Author: Author AIN

ಅಮೆರಿಕದ ಸೇಂಟ್‌ ಲೂಯಿಸ್‌ನಲ್ಲಿ ಸ್ನೇಹಿತನನ್ನು ಹತ್ಯೆ ಮಾಡಲಾಗಿದೆ ಎಂದಿರುವ ಕಿರುತೆರೆ ನಟಿ ದೇವೋಲೀನಾ ಭಟ್ಟಾಚಾರ್ಯ, ಕೇಂದ್ರ ಸರ್ಕಾರದ ನೆರವು ಕೋರಿದ್ದಾರೆ. ಸಂಶೋಧನಾ ವಿದ್ಯಾರ್ಥಿಯಾಗಿದ್ದ ತಮ್ಮ ಸ್ನೇಹಿತ ಅಮರನಾಥ್‌ ಘೋಷ್‌ ಅವರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಎಕ್ಸ್‌/ಟ್ವಿಟರ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಟಿ, ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರಿಗೆ ಮನವಿ ಮಾಡಿದ್ದಾರೆ. ‘ನನ್ನ ಸ್ನೇಹಿತ ಅಮರನಾಥ್‌ ಘೋಷ್‌ ಅವರನ್ನು ಸೇಂಟ್‌ ಲೂಯಿಸ್ ಅಕಾಡೆಮಿ ಬಳಿ ಮಂಗಳವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡಿದ್ದ ಘೋಷ್ ಮೂರು ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ. ‘ಆರೋಪಿಯ ವಿವರಗಳು ಬಹಿರಂಗವಾಗಿಲ್ಲ. ಸ್ನೇಹಿತರನ್ನು ಬಿಟ್ಟರೆ, ಹೋರಾಟ ನಡೆಸಲು ಘೋಷ್‌ ಕುಟುಂಬದ ಯಾರೊಬ್ಬರೂ ಇಲ್ಲ. ಒಳ್ಳೆಯ ನೃತ್ಯಗಾರ, ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ಘೋಷ್‌ ಕೋಲ್ಕತ್ತದವನು. ಸಂಜೆ ವಿಹರಿಸುತ್ತಿದ್ದ ವೇಳೆ, ಅಪರಿಚಿತನೊಬ್ಬ ಇದ್ದಕ್ಕಿದ್ದಂತೆ ಹಲವು ಬಾರಿ ಗುಂಡು ಹಾರಿಸಿದ್ದಾನೆ’ ಎಂದು ತಿಳಿಸಿದ್ದಾರೆ. ‘ಅಮೆರಿಕದಲ್ಲಿರುವ…

Read More

‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಾವು ಮದುವೆಯಾಗಿರುವುದರ ಬಗ್ಗೆ ದೀಪಿಕಾ ದಾಸ್ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಕನ್ಪಾರ್ಮ್ ಮಾಡಿದ್ದಾರೆ. ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದು, ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ. ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು. ನಾಗಿಣಿ ಧಾರವಾಹಿಯ ಮೂಲಕ ಖ್ಯಾತಿ ಘಳಿಸಿದ್ದ ದೀಪಿಕಾ ದಾಸ್ ಬಿಗ್ ಬಾಸ್ ಕನ್ನಡದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಬಿಗ್ ಬಾಸ್ ಮನೆಯಲ್ಲಿ ಟಫ್ ಕಾಂಪಿಟೇಟರ್ ಆಗಿದ್ದ ದೀಪಿಕಾ ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್​ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

