Author: Author AIN

ರಷ್ಯಾದ ರಾಜಧಾನಿ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಐವರು ಬಂದೂಕುಧಾರಿಗಳು ಜನರ ಗುಂಪಿನ ಮೇಲೆ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ದಾಳಿ ಬೆನ್ನಲ್ಲೇ ಮೈಕ್ರೋ ಮ್ಯಾನೇಜಿಂಗ್ ಕುರಿತು ಮೋದಿ ಸರ್ಕಾರಕ್ಕೆ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ‘ಮಾಸ್ಕೋದಲ್ಲಿ ಐಸಿಸ್ ದಾಳಿಯ ನಡುವೆ ‘ಮೈಕ್ರೋ ಮ್ಯಾನೇಜಿಂಗ್ ಬ್ಯಾಕ್‌ಫೈರ್‌” (ಹಿನ್ನಡೆ)ಗಳನ್ನು ಅನುಭವಿಸುತ್ತಿದೆ ಎಂದು ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ‘ಮಾಸ್ಕೋ ಬಳಿ ಉಗ್ರರ ದಾಳಿಗೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿ, 140 ಮಂದಿ ಗಾಯಗೊಂಡಿದ್ದಾರೆ. ರಷ್ಯನ್ನರನ್ನು ಕೊಂದಿರುವುದಾಗಿ ಎಂದು ಐಸಿಸ್ ಹೇಳಿಕೊಂಡಿದೆ. ದಾಳಿ ಮಾಡಿದ ಉಗ್ರರಲ್ಲಿ ಒಬ್ಬ ಉಗ್ರನೂ ಕೂಡ ಸಿಕ್ಕಿಬಿದ್ದಿಲ್ಲ. ರಷ್ಯಾವನ್ನು ಪುಟಿನ್ ಮೈಕ್ರೋ ಮ್ಯಾನೇಜ್ ಮಾಡಬೇಕಾಗಿತ್ತು.. ಮೋದಿ ! ಎದ್ದೇಳಿ!! ಮೈಕ್ರೋ ಮ್ಯಾನೇಜಿಂಗ್ ಬ್ಯಾಕ್‌ಫೈರ್ಸ್ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. ಸಂಗೀತ ಕಚೇರಿ ಆಯೋಜನೆ ಮಾಡಲು ಸಿದ್ಧತೆ…

Read More

ನಟ, ನಿರ್ದೇಶಕ ಪ್ರಭುದೇವ ಹಾಗೂ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ 25 ವರ್ಷಗಳ ಬಳಿಕ ಒಂದಾಗಿದ್ದಾರೆ. ಮನೋಜ್ ಎಂ.ಎಸ್ ನಿರ್ದೇಶನದ ಎಆರ್.ಆರ್.ಪಿಡಿ 6 ಎನ್ನುವ ಹೆಸರಿನ ಚಿತ್ರದಲ್ಲಿ ಈ ಜೋಡಿ ಒಂದಾಗಿದ್ದು, ಚಿತ್ರದ ಮೊದಲ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಈ ಕುರಿತಂತೆ ನಟ ಪ್ರಭುದೇವ ಕೂಡ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯೋಗಿ ಬಾಬು, ಅಜು ವರ್ಗೀಸ್, ಸಿಂಗಂ ಪುಲಿ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಅನೂಪ್ ಶೈಲಜಾ ಸಿನಿಮಾಟೋಗ್ರಫಿಯಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ರೇಮಂಡ್ ಡೆರಿಕ್ ಕ್ರಿಸ್ಟಾ ಅವರ ಸಂಕಲನ ಚಿತ್ರಕ್ಕಿದೆ. ಈ ಹಿಂದೆ ಜಂಟಲ್ ಮನ್ ಸಿನಿಮಾದಲ್ಲಿ ಈ ಜೋಡಿ ಒಂದಾಗಿತ್ತು. ಈ ಸಿನಿಮಾದ ಚಿಕ್ಕು ಬುಕ್ಕು ರೈಲೇ ಹಾಡು ಫೇಮಸ್ ಆಗಿತ್ತು. ಆನಂತರ ಈ ಜೋಡಿ ಮತ್ತೆ ಒಂದಾಗಿರಲಿಲ್ಲ. ಇದೀಗ ಬರೋಬ್ಬರಿ 25 ವರ್ಷಗಳ ಬಳಿಕ ಮತ್ತೆ ಒಂದಾಗುತ್ತಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ.

