Author: Author AIN

ಬಿಗ್‍ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಸಿದ್ದ ನಟಿ ತನಿಷಾಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ತನಿಷಾ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿತ್ತು. ಸದ್ಯ ಈ ಕೇಸ್ ನಲ್ಲಿ ತನಿಷಾಗೆ ಕ್ಲೀನ್‍ಚಿಟ್ ಸಿಕ್ಕಿದ್ದು ಬೆಂಕಿ ತನಿಷಾ ನಿಟ್ಟುಸಿರು ಬಿಟ್ಟಿದ್ದಾರೆ. ಬಿಗ್ ಬಾಸ್ ನಲ್ಲಿದ್ದ ವೇಳೆ ತನಿಷಾ ಕುಪ್ಪಂಡ ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅವರ ಮೇಲೆ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪದ್ಮ ಕುಂಬಳುಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಕುಂಬಳಗೋಡು ಪೊಲೀಸರು ಜಾತಿನಿಂದನೆ ಆರೋಪದಡಿ ತನಿಷಾ ಕುಪ್ಪಂಡ ವಿರುದ್ಧ ಎಫ್‍ಐಆರ್ ದಾಖಲಾಸಿದ್ದರು. ಈ ಪ್ರಕರಣದಲ್ಲಿ ತನಿಷಾ ಮೇಲೆ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಒತ್ತಡ ಹೇರಲಾಗಿತ್ತು. ಈ ಕುರಿತಂತೆ ತನಿಷಾ ತಾನು ಆ ರೀತಿ ಮಾತನಾಡಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಆದರೂ, ಕ್ರಮಕ್ಕೆ ಒತ್ತಾಯ ಮಾಡಲಾಗಿತ್ತು. ಸದ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ದೂರಿನ ಜೊತೆ ತನಿಷಾ ಬಿಗ್…

Read More

ಅಬುಧಾಬಿ: ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದು ದೇವಾಲಯವನ್ನು ಫೆಬ್ರುವರಿ 14 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಸ್ವಾಮಿನಾರಾಯಣ ಸಂಸ್ಥೆ ತಮ್ಮ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದು ದೇವಾಲಯವನ್ನು ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ನಿರ್ಮಿಸಿದ್ದು, ಇದು ಯುಎಇಯ ಮೊದಲ ಸಾಂಪ್ರದಾಯಿಕ ಕಲ್ಲಿನ ಹಿಂದೂ ದೇವಾಲಯವಾಗಿದೆ. ಈ ದೇವಸ್ಥಾನವನ್ನು ಅಬುಧಾಬಿಯ ಮುರೇಖಾ ಜಿಲ್ಲೆಯಲ್ಲಿ 27 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ಉದ್ಘಾಟನೆ ಹಿನ್ನೆಲೆ ಬಿಎಪಿಎಸ್‌ನ ಆಧ್ಯಾತ್ಮಿಕ ಗುರು ಸ್ವಾಮಿ ಮಹಂತ್ ಸ್ವಾಮಿ ಮಹಾರಾಜ್ ಅವರು ಯುಎಇಗೆ ಆಗಮಿಸಿದ್ದಾರೆ. ಮಂದಿರದ ಉದ್ಘಾಟನೆಯನ್ನು ‘ಸೌಹಾರ್ದತೆಯ ಹಬ್ಬ’ದಂತೆ ಆಚರಿಸಲಾಗುತ್ತದೆ. ನಂಬಿಕೆಯನ್ನು ಬಲಪಡಿಸುವುದು, ಎಲ್ಲಾ ತಲೆಮಾರುಗಳು ಮತ್ತು ಹಿನ್ನೆಲೆಗಳುಳ್ಳ ಜನರ ನಡುವೆ ಸಾಮರಸ್ಯವನ್ನು ಬೆಳೆಸುವುದು ಈ ಉದ್ಘಾಟನಾ ಕಾರ್ಯಕ್ರಮದ ಧ್ಯೇಯವಾಗಿದೆ ಎಂದು ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಈ ಭೇಟಿ ಭಾರತ ಮತ್ತು ಯುಎಇ ನಡುವಿನ ನಿಕಟ ಸಂಬಂಧವನ್ನು ಮತ್ತಷ್ಟು ‌ಹೆಚ್ಚಿಸಲಿದೆ ಎಂದು ವಿಶ್ಲೇಷಿಸಲಾಗಿದೆ.

