ಯೂಟ್ಯೂಬರ್ ಹಾಗೂ ಬಿಗ್ ಬಾಸ್ ಒಟಿಟಿ ವಿನ್ನರ್ ಎಲ್ವಿಶ್ ಯಾದವ್‌ನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ, ನೋಯ್ಡಾ ಪೊಲೀಸರು ಹಾವಿನ ವಿಷದೊಂದಿಗೆ 5 ಜನರನ್ನು ಬಂಧಿಸಿದ್ದರು. ಕಳೆದ ವರ್ಷ, ನೋಯ್ಡಾ ಪೊಲೀಸರು ಸೆಕ್ಟರ್ 39 ರಲ್ಲಿ ಈ ಪ್ರಕರಣದ ಕುರಿತು ಎಫ್‌ಐಆರ್ ದಾಖಲಿಸಿದ್ದರು, ಇಂದು ಎಲ್ವಿಶ್ ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಅದರ ಬೆನ್ನಲ್ಲಿಯೇ ಅವರನ್ನು ಬಂಧಿಸಲಾಗಿದೆ. ಸ್ವಲ್ಪ ಸಮಯದ ನಂತರ ಎಲ್ವಿಶ್ ಯಾದವ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಘಟನೆ ಹಿನ್ನೆಲೆ : ಕಳೆದ ವರ್ಷ ನವೆಂಬರ್ 8 ರಂದು ನೋಯ್ಡಾ ಪೊಲೀಸರು ರೇವ್ ಪಾರ್ಟಿಯಲ್ಲಿ ಹಾವಿನ ವಿಷವನ್ನು ಬಳಸಿದ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಯೂಟ್ಯೂಬರ್ ಎಲ್ವಿಶ್ ಯಾದವ್ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಪೊಲೀಸರು ಐವರನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Author: Author AIN
ಇಂದು ನವರಸ ನಾಯಕ ಜಗ್ಗೇಶ್ ಅವರ ಹುಟ್ಟುಹಬ್ಬ. 61ನೇ ವರ್ಷದ ಕಾಲಿಟ್ಟಿರುವ ಜಗ್ಗೇಶ್ ಮಂತ್ರಾಲಯ ದೇವಸ್ಥಾನದಿಂದಲೇ ವಿಶೇಷ ವಿಡಿಯೊ ಮಾಡಿ ಹಲವು ವಿಚಾರ ಹಂಚಿಕೊಂಡಿದ್ದಾರೆ. ಇದೇ ವೇಳೆ ವರ್ತೂರ್ ಸಂತೋಷ್ ಬಗ್ಗೆ ಜಗ್ಗೇಶ್ ಆಡಿದ ಮಾತುಗಳು ಹಾಗೂ ‘ರಂಗನಾಯಕ’ ಸಿನಿಮಾದ ಬಗ್ಗೆಯೂ ಮಾತನಾಡಿದ್ದಾರೆ. ಜಗ್ಗೇಶ್ ಮಾತನಾಡಿ ʻʻಮನುಷ್ಯನ ಜೀವನ ತುಂಬ ಶ್ರೇಷ್ಠವಾದದ್ದು. 60 ವರ್ಷ ಬಹಳ ದೊಡ್ಡ ಆಯಸ್ಸು. 61ಕ್ಕೆ ಕಾಲಿಟ್ಟಿದ್ದೇನೆ. ತಾಯಿಯ ಮಾರ್ಗದರ್ಶನದಿಂದ ಇಲ್ಲಿಯವರೆಗೆ ಬಂದೆ. ತಾಯಿ ಎನ್ನುವವಳು ಎಲ್ಲರಿಗೂ ಪ್ರಥಮ ಗುರು. ಎಲ್ಲ ಬಂಧುಗಳಿಗೆ ಹೇಳೋದು ಒಂದೇ ತಂದೆ ತಾಯಿಗಿಂತ ದೇವರು ಯಾರೂ ಇಲ್ಲ. ತಂದೆ ತಾಯಿಗ ಬಗ್ಗೆ ಗೌರವ ಹೆಚ್ಚು ಮಾಡ್ಕೋಬೇಕು. 