Author: Author AIN

ಬಾಲಿವುಡ್ ಚಿತ್ರರಂಗದ ಅನೇಕ ಕಲಾವಿದರು ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗಾಗ್ಲೆ ಐಶ್ವರ್ಯಾ ರೈ ಬಚ್ಚನ್​, ಇರ್ಫಾನ್​ ಖಾನ್​ ಸೇರಿದಂತೆ ಹಲವರು ಇಂಗ್ಲಿಷ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ನಟಿ ಶ್ರುತಿ ಹಾಸನ್ ಹಾಲಿವುಡ್ ಸಿನಿಮಾವನ್ನ ರಿಜೆಕ್ಟ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ನಟಿ ಶ್ರುತಿ ಹಾಸನ್ ಹಾಲಿವುಡ್​ನ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿ ಹೊರಬಿದ್ದಿತ್ತು. ಆದರೆ ಆ ಚಿತ್ರದಿಂದ ಶ್ರುತಿ ಹಾಸನ್​ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೂ ಮುನ್ನ, ಸಮಂತಾ ರುತ್​ ಪ್ರಭು ಕೂಡ ಇದೇ ಸಿನಿಮಾದಿಂದ ಹೊರಬಂದಿದ್ದರು. ಹಾಲಿವುಡ್​ ನಿರ್ದೇಶಕ ಫಿಲಿಪ್​ ಜಾನ್​ ಅವರು ‘ಚೆನ್ನೈ ಸ್ಟೋರಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಕಾದಂಬರಿಯನ್ನು ಆಧರಿಸಿ ಈ ಸಿನಿಮಾ ಮೂಡಿಬರುತ್ತಿದೆ. ಹಾಲಿವುಡ್​ನ ಈ ಸಿನಿಮಾಗೆ ನಾಯಕಿಯಾಗಿ ಮೊದಲು ಆಯ್ಕೆ ಆಗಿದ್ದು ಸಮಂತಾ ರುತ್​ ಪ್ರಭು. ನಿರ್ದೇಶಕರ ಜೊತೆ ಅವರ ಫೋಟೋ ಕೂಡ ವೈರಲ್​ ಆಗಿತ್ತು. ಆದರೆ ಆ ಪ್ರಾಜೆಕ್ಟ್​ನಿಂದ ಸಮಂತಾ ಆಚೆ ಬಂದ ಬಳಿಕ ಆ ಜಾಗಕ್ಕೆ ಶ್ರುತಿ ಹಾಸನ್​…

Read More

‘ಬನಾರಸ್’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟ ಖೈದ್ ಖಾನ್ ಇದೀಗ ಮತ್ತೊಂದು ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ್ದ ಝೈದ್ ಖಾನ್ ನಟನೆಯ ಎರಡನೇ ಚಿತ್ರದ ಟೈಟಲ್ ಘೋಷಣೆ ಆಗಿದೆ. ಯುಗಾದಿ ಹಾಗೂ ರಂಜಾನ್ ಹಬ್ಬದ ಸಂದರ್ಭದಲ್ಲಿ ಖೈದ್ ನಟನೆಯ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದ್ದು, ‘ಕಲ್ಟ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಉಪಾಧ್ಯಕ್ಷ ಚಿತ್ರದ ಮೂಲಕ ಮೆಚ್ಚುಗೆ ಪಡೆದ ನಿರ್ದೇಶಕ ಅನಿಲ್ ಕುಮಾರ್ ಅವರು ‘ಕಲ್ಟ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇತ್ತೀಚೆಗಷ್ಟೇ ಝೈದ್ ಖಾನ್ ಹಾಗೂ ಅನಿಲ್ ಕುಮಾರ್ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಹೊರ ಬಿದ್ದಿತ್ತು. ಈ ಚಿತ್ರದ ಟೈಟಲ್​ನ ಶೀಘ್ರವೇ ರಿವೀಲ್ ಮಾಡುವುದಾಗಿ ತಿಳಿಸಲಾಗಿತ್ತು. ಈಗ ಚಿತ್ರದ ಟೈಟಲ್ ರಿಲೀಸ್ ಆಗಿದೆ. ಪೋಸ್ಟರ್ ಕೂಡ ಸಖತ್ ರಗಡ್ ಆಗಿ ಮೂಡಿ ಬಂದಿದೆ. ಈ ಚಿತ್ರಕ್ಕೆ ‘ಬ್ಲಡಿ ಲವ್’ ಎನ್ನೋ ಟ್ಯಾಗ್ ಲೈನ್ ಇದ್ದು, ಸಿನಿಮಾದಲ್ಲಿ ಲವ್​ ಸ್ಟೋರಿ, ಬ್ರೇಕಪ್ ಕಥೆ…

