ಕ್ಯಾಲಿಫೋರ್ನಿಯಾ: ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದೆ ಭೀಕರ ಕಾಡ್ಗಿಚ್ಚಿನಿಂದ ಜನ ಕಂಗಲಾಗಿದ್ದಾರೆ. ಪರಿಣಾಮ ಭಾರೀ ಅಲ್ಲೋಲ ಕಲ್ಲೋಲ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಬರೋಬ್ಬರಿ 30000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ. ದಕ್ಷಿಣ ಕ್ಯಾಲಿಫೋರ್ನಿಯಾಗೆ ಅಪ್ಪಳಿಸಿದ ಭೀಕರ ಗಾಳಿಯಿಂದಾಗಿ ಬೆಂಕಿ ಎಲ್ಲೆಂದರಲ್ಲಿ ಹರಡಿಕೊಂಡಿದೆ. ಆರಂಭದಲ್ಲಿ 20 ಎಕರೆ ಪ್ರದೇಶದಲ್ಲಿ ಕಾಣಿಸಿಕೊಂಡಿ ಬೆಂಕಿ ಕೆಲವೇ ಗಂಟೆಗಳಲ್ಲಿ 1,200 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಇದರಿಂದಾಗಿ 13,000 ಕ್ಕೂ ಹೆಚ್ಚು ಕಟ್ಟಡಗಳು ಮತ್ತು 10,000 ಮನೆಗಳು ಅಪಾಯಕ್ಕೆ ಗುರಿಯಾಗಿದೆ. 250ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಹೆಲಿಕಾಪ್ಟರ್‌ಗಳು, ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ಬೆಂಕಿ ನಂದಿಸಲು ನಿಯೋಜಿಸಲಾಗಿದ್ದು, 30000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಾಸ್ ಏಂಜಲೀಸ್ ಅಗ್ನಿಶಾಮಕ ಮುಖ್ಯಸ್ಥ ಕ್ರಿಸ್ಟಿನ್ ಕ್ರೌಲಿ ಅವರು 30,000 ಕ್ಕೂ ಹೆಚ್ಚು ಜನರು ಈಗಾಗ್ಲೇ ಸ್ಥಳಾಂತರಿಸಲಾಗಿದೆ. 13,000 ಕ್ಕೂ ಹೆಚ್ಚು ಕಟ್ಟಡಗಳು ಮತ್ತು 10,000 ಮನೆಗಳು ಅಪಾಯದಲ್ಲಿದೆ. ಆದರೆ ಇಲ್ಲಿಯವರೆಗೆ ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದಿದ್ದಾರೆ.…
Author: Author AIN
ಇಂದು ರಾಕಿಂಗ್ ಸ್ಟಾರ್ ಯಶ್ ಗೆ ಹುಟ್ಟುಹಬ್ಬದ ಸಂಭ್ರಮ. 39ನೇ ವರ್ಷಕ್ಕೆ ಕಾಲಿಡುತ್ತಿರುವ ಯಶ್ ಗೆ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದವರು ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ. ಯಶ್ ಬರ್ತಡೇ ಪ್ರಯುಕ್ತ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಗ್ಲಿಮ್ಸ್ ಬಿಡುಗಡೆ ಮಾಡಲಾಗಿದೆ. ಸದ್ಯ ಬಿಡುಗಡೆ ಆಗಿರುವ ಗಿಮ್ಸ್ ಚಿತ್ರದ ಮೇಲಿರುವ ನಿರೀಕ್ಷೆ ದುಪ್ಪಟ್ಟಾಗುವಂತೆ ಮಾಡಿದೆ. ಇಂದು (ಜನವರಿ 8) ಯಶ್ ಜನ್ಮದಿನ. ಈ ಪ್ರಯುಕ್ತ ಚಿತ್ರದ ಬಗ್ಗೆ ಅಪ್ಡೇಟ್ ಕೊಡೋದಾಗಿ ತಂಡದವರು ಮೊದಲೇ ಹೇಳಿದ್ದರು. ಅದರಂತೆಯೇ ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದ್ದು ಸಾಕಷ್ಟು ಗಮನ ಸೆಳೆಯುತ್ತಿದೆ. ಯಶ್ ಅವರು ರೆಟ್ರೋ ಕಾರಲ್ಲಿ ಸ್ಟೈಲಿಶ್ ಆಗಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಒಳಗೆ ಬರುತ್ತಿರುವಾಗ ಅಲ್ಲಿ ಎಲ್ಲರೂ ಮೋಜಿನಲ್ಲಿ ತೇಲುತ್ತಾ ಇರುತ್ತಾರೆ. ಆಗ ಯಶ್ ಅವರು ಡ್ರಿಂಕ್ಸ್ ಬಾಟಲಿ ತೆಗೆದುಕೊಂಡು ಅಲ್ಲಿದ್ದ ಮಹಿಳೆಯ ಮೇಲೆ ಸುರಿಯುತ್ತಿರುವ ವಿಡಿಯೋ ರಿಲೀಸ್ ಮಾಡಲಾಗಿದೆ. ‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದು,…
ಉಡುಪಿ: ಆರು ಮಂದಿ ನಕ್ಸಲರ ಶರಣಾಗತಿ ಆಗಲು ಕಾಡಿನಿಂದ ಹೊರಬಂದಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ನಕ್ಸಲರು ಆಗಮಿಸಿದ್ದಾರೆ. ಸಮಾಜದ ಮುಖ್ಯವಾಹಿನಿ ಹೆಸರಲ್ಲಿ ಶರಣಾಗತಿ ಆಗುತ್ತಿದ್ದು, ಜಿಲ್ಲಾಧಿಕಾರಿ ಕಚೇರಿಯತ್ತ ಅವರನ್ನು ಕರೆದುಕೊಂಡು ಬರುವ ಕೆಲಸ ಆಗುತ್ತಿದೆ. ಇನ್ನೂ ಕೆಲ ತಿಂಗಳ ಮೊದಲು ಪೊಲೀಸರ ಜೊತೆ ನಡೆದ ಎನ್ಕೌಂಟರ್ ನಲ್ಲಿ ಬಲಿಯಾದ ನಕ್ಸಲ್ ನಾಯಕ ವಿಕ್ರಂಗೌಡನ ಸಹೋದರಿ ಸುಗುಣ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದೆ ಇದ್ದರೆ ನಮ್ಮ ದಿನ ಸಾಗೋದಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು. https://ainlivenews.com/applications-are-invited-for-the-post-at-canara-bank-job-in-bangalore-apply-today/ ಸರೆಂಡರ್ ಆಗುವ ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ. ಎನ್ಕೌಂಟರ್ ಆಗಿದೆ, ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡುವ ಪರಿಹರ ನಮಗೆ ಕೊಟ್ಟರೆ ಸಾಕು. ನಾವು ಕಷ್ಟದಲ್ಲಿದ್ದೇವೆ ಎಂದು ಸುಗುಣ ಹೇಳಿದರು.
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯನ್ನಾಗಿ ವಿ ನಾರಾಯಣನ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಎಸ್ ಸೋಮನಾಥ್ ಅವರ ಅಧಿಕಾರಾವಧಿ ಮುಗಿದ ಬಳಿಕ ವಿ ನಾರಾಯಣನ್ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸದ್ಯ ವಿ ನಾರಾಯಣನ್ ಅವರು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯ ಆದೇಶದ ಪ್ರಕಾರ, ಪ್ರಸ್ತುತ ಇಸ್ರೋ ಮುಖ್ಯಸ್ಥರಾಗಿರುವ ಎಸ್ ಸೋಮನಾಥ್ ಅವರಿಂದ ವಿ ನಾರಾಯಣನ್ ಅವರು ಜನವರಿ 14 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕ್ಯಾಬಿನೆಟ್ ನೇಮಕಾತಿ ಸಮಿತಿಯು ಜನವರಿ 7, 2025 ರಂದು ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, ವಿ ನಾರಾಯಣನ್ ಅವರು ಎರಡು ವರ್ಷಗಳ ಅವಧಿಗೆ ಇಸ್ರೋ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಹುಬ್ಬಳ್ಳಿ ಸಂಸತ್ ಅವೇಶನದಲ್ಲಿ ಸಂವಿಧಾನದ ಕುರಿತು ನಡೆದ ಚರ್ಚೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಡೆ ಖಂಡಿಸಿ ಹಾಗೂ ಅವರ ವಜಾಕ್ಕೆ ಆಗ್ರಹಿಸಿ ಜನವರಿ 9 ರಂದು ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೆ ಹುಬ್ಬಳ್ಳಿ – ಧಾರವಾಡ ಬಂದ್‌ಗೆ ಕರೆ ನೀಡಲಾಗಿದ್ದು ನಾಳಿನ ಬಂದ್ ವೇಳೆ ಏನು ಇರಲ್ಲ ಏನು ಇರಲ್ಲ ಇಲ್ಲಿದೆ ಮಾಹಿತಿ. https://ainlivenews.com/applications-are-invited-for-the-post-at-canara-bank-job-in-bangalore-apply-today/ ವಿವಿಧ ಸಂಘಟನೆಯ ಕಾರ್ಯಕರ್ತರು ಆಯಾ ಕಾಲೋನಿ ಹಾಗೂ ಬಡಾವಣೆಗಳಿಂದ ಮೆರವಣಿಗೆ ಮೂಲಕ ಹುಬ್ಬಳ್ಳಿಯ ಚನ್ನಮ್ಮ ವೃತ್ತಕ್ಕೆ ಹಾಗೂ ಧಾರವಾಡ ಜುಬ್ಲಿ ವೃತ್ತಕ್ಕೆ ಆಗಮಿಸಿ ಸಮಾವೇಶಗೊಳ್ಳಲಿವೆ. ಸಾರ್ವಜನಿಕರು ಮತ್ತು ರೋಗಿಗಳ ಹಿತದೃಷ್ಟಿಯಿಂದ ಆಸ್ಪತ್ರೆಗಳು, ಔಷಧ ಮಳಿಗೆಗಳು, ಆಂಬ್ಯುಲೆನ್ಸ್‌ಗಳು ಮತ್ತು ಹಾಲಿನ ವಾಹನಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಆದರೆ ಇತರೆ ಯಾವುದೇ ವಾಹನ ಸಂಚಾರ ಮತ್ತು ವಾಣಿಜ್ಯ ವ್ಯವಹಾರಗಳು, ಹೋಟೆಲ್, ಸಿನಿಮಾ, ಆಟೋ, ಶಾಲಾ -ಕಾಲೇಜು, ಸರಕಾರಿ ಮತ್ತು ಖಾಸಗಿ ಕಚೇರಿಗಳು…
ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರನ್ನು ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಇತ್ತೀಚೆಗೆ ಮದಗಜರಾಜ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶಾಲ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದ ಗುರುತು ಸಿಗದಂತೆ ವಿಶಾಲ್ ಬದಲಾಗಿದ್ದರು. ವೇದಿಕೆಯಲ್ಲೂ ನಡುಗುತ್ತಲೇ ಮಾತನಾಡಿದ ವಿಶಾಲ್ ಕಂಡ ಫ್ಯಾನ್ಸ್ ಕಂಗಾಲಾಗಿದ್ದರು. ಮೂಲಗಳ ಪ್ರಕಾರ ವಿಶಾಲ್ ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದಾರಂತೆ. ಮದಗಜರಾಜ ಸಿನಿಮಾ ಕಾರ್ಯಕ್ರಮ ಮುಗಿದ ತಕ್ಷಣ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಬೆನ್ನಲ್ಲೇ ಅಪೋಲೋ ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ವಿಶಾಲ್ ವೈರಲ್ ಜ್ವರದಿಂದ ಬಳಲುತ್ತಿದ್ದು, ಅವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ. ಸಂಪೂರ್ಣ ಬೆಡ್ ರೆಸ್ಟ್ ತೆಗೆದುಕೊಳ್ಳುವ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ವಿಶಾಲ್ರ ಇತ್ತೀಚಿನ ವೀಡಿಯೊಗಳು ಮತ್ತು ಫೋಟೋಗಳು ಟ್ರೆಂಡಿಂಗ್ ಆಗಿವೆ. ಇದನ್ನು ನೋಡಿದವರೆಲ್ಲರೂ ವಿಶಾಲ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. 12 ವರ್ಷಗಳ ಹಿಂದೆ ಚಿತ್ರೀಕರಣ ಮುಗಿಸಿದ್ದ ವಿಶಾಲ್ ಅಭಿನಯದ ಮದಗಜರಾಜ ಚಿತ್ರ ಇದೀಗ ಸಂಕ್ರಾಂತಿ ಸಂದರ್ಭದಲ್ಲಿ ಅಂದರೆ…