Read More

ಪ್ರಕೃತಿಯಲ್ಲಿ ಕೆಲವೊಂದು ನಿಜಕ್ಕೂ ಅಚ್ಚರಿ ಉಂಟುಮಾಡುತ್ತವೆ. ಕೆಲವೊಮ್ಮೆ ವಿಚಿತ್ರವೂ ಎನಿಸುತ್ತದೆ. ಸಾಕಷ್ಟು ಬಾರಿ ಎಂತಹ ಘಟನೆಗಳು ನಡೆದಾಗ ಅದನ್ನು ನಂಬಬೇಕೋ ಬೇಡವೋ ಎಂಬ ಗೊಂದಲ ಶುರುವಾಗುತ್ತದೆ. ಇದೀಗ ಅಂತದ ಅಚ್ಚರಿಯ ಘಟನೆಯೊಂದು ಬ್ರೆಜಿಲ್ ನಲ್ಲಿ ಬೆಳಕಿಗೆ ಬಂದಿದೆ. 81 ವರ್ಷದ ವೃದ್ಧೆಯ ಹೊಟ್ಟೆಯಲ್ಲಿ ಕಲ್ಲಿನ ಮಗುವೊಂದು ಪತ್ತೆಯಾಗಿದೆ. ವೃದ್ಧೆಯು ಕಳೆದ 56 ವರ್ಷಗಳಿಂದ ಮಗುವನ್ನು ತನ್ನ ಹೊಟ್ಟೆಯಲ್ಲಿ ಹೊತ್ತುಕೊಂಡಿದ್ದಳು. ಆದರೆ ಶಸ್ತ್ರಚಿಕಿತ್ಸೆಯ ವೇಳೆ ವೃದ್ಧೆ ಕೊನೆಯುಸಿರೆಳೆದಿದ್ದಾಳೆ. ಮೂತ್ರನಾಳದ ಸೋಂಕಿನ ಚಿಕಿತ್ಸೆಗಾಗಿ ಡೇನಿಯಲಾ ಎಂಬ ವೃದ್ಧೆ ತನ್ನ ಮನೆಯ ಸಮೀಪವಿರುವ ಆಸ್ಪತ್ರೆಗೆ ತೆರಳಿದ್ದಾಳೆ. ಚಿಕಿತ್ಸೆಯ ಬಳಿಕವು ಆಕೆಗೆ ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ವೈದ್ಯರು ಆಕೆಯನ್ನು ಬೇರೆ ಬೇರೆ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಹೊಟ್ಟೆಯಲ್ಲಿ ಕಲ್ಲಿನಂತಿರುವ ಮಗುವಿರುವುದು ವೈದ್ಯರ ಗಮನಕ್ಕೆ ಬಂದಿದೆ. ಏಳು ಮಕ್ಕಳ ತಾಯಿ 1968 ರಲ್ಲಿ ಕೊನೆಯ ಬಾರಿಗೆ ಗರ್ಭಿಣಿಯಾಗಿದ್ದರು. ಕಳೆದ 56 ವರ್ಷಗಳಿಂದ ಆಕೆಯ ದೇಹದಲ್ಲಿತ್ತು ಎಂದು ತಿಳಿದು ಬಂದಿದೆ. ಆ ಬಳಿಕ ವೃದ್ಧೆಯ ಹೊಟ್ಟೆಯಲ್ಲಿ ಕಲ್ಲಿನ…

