ಕನ್ನಡದ ಚಿತ್ರರಂಗದ ನಟ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಸಾಕ್ಷಾ ಶೆಟ್ಟಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಅದರ ಫೋಟೋಗಳ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕುಂದಾಪುರದಲ್ಲಿ ಫೆ.4ರಂದು ಗುರು ಹಿರಿಯರು ನಿಶ್ಚಯಿಸಿದ ಹುಡುಗಿಯ ಬೆರಳಿಗೆ ಅಭಿಷೇಕ್ ಉಂಗುರ ತೊಡಿಸಿದ್ದಾರೆ. ಇದು ಪಕ್ಕಾ ಅರೇಂಜ್ ಮ್ಯಾರೇಜ್ ಆಗಿದ್ದು, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅಭಿಷೇಕ್ ಶೆಟ್ಟಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾಕ್ಷಾ ಶೆಟ್ಟಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಫೈನಾನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವರ್ಷ ಡಿಸೆಂಬರ್ 8ರಂದು ಅಭಿಷೇಕ್- ಸಾಕ್ಷಾ ಮದುವೆ ಕುಂದಾಪುರದಲ್ಲಿ ನಡೆಯಲಿದೆ. ಇನ್ನು ಅಭಿಷೇಕ್ ನಮ್ ಗಣಿ ಬಿಕಾಂ ಪಾಸ್, ಗಜಾನನ & ಗ್ಯಾಂಗ್ ಚಿತ್ರದಲ್ಲಿ ನಿರ್ದೇಶನದ ಜೊತೆಗೆ ನಟನಾಗಿಯೂ ಕಾಣಿಸಿಕೊಂಡಿದ್ದಾರೆ. ಅಭಿಷೇಕ್ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.
Author: Author AIN
ಇಸ್ಲಮಾಬಾದ್: ಇಸ್ಲಮಾಬಾದ್‍ನ ಬನಿಗಾಲದಲ್ಲಿ ಇರುವ ತನ್ನ ಮನೆಯನ್ನು ಸಬ್‍ಜೈಲೆಂದು ಘೋಷಿಸುವ ಅಧಿಕಾರಿಗಳ ಕ್ರಮವನ್ನು ತಡೆಯಬೇಕು ಮತ್ತು ತನ್ನನ್ನು ರಾವಲ್ಪಿಂಡಿಯ ಅಡಿಯಾಲಾ ಜೈಲಿಗೆ ಸ್ಥಳಾಂತರಿಸಬೇಕು ಎಂದು ಕೋರಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿ ಬುಷ್ರಾ ಬೀಬಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ತೋಷಖಾನ ಭ್ರಷ್ಟಾಚಾರ ಪ್ರಕರಣ ಸಂಬಂಧ ಇಮ್ರಾನ್‍ಖಾನ್ ದಂಪತಿಗೆ ವಿಶೇಷ ನ್ಯಾಯಾಲಯ 14 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಇಮ್ರಾನ್ ಖಾನ್ ರನ್ನು ಅಡಿಯಾಲಾ ಜೈಲಿನಲ್ಲಿ ಹಾಗೂ ಬುಷ್ರಾ ಬೀಬಿಯನ್ನು ಅವರ ಮನೆಯಲ್ಲೇ ಗೃಹ ಬಂಧನದಲ್ಲಿ ಇರಿಸಲಾಗಿದೆ. ಜೊತೆಗೆ ಅವರ ಮನೆಯನ್ನು ಸಬ್‍ಜೈಲು ಎಂದು ಘೋಷಿಸಲು ಅಧಿಕಾರಿಗಳು ನಿರ್ಧರಿಸಿದ್ದು ಇದನ್ನು ತಡೆಯುವಂತೆ ಬುಷ್ಟಾ ಬೀಬಿ ಕೋರ್ಟ್ ಮೊರೆ ಹೋಗಿದ್ದಾರೆ. ತಾನು ಸಾಮಾನ್ಯ ಕೈದಿಯಂತೆ ಅಡಿಯಾಲಾ ಜೈಲಿನಲ್ಲಿ ಇರಲು ಬಯಸುತ್ತೇನೆ. ಸಬ್‍ಜೈಲು ಎಂದು ಸರಕಾರ ಘೋಷಿಸಿರುವ ತನ್ನ ಮನೆಯಲ್ಲಿ ಒಬ್ಬಂಟಿಯಾಗಿರುವುದರಿಂದ ನನಗೆ ಜೀವ ಭಯ ಎದುರಾಗಿದೆ. ಗುರುತಿಸಲಾಗದ ವ್ಯಕ್ತಿಗಳು ಮನೆಗೆ ಬಂದು ಹೋಗುತ್ತಿರುವುದು ಅಭದ್ರತೆಯ ಭಾವನೆಯನ್ನು ಮೂಡಿಸಿದೆ. ಆದ್ದರಿಂದ ಮನೆಯನ್ನು ಸಬ್‍ಜೈಲು ಎಂದು…
ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ರಣಬೀರ್ ಕಪೂರ್ ಜೊತೆಗಿನ ಅನಿಮಲ್ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಶ್ಮಿಕಾ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡ್ತಿದೆ. ಈ ಕುರಿತು ನಟಿ ಪ್ರತಿಕ್ರಿಯಿಸಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶದನ ರಣ್‌ಬೀರ್, ರಶ್ಮಿಕಾ, ತೃಪ್ತಿ ದಿಮ್ರಿ ಕಾಂಬಿನೇಷನ್ ನ ‘ಅನಿಮಲ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. 900 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿಯಲ್ಲಿರುವ ಚಿತ್ರತಂಡ ಅದೇ ಖುಷಿಯಲ್ಲಿ ಅನಿಮಲ್ ಪಾರ್ಟ್ 2ಗೂ ತಯಾರಿ ಮಾಡ್ತಿದ್ದಾರೆ ಎನ್ನಲಾಗ್ತಿದೆ. ಸದ್ಯ ರಶ್ಮಿಕಾ ಮಂದಣ್ಣ ಕೈಯಲ್ಲಿ 6ಕ್ಕೂ ಹೆಚ್ಚು ಸಿನಿಮಾಗಳಿವೆ. ಇದುವರೆಗೂ ಸಿನಿಮಾವೊಂದಕ್ಕೆ ಎರಡರಿಂದ ಮೂರು ಕೋಟಿ ರೂ. ಚಾರ್ಜ್ ಮಾಡುತ್ತಿದ್ದ ನಟಿ ಇದೀಗ 4 ರಿಂದ 5 ಕೋಟಿ ರೂ.ವರೆಗೆ ಹೆಚ್ಚಳ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡ್ತಿದೆ. ಇದಕ್ಕೆ ರಶ್ಮಿಕಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಸುದ್ದಿ ರಶ್ಮಿಕಾ ಗಮನಕ್ಕೂ ಬಂದಿದ್ದು, ಇದೆಲ್ಲವನ್ನೂ ನೋಡಿದ ನಂತರ…
ಬಾಲಿವುಡ್ ನ ಖ್ಯಾತ ನಟ ಧಮೇಂದ್ರ ಹಾಗೂ ಹೇಮಾ ಮಾಲಿನಿ ಪುತ್ರಿ ಇಶಾ ಡಿಯೋಲ್ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಉದ್ಯಮಿ ಭರತ್ ತಖ್ತಾನಿ ಜೊತೆಗಿನ 12 ವರ್ಷಗಳ ವೈವಾಹಿಕ ಜೀವನವನ್ನು ಇಶಾ ಕಡಿದುಕೊಂಡಿದ್ದಾರೆ. ತಾವಿಬ್ಬರು ಬೇರೆಯಾಗಿರುವ ಕುರಿತು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಾವು ಪರಸ್ಪರ ಒಪ್ಪಿಗೆಯ ಮೇರೆಗೆ ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಜೀವನ ಬದಲಾಗುತ್ತಿರುವ ಈ ಸಮಯದಲ್ಲಿ ನಮ್ಮ ಇಬ್ಬರು ಮಕ್ಕಳ ಉತ್ತಮ ಹಿತಾಸಕ್ತಿ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಗೌಪ್ಯತೆಯನ್ನ ಗೌರವಿಸುವುದನ್ನು ನಾವು ಪ್ರಶಂಸಿಸುತ್ತೇವೆ ಎಂದು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಜಂಟಿ ಹೇಳಿಕೆ ನೀಡಿದ್ದಾರೆ. 