ಈಜಿಪ್ಟ್ ನ ಮೆಡಿಟರೇನಿಯನ್ ಪ್ರಾಂತ್ಯ ಅಲೆಕ್ಸಾಂಡ್ರಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 15 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲೆಕ್ಸಾಂಡ್ರಿಯಾ ನಗರದ ಪಶ್ಚಿಮದಲ್ಲಿರುವ ಅಮ್ರೇಯಾ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂದು ಮೂಲಗಳು ತಿಳಿಸಿದೆ. ಟ್ರಕ್ ಮಿನಿಬಸ್, ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಆಂಬ್ಯುಲೆನ್ಸ್ ಗಳು ಅಪಘಾತದ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Author: Author AIN
ದೋಹಾ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕತಾರ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್‌ರಹಮಾನ್ ಅಲ್ ಥಾನಿ ಅವರನ್ನು ಭೇಟಿಯಾಗಿ, ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಮಾತುಕತೆ ನಡೆಸಿದ್ದಾರೆ. ಮೋದಿ ಅವರು ಕತಾರ್ ರಾಜಧಾನಿ ದೋಹಾಗೆ ಬುಧವಾರ ರಾತ್ರಿ ಬಂದರು. ಇದು ಕತಾರ್‌ಗೆ ಅವರ ಎರಡನೇ ಭೇಟಿಯಾಗಿದ್ದು, 2016ರ ಜೂನ್‌ನಲ್ಲಿ ಮೊದಲ ಮೋದಿ ಕತಾರ್ ಗೆ ಭೇಟಿನೀಡಿದ್ದರು. ಮೊಹಮ್ಮದ್ ಬಿನ್ ಅಬ್ದುಲ್‌ರಹಮಾನ್ ಅಲ್ ಥಾನಿ ಅವರನ್ನು ಭೇಟಿಯಾದ ಕುರಿತು ತಮ್ಮ ಎಕ್ಸ್/ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಮೋದಿ, ‘ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್‌ರಹಮಾನ್ ಅಲ್ ಥಾನಿ ಅವರೊಂದಿಗೆ ಉತ್ತಮ ಸಭೆ ನಡೆಸಿದೆ. ಭಾರತ-ಕತಾರ್ ಸ್ನೇಹ ಸಂಬಂಧವನ್ನು ಉತ್ತೇಜಿಸುವುದರ ಸುತ್ತ ನಮ್ಮ ಮಾತುಕತೆ ನಡೆಯಿತು’ ಎಂದಿದ್ದಾರೆ. ಇದಕ್ಕೂ ಮೊದಲು ವಿದೇಶಾಂಗ ಸಚಿವಾಲಯವು, ಮೋದಿ ಹಾಗೂ ಕತಾರ್ ಪ್ರಧಾನಿ ನಡುವಣ ಮಾತುಕತೆ ಫಲಪ್ರದವಾಗಿತ್ತು ಎಂದು ತಿಳಿಸಿತ್ತು.ಕತಾರ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಮೋದಿ ಅವರನ್ನು ಅಲ್ಲಿನ ವಿದೇಶಾಂಗ ಇಲಾಖೆ ರಾಜ್ಯ ಸಚಿವ ಸೊಲ್ತಾನ್ ಬಿನ್…
ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಲೋಕಾರ್ಪಣೆಗೊಂಡ ಬಿಎಪಿಎಸ್ ಹಿಂದೂ ದೇವಾಲಯ ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ ಎಂದರು. ಮಂದಿರ ಉದ್ಘಾಟಿಸಿದ ಮಾತನಾಡಿದ ಪ್ರಧಾನಿ ಮೋದಿ, ಯುಎಇ ಒಂದು ಸುವರ್ಣ ಅಧ್ಯಾಯವನ್ನು ಬರೆದಿದೆ. ಹಿಂದೂ ದೇವಾಲಯ ಉದ್ಘಾಟನೆ ಹಿಂದೆ ಹಲವು ವರ್ಷಗಳ ಶ್ರಮವಿದೆ ಮತ್ತು ಅನೇಕರ ಕನಸುಗಳು ದೇವಾಲಯದೊಂದಿಗೆ ಸಂಪರ್ಕ ಹೊಂದಿದೆ. ಸ್ವಾಮಿನಾರಾಯಣ ಅವರ ಆಶೀರ್ವಾದವೂ ಇದ್ದು, ಇದು ಏಕತೆ ಮತ್ತು ಸಾಮರಸ್ಯದ ಸಂಕೇತವಾಗಿದೆ. ದೇವಾಲಯ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯವಾಗಿದೆ ಎಂದರು. ಇಲ್ಲಿಯವರೆಗೆ ಬುರ್ಜ್ ಖಲೀಫಾ, ಫ್ಯೂಚರ್ ಮ್ಯೂಸಿಯಂ, ಶೇಖ್ ಜಾಯೆದ್ ಮಸೀದಿ ಮತ್ತಿತರ ಹೈಟೆಕ್ ಕಟ್ಟಡಗಳಿಗೆ ಹೆಸರುವಾಸಿಯಾಗಿದ್ದ ಯುಎಇ ಇದೀಗ ತನ್ನ ಗುರುತಿಗೆ ಮತ್ತೊಂದು ಸಾಂಸ್ಕೃತಿಕ ಅಧ್ಯಾಯವನ್ನು ಸೇರಿಸಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸುವ ವಿಶ್ವಾಸವಿದೆ. ಇದು ಯುಎಇಗೆ ಬರುವ ಜನರ ಸಂಖ್ಯೆಯನ್ನು ಹೆಚ್ಚಿಸುತ್ತದೆ ಮತ್ತು ಜನರ ಸಂಪರ್ಕವೂ ಹೆಚ್ಚಾಗುತ್ತದೆ.ಇಡೀ ಭಾರತ ಮತ್ತು ಪ್ರಪಂಚದಾದ್ಯಂತ ವಾಸಿಸುವ ಲಕ್ಷಾಂತರ ಭಾರತೀಯರ…
ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ನಟ ವಿಜಯ್ ಸೂರ್ಯ ಪ್ರೇಮಿಗಳ ದಿನದಂದು ತಮ್ಮ ಎರಡನೇ ಮಗುವಿನ ಮುಖವನ್ನು ರಿವೀಲ್ ಮಾಡಿದ್ದಾರೆ. ತಮ್ಮ ಮುದ್ದಾದ ಮಕ್ಕಳ ಜೊತೆ ಫೋಟೋ ಹಂಚಿಕೊಳ್ಳುವ ಮೂಲಕ ವಿಜಯ್ ಸೂರ್ಯ ಪ್ರೇಮಿಗಳ ದಿನದ ಶುಭ ಹಾರೈಸಿದ್ದಾರೆ. ಫೆ.14 ವಿಜಯ್ ಸೂರ್ಯ ಪಾಲಿಗೆ ವಿಶೇಷ ದಿನವಾಗಿದ್ದು, ವ್ಯಾಲೆಂಟೈನ್ ಡೇ ದಿನದಂದು ವಿಜಯ್ ಸೂರ್ಯ ದಾಂಪತ್ಯ ಬದುಕಿಗೆ ಕಾಲಿಟ್ಟರು. ಚೈತ್ರಾ ಶ್ರೀನಿವಾಸ್ ಜೊತೆ ವಿಜಯ್ ಸೂರ್ಯ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟು 5 ವರ್ಷಗಳಾಗಿದ್ದು, ಇದೇ ವೇಳೆ ತಮ್ಮ 2ನೇ ಮಗುವಿನ ಮುಖವನ್ನು ನಟ ರಿವೀಲ್ ಮಾಡಿದ್ದಾರೆ. ಮೊದಲ ಮಗುವಿಗೆ ಸೋಹನ್ ಸೂರ್ಯ, 2ನೇ ಮಗುವಿಗೆ ಕಾರ್ತಿಕೇಯ ಸೂರ್ಯ ಎಂದು ಹೆಸರಿಟ್ಟಿದ್ದಾರೆ. ಇದೀಗ ಕುಟುಂಬದ ಫೋಟೋ ಶೇರ್ ಮಾಡಿ ಹ್ಯಾಪಿ ಆ್ಯನಿವರ್ಸರಿ ಬಾಬಾ ಎಂದು ಪತ್ನಿಗೆ ವಿಜಯ್ ಶುಭ ಹಾರೈಸಿದ್ದಾರೆ. ‘ಅಗ್ನಿಸಾಕ್ಷಿ’ ಧಾರವಾಹಿ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟ ವಿಜಯ್ ಸೂರ್ಯ ಇದೀಗ ತೆಲುಗು ಸೀರಿಯಲ್ ಜೊತೆಗೆ ಸಿನಿಮಾದ ಕೆಲಸಗಳಲ್ಲು ಬ್ಯುಸಿಯಾಗಿದ್ದಾರೆ. ಸದ್ಯ ‘ನಮ್ಮ…
ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಪ್ರೇಮಿಗಳ ದಿನವನ್ನು ಸೆಲೆಬ್ರೇಟ್ ಮಾಡಿದ್ದಾರೆ. ವ್ಯಾಲೆಂಟೈನ್ ದಿನದ ಸುಂದರ ಫೋಟೋಗಳನ್ನು ನಟಿ ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದೂರದ ಊರಿನಲ್ಲಿರುವ ಯಶ್ ದಂಪತಿ ಮಕ್ಕಳ ಜೊತೆ ಸಮಯ ಕಳೆದಿದ್ದಾರೆ. ಗೋಡೆಯ ಮೇಲೆ ಹಾರ್ಟ್ ಬಲೂನ್ ಹಾಕಿ ಕಲರ್‌ಫುಲ್ ಡ್ರೆಸ್ ಧರಿಸಿ ಮಿಂಚಿದ್ದಾರೆ. ಯಶ್ ಮತ್ತು ರಾಧಿಕಾ ಇಬ್ಬರು ಕಣ್ಣಿಗೆ ಕುಲ್ಲಿಂಗ್ ಗ್ಲ್ಯಾಸ್ ತೊಟ್ಟು ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ನನ್ನ ಶಾಶ್ವತ ಪ್ರೇಮಿಗಳೊಂದಿಗೆ ವ್ಯಾಲೆಂಟೈನ್ಸ್ ಡೇ ಲಂಚ್ ಎಂದು ನಟಿ ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ‘ಟಾಕ್ಸಿಕ್’ ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಿರುವ ಯಶ್ ತಮ್ಮ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ತಾವು ಎಷ್ಟೇ ಬ್ಯುಸಿ ಇದ್ದರು ಯಶ್ ಸದಾ ತಮ್ಮ ಕುಟುಂಬಕ್ಕಾಗಿ ಸಮಯವನ್ನು ಮಿಸಲಿಡುತ್ತಾರೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಮಾಡಿದ್ದಾರೆ. ಈ ಬಗ್ಗೆ ಇದೀಗ ನಟಿ ಶಿಲ್ಪಾ ಶೆಟ್ಟಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಶಿಲ್ಪಾ ಶೆಟ್ಟಿ ಮೋದಿಗೆ ಬರೆದಿರುವ ಪತ್ರವನ್ನು ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ರಾಮಮಂದಿರ ನಿರ್ಮಿಸಿ ಪ್ರಧಾನಿ ಮೋದಿ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಭವ್ಯ ಮಂದಿರ ನಿರ್ಮಿಸಿದ ಪ್ರಧಾನಿ ಮೋದಿ ಅವರು ಯಾವಾಗಲೂ ದೇವಾಲಯದ ಜೊತೆ ಸಂಬಂಧ ಹೊಂದಿರುತ್ತಾರೆ. ಅವರ ಮಹತ್ವದ ಕಾರ್ಯಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಹಿಂದೂಗಳ 500 ವರ್ಷಗಳ ಹೋರಾಟಕ್ಕೆ ಬಾಲರಾಮನ ಪ್ರತಿಷ್ಠಾಪನೆಯಿಂದ ಜಯ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಾಲರಾಮನ ವಿಗ್ರಹ ಅನಾವರಣಗೊಳಿಸಲಾಯಿತು. ಭವ್ಯ ಮಂದಿರದಲ್ಲಿ ಬಾಲರಾಮ ನೆಲೆಸಿದನು. ಇಡೀ ಭಾರತವೇ ಅಂದು ಹಬ್ಬ ಆಚರಿಸಿತು ಅಂತ ಶಿಲ್ಪಾ ಶೆಟ್ಟಿ ಬರೆದಿದ್ದಾರೆ. ಕೆಲವರು ಇತಿಹಾಸ ಓದುತ್ತಾರೆ, ಇನ್ನೂ ಕೆಲವರು ಅದರಿಂದ ಕಲಿಯುತ್ತಾರೆ. ಆದರೆ ನಿಮ್ಮಂತಹ ವ್ಯಕ್ತಿಗಳು ಇತಿಹಾಸವನ್ನು ಮರು ಸೃಷ್ಟಿಸುವ ಅಸಾಧಾರಣ ಸಾಮರ್ಥ್ಯ ಹೊಂದಿರುತ್ತಾರೆ.…