1980ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟೆ. ನನ್ನ ರಾಯರ ಕೃಪೆಯಿಂದ ಇಲ್ಲಿಯವರೆಗೆ ಬಂದೆ. ತುಂಬ ಮನಸ್ಸಿನಲ್ಲಿ ಬಹಳ ದಿನದಿಂದ ಹೇಳಬೇಕು ಅಂತಿದ್ದೆ. ನಾನು ನೇರ ನುಡಿ ಮಾತಾಡ್ತೇನೆ. ಮನಸ್ಸಿನಲ್ಲಿ ಏನಿಲ್ಲ. ಹಳ್ಳಿಯವನು ನಾನು. ರಾಜ್‌ಕುಮಾರ್ ಅವರು ಕೂಡ ಎಷ್ಟೇ ದೊಡ್ಡವಾಗಿದ್ದರೂ ಹಳ್ಳಿ ಶೈಲಿಯಲ್ಲೇ ಮಾತನಾಡುತ್ತಿದ್ದರು. ಯಾವತ್ತಾದರೂ ನಾನು…
ಇಂದಿಗೂ ಲಕ್ಷಾಂತರ ಮಂದಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಲ್ಲಿದ್ದಾರೆ. ಅಂತೆಯೇ ಪುನೀತ್ ಪತ್ನಿ ಅಶ್ವಿನಿ ಪತಿಯ ನೆನಪಿನಲ್ಲೇ ಜೀವನ ನಡೆಸುತ್ತಿದ್ದಾರೆ. ಅಪ್ಪು ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿಕೊಂಡಿದ್ದಾರೆ. ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ ನಮ್ಮ ಹೃದಯಾಂತರಾಳವನ್ನು ಬೆಳಗಿಸುತ್ತಲೇ ಇದ್ದಾರೆ. ಅಪ್ಪು ಅವರು ಮಾನವೀಯತೆಯಲ್ಲಿ ಇರಿಸಿದ್ದ ಅಚಲ ಬದ್ಧತೆ ಅವರ ಹಾದಿಯಲ್ಲಿ ನಡೆಯಲು ನಮಗೆ ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಅಪ್ಪು ಕುರಿತು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪೋಸ್ಟ್ ಮಾಡಿದ್ದಾರೆ. ಪುನೀತ್ ನಿಧನದ ಬಳಿಕ ಪ್ರತಿಯೊಂದರ ಜವಬ್ದಾರಿಯನ್ನು ಅಶ್ವಿನಿ ನಿಭಾಯಿಸುತ್ತಿದ್ದಾರೆ. ಪಿಆರ್‌ಕೆ ಸಂಸ್ಥೆ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ. ಈ ಮೂಲಕ ಅಶ್ವಿನಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು ಅಪ್ಪು ಕನಸನ್ನು ನನಸು ಮಾಡುತ್ತಿದ್ದಾರೆ.
ಮಹಿಳೆಯರು ಸ್ವಾವಲಂಭಿಯಾಗಿ ಬದುಕಬೇಕು ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಮಹಿಳೆಯರಿಗೆ ಸಾಕಷ್ಟು ನೆರವು ನೀಡುತ್ತಿದೆ. ಅಂತೆಯೇ ಕೇಂದ್ರ ಸರ್ಕಾರವು ಮಹಿಳೆಯರಿಗೆ ಲಕ್ ಪತಿ ದೀದಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ 5 ಲಕ್ಷ ರೂಪಾಯಿಗಳವರೆಗೆ ಸಾಲ ನೀಡುತ್ತಿದೆ. ಇದು ಬಡ್ಡಿ ರಹಿತವಾಗಿದ್ದು ಯಾವುದೇ ಬಡ್ಡಿ ನೀಡುವ ಅವಶ್ಯಕತೆ ಇರುವುದಿಲ್ಲ.. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವರನ್ನು ಮುಂದೆ ತರುವುದು ಲಕ್ ಪತಿ ದೀದಿ ಯೋಜನೆಯ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಡಿ, ದೇಶಾದ್ಯಂತ ಹಳ್ಳಿಗಳಲ್ಲಿ 3 ಕೋಟಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗುತ್ತದೆ. ಇದಲ್ಲದೆ, ಈ ಯೋಜನೆಯಡಿ (ಲಖ್ಪತಿ ದೀದಿ ಯೋಜನೆ) ಮಹಿಳೆಯರು ಯಾವುದೇ ಬಡ್ಡಿಯಿಲ್ಲದೆ 1 ಲಕ್ಷದಿಂದ 5 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯುತ್ತಾರೆ. ಇದರೊಂದಿಗೆ, ಸರ್ಕಾರವು ಅವರಿಗೆ ಉತ್ತಮ ಮಾರುಕಟ್ಟೆ ಬೆಂಬಲವನ್ನು ಒದಗಿಸುತ್ತದೆ. ಇದಕ್ಕಾಗಿ, ಮಹಿಳೆಯರು ಸ್ವಸಹಾಯ ಗುಂಪುಗಳೊಂದಿಗೆ ಸಂಬಂಧ ಹೊಂದಿರುವುದು ಅವಶ್ಯಕ. ಅಲ್ಲಿ ಅವರಿಗೆ ಸರ್ಕಾರವು ಆರ್ಥಿಕ ಮತ್ತು…
ಐಪಿಎಲ್ 17ನೇ ಆವೃತ್ತಿ ಶುರುವಾಗಲು ಇನ್ನೇನು ಕೆಲ ದಿನಗಳ ಮಾತ್ರವೇ ಬಾಕಿಯಿದೆ. ಮಾರ್ಚ್ 19ಕ್ಕೆ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮವಿದ್ದು ಮೊದಲ ಪ್ರೋಮೋದಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದರು. ಬಳಿಕ ಅಶ್ವಿನಿ ಪುನೀತ್ ರಾಜ್‌ಕುಮಾರ್, ಶಿವರಾಜ್‌ಕುಮಾರ್ ಕಾಣಿಸಿಕೊಳ್ಳುವ ಮೂಲಕ ಆರ್‌ಸಿಬಿ ಹೆಸರು ಬದಲಿಸುವ ಬಗ್ಗೆ ಸುಳಿವು ನೀಡಿದ್ದರು. ಇದೀಗ ಕಿಚ್ಚ ಸುದೀಪ್ ಕೂಡ ಆರ್‌ಸಿಬಿ ಹೊಸ ಪ್ರೋಮೋದಲ್ಲಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್ ಬಾಕ್ಸ್ ಈವೆಂಟ್ ಕುರಿತ ಪ್ರೋಮೊದಲ್ಲಿ ಸುದೀಪ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಹೋಟೆಲ್‌ನಲ್ಲಿ ಕಿಚ್ಚ ಸ್ಟೈಲ್ ಆಗಿ ಬಂದು ಡೈನಿಂಗ್ ಟೇಬಲ್ ಮೇಲೆ ಕೂರುತ್ತಾರೆ. ಈ ವೇಳೆ ಮೂರು ಇಡ್ಲಿ ಬರತ್ತೆ. ಅದರಲ್ಲಿ ಮೂರನೆ ಇಡ್ಲಿ ಬೇಡ ಎಂದು ಬಳಿಕ ಯಾಕೆ ಅಂತ ಅರ್ಥ ಆಯ್ತಾ? ಎಂದು ಸುದೀಪ್ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಅಭಿಮಾನಿಗಳ ಆರ್ ಸಿ ಬಿ ಹೆಸರು ಬದಲಾಗುವ ಸೂಚನೆಯನ್ನು ಸುದೀಪ್ ನೀಡಿದ್ದಾರೆ. ಆರ್‌ಸಿಬಿ ಐಪಿಎಲ್ ಕ್ರಿಕೆಟ್ ತಂಡದ ಜೊತೆ ಹೊಂಬಾಳೆ ಸಂಸ್ಥೆ ಕೂಡ ಸಾಥ್…
ಪಂಜಾಬಿಯ ಖ್ಯಾತ ಗಾಯಕ ಸಿಧು ಮೂಸೆವಾಲ ಮೃತಪಟ್ಟ ಎರಡು ವರ್ಷಗಳ ಬಳಿಕ ಅವರ ತಾಯಿ ಚರಣ್ ಕೌರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಎರಡು ವರ್ಷಗಳ ಹಿಂದೆ ಸಿಧು ಮೂಸೆವಾಲ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಬಳಿಕ ಚರಣ್ ಕೌರ್ ಮತ್ತೊಮ್ಮೆ ಗಂಡು ಮಗುವಿನ ತಾಯಿಯಾಗಿದ್ದಾರೆ. ಈ ಕುರಿತು ಸಿಧು ಅವರ ತಂದೆ ಬಲ್ಕೌರ್ ಸಿಂಗ್ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಮಗುವಿನೊಂದಿಗಿರುವ ಫೋಟೋ ಹಂಚಿಕೊಂಡಿದ್ದಾರೆ. ಶುಭದೀಪ್‌ನನ್ನು ಪ್ರೀತಿಸುವ ಲಕ್ಷಾಂತರ ಜನರ ಆಶೀರ್ವಾದದಿಂದ ದೇವರು ಶುಭದೀಪ್ ಅವರ ಕಿರಿಯ ಸಹೋದರರನ್ನು ನಮ್ಮ ತೋಳಿಗೆ ಹಾಕಿದ್ದಾನೆ. ವಾಹೆಗುರುಗಳ ಆಶೀರ್ವಾದದಿಂದ ಕುಟುಂಬವು ಆರೋಗ್ಯವಾಗಿದೆ ಎಂದು ಪೋಸ್ಟ್ ಮಾಡುವ ಮೂಲಕ ಮಗುವಿನ ಆಗಮನದ ಸುದ್ದಿಯನ್ನು ತಿಳಿಸಿದ್ದಾರೆ. ಸಿಧು ತಾಯಿ 58ನೇ ವಯಸ್ಸಿನಲ್ಲಿ ಮತ್ತೆ ಗರ್ಭಿಣಿಯಾಗಿದ್ದಾರೆ ಎಂಬ ವಿಷಯ ಎಲ್ಲೆಡೆ ಹರಿದಾಡಿತ್ತು. ಈ ಸುದ್ದಿಯನ್ನು ಚರಣ್ ಕೌರ್ ಸ್ಪಷ್ಟಪಡಿಸಿದ್ದರು. ಸಿಧು ಮೂಸೆವಾಲ ಅವರು ತನ್ನ ತಂದೆ ತಾಯಿಗೆ ಒಬ್ಬನೇ ಮಗ ಆಗಿದ್ದರು. ಅಂತಹ ಪರಿಸ್ಥಿತಿಯಲ್ಲಿ, ತನ್ನ ಮಗನನ್ನು…