Read More

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಐಶ್ವರ್ಯ ರಜನಿಕಾಂತ್ ನಿರ್ದೇಶನದ ಬಹು ನಿರೀಕ್ಷಿತ ಲಾಲ್ ಸಲಾಂ ಸಿನಿಮಾ ಇಂದು ರಿಲೀಸ್ ಆಗುತ್ತಿದೆ. ಚಿತ್ರದಲ್ಲಿ ರಜನಿಕಾಂತ್ ಮೊಯಿದೀನ್ ಭಾಯ್ ಹೊಸರಿನ ಮುಸ್ಲಿಂ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಚಿತ್ರದ ಕುರಿತಾಗಿ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಲಾಲ್ ಸಲಾಂ ಸಿನಿಮಾದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು ಸಾಕಷ್ಟು ತೂಕವಾದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಂದ ಹಾಗೆ ರಜನಿ ಪಾತ್ರ ಕನ್ನಡದ ನಟ ಸಾಯಿಕುಮಾರ್ ಧ್ವನಿಯಾಗಿದ್ದಾರೆ. ‘ಲಾಲ್ ಸಲಾಂ’ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ತೆಲುಗು ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ತೆಲುಗು ವರ್ಷನ್​ನಲ್ಲಿ ರಜನಿಕಾಂತ್ ಪಾತ್ರಕ್ಕೆ ಸಾಯಿಕುಮಾರ್ ಧ್ವನಿ ನೀಡಿದ್ದಾರೆ. ತಮಿಳಿನ ಜೊತೆಗೆ ತೆಲುಗು ವರ್ಷನ್ ಲಾಲ್ ಸಲಾಂ ಕೂಡ ಇಂದೇ ರಿಲೀಸ್ ಆಗುತ್ತಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಇರುವ ಕೆಲವು ರಜನಿಕಾಂತ್ ಫ್ಯಾನ್ಸ್​ಗೆ ತಂಡದ ನಿರ್ಧಾರ ಬೇಸರ ಮೂಡಿಸಿದೆ. ತೆಲುಗು ಭಾಗದಲ್ಲಿ ತಂಡ ಯಾವುದೇ ಪ್ರಚಾರ ಮಾಡಿಲ್ಲ.…

Read More

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಸಾಕಷ್ಟು ಬಿಗಿ ಭದ್ರತೆ ನಿಯೋಜಿಸಲಾಗಿದೆ. ಸದ್ಯ ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಸೇರಿದಂತೆ ಇತರ ಪ್ರಮುಖ ಬಂಧಿತ ರಾಜಕೀಯ ವ್ಯಕ್ತಿಗಳು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎನ್ನಲಾಗುತ್ತಿದೆ. ಮಾಜಿ ವಿದೇಶಾಂಗ ಸಚಿವ ಶಾ ಮಹಮ್ಮದ್‌ ಖುರೇಷಿ, ಪಂಜಾಬ್ ಮಾಜಿ ಮುಖ್ಯಮಂತ್ರಿ ಚೌಧರಿ ಪರ್ವೇಜ್ ಇಲಾಹಿ, ಅವಾಮಿ ಮುಸ್ಲಿಂ ಲೀಗ್ ಮುಖ್ಯಸ್ಥ ಶೇಖ್ ರಶೀದ್ ಮತ್ತು ಮಾಜಿ ಸಚಿವ ಫವಾದ್ ಚೌಧರಿ ಅಂತೆ ಮೂಲಕ ಮತ ಚಲಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿ(ಸಿಎನ್‌ಐಸಿ) ಹೊಂದದೆ ಇರುವ ಕಾರಣ ಅಡಿಯಾಲಾ ಜೈಲಿನಲ್ಲಿರುವ 7 ಸಾವಿರ ಕೈದಿಗಳಲ್ಲಿ 100ಕ್ಕಿಂತಲೂ ಕಡಿಮೆ ಕೈದಿಗಳು ಮತ ಚಲಾಯಿಸಲು ಅರ್ಹತೆ ಪಡೆದಿದ್ದರು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಒಟ್ಟು 90,675 ಮತಗಟ್ಟೆಗಳಿರುತ್ತವೆ. ಈ ಕೇಂದ್ರಗಳಲ್ಲಿ 2,76,402 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ, 12.85 ಕೋಟಿಗೂ ಹೆಚ್ಚು…