ಕೆಜಿಎಫ್ ಚಿತ್ರದ ಬಳಿಕ ಯಶ್ ನಟನೆಯ ಮುಂದಿನ ಸಿನಿಮಾದ ಬಗ್ಗೆ ಸಾಕಷ್ಟುಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಕೆಜಿಎಫ್ ಚಿತ್ರ ರಿಲೀಸ್ ಆಗಿ ಸಾಕಷ್ಟು ಸಮಯ ಕಳೆದಿದ್ದರು ಯಶ್ ನಟನೆಯ ಮುಂದಿನ ಸಿನಿಮಾದ ಬಗ್ಗೆ ಯಾವುದೇ ಕ್ಲಾರಿಟಿ ಸಿಕ್ಕಿರಲಿಲ್ಲ. ಇದೀಗ ಯಶ್ ಟಾಕ್ಸಿಕ್ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು ಇದರಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಯಶ್ ಸ್ಪಷ್ಟನೆ ನೀಡಿದ್ದಾರೆ. ಸದ್ಯದಲ್ಲೇ ‘ಟಾಕ್ಸಿಕ್’ ಚಿತ್ರದ ಶೂಟಿಂಗ್ ಆರಂಭವಾಗಲಿದೆ. ದೊಡ್ಡ ಮಟ್ಟದ ಪ್ಲಾನ್ ನಡೀತಿದೆ. ‘ಟಾಕ್ಸಿಕ್’ ಯಾವುದೇ ಕಾಂಪ್ರಮೈಸ್ ಇಲ್ಲದೇ ಮಾಡುತ್ತಿರುವ ಸಿನಿಮಾ ಆಗಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಯಶ್ ಹೇಳಿದ್ದು, ಶಾರುಖ್ ಖಾನ್ ನಟಿಸುತ್ತಿಲ್ಲ. ಈ ಸುದ್ದಿ ಸುಳ್ಳು, ಎನೀದರೂ ನಾನು ಮಾಹಿತಿ ನೀಡುತ್ತೇನೆ ಎಂದಿದ್ದಾರೆ. ಡೈರೆಕ್ಟರ್ ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮೂಡಿ ಬರುತ್ತಿದೆ. ಕೆವಿಎನ್ ಸಂಸ್ಥೆ ಜೊತೆ ಯಶ್ ಕೈಜೋಡಿಸಿದ್ದಾರೆ.
ಅಮೆರಿಕದಲ್ಲಿ ವಾಸವಿದ್ದ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವ ಪತ್ತೆಯಾಗಿದ್ದು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ. ಆನಂದ್ ಸುಜಿತ್ ಹೆನ್ರಿ , ಪತ್ನಿ ಆಲಿಸ್ ಪ್ರಿಯಾಂಕಾ 4 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಮನೆಗೆ ಬಂದು ನೋಡಿದ್ದು ಈ ವೇಳೆ ನಾಲ್ವರ ಶವಗಳು ಪತ್ತೆಯಾಗಿದೆ. ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್ ರೂಮ್ನಲ್ಲಿ ಕಂಡುಬಂದಿದ್ದು, ಇಬ್ಬರು ಮಕ್ಕಳ ಶವ ಕೋಣೆಯಲ್ಲಿ ಪತ್ತೆಯಾಗಿದೆ. ದಂಪತಿ ಮೈಮೇಲೆ ಗುಂಡಿನ ಗುರುತುಗಳಿದ್ದವು, ಮನೆಯಲ್ಲಿ ಯಾರೋ ಅಪರಿಚಿತರು ಬಂದಿರುವ ಯಾವುದೇ ಲಕ್ಷಣಗಳಿರಲಿಲ್ಲ. ಆದರೆ ಕಿಟಕಿ ತೆರೆದಿತ್ತು ಅಲ್ಲಿಂದ ಯಾರಾದರೂ ಮನೆಯ ಒಳಗೆ ಬಂದಿದ್ದರೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಬಾತ್ರೂಮ್ನಿಂದ 9 ಎಂಎಂ ಪಿಸ್ತೂಲ್ ಮತ್ತು ಲೋಡ್ ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ 9 ವರ್ಷಗಳಿಂದ ದಂಪತಿ ಅಮೆರಿಕದಲ್ಲಿ ವಾಸವಾಗಿದ್ದರು. ಸಾಫ್ಟ್‌ವೇರ್ ಎಂಜಿನಿಯರ್ ಆನಂದ್ ಮತ್ತು ಹಿರಿಯ ವಿಶ್ಲೇಷಕ…