ಅಮೆರಿಕದ ಇಂಡಿಯಾನಾ ಮತ್ತು ಓಹಿಯೊ ರಾಜ್ಯದ ಗ್ರಾಮೀಣ ಭಾಗದಲ್ಲಿ ಅಪ್ಪಳಿಸಿದ ಚಂಡಮಾರುತದಿಂದ ಕನಿಷ್ಠ 3 ಮಂದಿ ಮೃತಪಟ್ಟಿದ್ದು 38ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಓಹಿಯೋದ ಲೊಗಾನ್ ಕೌಂಟಿಯಲ್ಲಿ ಮೂರು ಸಾವಿನ ಪ್ರಕರಣ ವರದಿಯಾಗಿದೆ. ಚಂಡಮಾರುತದಿಂದ ವಿದ್ಯುತ್ ಪೂರೈಕೆ ಜಾಲಕ್ಕೆ ಹಾನಿಯಾಗಿರುವುದರಿಂದ ಹಲವೆಡೆ ವಿದ್ಯುತ್ ಸಮಸ್ಯೆ ಕಾಣಿಸಿಕೊಂಡಿದೆ. ಜೊತೆಗೆ ಪರಿಹಾರ ಕಾರ್ಯಾಚರಣೆಗೆ ತೊಡಕಾಗಿದೆ. ಹಲವು ಮನೆಗಳು ಕುಸಿದಿದ್ದು ಇದರಿಂದ ಜನ ಜೀವನ ಅಸ್ತ ವ್ಯಸ್ಥವಾಗಿದೆ. ಭಾರೀ ಗಾತ್ರದ ಮರಗಳು ರಸ್ತೆಗೆ ಉರುಳಿಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಓಹಿಯೋದ ಮುಖ್ಯಾಧಿಕಾರಿ ರ್ಯಾಂಡಲ್ ಡಾಡ್ಸ್ ಹೇಳಿದ್ದಾರೆ. ಪೂರ್ವ ಇಂಡಿಯಾನಾದಲ್ಲಿ ಮೂವರು ನಿಧನರಾಗಿದ್ದು, 38 ಮಂದಿ ಗಾಯಗೊಂಡಿದ್ದು, 22 ಮನೆಗಳು ನಾಶವಾಗಿದ್ದು 100ಕ್ಕೂ ಅಧಿಕ ಮನೆಗಳು ತೀವ್ರವಾಗಿ ಹಾನಿಗೊಳಗಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮಾಲ್ದೀವ್ಸ್ ನಲ್ಲಿ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರನ್ನು ಕಾರ್ಯಾಚರಿಸುತ್ತಿದ್ದ ಭಾರತೀಯ ಸೇನಾ ಸಿಬ್ಬಂದಿಗಳ ಮೊದಲ ತಂಡವು ಭಾರತಕ್ಕೆ ಮರಳಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತಿಳಿಸಿದೆ. ಮಿಲಿಟರಿ ತಂಡದ ಬದಲು ಮಾಲ್ಡೀವ್ಸ್ ನಲ್ಲಿ ನಾಗರಿಕ ತಾಂತ್ರಿಕ ತಜ್ಞರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. ಮಾಲ್ದೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಅವರು ತನ್ನ ದೇಶದಿಂದ ಭಾರತೀಯ ಸೇನಾ ಸಿಬ್ಬಂದಿಗಳ ಮೊದಲ ತಂಡವನ್ನು ವಾಪಸ್ ಕರೆಸಿಕೊಳ್ಳಲು ಮಾ.10ರ ಗಡುವನ್ನು ವಿಧಿಸಿದ್ದರು. ನವಂಬರ್ ನಲ್ಲಿ ಮುಯಿಝ್ಝು ಅಧಿಕಾರಕ್ಕೆ ಬಂದ ಬಳಿಕ ಭಾರತ ಮತ್ತು ಮಾಲ್ದೀವ್ಸ್ ನಡುವಿನ ಸಂಬಂಧಗಳು ಸ್ವಲ್ಪ ಹಳಿತಪ್ಪಿವೆ. ಚೀನಾ ಪರ ನಾಯಕರಾಗಿ ವ್ಯಾಪಕವಾಗಿ ಪರಿಗಣಿಸಲಾಗಿರುವ ಮುಯಿಝ್ಝು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ತನ್ನ ದೇಶದಿಂದ ಭಾರತೀಯ ಸೇನಾ ಸಿಬ್ಬಂದಿಗಳನ್ನು ತೆರವುಗೊಳಿಸುವ ತನ್ನ ಚುನಾವಣಾ ಭರವಸೆಯನ್ನು ಉಳಿಸಿಕೊಳ್ಳುವುದಾಗಿ ತಿಳಿಸಿದರು.
