Author: Author AIN

ಇತ್ತೀಚಿನ ದಿನಗಳಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು ಮೊಬೈಲ್ ಬಳಸುತ್ತಿದ್ದಾರೆ. ನಿತ್ಯ ಸಾಕಷ್ಟು ಸಮಯ ಮೊಬೈಲ್ ನಲ್ಲಿಯೇ ಮುಳುಗಿರುತ್ತಾರೆ. ದೊಡ್ಡವರಿಗಿಂತ ಚೆನ್ನಾಗಿ ಮೊಬೈಲ್ ಬಳಸುವುದನ್ನು ಮಕ್ಕಳು ಕಲಿತಿರುತ್ತಾರೆ. ಅದನ್ನ ಫೋಷಕರು ಪ್ರೆಸ್ಟಿಜ್ ರೀತಿಯಲ್ಲಿ ಬಿಂಬಿಸುತ್ತಾರೆ. ಆದರೆ ಮುಂದೆ ಅದೇ ಅಭ್ಯಾಸ ದೊಡ್ಡ ತಲೆ ನೋವಾಗಿ ಪರಿಣಮಿಸುತ್ತದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ 5 ರಿಂದ 16 ವರ್ಷ ವಯಸ್ಸಿನ ಸುಮಾರು 60 ಪ್ರತಿಶತದಷ್ಟು ಮಕ್ಕಳು ಡಿಜಿಟಲ್ ವ್ಯಸನದ ಬಲಿಪಶುಗಳಾಗುವ ಎಲ್ಲಾ ಸಾಧ್ಯತೆಗಳಿವೆ. 1000 ಪೋಷಕರು ವರದಿ ಮಾಡಿದ ಮಕ್ಕಳ ವರ್ತನೆಯಿಂದ ಇದನ್ನು ಅಂದಾಜಿಸಲಾಗಿದೆ. ಮಕ್ಕಳು ಮೊಬೈಲ್ ನಲ್ಲೇ ಹೆಚ್ಚು ಸಮಯ ಕಳೆಯೋದ್ರಿಂದ ಕಳಪೆ ನಿದ್ರೆಯ ಗುಣಮಟ್ಟ, ಕಡಿಮೆ ದೈಹಿಕ ಚಟುವಟಿಕೆ, ಕಡಿಮೆ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯಕ್ಷಮತೆ ಸೇರಿದಂತೆ ವಿವಿಧ ಅಪಾಯಗಳನ್ನು ಮೊಬೈಲ್‌ನಂತಹ ಡಿಜಿಟಲ್‌ ಮಾಧ್ಯಮಗಳ ಸ್ಕ್ರೀನ್‌ ಸೃಷ್ಟಿಸುತ್ತಿದೆ. ಆರೋಗ್ಯ ತಜ್ಞರು ದಿನಕ್ಕೆ 2-3 ಗಂಟೆಗಳ ಕಾಲ ಮಾತ್ರ ಮೊಬೈಲ್ ಬಳಸಲು ಶಿಫಾರಸು ಮಾಡುತ್ತಾರೆ. ಏಕೆಂದರೆ ಸ್ಕ್ರೀನ್‌ ಸಣ್ಣದಿರುವುದರಿಂದ ಇದು ಕಣ್ಣುಗಳ ಮೇಲೆ…

