Author: Author AIN

ಜೊತೆ ಜೊತೆಯಲ್ಲಿ ಧಾರಾವಾಹಿಯ ಅನು ಸಿರಿಮನೆ ಪಾತ್ರದಲ್ಲಿ ಕಾಣಿಸಿಕೊಂಡು ಪ್ರೇಕ್ಷಕರ ಮನ ಗೆದ್ದಿದ್ದ ನಟಿ ಮೇಘಾ ಶೆಟ್ಟಿ ಸದ್ಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಸಿನಿಮಾದ ಕೆಲಸಗಳಲ್ಲಿ ಸಖತ್ ಬ್ಯುಸಿಯಾಗಿರುವ ನಟಿ ಆಗಾಗ ತಮ್ಮ ಅದ್ಭುತ ಫೋಟೋ ಶೂಟ್ ಮೂಲಕ ಅಭಿಮಾನಿಗಳ ಮನಸ್ಸು ಕದಿಯುತ್ತಿದ್ದಾರೆ. ಇದೀಗ ನಟಿ ಮೇಘಾ ಶೆಟ್ಟಿ ಬಳುಕುವ ಬಳ್ಳಿಯಂತಾಗಿದ್ದು ಸಖತ್ ಸ್ಟೈಲಿಶ್ ಆಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಅವುಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಲೇಟೆಸ್ಟ್​ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಮೇಘಾ ಚಂದನವನ ಪ್ರವೇಶಿಸಿದರು. ನಂತರ ಡಾರ್ಲಿಂಗ್ ಕೃಷ್ಣ ಜೊತೆ ದಿಲ್ ಪಸಂದ್ ಚಿತ್ರದಲ್ಲಿ ನಟಿಸಿದರು. ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ, ಸದ್ಯ ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನೀಲಿ ಬಣ್ಣದ ಡ್ರೆಸ್‌ನಲ್ಲಿ…

Read More

ದರ್ಶನ್ ನಟನೆಯ ಕಾಟೇರ ಸಿನಿಮಾ ಸೂಪರ್ ಹಿಟ್ ಆಗಿದೆ. ಇದೇ ಖುಷಿಯಲ್ಲಿರೋ ಅಭಿಮಾನಿಗಳು ದಾಸನ ಮುಂದಿನ ಸಿನಿಮಾದ ಅಪ್ ಡೇಟ್ ಗಾಗಿ ಕಾಯ್ತಿದ್ದಾರೆ. ಇದೀಗ ದರ್ಶನ್ ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಹೊಸ ಸಿನಿಮಾದ ಮಾಹಿತಿಯನ್ನು ಸೋಷಿಯಲ್ ಮೀಡಿಯಾದ ಮೂಲಕ ತಿಳಿಸಿದ್ದಾರೆ. ತಮ್ಮ ಹುಟ್ಟು ಹಬ್ಬದ ಮುನ್ನಾ ದಿನ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುತ್ತಿರುವುದಾಗಿ ಬರೆದುಕೊಂಡಿದ್ದಾರೆ. ಮಧ್ಯೆ ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಿಸುತ್ತಿರುವ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ‘ಡೆವಿಲ್’ ಚಿತ್ರದ  ಫಸ್ಟ್ ಲುಕ್ ಟೀಸರ್ ಫೆಬ್ರವರಿ 15ರ‌ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. ಎರಡು ತಿಂಗಳ ಹಿಂದೆ ಸರಳವಾಗಿ ಸ್ಕ್ರಿಪ್ಟ್ ಪೂಜೆ ನೆರವೇರಿದ್ದು ಮಿಲನ ಚಿತ್ರದ ಖ್ಯಾತಿಯ  ಪ್ರಕಾಶ್ ವೀರ್ ಆಕ್ಷನ್ ಕಟ್ ಹೇಳ್ತಿದ್ದಾರೆ.  ಚಿತ್ರದಲ್ಲಿ ದರ್ಶನ್ ನಾಯಕ ಅನ್ನೋದೆ ಬಿಟ್ಟರೆ ಉಳಿದ ಯಾವುದೇ ಮಾಹಿತಿಯನ್ನು ಚಿತ್ರತಂಡ…

