‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಪ್ರಮೋಷನ್ನಲ್ಲಿ ನಟ ರಣದೀಪ್ ಹೂಡಾ ಬ್ಯುಸಿ ಆಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ವಿನಾಯಕ್ ದಾಮೋದರ್ ಸಾವರ್ಕರ್ಅವರ ಬದುಕಿನ ವಿವರವನ್ನು ಆಧರಿಸಿ ತಯಾರಾದ ಸಿನಿಮಾ. ಸಿನಿಮಾದಲ್ಲಿ ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಂಡಿದ್ದು, ಪಾತ್ರದ ಮೇಲಿನ ಗೌರವ ಹಾಗೂ ಬದ್ಧತೆಗಾಗಿ ರಣದೀಪ್ ಹೂಡಾ ಅಚ್ಚರಿಯ ರೀತಿಯಲ್ಲಿ ಬಾಡಿ ಟ್ರಾನ್ಸ್ಫಾರ್ಮೇಷನ್ ಮಾಡಿಕೊಂಡಿದ್ದಾರೆ. ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಮಾರ್ಚ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಇರುವಾಗ ರಣದೀಪ್ ಹೂಡಾ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ. ಹೂಡಾ ಹಂಚಿಕೊಂಡಿರುವ ಫೋಟೋದಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಕಟ್ಟುಮಸ್ತಾದ ಬಾಡಿ ಹೊಂದಿದ್ದ ರಣದೀಪ್ ಹೂಡಾ ಅವರು ಸಾವರ್ಕರ್ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದಾರೆ. ಅಂದಾಜು 30 ಕೆಜಿ ದೇಹದ ತೂಕವನ್ನು ಅವರು ಕಡಿಮೆ ಮಾಡಿಕೊಂಡಿದ್ದು, ಎದೆಗೂಡಿನ ಮೂಳೆಗಳು ಕಾಣುವ ರೀತಿಯಲ್ಲಿ ಬದಲಾಗಿದ್ದಾರೆ. ಇವರಿಗೆ ಸಿನಿಮಾದ ಮೇಲಿನ ಪ್ರೀತಿ ನೋಡಿ ಅಭಿಮಾನಿಗಳು ಮೆಚ್ಚುಗೆ…
Author: Author AIN
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿರೋದು ಗೊತ್ತೆ ಇದೆ. ಇದೀಗ ಅಭಿಮಾನಿಗಳು ಕಾಂತಾರ 2 ನೋಡಲು ಕಾಯುತ್ತಿದ್ದಾರೆ. ಸದ್ಯ ಈ ಚಿತ್ರದ ನಾಯಕಿ ಯಾರು? ಎಂಬ ಪ್ರಶ್ನೆ ಹುಟ್ಟುಕೊಂಡಿದ್ದು, ನಾಯಕಿಯ ಕುರಿತು ಅಚ್ಚರಿಯ ಹೆಸರು ಕೇಳಿ ಬಂದಿದೆ. ‘ಕಾಂತಾರ’ ಪಾರ್ಟ್ 1ನಲ್ಲಿ ರಿಷಬ್ ಶೆಟ್ಟಿ ಜೊತೆ ನಟಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದರು. ಈ ಸಿನಿಮಾ ಸಪ್ತಮಿ ಗೌಡ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಇಬ್ಬರ ಕೆಮಿಸ್ಟ್ರಿಗೆ ಅಭಿಮಾನಿಗಳು ಫಿದಾ ಆಗಿದ್ದರು. ಹೀಗಾಗಿ ಕಾಂತಾರ ಪ್ರಿಕ್ವೆಲ್ ನಲ್ಲಿ ರಿಷಬ್ ಶೆಟ್ಟಿಗೆ ಯಾರು ನಾಯಕಿಯಾಗ್ತಾರೆ ಎಂಬ ಕುತೂಹಲ ಶುರುವಾಗಿದ್ದು ಅದಕ್ಕೀಗ ಉತ್ತರ ಸಿಕ್ಕಿದೆ. ‘ಕಾಂತಾರ’ ಪ್ರೀಕ್ವೆಲ್ ನಲ್ಲಿ ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿ ರುಕ್ಮಿಣಿ ವಸಂತ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕನ್ನಡ ಮತ್ತು ಸೌತ್ ಸಿನಿಮಾ ರಂಗದಲ್ಲಿ ಮೋಡಿ ಮಾಡುತ್ತಿರುವ ರುಕ್ಮಿಣಿ ಇದೀಗ ಕಾಂತಾರ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಕಾಂತಾರ ಪ್ರೀಕ್ವೆಲ್ ನಲ್ಲಿ…
ಕರಾವಳಿ ಹುಡುಗ, ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ತಮಿಳು ಚಿತ್ರರಂಗದತ್ತ ಮುಖ ಮಾಡಿದ್ದಾರೆ. ತಮಿಳಿನ ಖ್ಯಾತ ಹಾಸ್ಯ ಕಲಾವಿದ ಯೋಗಿ ಬಾಬು ನಟನೆಯ ಸಿನಿಮಾದಲ್ಲಿ ರೂಪೇಶ್ ಶೆಟ್ಟಿ ಕಾಣಿಸಿಕೊಳ್ತಿದ್ದಾರೆ. ಈ ಸಿನಿಮಾದ ಬಗ್ಗೆ ರೂಪೇಶ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಯೋಗಿ ಬಾಬು ಜೊತೆಗಿರುವ ಫೋಟೋ ಹಂಚಿಕೊಂಡ ನಟ, ಇಂದು ತುಂಬಾ ಖುಷಿಯ ದಿವಸ ನಿಮ್ಮೆಲ್ಲರ ಆಶೀರ್ವಾದ ಹಾಗೂ ಪ್ರೋತ್ಸಾಹದಿಂದ ಇಂದು ಒಂದು ಅದ್ಭುತ ತಂಡದ ಜತೆಗೆ ‘ಸನ್ನಿಧಾನಮ್ ಪಿ.ಓ’ ಎನ್ನುವ ನನ್ನ ಮೊದಲ ತಮಿಳು ಚಿತ್ರ ಮಾಡುವ ಅವಕಾಶ ದೊರಕಿದೆ. ತಮಿಳಿನ ಸೂಪರ್ ಸ್ಟಾರ್ ಹಾಸ್ಯ ನಟರಾದ ಯೋಗಿ ಬಾಬು ಅವರ ಜೊತೆ ನಟಿಸುವ ಅವಕಾಶ ನನ್ನ ಪಾಲಿಗೆ ದೊಡ್ಡ ಹೆಮ್ಮೆ ಎಂದಿದ್ದಾರೆ. ನಿಮ್ಮ ಆಶೀರ್ವಾದ ಸದಾ ನನ್ನ ಮೇಲೆ ಇರಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಯೋಗಿ ಬಾಬು ಹಾಗೂ ಕನ್ನಡದ ನಟ ಪ್ರಮೋದ್ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘ಸನ್ನಿಧಾನಮ್ ಪಿ.ಓ’ ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದು ಅವರ…
ಪಾಕಿಸ್ತಾನವು ಅಫ್ಗಾನಿಸ್ತಾನದ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಆಡಳಿತ ತಿಳಿಸಿದೆ. ಅಫ್ಗಾನಿಸ್ತಾನದ ಪಕ್ತಿಕ ಮತ್ತು ಖೋಸ್ಟ್ ಪ್ರಾಂತ್ಯ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ವೈಮಾನಿಕ ದಾಳಿ ನಡೆದಿರುವ ಬಗ್ಗೆ ಅಫ್ಗಾನಿಸ್ತಾನ ಸರ್ಕಾರದ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇಂದು ‘ಮುಂಜಾನೆ 3 ಗಂಟೆಯ ವೇಳೆಗೆ ಪಾಕಿಸ್ತಾನದ ಯುದ್ಧವಿಮಾನಗಳು ನಾಗರಿಕರ ಮನೆಗಳ ಮೇಲೆ ದಾಳಿ ನಡೆಸಿವೆ ಎಂದು ಅಫ್ಗಾನ್ ಸರ್ಕಾರದ ವಕ್ತಾರ ಝಬಿವುಲ್ಲ ಮುಜಾಹಿದ್ ಹೇಳಿಕೆ ನೀಡಿದ್ದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ. ‘ಸಾಮಾನ್ಯ ಜನರ ಮನೆಗಳನ್ನೆ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಪಕ್ತಿಕದಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಸಾವಿಗೀಡಾಗಿದ್ದಾರೆ. ಖೋಸ್ಟ್‌ನಲ್ಲಿ ಒಂದು ಮನೆ ಸಂಪೂರ್ಣ ನಾಶವಾಗಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ. ‘ಪಾಕಿಸ್ತಾನವು ಹಿಂಸಾತ್ಮಕ ಚಟುವಟಿಕೆಗಳ ನಿಯಂತ್ರಣದ ವೈಫಲ್ಯ ಮತ್ತು ಸಮಸ್ಯೆಗಳಿಗೆ ಅಫ್ಗಾನಿಸ್ತಾನವನ್ನು ಹೊಣೆಗಾರರನ್ನಾಗಿಸುವುದನ್ನು ನಿಲ್ಲಿಸಬೇಕು. ಇಂತಹ ಕೃತ್ಯಗಳು ಪಾಕಿಸ್ತಾನದ ಹಿಡಿತಕ್ಕೆ ಸಿಗದ ಭೀಕರ ಪರಿಣಾಮಗಳಿಗೆ ಕಾರಣವಾಗಬಹುದು’ ಎಂದು ಎಚ್ಚರಿಕೆ ನೀಡಲಾಗಿದೆ.…
ತಮಿಳು ಚಿತ್ರರಂಗದ ಖ್ಯಾತ ನಟಿ ಅರುಂಧತಿ ನಾಯರ್ ಗೆ ಅಪಘಾತವಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ನಟಿಗೆ ಚಿಕಿತ್ಸೆ ಮುಂದುವರೆದಿದ್ದು ನಿತ್ಯ ಸಾವಿರಾರು ರೂಪಾಯಿ ವೆಚ್ಚವಾಗುತ್ತಿದೆ. ಈ ವೆಚ್ಚ ಭರಿಸಲು ಅರುಂಧತಿ ಕುಟುಂಬಸ್ಥರಿಗೆ ಕಷ್ಟವಾಗುತ್ತಿದೆ ಎಂದು ಅವರ ಸ್ನೇಹಿತೆ, ಗೋಪಿಕಾ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.. ನಟಿ ಅರುಂಧತಿಯನ್ನು ತಿರುವನಂತಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತನ್ನ ಸಹೋದರನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕೋವಲಂ ಬೈಪಾಸ್ ಬಳಿ ಕಾರು ಡಿಕ್ಕಿಯಾಗಿ ಅಪಘಾತವಾಗಿದೆ. ಈ ವೇಳೆ ಅಕ್ಕ ತಮ್ಮ ಇಬ್ಬರಿಗೂ ಗಂಭೀರವಾದ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆದೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಪ್ರತಿದಿನದ ಆಸ್ಪತ್ರೆ ವೆಚ್ಚ ಸಾವಿರ ಸಾವಿರವಿದ್ದು, ಅದನ್ನು ಭರಿಸಲು ನಟಿಯ ಕುಟುಂಬಸ್ಥರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅರುಂಧತಿಯ ಸ್ನೇಹಿತೆ ಗೋಪಿಕಾ ಅನಿಲ್, ನನ್ನ ಸ್ನೇಹಿತೆಗೆ ಅಪಘಾತವಾಗಿದೆ, ಪ್ರತಿದಿನದ ಆಸ್ಪತ್ರೆ ವೆಚ್ಚ ಭರಿಸಲು, ಅವರ ಕುಟುಂಬಸ್ಥರಿಗೆ ಕಷ್ಟವಾಗಿದೆ. ಹಾಗಾಗಿ ನಿಮ್ಮಿಂದ ಸಾಧ್ಯವಾದಷ್ಟು, ಇವರ ಅಕೌಂಟ್‌ಗೆ ಹಣ ಹಾಕಿ, ಸಹಾಯ ಮಾಡಿ ಎಂದು ಅಕೌಂಟ್ ಡಿಟೇಲ್ಸ್ ನೀಡಿದ್ದಾರೆ.