Read More

ಸ್ಯಾಂಡಲ್​ವುಡ್​ ನಟಿ ಅದಿತಿ ಪ್ರಭುದೇವ ತಾಯಿ ಆಗ್ತಿರುವ ಖುಷಿಯಲ್ಲಿದ್ದಾರೆ. ಇದೇ ಖುಷಿಯಲ್ಲಿ ನಟಿ ಅದ್ದೂರಿಯಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. 2024ರ ಹೊಸ ವರ್ಷದ ದಿನದಂದು ತಾನು ತಾಯಿಯಾಗುತ್ತಿರುವ ಗುಡ್​ ನ್ಯೂಸ್​ ಹಂಚಿಕೊಂಡಿದ್ದ ನಟಿ ಇತ್ತೀಚೆಗೆ ಅದ್ದೂರಿಯಾಗಿ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದರು. ಇದೀಗ ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ. ರೆಡ್​ ಅಂಡ್ ಗ್ರೀನ್ ಕಾಂಬಿನೇಷನ್​ನ ಮೈಸೂರು ಸಿಲ್ಕ್ ಸೀರೆಯುಟ್ಟ ಅದಿತಿ ಪ್ರಭುದೇವ ಅಪ್ಪಟ ಉತ್ತರ ಕರ್ನಾಟಕದ ಚೆಲುವಂತೆ ರೆಡಿಯಾಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಕಾಸಿನ ಸರ, ಮೂಗುತಿ ತೊಟ್ಟ ಅದಿತಿಯ ಸೌಂದರ್ಯ ಇಮ್ಮಡಿಯಾಗಿದೆ. ಫೋಟೋಗಳನ್ನು ಸಾಮಾಜಿಕ ಜಾಲಾ ತಾಣದಲ್ಲಿ ಹಂಚಿಕೊಂಡಿರುವ ನಟಿ ಕೊನೆಗೂ ಈಡೇರಿದ ನನ್ನ ಪುಟ್ಟ ಆಸೆ ಎಂದು ಬರೆದುಕೊಂಡಿದ್ದಾರೆ. ಪತಿ ಜೊತೆ ಅದಿತಿ ಪ್ರಭುದೇವ ಫೋಟೋ ಶೂಟ್ ಮಾಡಿಸಿದ್ದು ಅವು ಸಾಮಾಜಿಕ ಜಾಲಾ ತಾಣದಲ್ಲಿ ವೈರಲ್ ಆಗಿದೆ. ಇತ್ತೀಚಿಗಷ್ಟೇ ಅದಿತಿ ಪ್ರಭುದೇವ ಅದ್ಧೂರಿಯಾಗಿ ಶ್ರೀಮಂತ ಶಾಸ್ತ್ರಕ್ಕೆ ಕೂಡ ಮಾಡಿಸಿಕೊಂಡ್ರು. ಕಾರ್ಯಕ್ರಮಕ್ಕೆ ಅನೇಕ ಸ್ಯಾಂಡಲ್​ವುಡ್ ನಟ-ನಟಿಯರು ಕೂಡ ಆಗಮಿಸಿದ್ರು. ನಟ ಶರಣ್ ಕೂಡ…

Read More

ಇದೇ ಮೊದಲ ಬಾರಿಗೆ ಪ್ರತಿಷ್ಠಿತ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸಲು ಸೌದಿ ಅರೇಬಿಯಾ ತಯಾರಿ ನಡೆಸುತ್ತಿದೆ. ಈ ಮೂಲಕ ಹೊಸ ಇತಿಹಾಸ ನಿರ್ಮಿಸಲು ಸೌದಿ ಸಜ್ಜಾಗಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲಾಗಲಿದೆ. ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್ ಏಷ್ಯಾ ಮತ್ತು ಮಿಸ್ ಅರಬ್ ಪೀಸ್ ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಿದ್ದರು. ಇದಲ್ಲದೇ ಮಿಸ್ ಮಿಡಲ್ ಈಸ್ಟ್ ಮತ್ತು ಮಿಸ್ ಅರಬ್ ವರ್ಲ್ಡ್ ಪೀಸ್ 2021 ರಂತಹ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರೂಮಿ ತಾವು ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸೋದಾಗಿ ತಿಳಿಸಿದ್ದಾರೆ. ಅರೇಬಿಕ್,ಇಂಗ್ಲಿಷ್, ಫ್ರೆಂಚ್ ಮತ್ತು ಬಹು ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಅರಬ್​​​ ರಾಷ್ಟ್ರವನ್ನು ಪ್ರತಿನಿಧಿಸುವ ಮೂಲಕ ವಿಶ್ವ ಸುಂದರಿ ಪಟ್ಟವನ್ನು ಮುಡಿಗೇರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಸ್ಥಳೀಯ ಮಾಧ್ಯಮಗಳ ವರದಿಯಲ್ಲಿ ಉಲ್ಲೇಖಿಸಿವೆ.