Read More

ಒಟ್ಟಾವ: ಕೆನಡಾದ ಒಂಟಾರಿಯೊ ಪ್ರಾಂತದಲ್ಲಿ ಭಾರತೀಯ ಮೂಲದ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭಾರತೀಯ ಮೂಲದ ಕುಲ್ದೀಪ್ ಸಿಂಗ್  ಎಂಬವರನ್ನು  ಹತ್ಯೆ ಮಾಡಲಾಗಿದೆ. ಆತನ ಪುತ್ರನೇ ಈ ಕೃತ್ಯ ಎಸಗಿರುವ ಶಂಕೆಯಿದೆ ಎಂದು ಪೊಲೀಸರು ಮಾಹಿತಿ ನಿಡಿದ್ದಾರೆ. ಹ್ಯಾಮಿಲ್ಟನ್ ನಗರದ ಮನೆಯೊಂದರಲ್ಲಿ ಗುಂಡಿನ ಸದ್ದು ಕೇಳಿಬಂದಿರುವುದಾಗಿ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ.ಈ ವೇಳೆ ಮನೆಯ ಮಾಲಕ 56 ವರ್ಷದ ಕುಲ್ದೀಪ್ ಸಿಂಗ್ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಲ್ದೀಪ್ ಹಾಗೂ ಅವರ ಪುತ್ರ 26 ವರ್ಷದ ಸುಖಾಜ್ ಸಿಂಗ್ ಚೀಮಾ ನಡುವೆ ಜಗಳವಾಗಿದ್ದು ಚೀಮಾ ತನ್ನ ತಂದೆಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವುದಾಗಿ ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ. ಚೀಮಾನ ಭಾವಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಧಿಕಾರಿಗಳು ಆತನ ಸುಳಿವು ಸಿಕ್ಕರೆ  ಮಾಹಿತಿ ನೀಡುವಂತೆ ಸ್ಥಳೀಯರಿಗೆ ಸೂಚಿಸಿದ್ದಾರೆ.

Read More

ನ್ಯೂಯಾರ್ಕ್ : ಬ್ರಾಂಕ್ಸ್ ಬರೋದಲ್ಲಿನ ಸುರಂಗಮಾರ್ಗದಲ್ಲಿ ಬಂದೂಕುಧಾರಿಯೊರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಇತರ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದೆ. ಘಟನೆಯಲ್ಲಿ 25 ವರ್ಷದ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರಲ್ಲಿ ಪುರುಷರು ಮಹಿಳೆಯರು ಸೇರಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಘಟನೆ ನಡೆಯಲು ಕಾರಣ ತಿಳಿದುಬಂದಿಲ್ಲ ಪೊಲೀಸರ ಮಾಹಿತಿ ಪ್ರಕಾರ ಇಬ್ಬರು ಬಂದೂಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾಗಿ ಹೇಳಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