ಪ್ರೇಮಿಗಳ ದಿನದಂದು ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಯುಐ ಸಿನಿಮಾದ ಹಾಡನ್ನ ಬಿಡುಗಡೆ ಮಾಡಿದ್ದಾರೆ. ಯುಐ ಚಿತ್ರದಲ್ಲಿ ಉಪೇಂದ್ರ ನಟಿಸುವುದರ ಜೊತೆಗೆ ನಿರ್ದೇಶನವನ್ನು ಮಾಡ್ತಿದ್ದಾರೆ.ಹೀಗಾಗಿ ಚಿತ್ರ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಸದ್ಯ ಚಿತ್ರದ ಚೀಪ್ ಹಾಡೊಂದು ಬಿಡುಗಡೆ ಆಗಿದೆ. “ಚೀಪ್.. ಚೀಪ್.. ಎಲ್ಲಾ ಚೀಪ್ ಚೀಪ್.. ನಂದು ತುಂಬಾ ದೊಡ್ಡದು. ಅವನಿಗಿಂತ ನಿಂದು ಚಿಕ್ಕದು. ನಿಂದು ತುಂಬಾ ಚಿಕ್ಕದು, ಇವನಿಗಿಂತ ಅವಂದು ದೊಡ್ದು..” ಥೋ.. ಇದು ಡಬಲ್ ಮೀನಿಂಗ್ ಹಾಡಾ ಅಥವಾ ಗೂಢಾರ್ಥ ಏನಾದರೂ ಇದೆಯಾ ಗೊತ್ತಿಲ್ಲ. ಒಟ್ನಲ್ಲಿ ನಟ, ನಿರ್ದೇಶಕ ಉಪೇಂದ್ರ ಪ್ರೇಮಿಗಳ ದಿನದಂದು ತಮ್ಮ ಯುಐ ಸಿನಿಮಾದ ಹಾಡಿನ ತುಣುಕೊಂದನ್ನು ಬಿಡುಗಡೆ ಮಾಡಿ ಮತ್ತೆ ಅಭಿಮಾನಿಗಳ ತಲೆಗೆ ಹುಳು ಬಿಟ್ಟಿದ್ದಾರೆ. ಹಾಡಿನ ಈ ಸಣ್ಣ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ಪೂರ್ಣ ಹಾಡನ್ನು ಇದೇ ತಿಂಗಳು 26ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಸದ್ಯ ಉಪೇಂದ್ರ ಅವರು ಯುಐ ಸಿನಿಮಾದ ಡಬ್ಬಿಂಗ್ ಕೆಲಸದಲ್ಲಿ ನಿರತರಾಗಿದ್ದಾರೆ…
ಬೆಂಗಳೂರು: HSRP ಹೆಸರಲ್ಲಿ ವ್ಯಾಪಕ ಆನ್‌ಲೈನ್ ವಂಚನೆ ನಡೆಯುತ್ತಿದೆ.ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಚಿಸಿದ್ದ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ ನೀಡಿದ ಗಡುವು ಸಮೀಪ ಬಂದಿದೆ. ಆದರೆ ಇದೀಗ ಸರ್ಕಾರ ಅಂತಿಮ ಗಡುವಿನ ಅವಧಿಯನ್ನು ವಿಸ್ತರಣೆ ಮಾಡಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು, ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದ ಮೂರು ತಿಂಗಳುಗಳವರೆಗೆ ಅವಧಿಯನ್ನು ವಿಸ್ತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದರು. ಇದುವರೆಗೂ 18 ಲಕ್ಷ ವಾಹನಗಳಷ್ಟೇ ನೋಂದಣಿ ಆಗಿದ್ದು ಇದರ ಬಗ್ಗೆ ಆನ್‌ಲೈನ್ ವಂಚನೆ ಸಹ ನಡೆಯುತ್ತಿದೆ. ಹೀಗಾಗಿ ಅವಧಿಯನ್ನು ವಿಸ್ತರಣೆ…