Read More

ಟಾಲಿವುಡ್ ಬ್ಯೂಟಿ ಅನುಷ್ಕಾ ಶೆಟ್ಟಿ ಸದ್ಯ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೂ ಹೆಚ್ಚಾಗಿ ಹೊರಗೆಲ್ಲೂ ಕಾಣಿಸಿಕೊಳ್ಳದ ನಟಿ ಆಗಾಗ ಅಭಿಮಾನಿಗಳ ಕಣ್ಣಿಗೆ ಬೀಳುತ್ತಿರುತ್ತಾರೆ. ಹಾಗಾಗಿ ಬಹಿರಂಗವಾಗಿ ಅನುಷ್ಕಾ ಕಾಣಿಸಿಕೊಂಡಾಗ ಅಭಿಮಾನಿಗಳು ಮುತ್ತಿಕ್ಕಿಕೊಳ್ಳೋದು ಸಹಜವಾಗಿದೆ. ಸದ್ಯ ಅನುಷ್ಕಾ ತಮ್ಮ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಪಾಲ್ಗೊಳ್ಳೋದಕ್ಕಾಗಿ ಒಡಿಶಾಗೆ ತೆರಳಿದ್ದಾರೆ. ಅನುಷ್ಕಾ ಒಡಿಶಾಗೆ ಬಂದಿದ್ದಾರೆ ಎನ್ನುವ ಸುದ್ದಿ ತಿಳಿದ ತಕ್ಷಣ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದಾರೆ. ಅಭಿಮಾನಿಗಳನ್ನು ಕಂಡು ಅನುಷ್ಕಾ, ಕಾರಿನಿಂದ ಇಳಿದು ಓಡಿದ್ದಾರೆ. ಒಡಿಶಾದ ಜೇಪೋರ್ ನಲ್ಲಿ ಅನುಷ್ಕಾ ನಟನೆಯ ಹೊಸ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ರಮ್ಯಾಕೃಷ್ಣ  ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕ್ರಿಶ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಚಿತ್ರಕ್ಕೆ ಶೀರ್ಷಿಕೆ ಇನ್ನೂ ಘೋಷಣೆ ಆಗಿಲ್ಲ.