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ವಿವಿಧ ಕಾರ್ಮಿಕ ಸಂಘಟನೆಗಳ ಅಧ್ಯಕ್ಷ ಹಾಗೂ ಪ್ರಾಧಿಕಾರಗಳ ಸಭೆಯನ್ನ ನಗರದ ಹಳಹುಬ್ಬಳ್ಳಿಯ ದಿ ಎ ಜೆ ಮುಧೋಳ ಭವನದಲ್ಲಿ ಜರುಗಿತು, ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರುಗಳು ಸಂವಿಧಾನ ಶಿಲ್ಪಿ ಡಾ!! ಬಿ ಆರ್ ಅಂಬೇಡ್ಕರ ಸ್ವಾಭಿಮಾನಿ ಅಭಿಮಾನಿ ಅನುಯಾಯಿಗಳ ಬಳಗದ ಪ ಜಾ ಪ ಪಂ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಐಕ್ಯತ ವೇದಿಕೆ ಆಶ್ರಯದಲ್ಲಿ ನಡೆಯುತ್ತಿರುವ ದಿ 9 ರಂದು ಹುಬ್ಬಳ್ಳಿ ಧಾರವಾಡ ಬಂದಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವ ಮೂಲಕ ಅಂದ ನಡೆಯುವ ಹೋರಾಟದಲ್ಲಿ ನೂರಾರು ಸಂಖ್ಯೆಯಲ್ಲಿ ಸದಸ್ಯರುಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ಕರೆ ನೀಡಿದರು , https://ainlivenews.com/applications-are-invited-for-the-post-at-canara-bank-job-in-bangalore-apply-today/ ಅಲ್ಲದೆ ಕಳೆದ ಸಂಸತ್ತಿನ ಅಧಿವೇಶನದಲ್ಲಿ ಡಾ!! ಬಿ ಆರ್ ಅಂಬೇಡ್ಕರ್ ರವರ ಕುರಿತು ಹೇಳಿಕೆ ನೀಡಿದ ಕೇಂದ್ರದ ಗ್ರಹ ಸಚಿವರಾದ ಅಮಿತ್ ಶಾ ರವರ ನಡೆ ಧಿಕ್ಕರಿಸಿ ಅವರನ್ನು ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಹುಬ್ಬಳ್ಳಿ ಧಾರವಾಡ ಬಂಧನ್ನು ಯಶಸ್ವಿಗೊಳಿಸುವಂತೆ ವಿವಿಧ ಸಂಘಟನೆಗಳ ಅಧ್ಯಕ್ಷ ಪದಾಧಿಕಾರಿಗಳು ಹೇಳಿದರು ,…
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಾಳೆ ಬಂದ್ ಹಿನ್ನೆಲೆಯಲ್ಲಿ ಅವಳಿ ನಗರ ಬೆಂಬಲಿಸಿ ಕಾಂಗ್ರೆಸ್ ಸಭೆ ನಡೆಸಿದ್ದು, ದಲಿತ ಸಂಘಟನೆಗಳ ಬಂದ್ ಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮಹಾನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ ನೇತೃತ್ವದಲ್ಲಿ ಸಭೆ ನಡೆಸಿದ್ದು, ನಾಳೆಯ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಲು ತೀರ್ಮಾನ ಕೈಗೊಂಡಿದ್ದಾರೆ. ಸಭೆ ನಂತರ ಅಧ್ಯಕ್ಷ ಅಲ್ತಾಫ್ ಹಳ್ಳೂರ ಹೇಳಿಕೆ ನೀಡಿದ್ದು, ನಾಳೆ ನೂರಕ್ಕೂ ಹೆಚ್ಚಿನ ದಲಿತ ಸಂಘಟನೆಗಳು ಅಮಿತ್ ಶಾ ಹೇಳಿಕೆಗೆ ಬಂದ್ ಕರೆ ಕೊಟ್ಟಿದ್ದಾರೆ. ಬಂದ್ ಯಶಸ್ವಿಗಾಗಿ ನಮ್ಮ ಮುಖಂಡರು, ಪದಾಧಿಕಾರಿಗಳು ಸಭೆ ಮಾಡಿದ್ದೇವೆ. ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಕೊಟ್ಟು ದಲಿತರಿಗೆ, ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಅದಕ್ಕೆ ನಾವು ಬೆಂಬಲ ನೀಡಿ ಯಶಸ್ವಿ ಮಾಡ್ತೇವೆ ಎಂದು ಕರೆ ನೀಡಿದ್ದಾರೆ. https://ainlivenews.com/applications-are-invited-for-the-post-at-canara-bank-job-in-bangalore-apply-today/ ದಲಿತರಿಗೆ ಬೆಂಬಲ ನೀಡೋದು ನಮ್ಮ ಕರ್ತವ್ಯ. ದಲಿತ ಮುಖಂಡರು ಬಂದು ಬೆಂಬಲ ಕೇಳಿದ್ರು ನಾವು ಕೊಡ್ತಾ ಇದ್ದೇವೆ. ಬಂದ್ ಗೆ ಸ್ಥಳೀಯ ನಾಯಕರು, ಶಾಸಕರು…
ರಾಕಿಂಗ್ ಸ್ಟಾರ್ ಯಶ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಯಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಗ್ಲಿಮ್ಸ್ ಬಿಡುಗಡೆ ಮಾಡಲಾಗಿದೆ. ಯಶ್ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಪೋಸ್ಟರ್ ರಿಲೀಸ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅಂತೆಯೇ ಇಂದು (ಜನವರಿ 8) ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದ್ದು ಈ ಗ್ಲಿಮ್ಸ್ ಟಾಕ್ಸಿಕ್ ಸಿನಿಮಾದ ಮೇಲಿರುವ ನಿರೀಕ್ಷೆ ದುಪ್ಪಟ್ಟಾಗುವಂತೆ ಮಾಡಿದೆ. ಯಶ್ ಅವರು ರೆಟ್ರೋ ಕಾರಲ್ಲಿ ಸ್ಟೈಲಿಶ್ ಆಗಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಒಳಗೆ ಬರುತ್ತಿರುವಾಗ ಅಲ್ಲಿ ಎಲ್ಲರೂ ಮೋಜಿನಲ್ಲಿ ತೇಲುತ್ತಾ ಇರುತ್ತಾರೆ. ಆಗ ಯಶ್ ಅವರು ಹೆಂಡದ ಬಾಟಲಿ ತೆಗೆದುಕೊಂಡು ಅಲ್ಲಿದ್ದ ಮಹಿಳೆಯ ಮೇಲೆ ಸುರಿಯುತ್ತಾರೆ. ಮೇಕಿಂಗ್ ನೋಡಿದರೆ ಇದು ರೆಟ್ರೋ ಕಥೆಯ ರೀತಿ ಕಾಣುತ್ತದೆ. ಸದ್ಯ ರಿಲೀಸ್ ಆಗಿರೋದು ಒಂದು ಗ್ಲಿಂಪ್ಸ್ ಮಾತ್ರ. ಯಶ್ ಜನ್ಮದಿನದ ಪ್ರಯುಕ್ತ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಸಂಪುಟದ ಕೆಲ ಸಹೋದ್ಯೋಗಿ ಮತ್ತು ನಗರದ ಟಾಪ್ ಪೊಲೀಸ್ ಅಧಿಕಾರಿಗಳೊಂದಿಗೆ ಚಾಮರಾಜಪೇಟೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪೊಲೀಸ್ ಠಾಣೆಯನ್ನು ಉದ್ಘಾಟಿಸಿದರು. ನೂತನ ಕಟ್ಟಡದ ರಿಬ್ಬನ್ ಕಟ್ ಮಾಡಿದರು. https://ainlivenews.com/applications-are-invited-for-the-post-at-canara-bank-job-in-bangalore-apply-today/ ನಂತರ ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು.