ಕನ್ನಡದ ಪ್ರತಿಭಾವಂತ ನಟ ಡಾಲಿ ಧನಂಜಯ ನಟನೆಯ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕನ್ನಡ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಪರಮ್ ನಿರ್ದೇಶನದಲ್ಲಿ ಡಾಲಿ ನಟಿಸುತ್ತಿದ್ದು ಚಿತ್ರಕ್ಕೆ ಕೋಟಿ ಎಂದು ಹೆಸರಿಡಲಾಗಿದೆ. ಕಿರುತೆರೆಯಲ್ಲಿ ಹತ್ತು ಹಲವು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದವರು ಪರಮ್ ಇದೀಗ ಮೊದಲ ಬಾರಿ ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದಾರೆ. ಯುಗಾದಿ ಹಬ್ಬದ ದಿನವಾದ ಇಂದು ಕೋಟಿ ಚಿತ್ರದ ಟೈಟಲ್ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ. ಕೋಟಿ ಕನಸು ಕಾಣುವ ಒಬ್ಬ ಕಾಮನ್ ಮ್ಯಾನ್ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿದೆ. ದುಡ್ಡಿಗಾಗಿ ಒದ್ದಾಡುವ ಒಬ್ಬ ಸಾಮಾನ್ಯ ಮನುಷ್ಯನ ಭಾವನೆಗಳನ್ನು ಈ ಸಿನಿಮಾ ಹೇಳಬಹುದು ಎಂಬ ಸೂಚನೆಯನ್ನು ಧನಂಜಯ ಆಗಲೇ ಕೊಟ್ಟಿದ್ದಾರೆ. ಹೊಯ್ಸಳ ನಂತರ ಬರುತ್ತಿರುವ ಅವರ ಮೊದಲ ಕನ್ನಡ ಚಿತ್ರ ಇದು. ಅಲ್ಲಿಗೆ ಡಾಲಿ ಧನಂಜಯ ಅವರ ಚಿತ್ರ ವರ್ಷದ ಅಂತರದ…
Author: Author AIN
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದೆ. ಕನ್ನಡದಲ್ಲಿ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಹುಟ್ಟುಹಬ್ಬದಂದು ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟೀಸರ್‌ಗೆ ಅಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಮಧ್ಯೆ ಟೀಸರ್ ನೋಡಿದ ನಟಿ ಆಲಿಯಾ ಭಟ್ ಅಲ್ಲು ಅರ್ಜುನ್ ಅವರನ್ನು ಹೊಗಳಿದ್ದಾರೆ. ‘ಪುಷ್ಪ 2’ ಟೀಸರ್‌ನಲ್ಲಿ ಅಲ್ಲು ಅರ್ಜುನ್ ಕ್ಲಾಸ್ ಹಾಗೂ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪುಷ್ ಟೀಸರ್ ನೋಡಿದ ಆಲಿಯಾ ಭಟ್ ಅಲ್ಲು ಅರ್ಜುನ್‌ಗೆ ವಿಶೇಷವಾಗಿ ಶುಭಕೋರಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಅಲ್ಲು ಅರ್ಜುನ್. ವಾಟ್ ಎ ಔಟ್‌ಸ್ಟ್ಯಾಂಡಿಂಗ್ ಟೀಸರ್ ಎಂದು ಹಾಡಿಹೊಗಳಿದ್ದಾರೆ. ಟೀಸರ್ ಅದ್ಭುತವಾಗಿದೆ ಎಂದು ನಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಲಿಯಾ ಮೆಚ್ಚುಗೆಗೆ ಅಲ್ಲು