ಬಾಲಿವುಡ್ ನಟಿ ತಾಪ್ಸಿ ಪನ್ನು ಇತ್ತೀಚೆಗೆ ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ಕೆಲವೇ ಕೆಲವು ಮಂದಿಯ ಸಮ್ಮುಖದಲ್ಲಿ ತಾಪ್ಸಿ ಮದುವೆ ನಡೆದಿತ್ತು. ಹೀಗಾಗಿ ಸಾಕಷ್ಟು ಜನರಿಗೆ ಆಕೆಯ ಮದುವೆಯ ಸುಳಿವೇ ಸಿಕ್ಕಿರಲಿಲ್ಲ. ಬ್ಲರ್ ಆಗಿರುವ ವಿಡಿಯೋವೊಂದು ಲೀಕ್ ಆಗಿ ಮದುವೆ ವಿಷಯ ತಿಳಿದಿತ್ತು. ತಾಪ್ಸಿ ಉದಯ್‌ಪುರದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಆದರೆ ತಮ್ಮ ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಅವರು ನೀಡಿರಲಿಲ್ಲ. ಮದುವೆ ಫೋಟೋ ಕೂಡ ಶೇರ್ ಮಾಡಿ ಪತಿ ಬಗ್ಗೆ ಮಾತನಾಡಿಲ್ಲ. ಇದೀಗ ಡ್ಯಾನ್ಸ್ ಮಾಡುತ್ತಾ ವೇದಿಕೆ ಏರಿ ಮಥಾಯಸ್ ಬೋ ಅವರಿಗೆ ಹಾರ ಹಾಕಿ ಖುಷಿಯಿಂದ ಮದುವೆ ಆಗುತ್ತಿರುವ ವಿಡಿಯೋ ಸದ್ದು ಮಾಡಿತ್ತು. ಹಾಗಾಗಿ ಮದುವೆ ಫೋಟೋ ಮತ್ತು ವಿಡಿಯೋಗಾಗಿ ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಅಭಿಮಾನಿಗಳ ಆಸೆಗೆ ನಟಿ ತಣ್ಣಿರೆರಚ್ಚಿದ್ದಾರೆ. ಈ ಬಗ್ಗೆ ತಾಪ್ಸಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ನನಗೆ ಫೋಟೋ ಮತ್ತು ವಿಡಿಯೋವನ್ನು ಮುಚ್ಚಿಡುವಂತಹ ಉದ್ದೇಶವಿರಲಿಲ್ಲ. ಆದರೆ ಅದು ನನ್ನ ಖಾಸಗಿ ಕಾರ್ಯಕ್ರಮ. ಹಾಗಾಗಿ ಅದನ್ನು ಹಂಚಿಕೊಳ್ಳಲ್ಲ…
Author: Author AIN
ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿಕೊಡೋ ಘೋಷಣೆ ಮಾಡಿದ್ದಾರೆ. ಅವರು ಸದ್ಯ ಘೋಟ್ ಸಿನಿಮಾದಲ್ಲಿ ಕೆಲಸದಲ್ಲಿ ಬ್ಯುಸಿಯಾಗಿರೋ ವಿಜಯ್ ನಟನೆಯ 69ನೇ ಸಿನಿಮಾ ಸದ್ಯದಲ್ಲೇ ಘೋಷಣೆ ಆಗಲಿದೆ. ಇದು ಅವರ ಕೊನೆಯ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ಇದೀಗ ವಿಜಯ್ ಚೆನ್ನೈನಲ್ಲಿ ಸಾಯಿ ಬಾಬಾ ಮಂದಿರ ನಿರ್ಮಾಣ ಮಾಡಿದ್ದಾರೆ. ಇದು ಅವರ ತಾಯಿಗಾಗಿ ನಿರ್ಮಾಣ ಮಾಡಿದ ಮಂದಿರವಾಗಿದೆ. ವಿಜಯ್ ಚೆನ್ನೈನಲ್ಲಿ ಜಾಗ ಹೊಂದಿದ್ದರು. ಅಲ್ಲಿ ಈ ಮಂದಿರ ನಿರ್ಮಾಣ ಆಗಿದೆ. ವಿಜಯ್ ತಾಯಿ ಶೋಭಾ ಅವರಿಗೆ ದೇವಸ್ಥಾನ ನಿರ್ಮಾಣ ಮಾಡಬೇಕು ಎನ್ನುವ ಕನಸಿದ್ದು, ಆ ಕನಸು ಈಗ ಈಡೇರಿದೆ. ಚೆನ್ನೈನ ಕೊರಟ್ಟೂರ್ನಲ್ಲಿ ಈ ಮಂದಿರ ನಿರ್ಮಾಣ ಆಗಿದೆ. ಈ ವರ್ಷ ಫೆಬ್ರವರಿಯಲ್ಲಿ ಈ ಮಂದಿರ ನಿರ್ಮಾಣದ ಕಾರ್ಯ ಪೂರ್ಣಗೊಂಡಿದೆ ಎನ್ನಲಾಗಿದೆ. ಇತ್ತೀಚೆಗೆ ವಿಜಯ್ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಸದ್ಯ ವಿಜಯ್ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದಲ್ಲಿ ನಟಿಸುತ್ತಿದ್ದು ಚಿತ್ರದಲ್ಲಿ ವಿಜಯ್ ಗೆ ಜೋಡಿಯಾಗಿ ನಟಿ ತ್ರಿಶಾ ಕಾಣಿಸಿಕೊಳ್ತಿದ್ದಾರೆ.
ವಾಹನಗಳ ಫ್ಯಾನ್ಸಿ ನಂಬರ್‌ಗಳ ಹರಾಜಿನ ಮೂಲಕ ಅಧಿಕ ಆದಾಯ ಗಳಿಸುತ್ತಿರುವ ರಾಜ್ಯ ಸಾರಿಗೆ ಇಲಾಖೆಯು ಇದೀಗ ‘ಕೆಎ 50 ಎಂಡಿ’ ಸರಣಿಯ ವಾಹನಗಳ ಹರಾಜಿಗೆ ಅರ್ಜಿ ಆಹ್ವಾನಿಸಿದೆ. ಏಪ್ರಿಲ್ 18ರಂದು ಹರಾಜು ಆರಂಭವಾಗಲಿದೆ. ಈ ಬಾರಿ ಕೂಡ ಸಾರಿಗೆ ಇಲಾಖೆ ಲಕ್ಷಾಂತರ ರೂಪಾಯಿ ಆದಾಯ ಗಳಿಸುವ ನಿರೀಕ್ಷೆ ಇದೆ. ಸಾರಿಗೆ ಇಲಾಖೆಯು ಕರ್ನಾಟಕ ಮೋಟಾರು ವಾಹನ ನಿಯಮಗಳು, 1989 ರ ನಿಯಮ 46 (ಎಎ) 1 ರಿಂದ 999 ರ ನಡುವಿನ ಲಘು ಮೋಟಾರು ವಾಹನಗಳಿಗೆ ಫ್ಯಾನ್ಸಿ ನೋಂದಣಿ ಸಂಖ್ಯೆಗಳನ್ನು ಹಂಚಿಕೆ ಮಾಡಲು ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ. ಈ ಬಾರಿ ‘ಕೆಎ 50 ಎಂಡಿ’ ಸರಣಿಯ ಹರಾಜು ಪ್ರಕ್ರಿಯೆಯು ಏ.18ರಂದು ಮಧ್ಯಾಹ್ನ 12 ಗಂಟೆಗೆ ಶಾಂತಿನಗರದ ಸಾರಿಗೆ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ. ಆಸಕ್ತರು ಕಾರ್ಯದರ್ಶಿ, ರಾಜ್ಯ ಸಾರಿಗೆ ಪ್ರಾಧಿಕಾರ, ಬೆಂಗಳೂರು. ಈ ಹೆಸರಿನಲ್ಲಿ 75,000 ರೂ. ಡಿಮ್ಯಾಂಡ್ ಡ್ರಾಫ್ಟ್‌ನೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಏಪ್ರಿಲ್ 18ರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿದಾರರಿಗೆ…
ಹಾಂಗ್ ಕಾಂಗ್‍ನ ಜೋರ್ಡಾನ್‍ನಲ್ಲಿರುವ ನ್ಯೂ ಲಕ್ಕಿ ಹೌಸ್ ಹೆಸರಿನ ವಸತಿ ಕಟ್ಟಡವೊಂದರಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಐವರು ಮೃತಪಟ್ಟು 41 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂವರು ಪುರುಷರು ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಿಗ್ಗೆ 7:53 ಕ್ಕೆ ಬೆಂಕಿ ಬಿದ್ದಿರುವ ಬಗ್ಗೆ ಬಂದ ಮಾಹಿತಿ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು ಎಂದು ಅಕಾರಿಗಳು ತಿಳಿಸಿದ್ದಾರೆ. ಮೊದಲ ಮಹಡಿಯಲ್ಲಿರುವ ಜಿಮ್‍ನಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಾಯಾಮ ಮಾಡಲು ಬಂದಿದ್ದ ಅನೇಕರು ಆತಂಕಗೊಂಡು ಅಲ್ಲಿಂದ ಜೀವ ಉಳಿಸಿಕೊಳಲು ಪರದಾಡಿದ್ದಾರೆ.ಸುಮಾರು ಮೂರು ತಾಸಿನ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿಯಲ್ಲಿ ಉಲ್ಲೇಖಿಸಿವೆ.