ಬಲವಂತವಾಗಿ ನಮ್ಮನ್ನು ರಷ್ಯಾ ಸೈನ್ಯಕ್ಕೆ ಸೇರಿಸಿಕೊಂಡು ಉಕ್ರೇನ್‍ನಲ್ಲಿ ಯುದ್ಧ ಮಾಡುವಂತೆ ಒತ್ತಡ ಹಾಕಲಾಗುತ್ತಿದೆ. ನಮ್ಮನ್ನು ಈ ಅಪಾಯದಿಂದ ತಪ್ಪಿಸಿ ಎಂದು ಪಂಜಾಬ್ ಮತ್ತು ಹರಿಯಾಣ ಮೂಲದ ಆರು ಮಂದಿ ಭಾರತೀಯ ಸೈನಿಕರು ಮನವಿ ಮಾಡಿದ್ದಾರೆ. ಆರು ಸೈನಿಕರು ತಮ್ಮನ್ನು ರಕ್ಷಿಸುವಂತೆ ಉಕ್ರೇನ್‍ನ ಟ್ಯಾಗ್ ಸಡೋವ್ ಎಂಬ ಸ್ಥಳದಿಂದ ವಿಡಿಯೋ ಮಾಡಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಮಾತನಾಡಿದ ವ್ಯಕ್ತಿಯೊಬ್ಬರು, ನಾವು ರಷ್ಯಾದ ಸೇನೆಯೊಂದಿಗೆ ಸಿಲುಕಿಕೊಂಡಿದ್ದೇವೆ. ಇದಕ್ಕೂ ಮೊದಲು ನಾವು ಭಾರತ ಸರ್ಕಾರದಿಂದ ಸಹಾಯ ಕೋರಿ ವೀಡಿಯೊವನ್ನು ಬಿಡುಗಡೆ ಮಾಡಿದ್ದೇವೆ. ಮಾಸ್ಕೋದಲ್ಲಿರುವ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ. ಭಾರತ ಮತ್ತು ರಷ್ಯಾ ಉತ್ತಮ ಸಂಬಂಧವನ್ನು ಹೊಂದಿವೆ ಮತ್ತು ನೀವು ನಮ್ಮನ್ನು ಇಲ್ಲಿಂದ ಕಾಪಾಡುತ್ತೀರಿ ಎಂದು ನಮಗೆ ತಿಳಿದಿದೆ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ಇದೇ ಗುಂಪು ತಕ್ಷಣವೇ ನಮ್ಮನ್ನು ಸ್ಥಳಾಂತರಿಸುವಂತೆ ಕೋರಿ 105 ಸೆಕೆಂಡ್‍ಗಳ ವೀಡಿಯೊ ಹಾಕಿತ್ತು. ಇದೀಗ ಮತ್ತೆ…
ರಷ್ಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾದಿಮಿರ್ ಪುಟಿನ್ ಶೇ.87ರಷ್ಟು ಮತಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸತತ ಆರನೇ ಭಾರಿಗೆ ಪುಟೀನ್ ಅಧ್ಯಕ್ಷರ ಹುದ್ದೆಗೇರಿದ್ದು ರಷ್ಯಾದ ಇತಿಹಾಸದಲ್ಲೇ ದೀರ್ಘಕಾಲ ಅಧ್ಯಕ್ಷರಾದ ಹೆಗ್ಗಳಿಕೆಗೆ ಪುಟಿನ್ ಪಾತ್ರರಾಗಿದ್ದಾರೆ. ಸೋವಿಯತ್ ರಷ್ಯಾದ ಮುಖಂಡ ಜೋಸೆಫ್ ಸ್ಟಾಲಿನ್ ನಂತರ ಪುಟಿನ್ ದೀರ್ಘಾವಧಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದಂತಾಗಿದೆ. 1999-2000ದವರೆಗೆ ಹಂಗಾಮಿ ಅಧ್ಯಕ್ಷರಾಗಿ, ನಂತರ 2000-2004ರವರೆಗೆ ಮೊದಲ ಬಾರಿ ಪುಟಿನ್ ಅಧ್ಯಕ್ಷರಾಗಿ ಆಯ್ಕೆ. 2004-2008ರವರೆಗೆ ಎರಡನೇ ಬಾರಿ ಅಧ್ಯಕ್ಷರಾಗಿ ಪುನರಾಯ್ಕೆ. 2012-2018ರಲ್ಲಿ ಮೂರನೇ ಬಾರಿ ಅಧ್ಯಕ್ಷರಾಗಿ ಆಯ್ಕೆ. 