ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ ಸುಮಾರು 25 ಮಂದಿ ಮೃತಪಟ್ಟಿದ್ದು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳವನ್ನೂ ಸ್ಥಳಕ್ಕೆ ಕರೆಸಲಾಗಿದೆ. ಸ್ಫೋಟದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಕ್ವೆಟ್ಟಾದಲ್ಲಿ ಎರಡು ಬಾಂಬ್ ಸ್ಫೋಟಗೊಂಡಿವೆ ಎಂದು ಹೇಳಲಾಗುತ್ತಿದೆ. ಒಂದು ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದರೆ, ಎರಡನೇ ಸ್ಫೋಟದಲ್ಲಿ ಸುಮಾರು 15 ಜನರು ಮೃತಪಟ್ಟಿದ್ದಾರೆ. ಈ ಬಾಂಬ್ ಸ್ಫೋಟವನ್ನು ಯಾರು ಮಾಡಿದ್ದಾರೆ ಮತ್ತು ಏಕೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಸ್ತುತ, ಈ ಸ್ಫೋಟದ ಬಗ್ಗೆ ಯಾವುದೇ ಉಗ್ರ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. ಸ್ಫೋಟದ ವೇಳೆ ರೈಲು ನಿಲ್ದಾಣದಲ್ಲಿ ಭಾರಿ ಜನಸಂದಣಿ ಇತ್ತು. ಗಾಯಗೊಂಡ ಪ್ರಯಾಣಿಕರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಬಲೂಚಿಸ್ತಾನ್ ಸರ್ಕಾರದ ವಕ್ತಾರ ಶಾಹಿದ್ ರಿಂಡ್…
Author: Author AIN
ಬಾಲಿವುಡ್ ನಟ ಶಾರುಖ್ ಖಾನ್ ಕಳೆದ ಎರಡು ದಿನಗಳ ಹಿಂದೆ ಜೀವ ಬೆದರಿಕೆ ಕರೆ ಬಂದಿದೆ. ರಾಯ್‌ಪುರ ಮೂಲದ ವಕೀಲರೊಬ್ಬರ ಫೋನ್‌ನಿಂದ ಕೊಲೆ ಬೆದರಿಕೆ ಕರೆ ಬಂದಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ. ವಕೀಲ ಫೈಜಾನ್ ಖಾನ್ ಎಂಬವರ ಫೋನ್‌ನಿಂದ ಶಾರುಖ್ ಖಾನ್ ಅವರಿಗೆ ಬೆದರಿಕೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಕೀಲ ಶಾರುಖ್ ಖಾನ್ ಅವರಿಗೆ ಬೆದರಿಕೆ ಕರೆ ಬರುವ 3 ದಿನಗಳ ಮೊದಲು ತನ್ನ ಫೋನ್ ಕಳ್ಳತನವಾಗಿದೆ. ಈ ಬಗ್ಗೆ ಎಫ್‌ಐಆರ್ ದಾಖಲಿಸಿದ್ದೇನೆ ಎಂದಿದ್ದಾರೆ. ಮಂಗಳವಾರ ಬಾಂದ್ರಾ ಪೊಲೀಸ್ ಠಾಣೆಯ ಫೋನ್‌ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿತ್ತು. ಕರೆ ಮಾಡಿದ್ದ ವ್ಯಕ್ತಿ ನಟನಿಂದ 50 ಲಕ್ಷ ರೂ. ಬೇಡಿಕೆಯಿಟ್ಟಿದ್ದ. ಆ ಹಣವನ್ನು ನೀಡದಿದ್ದರೆ ಭಾರೀ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿತ್ತು. ಈ ಬಗ್ಗೆ ಹೆಚ್ಚಿನ ತನಿಖೆಗಾಗಿ ಮುಂಬೈ ಪೊಲೀಸ್ ತಂಡ ರಾಯ್‌ಪುರಕ್ಕೆ ತೆರಳಿತ್ತು. ಇದೀಗ ರಾಯ್‌ಪುರ ಪೊಲೀಸರೊಂದಿಗೆ ವಕೀಲನ ಫೋನ್ ಕಳ್ಳತನದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಬೆದರಿಕೆ ಹಾಕಿದವರ ಪತ್ತೆಗೆ…
ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ.ಎಲ್ ರಾಹುಲ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಪೋಷಕರಾಗುತ್ತಿರುವ ಸಿಹಿ ಸುದ್ದಿಯನ್ನು ಅಥಿಯಾ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಜೊತೆಗೆ ಸುನೀಲ್ ಶೆಟ್ಟಿ ಕೂಡ ಅಜ್ಜನಾಗುತ್ತಿರುವ ಸಂಭ್ರಮವನ್ನು ಸಾಮಾಜಿಕ ಜಾಲಾ ತಾಣದ ಮೂಲಕ ತಿಳಿಸಿದ್ದಾರೆ. ‘ದೇವರ ಸುಂದರ ಆಶೀರ್ವಾದ 2025ರಲ್ಲಿ ಬರಲಿದೆ’ ಎಂದು ಅಥಿಯಾ ದಂಪತಿ ಪೋಷಕರಾಗುತ್ತಿರುವ ಖುಷಿಯ ಸುದ್ದಿಯನ್ನು ತಿಳಿಸಿದ್ದಾರೆ. ಈ ಜೋಡಿಗೆ ಪೂಜಾ ಹೆಗ್ಡೆ, ಅಹಾನ್ ಶೆಟ್ಟಿ, ಸುನೀಲ್ ಶೆಟ್ಟಿ, ವಿಕ್ರಾಂತ್ ಮಾಸ್ಸಿ ಸೇರಿದಂತೆ ಅನೇಕರು ಶುಭ ಹಾರೈಸಿದ್ದಾರೆ. ಕಳೆದ ವರ್ಷ ಜನವರಿ 23ರಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಜೊತೆ ಅಥಿಯಾ ಅದ್ಧೂರಿಯಾಗಿ ಮದುವೆಯಾದರು. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಜೋಡಿ ಗುರು ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ಹಸೆಮಣೆ ಏರಿದ್ದರು. ಇದೀಗ ಮದುವೆಯಾದ ಒಂದೂವರೆ ವರ್ಷದಲ್ಲಿ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದಾರೆ.
ಸ್ಯಾಂಡಲ್‌ವುಡ್ ನಟಿ, ಮಾಜಿ ಸಂಸದೆ ಸುಮಲತಾ ಅವರು ದರ್ಶನ್ ಆರೋಗ್ಯ ಮತ್ತು ಕೊಲೆ ಕೇಸ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸುಮಲತಾ, ನಾನು ಯಾವಾಗಲೂ ದರ್ಶನ್ ಪರವಾಗಿ ಇದ್ದೇನೆ. ನನ್ನ ಜೀವ ಇರುವವರೆಗೂ ದರ್ಶನ್ ನನ್ನ ಮಗನೇ ಎಂದಿದ್ದಾರೆ. ವಿಜಯಲಕ್ಷ್ಮಿ ಜೊತೆ ಸಂಪರ್ಕದಲ್ಲಿದ್ದೇನೆ. ದರ್ಶನ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ದರ್ಶನ್ ಮುಂದೆ ಹಲವು ಸವಾಲುಗಳಿವೆ. ಇನ್ನೂ ಅವರಿಗೆ ಟ್ರೀಟ್‌ಮೆಂಟ್ ಬೇಕು, ಆರೋಗ್ಯ ಸರಿಪಡಿಸಿಕೊಳ್ಳಬೇಕು. ದರ್ಶನ್‌ಗೆ ಬೇಲ್ ಬಗ್ಗೆ ಲೀಗಲ್ ಚಾಲೆಂಜ್ಸ್ ಇದೆ. ಅದನ್ನೆಲ್ಲಾ ಸರಿಪಡಿಸಿಕೊಂಡು ಹೊರಗಡೆ ಬರುತ್ತಾರೆ ಎಂಬ ಆಸೆ ಇಟ್ಟುಕೊಂಡಿದ್ದೇವೆ ಎಂದರು. ನನ್ನ ನಿಲುವು ಏನು ಎಂಬುದನ್ನ ಈಗಾಗಲೇ ಸ್ಪಷ್ಟವಾಗಿ ತಿಳಿಸಿದ್ದೇನೆ. ನಮ್ಮ ಸಂಬಂಧ ಏನಿದೆ ಅದು ಇನ್ನುಂದೆಯೂ ಹಾಗೆ ಇರುತ್ತದೆ. ನನ್ನ ಲೈಫ್ ಇರುವವರೆಗೂ ದರ್ಶನ್ ನನ್ನ ಮಗನೇ. ಕೇಸ್ ಕುರಿತು ನಿಜಾಂಶ ಏನಿದೆ ಅದು ಹೊರಗೆ ಬರಬೇಕು. ನಿರಾಪರಾಧಿ ಅಂತಾ ಸಾಬೀತು ಆಗಲಿ ಎಂಬುದು ನನ್ನ ಆಸೆ. ದರ್ಶನ್ ಪರ ವಕೀಲರು ನಿಜಾಂಶವನ್ನು ಪ್ರೂವ್…
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ವರ್ಷ ತಮ್ಮ ಚುನಾವಣಾ ಪ್ರಚಾರ ಸಮಯದಲ್ಲಿ ಸಾಥ್ ನೀಡಿದ್ದ ಸೂಸಿ ವೈಲ್ಸ್ ಅವರನ್ನು ಶ್ವೇತಭವನದ ಮುಖ್ಯಸ್ಥರೆಂದು ಘೋಷಿಸಿದ್ದು, ಅಮೆರಿಕದಲ್ಲಿ ಈ ಪ್ರಭಾವಿ ಹುದ್ದೆಯನ್ನು ವಹಿಸುತ್ತಿರುವ ಮೊದಲ ಮಹಿಳೆಯಾಗಿದ್ದಾರೆ. ಟ್ರಂಪ್ ಅವರ ಚುನಾವಣಾ ಪ್ರಚಾರವನ್ನು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಉತ್ತಮವಾಗಿ ಕಾರ್ಯಗತಗೊಳಿಸಿದ್ದಕ್ಕಾಗಿ ವೈಲ್ಸ್ ಅವರ ಆಂತರಿಕ ವಲಯದ ಒಳಗೆ ಮತ್ತು ಹೊರಗೆ ವ್ಯಾಪಕವಾಗಿ ಮನ್ನಣೆ ಪಡೆದಿದ್ದಾರೆ. ಅಮೆರಿಕವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸೂಸಿ ದಣಿವರಿಯಿಲ್ಲದೆ ಕೆಲಸ ಮಾಡುವುದನ್ನು ಮುಂದುವರಿಸುತ್ತಾರೆ ಎನ್ನಲಾಗಿದೆ. ಯುನೈಟೆಡ್ ಸ್ಟೇಟ್ಸ್ ಇತಿಹಾಸದಲ್ಲಿ ಸೂಸಿ ಅವರು ಮೊದಲ ಮಹಿಳಾ ಸಿಬ್ಬಂದಿ ಮುಖ್ಯಸ್ಥರಾಗುವುದು ಅರ್ಹವಾದ ಗೌರವವಾಗಿದೆ. ಅವರು ನಮ್ಮ ದೇಶ ಹೆಮ್ಮೆಪಡುವಂತೆ ಕೆಲಸ ಮಾಡುತ್ತಾರೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕದ ಇತಿಹಾಸದಲ್ಲಿ ಶ್ರೇಷ್ಠ ರಾಜಕೀಯ ಜಯ ಸಾಧಿಸಲು ಸೂಸಿ ವೈಲ್ಸ್ ನನಗೆ ಸಹಾಯ ಮಾಡಿದರು. ಅವರು ನನ್ನ 2016 ಮತ್ತು 2020 ರ ಯಶಸ್ವಿ ಪ್ರಚಾರಗಳ ಅವಿಭಾಜ್ಯ ಅಂಗವಾಗಿದ್ದರು…
ಭಾರತೀಯ ಚಿತ್ರರಂಗದ ಸ್ಟಾರ್ ನಟ ಪ್ರಭಾಸ್ ಜೊತೆ ಸಿನಿಮಾ ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ತುದಿಗಾಲಲ್ಲಿ ನಿಂತಿವೆ. ಬಾಹುಬಲಿ ಸಿನಿಮಾದ ಬಳಿಕ ಪ್ರಭಾಸ್ ವ್ಯಾಲ್ಯೂ ಮತ್ತಷ್ಟು ಹೆಚ್ಚಾಗಿದೆ. ಅಳೆದು, ತೂಗಿ ಸಿನಿಮಾಗಳನ್ನು ಮಾಡುತ್ತಿರುವ ಪ್ರಭಾಸ್ ಇದೀಗ ಕನ್ನಡದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಜೊತೆ ದೀರ್ಘ ಕಾಲದ ಒಪ್ಪಂದವೊಂದಕ್ಕೆ ಕೈ ಜೋಡಿಸಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಪ್ರಭಾಸ್ ಜೊತೆಗೆ ಮೂರು ಸಿನಿಮಾ ನಿರ್ಮಾಣ ಮಾಡಲು ಹೊಂಬಾಳೆ ಸಂಸ್ಥೆ ಮುಂದಾಗಿದ್ದು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಪ್ರಭಾಸ್ ನಟನೆಯ ಮೂರು ಸಿನಿಮಾಗಳನ್ನು ಹೊಂಬಾಳೆ ನಿರ್ಮಾಣ ಮಾಡಲಿದ್ದು, ಮುಂದಿನ ಮೂರು ವರ್ಷಗಳಲ್ಲಿ ಅಂದರೆ 2026, 2027 ಹಾಗೂ 2028 ಕ್ಕೆ ತಲಾ ಒಂದೊಂದು ಸಿನಿಮಾಗಳನ್ನು ಹೊಂಬಾಳೆ ನಿರ್ಮಾಣ ಮಾಡಲಿದೆ. ಅಥವಾ ಬಿಡುಗಡೆ ಮಾಡಲಿದೆ. ಪ್ರಭಾಸ್ ಹೀಗೆ, ಮುಂಚಿತವಾಗಿ ನಿರ್ಮಾಣ ಸಂಸ್ಥೆಯೊಂದರ ಜೊತೆಗೆ ಸಿನಿಮಾ ಒಪ್ಪಂದ ಮಾಡಿಕೊಂಡಿರುವುದು ಇದೇ ಮೊದಲು ಎನ್ನಲಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಹೊಂಬಾಳೆ…
ಬಾಲಿವುಡ್ ನಟ ಅರ್ಜುನ್ ಕಪೂರ್ ಸಿನಿಮಾಗಳಿಗಿಂತ ಹೆಚ್ಚಾಗಿ ಫರ್ಸನಲ್ ಲೈಫ್ ಕಾರಣದಿಂದಲೇ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗೆ ಅರ್ಜುನ್ ಕಪೂರ್ ಮಲೈಕಾರಿಂದ ದೂರವಾಗಿದ್ದು ಸದ್ಯ ಸಿಂಗಲ್ ಆಗಿದ್ದಾರೆ. ತಮಗಿಂತ ವಯಸ್ಸಿನಲ್ಲಿ ಬಹಳ ಹಿರಿಯರಾಗಿದ್ದ ಮಲೈಕಾ ಅರೋರಾ ಜೊತೆಗೆ ಸುಮಾರು ಎಂಟು ವರ್ಷಗಳ ಕಾಲ ಲಿವಿನ್ ರಿಲೇಶನ್ಷಿಪ್ನಲ್ಲಿದ್ದ ಅರ್ಜುನ್ ಕಪೂರ್ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವಕಾಶ ಕೊರತೆ ಎದುರಿಸುತ್ತಿರುವ ಅರ್ಜುನ್ ಕಪೂರ್ ಇತ್ತೀಚೆಗೆ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಜಯ್ ದೇವಗನ್ ನಾಯಕನಾಗಿ ನಟಿಸಿ ಹಲವು ದೊಡ್ಡ ಸ್ಟಾರ್ ನಟರು ಅತಿಥಿ ಪಾತ್ರಗಳಲ್ಲಿ ನಟಿಸಿರುವ ‘ಸಿಂಗಂ ಅಗೇನ್’ ಸಿನಿಮಾದಲ್ಲಿ ಅರ್ಜುನ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಿಡುಗಡೆ ಬಳಿಕ ಯೂಟ್ಯೂಬ್ ಪಾಡ್ಕಾಸ್ಟ್ ಒಂದರಲ್ಲಿ ಮಾತನಾಡಿರುವ ಅರ್ಜುನ್ ಕಪೂರ್, ತಾವು ಅಪರೂಪದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ ತಾವು ಖಿನ್ನತೆಗೆ ಗುರಿಯಾಗಿದ್ದಾಗಿಯೂ ಅರ್ಜುನ್ ಕಪೂರ್ ಹೇಳಿದ್ದಾರೆ. ಅರ್ಜುನ್ ಕಪೂರ್, ತಾವು ಹಷಿಮೋಟೋ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಸಮಸ್ಯೆ ಇರುವ ವ್ಯಕ್ತಿಯ ರೋಗನಿರೋಧಕ…