Read More

ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಸಖತ್ ಖುಷಿಯಲ್ಲಿದ್ದಾರೆ. ತರುಣ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಸಿನಿಮಾ ಅದ್ಭುತ ಯಶಸ್ಸು ಕಂಡಿದೆ. ಇದೇ ಖುಷಿಯಲ್ಲಿ ಸುದೀರ್ ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ನೀಡಿ ಕೊರಗಜ್ಜನ ಆಶೀರ್ವಾದ ಪಡೆದಿದ್ದಾರೆ. ಮಂಗಳೂರಿನಲ್ಲಿರುವ ಕೊರಗಜ್ಜನ ದೇವಸ್ಥಾನದ ಜೊತೆಗೆ  ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೂ ತೆರಳಿ ಪೂಜೆ ಸಲ್ಲಿಸಿದ್ದಾರೆ. ಮುಂದಿನ ತಮ್ಮ ಕಾರ್ಯಗಳಿಗೆ ಯಶಸ್ಸು ನೀಡಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಕಾಟೇರ ಸಿನಿಮಾ ವರ್ಷದ ಹಿಟ್ ಚಿತ್ರಗಳ ಸಾಲಿನಲ್ಲಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡುವ ಕೆಲಸವನ್ನೂ ಮಾಡಲಾಗುತ್ತಿದೆ. ಈ ಮಧ್ಯೆ ತರುಣ್ ನಿರ್ದೇಶನದ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

Read More

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ವಿಜಯ್ ಆನಂದ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವಿಜಯ್ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ. 1982ರಲ್ಲಿ ವೃತ್ತಿ ಜೀವನ ಆರಂಭವಿಸಿದ್ದ ವಿಜಯ್ ನಾಲ್ಕು ದಶಕಗಳ ಕಾಲ ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇಳಯರಾಜರಂಥ ದಿಗ್ಗಜರ ಮಧ್ಯೆಯೂ ತಮ್ಮ ತನವನ್ನು ಉಳಿಸಿಕೊಂಡಿದ್ದ ವಿಜಯ್ ನಿಧನ ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ರಜನಿಕಾಂತ್ ನಟನೆಯ ನಾನ್ ಆದಿಮೈ ಇಲೈ ಸೇರಿದಂತೆ ನೂರಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿರುವ ವಿಜಯ್, ತಮಿಳು, ತೆಲುಗು ಹಾಗೂ ಮಲಯಾಳಂ ಸಿನಿಮಾ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.

Read More

ಚೀನಾದ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಆಗಿರುವ ಇನ್ ಪ್ಲಸ್ ಸಾಕಷ್ಟು ಹೊಸ ಹೊಸ ಫೋನ್ ಗಳನ್ನು ಬಿಡುಗಡೆ ಮಾಡುತ್ತಿದೆ. ಒನ್ ಪ್ಲಸ್ ಸಂಸ್ಥೆಯು ಒನ್‌ಪ್ಲಸ್‌ 12R ಸ್ಮಾರ್ಟ್‌ಫೋನ್ ಫಸ್ಟ್‌ ಸೇಲ್‌ ಫೆ. 6 ರಂದು ಮುಕ್ತಾಯವಾಗಿದ್ದು, ಸದ್ಯದಲ್ಲೇ ಒನ್‌ಪ್ಲಸ್‌ 12R ಸ್ಮಾರ್ಟ್‌ಫೋನ್ ಓಪೆನ್‌ ಸೇಲ್‌ ಪ್ರಾರಂಭವಾಗಲಿದೆ. ಈ ಮೂಲಕ ಮೊದಲು ಖರೀದಿಸಲು ಸಾಧ್ಯವಾಗದೆ ಇದ್ದವರು ಇದೀಗ ಕೊಂಡುಕೊಳ್ಳಬಹುದಾಗಿದೆ. ಒನ್‌ಪ್ಲಸ್‌ 12R ಸ್ಮಾರ್ಟ್‌ಫೋನ್‌ ಮಾರಾಟವು ಇದೇ ಫೆಬ್ರವರಿ 13ರಿಂದ ಒನ್‌ಪ್ಲಸ್‌ ಇಂಡಿಯಾ ವೆಬ್‌ಸೈಟ್, ಅಮೆಜಾನ್ ಇ ಕಾಮರ್ಸ್‌ ಹಾಗೂ ರಿಟೇಲ್‌ ಸ್ಟೋರ್‌ಗಳ ಲಭ್ಯವಾಗಲಿದೆ. ಅಂದ ಹಾಗೆ ಈ 12R ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಒನ್​ಪ್ಲಸ್ 12R ಮೊಬೈಲ್ ನ ಬೆಲೆ ರೂ. 39,999 ರಿಂದ ಪ್ರಾರಂಭವಾಗುತ್ತದೆ. ಇದು 8GB RAM ಮತ್ತು 128GB ಆಂತರಿಕ ಸಂಗ್ರಹಣೆಯದ್ದಾಗಿದೆ. 16GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಬೆಲೆ 45,999 ರೂ. ಆಗಿದೆ. ICICI ಕ್ರೆಡಿಟ್ ಕಾರ್ಡ್ ಮತ್ತು…