Read More

ರಷ್ಯಾದ ರಾಜಧಾನಿ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಐವರು ಬಂದೂಕುಧಾರಿಗಳು ಜನರ ಗುಂಪಿನ ಮೇಲೆ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ನಡೆದ ಸಾವಿನ ಸಂಖ್ಯೆಯ ಬಗ್ಗೆ ರಷ್ಯಾದ ಉನ್ನತ ಭದ್ರತಾ ಸಂಸ್ಥೆ ಖಚಿತ ಪಡಿಸಿದೆ. ಅಲ್ಲದೇ, ಮಾಸ್ಕೋದಲ್ಲಿ ನಡೆದಿದ್ದು ಭಯೋತ್ಪಾದಕ ದಾಳಿ ಎಂದು ರಷ್ಯಾದ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಘಟನೆ ನಡೆದ ಬೆನ್ನಲ್ಲೇ ಪರಿಸ್ಥಿತಿಯನ್ನು ನಿಯಂತ್ರಿಸಲು ರಷ್ಯಾದ ರಾಷ್ಟ್ರೀಯ ಗಾರ್ಡ್‌ಗಳು ಸ್ಥಳಕ್ಕೆ ತಲುಪಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ಕಾರ್ಯಾಚರಣೆಯಲ್ಲಿ ಹೆಲಿಕಾಪ್ಟರ್‌ಗಳ ಸಹಾಯವನ್ನೂ ಪಡೆಯಲಾಗಿದೆ. 50 ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಕೂಡ ಘಟನಾ ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾಧ್ಯಮ ವರದಿಯ ಪ್ರಕಾರ ಐವರು ದಾಳಿಕೋರರ ಪೈಕಿ ಒಬ್ಬನನ್ನು ಹಿಡಿಯಲಾಗಿದೆ. ಸಂಗೀತ ಕಚೇರಿ ಆಯೋಜನೆ ಮಾಡಲು ಸಿದ್ಧತೆ ನಡೆಸಿದ್ದ ಕ್ರೋಕಸ್ ಸಿಟಿ ಹಾಲ್‌ಗೆ ಕೆಲವು ಅಪರಿಚಿತ…

Read More

ಇಂಧನ ಇಲಾಖೆಯ ಸಾಫ್ಟ್ ವೇರ್ ವ್ಯವಸ್ಥೆ ಉನ್ನತೀಕರಣ ಪ್ರಯುಕ್ತ ಸ್ಥಗಿತಗೊಂಡಿದ್ದ ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಆನ್ ಲೈನ್ ಬಿಲ್ ಪಾವತಿ ಸೇರಿ ವಿವಿಧ ಸೇವೆಗಳು ಪುನಾರಂಭಗೊಂಡಿವೆ. ಇದರಿಂದ ಬಿಲ್ ಕಟ್ಟಲು ಸಾಕಷ್ಟು ದಿನದಿಂದ ಪರದಾಡಿದ್ದ ಜನತೆ ಇದೀಗ ನಿರಾಳರಾಗಿದ್ದಾರೆ. ಅಲ್ಲದೆ ಲೇಟ್ ಆಗಿ ಬಿಲ್ ಕಡ್ತಿರೋದ್ರಿಂದ ಯಾವುದೇ ದಂಟ ಕೂಡ ಕಟ್ಟಬೇಕಾಗಿಲ್ಲ. ಈ ಬಗ್ಗೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್ 10 ರಿಂದ 19ರವರೆಗೆ ಎಲ್ಲಾ 5 ಎಸ್ಕಾಂಗಳ ನಗರ ಪ್ರದೇಶಗಳ ಸ್ಥಗಿತಗೊಂಡಿದ್ದ ಆನ್ ಲೈನ್ ವಿದ್ಯುತ್ ಸೇವೆಗಳು ಇದೀಗ ಪುನಾರಂಭಗೊಂಡಿದ್ದು, ಈ ತಿಂಗಳ 30ರೊಳಗೆ ಎಲ್ಲಾ ಆನ್ ಲೈನ್ ಸೇವೆಗಳು ಯಥಾಸ್ಥಿತಿಗೆ ಬರಲಿವೆ ಎಂದು ತಿಳಿಸಿದೆ. ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಬಿಲ್ ವಿಳಂಬ ಪಾವತಿಗೆ ಬಡ್ಡಿ ವಿಧಿಸುವುದಿಲ್ಲ ಹಾಗೂ ಈ ಸಂದರ್ಭದಲ್ಲಿ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಆನ್…