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಲಾರೆನ್ಸ್ ಗ್ಯಾಂಗ್ ನಿಂದ ಮತ್ತೆ ಮತ್ತೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ. ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂಗೆ ಸಲ್ಮಾನ್ ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ ಕರೆ ಬಂದಿದ್ದು ಬೆದರಿಕೆ ಹಾಕಿರುವ ವ್ಯಕ್ತಿ ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕಳೆದ ರಾತ್ರಿ ಮುಂಬಯಿ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಸಂದೇಶ ರವಾನೆಯಾಗಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು, ಅಪರಿಚಿತ ವ್ಯಕ್ತಿಯ ವಿರುದ್ಧ ವರ್ಲಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ಟವರ್ ಲೊಕೇಷನ್ ಆಧರಿಸಿ ಅಪರಿಚಿತ ವ್ಯಕ್ತಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ‘ಸಲ್ಮಾನ್ ಖಾನ್‌ಗೆ ಸಂಬಂಧಿಸಿದ ಹಾಡೊಂದರಲ್ಲಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಉಲ್ಲೇಖವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಗೀತರಚನೆಕಾರರು ಒಂದು ತಿಂಗಳೊಳಗೆ ಇದರ ಪರಿಣಾಮ ಅನುಭವಿಸಬೇಕಾಗುತ್ತದೆ. ಹಾಗೂ, ಮುಂದಿನ ದಿನಗಳಲ್ಲಿ ಹಾಡು ಬರೆಯಲು ಸಾಧ್ಯವಾಗುವುದಿಲ್ಲ. ಸಲ್ಮಾನ್ ಖಾನ್‌ಗೆ ಧೈರ್ಯವಿದ್ದರೆ…
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಆಸ್ಟ್ರೇಲಿಯಾ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅವರ ಪತ್ರಿಕಾಗೋಷ್ಠಿಯನ್ನು ಪ್ರಸಾರ ಮಾಡಿದ ಕೆಲವೇ ಗಂಟೆಗಳ ನಂತರ ಕೆನಡಾ ಆಸ್ಟ್ರೇಲಿಯಾದ ಮಾಧ್ಯಮವನ್ನು ನಿರ್ಬಂಧಿಸಿದೆ ಎಂದು ಭಾರತ ಆರೋಪಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಈ ಬಗ್ಗೆ ಮಾತನಾಡಿದ್ದು, ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಮತ್ತು ಆಸ್ಟ್ರೇಲಿಯಾ ಟುಡೆಯ ಕೆಲವು ಪುಟಗಳನ್ನು ನಿರ್ಬಂಧಿಸುವ ಕೆನಡಾದ ಕ್ರಮ ವಾಕ್ ಸ್ವಾತಂತ್ರ್ಯದ ಬಗ್ಗೆ ಬೂಟಾಟಿಕೆಯನ್ನು ಬಯಲುಮಾಡಿದೆ ಎಂದು ಹೇಳಿದರು. “ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು, ಈ ನಿರ್ದಿಷ್ಟ ಔಟ್‌ಲೆಟ್‌ನ ಪುಟಗಳು, ಪ್ರಮುಖ ಡಯಾಸ್ಪೊರಾ ಔಟ್‌ಲೆಟ್‌ಗಳನ್ನು ನಿರ್ಬಂಧಿಸಲಾಗಿದೆ ಮತ್ತು ಕೆನಡಾದಲ್ಲಿ ಇವುಗಳು ವೀಕ್ಷಕರಿಗೆ ಲಭ್ಯವಿಲ್ಲ ಎಂಬ ಮಾಹಿತಿ ನಾವು ಪಡೆದುಕೊಂಡಿದ್ದೇವೆ. ಈ ನಿರ್ದಿಷ್ಟ ಹ್ಯಾಂಡಲ್ ಇಎಎಂ ಡಾ ಎಸ್ ಜೈಶಂಕರ್ ಅವರು ಪೆನ್ನಿ ವಾಂಗ್ ಅವರ ಪತ್ರಿಕಾಗೋಷ್ಠಿಯನ್ನು ಪ್ರಸಾರ ಮಾಡಿದ ಕೇವಲ ಒಂದು ಗಂಟೆ ಅಥವಾ ಕೆಲವು ಗಂಟೆಗಳ ನಂತರ ಇದು ಸಂಭವಿಸಿದೆ ಎಂದು ಜೈಸ್ವಾಲ್ ಆರೋಪಿಸಿದ್ದಾರೆ.
ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎರಡೇ ಸೆಕೆಂಡುಗಳಲ್ಲಿ ವಿಶೇಷ ಸರ್ಕಾರಿ ವಕೀಲ ಜಾಕ್ ಸ್ಮಿತ್ ಅವರನ್ನು ವಜಾ ಮಾಡುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ತಾವು ನೀಡಿರುವ ಸಂದರ್ಶನವೊಂದರಲ್ಲಿ ಟ್ರಂಪ್ ಈ ವಿಷಯ ಪ್ರಸ್ತಾಪಿಸಿದ್ದಾರೆ ನಿಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ತಪ್ಪಿಸಲು ಸ್ಮಿತ್ ಅವರನ್ನು ವಜಾಗೊಳಿಸುವಿರಾ ಎಂಬ ಪ್ರಶ್ನೆಗೆ, ‘ಅಧಿಕಾರ ವಹಿಸಿಕೊಂಡ ಎರಡೇ ಸೆಕೆಂಡುಗಳಲ್ಲಿ ಅವರನ್ನು ವಜಾಗೊಳಿಸುವೆ. ಅದು ತುಂಬಾ ಸುಲಭ’ ಎಂದು ಉತ್ತರಿಸಿದ್ದಾರೆ. 2020ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ತಿರುಚಲು ಯತ್ನಿಸಿದ ಮತ್ತು ಶ್ವೇತಭವನದ ರಹಸ್ಯ ದಾಖಲೆಗಳನ್ನು ತಮ್ಮ ಖಾಸಗಿ ನಿವಾಸಕ್ಕೆ ಕೊಂಡೊಯ್ದ ಆರೋಪಗಳಡಿ ಟ್ರಂಪ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ವಿಶೇಷ ಸರ್ಕಾರಿ ವಕೀಲ ಜಾಕ್ ಸ್ಮಿತ್ ವಾದಿಸಿದ್ದರು. ಸ್ಮಿತ್ ವಿರುದ್ಧ ಟೀಕೆ ಮಾಡುತ್ತಾ ಬಂದಿರುವ ಟ್ರಂಪ್, ‘ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರ ಸ್ವೀಕರಿಸಿದ ನಂತರ ಅವರನ್ನು ಕಿತ್ತೊಗೆಯುವೆ’ ಎಂದಿದ್ದರು. ಸ್ಮಿತ್ ಒಬ್ಬ ‘ಮೋಸಗಾರ’ ಎಂದು ಜರೆದಿದ್ದರು. ಅಟಾರ್ನಿ…