ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ವಿಜಯ್ ಆನಂದ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವಿಜಯ್ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ. 1982ರಲ್ಲಿ ವೃತ್ತಿ ಜೀವನ ಆರಂಭವಿಸಿದ್ದ ವಿಜಯ್ ನಾಲ್ಕು ದಶಕಗಳ ಕಾಲ ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇಳಯರಾಜರಂಥ ದಿಗ್ಗಜರ ಮಧ್ಯೆಯೂ ತಮ್ಮ ತನವನ್ನು ಉಳಿಸಿಕೊಂಡಿದ್ದ ವಿಜಯ್ ನಿಧನ ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ರಜನಿಕಾಂತ್ ನಟನೆಯ ನಾನ್ ಆದಿಮೈ ಇಲೈ ಸೇರಿದಂತೆ ನೂರಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿರುವ ವಿಜಯ್, ತಮಿಳು, ತೆಲುಗು ಹಾಗೂ ಮಲಯಾಳಂ ಸಿನಿಮಾ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.
Author: Author AIN
ಚೀನಾದ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಆಗಿರುವ ಇನ್ ಪ್ಲಸ್ ಸಾಕಷ್ಟು ಹೊಸ ಹೊಸ ಫೋನ್ ಗಳನ್ನು ಬಿಡುಗಡೆ ಮಾಡುತ್ತಿದೆ. ಒನ್ ಪ್ಲಸ್ ಸಂಸ್ಥೆಯು ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್ ಫಸ್ಟ್ ಸೇಲ್ ಫೆ. 6 ರಂದು ಮುಕ್ತಾಯವಾಗಿದ್ದು, ಸದ್ಯದಲ್ಲೇ ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್ ಓಪೆನ್ ಸೇಲ್ ಪ್ರಾರಂಭವಾಗಲಿದೆ. ಈ ಮೂಲಕ ಮೊದಲು ಖರೀದಿಸಲು ಸಾಧ್ಯವಾಗದೆ ಇದ್ದವರು ಇದೀಗ ಕೊಂಡುಕೊಳ್ಳಬಹುದಾಗಿದೆ. ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್ ಮಾರಾಟವು ಇದೇ ಫೆಬ್ರವರಿ 13ರಿಂದ ಒನ್‌ಪ್ಲಸ್ ಇಂಡಿಯಾ ವೆಬ್‌ಸೈಟ್, ಅಮೆಜಾನ್ ಇ ಕಾಮರ್ಸ್ ಹಾಗೂ ರಿಟೇಲ್ ಸ್ಟೋರ್‌ಗಳ ಲಭ್ಯವಾಗಲಿದೆ. ಅಂದ ಹಾಗೆ ಈ 12R ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಒನ್‌ಪ್ಲಸ್ 12R ಮೊಬೈಲ್ ನ ಬೆಲೆ ರೂ. 39,999 ರಿಂದ ಪ್ರಾರಂಭವಾಗುತ್ತದೆ. ಇದು 8GB RAM ಮತ್ತು 128GB ಆಂತರಿಕ ಸಂಗ್ರಹಣೆಯದ್ದಾಗಿದೆ. 16GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಬೆಲೆ 45,999 ರೂ. ಆಗಿದೆ. ICICI ಕ್ರೆಡಿಟ್ ಕಾರ್ಡ್ ಮತ್ತು…
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗನ ವಿವಾಹ ಆರತಕ್ಷತೆ ಕಾರ್ಯಕ್ರಮ ಮಧ್ಯಪ್ರದೇಶದ ನಕಾಡದಲ್ಲಿ ಅದ್ದೂರಿಯಾಗಿ ನೆರವೇರಿದೆ. ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗೌಡ ಭಾಗಿಯಾಗಿ ನವ ದಂಪತಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕದ ಉದ್ಯಮಿಗಳಾದ ಪುಟ್ಟರಾಜ್. ಪಿ. ಲಕ್ಷ್ಮೀಪ್ರಸಾದ್ ಆರ್. ಎಸ್. ಸೇರಿದಂತೆ ವಿವಿಧ ರಾಜ್ಯದ ಗಣ್ಯರು, ರಾಜಕಾರಣಿಗಳು ಅಧಿಕಾರಿಗಳು ಭಾಗವಹಿಸಿದ್ದರು. ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾದ ಗಣ್ಯರು. ಮಧ್ಯಪ್ರದೇಶದ ನಕಾಡದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗ ಧೀರಜ್ ಗೆಹ್ಲೋಟ್ ಅವರ ವಿವಾಹ ಆರತಕ್ಷತೆ ಸಮಾರಂಭದ ಫೋಟೋಸ್.