ಮಹೇಶ್ ಬಾಬು ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಕಾಂಬಿನೇಷನ್ ನಲ್ಲಿ ಈ ಮೊದಲು ತೆರೆಕಂಡ ‘ಅಥಡು’ ಹಾಗೂ ‘ಖಲೇಜಾ’ ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು. ಈ ಕಾರಣದಿಂದಲೇ ಗುಂಟೂರು ಖಾರಂ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ, ನಿರೀಕ್ಷೆ ಹುಸಿ ಆಗಿದೆ. ಸಿನಿಮಾ ಅಂದುಕೊಂಡ ರೀತಿಯಲ್ಲಿ ಸಕ್ಸಸ್ ಆಗಿಲ್ಲ. ಚಿತ್ರದ ವಿಫಲತೆಯನ್ನು ಯಾರೊಬ್ಬರೂ ನೇರವಾಗಿ ಹೇಳಿಲ್ಲ. ಆದರೆ ಚಿತ್ರದ ವಿಲನ್ ಜಗಪತಿ ಬಾಬು ನೇರವಾಗಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಹಲವು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ಜಗಪತಿ ಬಾಬು ಹಲವು ವಿಚಾರಗಳನ್ನು ನೇರವಾಗಿ ಹೇಳಿಕೊಳ್ಳುತ್ತಾರೆ. ಅವರು ‘ಗುಂಟೂರು ಖಾರಂ’ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಿನಿಮಾ ಇಷ್ಟವಾಗಿಲ್ಲ ಎಂದು ನೇರವಾಗಿ ಹೇಳಿರುವ ಅವರು, ಸಿನಿಮಾ ಶೂಟ್ ಮಾಡೋದು ಕೂಡ ಕಷ್ಟವಾಯ್ತು ಎಂದಿದ್ದಾರೆ. ‘ನನಗೆ ಮಹೇಶ್ ಬಾಬು ಜೊತೆ ಕೆಲಸ ಮಾಡೋದು ಎಂದರೆ ಇಷ್ಟ. ಆದರೆ, ಗುಂಟೂರು ಖಾರಂ ನನಗೆ ಖುಷಿ ನೀಡಿಲ್ಲ. ಆರಂಭದಲ್ಲಿ ಪಾತ್ರಗಳು ಸ್ಟ್ರಾಂಗ್ ಎನಿಸಿದ್ದವು. ಆದರೆ,…
ವಿಜಯ್ ದೇವರಕೊಂಡ ನಟನೆಯ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಸೋಲನುಭವಿಸುತ್ತಿದೆ. ‘ಲೈಗರ್’ ಸಿನಿಮಾದ ಬಳಿಕ ವಿಜಯ್ ನಟನೆಯ ಸಿನಿಮಾಗಳು ಸೋಲುತ್ತಿದ್ದು ಇದರಿಂದ ವಿಜಯ್ ಚಿಂತಾಕ್ರಾಂತರಾಗಿದ್ದಾರೆ. ಈ ಮಧ್ಯೆ ವಿಜಯ್ ನಟನೆಯ ಹೊಸ ಸಿನಿಮಾದಿಂದ ನಟಿ ಶ್ರೀಲೀಲಾ ಹೊರ ಬಂದಿದ್ದು