ಸ್ಯಾಂಡಲ್‌ವುಡ್ ನಟಿ ಸಾನ್ಯ ಅಯ್ಯರ್ ನವ ವಧುವಿನಂತೆ ಸಿಂಗಾರಗೊಂಡಿದ್ದಾರೆ. ರಾಯಲ್ ಲುಕ್‌ನಲ್ಲಿ ಕಂಗೊಳಿಸುತ್ತಿರುವ ಸಾನ್ಯರನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ನಟಿಯ ಸುಂದರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಂಪು ಬಣ್ಣದ ಲೆಹಂಗಾದಲ್ಲಿ ಸಾನ್ಯ ವಧುವಿನಂತೆಯೇ ಕಂಗೊಳಿಸಿದ್ದಾರೆ. ಕ್ಯಾಮೆರಾಗೆ ಮಸ್ತ್ ಆಗಿ ಪೋಸ್ ಕೊಟ್ಟಿದ್ದಾರೆ. ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ನಟಿ ಇದೀಗ ಬ್ರೈಡಲ್ ಲುಕ್ ನಲ್ಲಿ ಕಂಗೊಳಿಸಿದ್ದಾರೆ. ‘ಬಿಗ್ ಬಾಸ್’ ಕಾರ್ಯಕ್ರಮದ ಬಳಿಕ ಸಾಕಷ್ಟು ಖ್ಯಾತಿ ಘಳಿಸಿದ ಸಾನ್ಯಾ ‘ಗೌರಿ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಸಮರ್ಜಿತ್ ಲಂಕೇಶ್‌ಗೆ ನಾಯಕಿಯಾಗಿ ನಟಿಸಿದ್ದು, ಈ ಚಿತ್ರವನ್ನು ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿದ್ದಾರೆ.
Author: Author AIN
ಖ್ಯಾತ ಸಂಗೀತ ನಿರ್ದೇಶಕರ ಮೆಚ್ಚುಗೆಗೆ ಪಾತ್ರರಾಗಿದ್ದ, ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್ ಕುಮಾರ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಅನಿಸಿಕೊಂಡಿದ್ದರು ಪ್ರವೀಣ್. ಇವರ ಪ್ರತಿಭೆಗೆ ಕೈ ತುಂಬಾ ಅವಕಾಶಗಳು ಇದ್ದವು. ಆದರೆ, ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಖಾಸಗಿ ಆಸ್ಪತ್ರೆಯ ನಂತರ ಅವರನ್ನು ಓಮಂದೂರರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗಿ ಬೆಳಗ್ಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಪ್ರವೀಣ್ ಕುಮಾರ್ ನಿಧನಕ್ಕೆ ಅಭಿಮಾನಿಗಳು ಮತ್ತು ಚಿತ್ರೋದ್ಯಮದವರು ಕಂಬನಿ ಮಿಡಿದಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ನೀಡಲಾದ ಕೋವಿಶೀಲ್ಡ್ ಲಸಿಕೆ ಪಡೆದವರ ಮೇಲೆ ಕೆಲವು ಅಪರೂಪದ ಪ್ರಕರಣದಲ್ಲಿ ಅಡ್ಡಪರಿಣಾಮ ಉಂಟಾಗಲಿದೆ ಎಂದು ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಈಗ ಎರಡನ್ನೂ ಲಿಂಕ್ ಮಾಡುವ ಕೆಲಸ ಆಗುತ್ತಿದೆ. ಈ ಮಧ್ಯೆ ಪುನೀತ್ ರಾಜ್ ಕುಮಾರ್ ಕುರಿತ ಪೋಸ್ಟ್ ಒಂದು ವೈರಲ್ ಆಗಿದೆ. ಪುನೀತ್ ರಾಜ್ಕುಮಾರ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ಅವರು ಹೃದಯಾಘಾತಕ್ಕೆ ಒಳಪಟ್ಟು ಮೃತಪಟ್ಟರು. ಸಖತ್ ಫಿಟ್ ಆಗಿದ್ದ ಅವರು ನಿಧನ ಹೊಂದುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಈಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ. ಪುನೀತ್ ರಾಜ್ಕುಮಾರ್ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಎಂದು ಮನವಿ ಮಾಡಿದ್ದರು. ಇದಕ್ಕೆ ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. ‘ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45…
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ ಸೂಪರ್ ಹಿಟ್ ಆಗಿದೆ.ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ ಕಾಟೇರ ಇದೀಗ 100 ದಿನಗಳನ್ನು ಪೂರೈಸಿದ ಖುಷಿಯಲ್ಲಿದೆ. ಈ ಖುಷಿಯನ್ನು ಚಿತ್ರತಂಡ ವಿಶೇಷವಾಗಿ ಸಂಭ್ರಮಿಸುತ್ತಿದೆ. ವರ್ಷದ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಅನಿಸಿಕೊಂಡ ಕಾಟೇರ ಸಿನಿಮಾವನ್ನು ನಿರ್ಮಾಣ ಮಾಡಿದ ರಾಕ್ ಲೈನ್ ವೆಂಕಟೇಶ್ ಅವರು ರಾಕ್ಮಾಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದ್ರು. ಪ್ರೆಸ್ಮೀಟ್ನಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದರ್ಶನ್, ನಿರ್ದೇಶಕ ತರುಣ್ ಸುಧೀರ್, ಡೈಲಾಗ್ ರೈಟರ್ ಮಾಸ್ತಿ, ಕಥೆಗಾರ ಜಡೇಶ್ ಕೆ ಹಂಪಿ ಭಾಗಿಯಾಗಿದ್ರು. ಕಾಟೇರ ಸಿನಿಮಾ ನೂರು ದಿನ ಪೂರೈಕೆ ಹಿನ್ನಲೆ ನಿರ್ಮಾಪಕರ ಚಿತ್ರತಂಡದ ಕೆಲವರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕಾಟೇರ ಚಿತ್ರಕಥೆ ಬರೆದ ಜಡೇಶ್ ಹಂಪಿ, ಸಂಭಾಷಣೆಗಾರ ಮಾಸ್ತಿ, ಹಾಗೂ ನಟ ಸೂರಜ್ ಅವರಿಗೆ ಕಾರನ್ನು ಉಡುಗೊರೆಯಾಗಿ ನೀಡಿದರು. ಕಾಟೇರ ಚಿತ್ರದ ಗೆಲುವಿಗೆ ಕಾರಣವಾದ ತಂತ್ರಜ್ಞರಿಗೆ ಭರ್ಜರಿ ಗಿಫ್ಟ್ ಕೂಡ ನೀಡಲಾಗಿದೆ. ಚಿತ್ರದಲ್ಲಿ ನಟಿಸಿರುವ ಸೂರಜ್ ಅವರಿಗೆ ಸಿನಿಮಾ ರಿಲೀಸ್…