2012ರ ಚುನಾವಣೆಯ ನಂತರ ರಷ್ಯಾ ಅಧ್ಯಕ್ಷರ ಅವಧಿಯನ್ನು ನಾಲ್ಕರಿಂದ ಆರು ವರ್ಷಕ್ಕೆ ವಿಸ್ತರಿಸಿ ಕಾನೂನು ತಿದ್ದುಪಡಿ ಮಾಡಲಾಗಿತ್ತು. 2018ರಲ್ಲಿ ಪುಟಿನ್ ನಾಲ್ಕನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದರು. 2024ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲೂ ಪುಟಿನ್ ಗೆಲುವಿನ ನಗು ಬೀರಿದ್ದಾರೆ. 71ವರ್ಷದ ವ್ಲಾದಿಮಿರ್ ಪುಟಿನ್ ಇನ್ನು ಆರು ವರ್ಷಗಳ ಕಾಲ ರಷ್ಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರೊಂದಿಗೆ ಜೋಸೆಫ್ ಸ್ಟಾಲಿನ್ ಅವರ…
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದಲ್ಲಿ ನಟಿ ಕರೀನಾ ಕಪೂರ್ ನಟಿಸ್ತಾರೆ ಎಂಬ ಸುದ್ದಿ ಕೇಳಿ ಬರ್ತಿದೆ. ಆದರೆ ಇದುವರೆಗೂ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಅದಕ್ಕೀಗ ಉತ್ತರ ಸಿಕ್ಕಂತೆ ಕಾಣುತ್ತಿದೆ. ಸ್ವತಃ ಕರೀನಾ ಅವರೇ ಹೇಳಿಕೊಂಡಂತೆ ಬಾಲಿವುಡ್ ಚಿತ್ರದಲ್ಲಿ ಕರೀನಾ ನಟಿಸುತ್ತಿದ್ದಾರಂತೆ. ಆದರೆ, ಆ ಸಿನಿಮಾ ಯಾವುದನ್ನು ಎನ್ನುವುದನ್ನು ಸದ್ಯಕ್ಕೆ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ಹಿಂದೆಯೇ ಸಂದರ್ಶನವೊಂದರಲ್ಲಿ ಕರೀನಾ ಅವರು, ಯಶ್ ಜೊತೆ ಮಾತ್ರ ನಟಿಸುತ್ತೇನೆ. ಪ್ರಭಾಸ್, ಅಲ್ಲು ನಕೋ ಬಾಬಾ ಎಂದಿದ್ದರು. ಯಶ್ ಜೊತೆ ನಟಿಸೋದು ಹೆವ್ವಿ ಇಷ್ಟ. ಅದೇ ಲೈಫ್ ಟೈಮ್ ಅಚೀವ್‌ಮೆಂಟು ಎಂದಿದ್ದರು. ಈ ಮೂಲಕ ತಾವು ಯಶ್ ಜೊತೆ ನಟಿಸುವ ಉತ್ಸಾಹವನ್ನೂ ತೋರಿಸಿದ್ದರು. ಇದೀಗ ಅದು ಪಕ್ಕಾ ಆದಂತಿದೆ. ಇನ್ನೂ ಟಾಕ್ಸಿಕ್ ಸಿನಿಮಾವನ್ನು ಗೀತು ಮೋಹನ್ ದಾಸ್ ನಿರ್ದೇಶನ ಮಾಡುತ್ತಿದ್ದಾರೆ ಎಂಬ ವಿಷಯ ಬಿಟ್ಟರೆ ಮತ್ಯಾವ ಸುದ್ದಿಯು ಹೊರ ಬಿದ್ದಿರಲಿಲ್ಲ. ಇದೀಗ ಇದೇ ಮೊದಲ…
