ಬೀದರ್ :- ಬೀದರ್‌ನ ಎಸ್‌ಬಿಐ ಬ್ಯಾಂಕ್ ಎದುರು ನಡೆದ ದರೋಡೆ, ಶೂಟೌಟ್ ಪ್ರಕರಣ ಮರೆ ಮಾಚುವ ಮುನ್ನವೇ ಔರಾದ್ ತಾಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದಕ್ಕೆ ನುಗ್ಗಿದ ಖದೀಮರು ಒಂಟಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ೨೫ ಲಕ್ಷ ಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. https://ainlivenews.com/a-man-who-went-missing-in-kalaburagi-was-found-dead-in-maharashtra/ ಪ್ರೀತಿ ಓಂಕಾರ ಗಾದಗೆ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದಿದ್ದಾಗ ಮಧ್ಯಾಹ್ನ ವೇಳೆ ಮನೆಯ ಹಿಂಬಾಗಿಲು ಮುರಿದು ಒಳಗೆ ನುಗ್ಗಿದ ಮುಸುಕುಧಾರಿ ಇಬ್ಬರು ಕಳ್ಳರು ಒಂಟಿ ಮಹಿಳೆಗೆ ಹಣ ಮತ್ತು ಚಿನ್ನಾ ಭರಣ ನೀಡಲು ಬೆದರಿಕೆವೊಡ್ಡುವ ಜತೆಗೆ ಚಾಕುವಿನಿಂದ ಕೈ ಮತ್ತು ಭುಜದ ಚುಚ್ಚಿದ್ದಾರೆ. ನಂತರ ಗ್ಯಾಸ್ ಒಲೆಯ ಮೇಲೆ ಚಾಕು ಕಾಯಿಸಿ ಕೈ ಮೇಲೆ ಚುಚ್ಚಿ ಚಿತ್ರಹಿಂಸೆ ನೀಡಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂತಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದರೋಡೆಕೋರರ ಹಲ್ಲೆಯೊಳಗಾದ ಮಹಿಳೆಗೆ ಬೀದರ್‌ನ…
Author: Author AIN
ಬೆಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಿಎಸ್ಸಿ ವಿದ್ಯಾರ್ಥಿಯನ್ನು ಸಿಸಿಬಿ ಮಾದಕದ್ರವ್ಯ ನಿಗ್ರಹದಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವಿಷ್ಣುದಾಸ್ ಬಂಧಿತ ಆರೋಪಿಯಾಗಿದ್ದು, ಕೇರಳದ ಪರಿಚಯಸ್ಥರಿಂದ ವಿಷ್ಣುದಾಸ್ ಎಂಡಿಎಂಎ ಖರೀದಿಸುತ್ತಿದ್ದನು. ನಂತರ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದುಕೊಂಡು ಪರಿಚಯಸ್ಥರಿಗೆ ಹೆಚ್ಚಿನ ಬೆಲೆಗೆ ಡ್ರಗ್ ಮಾರಾಟ ಮಾಡುತ್ತಿದ್ದನು. https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 55 ಲಕ್ಷ ಮೌಲ್ಯದ 522 ಗ್ರಾಂ ಎಂಡಿಎಂಎ ಕ್ರಿಸ್ಟೆಲ್ ವಶಕ್ಕೆ ಪಡೆದಿದ್ದು, ಘಟನೆ ಸಂಬಂಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು: ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ ಮಾಡಿರುವಂತಹ ಘಟನೆ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಚಂದ್ರಪ್ಪ(44) ಮೃತ ವ್ಯಕ್ತಿ. ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಂದ್ರಪ್ಪ ಮಲಗಿದ್ದ. ಇಬ್ಬರು ವ್ಯಕ್ತಿಗಳು ಚಂದ್ರಪ್ಪ ಮೊಬೈಲ್ ಕಿತ್ತುಕೊಳ್ಳಲು ಹೋಗಿದ್ದಾರೆ. https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಈ ವೇಳೆ ಚಾಕುವಿನಿಂದ ಇರಿದು ಚಂದ್ರಪ್ಪನ ಕೊಲೆಗೈದಿದ್ದಾರೆ. ಸದ್ಯ ಆರೋಪಿ ವಿಜಯ್ ಎಂಬಾತನ ಬಂಧನವಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಐವರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 8 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್‌ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.
