ಅಮೆರಿಕದಲ್ಲಿ ವಾಸವಿದ್ದ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವ ಪತ್ತೆಯಾಗಿದ್ದು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ. ಆನಂದ್ ಸುಜಿತ್ ಹೆನ್ರಿ , ಪತ್ನಿ ಆಲಿಸ್ ಪ್ರಿಯಾಂಕಾ 4 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಮನೆಗೆ ಬಂದು ನೋಡಿದ್ದು ಈ ವೇಳೆ ನಾಲ್ವರ ಶವಗಳು ಪತ್ತೆಯಾಗಿದೆ. ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್ ರೂಮ್ನಲ್ಲಿ ಕಂಡುಬಂದಿದ್ದು, ಇಬ್ಬರು ಮಕ್ಕಳ ಶವ ಕೋಣೆಯಲ್ಲಿ ಪತ್ತೆಯಾಗಿದೆ. ದಂಪತಿ ಮೈಮೇಲೆ ಗುಂಡಿನ ಗುರುತುಗಳಿದ್ದವು, ಮನೆಯಲ್ಲಿ ಯಾರೋ ಅಪರಿಚಿತರು ಬಂದಿರುವ ಯಾವುದೇ ಲಕ್ಷಣಗಳಿರಲಿಲ್ಲ. ಆದರೆ ಕಿಟಕಿ ತೆರೆದಿತ್ತು ಅಲ್ಲಿಂದ ಯಾರಾದರೂ ಮನೆಯ ಒಳಗೆ ಬಂದಿದ್ದರೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಬಾತ್ರೂಮ್ನಿಂದ 9 ಎಂಎಂ ಪಿಸ್ತೂಲ್ ಮತ್ತು ಲೋಡ್ ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ 9 ವರ್ಷಗಳಿಂದ ದಂಪತಿ ಅಮೆರಿಕದಲ್ಲಿ ವಾಸವಾಗಿದ್ದರು. ಸಾಫ್ಟ್‌ವೇರ್ ಎಂಜಿನಿಯರ್ ಆನಂದ್ ಮತ್ತು ಹಿರಿಯ ವಿಶ್ಲೇಷಕ…
Author: Author AIN
ಪ್ರೇಮಿಗಳ ದಿನದಂದು ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಯುಐ ಸಿನಿಮಾದ ಹಾಡನ್ನ ಬಿಡುಗಡೆ ಮಾಡಿದ್ದಾರೆ. ಯುಐ ಚಿತ್ರದಲ್ಲಿ ಉಪೇಂದ್ರ ನಟಿಸುವುದರ ಜೊತೆಗೆ ನಿರ್ದೇಶನವನ್ನು ಮಾಡ್ತಿದ್ದಾರೆ.ಹೀಗಾಗಿ ಚಿತ್ರ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಸದ್ಯ ಚಿತ್ರದ ಚೀಪ್ ಹಾಡೊಂದು ಬಿಡುಗಡೆ ಆಗಿದೆ. “ಚೀಪ್.. ಚೀಪ್.. ಎಲ್ಲಾ ಚೀಪ್ ಚೀಪ್.. ನಂದು ತುಂಬಾ ದೊಡ್ಡದು. ಅವನಿಗಿಂತ ನಿಂದು ಚಿಕ್ಕದು. ನಿಂದು ತುಂಬಾ ಚಿಕ್ಕದು, ಇವನಿಗಿಂತ ಅವಂದು ದೊಡ್ದು..” ಥೋ.. ಇದು ಡಬಲ್ ಮೀನಿಂಗ್ ಹಾಡಾ ಅಥವಾ ಗೂಢಾರ್ಥ ಏನಾದರೂ ಇದೆಯಾ ಗೊತ್ತಿಲ್ಲ. ಒಟ್ನಲ್ಲಿ ನಟ, ನಿರ್ದೇಶಕ ಉಪೇಂದ್ರ ಪ್ರೇಮಿಗಳ ದಿನದಂದು ತಮ್ಮ ಯುಐ ಸಿನಿಮಾದ ಹಾಡಿನ ತುಣುಕೊಂದನ್ನು ಬಿಡುಗಡೆ ಮಾಡಿ ಮತ್ತೆ ಅಭಿಮಾನಿಗಳ ತಲೆಗೆ ಹುಳು ಬಿಟ್ಟಿದ್ದಾರೆ. ಹಾಡಿನ ಈ ಸಣ್ಣ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ಪೂರ್ಣ ಹಾಡನ್ನು ಇದೇ ತಿಂಗಳು 26ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಸದ್ಯ ಉಪೇಂದ್ರ ಅವರು ಯುಐ ಸಿನಿಮಾದ ಡಬ್ಬಿಂಗ್ ಕೆಲಸದಲ್ಲಿ ನಿರತರಾಗಿದ್ದಾರೆ…
ಬೆಂಗಳೂರು: HSRP ಹೆಸರಲ್ಲಿ ವ್ಯಾಪಕ ಆನ್‌ಲೈನ್ ವಂಚನೆ ನಡೆಯುತ್ತಿದೆ.ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಚಿಸಿದ್ದ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ ನೀಡಿದ ಗಡುವು ಸಮೀಪ ಬಂದಿದೆ. ಆದರೆ ಇದೀಗ ಸರ್ಕಾರ ಅಂತಿಮ ಗಡುವಿನ ಅವಧಿಯನ್ನು ವಿಸ್ತರಣೆ ಮಾಡಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು, ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದ ಮೂರು ತಿಂಗಳುಗಳವರೆಗೆ ಅವಧಿಯನ್ನು ವಿಸ್ತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದರು. ಇದುವರೆಗೂ 18 ಲಕ್ಷ ವಾಹನಗಳಷ್ಟೇ ನೋಂದಣಿ ಆಗಿದ್ದು ಇದರ ಬಗ್ಗೆ ಆನ್‌ಲೈನ್ ವಂಚನೆ ಸಹ ನಡೆಯುತ್ತಿದೆ. ಹೀಗಾಗಿ ಅವಧಿಯನ್ನು ವಿಸ್ತರಣೆ…
ಈಗೇನಿದ್ರು ಇಂಟರ್ ನೆಟ್ ಯುಗ. ಕೈಬೆರಳ ತುದಿಯಲ್ಲೇ ಎಲ್ಲವೂ ಕ್ಷಣಾರ್ಧದಲ್ಲಿ ಸಿಕ್ಕಿ ಬಿಡುತ್ತೆ. ನೀವು ಇಂಟರ್ ನೆಟ್ ಬಳಸುವಾಗ ಕೊಂಚ ಸ್ಪೀಡ್ ಕಮ್ಮಿಯಾದ್ರು ಮನಸ್ಸು ವಿಲ ವಿಲ ಒದ್ದಾಡಿ ಬಿಡುತ್ತೆ. ಹಾಗಾದ್ರೆ ನಿಮ್ಮ ಇಂಟರ್ ನೆಂಟ್ ಫಾಸ್ಟ್ ಆಗಿ ವರ್ಕ್ ಆಗಬೇಕು ಅಂದರೆ ಏನ್ ಮಾಡಬೇಕು ಅನ್ನೋದು ಇಲ್ಲಿದೆ ನೋಡಿ. ನಿಮ್ಮ ವೈಫೈ ವೇಗ ಹೆಚ್ಚಿಸಲು ಮನೆಯಲ್ಲಿರುವ ಮೈಕ್ರೋವೇವ್ ಅನ್ನು ಮೊದಲು ಆಫ್ ಮಾಡಿರಿ. ಕಾರಣ ವೈಫೈ ಹಾಗೂ ಮೈಕ್ರೋವೇವ್ 2.4GHz ನ ಒಂದೇ ಫ್ರಿಕ್ವೆನ್ಸಿಯಲ್ಲಿ ಚಾಲಿತವಾಗಿರುತ್ತವೆ. ಎರಡು ಒಂದೇ ವೇಳೆ ಚಾಲಿತವಾಗಿದ್ದಲ್ಲಿ ನಿಮ್ಮ ವೈಫೈ ವೇಗ ಕಡಿಮೆಯಾಗುತ್ತದೆ. ಹಾಗಾಗಿ ಮೈಕ್ರೋವೇವ್ ಮೊದಲು ಆಫ್ ಬಳಿಕ ವೈಫೈ ಬಳಕೆ ಮಾಡಿ. ರೂಟರ್ ಅನ್ನು ತೆರೆದ ಪ್ರದೇಶದಲ್ಲಿ ಇಡಿ. ಅಂದರೆ ಅದರ ಸುತ್ತ ಮುತ್ತ ಖುರ್ಚಿಗಳು, ವೈರ್‌ಲೆಸ್ ಸಿಗ್ನಲ್ ಅನ್ನು ತಡೆ ಹಿಡಿಯುವ ಯಾವುದೇ ಇತರೆ ವಸ್ತುಗಳು ಇರದ ಹಾಗೆ ನೋಡಿಕೊಳ್ಳಿ. ಉದಾಹರಣೆಗೆ ಫಿಶ್ ಟ್ಯಾಂಕ್ ಮತ್ತು ಅಕ್ವೇರಿಯಂಗಳು ವೈರ್‌ಲೆಸ್ ಸಿಗ್ನಲ್‌ಗಳನ್ನು ತಡೆಹಿಡಿಯುತ್ತವೆ…
ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ನಟಿ ಸಾನ್ಯಾ ಅಯ್ಯರ್ ಸಖತ್ ಬ್ಯುಸಿಯಾಗಿದ್ದಾರೆ. ಸದಾ ತಮ್ಮ ಫೋಟೋ ಶೂಟ್ ಗಳಿಂದ ಸುದ್ದಿಯಾಗೋ ಸಾನ್ಯಾ ಇದೀಗ ಪ್ರೇಮಿಗಳ ದಿನಕ್ಕೆ ಮತ್ತೊಂದು ಚಂದದ ಫೋಟೋವನ್ನು ಶೂಟ್ ಮಾಡಿಸಿದ್ದಾರೆ. ಸಾನ್ಯಾಗೆ ನಟ ಸಮರ್ಜಿತ್ ಸಾಥ್ ನೀಡಿದ್ದಾರೆ. ಪ್ರೇಮಿಗಳ ದಿನಕ್ಕಾಗಿ ಈ ಜೋಡಿ ಫೋಟೋ ಶೂಟ್ ಮಾಡಿಸಿದ್ದು ಫೋಟೋ ಶೂಟ್ ಮಾಡುವ ಐಡಿಯಾವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ನೀಡಿದ್ದಾರೆ. ಪ್ರೇಮಿಗಳ ದಿನಕ್ಕೆ ಸ್ಪೆಷಲ್ ಗಿಫ್ಟ್ ನೀಡಲು ಪ್ಲಾನ್ ಮಾಡಿದ್ದ ಇಂದ್ರಜಿತ್ ಲಂಕೇಶ್ ಗೌರಿ ಚಿತ್ರದ ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಜೊತೆಯಾಗಿಸಿ ಫೊಟೋ ಶೂಟ್ ಮಾಡಿಸಿದ್ದಾರೆ. ಗೌರಿ ಸಿನಿಮಾದ ಮೂಲಕ ಸಾನ್ಯಾ ಅಯ್ಯರ್ ನಾಯಕಿ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಗೌರಿ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಡಬ್ಬಿಂಗ್ ಕೂಡ ಎಲ್ಲ ಆಗಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿಯೇ ಸಿನಿಮಾ ಇದೆ. ಪ್ರೇಮಿಗಳ ದಿನಕ್ಕೆ ಚಿತ್ರದ ಪೋಸ್ಟರ್ ರಿಲೀಸ್…