ಪಾಕಿಸ್ತಾನದ ಉತ್ತರ ವಜಿರಿಸ್ತಾನ್ ಜಿಲ್ಲೆಯ ಮಿರ್ ಅಲಿ ಪ್ರದೇಶದ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದು ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಉಲ್ಲೇಖಿಸಿ ಡಾನ್ ವರದಿ ಮಾಡಿದೆ. ಆರು ಭಯೋತ್ಪಾದಕರ ಗುಂಪು ಶನಿವಾರ ಮುಂಜಾನೆ ಉತ್ತರ ವಜಿರಿಸ್ತಾನದ ಮಿರ್ ಅಲಿಯ ಸಾಮಾನ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಪೋಸ್ಟ್ ಮೇಲೆ ದಾಳಿ ನಡೆಸಿದೆ. ಈ ವೇಳೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಆರಂಭಿಕ ದಾಳಿಯಲ್ಲಿ ಮೃತಪಟ್ಟ ಸೈನಿಕರನ್ನು ಹವಿಲ್ದಾರ್ ಸಬೀರ್, ನಾಯಕ್ ಖುರ್ಷಿದ್, ಸಿಪಾಯಿ ನಾಸಿರ್, ಸಿಪಾಯಿ ರಾಜಾ ಮತ್ತು ಸಿಪಾಯಿ ಸಜ್ಜಾದ್ ಎಂದು ಗುರುತಿಸಲಾಗಿದೆ ಎಂದು ಡಾನ್ ವರದಿಯಲ್ಲಿ ಉಲ್ಲೇಖಿಸಿದೆ.
ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ತಾವು ಅಧ್ಯಕ್ಷರಾಗಿ ಆಯ್ಕೆಯಾಗದಿದ್ದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಓಹಿಯೋದ ಡೇಟನ್ ಬಳಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ” ನಾನು ಚುನಾಯಿತನಾಗದಿದ್ದರೆ, ದೇಶದಲ್ಲಿ ರಕ್ತಪಾತವಾಗಲಿದೆ” ಎಂದು ಹೇಳಿದ್ದಾಗಿ ಪೊಲಿಟಿಕೊ ವರದಿ ಮಾಡಿದೆ. ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಆಟೋಮೊಬೈಲ್ ಉದ್ಯಮದ ಬಗ್ಗೆ ದೂರುತ್ತಿರುವುದರಿಂದ ಟ್ರಂಪ್ ಅವರ ಹೇಳಿಕೆಗಳ ನಿಖರವಾದ ಅರ್ಥವೇನು ಎಂಬುದು ಸ್ಪಷ್ಟವಾಗಿಲ್ಲ. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತಾವು ಮತ್ತೆ ಆಯ್ಕೆಯಾದರೆ ಯುಎಸ್ ಗೆ ಆಮದು ಮಾಡಿಕೊಳ್ಳುವ ಯಾವುದೇ ವಾಹನಗಳನ್ನು ಚೀನಾ ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ. ನವೆಂಬರ್ ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಮುಂಚಿತವಾಗಿ ಯುಎಸ್ ಅಧ್ಯಕ್ಷ ಜೋ ಬೈಡನ್ ವಿರುದ್ಧ ತಮ್ಮ ಪ್ರಕರಣವನ್ನು ಪ್ರಸ್ತುತಪಡಿಸಲು ಟ್ರಂಪ್ ಆಗಾಗ್ಗೆ ರಾಷ್ಟ್ರದ ಕರಾಳ ಚಿತ್ರಣವನ್ನು ಪ್ರದರ್ಶಿಸುತ್ತಾರೆ. ಜನವರಿ 6, 2021 ರಂದು ಕ್ಯಾಪಿಟಲ್ ಮೇಲಿನ ದಾಳಿಗೆ ಮುಂಚಿತವಾಗಿ 2020 ರ ಅಧ್ಯಕ್ಷೀಯ ಚುನಾವಣಾ ಫಲಿತಾಂಶಗಳನ್ನು ಉರುಳಿಸುವ…