Read More

ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಆರಂಭದಿಂದಲೂ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿದೆ. ಚಿತ್ರದ ಟೈಟಲ್ ನಿಂದ ಹಿಡಿದು ವಿವಿಧ ಹಂತಗಳಲ್ಲಿ ಪ್ರೇಕ್ಷಕರ ಮನ ಗೆದ್ದಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಸದ್ಯ ರಿಲೀಸ್ ಆಗಿರುವ ಚಿತ್ರದ ಮೋಷನ್ ಪೋಸ್ಟರ್ ಸಖತ್ ಕಲರ್ ಫುಲ್ ಹಾಗೂ ಕ್ರಿಯಾತ್ಮಕವಾಗಿಯೂ ಇದೆ. ಹೆಸರೇ ಕೇಳಿದರೆ ಇದು ಯುವಕ-ಯುವತಿಯರ ಬಗೆಗಿನ ಪ್ರೀತಿ-ಪ್ರೇಮ, ಸ್ನೇಹದ ಕತೆಯುಳ್ಳ ಸಿನಿಮಾ ಎನಿಸುತ್ತದೆ. ಆದರೆ ನಿರ್ದೇಶಕರು ಹೇಳುವಂತೆ ನಿರೀಕ್ಷೆಗಳಿಗೆ ನಿಲುಕದ ವಸ್ತುವನ್ನು ಈ ಸಿನಿಮಾ ಒಳಗೊಂಡಿದೆಯಂತೆ. ಈ ಹಿಂದೆ ಟೈಟಲ್ ಲಾಂಚ್ ಅನ್ನೂ ಸಹ ಪ್ರೇಕ್ಷಕರನ್ನು ಸೆಳೆಯುವಂತೆ ಮಾಡಿದ್ದ ಚಿತ್ರತಂಡ, ಇಂದು ಬೆಳಗ್ಗೆ ಪೋಸ್ಟರ್ ಹಾಗೂ ಸಂಜೆ ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದೆ. ಇದರ ಸುತ್ತ ಈಗೊಂದಷ್ಟು ನಿರೀಕ್ಷೆ ಮತ್ತು ಚರ್ಚೆ ಹುಟ್ಟಿಕೊಂಡಿದೆ. ಇದುವರೆಗೂ ಈ ಸಿನಿಮಾದ ಪಾತ್ರವರ್ಗ ಕಾಣಿಸಿರಲಿಲ್ಲ. ಈ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಕೆಲ ಪಾತ್ರಗಳ…

Read More

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದ ನಟಿ ರಶ್ಮಿಕಾ ಮಂದಣ್ಣ ಸದ್ಯ ದಕ್ಷಿಣ ಭಾರತದ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಬಾಲಿವುಡ್ ನಲ್ಲೂ ಮಿಂಚು ಹರಿಸುತ್ತಿರೋ ಈಕೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸ್ಟಾರ್ ನಟರು ಕೂಡ ಈಕೆಯೇ ತಮ್ಮ ಸಿನಿಮಾದ ನಾಯಕಿಯಾಗ್ಬೇಕು ಎಂದು ದುಂಬಾಲು ಬಿದ್ದಿದ್ದಾರೆ. ಈ ಮಧ್ಯೆ ಸ್ಟಾರ್ ನಟರೊಬ್ಬರು ರಶ್ಮಿಕಾಗಾಗಿ 25 ಕೆಜಿ ತೂಕ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ಯೆಸ್. ರಶ್ಮಿಕಾಗಾಗಿ 25 ಕೆಜಿ ತೂಕ ಹೆಚ್ಚಿಸಿಕೊಳ್ಳಲು ನಟ ವಿಕ್ಕಿ ಕೌಶಲ್ ಮುಂದಾಗಿದ್ದಾರೆ. ವಿಕ್ಕಿ ಕೌಶಲ್ ಚಿತ್ರರಂಗಕ್ಕೆ ಬಂದು ಹಲವು ವರ್ಷಗಳು ಕಳೆದಿವೆ. ಈ ವೇಳೆ ಹಲವು ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿರುವ ವಿಕ್ಕಿ ಕೌಶಲ್ ರಶ್ಮಿಕಾ ಮಂದಣ್ಣ ಜೊತೆ ನಟಿಸಲು 25 ಕೆಜಿ ತೂಕ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ವಿಕ್ಕಿ ಕೌಶಲ್ ಒಂದೇ ರೀತಿಯ ಪಾತ್ರಗಳಿಗೆ ಕಟ್ಟು ಬಿದ್ದವರಲ್ಲ. ಪೋಷಕ ಪಾತ್ರವಾಗಲೀ, ಹೀರೋ ಆಗಿ ಮಿಂಚೋದಾಗಿರಲಿ, ವಿಕ್ಕಿ ಕೌಶಲ್ ನಟಿಸಿ ಪಾತ್ರಗಳಿಗೆ ನ್ಯಾಯ…