2012ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ 2017ರಲ್ಲಿ ಮೊದಲ ಮಗು ರಾಧ್ಯಗೆ ಜನ್ಮ ನೀಡಿದರು. ಬಳಿಕ 2019ರಲ್ಲಿ ಎರಡನೇ ಮಗು ಜನಿಸಿದೆ. ಇದೀಗ 12 ವರ್ಷಗಳ ದಾಂಪತ್ಯ ಜೀವನಕ್ಕೆ ಇಶಾ ಡಿಯೋಲ್-…
ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್’ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈ ಹಿಂದೆ ವಂಗಾ ನಿರ್ದೇಶನದ ಅರ್ಜುನ್ ರೆಡ್ಡಿ ಚಿತ್ರ ಕೂಡ ಸಖತ್ ಕಮಾಲ್ ಮಾಡಿತ್ತು. ವಂಗಾ ಕೆಲಸ ನೋಡಿ ಅದೆಷ್ಟೋ ಮಂದಿ ಆವರ ಜೊತೆ ಕೆಲಸ ಮಾಡೋಕೆ ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಬಿಟೌನ್ ಕಿಂಗ್ ಕಂಗನಾ ಮಾತ್ರ ಬಂದ ಅವಕಾಶವನ್ನು ರಿಜೆಕ್ಟ್ ಮಾಡಿದ್ದಾರೆ. ಸಾಮಾನ್ಯವಾಗಿ ಬಿಟೌನ್ ನಲ್ಲಿ ಬರುವ ಸಾಕಷ್ಟು ಸಿನಿಮಾಗಳನ್ನ ನೋಡಿ ಕಂಗನಾ ಪ್ರತಿಕ್ರಿಯೆ ನೀಡುತ್ತಾರೆ. ತಮಗೆ ಅನಿಸಿದ್ದನ್ನು ಯಾವುದೇ ಮುಲಾಜಿಲ್ಲದೆ ಪ್ರತಿಕ್ರಿಯಿಸಿ ಸಾಕಷ್ಟು ಮಂದಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ ಸೂಪರ್ ಹಿಟ್ ಆಗಿದ್ದ ಅನಿಮಲ್ ಸಿನಿಮಾವನ್ನು ನೋಡಿ ಪ್ರತಿಕ್ರಿಯಿಸಿದ್ದ ಕಂಗನಾ ಈ ಸಿನಿಮಾ ಸ್ತ್ರಿ ವಿರೋಧಿಯಾಗಿದೆ ಎಂದಿದ್ದರು. ಕಂಗನಾ ಹೇಳಿಕೆಯನ್ನು ಪಾಸಿಟಿವ್ ಆಗಿ ತೆಗೆದುಕೊಂಡಿದ್ದ ಸಂದೀಪ್ ವಂಗಾ ಇದೀಗ ಆಕೆಯ ಜೊತೆ ಸಿನಿಮಾ ಮಾಡಲು ಮುಂದಾಗಿದ್ದರು. ಅವಕಾಶ ಸಿಕ್ಕರೆ, ಪಾತ್ರಕ್ಕೆ ಕಂಗನಾ ಸೂಕ್ತ ಎನಿಸಿದರೆ…
ಚಿಲಿಯ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ಚಿಲಿಯಾದ ದಕ್ಷಿಣ ಭಾಗದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದ್ದು ಅವರಿಗೆ 74 ವರ್ಷ ವಯಸ್ಸಾಗಿತ್ತು. ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ನಾಲ್ವರು ಇದ್ದರು ಎಂದು ಸರ್ಕಾರದ ತುರ್ತು ಸಂಸ್ಥೆ ಸೆನಾಪ್ರೆಡ್ ಮಾಹಿತಿ ನೀಡಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ರಕ್ಷಣಾ ಸೇವೆಗಳು ಪಿನೆರಾ ಅವರ ಮೃತದೇಹವನ್ನು ವಶಪಡಿಸಿಕೊಂಡಿವೆ ಮತ್ತು ಸರ್ಕಾರವು ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಿದೆ ಎಂದು ಚಿಲಿ ಆಂತರಿಕ ಸಚಿವ ಕ್ಯಾರೊಲಿನಾ ತೋಹಾ ಮಾಹಿತಿ ನೀಡಿದ್ದಾರೆ.