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಕಳೆದ ಗುರುವಾರ ನಡೆದ ಸಾರ್ವತ್ರಿಕ ಚುನಾವಣೆ ಬಳಿಕ ಸಾಕಷ್ಟು ಪ್ರಕ್ರಿಯೆಗಳು ನಡೆದಿವೆ. ಇದೀಗ ಮಂಗಳವಾರ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಪಿಎಂಎಲ್- ಎನ್ (ಪಾಕಿಸ್ತಾನ ಮುಸ್ಲಿಂ ಲೀಗ್ – ನವಾಜ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ಸ್ಥಾನಕ್ಕೆ ಪಕ್ಷವು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. ನಾಲ್ಕನೇ ಬಾರಿಗೆ ಪ್ರಧಾನಿ ಹುದ್ದೆಗೇರಲು ನವಾಜ್ ಷರೀಫ್ ಸಜ್ಜಾಗಿದ್ದರು. ಆದರೆ ತಡ ರಾತ್ರಿ ನಡೆದ ಬೆಳವಣಿಗೆಗಳು ವ್ಯತಿರಿಕ್ತವಾಗಿದ್ದು, ಪಿಪಿಪಿ, ಎಂಕ್ಯೂಎಂ ಸೇರಿದಂತೆ ಇತರೆ ಪಕ್ಷಗಳ ಬೆಂಬಲ ಪಡೆದು ಸಮ್ಮಿಶ್ರ ಸರಕಾರ ರಚನೆಗೆ ಶೆಹಬಾಜ್ ಷರೀಫ್ ಮುಂದಾಗಿದ್ದಾರೆ. ಪಿಎಂಎನ್‌ಎಲ್ ಪಕ್ಷದಿಂದ ಪ್ರಧಾನಿ ಸ್ಥಾನಕ್ಕೆ ನವಾಜ್ ಷರೀಫ್ ಅವರ ಹೆಸರನ್ನು ಸೋದರ ಹಾಗೂ ಮಾಜಿ ಪ್ರಧಾನಿ ಶೆಹಬಾಜ್ ಷರೀಫ್ ಘೋಷಣೆ ಮಾಡಿದ್ದರು., ”ಹಳ್ಳಿ ತಪ್ಪಿರುವ ದೇಶದ ಅಭಿವೃದ್ಧಿಗೆ ಮರು ಜೀವ ನೀಡಲು ನವಾಜ್ ಅಗತ್ಯ,” ಎಂದು ಪ್ರತಿಪಾದಿಸಿದ್ದರು. ಆದರೆ ಶೆಹಬಾಜ್ ಅವರನ್ನೇ ಎರಡನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ನವಾಜ್ ಹೆಸರು ಸೂಚಿಸಿದ್ದಾರೆ.