Read More

ಮುಂಬೈನಲ್ಲಿನ ಹುಕ್ಕಾ ಬಾರ್, ಹುಕ್ಕಾ ಪಾಪ್ಯೂಲರ್ ಮೇಲೆ ತಡರಾತ್ರಿ ದಾಳಿ ನಡೆಸಿದ್ದ ಪೊಲೀಸರು ಬಿಗ್​ಬಾಸ್ ವಿಜೇತ ಮುನಾವರ್ ಫಾರೂಖಿ ಸೇರಿದಂತೆ ಇನ್ನೂ 14 ಮಂದಿಯನ್ನು ಬಂಧಿಸಿದ್ದರು. ಎಲ್ಲರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಹುಕ್ಕಾ ಪಾಪ್ಯೂಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು ಈ ವೇಳೆ ಬಿಗ್​ಬಾಸ್ ಹಿಂದಿ ಸೀಸನ್ 17ರ ವಿಜೇತ, ಸ್ಟಾಂಡಪ್ ಕಮಿಡಿಯನ್ ಮುನಾವರ್ ಫಾರೂಖಿ ಸಹ ಸ್ಥಳದಲ್ಲಿದ್ದರು. ಅವರನ್ನೂ ಸೇರಿದಂತೆ ಅಲ್ಲಿದ್ದ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ದಾಳಿಯ ವೇಳೆ 13,500 ಮೌಲ್ಯದ ಹುಕ್ಕಾ ಪಾಟ್​ಗಳು, 4500 ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ದಾಳಿ ನಡೆಸಿದಾಗ ಹಲವಾರು ಮಂದಿ ಸಿಗರೇಟು ಹಾಗೂ ಹುಕ್ಕಾ ಸೇವನೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಜಾಮೀನು ನೀಡಲು ಅವಕಾಶವಿದ್ದ ಕಾರಣ ಅವರನ್ನು ಆ ನಂತರ ಬಿಟ್ಟು ಕಳುಹಿಸಿದ್ದಾರೆ. ಮುನಾವರ್ ಫಾರೂಖಿ ಜನಪ್ರಿಯ ಸ್ಟಾಂಡಪ್ ಕಮಿಡಿಯನ್. ಕೆಲ ವರ್ಷಗಳ ಹಿಂದೆ ಮುನಾವರ್ ಫಾರೂಖಿ…

Read More

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧೆಗೆ ಇಳಿದಿದ್ದಾರೆ. ಶಿವರಾಜ್ ಕುಮಾರ್ ಪತ್ನಿಯ ಪರ ಪ್ರಚಾರ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪ್ರಭಾವಿ ವ್ಯಕ್ತಿ ಆಗಿರುವುದರಿಂದ ಅವರು ನಟಿಸಿದ ಸಿನಿಮಾ, ಜಾಹೀರಾತುಗಳ ಮೇಲೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಕೆ ಆಗಿತ್ತು. ಸಿನಿಮಾಗಳ ಮೇಲೆ ಬ್ಯಾನ್ ಹೇರಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಭಾರತೀಯ ಜನತಾ ಪಾರ್ಟಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್​. ರಘು ಇತ್ತೀಚೆಗೆ ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ‘ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಶಿವರಾಜ್​ಕುಮಾರ್ ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವ ತನಕ ಶಿವರಾಜ್​ಕುಮಾರ್​ ಅವರ ಸಿನಿಮಾ, ಬಿಲ್​ಬೋರ್ಡ್, ಜಾಹೀರಾತು ಪ್ರದರ್ಶನ ಮಾಡದಂತೆ ಚಿತ್ರಮಂದಿರ, ಟಿವಿ ಚಾನೆಲ್​, ಸೋಶಿಯಲ್​ ಮೀಡಿಯಾ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಬೇಕು’ ಎಂದು ಮನವಿ ಮಾಡಿದ್ದರು. ರಘು ಮನವಿಗೆ ಚುನಾವಣಾ ಆಯೋಗ…