ಅರ್ಜುನ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತುಂಬಾ ಧನ್ಯವಾದಗಳು. ಟೀಸರ್ ಬೆಂಕಿಯಂತೆ ಬಂದಿದೆ ಎಂದು ವ್ಯಕ್ತಪಡಿಸಿದಕ್ಕೆ ಖುಷಿಯಾಯಿತು ಎಂದು ಪ್ರತಿಕ್ರಿಯಿಸಿದ್ದಾರೆ. ಪುಷ್ಪ 2’ ಸಿನಿಮಾದ ಟೀಸರ್ ನಲ್ಲಿ ಅಲ್ಲು ಅರ್ಜುನ್ ಅವರನ್ನು ಹೊಸ ರೀತಿಯಲ್ಲಿ ತೋರಿಸಲಾಗಿದೆ. ಅಲ್ಲು ಅರ್ಜುನ್ ಅವರು ಮಹಿಳೆಯ ಗೆಟಪ್‌ನಲ್ಲಿ ಸೀರೆ ಧರಿಸಿ,…
ಬಾಲಿವುಡ್ ನಟಿ ಕಂಗನಾ ರಣಾವತ್ ಹೊಸ ಕಾರು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ನಟಿ ದುಬಾರಿ ಕಾರು ಖರೀದಿಸಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಅವರು ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಂಗನಾ ರಣಾವತ್ ಇದೀಗ ಮರ್ಸಿಡಿಸ್ ಮೆಬ್ಯಾಕ್ ಜಿಎಲ್ಎಸ್ ಕಾರು ಪರ್ಚೇಸ್ ಮಾಡಿದ್ದಾರೆ. ಇದರ ಬೆಲೆ ಬರೋಬ್ಬರಿ 2.46 ಕೋಟಿ ರೂಪಾಯಿಯಾಗಿದ್ದು ಹೊಸ ಕಾರಿನ ಕಾರಣಕ್ಕೆ ಕಂಗನಾ ಗಮನ ಸೆಳೆಯುತ್ತಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಕಂಗನಾ ರಣಾವತ್ ಅವರು ಆ್ಯಕ್ಟೀವ್ ಆಗಿದ್ದಾರೆ. ಮೊದಲಿನಿಂದಲೂ ಬಿಜೆಪಿ ಪರವಾದ ನಿಲುವು ಹೊಂದಿರುವ ನಟಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೊಗಳುತ್ತಾ ಬಂದಿದ್ದರು. ಈಗ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ನೀಡಿದ್ದಾರೆ. ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಂತೆಯೇ ಐಷಾರಾಮಿ ಕಾರು ಖರೀದಿ ಮಾಡಿರುವುದು ಅಚ್ಚರಿ ಮೂಡಿಸಿದೆ. ಈ ಮೊದಲು ಕೂಡ ಕಂಗನಾ ರಣಾವತ್ ಅವರ ಬಳಿ ಐಷಾರಾಮಿ ಕಾರು ಇತ್ತು. ಅವರು ಈ ಹಿಂದೆ ಖರೀದಿಸಿದ್ದ ಮರ್ಸಿಡಿಸ್ ಮೆಬ್ಯಾಕ್…
ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಸದಸ್ಯರ ಕಿತ್ತಾಟ ಇದೀಗ ಬೀದಿಗೆ ಬಂದಿದೆ. ಈ ಬಗ್ಗೆ ಸಂಘದ ಅಧ್ಯಕ್ಷೆ ಪದ್ಮಿನಿ ನಂದಾ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈತ್ತ ಪದ್ಮಿನಿ ನಂದಾ ಹಿರಿಯ ಕಲಾವಿದ ಡಿಂಗ್ರಿ ನಾಗರಾಜ್ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ‘ಸಂಘದ ಚುನಾವಣೆ ನಡೆದು ಒಂದು ವರ್ಷದ ಮೇಲೆ ಒಂದು ತಿಂಗಳು ಆಗಿದೆ. ನಾನು ಗೆದ್ದ ಮೇಲೆ ಡಿಂಗ್ರಿ ನಾಗರಾಜ್, ಆಡುಗೋಡಿ ಶ್ರೀನಿವಾಸ್ ಹಾಗೂ ದಾವಣಗೆರೆ ಸುರೇಶ್ ಅವರು ನನಗೆ ಲೆಕ್ಕಾಚಾರ ನೀಡಬೇಕಿತ್ತು. ಆದರೆ ಅವರು ಲೆಕ್ಕಾಚಾರ ಕೊಟ್ಟಿಲ್ಲ. ಲೆಕ್ಕಾಚಾರ ಕೇಳಿದ್ದಕ್ಕಾಗಿ ಅಂದಿನಿಂದ ಇಂದಿನ ತನಕ ನಮ್ಮ ಮೇಲೆ ಹಗೆ ಸಾಧಿಸಿದ್ದಾರೆ. ನಮಗೆ ಅಧಿಕಾರ ಮಾಡಲು ಬಿಡದೇ ತೊಂದರೆ ಕೊಡುತ್ತಿದ್ದಾರೆ’ ಎಂದು ಪದ್ಮಿನಿ ನಂದಾ ಆರೋಪಿಸಿದ್ದಾರೆ. ‘ಉಮೇಶ್ ಬಣಕಾರ್ ಅವರು ನನಗೆ ಆಫೀಸ್ಗೆ ಜಾಗ ನೀಡಿದ್ದರು. 8 ವರ್ಷಗಳಿಂದ ಉಚಿತವಾಗಿ ಕೊಟ್ಟಿದ್ದರು. ಖಾಲಿ ಮಾಡಬೇಕಾದ ಸಂದರ್ಭದಲ್ಲಿ ಕೆಲವರು ಸಾಮಾಗ್ರಿಗಳನ್ನು ಖಾಲಿ ಮಾಡಲು ಬಿಡಲಿಲ್ಲ. ಹೆಣ್ಣಿನ ಮುಂದೆ ಸೋತ…
ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ನಟಿ ರಾಧಿಕಾ ಪಂಡಿತ್ ಸಿನಿಮಾಗಳಿಂದ ದೂರವಿದ್ದಾರೆ. ಆದರೂ ನಟಿ ಅಪಾರ ಅಭಿಮಾನಿಗಳನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಸಾಮಾಜಿಕ ಜಾಲಾ ತಾಣದಲ್ಲಿ ಆಗಾಗ ಫೋಟೋಗಳನ್ನು ಹಂಚಿಕೊಳ್ಳುವ ನಟಿ ಇದೀಗ ಸೀರೆಯುಟ್ಟು ಫೋಟೋ ತೆಗೆಸಿಕೊಂಡಿದ್ದು ಆ ಫೋಟೋಗಳನ್ನ ಶೇರ್ ಮಾಡಿದ್ದಾರೆ. ಲೈಟ್ ಕಲರ್ ಸೀರೆಯಲ್ಲಿ ರಾಧಿಕಾ ಸಾಕಷ್ಟು ಮುದ್ದಾಗಿ ಕಾಣಿಸಿಕೊಳ್ತಿದ್ದು ನಟಿಯ ಸೌಂದರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ರಾಂಕಿಂಗ್ ಸ್ಟಾರ್ ಯಶ್ ಪತ್ನಿ ಹಾಗೂ ನಟಿ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಲೇಟೆಸ್ಟ್ ಫೋಟೋವನ್ನು ಶೇರ್ ಮಾಡಿದ್ದಾರೆ. ರೇಷ್ಮೆ ಸೀರೆಯುಟ್ಟ ನಟಿ ರಾಧಿಕಾ ಪಂಡಿತ್, ಹೆವಿ ಜ್ಯುವೆಲ್ಲರಿ ಧರಿಸಿದ್ದು, ಚೆಂದದ ನಗುವಿನೊಂದಿಗೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ರಾಧಿಕಾ ಪಂಡಿತ್ ಫೋಟೋಗಳನ್ನು ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಲೈಕ್ಗಳ ಸುರಿಮಳೆಯಾಗಿದೆ. ಚೆಂದನವನದ ಚೆಲುವೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಸದ್ಯಕ್ಕೆ ಸಿನಿಮಾಗಳಿಂದ ದೂರ ಉಳಿದ ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್, ಫ್ಯಾಮಿಲಿ ಜೊತೆ ಹೆಚ್ಚಾಗಿ…
ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಗೋಮಾಂಸ ತಿನ್ನುತ್ತಾರೆ. ಅದನ್ನು ಅವರೇ ಹೇಳಿಕೊಂಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಆರೋಪಕ್ಕೆ ನಟಿ ಕಂಗನಾ ತಿರುಗೇಟು ನೀಡಿದ್ದಾರೆ. ನಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಮಾಂಸವನ್ನು ಸೇವಿಸುವುದಿಲ್ಲ. ನನ್ನ ಬಗ್ಗೆ ಸಂಪೂರ್ಣವಾಗಿ ಆಧಾರ ರಹಿತ ವದಂತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾನು ಯೋಗ ಮತ್ತು ಆಯುರ್ವೇದವನ್ನು ಪ್ರತಿಪಾದಿಸುತ್ತಿದ್ದೇನೆ ಮತ್ತು ಪ್ರಚಾರ ಮಾಡುತ್ತಿದ್ದೇನೆ ಎಂದಿದ್ದಾರೆ. ವಿರೋಧಿಗಳ ಬಗ್ಗೆಯೂ ಕಟುವಾಗಿಯೇ ಮಾತನಾಡಿರುವ ಕಂಗನಾ, ಇಂತಹ ತಂತ್ರಗಳು ನನ್ನ ಇಮೇಜ್ ಹಾಳುಮಾಡಲು ಕೆಲಸ ಮಾಡುವುದಿಲ್ಲ. ನನ್ನ ಜನರು ನನ್ನ ಬಗ್ಗೆ ತಿಳಿದಿದ್ದಾರೆ ಮತ್ತು ನಾನು ಹೆಮ್ಮೆಯ ಹಿಂದೂ ಎಂದು ಅವರಿಗೆ ತಿಳಿದಿದೆ. ಯಾವುದೇ ಪ್ರಯತ್ನ ಅವರನ್ನು ದಾರಿ ತಪ್ಪಿಸುವುದಿಲ್ಲ ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಬರಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಪ್ಲಿಕೇಶನ್ ಮೂಲಕ ಆಂಡ್ರಾಯ್ಡ್ ಮೊಬೈಲ್ ಫೋನ್ ನಲ್ಲಿಯೂ ನಾವು ಇದನ್ನು ನೋಡಬಹುದು. ಆದ್ದರಿಂದ ನಮ್ಮ ಹೆಸರು ಇದೆಯೇ ಅಥವಾ ಇಲ್ಲವೇ ಎಂದು ಕೂತಲ್ಲೇ ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ತಿಳಿದುಕೊಳ್ಳಬಹುದಾಗಿದೆ. ನೀವು ನೋಂದಾಯಿಸಿದ ಮೊಬೈಲ್ ಫೋನ್ ನಿಂದ ಎಸ್‌ಎಂಎಸ್ ರೂಪದಲ್ಲಿ ಎಪಿಕ್ ಐಡಿ ಸಂಖ್ಯೆಯನ್ನು ನಮೂದಿಸಿ. 1950 ಗೆ ಸಂದೇಶ ಕಳುಹಿಸಿ. ಸ್ವಲ್ಪ ಸಮಯದ ನಂತರ, ನೀವು ಸಂದೇಶವನ್ನು ಪಡೆಯುತ್ತೀರಿ. ನೀವು ಅದನ್ನು ತೆರೆದರೆ, ನಿಮ್ಮ ಮತಗಟ್ಟೆ ಸಂಖ್ಯೆ, ಹೆಸರು ಮತ್ತು ವಿಳಾಸದ ವಿವರಗಳು ನಿಮಗೆ ಸಿಗುತ್ತವೆ. ನೀವು ಟೋಲ್ ಫ್ರೀ ಸಂಖ್ಯೆ 1950 ಗೆ ಕರೆ ಮಾಡಬೇಕು. ನೀವು ಒಂದು ಧ್ವನಿಯನ್ನು ಕೇಳುತ್ತೀರಿ. ಭಾಷೆಯನ್ನು ಆಯ್ಕೆ ಮಾಡಲು ನಿಮಗೆ ಹೇಳುತ್ತದೆ. ಒಮ್ಮೆ ನೀವು ಭಾಷೆಯನ್ನು ಆಯ್ಕೆ ಮಾಡಿದ ನಂತರ, ನೀವು ವೋಟರ್ ಐಡಿ ಸ್ಟೇಟ್ ಆಯ್ಕೆಯನ್ನು ಆರಿಸಬೇಕಾಗುತ್ತದೆ. ನಂತರ ಎಪಿಕ್ ಸಂಖ್ಯೆಯನ್ನು ನಮೂದಿಸಿ.…
ಬಹುಭಾಷಾ ನಟ ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಇಂಡಿಯನ್-2 ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. 