ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಯಾಗಬೇಕೆಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಒತ್ತಾಯಿಸಿದ್ದಾರೆ. ಸುಮಾರು ಒಂದು ವಾರದಲ್ಲಿ ಪ್ರಾರಂಭವಾಗುವ ಮುಸ್ಲಿಂ ಉಪವಾಸ ತಿಂಗಳಾದ ರಂಜಾನ್ಗೆ ಮುಂಚಿತವಾಗಿ ಕದನ ವಿರಾಮವನ್ನು ಘೋಷಿಸಲು ಅಮೇರಿಕಾ ಅಧ್ಯಕ್ಷ ಒತ್ತಡ ಹೇರಿದ ನಂತರ ಹ್ಯಾರಿಸ್ ಕೂಡ ಕದರ ವಿರಾಮ ಜಾರಿಯಾಗಬೇಕೆಂದು ಆಗ್ರಹಿಸಿದ್ದಾರೆ. ಫೆಲೆಸ್ತೀನ್ ಭೂಪ್ರದೇಶದಲ್ಲಿ ಭಾರಿ ಹೋರಾಟ ನಡೆಯುತ್ತಿರುವ ಕಾರಣ ಪ್ರಮುಖ ಮಿತ್ರ ಇಸ್ರೇಲ್ ಮೇಲೆ ಕಮಲಾ ಹ್ಯಾರಿಸ್ ಒತ್ತಡವನ್ನು ಹೆಚ್ಚಿಸಿದ್ದಾರೆ. ಐದು ತಿಂಗಳ ಯುದ್ಧವನ್ನು ಸ್ಥಗಿತಗೊಳಿಸುವ ಪ್ರಸ್ತಾಪದ ಬಗ್ಗೆ ಇತ್ತೀಚಿನ ಸುತ್ತಿನ ಮಾತುಕತೆಗಾಗಿ ಯುನೈಟೆಡ್ ಸ್ಟೇಟ್ಸ್, ಕತಾರ್ ಮತ್ತು ಹಮಾಸ್ ರಾಯಭಾರಿಗಳು ಕೈರೋದಲ್ಲಿದ್ದರು. ಅಮೆರಿಕದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಇಸ್ರೇಲ್ ಈ ಷರತ್ತುಗಳನ್ನು ವ್ಯಾಪಕವಾಗಿ ಒಪ್ಪಿಕೊಂಡಿದೆ, ಇದು ಸಹಾಯ ವಿತರಣೆಯನ್ನು ಹೆಚ್ಚಿಸುತ್ತದೆ ಮತ್ತು ಪ್ಯಾಲೆಸ್ಟೈನ್ ಕೈದಿಗಳಿಗೆ ಒತ್ತೆಯಾಳುಗಳ ವಿನಿಮಯವನ್ನು ನೋಡುತ್ತದೆ. ಹಾನಿಗೊಳಗಾದ ಪ್ರದೇಶದಿಂದ ಇಸ್ರೇಲಿ ಪಡೆಗಳು ಸಂಪೂರ್ಣವಾಗಿ ಹಿಂದೆ ಸರಿಯಬೇಕು ಎಂದು ಹಮಾಸ್ ಒತ್ತಾಯಿಸುವುದು ಸೇರಿದಂತೆ ಹಲವಾರು ಅಂಶಗಳು ಉಳಿದಿವೆ ಎಂದು ವರದಿಯಾಗಿದೆ.