Read More

ಸಿಂಪಲ್ ಸುನಿ ನಿರ್ದೇಶನದ ಶರಣ್ ನಟನೆಯ ಅವತಾರ ಪುರುಷ 2 ಚಿತ್ರ ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸಿಂಪಲ್ ಸುನಿ ನಿರ್ದೇಶನದ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಹಿಟ್ ಆದ ಬಳಿಕ ಸುನಿ ನಿರ್ದೇಶನದ ಮುಂದಿನ ಸಿನಿಮಾಗಾಗಿ ಕಾಯ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ದೇಶಕರು ಅನೌನ್ಸ್ ಮಾಡಿದ್ದಾರೆ. ‘ಅವತಾರ ಪುರುಷ’ ಚಿತ್ರದ ಮುಂದುವರಿದ ಭಾಗ ‘ಅವತಾರ ಪುರುಷ 2’ ಚಿತ್ರ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ಶರಣ್ ಹಾಗೂ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ‘ಅವತಾರ ಪುರುಷ’ ಸಿನಿಮಾ 2022ರ ಮೇ 6ರಂದು ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಹಾಸ್ಯದ ಜೊತೆ ಸಸ್ಪೆನ್ಸ್ ಕೂಡ ಇತ್ತು. ಸುನಿ ಮಾಟ ಮಂತ್ರದ ಕಥೆಯನ್ನು ಹೇಳಿದ್ದರು. ಅವರ ಚಿತ್ರಗಳಲ್ಲಿ ಲವ್​ಸ್ಟೋರಿಗಳೇ ಹೆಚ್ಚು ಹೈಲೈಟ್ ಆಗುತ್ತವೆ. ಆದರೆ, ಈ ಚಿತ್ರದಲ್ಲಿ…

Read More

ಕೋಟ್ಯಾಧಿಪತಿ ಮುಕೇಶ್ ಅಂಬಾನಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಮದುವೆಗೆ ಕೋಟಿ ಕೋಟಿ ಖರ್ಚು ಮಾಡುತ್ತಿದ್ದು ದೇಶ ವಿದೇಶದ ಸೆಲೆಬ್ರಿಟಿಗಳು ಮನರಂಜನಾ ಕಾರ್ಯಕ್ರಮ ನೀಡುತ್ತಾರೆ. ಅಂಥ ಸೆಲೆಬ್ರಿಟಿಗಳಿಗೆ ದೊಡ್ಡ ಮೊತ್ತದ ಸಂಭಾವನೆ ನೀಡಲಾಗುತ್ತದೆ. ಜನಪ್ರಿಯ ಗಾಯಕಿ ರಿಹಾನಾ ಅನಂತ್ ಅಂಬಾನಿ ಮದುವೆಯಲ್ಲಿ ಮನರಂಜನೆ ನೀಡಲಿದ್ದಾರೆ. ಅದಕ್ಕಾಗಿ ಆಕೆಗೆ ನೀಡುತ್ತಿರುವ ಸಂಭಾವನೆ 74 ಕೋಟಿ ರೂಪಾಯಿ. ವಿದೇಶದಿಂದ ರಿಹಾನಾ ಅವರನ್ನು ಮದುವೆಯಲ್ಲಿ ಮನರಂಜನೆ ನೀಡಲು ಕರೆಸಲಾಗಿದೆ. ಅವರಿಗೆ ಬರೋಬ್ಬರಿ 74 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂದು ಸುದ್ದಿ ಕೇಳಿ ಪ್ರತಿಯೊಬ್ಬರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಾರ್ಬೆಡೋಸ್​ ದೇಶದಿಂದ ಬಂದಿರುವ ರಿಹಾನಾ ಅವರಿಗೆ 36 ವರ್ಷ ವಯಸ್ಸಾಗಿದ್ದು ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಹಾಡುಗಳು ಸೂಪರ್​ ಹಿಟ್​ ಆಗಿವೆ. ರಿಹಾನಾ ಅವರ ಬಗ್ಗೆ ಯುವ ಜನತೆಗೆ ಸಿಕ್ಕಾಪಟ್ಟೆ ಕ್ರೇಜ್​ ಇದೆ. ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಮದುವೆಯಲ್ಲಿ ರಿಹಾನಾ ಮನರಂಜನಾ ಕಾರ್ಯಕ್ರಮ ನೀಡಲಿದ್ದಾರೆ. ವಿಶ್ವದ ಅತಿ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ…