ಸ್ಯಾಂಡಲ್ ವುಡ್ ಚಿತ್ರರಂಗದ ಖ್ಯಾತ ನಟ ಕಂ ನಿರ್ದೇಶಕ ರಮೇಶ್ ಅರವಿಂದ್ ಅವರಿಗೆ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದ ಸುಸಂದರ್ಭದಲ್ಲಿ ಶ್ರೀ ಸುಬುಧೇಂದ್ರತೀರ್ಥರ ಸಾನಿಧ್ಯದಲ್ಲಿ ನೀಡುವ ಮಂತ್ರಾಲಯ ಪರಿಮಳ ಪ್ರಶಸ್ತಿ ಸಂದಿದೆ. ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ಮರಳಿ ಸಂಸ್ಕೃತಿಗೆ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಅವರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ ನೀಡಲಾಯಿತು. ಈ ಹಿಂದೆ ಮಂತ್ರಾಲಯ ಪರಿಮಳ ಪ್ರಶಸ್ತಿ ಅನ್ನು ಡಾ.ರಾಜಕುಮಾರ್, ರಜನಿಕಾಂತ್, ಸುಧಾಮೂರ್ತಿ, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ದರ್ಶನ್ ಅವರಿಗೆ ನೀಡಲಾಗಿತ್ತು. ಈ ಬಾರಿ ರಮೇಶ್ ಅರವಿಂದ್ ಅವರಿಗೆ ನೀಡಲಾಗಿದೆ. ನಟನೆ, ನಿರೂಪಣೆ, ನಿರ್ದೇಶನ, ನಿರ್ಮಾಣದಲ್ಲಿ ಹೆಸರು ಮಾಡಿರುವ ರಮೇಶ್ ಅರವಿಂದ್ ಅವರಿಗೆ ಈಗಾಗಲೇ ಸಾಕಷ್ಟು ಪ್ರಶಸ್ತಿಗಳು ಸಂದಿವೆ. ಅವುಗಳ ಸಾಲಿಗೆ ಇದೀಗ ಮಂತ್ರಾಲಯ ಪ್ರಶಸ್ತಿ ಕೂಡ ಸೇರಿಕೊಂಡಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಮೌರ್ಯ ಸಿನಿಮಾದಲ್ಲಿ ನಟಿಸಿದ್ದ ನಟಿ ಮೀರಾ ಜಾಸ್ಮಿನ್ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲು ರೆಡಿಯಾಗಿದ್ದಾರೆ. ವೈಯಕ್ತಿಯ ಜೀವನದ ಏರುಪೇರಿನಿಂದ ನೊಂದಿರುವ ನಟಿ ಮತ್ತೆ ನಟನೆಗೆ ಮರಳಲು ನಿರ್ಧರಿಸಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಮೀರಾ ಜಾಸ್ಮಿನ್ ತಮ್ಮ ಹೋಮ್ಲಿ ಲುಕ್ ನಲ್ಲೇ ಅಭಿಮಾನಿಗಳ ಮನ ಗೆದ್ದಿದ್ದರು. ಇದೀಗ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಸಖತ್ ಗ್ಲಾಮರಸ್ ಆಗಿ ಮಿಂಚಲು ರೆಡಿಯಾಗಿದ್ದಾರೆ. ಕೆಲವು ವರ್ಷಗಳಿಂದ ಸಿನಿಮಾಗಳಿಂದ ದೂರವಿರುವ ನಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಆಗಾಗ ತಮ್ಮ ಹೊಸ ಹೊಸ ಫೋಟೋ ಶೂಟ್ ಗಳನ್ನು ನಟಿ ಶೇರ್ ಮಾಡುತ್ತಿರುತ್ತಾರೆ. ಒಂದು ಕಾಲದಲ್ಲಿ ಚಬ್ಬಿಯಾಗಿದ್ದ ನಟಿ ಇದೀಗ ಸಖತ್ ಸ್ಲಿಮ್ ಆಗಿದ್ದಾರೆ. ಹಿಂದೆಂದೂ ಕಾಣದಷ್ಟು ಬ್ಯೂಟಿಫುಲ್ ಆಗಿದ್ದು ನಟಿಯ ಲೇಟೆಸ್ಟ್ ಫೋಟೋಗಳು ವೈರಲ್ ಆಗಿದೆ. ಕನ್ನಡದಲ್ಲಿ ಪುನೀತ್ ರಾಜ್ ಕುಮಾರ್ ಜೊತೆ ಮೌರ್ಯ ಹಾಗೂ ಅರಸು…