Author: Author AIN
‘ಪ್ರೇಮಲೋಕ’ ಅಂದ್ರೆ ಸಾಕು ರವಿಚಂದ್ರನ್ ಮುಖ ಕಣ್ಣ ಮುಂದೆ ಬರುತ್ತೆ. 1987ರಲ್ಲಿ ರಿಲೀಸ್ ಆದ ಪ್ರೇಮಲೋಕ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಗಿತ್ತು. ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದ ಈ ಚಿತ್ರದಿಂದ ರವಿಚಂದ್ರನ್ ಖ್ಯಾತಿ ಮತ್ತಷ್ಟು ಹೆಚ್ಚಾಗಿತ್ತು. ಇದೀಗ ರವಿಚಂದ್ರನ್ ಪ್ರೇಮಲೋಕ 2 ಮಾಡಲು ಹೊರಟ್ಟಿದ್ದಾರೆ. ‘ಮೇ 30ಕ್ಕೆ ಪ್ರೇಮಲೋಕ 2 ಸಿನಿಮಾ ಶುರುವಾಗುತ್ತದೆ. ದೊಡ್ಡ ಮಗ ಮನೋರಂಜನ್ ನಟಿಸುತ್ತಾನೆ. ಚಿಕ್ಕ ಮಗ ಚಿಕ್ಕ ಪಾತ್ರ ಮಾಡುತ್ತಾನೆ. ನಾನು ತಂದೆಯ ಪಾತ್ರ ಮಾಡುತ್ತೇನೆ. 20-25 ಹಾಡುಗಳು ಚಿತ್ರದಲ್ಲಿ ಇರುತ್ತವೆ. ಎಲ್ಲಾ ವಯಸ್ಸಿನವರಿಗೂ ಸಿನಿಮಾ ಇಷ್ಟ ಆಗುತ್ತದೆ. ಸಿನಿಮಾದಲ್ಲಿ ಪ್ರೀತಿ ಮೆಲುಕು ಹಾಕುತ್ತಾ ಹೋಗುತ್ತೀರಾ. ಇಲ್ಲಿ ಜಾತಿ, ರಾಜಕೀಯದ ವಿಚಾರ ಇಲ್ಲ. ಕೇವಲ ಪ್ರೀತಿ ವಿಚಾರ ಇದೆ’ ಎಂದಿದ್ದಾರೆ. ‘ಪ್ರೇಮಲೋಕ 2 ಚಿತ್ರದಲ್ಲಿ ಕಥೆ ನಡೆಯೋದು ಜನರ ಮಧ್ಯೆ. ಪ್ರತಿಯೊಬ್ಬರಿಗೂ ಸಿನಿಮಾದಲ್ಲಿ ನಟಿಸೋ ಅವಕಾಶ ಇದೆ. ಆ ಸಿನಿಮಾದಲ್ಲಿ ಯಾರೆಲ್ಲ ನಟಿಸಬೇಕು ಎಂದಿದ್ದೀರೋ ಇನ್ಸ್ಟಾಗ್ರಾಮ್ ಅಕೌಂಟ್ಗೆ ಫ್ಯಾಮಿಲಿ ಫೋಟೋ…
ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ಪ್ರೀ-ವೆಡ್ಡಿಂಗ್ ಸಮಾರಂಭದಲ್ಲಿ ದೇಶ, ವಿದೇಶದ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಅದ್ದೂರಿಯಾಗಿ ನಡೆಯುತ್ತಿರುವ ಈ ವಿವಾಹ ಪೂರ್ವ ಕಾರ್ಯಕ್ರಮಗಳು ಅಂಬಾನಿ ತವರೂರಾದ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದೆ. ಅನಂತ್ ಪ್ರೀವೆಂಡಿಂಗ್ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ಕೋಟ್ಯಾಧಿಪತಿಗಳು ಸೇರಿದಂತೆ ಸಾಕಷ್ಟು ಮಂದಿ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾದ ಫೇಸ್‌ಬುಕ್ ಸಹ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ ಪತ್ನಿ ಅನಂತ್ ಧರಿಸಿದ್ದ ವಾಚ್ ನೋಡಿ ದಿಗ್ಬ್ರಮೆಗೊಂಡಿದ್ದಾರೆ. ಮಾರ್ಕ್ ಜುಕರ್ ಬರ್ಗ ತಮ್ಮ ಪತ್ನಿ ಪ್ರಿಸ್ಸಿಲ್ಲಾ ಚಾನ್ ಜೊತೆ ಅನಂತ್ ಅಂಬಾನಿ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಭಾಗಿ ಆದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊದಲ್ಲಿ, ಜುಕರ್‌ಬರ್ಗ್ ಪತ್ನಿ ಪ್ರಿಸ್ಸಿಲ್ಲಾ ಚಾನ್ ಅವರು ಅನಂತ್ ಅಂಬಾನಿ ಅವರ ಕೈಯಲ್ಲಿರುವ ದುಬಾರಿ ವಾಚ್‌ನಿಂದ ದಿಗ್ಭ್ರಮೆಗೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಅನಂತ್ ಅವರು ಜುಕರ್‌ಬರ್ಗ್ ಮತ್ತು ಅವರ ಪತ್ನಿ ಪ್ರಿಸ್ಸಿಲ್ಲಾ ಅವರೊಂದಿಗೆ ನಿಂತು ಮಾತನಾಡುತ್ತಿದ್ದರು. ಕಾಡಿನಲ್ಲಿ ಒಂದು ಸುತ್ತು…
ಶಹಬಾಜ್ ಷರೀಫ್ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಮತದಾನಕ್ಕೆ ಮುಂಚೆಯೇ, ಅಂಕಿಅಂಶಗಳು ಪಿಎಂಎಲ್-ಎನ್ ಪರವಾಗಿದ್ದು ದೇಶದ ಆಜ್ಞೆಯು ಮತ್ತೊಮ್ಮೆ ಶೆಹಬಾಜ್ ಷರೀಫ್ ಅವರ ಪರವಾಗಿ ಬರುತ್ತದೆ ಎಂದು ಹೇಳಲಾಗಿತ್ತು. ಅದರಂತೆ ಇದೀಗ ಷರೀಫ್ ಮತ್ತೊಮ್ಮೆ ಪಾಕ್ ಪ್ರಧಾನಿಯಾಗಿ ಹುದ್ದೆಗೇರಿದ್ದಾರೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ನಾಯಕ ಒಮರ್ ಅಯೂಬ್ ಖಾನ್ ಸಹ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು ಅವರಿಗೆ ಸೋಲಾಗಿದೆ. ಪಾಕಿಸ್ತಾನದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿಲ್ಲ. ಇದರ ನಂತರ, ನವಾಜ್ ಷರೀಫ್ ಅವರ ಪಕ್ಷವಾದ ಪಿಎಂಎಲ್-ಎನ್ ಪಿಪಿಪಿ ಮತ್ತು ಎಂಕ್ಯೂಎಂ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ನಿರ್ಧರಿಸಿತ್ತು. ಶೆಹಬಾಜ್ ಷರೀಫ್ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರ. ಪಕ್ಷದ ಪರವಾಗಿ ಪ್ರಧಾನಿ ಅಭ್ಯರ್ಥಿಗೆ ನಾಮಪತ್ರ ಸಲ್ಲಿಸಿದ್ದರು. ಶಹಬಾಜ್ ಷರೀಫ್ ಈ ಹಿಂದೆ ಏಪ್ರಿಲ್ 2022 ರಿಂದ ಆಗಸ್ಟ್ 2023 ರವರೆಗೆ ಪಾಕಿಸ್ತಾನದ ಪ್ರಧಾನಿಯಾಗಿದ್ದರು. ಆ ಸಮಯದಲ್ಲಿ…
ಹವಾಮಾನ ವೈಪರೀತ್ಯದಿಂದಾಗಿ ಪಾಕಿಸ್ತಾನದ ಜನತೆ ಕಂಗೆಟ್ಟಿದ್ದಾರೆ. ಪಾಕಿಸ್ತಾನದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜನ ಜೀವನ ಅಸ್ಥವ್ಯಸ್ಥವಾಗಿದ್ದು ಕಳೆದ 48 ಗಂಟೆಗಳಲ್ಲಿ ಸುಮಾರು 37ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಪಾಕಿಸ್ತಾನದಾದ್ಯಂತ ಮಳೆಯಿಂದಾಗಿ, ಮನೆಗಳು ಕುಸಿದ್ದಿದ್ದು ಹಲವೆಡೆ ಭೂಕುಸಿತದ ಘಟನೆಗಳು ಕಂಡುಬಂದಿವೆ. ವಾಯವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹಲವು ರಸ್ತೆಗಳು ಬಂದ್ ಆಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 25ಕ್ಕೂ ಹೆಚ್ಚು ಜನರು, ಹೆಚ್ಚಾಗಿ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ನಿರ್ಣಾಯಕ ಸಮಯದಲ್ಲಿ ಮಳೆಯಿಂದ ಹಾನಿಗೊಳಗಾದ ಜನರಿಗೆ ನೆರವಾಗಲಿದ್ದು ಮತ್ತು ಅವರ ನಷ್ಟಕ್ಕೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಅಲಿ ಅಮೀನ್ ಗಂದಪುರ್ ತಿಳಿಸಿದ್ದಾರೆ. ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರವಾಹವು ಕರಾವಳಿ ನಗರವಾದ ಗ್ವಾದರ್ ಅನ್ನು ಮುಳುಗಿಸಿದ್ದು ಇದರಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಜನರನ್ನು ರಕ್ಷಿಸಲು ದೋಣಿಗಳನ್ನು…
ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ಪ್ರೀ-ವೆಡ್ಡಿಂಗ್ ಸಮಾರಂಭದಲ್ಲಿ ದೇಶ, ವಿದೇಶದ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಅದ್ದೂರಿಯಾಗಿ ನಡೆಯುತ್ತಿರುವ ಈ ವಿವಾಹ ಪೂರ್ವ ಕಾರ್ಯಕ್ರಮಗಳು ಅಂಬಾನಿ ತವರೂರಾದ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದೆ. ಈ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಶಾರುಖ್ ಖಾನ್ ವೇದಿಕೆಗೆ ಎಂಟ್ರಿಕೊಡ್ತಿದ್ದಂತೆ ಜೈಶ್ರೀರಾಮ್ ಘೋಷಣೆ ಕೂಗಿದ್ದು ಇದು ಸಖತ್ ವೈರಲ್ ಆಗಿದೆ. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆಗೆ ಕೋಟಿ ಕೋಟಿ ಖರ್ಚು ಮಾಡಲಾಗುತ್ತಿದೆ. ಬಾಲಿವುಡ್ ನ ಸೆಲೆಬ್ರಿಟಗಳು ಸ್ಟೇಜ್ ಮೇಲೆ ಹಾಡಿ ಕುಣಿದಾಡಿದ್ದಾರೆ. ಇನ್ನೂ ಖ್ಯಾತ ಗಾಯಕಿ ರಿಯಾನಾ ಕೂಡ ದುಭಾರಿ ಸಂಭಾವನೆಯನ್ನೇ ಪಡೆದು ಕಾರ್ಯಕ್ರಮದಲ್ಲಿ ಹಾಡಿದ್ದರು. ಇದು ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಕಾರ್ಯಕ್ರಮದಲ್ಲಿ ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ನಟ ಶಾರುಖ್ ಖಾನ್ ಅವರು ‘ಜೈ ಶ್ರೀರಾಮ್’ ಎಂದು ಘೋಷ ಕೂಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಗಿ ವೈರಲ್ ಆಗಿದೆ. ಶ್ರೇಷ್ಠ ತಾರೆಯರ ಪ್ರದರ್ಶನಗಳನ್ನು ಹೊರತುಪಡಿಸಿ, ಮಾರ್ಚ್ 2 ರ ಸಂಗೀತ…
ಮದುವೆ ಹೋಗಬೇಕು ಎಂದು ಜನರಲ್ ಟಿಕೆಟ್ ಪಡೆದ ಮಹಿಳೆ ತಿಳಿಯದೆ ಎಸಿ ಕೋಚ್ ಗೆ ಹತ್ತಿದ್ದಕ್ಕೆ ಕೋಪಗೊಂಡ ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರ ದಬ್ಬಿರುವ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಫರೀದಾಬಾದ್‌ನ ಎಸ್‌ಜಿಜೆಎಂ ನಗರದ ನಿವಾಸಿ 40 ವರ್ಷದ ಭಾವನ ಎಂಬ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಕ್ಕೆ ತಳ್ಳಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆ ಜನರಲ್ ಟಿಕೇಟ್ ಪಡೆದು ಗೊತ್ತಿಲ್ಲದೆ ಎಸಿ ಕೋಚ್‌ಗೆ ಹತ್ತಿದ್ದಾರೆ. ಚೆಕ್ಕಿಂಗ್ ಮಾಡಲು ಬಂದ ಟಿಟಿಇ, ಆಕೆಯ ಬ್ಯಾಗ್ ಮತ್ತು ಇತರ ವಸ್ತುಗಳನ್ನು ಕಂಡು ಗದರಿದ್ದಾನೆ. ಬಳಿಕ ಟಿಕೆಟ್ ನೋಡಿ, ಇಲ್ಲಿ ಏಕೆ ಹತ್ತಿದೆ ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ಉತ್ತರಿಸಿದ ಮಹಿಳೆ ದಂಡವನ್ನು ತೆಗೆದುಕೊಳ್ಳಿ ತಿಳಿಯಲಿಲ್ಲ ಎಂದರು ಸುಮ್ಮನಾಗದ ಅಧಿಕಾರಿ, ಆಕೆಯ ಲಗೇಜ್ ಎಸೆದು, ಏಕಾಏಕಿ ಚಲಿಸುವ ರೈಲಿನಿಂದ ಹೊರದಬ್ಬಿದ್ದಾನೆ. ಮೊದಲು ಮಹಿಳೆಯ ಸಾಮಾನು ಸೇರಿದಂತೆ ಇತರೆ ವಸ್ತುಗಳನ್ನು ಹೊರಗೆ ಎಸೆದ…
ನಟಿ ಸಮಂತಾ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ. ತಮ್ಮ ನಟನೆ ಹಾಗೂ ಸೌಂದರ್ಯದಿಂದ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಗೆದ್ದಿರುವ ಚೆಲುವೆ ಸದ್ಯ ನಟನೆಯಿಂದ ಕೊಂಚ ಬ್ರೇಕ್ ಪಡೆದುಕೊಂಡಿದ್ದಾರೆ. ಆರೋಗ್ಯದ ಸಮಸ್ಯೆಯ ಕಾರಣದಿಂದಾಗಿ ನಟನೆಯಿಂದ ಬ್ರೇಕ್ ಪಡೆದುಕೊಂಡಿರುವ ನಟಿ ಯೋಗ, ಧ್ಯಾನದತ್ತ ಮುಖ ಮಾಡಿದ್ದಾರೆ. ಸಿನಿಮಾಗಳಿಂದ ದೂರವಿದ್ದರು ಸಾಮಾಜಿಕ ಜಾಲಾ ತಾಣದ ಮೂಲಕ ನಟಿ ಅಭಿಮಾನಿಗಳಿಗೆ ಹತ್ತಿರುವಾಗಿದ್ದಾರೆ. ತಮ್ಮ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತ ಮಾಹಿತಿ ಹಂಚಿಕೊಳ್ಳುವ ಸಮಂತಾ ಇದೀಗ ತಮ್ಮ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಮಂತಾ ವೈಟ್ ಶರ್ಟ್, ಡೆನಿಮ್ ಪ್ಯಾಟ್ ತೊಟ್ಟು ಆಕರ್ಷಕವಾಗಿ ಪೋಸ್ ಕೊಟ್ಟಿದ್ದಾರೆ. ಸಮಂತಾ ನಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಕೆಲ ಕಾಲ ಸಿನಿಮಾ ಕೆಲಸದಿಂದ ಬ್ರೇಕ್ ತೆಗೆದುಕೊಂಡಿದ್ರು. ಇದೀಗ ಸಮಂತಾ ಮತ್ತೆ ಸಿನಿಮಾಗೆ ರೀ ಎಂಟ್ರಿ ಕೊಡಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸೌತ್ ಸಿನಿಮಾ ಇಂಡಸ್ಟ್ರಿಯ ಟಾಪ್ ನಟಿಯರಲ್ಲಿ ಸಮಂತಾ…