Read More

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗನ ವಿವಾಹ ಆರತಕ್ಷತೆ ಕಾರ್ಯಕ್ರಮ ಮಧ್ಯಪ್ರದೇಶದ ನಕಾಡದಲ್ಲಿ ಅದ್ದೂರಿಯಾಗಿ ನೆರವೇರಿದೆ. ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗೌಡ ಭಾಗಿಯಾಗಿ ನವ ದಂಪತಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕದ  ಉದ್ಯಮಿಗಳಾದ ಪುಟ್ಟರಾಜ್. ಪಿ.  ಲಕ್ಷ್ಮೀಪ್ರಸಾದ್ ಆರ್. ಎಸ್.  ಸೇರಿದಂತೆ ವಿವಿಧ ರಾಜ್ಯದ ಗಣ್ಯರು, ರಾಜಕಾರಣಿಗಳು ಅಧಿಕಾರಿಗಳು ಭಾಗವಹಿಸಿದ್ದರು. ಗೆಹ್ಲೋಟ್‌ ಅವರ ಮೊಮ್ಮಗ ಧೀರಜ್‌ ಗೆಹ್ಲೋಟ್‌ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾದ ಗಣ್ಯರು. ಮಧ್ಯಪ್ರದೇಶದ ನಕಾಡದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ಅವರ ವಿವಾಹ ಆರತಕ್ಷತೆ ಸಮಾರಂಭದ ಫೋಟೋಸ್.

Read More

ಪಾಕ್ ನಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಇಂದು ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮತದಾನ ಪ್ರಕ್ರಿಯೆಯು ಬೆಳಗ್ಗೆ 8 ರಿಂದ ಶುರುವಾಗಿದ್ದು ಸಂಜೆ 5 ರವರೆಗೆ ನಡೆಯಲಿದ್ದು, ಪಾಕ್ ನ ಎಲ್ಲಾ ಮತಗಟ್ಟೆಗಳಲ್ಲಿ 128 ಮಿಲಿಯನ್‌ಗಿಂತಲೂ ಹೆಚ್ಚು ಮತದಾರರು ಮತ ಚಲಾಯಿಸಲಿದ್ದಾರೆ. ಈ ನಡುವೆ ಭದ್ರತೆಯ ದೃಷ್ಟಿಯಿಂದ ಇಡೀ ದೇಶಾದ್ಯಂತ ಇಂದು ಮೊಬೈಲ್ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ ಮೊಬೈಲ್ ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಪಾಕಿಸ್ತಾನದ ಉಸ್ತುವಾರಿ ಆಂತರಿಕ ಸಚಿವಾಲಯವು ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಪಾಕಿಸ್ತಾನದ ಒಟ್ಟಾರೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಪಾಕಿಸ್ತಾನದಲ್ಲಿ ಒಟ್ಟು 90,675 ಮತಗಟ್ಟೆಗಳಿರುತ್ತವೆ. ಈ ಕೇಂದ್ರಗಳಲ್ಲಿ 2,76,402 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ, 12.85 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರು ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳಿಗೆ 5121 ಅಭ್ಯರ್ಥಿಗಳಲ್ಲಿ ಒಟ್ಟು 12,85,85,760 ನೋಂದಾಯಿತ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.…

Read More