Read More

ಟೆಕ್ಸಾಸ್ ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸುಮಾರು ಒಂದು ಮಿಲಿಯನ್ ಎಕರೆಗಳಷ್ಟು ಕಾಡು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಇದು ಟೆಕ್ಸಾಸ್ ಸ್ಮೋಕ್‌ಹೌಸ್ ಕ್ರೀಕ್ ಫೈರ್ 2006 ರ ಪೂರ್ವ ಅಮರಿಲ್ಲೊ ಕಾಂಪ್ಲೆಕ್ಸ್ ಬೆಂಕಿಯನ್ನು ಮೀರಿಸಿದ್ದು, ಇದುವರೆಗೆ ದಾಖಲಾದ ರಾಜ್ಯದ ಅತಿದೊಡ್ಡ ಕಾಡ್ಗಿಚ್ಚು ಇದಾಗಿದೆ. ಅಗ್ನಿಶಾಮಕ ದಳದ ಅಧಿಕಾರಿಯಗಳು ಶತಪ್ರಯತ್ನ ನಡೆಸಿದರು ಕೇವಲ 3% ಬೆಂಕಿಯನ್ನು ಮಾತ್ರವೇ ನಿಯಂತ್ರಿಸಲು ಸಾಧ್ಯವಾಯಿತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಹಚಿನ್ಸನ್ ಕೌಂಟಿಯ ಬೆಂಕಿಯು 83 ವರ್ಷದ ಜಾಯ್ಸ್ ಬ್ಲಾಂಕೆನ್‌ಶಿಪ್‌ನ ಜೀವವನ್ನು ಬಲಿ ತೆಗೆದುಕೊಂಡಿತು, ಬೆಂಕಿಯು ಆಕೆಯ ಮನೆಯನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ಅವರ ಸಂಬಂಧಿಕರು ಬಹಿರಂಗಪಡಿಸಿದ್ದಾರೆ. ಬೆಂಕಿಯು ಉತ್ತರ ಟೆಕ್ಸಾಸ್‌ನಾದ್ಯಂತ ವ್ಯಾಪಕ ನಾಶವನ್ನು ಉಂಟುಮಾಡಿತು. ಈ ಮಾರಣಾಂತಿಕ ಘಟನೆಯು ಟೆಕ್ಸಾಸ್ ಪ್ಯಾನ್‌ಹ್ಯಾಂಡಲ್‌ನಲ್ಲಿ ಉಲ್ಬಣಗೊಳ್ಳುತ್ತಿರುವ ಐದು ಮಾರಣಾಂತಿಕ ಕಾಡ್ಗಿಚ್ಚುಗಳಲ್ಲಿ ಒಂದಾಗಿದೆ, ಇದು ಹಲವಾರು ಮನೆಗಳು, ಜಾನುವಾರುಗಳು ಮತ್ತು ಜೀವನೋಪಾಯಕ್ಕೆ ಗಂಭೀರ ಅಪಾಯವನ್ನು ಉಂಟು ಮಾಡುತ್ತದೆ.