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೊತೆಗೆ ತಮ್ಮ ಸರಳತೆಯ ಮೂಲಕವೂ ಜನಗಳ ಮನಸ್ಸು ಗೆದ್ದಿದ್ದಾರೆ. ರಜನಿ ರಾಜಕೀಯ ಎಂಟ್ರಿಯ ಬಗ್ಗೆ ಅನೌನ್ಸ್ ಮಾಡಿದ್ದರು ಅನಾರೋಗ್ಯದ ಕಾರಣದಿಂದ ರಾಜಕೀಯದಿಂದ ದೂರ ಉಳಿದಿದ್ದಾರೆ. ಇದೀಗ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿಕೊಡದೆಯೇ ಬಡವರ ಸೇವೆಗೆ ಮುಂದಾಗಿದ್ದಾರೆ. ಬಡವರಿಗೆ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಬಡವರಿಗಾಗಿ ಚೆನ್ನೈನಲ್ಲಿ ಬೃಹತ್ ಆಸ್ಪತ್ರೆ ನಿರ್ಮಿಸಲು ಹೊರಟಿದ್ದಾರೆ. ಬಡ ಜನರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಬೃಹತ್ ಆಸ್ಪತ್ರೆ ಕಟ್ಟಿಸಲು ಮುಂದಾಗಿದ್ದಾರೆ. ತಮಿಳುನಾಡಿನ ಚಂಗಲ್ಪಟ್ಟು ಜಿಲ್ಲೆಯ ತಿರುಪ್ಪುರೂರಿನಲ್ಲಿ ಸುಮಾರು 12 ಎಕರೆ ಜಾಗವನ್ನು ಖರೀದಿ ಮಾಡಿದ್ದು ಅಲ್ಲಿ ಆಸ್ಪತ್ರೆ ಕಟ್ಟಿಸಲು ಸೂಪರ್ ಸ್ಟಾರ್ ಮುಂದಾಗಿದ್ದಾರೆ. ಚೆನ್ನೈ ಹಾಗೂ ತಿರುಪ್ಪುರೂರು ನಡುವೆ ಸುಮಾರು 45 ಕಿ.ಮೀ ಅಂತರವಿದ್ದು ಇಲ್ಲಿ ಜಮೀನು ಖರೀದಿಸಿದ್ದಾರೆ. ಈತ್ತೀಚೆಗೆ ಜಮೀನನ್ನು ನೋಂದಣಿ ಕೂಡ ಮಾಡಿಸಿದ್ದರು. ಅಲ್ಲಿಯೇ ಆಸ್ಪತ್ರೆ ಕಟ್ಟುತ್ತಾರೆ ಎಂದು ಹೇಳಲಾಗುತ್ತಿದೆ. ಜಾಗದ ಬಗ್ಗೆ ಇನ್ನೂ ಖಚಿತ ಮಾಹಿತಿ ಹೊರಬರಲಿಲ್ಲವಾದರೂ ಆಸ್ಪತ್ರೆ ಕಟ್ಟುವ…
ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಈ ಭಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಲು ರೆಡಿ ಆಗಿದ್ದಾರೆ. ಬಿಜೆಪಿಯಿಂದ ತಮಗೆ ಟಿಕೆಟ್ ಸಿಗಲಿದೆ ಎನ್ನುವ ಭರವಸೆಯಲ್ಲಿ ಇರುವ ಅವರು ಮಂಡ್ಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಲ್ಲಿ ಭಾರಿಯಾಗುತ್ತಿದ್ದಾರೆ. ಕಳೆದ ಬಾರಿ ಸುಮಲತಾ ಪರವಾಗಿ ಯಶ್ ಹಾಗೂ ದರ್ಶನ್ ಪ್ರಚಾರ ಮಾಡಿದ್ದರು. ಈಗಾಗಲೇ ದರ್ಶನ್ ಅವರು ಸುಮಲತಾ ಪರ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ. ಯಶ್ ಬಗ್ಗೆ ಇಷ್ಟು ದಿನ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ಸಮಲತಾ ಯಶ್ ಪ್ರಚಾರಕ್ಕೆ ಬರುವುದರ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಬಾರಿ ಸಮಲತಾ ಪರ ಯಶ್ ಹಾಗೂ ದರ್ಶನ್ ಪ್ರಚಾರ ಮಾಡಿದಾಗ ಕೆಲವು ಪಕ್ಷಗಳು ಅವರ ವಿರುದ್ಧ ಟೀಕೆ ಮಾಡಿದ್ದವು. ಮಾಜಿ ಸಿಎಂ ಕುಮಾರಸ್ವಾಮಿ ಬಳಕೆ ಮಾಡಿದ ಪದಗಳು ಅವರಿಗೆ ನೋವು ತಂದಿತ್ತು. ಈ ವಿಚಾರವನ್ನು ಸುಮಲತಾ ರಿವೀಲ್ ಮಾಡಿದ್ದಾರೆ. ‘ಚುನಾವಣೆ ಪ್ರಚಾರಕ್ಕೆ ಹೋಗಲ್ಲ ಎಂದು ಯಶ್ ಹೇಳಿದ್ದಾರೆ. ಇದು ನಿಜವೇ’ ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ ಸುಮಲತಾ. ‘ಯಶ್ ಈ ಮಾತನ್ನು…