ದುಬೈನಲ್ಲಿ ಸುರಿಯುತ್ತಿರುವ ಭೀಕರ ಮಳೆ ಮುಂದುವರೆದಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವವರೆಗೂ ಅನಿವಾರ್ಯವಲ್ಲದ ಪ್ರಯಾಣವನ್ನು ಮುಂದೂಡುವಂತೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಅದರ ಮೂಲಕ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯರಿಗೆ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ. ದುಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಾರದ ದಾಖಲೆಯ ಮಳೆಯಿಂದ ಚೇತರಿಸಿಕೊಳ್ಳಲು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಯತ್ನಿಸುತ್ತಿದೆ. ಯುಎಇ ಅಧಿಕಾರಿಗಳು ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಾಮಾನ್ಯ ಸ್ಥಿತಿಗೆ ತರಲು ಹಗಲಿರುಳು ಶ್ರಮಿಸುತ್ತಿದ್ದಾರೆ. ನಿಮಾನಗಳ ನಿರ್ಗಮನ ದಿನಾಂಕ ಮತ್ತು ಸಮಯದ ಕುರಿತು ಆಯಾ ವಿಮಾನಯಾನ ಸಂಸ್ಥೆಗಳಿಂದ ಅಂತಿಮ ದೃಢೀಕರಣದ ನಂತರವೇ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ವಾರದ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಒಳಬರುವ ವಿಮಾನಗಳ ಸಂಖ್ಯೆಯನ್ನು ತಾತ್ಕಾಲಿಕವಾಗಿ ಸೀಮಿತಗೊಳಿಸಿದೆ ಎಂದು…
Author: Author AIN
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ನಿರ್ಮಾಪಕ ಉದಯ್ ಕೆ ಮೆಹ್ತಾ ಹಾಗೂ ನಿರ್ದೇಶಕ ಎ.ಪಿ ಅರ್ಜುನ್ ಮಧ್ಯೆ ಕಿರಿಕ್ ಆಗಿ, ಈ ಜಗಳ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೆಟ್ಟಿಲು ಏರಿದೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಹಬ್ಬಿರೋದು ಗಾಸಿಪ್ ಇದೀಗ ತಣ್ಣಗಾಗಿದೆ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ಎಂದು ಮೆಹ್ತಾ ಮತ್ತು ಅರ್ಜುನ್ ವಿಡಿಯೋವೊಂದರ ಮೂಲಕ ತಿಳಿಸಿದ್ದಾರೆ. ಧ್ರುವ ಸರ್ಜಾ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಮಾರ್ಟಿನ್ ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಬಿಡುಗಡೆಗಾಗಿ ಧ್ರುವ ಸರ್ಜಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಚಿತ್ರೀಕರಣದಲ್ಲೂ ಮಾರ್ಟಿನ್ ದಾಖಲೆ ಬರೆದಿದೆ. ಒಟ್ಟು 240 ದಿನಗಳ ಚಿತ್ರೀಕರಣ ನಡೆದಿದೆ. ಇನ್ನು ಚಿತ್ರದ ಆಡಿಯೋ ಹಕ್ಕನ್ನು ಅಧಿಕ ಮೊತ್ತ ನೀಡಿ ಜನಪ್ರಿಯ ಆಡಿಯೋ ಸಂಸ್ಥೆಯಾದ ಸರೆಗಮಪ ಪಡೆದುಕೊಂಡಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದ್ದು, ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