Read More

ತ್ರಿಪುರಾ ಮೂಲದ ಮಾಜಿ ಮಿಸ್‌ ಇಂಡಿಯಾ ರಿಂಕಿ ಚಕ್ಮಾ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಿಂಕಿ ಚಿಕತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 28 ವರ್ಷದ ರಿಂಕಿ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರಿಂಕಿ ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸಾ ವಿಧಾನಗಳನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದರು. ಅಲ್ಲದೆ ಶೀಘ್ರವೇ ಗುಣಮುಖವಾಗಿ ಮತ್ತೆ ಸಹಜ ಜೀವನಕ್ಕೆ ಮರಳುತ್ತೇನೆ ಅನ್ನೋ ಭರವಸೆಯಲ್ಲಿದ್ದರು. ಆದ್ರೆ ಆಕೆ ಗುಣಮುಖಳಾಗುವುದಿಲ್ಲ ಎಂದು ತಿಳಿದ ನಂತರ ತನಗೆ ಸ್ಥನ ಕ್ಯಾನ್ಸರ್‌ ಇರೋದನ್ನ ಬಹಿರಂಗಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಫೆಮಿನಾ ಮಿಸ್‌ ಇಂಡಿಯಾ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಕಷ್ಟದ ಸಮಯದಲ್ಲಿ ಚಕ್ಮಾ ಕುಟುಂಬಸ್ಥರು ಹಾಗೂ ಆಪ್ತರಿಗೆ ದುಃಖ ತಡೆದುಕೊಳ್ಳುವ ಶಕ್ತಿ ದೇವರು ಕೊಡಲಿ ಎಂದು ಬಂಧುಮಿತ್ರರು ಸಂತಾಪ ಸೂಚಿಸಿದ್ದಾರೆ. ಚಕ್ಮಾ ಮೊದಲ ಬಾರಿಗೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡಿತು, ತಲೆ ಭಾಗದಲ್ಲಿ ಗಡ್ಡೆ ಬೆಳೆಯಿತು. ಇದರಿಂದ ಕಿಮೋಥೆರಪಿಗೆ ಒಳಗಾಗಿದ್ದರು. ಈ ವೇಳೆ…

Read More

ನೀವು ಏರ್ ಟೆಲ್, ಜಿಯೋ ಗ್ರಾಹಕರಾಗಿದ್ದರೆ ನಿಮಗೆ ಈ ಸುದ್ದಿ ಕೇಳಿ ಶಾಕ್ ಆಗಬಹುದು. ಇದುವರೆಗೂ ಕಡಿಮೆ ಬೆಲೆಗೆ ಕಾಲ್ ಹಾಗೂ ಇಂಟರ್ ನೆಟ್ ಸೌಲಭ್ಯ ನೀಡುತ್ತಿದ್ದ ಏರ್ ಟೆಲ್ ಹಾಗೂ ಜಿಯೋ ಇದೀಗ ಶುಲ್ಕ್ ಹೆಚ್ಚಳಕ್ಕೆ ಮುಂದಾಗಿವೆ. ಈ ಮೂಲಕ ನಿಮ್ಮ ಜೇಬಿಗೆ ಕತ್ತರಿ ಬೀಳೋದಂತು ಖಂಡಿತ. ಜನಪ್ರಿಯ ಭಾರ್ತಿ ಏರ್‌ಟೆಲ್‌ ಸಂಸ್ಥೆಯು ಶುಲ್ಕ ಏರಿಕೆ ಮಾಡಬಹುದು ಎಂದು ಏರ್‌ಟೆಲ್‌ನ ಅಧ್ಯಕ್ಷ ಸುನೀಲ್‌ ಮಿತ್ತಲ್ ತಿಳಿಸಿದ್ದಾರೆ. ಇತ್ತೀಚಿಗೆ ಎನ್‌ಡಿಟಿವಿ ಪ್ರಾಫಿಟ್‌ಗೆ ನೀಡಿದ ಸಂದರ್ಶನವೊಂದರಲ್ಲಿ, ಮಾತನಾಡಿದ ಅವರು ಮಾರುಕಟ್ಟೆಯನ್ನು ಸುಸ್ಥಿರವಾಗಿಡಲು ಸಂಸ್ಥೆಯು ಟೆಲಿಕಾಂ ದರಗಳನ್ನು ಹೆಚ್ಚಿಸಲಿದೆ ಎಂದಿದ್ದಾರೆ. ಇನ್ನು ಪರಿಷ್ಕೃತ ದರಗಳಿಗೆ ನಿರ್ದಿಷ್ಟ ಕಾಲಮಿತಿಯ ಮಾಹಿತಿ ಅನ್ನು ಸುನೀಲ್‌ ಮಿತ್ತಲ್ ಬಹಿರಂಗಪಡಿಸಿಲ್ಲ. ಅದಾಗ್ಯೂ, ಪ್ರಸಕ್ತ – 2024 ರ ದ್ವಿತೀಯಾರ್ಧದಲ್ಲಿ ಟೆಲಿಕಾಂ ಶುಲ್ಕಗಳಲ್ಲಿ ಬದಲಾವಣೆಗಳನ್ನು ಕಾಣಬಹುದಾಗಿದೆ. ಮುಂದಿನ ತಿಂಗಳುಗಳಲ್ಲಿ ಪ್ರತಿ ಬಳಕೆದಾರರ ಸರಾಸರಿ ಆದಾಯವನ್ನು (ARPU) 208 ರೂ. ನಿಂದ 300 ರೂ. ಗೆ ಹೆಚ್ಚಿಸುವ ಗುರಿಯನ್ನು ಏರ್‌ಟೆಲ್‌ ಟೆಲಿಕಾಂ ಹೊಂದಿದೆ.…