ವಾಷಿಂಗ್ಟನ್: ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸಕ್ಕೆ ತೆರಳಿದ್ದು ಈ ವೇಳೆ ಎಲಾನ್ ಮಸ್ಕ್ ಅವರನ್ನು ಭೇಟಿಯಾಗಿದ್ದಾರೆ. ಈ ಬೆನ್ನಲ್ಲೇ ಇದೀಗ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಮಸ್ಕ್ ನೇತೃತ್ವದ ಟೆಸ್ಲಾ ಕಂಪನಿ ಮುಂದಿನ ಏಪ್ರಿಲ್ ವೇಳೆಗೆ ಭಾರತದಲ್ಲಿ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳನ್ನ ಮಾರುಕಟ್ಟೆಗೆ ಬಿಡುಗಡೆಗೊಳಿಸಲು ರೆಡಿಯಾಗಿದೆ. ಮೂಲಗಳ ಪ್ರಕಾರ, ಟೆಸ್ಲಾ ಕಂಪನಿಯು ತನ್ನ ಬರ್ಲಿನ್ ಪ್ಲ್ಯಾಂಟ್‌ನಿಂದ ಎಲೆಕ್ಟ್ರಿಕ್ ಕಾರುಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಶೋರೂಮ್‌ಗಾಗಿ ಮುಂಬೈನ ಬಾಂದ್ರಾದಲ್ಲಿ ಮತ್ತು ದೆಹಲಿಯ ಏರೋಸಿಟಿಯಲ್ಲಿ ಸ್ಥಳಗಳನ್ನು ಗುರುತಿಸಲಾಗಿದೆ. ಆದ್ರೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ತಯಾರಿಸುವ ಯಾವುದೇ ಯೋಜನೆಯನ್ನ ಟೆಸ್ಲಾ ಸದ್ಯಕ್ಕೆ ಹೊಂದಿಲ್ಲ ಎನ್ನಲಾಗುತ್ತಿದೆ. ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲು ಮುಂದಾಗಿರುವ ಟೆಸ್ಲಾ 25,000 ಡಾಲರ್ (ಸುಮಾರು 22 ಲಕ್ಷ ರೂ.) ಆರಂಭಿಕ ಬೆಲೆಯಿಂದ ಮಾರಾಟ ಪ್ರಾರಂಭಿಸಲು ಪ್ಲ್ಯಾನ್ ಮಾಡಿದೆ. ಇದರೊಂದಿಗೆ 2025ರ ಅಂತ್ಯದ ವೇಳೆಗೆ 1 ಶತಕೋಟಿ ವಹಿವಾಟು ನಡೆಸುವ ಗುರಿ ಹೊಂದಿದೆ ಎಂದು…
ಕಲಬುರಗಿ : ಕಲಬುರಗಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಹತ್ಯೆಗೈದು ಶವ ಬಿಸಾಡಿದ್ದಾರೆ ಎನ್ನಲಾಗುತ್ತಿದೆ. ಕಳೆದ ಜ.30ರಂದು ತಾಲೂಕಿನ ಖಜೂರಿ ಗ್ರಾಮದ ರಾಹುಲ್ ಎಂಬಾತ ನಾಪತ್ತೆಯಾಗಿದ್ದನು. ಜ.30ರ ರಾತ್ರಿ 8:30 ಕ್ಕೆ ಮನೆಯಿಂದ ಹೊರ ಹೋಗಿದ್ದ ರಾಹುಲ್ ಬಳಿಕ ಕಣ್ಮರೆಯಾಗಿದ್ದ. ಇದೀಗ 20 ದಿನಗಳ ಬಳಿಕ ಸಾಂಗ್ಲಿ ಬಳಿಯ ಬೆಣ್ಣೆ ತೋರಾದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೂಲಗಳ ಪ್ರಕಾರ ಹಂತಕರು ಕೊಲೆ ಮಾಡಿ ಶವಕ್ಕೆ ಕಲ್ಲು ಕಟ್ಟಿ ಬಿಸಾಕಿದ್ದಾರೆ ಎನ್ನಲಾಗಿದೆ. https://ainlivenews.com/three-dead-bodies-were-found-in-the-backwaters-of-tunga-river/ ಈಗಾಗಲೇ ಕೊಲೆ ಮಾಡಿದ ಐವರ ಪೈಕಿ ಇಬ್ಬರನ್ನ ಪೊಲೀಸರು ಬಂಧಿಸಿದ್ದು ಪ್ರಮುಖ ಆರೋಪಿ ಎಸ್ಕೇಪ್ ಆಗಿದ್ದಾನೆ. ಇನ್ನೊಂದು ವಿಷಯವೆಂದರೆ ಕೊಲೆಯ ಬಳಿಕ ಪ್ರಮುಖ ಆರೋಪಿ ಕುಂಭಮೇಳಕ್ಕೆ ತೆರಳಿ ಎಸ್ಕೇಪ್ ಆಗಿದ್ದಾನಂತೆ. ಯುವತಿಯ ವಿಚಾರದಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಒಂದು ಗುಂಡಿ ಮುಚ್ಚಲು ಇವರಿಗೆ ಯೋಗ್ಯತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮೂರ್ನಾಲ್ಕು ವರ್ಷ ಆ ದೇವರೇ ಬಂದರೂ ಬೆಂಗಳೂರು ಸರಿ ಮಾಡಲು ಆಗಲ್ಲ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿಜಯೇಂದ್ರ, ನಿನ್ನೆ ದಿನ ಡಿಕೆಶಿ ಅವರು, ಬೆಂಗಳೂರು ಉಸ್ತುವಾರಿಗಳು ಒಂದು ಹೇಳಿಕೆ ಕೊಟ್ಟಿದ್ದಾರೆ. ಇನ್ನೂ ಮೂರ್ನಾಲ್ಕು ವರ್ಷವಾದ್ರೂ ಆ ಭಗವಂತ ಕೂಡಾ ಬೆಂಗಳೂರು ಉದ್ಧಾರ ಮಾಡಲು ಆಗಲ್ಲ ಅಂದಿದ್ದಾರೆ. ಅಭಿವೃದ್ಧಿ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದವರು ಹೇಳೋ ಮಾತಾ ಇದು? ಎಂದು ಕಿಡಿಕಾರಿದರು. https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಇನ್ನೂ, ಒಂದು ಗುಂಡಿ ಮುಚ್ಚಲು ಇವರಿಗೆ ಯೋಗ್ಯತೆ ಇಲ್ಲ, ಅನುದಾನ ಕೊಡಲು ಆಗಲ್ಲ. ಬೆಂಗಳೂರು ಬಗ್ಗೆ ಡಿಕೆ ಶಿವಕುಮಾರ್ ಅವರ ಈ ಥರ ಹೇಳಿಕೆ ಸಹಜವಾಗಿ ಎಲ್ಲರಿಗೂ ಬೇಸರ ತರಿಸಿದೆ. ಬೆಂಗಳೂರನ್ನು ಸಿಂಗಾಪುರ ಮಾಡ್ತೀವಿ ಅಂತ ಅಧಿಕಾರಕ್ಕೆ ಬಂದ್ರು. ಒಂದು ಗುಂಡಿ ಮುಚ್ಚಲು ಯೋಗ್ಯತೆ ಇಲ್ಲ ಇವರಿಗೆ, ಟನೆಲ್ ರಸ್ತೆ…
ಕಿರಿಕ್ ಬ್ಯೂಟಿ ನಟಿ ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನವಾಗ್ತಿದೆ. ಕೈ ಹಿಡಿದ ಸಿನಿಮಾಗಳೆಲ್ಲಾ ಸೂಪರ್ ಹಿಟ್ ಆಗ್ತಿದ್ದು ನಿರ್ದೇಶಕರು ಆಕೆಯ ಮನೆ ಬಾಗಿಲಿಗೆ ಅಲೆಡಾಡ್ತಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ ಹಾಗೂ ವಿಕ್ಕಿ ಕೌಶಲ್ ನಟನೆಯ ಛಾವಾ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಶ್ಮಿಕಾ ಮಂದಣ್ಣ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಆಕೆ ಎಷ್ಟೇ ಟ್ರೋಲ್ ಆಗಲಿ. ಏನೇ ಆಗಲಿ ರಶ್ಮಿಕಾ ಅವರ ಕ್ರೇಜ್ ಮಾತ್ರ ಕಡಿಮೆ ಆಗೋದೆ ಇಲ್ಲ. ಒಂದಲ್ಲ ಒಂದು ಕಾರಣಕ್ಕೆ ಟ್ರೋಲಿಗರ ಬಾಯಿಗೆ ಆಹಾರವಾಗುವ ನಟಿಯ ಸಿನಿಮಾಗಳ ವೀಕ್ಷಕರ ಸಂಖ್ಯೆ ಕಡಿಮೆಯಾಗಲ್ಲ ಎನ್ನುವುದಕ್ಕೆ ಸದ್ಯ ರಿಲೀಸ್ ಆಗಿರುವ ಛಾವಾ ಸಿನಿಮಾವೇ ಸಾಕ್ಷಿ. ಛಾವಾ ಸಿನಿಮಾ ಬರೀ ಒಂದು ವಾರದಲ್ಲಿ 300 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ. ಭರ್ಜರಿ ಕಲೆಕ್ಷನ್ ಮಾಡಿದ ಈ ಸಿನಿಮಾ ರಶ್ಮಿಕಾ ಲಕ್ಕಿ ಚಾರ್ಮ್ ಅನ್ನೋದನ್ನು ಸಾಬೀತು ಪಡಿಸಿದೆ. ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಾಲಿವುಡ್ ಚಿತ್ರ…
ಶಿವಮೊಗ್ಗ: ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು ಸ್ಥಳಕ್ಕೆ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. https://ainlivenews.com/a-fire-started-due-to-an-electrical-short-circuit/ ಸಕ್ರೆಬೈಲ್ ಆನೆ ಬಿಡಾರದ ಸಮೀಪ 10 ನೇ ಮೈಲಿಕಲ್ಲಿನ ಬಳಿಯಲ್ಲಿ, ಅರಣ್ಯ ಪ್ರದೇಶದಿಂದ ಒಳಕ್ಕೆ ತೆರಳಿದಾಗ ಸಿಗುವ ತುಂಗಾ ಬ್ಯಾಕ್ ವಾಟರ್ ದಡದಲ್ಲಿ ಮೂವರು ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಮೃತದೇಹಗಳು ಕೊಳೆತು ಹೋಗಿರುವ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಇಬ್ಬರು ಪುರುಷರು ಹಾಗೂ ಮೃತ ಮಹಿಳೆ ಯಾರು ಎಂಬುದು ಗೊತ್ತಾಗಿಲ್ಲ. ಈ ಬಗ್ಗೆ ಇನ್ನಷ್ಟೆ ಮಾಹಿತಿ ಸಿಗಬೇಕಿದೆ.
ಹಾಸನ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹಾಸನ ತಾಲೂಕಿನ ದೇವಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ರೈತ ದಿನೇಶ್ ಎಂಬುವವರಿಗೆ ಸೇರಿದ ಮನೆಯ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂ ಬೆಂಕಿ ಹೊತ್ತು ಉರಿದಿದೆ. ಈ ವೇಳೆ ದಿನೇಶ್ ಹಾಗೂ ಪತ್ನಿ ಜಮೀನು ಕೆಲಸಕ್ಕೆ ತೆರಳಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬಬ್ಬಂದಿ, ಬೆಂಕಿ ನಂದಿಸಿ ಭರ್ತಿಯಾಗಿದ್ದ ಸಿಲಿಂಡರ್ ಹೊರಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. https://ainlivenews.com/conductor-attacked-for-speaking-kannada-be-the-bully-of-the-marathi-youth/ ಇನ್ನೊಂದೆಡೆ ಅರಕಲಗೂಡು ತಾಲೂಕು ಕಚೇರಿ ಹಿಂಭಾಗದಲ್ಲಿರುವ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸಿಲಿಂಡರ್ ಸ್ಪೋಟಕ್ಕೆ ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.