ಎಪ್ರಿಲ್ 13ರಂದು ಹಾರ್ಮುಜ್ ಜಲಸಂಧಿಯ ಬಳಿ ಇರಾನ್ ವಶಕ್ಕೆ ಪಡೆದಿದ್ದ ಪೋರ್ಚುಗೀಸ್ ಧ್ವಜ ಹೊಂದಿದ್ದ ಹಡಗಿನಲ್ಲಿದ್ದ 25 ಸಿಬ್ಬಂದಿಗಳಲ್ಲಿ 7 ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿದ್ದು ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಪೋರ್ಚುಗಲ್‍ನ ವಿದೇಶಾಂಗ ಇಲಾಖೆ ತಿಳಿಸಿದೆ. ಬಿಡುಗಡೆಗೊಂಡವರಲ್ಲಿ ಐವರು ಭಾರತೀಯರು, ಓರ್ವ ಫಿಲಿಪ್ಪೀನ್ಸ್ ಹಾಗೂ ಓರ್ವ ಎಸ್ಟೋನಿಯಾ ಪ್ರಜೆಗಳು ಸೇರಿದ್ದಾರೆ. ಪೋರ್ಚುಗೀಸ್ ಧ್ವಜ ಹೊಂದಿರುವ ಎಂಎಸ್‍ಸಿ ಏರೀಸ್ ಹಡಗನ್ನು ಎಪ್ರಿಲ್ 13ರಂದು ಇರಾನ್‍ನ ರೆವೊಲ್ಯುಷನರಿ ಗಾಡ್ರ್ಸ್ ವಶಕ್ಕೆ ಪಡೆದಿತ್ತು. ಕಂಟೈನರ್ ಹಡಗು ಇಸ್ರೇಲ್ ಜತೆ ಸಂಪರ್ಕ ಹೊಂದಿತ್ತು ಎಂದು ಇರಾನ್ ವಿದೇಶಾಂಗ ಇಲಾಖೆ ತಿಳಿಸಿತ್ತು. ಇರಾನ್‍ನ ಕ್ರಮವನ್ನು ಸ್ವಾಗತಿಸಿರುವ ಪೋರ್ಚುಗಲ್, ಉಳಿದ 17 ಸಿಬ್ಬಂದಿಗಳನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿದೆ. ಹಡಗಿನ ಎಲ್ಲಾ ಸಿಬ್ಬಂದಿಗಳನ್ನೂ ಮಾನವೀಯ ನೆಲೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಆದರೆ ಜಫ್ತಿ ಮಾಡಿರುವ ಹಡಗನ್ನು ಬಿಡುಗಡೆಗೊಳಿಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವರು ಕಳೆದ ವಾರ ಹೇಳಿದ್ದರು.
Author: Author AIN
ಕೆಜಿಎಫ್ ಸಿನಿಮಾದ ಬಳಿಕ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಆರಂಭವಾಗಿದೆ. ಟಾಕ್ಸಿಕ್ ಸಿನಿಮಾದ ಕುರಿತು ದಿನಕ್ಕೊಂದು ಹೊಸ ಹೊಸ ಸುದ್ದಿಗಳು ಹರಿದಾಡುತ್ತಿದೆ. ಇದೀಗ ಚಿತ್ರತಂಡಕ್ಕೆ ಮಾಜಿ ವಿಶ್ವಸುಂದರಿ ನಟಿ ಐಶ್ವರ್ಯಾ ರೈ ಎಂಟ್ರಿಕೊಡಲಿದ್ದಾರೆ ಎಂಬ ಸುದ್ದಿ ಕೇಳಿ ಬರ್ತಿದೆ. ಕೆಜಿಎಫ್ ಸಿನಿಮಾ ರಿಲೀಸ್ ಆದ ಸಾಕಷ್ಟು ಸಮಯದ ಬಳಿಕ ಯಶ್ ಟಾಕ್ಸಿಕ್ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾಗಾಗಿ ಬೆಂಗಳೂರಿನಲ್ಲಿ ಈಗಾಗಲೇ ಬೃಹತ್ ಸೆಟ್ ಹಾಕಿದ್ದು, ಇನ್ನೇನು ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ. ಇತ್ತೀಚೆಗೆ ಯಶ್ ಸಿನಿಮಾದಲ್ಲಿ ಕರೀನಾ ಕಪೂರ್ ನಟಿಸುವ ಸುದ್ದಿ ಭಾರೀ ಚರ್ಚೆಯಾಗಿತ್ತು. ಯಶ್ ಸಹೋದರಿ ಪಾತ್ರಕ್ಕೆ ಅವರನ್ನು ಸಂಪರ್ಕಿಸಿದೆ ಎನ್ನಲಾಗಿತ್ತು. ಆದರೆ ಡೇಟ್ಸ್ ಸಮಸ್ಯೆಯಿಂದ ಕರೀನಾ ಹೊರನಡೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬೆನ್ನಲ್ಲೇ ನಯನತಾರಾ ಹೆಸರು ಚಾಲ್ತಿಗೆ ಬಂತು. ಇದರ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಮೊದಲೇ ಐಶ್ವರ್ಯಾ ರೈ ಹೆಸರು ಚರ್ಚೆಗೆ ಗ್ರಾಸವಾಗಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಸಹೋದರಿ ಪಾತ್ರಕ್ಕೆ ತುಂಬಾನೇ ಪ್ರಾಮುಖ್ಯತೆ ಇದೆ.…
ಬಾಲಿವುಡ್ ಬ್ಯೂಟಿ ಅನನ್ಯಾ ಪಾಂಡೆ ಹಾಗೂ ನಟ ಆದಿತ್ಯ ರಾಯ್ ಕಪೂರ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಹೋದಲ್ಲಿ ಬಂದಲೆಲ್ಲಾ ಕೈ ಕೈ ಹಿಡಿದು ಸುತ್ತಾಡ್ತಿದ್ದ ಜೋಡಿ ಇದೀಗ ಬ್ರೇಕ್ ಅಪ್ ಮಾಡಿಕೊಂಡಿದೆ. ಈ ಬೆನ್ನಲ್ಲೇ ಆದಿತ್ಯ ನಟಿ ಸಾರಾ ಅಲಿ ಖಾನ್ ಜೊತೆ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಕೇಳಿ ಬರ್ತಿದೆ. ಆದಿತ್ಯ ರಾಯ್ ಕಪೂರ್ ಅವರು ಸಾರಾ ಅಲಿ ಖಾನ್ (Sara Ali Khan) ಅವರೊಂದಿಗೆ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾರ್ಟಿಯ ಹಲವು ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ವೈರಲ್ ಆದ ಫೋಟೋದಲ್ಲಿ ಆದಿತ್ಯ ಮತ್ತು ಸಾರಾ ಅವರು ನಿರ್ಮಾಪಕ ಅನುರಾಗ್ ಬಸು ಅವರೊಂದಿಗೆ ಸಮಯವನ್ನು ಕಳೆಯುತ್ತಿರುವುದು ಕಾಣಬಹುದು. ‘ಮೆಟ್ರೋ ಇನ್ ಡಿನೋ’ ಸಿನಿಮಾ ಸೆಟ್‌ನಲ್ಲಿ ಆಯೋಜಿಸಲಾದ ನಿರ್ದೇಶಕರ ಹುಟ್ಟುಹಬ್ಬದ ಸಂದರ್ಭದ ಫೋಟೋಗಳಿವು ಎನ್ನಲಾಗುತ್ತಿದೆ. ಆದಿತ್ಯ ಮತ್ತು ಸಾರಾ ಚಿತ್ರಗಳಲ್ಲಿ ಪರಸ್ಪರ ಹತ್ತಿರವಾಗಿ ನಿಂತಿದ್ದಾರೆ. 2022ರಲ್ಲಿ ಅನನ್ಯಾ ಮತ್ತು ಆದಿತ್ಯ ಪ್ರೀತಿಯಲ್ಲಿದ್ದಾರೆ ಎಂಬ ಸುದ್ದಿ ಕೇಳಿ…
ಬಾಲಿವುಡ್ ನಟ ರಣ್‌ವೀರ್ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ರಣ್ ವೀರ್ ಮದುವೆ ಫೋಟೋಗಳನ್ನು ಡಿಲೀಟ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಈ ಮಧ್ಯೆ ದಂಪತಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಳ್ಳುವ ಮೂಲಕ ಗಾಸಿಪ್‌ಗಳಿಗೆ ತೆರೆ ಎಳೆದಿದ್ದಾರೆ. ಈ ಮಧ್ಯೆ ದೀಪಿಕಾ ಫೋಟೋ ತೆಗೆಯಲು ಬಂದ ಕ್ಯಾಮೆರಾಗೆ ಪಂಚ್ ನೀಡಿದ್ದು ಮೊಬೈಲ್ ಕಿತ್ತೆಸೆದಿದ್ದಾರೆ. ದೀಪಿಕಾ ಅವರ ಬೇಬಿ ಬಂಪ್ ಲುಕ್ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಆದರೆ ನಟಿ ಲೂಸ್ ಡ್ರೆಸ್ ಹಾಕಿ ನಡೆದುಬರುತ್ತಿದ್ದರಿಂದ ಅದು ಸಾಧ್ಯವಾಗಿಲ್ಲ. ಈ ವೇಳೆ ಅಭಿಮಾನಿಯೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ನಟಿಯ ಫೋಟೋ ತೆಗೆಯಲು ಮುಂದಾಗಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಸೆಲೆಬ್ರಿಟಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಂದಾಗುತ್ತಾರೆ. ಆದರೆ ಇದರಿಂದ ಸೆಲೆಬ್ರಿಟಿಗಳಿಗೆ ಕಿರಿಕಿರಿ ಆಗೋದು ಸಹಜ. ಅಭಿಮಾನಿಯೊಬ್ಬರು ನಟಿಯ ಫೋಟೋ ತೆಗೆಯಲು ಮುಂದಾದ ವೇಳೆ ಕೋಪಗೊಂಡ ನಟಿ ಕ್ಯಾಮೆರಾಗೆ ಪಂಚ್ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್…
ಕಿರುತೆರೆ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತಾಗಿ ನಟಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. ಮಾರ್ಫಿಂಗ್ ಮಾಡಿರುವವರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದಾರೆ. ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದಾರೆ. ನಾನು ಇಂಟರ್‌ನೆಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ನಿತ್ಯ ಬಳಕೆ ಮಾಡುತ್ತೇನೆ. ಇತ್ತೀಚಿನ ದಿನಗಳಲ್ಲಿ ಫೇಕ್ ಅಕೌಂಟ್‌ಗಳ ಮೂಲಕ ನನಗೆ ಮೆಸೇಜ್‌ಗಳು ಬರುತ್ತಿವೆ. ನನ್ನ ಫೋಟೋಗಳ ಜೊತೆಗೆ ಇಂಟರ್‌ನೆಟ್ ಡೌನ್‌ಲೋಡ್ ಮಾಡಲಾದ ನಗ್ನ ಹಾಗೂ ಅಶ್ಲೀಲ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ನನ್ನ ಇನ್‌ಬಾಕ್ಸ್‌ಗೆ ಕಳುಹಿಸುತ್ತಿದ್ದಾರೆ. ನನ್ನ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಾಕಲಾದ ಫೋಟೋಗಳನ್ನು ಬಳಸಿ ಮಾರ್ಫಿಂಗ್ ಮಾಡಲಾಗಿದೆ. ನನಗೆ ಕಿರುಕುಳ ನೀಡುವ ಮತ್ತು…
ಕನ್ನಡ ಕಿರುತೆರೆಯ ಖ್ಯಾತ ನಟಿ, ಬಿಗ್ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ಸೋಷಿಯಲ್ ಮೀಡಿಯಾದಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದಾ ತಮ್ಮ ಸ್ಟೈಲಿಶ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುವ ತನಿಷಾ ಇದೀಗ ಜಂಪ್‌ಸೂಟ್ ಧರಿಸಿ ತಮ್ಮ ಮುದ್ದಿನ ನಾಯಿಯೊಂದಿಗೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ರೆಡ್ ಕಲರ್‌ನಲ್ಲಿ ವೈಟ್ ಸ್ಟ್ರೈಪ್ ಇರೋ ಡ್ರೆಸ್‌ನ್ನು ತನಿಷಾ ಧರಿಸಿದ್ದಾರೆ. ಇದು ಹೈ ಸ್ಲಿಟ್ ಡ್ರೆಸ್ ಆಗಿದ್ದು ತನಿಷಾ ತೊಡೆ ಕಾಣುವಂತೆ ಬೋಲ್ಡ್ ಆಗಿ ಫೋಟೋಗೆ ಫೋಸ್ ನೀಡಿದ್ದಾರೆ. ಜೊತೆಗೆ ತನಿಷಾ ತಮ್ಮ ಮುದ್ದಾದ ನಾಯಿ ಮರಿಯನ್ನು ಹಿಡಿದುಕೊಂಡು ಫೋಟೋಸ್ ಕ್ಲಿಕ್ಕಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಪೋಟೋಸ್ ಶೇರ್ ಮಾಡಿದ ತನಿಷಾ ಇದಕ್ಕೆ ‘ನಾನ್ ಏನ್ ಮಾಡ್ಲಿ ಸ್ವಾಮಿ, ನಮ್ ಹುಡುಗಿ ನಾಯಿ ಪ್ರೇಮಿ’ ಅನ್ನೋ ಸಾಂಗ್ ಸಹ ಹಾಕಿಕೊಂಡಿದ್ದಾರೆ. ನಟಿ ಬಿಗ್ಬಾಸ್ 10 ನಂತರ ಫುಲ್ ಬ್ಯುಸಿಯಾಗಿದ್ದಾರೆ. ಅವರು ಬಿಗ್ಬಾಸ್ ಮನೆಯಿಂದ ಹೊರಗೆ ಬಂದ ನಂತರವೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ಅವದು ಹೆಚ್ಚಿನ ಇವೆಂಟ್ಗಳಲ್ಲಿಯೂ ನಟಿ…
ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್‌ನ ಬೇಡಿಕೆಯ ನಟಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದೀಗ ಕಿರಿಕ್ ಬ್ಯೂಟಿ ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್‌ಗೆ ಜೋಡಿಯಾಗಿದ್ದಾರೆ. ಯೆಸ್. ರಶ್ಮಿಕಾ ಮಂದಣ್ಣ ಮತ್ತು ಸಲ್ಮಾನ್ ಖಾನ್ ಜೋಡಿಯಾಗಿ ನಟಿಸುತ್ತಿರುವ ಶಿಕಂದರ್ ಸಿನಿಮಾ 2025ರ ಈದ್‌ಗೆ ರಿಲೀಸ್ ಆಗಲಿದೆ. ದೊಡ್ಡ ತೆರೆ ಮೇಲೆ ಈ ಕಾಂಬಿನೇಷನ್ ನೋಡಲು ಕಾಯುತ್ತಿದ್ದೀವಿ’ ಎಂದು ನಾಡಿಯಾವಾಲಾ ಗ್ರಾಂಡ್‌ಸನ್ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಈ ಚಿತ್ರವನ್ನು ಏ ಆರ್ ಮುರುಗಾದಾಸ್ ನಿರ್ದೇಶನ ಮಾಡುತ್ತಿದ್ದಾರೆ. ‘ನೀವೆಲ್ಲರೂ ತುಂಬಾ ದಿನಗಳಿಂದ ಅಪ್‌ಡೇಟ್ ನೀಡಿ ಎಂದು ಕೇಳುತ್ತಿದ್ದೀರಿ, ಇಲ್ಲಿದೆ ನೋಡಿ….ಸರ್ಪ್ರೈಸ್. ಶಿಕಂದರ್ ಚಿತ್ರತಂಡದ ಜೊತೆ ಕೆಲಸ ಮಾಡಲು ತುಂಬಾನೇ ಖುಷಿಯಾಗುತ್ತಿದೆ’ ಎಂದು ರಶ್ಮಿಕಾ ಮಂದಣ್ಣ ಪೋಸ್ಟ್ ಮಾಡಿದ್ದಾರೆ.
ದುಬಾರಿ ಉಡುಗೊರೆ ಪಡೆದ ಆರೋಪದಡಿ ಭಾರತ ಮೂಲದ ಸಿಂಗಪುರ ಸರ್ಕಾರದ ಮಾಜಿ ಸಚಿವ ಎಸ್.ಈಶ್ವರನ್ ವಿರುದ್ಧದ ಆರೋಪಗಳ ವಿಚಾರಣೆಗೆ ಅಲ್ಲಿನ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ವಿಚಾರಣೆಯು ಬರುವ ಆಗಸ್ಟ್‌ನಿಂದ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಈಶ್ವರನ್ ₹246 ಕೋಟಿ ಮೌಲ್ಯದ ಉಡುಗೊರೆ ಸ್ವೀಕರಿಸಿದ ಆರೋಪ ಕೇಳಿ ಬಂದಿದೆ. ನ್ಯಾಯಾಲಯದಲ್ಲಿ ಈಶ್ವರನ್ ಪರ ವಕೀಲ ದೇವಿಂದರ್ ಸಿಂಗ್ ಅವರು ವಾದ ಮಂಡಿಸಿ, ‘ಸಚಿವರಾಗಿದ್ದ ಅವಧಿಯಲ್ಲಿ ಅದರ ಸ್ಥಾನಮಾನದ ಇತಿಮಿತಗಳ ಅರಿವು ನನ್ನ ಕಕ್ಷೀದಾರರಿಗೆ ಇತ್ತು. ಹೀಗಾಗಿ ತಮ್ಮ ಮೇಲೆ ಹೊರಿಸಲಾಗಿರುವ ಎಲ್ಲಾ ಆರೋಪಗಳ ವಿಚಾರಣೆಯನ್ನೂ ನ್ಯಾಯಾಲಯ ನಡೆಸಲಿ. ಅದನ್ನು ಎದುರಿಸಲು ಸಿದ್ಧ ಎಂದಿದ್ದಾರೆ’. ‘ಕುಟುಂಬದವರು ಹಾಗೂ ವೈಯಕ್ತಿಕ ಸ್ನೇಹಿತರಿಂದ ಉಡುಗೊರೆ ಸ್ವೀಕರಿಸುವುದನ್ನು ತಡೆಯುವುದು ಸಚಿವರಿಂದ ಸಾಧ್ಯವಾಗಿರಲಿಲ್ಲ. ಆದರೆ ಆರೋಪ ಕೇಳಿಬಂದಿರುವ ಉಡುಗೊರೆಯು ರಿಯಲ್ ಎಸ್ಟೇಟ್ ಉದ್ಯಮಿ ಆಂಗ್ ಬೆಂಗ್ ಸೆಂಗ್ ಹಾಗೂ ನಿರ್ಮಾಣ ಸಂಸ್ಥೆಯ ಮಾಲೀಕ ಲುಮ್ ಕಾಕ್ ಸೆಂಗ್ ಅವರು ನೀಡಿದ್ದು ಎಂಬುದರ ಮಾಹಿತಿ ಈಶ್ವರನ್‌ಗೆ ಇರಲಿಲ್ಲ. ಸ್ನೇಹಿತರು ನೀಡಿದ…
ಭದ್ರತೆಯ ಕಾರಣಕ್ಕಾಗಿ ತನ್ನನ್ನು ಗೃಹಬಂಧನದಿಂದ ಜೈಲಿಗೆ ಸ್ಥಳಾಂತರಿಸಲು ಸೂಚಿಸಬೇಕೆಂದು ಇಮ್ರಾನ್‍ಖಾನ್ ಅವರ ಪತ್ನಿ ಬುಷ್ರಾ ಬೀಬಿ ಸಲ್ಲಿಸಿದ್ದ ಅರ್ಜಿಯನ್ನು ಪಾಕಿಸ್ತಾನದ ನ್ಯಾಯಾಲಯ ಸ್ವೀಕರಿಸಿದೆ ಎಂದು ವಕೀಲರು ಹೇಳಿದ್ದಾರೆ. ಈ ಮೂಲಕ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿ ಅವರನ್ನುಇಮ್ರಾನ್ ಖಾನ್ ಇರುವ ಅಡಿಯಾಲಾ ಜೈಲಿಗೆ ಸ್ಥಳಾಂತರಿಸುವಂತೆ ಇಸ್ಲಾಮಾಬಾದ್ ಕೋರ್ಟ್ ಆದೇಶಿಸಿದೆ. ತಮ್ಮನ್ನು ಅಡಿಯಾಲಾ ಜೈಲಿಗೆ ವರ್ಗಾಯಿಸುವಂತೆ ಕೋರಿ ಬೀಬಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕಳೆದ ವಾರ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಮಿಯಾಂಗುಲ್ ಹಸನ್ ಔರಂಗಜೇಬ್, ತೀರ್ಪನ್ನು ಕಾಯ್ದಿರಿಸಿದ್ದರು. ಹೈಕೋರ್ಟ್‌ನ ಈ ಆದೇಶವನ್ನು, ಕಾನೂನು ಹೋರಾಟದಲ್ಲಿ ಬುಶ್ರಾ ಬೀಬಿ ಅವರಿಗೆ ದೊರೆತ ದೊಡ್ಡ ಜಯ ಎಂದೇ ವಿಶ್ಲೇಷಿಸಲಾಗುತ್ತಿದೆ. ಸದ್ಯ ಬೀಬಿ ಅವರ ಖಾಸಗಿ ನಿವಾಸವನ್ನೇ ಸಬ್‌ಜೈಲನ್ನಾಗಿ ಪರಿವರ್ತಿಸಲಾಗಿದ್ದು, ಅಲ್ಲಿಯೇ ಅವರು ಸೆರೆವಾಸದಲ್ಲಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ 71 ವರ್ಷದ ಬುಶ್ರಾ ಬೀಬಿ ಅವರು, ಇಸ್ಲಾಮಾಬಾದ್ ಹೊರವಲಯದ ಬಾನಿಗಾಲಾ ಎಂಬಲ್ಲಿರುವ ಇಮ್ರಾನ್ ಖಾನ್ ಅವರ ಬಂಗ್ಲೆಯಲ್ಲಿ ಸೆರೆವಾಸ…
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಫೀಕ್ ಚೌಧರಿ ಎಂದು ಗುರುತಿಸಲಾಗಿದ್ದು, ರಾಜಸ್ಥಾನದ ನಾಗೌರ್ ನಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾಗಿರುವ ಮೊಹಮ್ಮದ್ ರಫೀಕ್ ಕೂಡ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡದ ಸದಸ್ಯನೆಂದು ಹೇಳಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ. ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತನಾದ ಐದನೇ ವ್ಯಕ್ತಿ ಈತನಾಗಿದ್ದಾನೆ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂಧಿಸಿ, ತನಿಖೆಗೆ ಒಳಪಡಿಸಿದ್ದಾರೆ. ಈ ನಾಲ್ವರಲ್ಲಿ ಓರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಜ್ ಕುಟುಂಬ ಮುಂಬೈ ಹೈಕೋರ್ಟ್…