Read More

ಕೊಲಂಬೋ: ಭಾರತದ ಯುಪಿಐ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಗೆ ಅಭೂತ ಪೂರ್ವ ರೆಸ್ಪಾನ್ಸ್ ಸಿಕ್ಕ ಬಳಿಕ ಇದೀಗ ಶ್ರೀಲಂಕಾ ಮತ್ತು ಮಾರಿಷಸ್ ನಲ್ಲೂ ತನ್ನ ಸೇವೆ ಆರಂಭಿಸಿದೆ. ಭಾರತದ ಯುಪಿಐ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಗೆ ನೆರೆಯ ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದರು. ಯುಪಿಐ ಮಾತ್ರವಲ್ಲದೆ ಭಾರತದ ರುಪೇ ಕಾರ್ಡ್‌ ಅನ್ನು ಕೂಡ ಮಾರಿಷಸ್‌ನಲ್ಲಿ ಬಳಸಬಹುದಾಗಿದೆ ಕಾರ್ಯಕ್ರಮಕ್ಕೆ ವರ್ಚುವಲ್‌ ಮೂಲಕ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ‘ಆಧುನಿಕ ಡಿಜಿಟಲ್ ತಂತ್ರಜ್ಞಾನದೊಂದಿಗೆ ಐತಿಹಾಸಿಕ ಸಂಬಂಧಗಳನ್ನು ಜೋಡಿಸಲಾಗಿದೆ’ ಎಂದರು. ಯುಪಿಐ ಭಾರತದೊಂದಿಗೆ ಪಾಲುದಾರರನ್ನು ಒಗ್ಗೂಡಿಸುವ ಹೊಸ ಜವಾಬ್ದಾರಿಯನ್ನು ಕಾರ್ಯಗತಗೊಳಿಸುತ್ತಿದೆ. ಡಿಜಿಟಲ್ ಪಾವತಿಯು ಭಾರತದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದೆ. ನೈಸರ್ಗಿಕ ವಿಪತ್ತು, ಆರೋಗ್ಯ ಸಂಬಂಧಿತ, ಆರ್ಥಿಕ ಅಥವಾ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಮೊದಲು ಪ್ರತಿಸ್ಪಂದಿಸುವ ರಾಷ್ಟ್ರ ಎಂದರೆ ಭಾರತ. ಅದು ಹೀಗೆಯೇ ಮುಂದುವರಿಯುತ್ತದೆ. ಇದರಿಂದಾಗಿ ಭಾರತೀಯರು ಮಾರಿಷಸ್‌ ಮತ್ತು ಶ್ರೀಲಂಕಾಕ್ಕೆ ಪ್ರಯಾಣಿಸಿದರೆ ಅಥವಾ ಅವೆರಡೂ ದೇಶದವರು ಭಾರತಕ್ಕೆ ಬಂದಾಗ ಹಣ ಪಾವತಿ ಇನ್ನಷ್ಟು ಸುಲಭವಾಗಲಿದೆ…

Read More

ಅಬುದಾಬಿ: ಅಬುದಾಬಿಯಲ್ಲಿ ಇಂದು ಆಯೋಜಿಸಲಾಗಿರುವ ಅಹ್ಲಾನ್ ಮೋದಿ’ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಇದುವರೆಗೂ ಸುಮಾರು 65, 000ಕ್ಕೂ ಹೆಚ್ಚು ಜನರ ನೋಂದಣಿಯನ್ನು ಸ್ವೀಕರಿಸಲಾಗಿದೆ.  ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದೆ. ಏಕೆಂದರೆ ಯಾವುದೇ ಒಂದು ಸಂಘಟನೆ ಈ ಕಾರ್ಯಕ್ರಮವನ್ನು ಆಯೋಜಿಸಿಲ್ಲ. ಇಡೀ ಸಮುದಾಯವೇ ಕಾರ್ಯಕ್ರಮ ಆಯೋಜಿಸಿದ್ದು, ಪ್ರಧಾನಿ ಮೋದಿ ಹೆಸರು ಬರುತ್ತಿದ್ದಂತೆಯೇ ಹೆಚ್ಚಿನ ಸಂಖ್ಯೆಯ ಜನರು ಸೇರುವ ಸಾಧ್ಯತೆಯಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಪ್ರೀತಿ ಎಂದು ಅಹ್ಲಾನ್ ಮೋದಿ ಕಾರ್ಯಕ್ರಮದ ಸಂಘಟಕ ಹಾಗೂ ಇಂಡಿಯನ್ ಪೀಪಲ್ ಫೋರಂ ಅಧ್ಯಕ್ಷ ಜಿತೇಂದ್ರ ವೈದ್ಯ ಪ್ರತಿಕ್ರಿಯಿಸಿದ್ದಾರೆ. ಅಬುದಾಬಿಯಲ್ಲಿರುವ ಭಾರತೀಯ ಸಮುದಾಯ ಸಾಮೂಹಿಕ ಪ್ರಯತ್ನದಿಂದ ಕಾರ್ಯಕ್ರಮ ಆಯೋಜಿಸಿದ್ದು, ನೋಂದಣಿ ಸಂಖ್ಯೆ 65,000 ದಾಟಿದೆ. ಅಬುದಾಬಿಯಲ್ಲಿರುವ ಅನಿವಾಸಿ ಭಾರತೀಯರಿಂದ ಅಭೂತಪೂರ್ವ ಪ್ರತಿಕ್ರಿಯೆ ಕಂಡುಬಂದಿದ್ದು,ದೇಶದ ಜನಸಂಖ್ಯೆಯ ಶೇ.35 ರಷ್ಟು ಭಾರತೀಯರಿದ್ದಾರೆ ಎಂದಿದ್ದಾರೆ. 700 ಸಾಂಸ್ಕೃತಿಕ ಕಲಾವಿದರಿಂದ ಭಾರತೀಯ ಕಲೆ, ವಿವಿಧತೆ ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳ ಇರಲಿದ್ದು, 150 ಕ್ಕೂ ಭಾರತೀಯ ಸಮುದಾಯದ ಗುಂಪುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಪ್ರಧಾನಿ ಮೋದಿ…