ಬಾಲಿವುಡ್ ನ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ನಟಿ ಶ್ರೀದೇವಿ ಎಂದರೆ ಎಲ್ಲಿಲ್ಲದ ಅಭಿಮಾನ. ವರ್ಮಾ ಆಗಾಗ ಶ್ರೀದೇವಿ ಅವರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ ವರ್ಮಾ. ಶ್ರೀದೇವಿಯ ಸೌಂದರ್ಯವನ್ನು ಸಾಕಷ್ಟು ಬಾರಿ ಹೊಗಳಿದ್ದಾರೆ. ಶ್ರೀದೇವಿ ಮರಣ ಹೊಂದಿದ್ದಾಗ ಕಣ್ಣೀರಿಟ್ಟಿದ್ದ ವರ್ಮಾ ಇದೀಗ ಆಕೆಯನ್ನು ಸ್ವರ್ಗಕ್ಕೆ ಹೋಗಿ ಭೇಟಿ ಮಾಡಿ ಬಂದಿದ್ದಾಗಿ ಹೇಳಿದ್ದಾರೆ. ಶ್ರೀದೇವಿ ಅಗಲಿಕೆಯ ನಂತರವೂ ನಟೊಯ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ ವರ್ಮಾ. ಕಾರಿನಲ್ಲಿ ಡ್ರೈವರ್ ಸೀಟ್ ನಲ್ಲಿ ಶ್ರೀದೇವಿ ಕುಳಿತಿದ್ದು, ಅದರ ಪಕ್ಕದ ಸೀಟಿನಲ್ಲಿ ಸೀಗರೇಟು ಹಿಡಿದುಕೊಂಡು ವರ್ಮಾ ಕೂತಿದ್ದಾರೆ. ಈ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಾನು ಶ್ರೀದೇವಿ ಅವರನ್ನು ಭೇಟಿ ಮಾಡೋಕೆ ಸ್ವರ್ಗಕ್ಕೆ ಹೋಗಿದ್ದೆ ಎಂದು ಬರೆದುಕೊಂಡಿದ್ದಾರೆ. ವಾಸ್ತವವಾಗಿ ಇದು ತಂತ್ರಜ್ಞಾನ ಬಳಸಿ ಎಡಿಟ್ ಮಾಡಿದ ಚಿತ್ರ. ಆದರೆ ಈ ಫೋಟೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಶ್ರೀದೇವಿ ರಾಮ್ ಗೋಪಾಲ್ ವರ್ಮಾ ಜೊತೆ ಎರಡು ಸಿನಿಮಾ ಮಾಡಿದ್ದಾರೆ. ಅವರು ವರ್ಮಾ ನಿರ್ದೇಶನದ ಗೋವಿಂದಾ ಗೋವಿಂದಾ…
ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಅರ್ಜುನ ಆನೆ ಸಮಾಧಿಗೆ ಯಾವುದೇ ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ಸಿಗಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ನಟ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರ್ಜುನ್ ಗೆ ಸಿಗಬೇಕಾದ ಗೌರವವನ್ನು ಕೂಡಲೇ ಸಲ್ಲಿಸಬೇಕು ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ದರ್ಶನ್ ಪ್ರಾಣಿಗಳ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ತೋರಿಸಿದ್ದಾರೆ. ಸ್ವತಃ ಪ್ರಾಣಿ ಪ್ರಿಯರೂ ಆಗಿರುವ ದರ್ಶನ್, ಮೈಸೂರು ಮೃಗಾಲಯ ಸೇರಿದಂತೆ ನಾನಾ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಅವರು ದತ್ತು ಪಡೆದಿದ್ದಾರೆ. ಜೊತೆಗೆ ಮನೆಯಲ್ಲೂ ಹಲವು ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಅದರಲ್ಲೂ ಆನೆಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಕಾಟೇರ ಸಿನಿಮಾವನ್ನು ಹುತಾತ್ಮ ಆನೆ ಅರ್ಜುನ್ ಗೆ ಅರ್ಪಿಸಿದ್ದಾರೆ. ಸಿನಿಮಾ ಶುರುವಾಗುವ ಮುನ್ನ ‘ನಾಡ ದೇವಿ ಚಾಮುಂಡಿಯ ಅಂಬಾರಿಯನ್ನು ಹೊತ್ತು ದಸರೆಯ ವೈಭವವನ್ನು ಜಗತ್ತಿನಾದ್ಯಂತ…