Read More

ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ ಯುಗಾದಿ ಹಬ್ಬದಂದು ಗುಡ್ ನ್ಯೂಸ್ ನೀಡಿದ್ದಾರೆ. ನಟಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಏ.4ರಂದು ನಟಿ ಅದಿತಿ ಪ್ರಭುದೇವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಯುಗಾದಿ ಹಬ್ಬದಂದು ಮಗಳ ಆಗಮನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಅದಿತಿ ಸಂತಸದ ಸುದ್ದಿ ಹೇಳುತ್ತಿದ್ದಂತೆ ಪತಿ ಯಶಸ್‌ ಕೂಡ ರಿಪ್ಲೈ ಮಾಡಿದ್ದಾರೆ. ನನ್ನ ಜೀವದ ಗೆಳತಿ ಅದಿತಿ, ನಿನ್ನ ಹಾಗೆಯೇ ನಮ್ಮ ಮಗಳು ಎಂದು ಕಾಮೆಂಟ್‌ ಮಾಡಿದ್ದಾರೆ. ಅದಿತಿ ಪ್ರಭುದೇವ ಅವರು ಚಿತ್ರರಂಗಕ್ಕೆ ಕಾಲಿಟ್ಟು ಕೆಲವು ವರ್ಷಗಳು ಕಳೆದಿವೆ. 2017ರಲ್ಲಿ ಬಂದ ‘ಧೈರ್ಯ’ ಅವರು ನಟಿಸಿದ ಮೊದಲ ಸಿನಿಮಾ. ಆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಅವರು ನಟಿಸಿದರು. ಸ್ಟಾರ್ ನಟಿಯಾಗಿ ಮಿಂಚುವಾಗಲೇ ಯಶಸ್ ಜೊತೆ ಹಸೆಮಣೆ ಏರಿದ ನಟಿ ಇದೀಗ ಮುದ್ದಾದ ಮಗುವಿನ ತಾಯಿಯಾಗಿದ್ದಾರೆ.

Read More

ಇತ್ತೀಚೆಗೆ ಬಾಲಿವುಡ್​ ಕಿಂಗ್ ಖಾನ್ ಶಾರುಖ್ ಖಾನ್ ಅವರ ಹಿರಿಯ ಪುತ್ರ ಆರ್ಯನ್ ಖಾನ್ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯಾ ಬಚ್ಚನ್ ಅವರ ಕೆಲವು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋದಲ್ಲಿ ಆರ್ಯನ್ ಮತ್ತು ಆರಾಧ್ಯಾ ಮದುವೆಯಾಗುವುದನ್ನು ತೋರಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿದ್ದು, ಫೋಟೋ ನೋಡಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರಾಧ್ಯಾ ಮತ್ತು ಆರ್ಯನ್ ಅವರ ಫೋಟೋಗಳನ್ನು ಬಳಕೆದಾರರು ರೆಡ್ಡಿಟ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ಆರಾಧ್ಯಾ ವಧುವಾಗಿ ಕಾಣಿಸಿಕೊಂಡರೆ, ಆರ್ಯನ್ ವರನಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ವೈರಲ್ ಫೋಟೋಗಳನ್ನು ಯಾರೋ ಕಿಡಿಗೇಡಿಗಳು ಎಡಿಟ್ ಮಾಡಿದ್ದಾರೆ. ಒಂದು ಫೋಟೋದಲ್ಲಿ ಆರಾಧ್ಯಾ ಮತ್ತು ಬಿಗ್ ಬಿ ಕಾಣಿಸಿಕೊಂಡರೆ, ಇನ್ನೊಂದರಲ್ಲಿ ಆರ್ಯನ್ ಮತ್ತು ಆರಾಧ್ಯಾ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಫೋಟೋಗೆ ನೆಟ್ಟಿಗರು ಕಮೆಂಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ‘ಫೋಟೋ ಎಡಿಟ್ ಮಾಡಿದವರ ವಿರುದ್ಧ ಕೇಸು ದಾಖಲಿಸಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.…