Read More

ಇಂದು ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ಗೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪತ್ನಿ ಉಪಾಸನಾ ಹಾಗೂ ಅತ್ತೆಯೊಂದಿಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ರಾಮ್ ಚರಣ್ ದಂಪತಿ ಆಗಾಗ ತಿಮ್ಮಪ್ಪನ ದರ್ಶನಕ್ಕೆ ಆಗಮಿಸುತ್ತಿರುತ್ತಾರೆ. ಅಂತೆಯೇ ಈ ಭಾರಿಯೂ ಶೂಟಿಂಗ್ ನ ಮಧ್ಯೆ ಬಿಡುವು ಮಾಡಿಕೊಂಡು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ದೇವಸ್ಥಾನದಲ್ಲಿ ಮುಂಜಾನೆ ಪ್ರಾರ್ಥನೆ ಸೇವೆ, ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ. ಜನ್ಮದಿನದಂದೇ ನಟ ದೇವಸ್ಥಾನಕ್ಕೆ ಭೇಟಿ ಕೊಟ್ಟ ಫೋಟೋಗಳು ಎಲ್ಲೆಡೆ ವೈರಲ್ ಆಗಿದೆ. ರಾಮ್ ಚರಣ್ ದೇವಸ್ಥಾನಕ್ಕೆ ಬರುವ ವಿಷಯ ತಿಳಿದ ಭಕ್ತರು ಅವರನ್ನು ಸ್ವಾಗತಿಸಲು ಜಮಾಯಿಸಿದ್ದಾರೆ. ದೇವಸ್ಥಾನದಿಂದ ಹೊರಬರುತ್ತಿದ್ದಂತೆ ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ಅವರನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಮುಗಿಬಿದಿದ್ದಾರೆ. ರಾಮ್ ಚರಣ್ ಅವರು ಕೇಸರಿ ಬಣ್ಣದ ಶಾಲು ಹೊದ್ದುಕೊಂಡಿದ್ದರು. ನಟನ ಜೊತೆ ಅವರ ಪತ್ನಿ ಮಗಳನ್ನು ಎತ್ತಿಕೊಂಡಿದ್ದರು. ಉಪಾಸನಾ ಅವರು ಪಿಂಕು ಬಣ್ಣದ…

Read More

ಕಿಚ್ಚ ಸುದೀಪ್ ತಮ್ಮ ಮೇಲೆ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ನಿರ್ಮಾಪಕ ಎನ್.ಎಂ.ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಎನ್ ಎಂ ಸುರೇಶ್ ವಿರುದ್ಧ ಕಿಚ್ಚ ಸುದೀಪ್ ಸುಳ್ಳು ಆಸ್ತಿ ಸಂಪಾದನೆ ಮತ್ತು ವಂಚನೆಯ ದೂರು ದಾಖಲಿಸಿದ್ದರು. ಸುದೀಪ್ ಅವರ ವಿರುದ್ಧ ಮಾನಹಾನಿಕರ ಮತ್ತು ಸಮಾಜದಲ್ಲಿ ಅವರ ಹೆಸರನ್ನು ಕೆಡಿಸುವಂತಹ ಆರೋಪದ ಪ್ರಕರಣವನ್ನು ದಾಖಲಿಸಲಾಗಿದೆ. ಸಮನ್ಸ್ ಜಾರಿ ಮಾಡುವ ಕ್ರಮದಲ್ಲಿ ಯಾವುದೇ ಅಕ್ರಮ ಕಂಡು ಬಂದಿಲ್ಲ. ಹಾಗಾಗಿ ರದ್ದು ಮಾಡಲಾಗದು ಎಂದು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಹೇಳಿದ್ದಾರೆ. ಪ್ರಕರಣ ಸಂಬಂಧ ಐಪಿಸಿ 499 ಮತ್ತು 500 ಅಡಿಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಸುರೇಶ್ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಸುದೀಪ್ ಈ ವಿಚಾರವಾಗಿ ಕೋರ್ಟಿಗೆ ಹಾಜರಾಗಿದ್ದರು. ಸುದೀಪ್ ಅವರ ಹೇಳಿಕೆಯನ್ನು ಆಲಿಸಿದ್ದ 13ನೇ ಎಸಿಎಂಎಂ ಕೋರ್ಟನ ನ್ಯಾ.ವೆಂಕಣ್ಣ ಬಸಪ್ಪ ಹೊಸಮನಿ ಅವರು ಸುದೀಪ್ ಸಲ್ಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ‌ ಅಂಗೀಕಾರ ಮಾಡಿದ್ದರು. ಜೊತೆಗೆ ನಿರ್ಮಾಪಕರಾದ…