ಆ ಜಾಗಕ್ಕೆ ಹೊಸ ನಟಿಯೊಬ್ಬರ ಎಂಟ್ರಿಯಾಗಿದೆ ಎಂದು ಹೇಳಲಾಗುತ್ತಿದೆ. ‘ಫ್ಯಾಮಿಲಿ ಸ್ಟಾರ್’ ಸಿನಿಮಾದ ಬಳಿಕ ವಿಜಯ್ ಮುಂದಿನ ಸಿನಿಮಾದ ಕಡೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರಕ್ಕೆ ಸದ್ಯಕ್ಕೆ ‘VD 12’ ಎಂದು ಟೈಟಲ್ ಇಡಲಾಗಿದೆ. ಇದೀಗ ಈ ಚಿತ್ರದಿಂದ ಶ್ರೀಲೀಲಾ ಹೊರ ನಡೆದಿದ್ದಾರೆ ಎಂದು ವರದಿ ಆಗಿದೆ. ಶ್ರೀಲೀಲಾ ‘VD 12’ ಸಿನಿಮಾಗೆ ನಾಯಕಿ ಎಂದು ಮೊದಲೇ ಘೋಷಣೆ ಮಾಡಲಾಗಿತ್ತು. ಆದರೆ, ಸಿನಿಮಾ ಕಾರಣಾಂತರಗಳಿಂದ ವಿಳಂಬ ಆಗುತ್ತಲೇ ಬಂತು. ಹೀಗಾಗಿ, ಶ್ರೀಲೀಲಾ ಸಿನಿಮಾದಿಂದ ಹೊರ ನಡೆದರು. ಬದಲು ಬೇರೆ ನಾಯಕಿಯ ಹುಡುಕಾಟದಲ್ಲಿ ಚಿತ್ರತಂಡ ತೊಡಗಿದೆ. ಇತ್ತೀಚೆಗೆ ಮಲಯಾಳಂನಲ್ಲಿ ‘ಪ್ರೇಮಲು’ ಸಿನಿಮಾ ರಿಲೀಸ್ ಆಗಿ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ನಾಯಕಿ ಮಮಿತಾ…
ಐರ್ಲೆಂಡ್ ನ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ಸೈಮನ್ ಹ್ಯಾರಿಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತ ಮತ್ತು ಐರ್ಲೆಂಡ್ ನಡುವಿನ ಬಾಂಧವ್ಯವನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ “ಐರ್ಲೆಂಡ್ ನ ಅತ್ಯಂತ ಕಿರಿಯ ಪ್ರಧಾನಿಯಾದಕ್ಕಾಗಿ ಸೈಮನ್ ಹ್ಯಾರಿಸ್ ಅವರಿಗೆ ಅಭಿನಂದನೆಗಳು. ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ಹಂಚಿಕೊಂಡ ನಂಬಿಕೆಯ ಆಧಾರದ ಮೇಲೆ ನಮ್ಮ ಐತಿಹಾಸಿಕ ಸಂಬಂಧಗಳನ್ನು ಹೆಚ್ಚು ಗೌರವಿಸುತ್ತೇವೆ. ಭಾರತ-ಐರ್ಲೆಂಡ್ ದ್ವಿಪಕ್ಷೀಯವನ್ನು ಹೆಚ್ಚು ರಕ್ಷಿಸುವ ಕೆಲಸವನ್ನು ಎದುರು ನೋಡಬಹುದಾಗಿದೆ ಎಂದು ಮೋದಿ ಹೇಳಿದ್ದಾರೆ.