Read More

ಈ ವರ್ಷದ ಮೊದಲ ಸೂರ್ಯಗ್ರಹಣವು ಮೆಕ್ಸಿಕೊ ಮತ್ತು ಅಮೆರಿಕದಲ್ಲಿ ಪ್ರಾರಂಭವಾಗಿತ್ತು. ಸಂಪೂರ್ಣ ಸೂರ್ಯಗ್ರಹಣವು ಮೊದಲು ಮೆಕ್ಸಿಕೊದ 603 ಕಿಲೋಮೀಟರ್ ಇಸ್ಲಾ ಸೊಕೊರೊ ದ್ವೀಪವನ್ನು ಪ್ರವೇಶಿಸಿದ್ದು, ಈ ವೇಳೆ ಸಂಪೂರ್ಣ ಕತ್ತಲೆ ಆವರಿಸಿತ್ತು. ಅಮೆರಿಕಾದಲ್ಲಿ ಗ್ರಹಣದ ಹಾದಿಯಲ್ಲಿರುವ ಕನಿಷ್ಠ 12 ರಾಜ್ಯಗಳು ಸುಮಾರು 4 ನಿಮಿಷ 28 ಸೆಕೆಂಡುಗಳ ಕಾಲ ಕತ್ತಲೆಯಲ್ಲಿ ಆವರಿಸಿದ್ದವು. ಅದೇ ಸಮಯದಲ್ಲಿ, 54 ದೇಶಗಳಲ್ಲಿ ಭಾಗಶಃ ಸೂರ್ಯಗ್ರಹಣ ಸಂಭವಿಸಿದೆ. ಭಾರತದಲ್ಲಿ ಈ ಸೂರ್ಯಗ್ರಹಣ ಗೋಚರಿಸಿಲ್ಲ, ಏಕೆಂದರೆ ಗ್ರಹಣ ಪ್ರಾರಂಭವಾದಾಗ, ಇಲ್ಲಿ ರಾತ್ರಿಯಾಗಿತ್ತು. ಇದು ಕಳೆದ ಹಲವು ವರ್ಷಗಳ ಅತ್ಯಂತ ವಿಶಿಷ್ಟ ಖಗೋಳ ಘಟನೆಯಾಗಲಿದೆ. ಯುಎಸ್ ಬಾಹ್ಯಾಕಾಶ ಸಂಸ್ಥೆ ನಾಸಾ (ನಾಸಾ) ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ವರ್ಷದ ಮೊದಲ ಸಂಪೂರ್ಣ ಸೂರ್ಯಗ್ರಹಣವನ್ನು ಲೈವ್ ಸ್ಟ್ರೀಮ್ ಮಾಡಿದ್ದು, ಸೂರ್ಯ ಗ್ರಹಣದ ಅನೇಕ ವಿಡಿಯೋ ಹಾಗೂ ಫೋಟೋಗಳನ್ನು ಹಂಚಿಕೊಂಡಿದೆ.

Read More

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಟಿ ಬೃಂದಾ ಆಚಾರ್ಯ ಸ್ಟೈಲಿಶ್ ಆಗಿ ಫೋಟೋ ಶೂಟ್ ಮಾಡಿಸಿದ್ದು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ಹಳದಿ ಮೈ ಹಾಗೂ ಹಸಿರು ಬಾರ್ಡರ್ ನ ರೇಷ್ಮೆ ಸೀರೆಯುಟ್ಟು ಸ್ಟೈಲಿಷ್ ಜ್ಯೂಯಲ್ಸ್ ತೊಟ್ಟು ಕ್ಯಾಮರಾಗೆ ಸಖತ್ತಾಗೆ ಪೋಸ್ ಕೊಟ್ಟಿದ್ದಾರೆ. ಬೃಂದಾ ಆಚಾರ್ಯ ನೆನಪಿರಲಿ ಪ್ರೇಮ್ ನಟನೆಯ ಪ್ರೇಮಂ ಪೂಜ್ಯಂ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟವರು. ಬೃಂದಾ ಆಚಾರ್ಯ ಈ ವರ್ಷ ತೆರೆ ಕಂಡ ಸುಪ್ರಜಾ ಕೌಸಲ್ಯ ರಾಮ ಸಿನಿಮಾದಲ್ಲಿ ಶಿವಾಣಿ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಸದ್ಯ ನಿರೂಪ್ ಬಂಡಾರಿ ನಟನೆಯ ಹೊಸ ಸಿನಿಮಾಗೆ ಬೃಂದಾ ನಾಯಕಿಯಾಗಿದ್ದಾರೆ. ಈ ಸಿನಿಮಾದಲ್ಲಿ ಬೃಂದಾ ಸೋಷಿಯಲ್ ಮೀಡಿಯಾ ಇನ್ಫ್ಯೂಲೆಷನರ್  ಪಾತ್ರ ಮಾಡಲಿದ್ದಾರೆ. ಬೃಂದಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದೀಕ್ಷಿತ್ ಶೆಟ್ಟಿ ನಟನೆಯ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಸಿನಿಮಾಗೆ ಬೃಂದಾ ನಾಯಕಿ. ರಾಮಾ ರಾಮಾ ರೇ ಖ್ಯಾತಿಯ ಸತ್ಯಪ್ರಕಾಶ್ ನಟಿಸಿ, ನಿರ್ದೇಶಿಸುತ್ತಿರುವ ಎಕ್ಸ್ & ವೈ ಸಿನಿಮಾದಲ್ಲೂ…