Read More

ತೆಲುಗಿನ ಖ್ಯಾತ ನಟ ಚಿರಂಜೀವಿ ಬೆಂಗಳೂರಿನಲ್ಲಿ ಅತ್ಯಂತ ಸುಸಜ್ಜಿತ ಮನೆ ಹಾಗೂ ಫಾರ್ಮ್ ಹೌಸ್ ಹೊಂದಿದ್ದಾರೆ. ಇಡೀ ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಎದುರಿಸುತ್ತಿದ್ದರೆ ಚಿರಂಜೀವಿ ಮನೆ ಹಾಗೂ ಫಾರ್ಮ್ ಹೌಸ್ ನಲ್ಲಿ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಅಲ್ಲದೆ ನೀರಿನ ಸಮಸ್ಯೆಗೆ ನಟ ಪರಿಹಾರ ಸೂಚಿಸಿದ್ದಾರೆ. ಚಿರಂಜೀವಿ ಮನೆಯಲ್ಲಿ ಸದಾ ನೀರು ಜಿನುಗುವಂತೆ ಮಾಡಲು ವ್ಯವಸ್ಥೆ ಮಾಡಿದ್ದಾರೆ. ಅದನ್ನು ಕನ್ನಡದಲ್ಲೇ ಚಿರಂಜೀವಿ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ನೀರಿನ ಮಹತ್ವವನ್ನು ತಿಳಿಸಿದ್ದಾರೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ… ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಬಹುದು. ನಾಳೆ ಎಲ್ಲಿ ಬೇಕಾದರೂ ಸಂಭವಿಸಬಹುದು.ಆದ್ದರಿಂದ ನೀರನ್ನು ಸಂರಕ್ಷಿಸಲು ಸಹಾಯ ಮಾಡುವ ಮನೆಗಳನ್ನು ನಿರ್ಮಿಸುವ ಅಗತ್ಯವನ್ನು ಒತ್ತಿಹೇಳಲು ನಾನು ಈ ಅವಕಾಶವನ್ನು ಬಳಸಲು ಬಯಸುತ್ತೇನೆ. ಬೆಂಗಳೂರಿನ ನನ್ನ ಫಾರ್ಮ್ ಹೌಸ್‌ಗಾಗಿ…

Read More

ರಾಷ್ಟ್ರೀಯ ಡೇಟಾಬೇಸ್ ಮತ್ತು ನೋಂದಣಿ ಪ್ರಾಧಿಕಾರ (NADRA) ನಾಗರಿಕರ ಡೇಟಾವನ್ನು ಸೋರಿಕೆ ಮಾಡಿರುವ ಬಗ್ಗೆ ಪಾಕಿಸ್ತಾನದ ಜಂಟಿ ತನಿಖಾ ತಂಡ (ಜೆಐಟಿ) ಆಂತರಿಕ ಸಚಿವಾಲಯಕ್ಕೆ ವರದಿ ನೀಡಿದೆ. ಪಾಕಿಸ್ತಾನ ದೂರಸಂಪರ್ಕ ಪ್ರಾಧಿಕಾರ (ಪಿಟಿಎ), ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್‌ಐಎ) ಮತ್ತು ಮಿಲಿಟರಿ ಇಂಟೆಲಿಜೆನ್ಸ್ ಸಹಯೋಗದೊಂದಿಗೆ ಡೇಟಾ ಸೋರಿಕೆಯ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಆಂತರಿಕ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡಿದೆ. ಮುಲ್ತಾನ್, ಪೇಶಾವರ್ ಮತ್ತು ಕರಾಚಿಯ ನಾದ್ರಾ ಕಚೇರಿಗಳ ಸಹಾಯದಿಂದ 2019 ರಿಂದ 2023 ರವರೆಗೆ 2.7 ಮಿಲಿಯನ್ ಪಾಕಿಸ್ತಾನಿಗಳ ಡೇಟಾವನ್ನು ಕಳವು ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಮುಲ್ತಾನ್ ನಿಂದ ಪೇಶಾವರಕ್ಕೆ ಮತ್ತು ನಂತರ ದುಬೈಗೆ ಡೇಟಾವನ್ನು ಪಡೆಯಲಾಗಿದೆ ಮತ್ತು ಅರ್ಜೆಂಟೀನಾ ಮತ್ತು ರೊಮೇನಿಯಾದಲ್ಲಿಯೂ ಮಾರಾಟ ಮಾಡಲಾಗಿದೆ ಎಂದು ಜೆಐಟಿ ವರದಿಯಲ್ಲಿ ತಿಳಿಸಲಾಗಿದೆ. ಎನ್‌ಎಡಿಆರ್‌ಎಯ ಹಲವಾರು ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದು, ಮಾರ್ಚ್ 2023 ರ ಸೈಬರ್ ದಾಳಿಯ ತನಿಖೆಗಾಗಿ ಎಫ್‌ಐಎ ನಿರ್ದೇಶಕ ಸೈಬರ್ ಕ್ರೈಮ್…

