆ ಫುಟ್ಬಾಲ್ ಆಟಗಾರರನ್ನು ಬಂಧಿಸಲಾಗಿದೆ. 10 ರಾಷ್ಟ್ರೀಯ ಪ್ರಶಸ್ತಿಗಳು ಮತ್ತು 1994 ರ ಕೋಪಾ ಲಿಬರ್ಟಡೋರ್ಸ್ ಟ್ರೋಫಿ ಹೊಂದಿರುವ ಐತಿಹಾಸಿಕ ಕ್ಲಬ್ ವೆಲೆಜ್ , ಅವರು ಬಂಧಿಸಲ್ಪಟ್ಟ ನಂತರ ಎಲ್ಲಾ ನಾಲ್ಕು -ಫುಟ್ಬಾಲ್ ಆಟಗಾರರ ಒಪ್ಪಂದಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು. ಈ ಕ್ಲಬ್ ನಮ್ಮ ಸಂಸ್ಥೆಯ ತತ್ವಗಳು ಮತ್ತು ಮೌಲ್ಯಗಳಿಗೆ ಸ್ಪಷ್ಟವಾಗಿ…
ಮುಂಬರುವ 2025ರ ಆರ್ಥಿಕ ವರ್ಷಕ್ಕೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾಗಳ ಆರಂಭಿಕ ನೋಂದಣಿ ಅವಧಿಯು ಮಾರ್ಚ್ 22 ರಂದು ಮುಕ್ತಾಯಗೊಳ್ಳಲಿದೆ ಎಂದು ಫೆಡರಲ್ ಏಜೆನ್ಸಿ ಮಾಹಿತಿ ನೀಡಿದೆ. H-1B ವೀಸಾ ವಲಸೆ ರಹಿತ ವೀಸಾ ಆಗಿದ್ದು, ಇದು ಅಮೆರಿಕ ಕಂಪನಿಗಳಿಗೆ ಸೈದ್ಧಾಂತಿಕ ಅಥವಾ ತಾಂತ್ರಿಕ ಪರಿಣತಿಯ ಅಗತ್ಯವಿರುವ ವಿಶೇಷ ಉದ್ಯೋಗಗಳಲ್ಲಿ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಭಾರತ ಮತ್ತು ಚೀನಾದಂತಹ ದೇಶಗಳಿಂದ ಪ್ರತಿ ವರ್ಷ ಹತ್ತು ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ತಂತ್ರಜ್ಞಾನ ಕಂಪನಿಗಳು ಇದನ್ನು ಅವಲಂಬಿಸಿವೆ. 2025 ರ ಹಣಕಾಸು ವರ್ಷದಲ್ಲಿ ವಿದೇಶಿ ಅತಿಥಿ ಉದ್ಯೋಗಿಗಳಿಗೆ ಹೆಚ್ಚು ಬೇಡಿಕೆಯಿರುವ H-1B ವೀಸಾಗಳ ಆರಂಭಿಕ ನೋಂದಣಿ ಅವಧಿಯು ಮಾರ್ಚ್ 22 ರಂದು ಮದ್ಯಾಹ್ನ 12ಕ್ಕೆ ಮುಕ್ತಾಯಗೊಳ್ಳುತ್ತದೆ ಎಂದು ಅಮೆರಿಕ ಪೌರತ್ವ ಮತ್ತು ವಲಸೆ ಸೇವೆಗಳ ಇಲಾಖೆ ತಿಳಿಸಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೆಲುವು ಸಿಗಲಿ ಎಂದು ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಐಟಿ ತಂತ್ರಜ್ಞರು ಹೋಮ ನಡೆಸಿದ್ದಾರೆ. ಸಿಲಿಕಾನ್ ವ್ಯಾಲಿಯಲ್ಲಿರುವ ಹಿಂದೂ ದೇವಾಲಯದಲ್ಲಿ ಪೂಜೆ ಆಯೋಜಿಸಿ ಮೋದಿ ಗೆಲುವಿಗೆ ಸಾಕಷ್ಟು ಮಂದಿ ಪ್ರಾರ್ಥನೆ ಸಲ್ಲಿಸಿದರು. ‘ಇದು ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವಲ್ಲ. ಬದಲಿಗೆ ನಮ್ಮ ಬೇಡಿಕೆಗಳ ಈಡೇರಿಕೆಗೆ ಸಲ್ಲಿಸುತ್ತಿರುವ ಸಾಮೂಹಿಕ ಆವಾಹನೆಯಾಗಿದೆ. ಅನಿವಾಸಿ ಭಾರತೀಯರು ಹಾಗೂ ದೊಡ್ಡ ಸಂಖ್ಯೆಯಲ್ಲಿ ನೆಲೆಸಿರುವ ಭಾರತೀಯರ ಪ್ರಾರ್ಥನೆಯಾಗಿದೆ’ ಎಂದು ಆಯೋಜಕರು ಹೇಳಿದ್ದಾರೆ. ಹವನ ಸಂದರ್ಭದಲ್ಲಿ ‘ಅಬ್ ಕೀ ಬಾರ್ 400 ಪಾರ್’ ಘೊಷಣೆಯನ್ನು OFBJP ಸದಸ್ಯರು ಕೂಗಿದರು. ಬರಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬಿಜೆಪಿಯು ಸ್ಪಷ್ಟ ಬಹುಮತದೊಂದಿಗೆ ವಿಜಯ ದಾಖಲಿಸಿದೆ ಎಂದು ಭವಿಷ್ಯ ನುಡಿದರು. ‘ಈ ಧಾರ್ಮಿಕ ಸಂಘಟನೆಯು ನಾವು ಪ್ರಜಾಪ್ರಭುತ್ವದಲ್ಲಿ ಇಟ್ಟಿರುವ ಆಳವಾದ ನಂಬಿಕೆ ಹಾಗೂ ಭಾರತದಲ್ಲಿ ಮುಂದುವರಿದಿರುವ ಆಡಳಿತಾತ್ಮಕ ಸುಧಾರಣೆ ಮತ್ತು ಪ್ರಗತಿಯ ಪ್ರತಿಫಲನವಾಗಿದೆ’ ಎಂದಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯು ಏ.…