Read More

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಇತ್ತೀಚೆಗೆ ಮೆಕ್ಕಾದ ಅಲ್-ಸಫಾ ಅರಮನೆಯಲ್ಲಿ ಅಧಿಕೃತ ಸಭೆ ನಡೆಸಿ, ಕಾಶ್ಮೀರ ವಿಷಯಕ್ಕೆ ಒತ್ತು ನೀಡುವ ಮೂಲಕ ಪಾಕಿಸ್ತಾನ ಮತ್ತು ಭಾರತದ ನಡುವೆ ಇರುವ ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆಯ ಮಹತ್ವವನ್ನು ಒತ್ತಿಹೇಳಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಏಪ್ರಿಲ್ 7 ರಂದು ಶೆಹಬಾಜ್ ಷರೀಫ್ ಮತ್ತು ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ನಡುವಿನ ಸಭೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, ಇಬ್ಬರೂ ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ನಡುವಿನ ಸಹೋದರ ಸಂಬಂಧಗಳನ್ನು ಬಲಪಡಿಸಲು ಮತ್ತು ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಸಹಯೋಗದ ಮಾರ್ಗಗಳನ್ನು ಅನ್ವೇಷಿಸಲು ಒತ್ತು ನೀಡಿದರು. ಇಬ್ಬರೂ ನಾಯಕರು ಕಾಶ್ಮೀರ ಸೇರಿದಂತೆ ಪ್ರಾದೇಶಿಕ ವಿಷಯಗಳ ಬಗ್ಗೆಯೂ ಚರ್ಚಿಸಿದರು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. “ಉಭಯ ದೇಶಗಳ ನಡುವಿನ ಬಾಕಿ ಇರುವ ಸಮಸ್ಯೆಗಳನ್ನು, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ಪರಿಹರಿಸಲು ಪಾಕಿಸ್ತಾನ ಮತ್ತು ಭಾರತದ…

Read More

ವರ್ಷದ ಮೊದಲ ಸೂರ್ಯಗ್ರಹಣವು ಸೋಮವಾರ ಮೆಕ್ಸಿಕೊ, ಕೆನಡಾ ಹಾಗೂ ಅಮೆರಿಕದಂತಹ ದೇಶಗಳಲ್ಲಿ ಗೋಚರವಾಗಿದೆ. ಶತಮಾನಗಳ ಬಳಿಕ ಮೊದಲ ಬಾರಿಗೆ ನ್ಯೂಯಾರ್ಕ್‌ನಲ್ಲಿ ಸಂಪೂರ್ಣವಾಗಿ ಗೋಚರವಾಗಿರುವ ಸೂರ್ಯಗ್ರಹಣ ಇದಾಗಿದೆ. ನಾಸಾ ಈ ಬಗೆಗಿನ ವಿಡಿಯೋ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ನಾಸಾ ತನ್ನ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ. ಸಂಪೂರ್ಣತೆಯ ಹಾದಿಯಾಗಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಮರೆಮಾಚುವ ದೃಶ್ಯಗಳು ಈ ಚಿತ್ರಪಟ ಹಾಗೂ ವೀಡಿಯೋದಲ್ಲಿ ಕಂಡುಬಂದಿದೆ. ಆದರೆ ಇದು ಭಾರತದಲ್ಲಿ ಗೋಚರವಾಗಿಲ್ಲ. ವಿಡಿಯೋ ಮುಖೇನ ಮಾತ್ರ ಸಂಪೂರ್ಣ ಸೂರ್ಯಗ್ರಹಣ ಕಣ್ತುಂಬಿಕೊಳ್ಳಬಹುದಾಗಿದೆ. ನಾಸಾ ವೀಕ್ಷಕರಿಗಾಗಿ ತನ್ನ ಸೋಶಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಅಧಿಕೃತ ನೇರ ಪ್ರಸಾರ ಸಹ ಹಮ್ಮಿಕೊಂಡಿತ್ತು. ಈ ಕುರಿತ ವೀಡಿಯೋಗಳನ್ನು ಶೇರ್ ಮಾಡಲಾಗಿದೆ.