ಅರ್ಜುನ್ ರೆಡ್ಡಿ, ಅನಿಮಲ್, ಕಬೀರ್ ಸಿಂಗ್ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸದ್ಯ ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮೈಕಲ್ ಜಾಕ್ಸನ್ ಜೀವನವನ್ನು ತೆರೆ ಮೇಲೆ ತರಲು ಆಸಕ್ತಿ ತೋರಿದ್ದಾರೆ. ಮೂರು ಸಿನಿಮಾಗಳು ಸೂಪರ್ ಹಿಟ್ ಆದ ಬಳಿಕ ಸಂದೀಪ್ ರೆಡ್ಡಿ ವಂಗಾ ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿದ್ದು, ಅವರ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್ ನಟರು ಕಾದಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್ ರೆಡ್ಡಿ ವಂಗಾ ಅವರು ಒಂದು ಬಯಕೆಯನ್ನು ತೋಡಿಕೊಂಡಿದ್ದಾರೆ. ಮೈಕಲ್ ಜಾಕ್ಸನ್ ಅವರ ಜೀವನದ ಕಥೆ ಬಗ್ಗೆ ಸಂದೀಪ್ ಅವರಿಗೆ ಸಖತ್ ಆಸಕ್ತಿ ಇದೆ. ‘ಆಸೆ ಇದೆ. ಆದರೆ, ಮೈಕಲ್ ಜಾಕ್ಸನ್ ಪಾತ್ರವನ್ನು ಯಾರು ಮಾಡ್ತಾರೆ ಎಂಬುದೇ ಪ್ರಶ್ನೆ. ಸೂಕ್ತವಾದ ನಟ ಸಿಕ್ಕರೆ ಹಾಲಿವುಡ್ನಲ್ಲಿ ಸಿನಿಮಾ ಮಾಡಬಹುದು. ಮೈಕಲ್ ಜಾಕ್ಸನ್ ಅವರ ಜೀವನ ತುಂಬ ಇಂಟರೆಸ್ಟಿಂಗ್ ಆಗಿತ್ತು. ಅವರ ಬಾಲ್ಯದ ದಿನಗಳು, ಮೈ…
ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ಒಂದಲ್ಲ ಒಂದು ಕಾರಣಕ್ಕೆ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಲೆ ಇರುತ್ತಾರೆ. ಅದರಲ್ಲೂ ನೆಪೋ ಕಿಡ್ ಗಳನ್ನ ಕಂಡರೆ ಕಂಗನಾ ಉರಿದುರಿದು ಬೀಳುತ್ತಾರೆ. ಸದ್ಯ ಕಂಗನಾರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಆಲಿಯಾ ಭಟ್ ನ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಚಾರದಲ್ಲಿ ಈ ಟೀಕೆ ನಡೆದಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆದರೂ ಚಿತ್ರರಂಗದಲ್ಲಿ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಅವರು ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದ ನಟನೆಗೆ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಕಂಗನಾ ಲಾಭಿ ಮಾಡಿ ಪಡೆದಿದ್ದಾರೆ ಎಂದು ಕಂಗನಾ ರಣಾವತ್ ಅವರು ಪರೋಕ್ಷವಾಗಿ ಆರೋಪಿಸಿದ್ದಾರೆ. ಕಂಗನಾ ರಣಾವತ್ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಹುಟ್ಟೂರಾದ ಹಿಮಾಚಲ ಪ್ರದೇಶದ ಮಂಡಿಯಿಂದ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಅವರು ಚುನಾವಣಾ…
ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ ಜೈಲು ಸೇರಿದ್ದರು. 11 ದಿನಗಳ ಸೆರೆವಾಸದ ಬಳಿಕ ಏ.6ರಂದು ಜೈಲಿಂದ ಹೊರ ಬಂದ ಬಳಿಕ ಸೋನು ಕುಟುಂಬದವರ ಜೊತೆ ಸೇರಿ ಯುಗಾದಿ ಹಬ್ಬ ಆಚರಿಸಿದ್ದಾರೆ. ಪಿಂಕ್ ಬಣ್ಣ ಸೀರೆಯುಟ್ಟು ಸೋನು ಗೌಡ ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ. ಯುಗಾದ ಹಬ್ಬದ ಸಂಭ್ರಮದ ಫೋಟೋಗಳನ್ನು ನಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೈಲಿಂದ ರಿಲೀಸ್ ಆದ ಬಳಿಕ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡೋಕೆ ಸೋನು ನಿರಾಕರಿಸಿದ್ದರು. ಆದರೆ ಅವರ ಲಾಯರ್ ಸೂಚನೆಯ ಮೇರೆಗೆ ಸೋನು ಯಾವುದೇ ರಿಯಾಕ್ಷನ್ ನೀಡಿರಲಿಲ್ಲ. ಸದ್ಯ ಕಹಿಯೆಲ್ಲಾ ಮರೆತಿರೋ ಸೋನು ಯುಗಾದಿ ಹಬ್ಬವನ್ನು ಚಂದವಾಗಿ ಆಚರಿಸಿದ್ದಾರೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಿದ್ದ ಸೋನು ಜೈಲಿಗೆ ಹೋಗಿ ಬಂದ ಬಳಿಕ ಸಖತ್ ಸೈಲೆಂಟ್ ಆಗಿದ್ದಾರೆ. ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಿಂದ ಸೋನು ಮೌನಕ್ಕೆ ಶರಣಾಗಿದ್ದರು. ಇದೀಗ ಮತ್ತೆ ಲವಲವಿಕೆಯಿಂದ ಕ್ಯಾಮೆರಾಗೆ ಪೋಸ್…