Read More

ಬಾಲಿವುಡ್ ಸ್ಟಾರ್ ನಟ ಆಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಜಪಾನ್‌ನಲ್ಲಿ ನಟಿ ಸಾಯಿ ಪಲ್ಲವಿ ಕಾಣಿಸಿಕೊಂಡಿದ್ದಾರೆ. ಜುನೈದ್ ಹಾಗೂ ಸಾಯಿ ಪಲ್ಲವಿ ಜೊತೆಗಿರುವ ಫೋಟೋಗಳ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜುನೈದ್ ಜೊತೆ ಸಾಯಿ ಪಲ್ಲವಿ ಕಾಣಿಸಿಕೊಂಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹೊಸ ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಜಪಾನ್‌ನಲ್ಲಿ ಸಾಯಿ ಪಲ್ಲವಿ ಟೀಮ್ ಬೀಡು ಬಿಟ್ಟಿದೆ. ಆಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ಸೂಪರ್ ಮ್ಯಾನ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಇದು ಸಿನಿಮಾಗಾಗಿದ್ದು ಸಾಯಿ ಪಲ್ಲವಿ ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಲವು ತಿಂಗಳುಗಳಿಂದ ಆಮೀರ್ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಈ ಹಿಂದೆಯೇ ಆಮೀರ್ ಪುತ್ರನಿಗೆ ಸಾಯಿ ಪಲ್ಲವಿ ನಾಯಕಿ ಎಂದು ಸುದ್ದಿಯಾಗಿತ್ತು. ಇದೀಗ ವೈರಲ್ ಆಗಿರುವ ಫೋಟೋ ಗಾಳಿ ಸುದ್ದಿಗೆ ಬ್ರೇಕ್ ನೀಡಿದೆ.

Read More

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ, ಐಶ್ವರ್ಯ ರಜನಿಕಾಂತ್ ನಿರ್ದೇಶನದ ಲಾಲ್ ಸಲಾಂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಇದರಿಂದ ಬೇಸರಗೊಂಡಿರುವ ತಲೈವ ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಗೆ ವಾರ್ನಿಂಗ್ ಮಾಡಿದ್ದಾರೆ. ಸಾಕಷ್ಟು ಸೂಪರ್  ಹಿಟ್ ಸಿನಿಮಾಗಳನ್ನು ನೀಡಿರುವ ಲೋಕೇಶ್ ಕನಕರಾಜ್ ಇದೀಗ ರಜನಿಕಾಂತ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಮುಂದಿನ ತಿಂಗಳಿನಿಂದ ಶೂಟಿಂಗ್ ಆರಂಭವಾಗಲಿದ್ದು ಈ ಮಧ್ಯೆ ಕತೆ ಬದಲಾವಣೆ ಮಾಡಲು ರಜನಿಕಾಂತ್ ಹೇಳಿದ್ದಾರೆ ಎನ್ನಲಾಗುತ್ತಿದೆ. ಫೆ.9ರಂದು ‘ಲಾಲ್ ಸಲಾಂ’ ಚಿತ್ರ ಬಿಡುಗಡೆ ಆಗಿದ್ದು ಬಾಕ್ಸ್ ಆಫೀಸ್ ನಲ್ಲಿ ಸೈಲೆಂಟ್ ಆಗಿದೆ. ಚಿತ್ರದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸೈಲೆಂಟ್ ಆಗಿದ್ರಿಂದ ಮುಂದಿನ ಸಿನಿಮಾದಲ್ಲಿ ಕೆಲ ಬದಲಾವಣೆ ಮಾಡಲು ಹೇಳಿದ್ದಾರೆ ಎನ್ನಲಾಗುತ್ತಿದೆ. ಮೊದಲಿದ್ದ ಕತೆಯಲ್ಲಿ ಸಿಕ್ಕಾಪಟ್ಟೆ ಹಿಂಸಾತ್ಮಕ ದೃಶ್ಯ ಮತ್ತು ರಕ್ತಪಾತ ಇದ್ದು ಅದನ್ನು ಕಮ್ಮಿ ಮಾಡಿ ಎಂದು ನಿರ್ದೇಶಕರಿಗೆ ತಲೈವಾ ಸಲಹೆ ನೀಡಿದ್ದಾರೆ.