ತಮ್ಮ ಸಿಂಪಲ್ ಲುಕ್ ನಿಂದ ಬಾಲಿವುಡ್ ಚಿತ್ರರಂಗದಲ್ಲಿ ಹಲ್ ಚಲ್ ಎಬ್ಬಿಸುತ್ತಿರುವ ನಟಿ ಸಾರಾ ಅಲಿಖಾನ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಆಗಾಗ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲಾ ತಾಣದಲ್ಲಿ ಅಪ್ ಲೋಡ್ ಮಾಡುವ ನಟಿ ಇದೀಗ ಮತ್ತೆ ತಮ್ಮ ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚಿಗೆ ಬ್ಲ್ಯಾಕ್ ಡ್ರೆಸ್ ಧರಿಸಿ ಹಾಟ್ ಆಗಿ ಫೋಟೋ ಶೂಟ್ ಮಾಡಿಸಿರುವ ನಟಿ ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಸಾರಾ ಹಲವು ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇನ್‌ಸ್ಟಾಗ್ರಾಂನಲ್ಲಿ ಸಕ್ರಿಯವಾಗಿರುವ ಸಾರಾ ಆಲಿ ಖಾನ್, 43 ಮಿಲಿಯನ್‌ಗೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಸದ್ಯ ಸಾರಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಜರಾ ಹತ್ಕೆ ಜರಾ ಬಚ್ ಕೆ, ಅತ್ರಂಗಿ ರೇ, ಕೇದಾರ್‌ನಾಥ್, ಸಿಂಬಾ, ಲವ್ ಆಜ್ ಕಲ್, ಏ ವತನ್ ಮೇರೆ ವತನ್, ಮರ್ಡರ್ ಮುಬಾರಕ್, ಲುಕಾ ಚುಪ್ಪಿ ಸಿನಿಮಾಗಳಲ್ಲಿ ಸಾರಾ ಅಲಿ ಖಾನ್ ಕಾಣಿಸಿಕೊಂಡಿದ್ದಾರೆ. ಸಾರಾ ಅಲಿಖಾನ್ ಹಿಂದೂ…
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಘೋಷಿತ ಅಭ್ಯರ್ಥಿಗಳು ಮತಬೇಟೆ ಚಟುವಟಿಕೆಗಳನ್ನು ಜೋರಾಗಿಯೇ ಶುರುಮಾಡಿದ್ದಾರೆ. ತಮ್ಮ ಕ್ಷೇತ್ರದ ಪ್ರಭಾವಿತರ ಮನೆ ಮನೆಗೆ ತೆರಳುತ್ತಿರುವ ಅಭ್ಯರ್ಥಿಗಳು ಚುನಾವಣೆಗೆ ಸಹಕಾರ ನೀಡುವಂತೆ ಕೇಳುತ್ತಿದ್ದಾರೆ. ಅಂತೆಯೇ ಸಂಸದೆ ಶೋಭಾ ಕರಂದ್ಲಾಜೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರನ್ನು ಭೇಟಿ ಮಾಡಿ ಸಹಕಾರ ಕೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ, ನಮ್ಮ ಪಕ್ಷಕ್ಕೆ ಅವರ ಸಹಕಾರ ಕೇಳಿದ್ದೇವೆ. ಅಶ್ವಿನಿ ಅವರಿಗೆ ರಾಜಕೀಯ ಪಾರ್ಟಿ ಇಲ್ಲ. ಹಾಗಾಗಿ ನಿಮ್ಮ ಸಹಕಾರ, ಬೆಂಬಲ ಬೇಕು ಅಂತ ಕೇಳಿದ್ದೇವೆ. ಅವ್ರು ನಮ್ಮದೇ ಕ್ಷೇತ್ರದಲ್ಲಿದ್ದಾರೆ. ಪ್ರಚಾರದ ಬಗ್ಗೆ ಕೇಳಿಲ್ಲ’ ಎಂದಿದ್ದಾರೆ. ರಾಜಕಾರಣದ ವಿಚಾರದಲ್ಲಿ ಪುನೀತ್ ಯಾವತ್ತಿಗೂ ಹಿಂದೇಟು ಹಾಕುತ್ತಲೇ ಇದ್ದರು. ಸ್ವತಃ ಶಿವರಾಜ್ ಕುಮಾರ್ ಪತ್ನಿ ಚುನಾವಣೆಗೆ ನಿಂತಾಗಲೂ ಅವರು ಸಪೋರ್ಟ್ ಮಾಡಲಿಲ್ಲ. ರಾಜಕಾರಣದಿಂದ ಅಂತರ ಕಾಪಾಡಿಕೊಂಡೇ ಬಂದರು. ಅಶ್ವಿನಿ ಅವರು ಕೂಡ ಅದೇ ಹಾದಿಯಲ್ಲಿ ನಡೆಯುತ್ತಿದ್ದಾರೆ. ಮತ್ತೊಂದೆಡೆ ಶಿವರಾಜ್ ಕುಮಾರ್ ಪತ್ನಿ ಗೀತಾ ಕೂಡ…