ಚಿಕಾಗೋ: ವಿದ್ಯಾಭ್ಯಾಸಕ್ಕಾಗಿ ಅಮೆರಿಕಾಗೆ ತೆರಳಿದ್ದ ಹೈದರಾಬಾದ್ ಮೂಲದ ವಿದ್ಯಾರ್ಥಿಯ ಮೇಲೆ ನಾಲ್ವರು ಶಸ್ತ್ರಸಜ್ಜಿತ ಕಳ್ಳರು ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಚಿಕಾಗೋದಲ್ಲಿ ನಡೆದಿದೆ. ಸದ್ಯ ಹಲ್ಲೆಗೊಳಗಾಗಿರುವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಕಳ್ಳರು ತನ್ನನ್ನು ಹೊಡೆದ ತನ್ನ ಬಳಿ ಇದ್ದ ಫೋನ್ ತೆಗೆದುಕೊಂಡಿದ್ದಾರೆ ಎಂದು ಹಲ್ಲೆಗೊಳಗಾದ ವಿದ್ಯಾರ್ಥಿ ಪ್ರತಿಕ್ರಿಯಿಸಿದ್ದಾನೆ. ಈ ವರ್ಷ ಅಮೆರಿಕದಲ್ಲಿ ನಾಲ್ವರು ಭಾರತೀಯ ಮೂಲದ ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಘಟನೆ ಕಳವಳವನ್ನುಂಟು ಮಾಡಿದೆ. ಹೈದರಾಬಾದ್ ನ ಲಂಗರ್ ಹೌಜ್ ಮೂಲದ ಸೈಯದ್ ಮಜ್ಜರ್ ಅಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲು ಅಮೆರಿಕದ ಇಂಡಿಯಾನಾ ವೆಸ್ಲಿಯನ್ ವಿಶ್ವವಿದ್ಯಾಲಯಕ್ಕೆ ತೆರಳಿದ್ದಾರೆ. ಸದ್ಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಳೆದ ಮೂರು ನಾಲ್ಕು ದಿನಗಳ ಹಿಂದೆ ಸಾವಿನ ಸುದ್ದಿ ಹರಡಿಸಿ ಅಭಿಮಾನಿಗಳಿಗೆ ಶಾಕ್ ನೀಡಿ ಬಳಿಕ ಎಲ್ಲರಿಂದಲೂ ಬೈಸಿಕೊಂಡಿದ್ದ ನಟಿ ಕಂ ಮಾಡೆಲ್ ಪೂನಂ ಪಾಂಡೆ ಪರವಾಗಿ ನಟಿಯ ಡಿಜಿಟಲ್ ಟೀಮ್ ಕ್ಷಮೆಯಾಚಿಸಿದೆ. ಪೂನಂ ಅವರ ಉದ್ದೇಶ ಒಳ್ಳೆಯದಾಗಿತ್ತು. ಆದರೆ, ಆಯ್ಕೆ ಮಾಡಿಕೊಂಡ ಕ್ರಮಕ್ಕಾಗಿ ನಾವು ವಿಷಾದಿಸುತ್ತೇವೆ ಎಂದು ಟೀಮ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ. ಗರ್ಭಕಂಠ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಸತ್ತಂತೆ ಸುದ್ದಿ ಹರಡಿಸಿದ್ದರು. ಪೂನಂ ಸಾವಿನ ಸುದ್ದಿ ಕೇಳಿ ಅನೇಕರು ವಿಷಾದ ವ್ಯಕ್ತ ಪಡಿಸಿದ್ದು ಬಳಿಕ ಆಕೆ ನಾಟಕವಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ನಟಿಯ ಮೇಲೆ F.I.R ದಾಖಲಾಗಿದೆ. ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಔಷಧ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿದೆ. ಈ ಕುರಿತಂತೆ ಸ್ಪಷ್ಟನೆ ನೀಡಿರುವ ನಟಿ , ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೆಬ್ರವರಿ 16ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಎಂದಿನಂತೆ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದು, ಹುಟ್ಟುಹಬ್ಬದ ಪ್ರಯುಕ್ತ ಯಾರೂ ಕೇಕ್ ಮತ್ತು ಬ್ಯಾನರ್ ಕಟ್ಟದಂತೆ ಮನವಿ ಮಾಡಿದ್ದಾರೆ. ಜೊತೆಗೆ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ದವಸ ಧಾನ್ಯಗಳನ್ನು ಉಡುಗೊರೆಯಾಗಿ ನೀಡುವಂತೆ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಚಾಲೆಂಜಿಂಗ್ ಸ್ಟಾರ್ ಬರ್ತಡೇ ಪ್ರಯುಕ್ತ ಅಂದು ಹೊಸ ಸಿನಿಮಾಗಳ ಅನೌನ್ಸ್, ಪೋಸ್ಟರ್ ಲಾಂಚ್ ಇದ್ದೆ ಇರುತ್ತೆ. ಅಂತೆಯೇ ಈ ಭಾರಿ ದರ್ಶನ್ ನಟನೆಯ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುವ ಸಾಧ್ಯತೆ ಇದೆ. ಈ ಹಿಂದೆ ಪ್ರಕಾಶ್ ವೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ‘ಡೆವಿಲ್’ ಚಿತ್ರದ ಸ್ಕ್ರಿಪ್ಟ್ ಪೂಜೆ ಸರಳವಾಗಿ ನೆರವೇರಿತ್ತು. ಕಾಟೇರ ಚಿತ್ರದ ರಿಲೀಸ್ ಬಳಿಕವೇ ಡೆವಿಲ್ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸುತ್ತೇವೆ. ಅದುವರೆಗೂ ಯಾವುದೇ ಮಾಹಿತಿ ಹೊರಹಾಕುವುದಿಲ್ಲ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದರು. ಅಂತೆಯೇ ಇದೀಗ ಕಾಟೇರ ರಿಲೀಸ್…
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಲಾಲ್ ಸಲಾಂ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ್ದು ಟ್ರೈಲರ್ ನಲ್ಲಿ ರಜನಿ ಎಂದಿನಂತೆ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಲಾಲ್ ಸಲಾಂ ಸಿನಿಮಾಗೆ ಐಶ್ವರ್ಯ ರಜನಿಕಾಂತ್ ಆಕ್ಷನ್ ಕಟ್ ಹೇಳಿದ್ದು ಅಭಿಮಾನಿಗಳಿಗೆ ಏನೆಲ್ಲಾ ಬೇಕೋ ಅದನೆಲ್ಲವನ್ನೂ ಚಿತ್ರದಲ್ಲಿ ನೀಡಿದ್ದಾರೆ. ‘ಜೈಲರ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ತೆರೆ ಕಾಣುತ್ತಿರೋ ಲಾಲ್ ಸಲಾಂ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗ್ಲೆ ಸಿನಿಮಾದ ಟ್ರೈಲರ್ ನಲ್ಲಿ ರಜನಿಕಾಂತ್ ಅಬ್ಬರಿಸಿದ್ದು ಚಿತ್ರದ ಟ್ರೈಲರ್ ನೋಡಿ ಚಿತ್ರದ ಮೇಲಿರೋ ನಿರೀಕ್ಷೆ ದುಪ್ಪಟ್ಟಾಗಿದೆ. ಸಂಕ್ರಾಂತಿ ಹಬ್ಬದಂದು ಲಾಲ್ ಸಲಾಂ ಸಿನಿಮಾವನ್ನು ರಿಲೀಸ್ ಮಾಡೋಕೆ ಚಿತ್ರತಂಡ ಮುಂದಾಗಿತ್ತು. ಆದರೆ ಅಂದು ಧನುಷ್ ಸಿನಿಮಾ ರಿಲೀಸ್ ಆದ ಕಾರಣದಿಂದಾಗಿ ಫೆಬ್ರವರಿ 9ರಂದು ಲಾಲ್ ಸಲಾಂ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಸ್ಪೋರ್ಟ್ ಡ್ರಾಮಾ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ವಿಷ್ಣು…