Read More

ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಭರ್ಜರಿಯಾಗಿಯೇ ತಯಾರಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಿಸುತ್ತಿರುವ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ‘ಡೆವಿಲ್’ ಚಿತ್ರದ  ಫಸ್ಟ್ ಲುಕ್ ಟೀಸರ್ ಫೆಬ್ರವರಿ 15ರ‌ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. ಎರಡು ತಿಂಗಳ ಹಿಂದೆ ಸರಳವಾಗಿ ಸ್ಕ್ರಿಪ್ಟ್ ಪೂಜೆ ನೆರವೇರಿದ್ದು ಮಿಲನ ಚಿತ್ರದ ಖ್ಯಾತಿಯ  ಪ್ರಕಾಶ್ ವೀರ್ ಆಕ್ಷನ್ ಕಟ್ ಹೇಳ್ತಿದ್ದಾರೆ.  ಚಿತ್ರದಲ್ಲಿ ದರ್ಶನ್ ನಾಯಕ ಅನ್ನೋದೆ ಬಿಟ್ಟರೆ ಉಳಿದ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ಡೆವಿಲ್ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ಹೇಳಿದ್ದಾರೆ. ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಲಿದ್ದಾರೆ.

Read More

ಡಾಲಿ ಧನಂಜಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಡಾಲಿ ಎಂಡ್ ಟೀಂನಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಯೆಸ್ ಡಾಲಿ ಧನಂಜಯ ನಿರ್ಮಾಣದ ‘ಡಾಲಿ ಪಿಕ್ಚರ್ಸ್’ನ ಐದನೇ ಸಿನಿಮಾ ಸೆಟ್ಟೇರುತ್ತಿದೆ. ‘ಟಗರು ಪಲ್ಯ’ ಸಕ್ಸಸ್ ನಲ್ಲಿರುವ ‘ಡಾಲಿ ಪಿಚ್ಚರ್’ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದೆ. ಈ ಬಗ್ಗೆ ಡಾಲಿ ಪಿಚ್ಚರ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ. ಆದರೆ ಯಾವ ಸಿನಿಮಾ, ನಾಯಕ ಯಾರು ಎನ್ನುವ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ. ತಮ್ಮ ಪ್ರೊಡಕ್ಷನ್ ಮೂಲಕ ಅನೇಕ   ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಡಾಲಿ ಧನಂಜಯ್ ಈ ಭಾರಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. ಧನಂಜಯ ಅವರ ಪ್ರೊಡಕ್ಷನ್ ನಿಂದ ಯಾವ ಹೀರೋ, ನಿರ್ದೇಶಕ ಮತ್ತು ನಾಯಕಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಕುತೂಹಲ ಶುರುವಾಗಿದೆ. ಡಾಲಿ ಪಿಕ್ಚರ್ಸ್ ಇದೇ ತಿಂಗಳು ಫೆಬ್ರವರಿ 14ಕ್ಕೆ ಸಿನಿಮಾದ ಟೈಟಲ್…

Read More