Read More

ಹೆಣ್ಣು ಮಗುವನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಸೋಷಿಯಲ್ ಮೀಡಿಯಾದಲ್ಲಿ ಖ್ಯಾತಿ ಘಳಿಸಿದ ಸೋನು ಶ್ರೀನಿವಾಸ್ ಗೌಡರನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡ ಫಸ್ಟ್‌ ಪ್ರತಿಕ್ರಿಯೆ ನೀಡಿದ್ದಾರೆ. ಲೀಗಲ್ ಆಗಿ ತನಿಖೆ ನಡೆಯುತ್ತಿದೆ. ಏನೂ ತೊಂದರೆ ಇಲ್ಲ. ಒಂದು ಹುಡುಗಿಯನ್ನು ರಕ್ಷಣೆ ಮಾಡೋಕೆ ಅಂತ ನಾನು ಕರೆದುಕೊಂಡು ಬಂದಿದ್ದು. ಅವಳು ಈಗಲೂ ಆರಾಮಾಗಿ, ಸುರಕ್ಷಿತವಾಗಿ ಇದ್ದಾಳೆ ಎಂದು ಸೋನು ಗೌಡ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರನ್ನು ರಾಯಚೂರಿಗೆ ಕರೆದುಕೊಂಡು ಹೋಗಿ ಪೊಲೀಸರು ತನಿಖೆ ಮಾಡಲಿದ್ದಾರೆ. ಮಾರ್ಚ್ 25ರಂದು ಅವರನ್ನು ಕೋರ್ಟ್‌ಗೆ ಹಾಜರು ಪಡಿಸಬೇಕಿದೆ. ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಸಂಬಂಧ ಸೋನು ಗೌಡ ಮೇಲೆ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

Read More

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಗೌರವವಾದ ‘ಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಪೊ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭೂತಾನ್ ದೊರೆ ಜಿಗ್ಮೆ ಖೇಸರ್ ನಾಂಗೇಲ್ ವಾಂಗ್ ಚುಕ್ ಅವರು ಮೋದಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು. ಮೋದಿ ಈ ಪ್ರಶಸ್ತಿ ಪಡೆದುಕೊಂಡ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮೋದಿ, ಭೂತಾನ್ ನ ಅತ್ಯುನ್ನತ ನಾಗರಿಕ ಗೌರವ ‘ ಆರ್ಡರ್ ಆಫ್ ದಿ ಗ್ಯಾಲ್ಪೊ’ ಪ್ರಶಸ್ತಿ ಸ್ವೀಕರಿಸಲು ನನಗೆ ಸಂತಸವಾಗಿದೆ. ಈ ಪ್ರಶಸ್ತಿಯನ್ನು 140 ಕೋಟಿ ಭಾರತೀಯರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ. ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಅವರು ಥಿಂಪುವಿನಲ್ಲಿ ಪ್ರಧಾನಿ ಮೋದಿ ಅವರಿಗಾಗಿ ಭೋಜನಕೂಟ ಆಯೋಜಿಸಿದ್ದು, ಈ ವೇಳೆ ಉಭಯ ರಾಷ್ಟ್ರಗಳು ಹಲವು ಒಪ್ಪಂದಗಳು ಮಾಡಿಕೊಂಡವು. ಅದರಲ್ಲೂ ಮುಖ್ಯವಾಗಿ ಭಾರತ ಮತ್ತು ಭೂತಾನ್ ದೇಶಗಳ ನಡುವೆ ಶುಕ್ರವಾರ ಇಂಧನ, ವ್ಯಾಪಾರ, ಡಿಜಿಟಲ್ ಸಂಪರ್ಕ,…

Read More

ಕೆಜಿಎಫ್ ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸಖತ್ ಸದ್ದು ಮಾಡ್ತಿದೆ. ಚಿತ್ರ ಅನೌನ್ಸ್ ಆದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗ್ತಿರೋ ಟಾಕ್ಸಿಕ್ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ ನಿರ್ದೇಶನದ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಗೋವಾದಲ್ಲಿ​ ನಡೆಯುತ್ತಿದೆ. ಈ ಮಧ್ಯೆ ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ಲೀಕ್ ಆಗಿವೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದ ಬಳಿಕ ಯಶ್​ ಜೊತೆ ಸಿನಿಮಾ ಮಾಡಲು ಪರಭಾಷೆಯ ದೊಡ್ಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳು, ಅನೇಕ ಸ್ಟಾರ್​ ಡೈರೆಕ್ಟರ್​ಗಳು ಮುಂದೆ ಬಂದರು. ಆದರೆ ಯಶ್​ ಆಯ್ಕೆ ಬೇರೆಯೇ ಆಗಿತ್ತು. ‘ಕೆವಿಎನ್​ ಪ್ರೊಡಕ್ಷನ್ಸ್’ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ ಜೊತೆ ಅವರು ಕೈ ಜೋಡಿಸಿದರು. ಸದ್ಯಕ್ಕೆ ಈ ಚಿತ್ರತಂಡದಿಂದ ಸಿನಿಮಾದ ಟೈಟಲ್ ಮಾತ್ರವೇ ರಿವೀಲ್ ಆಗಿದೆ.  ‘ಟಾಕ್ಸಿಕ್​’ ಶೂಟಿಂಗ್​ ಸೆಟ್​ನಿಂದ ಲೀಕ್​ ಆಗಿರುವ ​ಫೋಟೋ ಮತ್ತು ವಿಡಿಯೋದಲ್ಲಿ ಯಾವುದೇ ವಿಶೇಷತೆ ಇಲ್ಲವಾದರೂ ಅದನ್ನು…