ಇತ್ತೀಚೆಗೆ ಸುರಿದ ಭಾರಿ ಮಳೆಗೆ ದಕ್ಷಿಣ ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದಿಂದ ಇದುವರೆಗೂ 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭಾರೀ ಮಳೆಯಿಂದಾಗಿ ಮೀಝೌ ನಗರದಿಂದ ಡಾಬು ಕೌಂಟಿಯ ಕಡೆಗೆ ಚಲಿಸುವ ರಸ್ತೆಯು ಕುಸಿತ ಕಂಡಿದೆ. ವಾಹನಗಳು ಟಾರ್ಮ್ಯಾಕ್‌ನಲ್ಲಿ ಸುಮಾರು 18 ಮೀಟರ್ ಉದ್ದದ (59-ಅಡಿ) ಗಾಶ್‌ಗೆ ಸಿಲುಕಿ, ಕಡಿದಾದ ಇಳಿಜಾರಿನಲ್ಲಿ ಕೆಳಗೆ ಬಿದ್ದಿದ್ದು ಘಟನೆಯಲ್ಲಿ ಸಾಕಷ್ಟು ಸಾವು ನೋವು ಸಂಭವಿಸಿದೆ. ದಟ್ಟವಾದ ಜನನಿಬಿಡ ಕೈಗಾರಿಕಾ ಶಕ್ತಿ ಕೇಂದ್ರವಾದ ಗುವಾಂಗ್‌ಡಾಂಗ್, ಇತ್ತೀಚಿನ ವಾರಗಳಲ್ಲಿ ಹವಾಮಾನ ವೈಪರೀತ್ಯಗಳಿಂದಾಗಿ ಸಂಭವಿಸಿದ ವಿಪತ್ತುಗಳ ಸರಮಾಲೆಯಿಂದ ಹಾನಿಗೊಳಗಾಗಿದೆ. ಚಂಡಮಾರುತಗಳು ವರ್ಷದಲ್ಲಿ ನಿರೀಕ್ಷೆಗಿಂತ ಹೆಚ್ಚು ಭಾರೀ ಪ್ರಮಾಣದಲ್ಲಾಗಿವೆ. ಹವಾಮಾನ ಬದಲಾವಣೆಗೆ ಸಂಭವಿಸುತ್ತಿವೆ. ಹವಾಮಾನ ಬದಲಾವಣೆಗೆ ಕೊಡುಗೆ ನೀಡುವ ಹಸಿರುಮನೆ ಅನಿಲಗಳ ಅತಿದೊಡ್ಡ ಹೊರಸೂಸುವಿಕೆ ದೇಶ ಚೀನಾ. 2060 ರ ವೇಳೆಗೆ ಹೊರಸೂಸುವಿಕೆಯನ್ನು ನಿವ್ವಳ ಶೂನ್ಯಕ್ಕೆ ತಗ್ಗಿಸಲು ರಾಷ್ಟ್ರ ಪ್ರತಿಜ್ಞೆ ಮಾಡಿದೆ. ಗುರುವಾರ ಬೆಳಗ್ಗೆ ಹೆದ್ದಾರಿ ಕುಸಿತದಿಂದ 36…
ತಮಿಳು ಚಿತ್ರರಂಗದ ಖ್ಯಾತ ಗಾಯಕಿ ಉಮಾ ರಮಣನ್ 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಮೇ 1ರಂದು ಉಮಾ ಚೆನ್ನೈನಲ್ಲಿ ವಿಧಿವಶರಾಗಿದ್ದು, ಅವರ ಸಾವಿನ ಹಿಂದಿನ ಕಾರಣ ತಿಳಿದು ಬಂದಿಲ್ಲ. ತಮಿಳಿನಲ್ಲಿ ಸಾಕಷ್ಟು ಸೂಪರ್ ಹಿಟ್ ಹಾಡುಗಳಿಗೆ ಉಮಾ ಧ್ವನಿ ನೀಡಿದ್ದರು. ಶಾಸ್ತ್ರಿಯ ಸಂಗೀತ ಕಲಿತು ಗಾಯನದಲ್ಲಿ ಹೆಸರು ಮಾಡಿರುವ ಉಮಾ 35 ವರ್ಷಗಳಲ್ಲಿ 6000ಕ್ಕೂ ಹೆಚ್ಚು ಸಂಗೀತ ಕಛೇರಿಗಳನ್ನು ನಡೆಸಿಕೊಟ್ಟಿದ್ದಾರೆ. 1977ರಲ್ಲಿ ಹಿಂದಿ ಸಿನಿಮಾದಲ್ಲಿ ಹಾಡಲು ಅವಕಾಶ ಸಿಕ್ಕಿದರೂ ತಮಿಳು ಚಿತ್ರರಂಗ ಅವರ ಕೆರಿಯರ್‌ಗೆ ದೊಡ್ಡ ಬ್ರೇಕ್ ನೀಡಿತ್ತು. ಇಳಯರಾಜ ಸಂಗೀತದಲ್ಲಿ ಉಮಾ ರಮಣನ್ ಸಾಕಷ್ಟು ಹಿಟ್ ಸಾಂಗ್‌ಗಳನ್ನು ನೀಡಿದ್ದಾರೆ. ಉಮಾ ರಮಣನ್ ನಿಧನಕ್ಕೆ ಆಪ್ತರು, ಅಭಿಮಾನಿಗಳು, ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ.