ತಮಿಳು ನಟ ಸೂಪರ್ಸ್ಟಾರ್ ರಜನಿಕಾಂತ್ ಲೋಕಸಭೆ ಚುನಾವಣೆ 2024 ರ ಮೊದಲನೇ ಹಂತದ ಮತದಾನದಲ್ಲಿ ತಮಿಳುನಾಡಿನ ಮತ ಚಲಾಯಿಸಿದರು. ಮತದಾನ ಮಾಡಲು ಬಂದ ವೇಳೆ ರಜನಿಯನ್ನು ಅಭಿಮಾನಿಗಳು ಮುತ್ತಿಕೊಂಡು ಸೆಲ್ಫಿಗೆ ಮುಗಿ ಬಿದ್ದಿದ್ದಾರೆ. ಇಂದು ಬೆಳಗ್ಗೆ ಚೆನ್ನೈನ ಸ್ಟೆಲ್ಲಾ ಮಾರಿಸ್ ಕಾಲೇಜಿನ ಮತಗಟ್ಟೆಯಲ್ಲಿ ಮತದಾನ ಮಾಡಲು ಬಂದ ನಟನನ್ನು ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ನಟನನ್ನು ಕಾಣುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿಗೆ ಮುಗಿ ಬಿದ್ದಿದ್ದಾರೆ . ಟ್ವಿಟರ್ನಲ್ಲಿ ಶೇರ್ ಮಾಡಲಾದ ವೀಡಿಯೊದಲ್ಲಿ, ರಜನಿಕಾಂತ್ ಮತದಾನ ಮಾಡಲು ತಮ್ಮ ಸರದಿಗಾಗಿ ಕಾಯುತ್ತಿರುವುದನ್ನು ಕಾಣಬಹುದು. ನಟ ಮತ ಚಲಾಯಿಸಿ ಬಂದ ನಂತರ ತನ್ನ ಶಾಯಿ ಗುರುತಿನ ಬೆರಳನ್ನು ತೋರಿಸಿದರು. ಹೊರಡುವಾಗ ಮಾಧ್ಯಮಗಳೊಂದಿಗೆ ಮಾತನಾಡಿದ ರಜನಿಕಾಂತ್ಎಲ್ಲರೂ ಮತ ಚಲಾಯಿಸುವಂತೆ ಮನವಿ ಮಾಡಿದರು. ಮತದಾನ ಮಾಡುವುದು ನಾಗರಿಕರ ಕರ್ತವ್ಯ, ಪ್ರತಿಯೊಬ್ಬರು ಮತದಾನ ಮಾಡಿ ಎಂದು ಮನವಿ ಮಾಡಿದರು.
ತಮಿಳು ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಅವರು ಕಿರುತೆರೆ ನಟಿ ಮಹಾಲಕ್ಷ್ಮಿಯನ್ನು ಮದುವೆಯಾದಾಗಿನಿಂದಲೂ ಸಖತ್ ಸುದ್ದಿಯಲ್ಲಿದ್ದಾರೆ. ಮಹಾಲಕ್ಷ್ಮೀ ಹಾಗೂ ರವೀಂದರ್ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಆಗಿದ್ದರು. ಆದರೆ ಇಬ್ಬರೂ ಜೊತೆಯಾಗಿ ಸಂಸಾರ ಮಾಡುತ್ತಿದ್ದು ನಾವು ಸೂಪರ್ ಜೋಡಿ ಎನ್ನುವುದನ್ನು ಪ್ರೂವ್ ಮಾಡುತ್ತಿದ್ದಾರೆ. ಆದರೆ ಈಗ ರವೀಂದ್ರ ಅವರ ಪೋಸ್ಟ್ ಪ್ರತಿಯೊಬ್ಬರಲ್ಲೂ ಕಳವಳ ಮೂಡಿಸಿದೆ. ವಂಚನೆ ಪ್ರಕರಣದಲ್ಲಿ ಒಮ್ಮೆ ಜೈಲಿಗೂ ಹೋಗಿ ಬಂದ ರವೀಂದ್ರ ಅವರು ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದರು. ಇದರ ಮಧ್ಯೆ ಅವರಿಗೆ ಆರೋಗ್ಯ ಸಮಸ್ಯೆಯೂ ಇದೆ ಎನ್ನಲಾಗಿತ್ತು. ಈ ಎಲ್ಲ ಬೆಳವಣಿಗೆಗೆಳ ಮಧ್ಯೆ ಅವರು ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಕೆಟ್ಟ ಭಾವನೆ ಎನ್ನುವುದು ಒಂದು ಸಂದರ್ಭ. ಕೆಟ್ಟ ವಾತಾವರಣ ಎನ್ನುವುದು ಋಣಾತ್ಮಕ ಶಕ್ತಿ. ಕೆಟ್ಟ ದಿನ ಎನ್ನುವುದು ಪ್ರತಿ ದಿನವಲ್ಲ. ನನ್ನ ದಿನಗಳು ಹತ್ತಿರವಾಗುತ್ತಿವೆ. ಆದರೆ ನಾನು ಮಿಲಿಯನ್ ಸಲ ಒಳ್ಳೆತನ, ಕೆಟ್ಟದರಿಂದ ಪರೀಕ್ಷಿಸಲ್ಪಡುತ್ತಿದ್ದೇನೆ ಎಂದು ರವೀಂದ್ರ ಅವರು ಇನ್ಸ್ಟಾಗ್ರಾಮ್ನಲ್ಲಿ…
ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಹಾಗೂ ಭುವನ್ ದಂಪತಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ ಹೆಸರಿನ ರೆಸ್ಟೊರೆಂಟ್ ಬಳಿ ಹಲ್ಲೆ ನಡೆದಿದ್ದು ಈ ಬಗ್ಗೆ ಹರ್ಷಿಕಾ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ. ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ. ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ…
ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ರಿಷಬ್ ಶೆಟ್ಟಿ ಈ ಮಧ್ಯೆ ಮಾಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ಭೇಟಿ ಮಾಡಿದ್ದಾರೆ.ಮೋಹನ್ ಲಾಲ್ ಅವರನ್ನು ಭೇಟಿಯಾದ ವೇಳೆ ತೆಗೆದ ಫೋಟೋಗಳನ್ನು ರಿಷಬ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ’ ಪಾರ್ಟ್ 1 ಸಿನಿಮಾ ಕೆಲಸದಲ್ಲಿ ರಿಷಬ್ ಬ್ಯುಸಿಯಾಗಿದ್ದಾರೆ. ಇದರ ನಡುವೆ ಖ್ಯಾತ ನಟ ಮೋಹನ್‌ಲಾಲ್ ಅವರನ್ನು ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಭೇಟಿಯಾಗಿದ್ದು, ನೆಚ್ಚಿನ ನಟನ ಜೊತೆ ಕೆಲ ಕಾಲ ಸಮಯ ಕಳೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಈ ಭೇಟಿ ಯಾಕೆ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ರಿಷಬ್ ಬಿಟ್ಟುಕೊಟ್ಟಿಲ್ಲ. ಕಳೆದ ಎರಡು ದಿನಗಳ ಹಿಂದಷ್ಟೇ ಮೋಹನ್‌ಲಾಲ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮುಂಜಾನೆ ಮಹಾಮಂಗಳಾರತಿಯಲ್ಲಿ ನಟ ಪಾಲ್ಗೊಂಡಿದ್ದರು.
ತೆಲುಗಿನ ‘ಹನುಮಾನ್’ ಸಿನಿಮಾ ಮೂಲಕ ಸಕ್ಸಸ್ ಕಂಡಿರುವ ಯುವ ನಟ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕಾರ್ತಿಕೇಯ, ಕಾರ್ತಿಕೇಯ-2, ಧಮಾಕ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಕಾರ್ತಿಕ್ ಗಟ್ಟಮ್ನೇನಿ ತೇಜ್ ಸಜ್ಜಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಹನುಮಾನ್’ ಸಿನಿಮಾದಲ್ಲಿ ಚಾಕೆಲೇಟ್ ಹೀರೋ ಆಗಿ ಕಾಣಿಸಿಕೊಂಡಿದ್ದ ತೇಜ್ ಈ ಭಾರಿ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೈಯಲ್ಲಿ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ. ತೇಜ್ ಸಜ್ಜಾ ಹೊಸ ಸಿನಿಮಾ ‘ಮಿರಾಯ್’ ಎಂಬ ಟೈಟಲ್ ಇಡಲಾಗಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ. ‘ಮಿರಾಯ್’ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ಅನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್…
ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ವ್ಯಕ್ತಿಯ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತ ಹಾಕಿ ಎಂದು ನಟ ದರ್ಶನ್ ಮನವಿ ಮಾಡಿದ್ದಾರೆ. ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ ಅಂದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ. ಹಲಗೂರು ಗ್ರಾಮಕ್ಕೆ ದರ್ಶನ್ ಬರುತ್ತಿದ್ದಂತೆಯೇ ಅಭಿಮಾನಿಗಳಿಂದ ಜೈಕಾರ ಕೇಳಿ ಬಂತು. ಡಿ ಬಾಸ್ ಡಿ ಬಾಸ್ ಎಂದು ಘೋಷಣೆ ಮೊಳಗಿಸಿ ಸಂಭ್ರಮಿಸಿದ್ದಾರೆ ಅಭಿಮಾನಿಗಳು. ಬೃಹತ್ ಗುಲಾಬಿ ಹೂವಿನ ಹಾರವನ್ನು ಕ್ರೇನ್ ಮೂಲಕ ಹಾಕಿ ನೆಚ್ಚಿನ ನಟನಿಗೆ ಸ್ವಾಗತ ಕೋರಿದರು.
ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳಿಂದ ಬ್ರೇಕ್ ಪಡೆದುಕೊಂಡಿರುವ ನಟಿ ಪ್ರಚಾರದಲ್ಲ ಫುಲ್ ಬ್ಯುಸಿಯಾಗಿದ್ದಾರೆ. ಮತದಾರರನ್ನು ಸೆಳೆಯಲು ನಟಿ ಸಾಕಷ್ಟು ಕಸರತ್ತುಗಳನ್ನು ಮಾಡುತ್ತಿದ್ದಾರೆ. ಮಂಡಿ ಕ್ಷೇತ್ರದ ಭರ್ಮೌರ್ ಗೆ ಭೇಟಿ ನೀಡಿರುವ ಕಂಗನಾ, ಅಲ್ಲಿನ ಪುರಾತನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಚಂಬಾ ಗಡ್ಡಿ ಸಮುದಾಯದ ಸಾಂಪ್ರದಾಯಿಕ ಉಡುಪನ್ನು ಧರಿಸಿ, ಮತಯಾಚನೆ ಮಾಡಿದ್ದಾರೆ. ಇನ್ನೂ ಚುನಾವಣಾ ಪ್ರಚಾರದ ನಡುವೆ ಕಂಗನಾ ರಣಾವತ್ ಮಂಡಿಯಲ್ಲಿ ಮಾಜಿ ಸಿಎಂ ಜೈರಾಮ್ ಠಾಕೂರ್ ಅವರೊಂದಿಗೆ ನೆಲದ ಮೇಲೆ ಕುಳಿತು ಆಹಾರ ಸೇವಿಸಿದರು. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ವಿರೋಧ ಪಕ್ಷದ ನಾಯಕಿ ಮತ್ತು ಕಂಗನಾ ರಣಾವತ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೈರಾಮ್ ಠಾಕೂರ್ ಐದು ವರ್ಷಗಳ ಕಾಲ ಧುಮಾಲ್ ಅವರನ್ನು ನೆನಪಿಸಿಕೊಳ್ಳಲಿಲ್ಲ. ಇವರು ತಮ್ಮ ಹಿತಾಸಕ್ತಿಗಾಗಿ ಸಮೀರಪುರದ ಸುತ್ತ ತಿರುಗುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ…
ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿರುವ ರಶ್ಮಿಕಾ ಇನ್ಸ್ಟಾದಲ್ಲಿ ಚೆಂದದ ಫೋಟೋ ಶೇರ್ ಮಾಡಿದ್ದಾರೆ. ಬ್ಲ್ಯಾಕ್ ಡ್ರಸ್, ನ್ಯೂಸ್ ಹೇರ್ಸ್ಟೈಲ್, ಕ್ಯೂಟ್ ಲುಕ್ನಲ್ಲಿ ರಶ್ಮಿಕಾ ಮಂದಣ್ಣ ಮಿಂಚಿದ್ದು ನಟಿಯನ್ನು ನೋಡಿದ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಆ ಬಳಿಕ ಮುಟ್ಟಿದೆಲ್ಲಾ ಚಿನ್ನವಾಗುತ್ತಲೇ ಹೋಯಿತು. ಸ್ಯಾಂಡಲ್ ವುಡ್ ಬಳಿಕ ಟಾಲಿವುಡ್ ಗೆ ಹಾರಿ ಆ ಬಳಿಕ ಬಾಲಿವುಡ್ ನಲ್ಲೂ ಕೂರ್ಗ್ ಚೆಲುವೆ ಮಿಂಚುತ್ತಿದ್ದಾರೆ. ಸದ್ಯ ರಶ್ಮಿಕಾ ಸದ್ಯ ತೆಲುಗಿನಲ್ಲಿ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಫ 2 ಸಿನಿಮಾ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ. ಇತ್ತೀಚೆಗೆ ಹಿಂದಿಯಲ್ಲಿ ಪ್ಯಾನ್ ಇಂಡಿಯಾ ಫಿಲ್ಮ್ ಅನಿಮಲ್ ನಲ್ಲಿ ರಶ್ಮಿಕಾ ನಟಿಸಿದ್ರು. ಈ ಸಿನಿಮಾ ಮೂಲಕ ಮತ್ತೊಂದು…