ಪಾಕ್ ನಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಇಂದು ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮತದಾನ ಪ್ರಕ್ರಿಯೆಯು ಬೆಳಗ್ಗೆ 8 ರಿಂದ ಶುರುವಾಗಿದ್ದು ಸಂಜೆ 5 ರವರೆಗೆ ನಡೆಯಲಿದ್ದು, ಪಾಕ್ ನ ಎಲ್ಲಾ ಮತಗಟ್ಟೆಗಳಲ್ಲಿ 128 ಮಿಲಿಯನ್‌ಗಿಂತಲೂ ಹೆಚ್ಚು ಮತದಾರರು ಮತ ಚಲಾಯಿಸಲಿದ್ದಾರೆ. ಈ ನಡುವೆ ಭದ್ರತೆಯ ದೃಷ್ಟಿಯಿಂದ ಇಡೀ ದೇಶಾದ್ಯಂತ ಇಂದು ಮೊಬೈಲ್ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ ಮೊಬೈಲ್ ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಪಾಕಿಸ್ತಾನದ ಉಸ್ತುವಾರಿ ಆಂತರಿಕ ಸಚಿವಾಲಯವು ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಪಾಕಿಸ್ತಾನದ ಒಟ್ಟಾರೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಪಾಕಿಸ್ತಾನದಲ್ಲಿ ಒಟ್ಟು 90,675 ಮತಗಟ್ಟೆಗಳಿರುತ್ತವೆ. ಈ ಕೇಂದ್ರಗಳಲ್ಲಿ 2,76,402 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ, 12.85 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರು ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳಿಗೆ 5121 ಅಭ್ಯರ್ಥಿಗಳಲ್ಲಿ ಒಟ್ಟು 12,85,85,760 ನೋಂದಾಯಿತ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.…
ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಮತದಾನಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗಿದೆ. ಚುನಾವಣೆಗೆ ವಾರ ಇರುವಾಗ್ಲೆ ಅಲ್ಲಲ್ಲಿ ಸಾಕಷ್ಟು ಹಿಂಸಾಚಾರಗಳು ನಡೆಯುತ್ತಿದ್ದು ಸಾಕಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು 6.50 ಲಕ್ಷ ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. 100 ವಿದೇಶಿ ವೀಕ್ಷಕರು ಪಾಕಿಸ್ತಾನದ ಚುನಾವಣಾ ಪ್ರಕ್ರಿಯೆಯ ಮೇಲೆ ಕಣ್ಣಿಟ್ಟಿದ್ದಾರೆ. ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. ಪಾಕಿಸ್ತಾನದಲ್ಲಿ ಒಟ್ಟು 90,675 ಮತಗಟ್ಟೆಗಳಿರುತ್ತವೆ. ಈ ಕೇಂದ್ರಗಳಲ್ಲಿ 2,76,402 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ, 12.85 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರು ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳಿಗೆ 5121 ಅಭ್ಯರ್ಥಿಗಳಲ್ಲಿ ಒಟ್ಟು 12,85,85,760 ನೋಂದಾಯಿತ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಇವರಲ್ಲಿ 4,807 ಪುರುಷರು, 312 ಮಹಿಳೆಯರು ಮತ್ತು ಇಬ್ಬರು ಟ್ರಾನ್ಸ್-ಜೆಂಡರ್ ಅಭ್ಯರ್ಥಿಗಳು ಸೇರಿದ್ದಾರೆ. ನಾಲ್ಕು ಪ್ರಾಂತೀಯ ವಿಧಾನಸಭೆಗಳಿಗೆ…
ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಈ ಚಿತ್ರದ ಕುರಿತು ಯಾವುದಾದರೂ ಅಪ್ ಡೇಟ್ ಕೊಡಿ ಎಂದು ಫ್ಯಾನ್ಸ್ ಕಿಚ್ಚನನ್ನು ಪದೇ ಪದೇ ಕೇಳ್ತಿದ್ದಾರೆ. ಇದೀಗ ಸುದೀಪ್ ಮ್ಯಾಕ್ಸ್ ಸಿನಿಮಾದ ಮಾಹಿತಿ ಕೇಳುವುದರ ಜೊತೆಗೆ ಸಿಸಿಎಲ್ ಮತ್ತು ಬಿಗ್ ಬಾಸ್ ಅನ್ನು ವ್ಯಂಗ್ಯ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಸಿಸಿಎಲ್ ಮತ್ತು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಲ್ಲಿ ಸುದೀಪ್ ಕಳೆದು ಹೋಗಿದ್ದಾರೆ. ಹಾಗಾಗಿಯೇ ಸಿನಿಮಾ ಬೇಗ ಬೇಗ ಆಗುತ್ತಿಲ್ಲ ಎಂದು ಅಭಿಮಾನಿಗಳು ಅಸಮಾಧಾನ ಹೊರ ಹಾಕಿದ್ದರು. ಮ್ಯಾಕ್ಸ್ ಸಿನಿಮಾ ಎಲ್ಲಿಗೆ ಬಂತು? ಯಾವಾಗ ರಿಲೀಸ್ ಎಂದೆಲ್ಲ ಪ್ರಶ್ನೆ ಕೇಳಿದ್ದರು. ಎಲ್ಲದಕ್ಕೂ ಕಿಚ್ಚ ಪ್ರತಿಕ್ರಿಯೆ ನೀಡಿದ್ದಾರೆ. ಯಾರದೋ ಸಿನಿಮಾ ರಿಲೀಸ್ ಆಯಿತು ಅಂತ ಪೈಪೋಟಿಗಾಗಿ ಹಾಗೆಲ್ಲ ಅಪ್ ಡೇಟ್ ಕೊಡೋಕೆ ಆಗಲ್ಲವೆಂದು ಸುದೀಪ್ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ‘ಮ್ಯಾಕ್ಸ್’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿದ ಮೇಲೆ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ಸಿಕ್ಕಿರಲಿಲ್ಲ. ‘ಸಂಕ್ರಾಂತಿ’ ನಂತರ ಮ್ಯಾಕ್ಸ್ ಸಿನಿಮಾ…
ತಮಿಳು ಚಿತ್ರರಂಗದಲ್ಲಿ ಕಲಾವಿದರು ರಾಜಕೀಯಕ್ಕೆ ಬರುವುದು ಕಾಮನ್ ಆಗಿದೆ. ಈಗಾಗ್ಲೆ ನಟ ವಿಜಯ್ ದಳಪತಿ ತಮ್ಮದೆ ಹೊಸ ಪಕ್ಷ ಹುಟ್ಟುಹಾಕಿದ್ದು ಈ ಮಧ್ಯೆ ನಟ ವಿಶಾಲ್ ರಾಜಕೀಯಕ್ಕೆ ಬರ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ನಟ ವಿಶಾಲ್ ಸ್ಪಷ್ಟನೆ ನೀಡಿದ್ದಾರೆ. ನಟ ವಿಶಾಲ್ ಜನಪರ ಕೆಲಸಗಳನ್ನು ನೋಡಿ ಅವರು ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂದು ಹೇಳಲಾಗಿತ್ತು. ವಿಶಾಲ್ ತಮ್ಮ ತಾಯಿ ಹೆಸರಿನಲ್ಲಿ ಫೌಂಡೇಶನ್, ಅಭಿಮಾನಿಗಳ ಕ್ಲಬ್ ಹೆಸರಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಕಾರಣಕ್ಕೆ ವಿಶಾಲ್ ಹೆಸರು ರಾಜಕಾರಣದಲ್ಲಿ ಕೇಳಿ ಬಂದಿತ್ತು. ಆದರೆ ಇದೀಗ ಅದಕ್ಕೆಲ್ಲಾ ವಿಶಾಲ್ ಬ್ರೇಕ್ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶಾಲ್, ರಾಜಕೀಯ ಕನಸು ಇಟ್ಟುಕೊಂಡು ತಾವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿಲ್ಲ. ನನ್ನ ಖುಷಿಗಾಗಿ ಇವೆಲ್ಲವನ್ನೂ ಮಾಡುತ್ತಿರುವೆ. ಅದಕ್ಕೂ ರಾಜಕಾರಣಕ್ಕೂ ತಳುಕು ಹಾಕಬೇಡಿ ಎಂದು ಪತ್ರ ಬರೆದಿದ್ದಾರೆ. ಸದ್ಯಕ್ಕೆ ರಾಜಕಾರಣದ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ಏನು ಅಂತ ಗೊತ್ತಿಲ್ಲ. ಸಮಾಜ ಸೇವೆ ಎಂದಿನಂತೆ ಮುಂದುವರೆಯಲಿದೆ. ತಾಯಿ…
ನಿರ್ದೇಶಕ ಅಟ್ಲಿ ಸ್ಟಾರ್ ನಟರ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಜವಾನ್ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಶಾರುಖ್ ಜೊತೆ ಮತ್ತೊಂದು ಸಿನಿಮಾ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಬಂದಿರುವ ಮಾಹಿತಿ ಪ್ರಕಾರ ಅಟ್ಲಿ ಸಲ್ಮಾನ್ ಖಾನ್ ಗೆ ಆಕ್ಷನ್ ಕಟ್ ಹೇಳಲಿದ್ದಾರಂತೆ. ಜವಾನ್ ಸಿನಿಮಾದ ಬಳಿಕ ಶಾರುಖ್ ಖಾನ್ ಹಾಗೂ ಅಟ್ಲಿ ಕಾಂಬಿನೇಷನ್ ನಲ್ಲಿ ಜವಾನ್ 2 ಚಿತ್ರಕ್ಕೆ ಪ್ಲ್ಯಾನ್ ನಡೆದಿತ್ತು. ಆದರೆ ಈ ಮಧ್ಯೆ ಅಟ್ಲಿ ಸಲ್ಮಾನ್ ಖಾನ್ ಜೊತೆ ಕೆಲಸ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇತ್ತೀಚೆಗೆ ಅಟ್ಲಿ ಎರಡು ಮೂರು ಬಾರಿ ಸಲ್ಮಾನ್ ಖಾನ್ ಮನೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಸಲ್ಮಾನ್ ಖಾನ್ ಗೆ ಕಥೆ ಒಪ್ಪಿಸೋಕೆ ಅವರು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಟ್ಲಿ ಎಂಡ್ ಟೀಂ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲಿ. ಆದರೆ ಕೋಟಿ ಕೋಟಿ ಕಲೆಕ್ಷನ್ ಮಾಡಿರುವ ಜವಾನ್ ಸಿನಿಮಾದ ಬಳಿಕ ಅಟ್ಲಿ ನಿರ್ದೇಶನದ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿರೋದು ಮಾತ್ರ…