ಆಡಳಿತ ವಿರೋಧಿ ದಂಗೆಯನ್ನು ಹತ್ತಿಕ್ಕುವ ಸಲುವಾಗಿ ಯುವ ಜನರನ್ನು ಏಪ್ರಿಲ್‌ನಿಂದ ಕಡ್ಡಾಯವಾಗಿ ಸೇನೆಗೆ ನೇಮಿಸಿಕೊಳ್ಳುವ ಯೋಜನೆಗೆ ಮ್ಯಾನ್ಮಾರ್ ಸೇನಾಡಳಿಗೆ ಮುಂದಾಗಿದೆ. ಇದಕ್ಕಾಗಿ ನಿವೃತ್ತ ಸೇನಾ ಸಿಬ್ಬಂದಿಯ ಆಗತ್ಯ ಇದೆ ಎಂದು ಮೂಲಗಳು ತಿಳಿಸಿವೆ. 2021ರಲ್ಲಿ ಚುನಾಯಿತ ಸರ್ಕಾರದಿಂದ ಸೇನೆಯು ಅಧಿಕಾರ ಕಸಿದುಕೊಂಡ ಬಳಿಕ ದೇಶದಲ್ಲಿ ಪ್ರಕ್ಷುಬ್ಧ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಜನರನ್ನು ಸೇವೆಗೆ ಕರೆಸಿಕೊಳ್ಳಲು ಯೋಜಿಸಿರುವುದು ಸೇನಾಡಳಿತ ಒತ್ತಡದಲ್ಲಿದೆ ಎಂಬುದನ್ನು ಸೂಚಿಸುತ್ತದೆ. 18ರಿಂದ 35 ವಯಸ್ಸಿನ ಪುರುಷರು ಮತ್ತು 18ರಿಂದ 27 ವಯಸ್ಸಿನ ಮಹಿಳೆಯರು ಎರಡು ವರ್ಷದವರೆಗೆ ಸೇನೆಯಲ್ಲಿ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಕಾನೂನನ್ನು ಮ್ಯಾನ್ಮಾರ್ ಆಡಳಿತ ಕಳೆದವಾರ ಘೋಷಿಸಿದೆ. ಇದು ಏಪ್ರಿಲ್‌ನಿಂದ ಜಾರಿಗೆ ಬರಲಿದೆ. ‘ಕಡ್ಡಾಯ ಸೇನಾ ಭರ್ತಿಯನ್ನು ಏಪ್ರಿಲ್‌ನಿಂದ ಆರಂಭಿಸಲು ಕಾರ್ಯಪ್ರವೃತ್ತರಾಗಿದ್ದೇವೆ’ ಎಂದು ಸೇನಾಡಳಿತದ ವಕ್ತಾರ ಜಾ ಮಿನ್ ತುನ್ ತಿಳಿಸಿರುವುದಾಗಿ ಬಿಬಿಸಿ ವರದಿ ಮಾಡಿದೆ. ಈ ಬಗ್ಗೆ ಅವರು ಹೆಚ್ಚಿನ ವಿವರ ನೀಡಿಲ್ಲ. ಆದರೆ, ಕಳೆದ ಐದು ವರ್ಷಗಳಲ್ಲಿ ನಿವೃತ್ತರಾಗಿರುವವರೂ ಸೇವೆಗೆ ವಾಪಸ್ ಆಗುವಂತೆ ತುನ್…
‘ಬಿಗ್ ಬಾಸ್ ಕನ್ನಡ ಸೀಸನ್ 10’ ರ ವಿನ್ನರ್ ಕಾರ್ತಿಕ್ ಮಹೇಶ್ ಸಖತ್ ಬ್ಯುಸಿಯಾಗಿದ್ದಾರೆ. ಸಾಕಷ್ಟು ಸ್ಥಳಗಳಿಗೆ ತೆರಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ನಿವಾಸದಲ್ಲಿ ಕಾರ್ತಿಕ್ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಕಾರ್ತಿಕ್ ಅವರಿಗೆ ಶುಭ ಹಾರೈಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾರ್ತಿಕ್ ಆಶೀರ್ವಾದ ಪಡೆದಿದ್ದಾರೆ. ‘ಒಳ್ಳೆದಾಗಲಿ ಕಣಯ್ಯ. ಸಿನಿಮಾ ರಂಗದಲ್ಲಿ ಒಳ್ಳೆಯ ಹೆಸರು ಮಾಡು’ ಎಂದು ಹಾರೈಸಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮ ಹರೀಶ್. ಮತ್ತು ಉಲ್ಲಾಸ್ ಗೌಡ ಹಾಜರಿದ್ದರು.
ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗವನ್ನು ಆಳಿದ ಖಾನ್ ತ್ರಯರು ಇದೀಗ ಕೊಂಚ ಸೈಲೆಂಟ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸೋಲಿನ ಸಿನಿಮಾಗಳನ್ನು ಮಾಡಿದ್ದ ಶಾರುಖ್ ಖಾನ್ ಇದೀಗ ಮತ್ತೆ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಅತ್ತ ಆಮಿರ್ ಖಾನ್ ಸದ್ದಿಲ್ಲದೆ ಸೈಲೆಂಟ್ ಆಗಿದ್ದಾರೆ. ಈ ಮಧ್ಯೆ ನಟ ಸಲ್ಮಾನ್ ಖಾನ್ ಹೇಗಾದ್ರು ಮಾಡಿ ಸ್ಟಾರ್ ಪಟ್ಟಕ್ಕೆ ಏರಬೇಕು ಎಂದು ದಕ್ಷಿಣ ಭಾರತದ ನಿರ್ದೇಶಕರ ಮೊರೆ ಹೋಗಿದ್ದಾರೆ. ಜವಾನ್ ಸಿನಿಮಾದ ಬಳಿಕ ಶಾರುಖ್ ಖಾನ್ ಮತ್ತೆ ಸ್ಟಾರ್ ಪಟ್ಟಕ್ಕೇರಿದ್ದಾರೆ. ಇನ್ನೂ ನಟ ರಣಬೀರ್ ಕಪೂರ್ ಕೂಡ ತಮ್ಮ ವೃತ್ತಿ ಜೀವನದಲ್ಲಿಯೇ ಅತಿ ದೊಡ್ಡ ಹಿಟ್ ಸಿನಿಮಾ ನೀಡಿದ್ದಾರೆ. ಇದೇ ಕಾರಣಕ್ಕೆ ಬಾಲಿವುಡ್ನ ಸ್ಟಾರ್ ನಟರ ಕಣ್ಣು ದಕ್ಷಿಣ ಭಾರತದತ್ತ ನೆಟ್ಟಿದ್ದೆ. ಇದೀಗ ನಟ ಸಲ್ಮಾನ್ ಖಾನ್ ಕೂಡ ದಕ್ಷಿಣ ಭಾರತದ ಸಿನಿಮಾ ನಿರ್ದೇಶಕರ ಮೊರೆ ಹೋಗಿದ್ದಾರೆ. ತಮಿಳಿನಲ್ಲಿ ‘ಗಜಿನಿ’, ‘ತುಪ್ಪಾಕಿ’, ‘7ತ್ ಸೆನ್ಸ್’, ‘ಕತ್ತಿ’, ತೆಲುಗಿನಲ್ಲಿ ಚಿರಂಜೀವಿ ನಟನೆಯ ‘ಸ್ಟಾಲಿನ್’, ಮಹೇಶ್ ಬಾಬು ನಟನೆಯ…
ಖ್ಯಾತ ಗಾಯಕಿ ಹಾಗೂ ನಟಿ ವಿಜಯ ಲಕ್ಷ್ಮಿ ಅಲಿಯಾಸ್ ಮಲ್ಲಿಕಾ ರಜಪೂತ್ ಅವರ ಶವ ಫೆ.13ರಂದು ತಮ್ಮ ಸ್ವಗೃಹದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗಾಯಕಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು, ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸ್ಪಷ್ಟನೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. 35 ವರ್ಷದ ಗಾಯಕಿ ಕಮ್ ನಟಿ ಮಲ್ಲಿಕಾ ರಜಪೂರ್ ಸಾಕಷ್ಟು ಸಿನಿಮಾಗಳಿಗೆ ಹಾಡಿ ಖ್ಯಾತಿ ಘಳಿಸಿದ್ದರು. ಅವರ ಮೃತದೇಹ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾಕುಂಡ್ ಪ್ರದೇಶದ ತನ್ನ ಮನೆಯ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಸಾವು ಅನುಮಾನಾಸ್ಪದವಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮನೆಯ ಸದಸ್ಯರು ಮಲಗಿದ್ದ ಕಾರಣ ಯಾವಾಗ ಈ ಘಟನೆ ನಡೆದಿದೆ ಎಂಬುದು ಗೊತ್ತಾಗಲಿಲ್ಲ ಎಂದು ಮಲ್ಲಿಕಾ ಅವರ ತಾಯಿ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಶ್ರೀರಾಮ್ ಪಾಂಡೆ ಹೇಳಿದ್ದಾರೆ.