Read More

ಬಾಲಿವುಡ್ ಬ್ಯೂಟಿ ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಿಕ್ ಅವರನ್ನು ವಿವಾಹವಾದ ಬಳಿಕ ಅಮೆರಿಕಾದಲ್ಲಿ ಸೆಟಲ್ ಆಗಿರುವ ಪಿಗ್ಗಿ ಇದೀಗ ಮತ್ತೆ ಬಿಟೌನ್ ನತ್ತ ಮುಖ ಮಾಡಿದ್ದಾರೆ. ಬಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕರ ಸಿನಿಮಾದಲ್ಲಿ ಪಿಗ್ಗಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಲವು ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಬಂದಿದ್ದು, ಹಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೇ ವೇಳೆ ಕೆಲವು ನಿರ್ದೇಶಕರನ್ನು ಕೂಡ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಆ ಪೈಕಿ ಸಂಜಯ್​ ಲೀಲಾ ಬನ್ಸಾಲಿ ಜೊತೆ ಪ್ರಿಯಾಂಕಾ ಹೊಸ ಸಿನಿಮಾ ಒಪ್ಪಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. ಬನ್ಸಾಲಿ ಹಾಗೂ ಪ್ರಿಯಾಂಕಾ ನಡುವೆ ಉತ್ತಮ ಸ್ನೇಹವಿದೆ. ಈ ಹಿಂದೆ ಅವರು ‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ ಸಿನಿಮಾಗಳಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಅಲ್ಲದೇ ಸಂಜಯ್​ ಲೀಲಾ ಬನ್ಸಾಲಿ ಕೆಲಸಗಳನ್ನು ಪ್ರಿಯಾಂಕಾ ಸಾಕಷ್ಟು ಮೆಚ್ಚಿಕೊಂಡಿದ್ದಾರೆ. ಹಾಗಾಗಿ ಅವರ ಜೊತೆಗಿನ ಹೊಸ ಸಿನಿಮಾಗೆ ಸಹಿ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಿಯಾಂಕಾ ಚೋಪ್ರಾ…

Read More

ಕಾಂತಾರ ಸಿನಿಮಾದ ಮೂಲಕ ಸಖತ್ ಸದ್ದು ಮಾಡಿದ್ದ ನಟಿ ಸಪ್ತಮಿ ಗೌಡ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿರುವ ನಟಿ ಈ ಮಧ್ಯೆ ಭರ್ಜರಿ ಫೋಟೋ ಶೂಟ್ ಮಾಡಿಸಿದ್ದಾರೆ. ಆಗಾಗ ಹೊಸ ಹೊಸ ಫೋಟೋ ಶೂಟ್ ಮೂಲಕ ಗಮನ ಸೆಳೆಯುವ ನಟಿ ಸಪ್ತಮಿ ಗೌಡ ಇದೀಗ ಟ್ರೆಡಿಷನಲ್ ಲುಕ್ ನಲ್ಲಿ ಮಿಂಚಿದ್ದಾರೆ. ನಟಿಯ ನಯಾ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಲೆಹಂಗಾ ಧರಿಸಿದ ಲೀಲಾ ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ. ವಿಡಿಯೋ ಹಾಗೂ ಫೋಟೋಗಳನ್ನು ತಮ್ಮ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ನಟಿ ತನ್ನ ವಿಡಿಯೋಗೆ ಯುವ ಸಿನಿಮಾದ ಹಾಡಿನ ಟಚ್ ನೀಡಿ ಮತ್ತಷ್ಟು ಚಂದಗೊಳಿಸಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಕಾಂತಾರ ಲೀಲಾ ಫುಲ್​ ಬ್ಯುಸಿ ಆಗಿದ್ದಾರೆ. ಕಾಂತಾರ ಸಿನಿಮಾ ಹಿಟ್ ಆದ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ. ದೊಡ್ಮನೆ ಕುಡಿ ಯುವ ರಾಜ್​ ಕುಮಾರ್, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ…

Read More