Read More

ಜಗ್ಗೇಶ್ ನಟನೆಯ ಗುರುಪ್ರಸಾದ್ ನಿರ್ದೇಶನದ ‘ರಂಗನಾಯಕ’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಜಗ್ಗೇಶ್ ಮತ್ತು ಗುರುಪ್ರಸಾದ್ ಕಾಂಬಿನೇಷನ್ ನಲ್ಲಿ ಈ ಹಿಂದೆ ಬಂದ ಎರಡೂ ಸಿನಿಮಾಗಳಲ್ಲೂ ವಿಡಂಬನೆಗೆ ಹೆಚ್ಚು ಒತ್ತು ನೀಡಲಾಗಿತ್ತು. ರಂಗನಾಯಕ ಚಿತ್ರದ ಟ್ರೈಲರ್ ಅನ್ನು ಕೂಡ ವಿಡಂಬನೆಗೆ ಮೀಸಲಿಟ್ಟಿದ್ದಾರೆ. ಈ ಹಿಂದೆ ರಂಗನಾಯಕ ಚಿತ್ರದ ಹಾಡೊಂದು ರಿಲೀಸ್ ಆಗಿತ್ತು. ಆ ಹಾಡಿನಲ್ಲಿ ಮೀಟೂ ಶ್ರುತಿ, ಬಿಗ್ ಬಾಸ್ ಶ್ರುತಿ ಎಂದು ಇಬ್ಬರು ನಟಿಯರ ಕಾಲೆಳೆದಿದ್ದರು ಗುರುಪ್ರಸಾದ್. ಈಗ ಬಿಡುಗಡೆ ಆಗಿರುವ ಟ್ರೈಲರ್ ನಲ್ಲಿ ಶಿವಣ್ಣ, ಯಶ್, ಸುದೀಪ್, ದರ್ಶನ್, ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಕಲ್ಪನಾ, ಗಿರೀಶ್ ಕಾಸರವಳ್ಳಿ ಹೀಗೆ ಅನೇಕ ಕಲಾವಿದರನ್ನು ಕರೆತಂದಿದ್ದಾರೆ. ಕನ್ನಡಕ್ಕೆ ತೊಂದರೆ ಆಗ್ತಿದೆ ಬನ್ನಿರಿ ಎಂದು ಕರೆಯುವ ಡೈಲಾಗ್ ನಲ್ಲಿ ಶಿವಣ್ಣ, ಯಶ್, ಸುದೀಪ್, ದರ್ಶನ್ ಅವರ ಹೆಸರನ್ನು ಬಳಸಿಕೊಂಡಿದ್ದಾರೆ ಗುರುಪ್ರಸಾದ್. ಐಟಂ ಸಾಂಗ್ ವಿಚಾರವಾಗಿ ಗಿರೀಶ್ ಕಾಸರವಳ್ಳಿ ಅವರ ಹೆಸರನ್ನೂ ನಿರ್ದೇಶಕರು ಬಳಸಿಕೊಂಡಿದ್ದು, ಗಿರೀಶ್ ಕಾಸರವಳ್ಳಿ ಸಿನಿಮಾದಲ್ಲಿ ಐಟಂ ಸಾಂಗ್ ಕೇಳಿದಂಗಾತು…

Read More