Read More

ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್‌ನ ಅತಿ ಉದ್ದದ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ. ಡಿಕ್ಕಿ ಹೊಡೆದ ಕಂಟೇನರ್ ಹಡಗಿನಲ್ಲಿ 22 ಸಿಬ್ಬಂದಿ ಭಾರತೀಯರಿದ್ದು ಎಲ್ಲರು ಸುರಕ್ಷಿತವಾಗಿದ್ದಾರೆ ಎಂದು ಹಡಗು ನಿರ್ವಹಣಾ ಘಟಕ ತಿಳಿಸಿದೆ. ಅಪಘಾತಕ್ಕೀಡಾದ ಹಡಗು ಡಾಲಿ ಹೆಸರಿನ ಕಂಟೈನರ್ ಹಡಗಾಗಿದ್ದು, ಬಾಲ್ಟಿಮೋರ್‌ನಿಂದ ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ಹೋಗುತ್ತಿತ್ತು. ಮಂಗಳವಾರ ಮುಂಜಾನೆ 1:30ರ ಸುಮಾರಿಗೆ ಹಡಗು ಸೇತುವೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಇದರ ನಂತರ ಹಡಗು ನೀರಿನಲ್ಲಿ ಮುಳುಗಿದ್ದು, ಸೇತುವೆಯೂ ಮುರಿದು ನದಿಗೆ ಬಿದ್ದಿದೆ. ರಕ್ಷಕರು ಇಬ್ಬರನ್ನು ಹೊರತೆಗೆಯಲಾಗಿದ್ದು ಇನ್ನೂ ಆರು ಮಂದಿ ಇನ್ನೂ ಪತ್ತೆಯಾಗಿಲ್ಲ. ಇಬ್ಬರು ಪೈಲಟ್‌ಗಳು ಸೇರಿದಂತೆ ಸಿಬ್ಬಂದಿಯನ್ನು ಪರಿಗಣಿಸಲಾಗಿದ್ದು, ಯಾವುದೇ ಗಾಯಗಳ ವರದಿಯಾಗಿಲ್ಲ. ಯಾವುದೇ ಮಾಲಿನ್ಯವೂ ಇಲ್ಲ ಎಂದು ಚಾರ್ಟರ್ ಮ್ಯಾನೇಜರ್, ಸಿನರ್ಜಿ ಮೆರೈನ್ ಗ್ರೂಪ್ ಹೇಳಿದ್ದಾರೆ . ಕಂಟೈನರ್ ಹಡಗು ಸುಮಾರು ಎಂಟು ಗಂಟುಗಳ ತುಲನಾತ್ಮಕವಾಗಿ ವೇಗದಲ್ಲಿ ಚಲಿಸುತ್ತಿತ್ತು ಮತ್ತು ಸೇತುವೆಯನ್ನು ಅಪ್ಪಳಿಸುವ ಮೊದಲು ಕ್ಷಣಗಳಲ್ಲಿ ವಿದ್ಯುತ್…

Read More