ಗೀತ ಸಾಹಿತಿ ಜಾವೇದ್ ಅಖ್ತರ್ ತಮ್ಮ ಹೇಳಿಕೆಗಳ ಮೂಲಕ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಹನಿ ಇರಾನಿ ಅವರನ್ನು 1972ರಲ್ಲಿ ಮದುವೆ ಆದ ಜಾವೇದ್ ಅಖ್ತರ್ 11 ವರ್ಷಗಳ ಬಳಿಕ ದೂರ ಆದರು. ದಶಕಗಳ ಕಾಲ ಒಟ್ಟಾಗಿ ಸಂಸಾರ ನಡೆಸಿದ್ದ ಇವರು ಬೇರೆ ಆದರು. ಈ ಸಂಬಂಧ ಮುರಿದು ಬೀಳಲು ಮದ್ಯ ಪಾನ ವ್ಯಸನವೇ ಕಾರಣ ಎಂದಿರುವ ಜಾವೇದ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ನಾನು ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸುತ್ತೇನೆ ಎಂದು ಜಾವೇದ್ ಅಖ್ತರ್ ಹೇಳಿದ್ದಾರೆ. ‘ನಾನು ಏಕರೂಪ ನಾಗರಿಕ ಸಂಹಿತೆಯನ್ನು ಪಾಲಿಸುತ್ತಿದ್ದೇನೆ. ನಾನು ಒಬ್ಬರನ್ನು ಮದುವೆ ಆದೆ. 11 ವರ್ಷ ಒಟ್ಟಿಗೆ ಸಂಸಾರ ನಡೆಸಿದೆವು. ನಂತರ ವಿಚ್ಛೇದನ ಪಡೆದೆವು. ಮುಸ್ಲಿಂ ಕಾನೂನಿನ ಪ್ರಕಾರ ಅವಳಿಗೆ ಕೇವಲ ನಾಲ್ಕು ತಿಂಗಳ ಜೀವನಾಂಶ ಕೊಡುವ ಜವಾಬ್ದಾರಿ ನನ್ನ ಮೇಲಿತ್ತು. ಆದರೆ ನಾನು ಯೋಚಿಸಲಿಲ್ಲ. ಅವಳು ನನ್ನ ಜವಾಬ್ದಾರಿ. ಅವಳಿಗೆ ನನ್ನ ಬೆಂಬಲ ಬೇಕೋ ಅಥವಾ ಬೇಡವೋ ಎಂದು ನಿರ್ಧರಿಸುವ ಜವಾಬ್ದಾರಿ ಕೂಡ ಅವರದ್ದೇ’ ಎಂದಿದ್ದಾರೆ…
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ, ಶ್ರೀನಿವಾಸರಾಜು ನಿರ್ದೇಶನದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಚಿತ್ರೀಕರಣ ವಿಯೆಟ್ನಾಂ ನಲ್ಲಿ ಮುಕ್ತಾಯವಾಗಿದೆ. ಅಲ್ಲಿ ಚಿತ್ರದ ಎರಡು ಹಾಡುಗಳು ಹಾಗೂ ಕೆಲವು ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಇದರೊಂದಿಗೆ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಗಣೇಶ್, ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಪ್ರಸ್ತುತ ರೀರೆಕಾರ್ಡಿಂಗ್ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರಲು ಸಿದ್ದವಾಗಲಿದೆ. ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 41 ನೇ ಚಿತ್ರವಾಗಿದ್ದು, ಗಣೇಶ್ ಗೆ ಜೋಡಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ಐದು ಸುಮಧುರ ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ”…