Read More

ಮಹಿಳೆಯ ಯೋನಿಯಲ್ಲಿ ಸತ್ತ ಜಿರಳೆ ಪತ್ತೆಯಾದ ಘಟನೆ ಮಧ್ಯ ಅಮೆರಿಕದ ಹೊಂಡುರಾಸ್ ನಲ್ಲಿ ವರದಿಯಾಗಿದೆ. ಹಿಂದಿನ ರಾತ್ರಿ ತನ್ನ ಯೋನಿಯೊಳಗೆ ವಿಚಿತ್ರವಾದದ್ದನ್ನು ಸ್ಪರ್ಶಿಸಿದಂತೆ ಭಾಸವಾಗಿದ್ದರಿಂದ ತನಗೆ ನಿದ್ರೆ ಮಾಡಲು ಸಾಧ್ಯವಾಗಲಿಲ್ಲ ಎಂದು ಅವಳು ಬಹಿರಂಗಪಡಿಸಿದಳು. ಪರೀಕ್ಷೆಯ ನಂತರ, ಸತ್ತ ಜಿರಳೆ ಅವಳ ಯೋನಿಯಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿದೆ. ರೋಗಿಯು ತನ್ನ ಯೋನಿಯಲ್ಲಿ ವಿಚಿತ್ರವಾದದ್ದನ್ನು ಅನುಭವಿಸಿದಳು ಎಂದು ಹೇಳಿದರು. ಯೋನಿ ಪರೀಕ್ಷಿಸಿದಾಗ ಒಂದು ಕೀಟ ಕಂಡುಬಂದಿದೆ. ಜಿರಳೆ ಅವಳ ಯೋನಿಯನ್ನು ಹೇಗೆ ಪ್ರವೇಶಿಸಿತು ಮತ್ತು ಅದು ಎಷ್ಟು ಸಮಯದವರೆಗೆ ಅಲ್ಲಿಯೇ ಇತ್ತು ಎಂಬುದು ಸ್ಪಷ್ಟವಾಗಿಲ್ಲವಾದರೂ, ಯೋನಿ ಪರೀಕ್ಷೆಗಳ ಸಮಯದಲ್ಲಿ ಕಾಂಡೋಮ್ ಮತ್ತು ಲೈಂಗಿಕ ಆಟಿಕೆಗಳ ಮುಖಾಂತರ ಪ್ರವೇಶಿಸಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

Read More

ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಮೊಹಮ್ಮದ್ ಅಬ್ದುಲ್ ಅರಾಫತ್ ಅವರ ಮೃತದೇಹ ಅಮೆರಿಕದ ಕ್ಲೀವ್‌ಲ್ಯಾಂಡ್ ನಗರದಲ್ಲಿ ಪತ್ತೆಯಾಗಿದೆ. ಹೈದರಾಬಾದ್‌ನ ನಾಚರಾಮ್ ಮೂಲದ 25 ವರ್ಷದ ಮೊಹಮ್ಮದ್ ಅಬ್ದುಲ್ ಅರಾಫತ್ ಕಳೆದ ವರ್ಷ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಅವರು ಕ್ಲೀವ್‌ಲ್ಯಾಂಡ್ ಯುನಿವರ್ಸಿಟಿಯಲ್ಲಿ ಐಟಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದರು. ಭಾರತೀಯ ವಿದ್ಯಾರ್ಥಿಯ ಹುಡುಕಾಟದ ವೇಳೆ ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ಮೃತದೇಹ ಪತ್ತೆಯಾಗಿದೆ. ಇದು ನಿಜಕ್ಕೂ ದುಃಖಕರ ವಾರ್ತೆ ಎಂದು ನ್ಯೂಯಾರ್ಕ್‌ನ ಭಾರತದ ಕಾನ್ಸುಲೇಟ್ ಜನರಲ್ ತಿಳಿಸಿದ್ದಾರೆ. ಅರಾಫತ್ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಅವರು ಸಾವಿನ ಬಗ್ಗೆ ನಿಖರ ತನಿಖೆಗಾಗಿ ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ. ಅಂತ್ಯಕ್ರಿಯೆಗಾಗಿ ಪಾರ್ಥಿವ ಶರೀರವನ್ನು ಭಾರತಕ್ಕೆ ರವಾನಿಸಲು ಬೇಕಾದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Read More