ಕೊಲಂಬೊ: ಹಿಂದೂ ಮಹಾಸಾಗರದ ದ್ವೀಪ ರಾಷ್ಟ್ರ, ಪ್ರವಾಸಿಗರ ನೆಚ್ಚಿನ ತಾಣವಾದ ಮಾಲ್ದೀವ್ಸ್, ಸಾಲದ ಸಂಕಷ್ಟಕ್ಕೆ ತುತ್ತಾಗುವ ಅತಿ ದೊಡ್ಡ ಅಪಾಯವನ್ನು ಎದುರಿಸುತ್ತಿದೆ ಎಂದು ವಿಶ್ವ ಹಣಕಾಸು ಸಂಸ್ಥೆ ಎಚ್ಚರಿಕೆ ನೀಡಿದೆ. ಚೀನಾದಿಂದ ಹೆಚ್ಚಿನ ಪ್ರಮಾಣದ ಸಾಲ ಪಡೆದಿರುವುದು ಮಾಲ್ದೀವ್ಸ್ ನ ಆರ್ಥಿಕತೆಗೆ ಕುತ್ತಾಗಿ ಪರಿಣಮಿಸಲಿದೆ ಎಂದು ಅರ್ಥಶಾಸ್ತ್ರಜ್ಞರು ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ ಐಎಂಎಫ್ ಈ ಎಚ್ಚರಿಕೆ ನೀಡಿದೆ. ಆದರೆ ಮಾಲ್ದೀವ್ಸ್ ನ ವಿದೇಶಿ ಸಾಲದ ಕುರಿತ ವಿವರಗಳನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿಯು ಬಹಿರಂಗಪಡಿಸಿಲ್ಲ. ಆದರೆ, ಆ ದೇಶದ ಆರ್ಥಿಕ ನೀತಿಯಲ್ಲಿ ತುರ್ತು ಹೊಂದಾಣಿಕೆ ಮಾಡಬೇಕಾದ ಅಗತ್ಯವನ್ನು ಐಎಂಎಫ್ ಪ್ರತಿಪಾದಿಸಿದೆ. ”ಗಣನೀಯವಾದ ನೀತಿ ಬದಲಾವಣೆಗಳಿಲ್ಲದೆ ಮಾಲ್ದೀವ್ಸ್ ನ ಒಟ್ಟಾರೆ ವಿತ್ತೀಯ ಕೊರತೆ ಹಾಗೂ ಸಾರ್ವಜನಿಕ ಸಾಲದ ಪ್ರಮಾಣವು ಅಧಿಕಮಟ್ಚದಲ್ಲಿಯೇ ಉಳಿದುಕೊಂಡಿದೆ ಎಂದು ಐಎಂಎಫ್ ತಿಳಿಸಿದೆ. 2021ರಲ್ಲಿಯೇ ಮಾಲ್ದೀವ್ಸ್ ಚೀನಾಗೆ 3 ಶತಕೋಟಿ ಡಾಲರ್ ಸಾಲವನ್ನು ಬಾಕಿಯಿರಿಸಿಕೊಂಡಿದೆ ಎಂದು ವಿಶ್ವ ಬ್ಯಾಂಕ್ ಮಾಹಿತಿ ನೀಡಿದೆ. ಮುಯಿಝ್ಝು ಅವರ ರಾಜಕೀಯ ಗುರು, 2018ರವರೆಗೆ ಆಡಳಿತ ನಡೆಸಿದ್ದ…
ಬಾಲಿವುಡ್ ನ ಖ್ಯಾತ ಸೆಲೆಬ್ರಿಟಿ ದಂಪತಿ ಧರ್ಮೇಂದ್ರ ಹಾಗೂ ಹೇಮಾ ಮಾಲಿನಿ ಪುತ್ರಿ ಇಶಾ ಡಿಯೋಲ್ ತಮ್ಮ 12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಅಂದ ಹಾಗೆ ಇಶಾ ಡಿಯೋಲ್ ಪತಿ ಭರತ್ ನಿಂದ ದೂರವಾಗಲು ವಿವಾಹೇತರ ಸಂಬಂಧವೇ ಕಾರಣ ಎನ್ನಲಾಗ್ತಿದೆ. ಬೆಂಗಳೂರಿನ ಹುಡುಗಿ ಜೊತೆ ಉದ್ಯಮಿ ಭರತ್‌ಗೆ ಸಂಬಂಧ ಇರುವ ಕಾರಣದಿಂದಾಗಿ ಇಶಾಗೆ ಪತಿಗೆ ಡಿವೋರ್ಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಇಶಾ ಎರಡನೇ ಮಗುವಿಗೆ ಜನ್ಮ ನೀಡಿದ ಬಳಿಕ ಗಂಡ ಹೆಂಡತಿ ನಡುವಿನ ಸಂಬಂಧ ಹದಗೆಟ್ಟಿತ್ತು. ಸಾಕಷ್ಟು ಸಮಯದಿಂದ ಇಬ್ಬರು ಬೇರೆ ಬೇರೆಯಾಗಿ ವಾಸಿಸುತ್ತಿದ್ದು ಇದೀಗ ಇಬ್ಬರು ಅಧಿಕೃತವಾಗಿ ದೂರವಾಗಿರುವ ಕುರಿತು ಮಾಹಿತಿ ನೀಡಿದ್ದಾರೆ. ತಾವಿಬ್ಬರು ಬೇರೆಯಾಗಿರುವ ಕುರಿತು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಾವು ಪರಸ್ಪರ ಒಪ್ಪಿಗೆಯ ಮೇರೆಗೆ ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಜೀವನ ಬದಲಾಗುತ್ತಿರುವ ಈ ಸಮಯದಲ್ಲಿ ನಮ್ಮ ಇಬ್ಬರು ಮಕ್ಕಳ ಉತ್ತಮ ಹಿತಾಸಕ್ತಿ ಮತ್ತು…