1996ರಲ್ಲಿ ತೆರೆಕಂಡ ‘ಇಂಡಿಯನ್’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಪಾತ್ರದಲ್ಲಿ ಕಮಲ್ ಹಾಸನ್ ಕಾಣಿಸಿಕೊಂಡಿದ್ದು ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಸಿದ್ದವಾಗಿದೆ. ಸಣ್ಣದೊಂದು ಝಲಕ್ ಮೂಲಕ ಭಾರೀ ನಿರೀಕ್ಷೆ ಹೆಚ್ಚಿಸಿರುವ ಇಂಡಿಯನ್ -2 ಸಿನಿಮಾ ಬಿಡುಗಡೆಗೆ ಅಭಿಮಾನಿಗಳು ಕಾಯ್ತಿದ್ದಾರೆ. ಇದೀಗ ಸಿನಿಮಾ ಕಂಪ್ಲೀಟ್ ಆಗಿದ್ದು ತೆರೆಗೆ ಬರಲು ಸಜ್ಜಾಗಿದೆ. ಜೂನ್ ತಿಂಗಳಲ್ಲಿ ಕಮಲ್ ಹಾಗೂ ಶಂಕರ್ ಜೋಡಿಯ ಚಿತ್ರ ತೆರೆಗೆ ಬರುತ್ತಿದೆ. ಆದರೆ ಯಾವ ದಿನ ಇಂಡಿಯನ್ ಸೀಕ್ವೆಲ್ ಬಿಡುಗಡೆಯಾಗಲಿದೆ ಅನ್ನೋದನ್ನು ಚಿತ್ರತಂಡ ರಿವೀಲ್ ಮಾಡಿಲ್ಲ. ಸದ್ಯ ಬಿಡುಗಡೆ ಆಗಿರುವ ಪೋಸ್ಟರ್ ನಲ್ಲಿ “ಸೇನಾಪತಿಯ ಪುನರಾಗಮನಕ್ಕೆ ಸಿದ್ಧರಾಗಿ! ಭಾರತೀಯ-2 ಇದೇ ಜೂನ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿರುಗಾಳಿ ಎಬ್ಬಿಸಲು ಸಿದ್ಧವಾಗಿದೆ. ಮಹಾಕಾವ್ಯಕ್ಕಾಗಿ ನಿಮ್ಮ ಕ್ಯಾಲೆಂಡರ್ ಅನ್ನು ಗುರುತು ಮಾಡಿಕೊಳ್ಳಿ ಎಂದು ಅಡಿ ಬರಹ ನೀಡಲಾಗಿದೆ. ಇಂಡಿಯನ್ 2 ಚಿತ್ರದಲ್ಲಿ ಕಮಲ್ ವೀರಶೇಖರನ್ ಸೇನಾಪತಿಯಾಗಿ ನಟಿಸಿದ್ದಾರೆ. ಫ್ರಾಂಚೈಸಿಯು…
ಬಿಜೆಪಿ ಸದಸ್ಯೆ, ಬಹುಭಾಷಾ ನಟಿ ಖುಷ್ಬು ಸುಂದರ್ ಈ ಭಾರಿಯ ಲೋಕಸಭಾ ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿದ್ದಾರೆ. ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿರುವ ನಟಿ ಖುಷ್ಬು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆರೋಗ್ಯದ ಮೇಲೆ ಗಮನಹರಿಸಬೇಕು. ಹೀಗಾಗಿ ನಾನು ಇಂದು ಅಂತಹ ಸಂದಿಗ್ಧದಲ್ಲಿದ್ದೇ ನೆ. ಆದರಿಂದ ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿದ್ದೇನೆ ಎಂದು ಹೇಳಿದ್ದಾರೆ. 2019 ರಲ್ಲಿ ದೆಹಲಿಯಲ್ಲಿ ಸಂಭವಿಸಿದ ಅಪಘಾತದಿಂದ ಮೂಳೆ ಮುರಿದಿದೆ. ಕಳೆದ 5 ವರ್ಷಗಳಿಂದ ಆರೋಗ್ಯದ ಕುರಿತು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಆದರೂ ಸಮಸ್ಯೆ ನನ್ನನ್ನು ಕಾಡುತ್ತಿದೆ. ಹೀಗಾಗಿ ವೈದ್ಯರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದಂತೆ ಸೂಚಿಸಿದ್ದಾರೆ ಎಂದು ಪತ್ರದಲ್ಲಿ ನಟಿ ಉಲ್ಲೇಖಿಸಿದ್ದಾರೆ. ಪ್ರಚಾರದ ಸಂದರ್ಭದಲ್ಲಿ ಹೆಚ್ಚು ಪ್ರಯಾಣ, ಕುಳಿತುಕೊಳ್ಳುವುದು ಅತ್ಯಗತ್ಯ. ಹೀಗಾಗಿ ಮತ್ತೆ ನನಗೆ ಸಮಸ್ಯೆ ಕಾಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಅಲ್ಪ ವಿರಾಮ ಘೋಷಿಸಿದ್ದೇನೆ ಎಂದು ಖುಷ್ಬು…