ಕಾಲಿವುಡ್ ನಟ ರಾಘವ್ ಲಾರೆನ್ಸ್ ಮೇ.1ರಂದು ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ರೈತರಿಗೆ ಉಚಿತ ಟ್ರ್ಯಾಕ್ಟರ್ ನೀಡಿದ್ದಾರೆ. ನಟನ ಜನಪರ ಕೆಲಸಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದು (ಮೇ 1) ಕಾರ್ಮಿಕರ ದಿನಾಚರಣೆಯ ಸಂದರ್ಭದಲ್ಲಿ ರಾಘವ ಲಾರೆನ್ಸ್ ರೈತರಿಗೆ 10 ಟ್ರ‍್ಯಾಕ್ಟರ್‌ಗಳನ್ನು ವಿತರಣೆ ಮಾಡಿದ್ದಾರೆ. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ಬೆಂಬಲಿಸಬೇಕಾಗಿ ವಿನಂತಿ ಎಂದು ನಟ ಮನವಿ ಮಾಡಿದ್ದಾರೆ. ಈ ವಿಶೇಷ ಹೊಸ ಪ್ರಯಾಣವನ್ನು ಪ್ರಾರಂಭಿಸಲು ನನಗೆ ತುಂಬಾ ಸಂತೋಷವಾಗಿದೆ. ಆರಂಭದಲ್ಲಿ ನಮ್ಮ ದೇಶದ ಬೆನ್ನೆಲುಬಾಗಿರುವ ರೈತರಿಗೆ ನನ್ನ ಸ್ವಂತ ಹಣದಲ್ಲಿ 10 ಟ್ರ‍್ಯಾಕ್ಟರ್ ನೀಡುತ್ತೇನೆ. ಅಗತ್ಯವಿರುವ ಜನರಿಗೆ ಸೇವೆ ಸಲ್ಲಿಸಲು ಪ್ರತಿಯೊಬ್ಬರೂ ಈ ನಿಸ್ವಾರ್ಥ ಪ್ರಯಾಣವನ್ನು ಬೆಂಬಲಿಸಬೇಕು. ಶಬ್ದಗಳಿಗಿಂತ ಕಾರ್ಯಗಳು ಜೋರಾಗಿ ಮಾತನಾಡುತ್ತವೆ. ನನ್ನ ಪ್ರಯಾಣದಲ್ಲಿ ನನಗೆ ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದ ಬೇಕು. ಇಂದಿನಿಂದ ಸೇವೆ ಆರಂಭವಾಗಿದೆ ಎಂದು ಲಾರೆನ್ಸ್ ಹೇಳಿರುವ ವಿಡಿಯೋ ಶೇರ್ ಮಾಡಿದ್ದಾರೆ. ಇದರ ಜೊತೆಗೆ ನಟ ಲಾರೆನ್ಸ್ ಇತ್ತೀಚೆಗೆ 150 ಮಕ್ಕಳನ್ನು ದತ್ತು ಪಡೆದಿದ್ದಾರೆ. ಅವರ…
ನಟಿ ಮೃಣಾಲ್ ಠಾಕೂರ್ ಸದ್ಯ ಹಿಂದಿ ಮತ್ತು ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೀತಾ ರಾಮ ಸಿನಿಮಾದ ಬಳಿಕ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡಿರುವ ನಟಿ ಇದೀಗ ಸಂದರ್ಶನವೊಂದರಲ್ಲಿ ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದಾರೆ. ಅನೇಕ ಸಿನಿಮಾಗಳ ಅವಕಾಶ ಕೈತಪ್ಪಿ ಹೋಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೆರಿಯರ್ ಶುರುವಿನಲ್ಲಿ ಆಡಿಷನ್ ಕೊಡುವಾಗ ಹಳ್ಳಿ ಹುಡುಗಿಯಂತೆ ಕಾಣ್ತಾಳೆ, ನಮ್ಮ ಸಿನಿಮಾಗೆ ಸೂಟ್ ಆಗಲ್ಲ. ಸಿನಿಮಾದಲ್ಲಿ ಮಾಡ್ರರ್ನ್ ಆಗಿ ಕಾಣಿಸಿಕೊಳ್ಳಬೇಕು ಎಂದು ಕಾರಣ ನೀಡಿ ಸೆಲೆಕ್ಟ್ ಮಾಡಲಿಲ್ಲ ಎಂದು ನಟಿ ಹೇಳಿದ್ದಾರೆ. ಟಿವಿ ಕಾರ್ಯಕ್ರಮಗಳೊಂದಿಗೆ ವೃತ್ತಿಜೀವನವನ್ನು ಪ್ರಾರಂಭಿಸಿ ಮೃಣಾಲ್ ಠಾಕೂರ್ ಗೆ ಸೀತಾ ರಾಮಂ ಸಿನಿಮಾ ಬಳಿಕ ಭಾರೀ ಜನಪ್ರಿಯತೆ ಸಿಕ್ಕಿದೆ, ಜರ್ಸಿ, ಘೋಸ್ಟ್ ಸ್ಟೋರೀಸ್, ಹಾಯ್ ನನ್ನಾ, ದಿ ಫ್ಯಾಮಿಲಿ ಸ್ಟಾರ್ ನಂತಹ ಚಲನಚಿತ್ರಗಳೊಂದಿಗೆ ಮೃಣಾಲ್ ಠಾಕೂರ್ ಅಭಿಮಾನಿಗಳ ಮನಗೆದ್ದು, ಆಕೆಯ ಅಭಿನಯಕ್ಕೆ ಪ್ರೇಕ್ಷಕರು ಸೇರಿದಂತೆ ವಿಮರ್ಶಕರು ಫಿದಾ ಆಗಿದ್ದಾರೆ.