ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ದಿನೇ ದಿನೇ ಜೀವ ಬೆದರಿಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಅವರಿಗೆ ನೀಡಿರುವ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಆಪ್ತ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಗಿದೆ. ಇದಾದ ಬಳಿಕ ಸಲ್ಮಾನ್ ಖಾನ್ ಮತ್ತಷ್ಟು ಎಚ್ಚೆತ್ತುಕೊಂಡಿದ್ದಾರೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ‘ಏನಾಗಬೇಕೋ ಅದು ಆಗೇ ಆಗುತ್ತದೆ’ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ. ಈ ಹಿಂದೆ ‘ಆಪ್ ಕಿ ಅದಾಲತ್’ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ನಟ ಸಲ್ಮಾನ್ ಖಾನ್ ಅವರಿಗೆ ರಜತ್ ಶರ್ಮಾ ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳಿಗೆ ಸಲ್ಲು ಉತ್ತರ ಕೊಟ್ಟಿದ್ದರು. ಅವರು ಸಾವಿಗೆ ಭಯಪಟ್ಟು ಕುಳಿತುಕೊಂಡಿಲ್ಲ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದರು. ‘ಸಲ್ಮಾನ್ ನಿಮಗೆ ದೇಶ, ವಿದೇಶದಲ್ಲೂ ಬೆದರಿಕೆ ಇದೆ. ನಿಮಗೆ ಸಾಕಷ್ಟು ಭದ್ರತೆ ನೀಡಲಾಗಿದೆ. ಆದರೆ, ನೀವು ಇದನ್ನು ಗಂಭೀರವಾಗಿ ಸ್ವೀಕರಿಸಿಲ್ಲವಲ್ಲ’ ಎಂದು ರಜತ್ ಶರ್ಮಾ…
Author: Author AIN
ಬಿಗ್ ಬಾಸ್ ಸೀಸನ್ 11 ಆರಂಭವಾದ ಎರಡೇ ವಾರಕ್ಕೆ ಸಾಕಷ್ಟು ವಿವಾದಗಳನ್ನು ಮಾಡಿಕೊಳ್ಳುತ್ತಿದೆ. ಹಿಂದನ ಎಲ್ಲಾ ಸೀಸನ್ ಗಳಿಗೆ ಹೋಲಿಸಿದರೆ ಈ ಸೀಸನ್ ಹೆಚ್ಚು ವಿವಾದಕ್ಕೆ ಕಾರಣವಾಗುತ್ತಿದೆ. ಸ್ಪರ್ಧಿ ಲಾಯರ್ ಜಗದೀಶ್ ಪದೇ ಪದೇ ಕಾಂಟ್ರವರ್ಸಿ ಮಾಡಿಕೊಳ್ಳುತ್ತಿದ್ದಾರೆ. ಈ ಹಿಂದೆ ಬಿಗ್ ಬಾಸ್, ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಇದನ್ನು ಇನ್ನುಳಿದ ಎಲ್ಲ ಸದಸ್ಯರು ಖಂಡಿಸಿದ್ದಾರೆ. ಈ ಬಗ್ಗೆ ವಾದ ನಡೆಯುವಾಗ ರಂಜಿತ್ ಅವರು ಜಗದೀಶ್ ಮೇಲೆ ಕೈ ಮಾಡಿದ್ದು, ಇದರಿಂದ ಸಿಟ್ಟಾದ ಬಿಗ್ ಬಾಸ್ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಗುರುವಾರದ (ಅಕ್ಟೋಬರ್ 17) ಸಂಚಿಕೆಯಲ್ಲಿ ಜಗದೀಶ್ ಮತ್ತು ಗೋಲ್ಡ್ ಸುರೇಶ್ ಮಾತನಾಡುತ್ತ ಕುಳಿತಿದ್ದರು. ಆಗ ಹಂಸಾ ಬಗ್ಗೆ ಜಗದೀಶ್ ಅವರು ಒಂದಷ್ಟು ಆರೋಪಗಳನ್ನು ಮಾಡಿದರು. ಮಾತಿನ ಭರದಲ್ಲಿ ಹಂಸಾ ಬಗ್ಗೆ ಜಗದೀಶ್ ಅಸಭ್ಯ ಪದ ಬಳಕೆ ಮಾಡಿದ್ದಾರೆ. ಇದನ್ನು ಗೋಲ್ಡ್ ಸುರೇಶ್ ಅವರು ಕೂಡಲೇ ಖಂಡಿಸಿದ್ದಾರೆ. ಅಲ್ಲಿಂದ ದೊಡ್ಡ ಜಗಳ ಶುರುವಾಗಿದೆ. ಜಗದೀಶ್ ತುಂಬ ಕೆಟ್ಟ ಮಾತುಗಳನ್ನು ಆಡಿದ್ದರಿಂದ…
ಸ್ಯಾಂಡಲ್ ವುಡ್ ಖ್ಯಾತ ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ‘ಮನಸಾಲಜಿ’ ಹಾಗೂ ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ದೀಪಕ್ ಅರಸ್ ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 42 ವರ್ಷ ವಯಸ್ಸಿನ ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಅದಕ್ಕೆ ಡಯಾಲಿಸಿಸ್ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ದೀಪಕ್ ಅರಸ್ ಅವರ ಸಾವಿನಿಂದಾಗಿ ಅಮೂಲ್ಯ ಅವರ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ. ಬೆಂಗಳೂರಿನ ಆರ್ಆರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ದೀಪಕ್ ಮೃತಪಟ್ಟಿದ್ದು, ಬಳಿಕ ವಯ್ಯಾಲಿಕಾವಲ್ ನ ನಿವಾಸಕ್ಕೆ ಮೃತ ದೇಹವನ್ನು ತರಲಾಗಿದೆ. ಇಂದು ಅವರ ಸ್ವಗ್ರಾಮ ನಾಗಮಂಗಲಕ್ಕೆ ಮೃತ ದೇಹ ತೆಗೆದುಕೊಂಡು ಹೋಗಿ ಅಲ್ಲೇ ಅಂತ್ಯ ಸಂಸ್ಕಾರ ಮಾಡುವ ಸಾಧ್ಯತೆ ಇದೆ. ಅಮೂಲ್ಯ, ರಾಕೇಶ್ ಅಡಿಗ, ಸಾಧು ಕೋಕಿಲ ಮುಂತಾದವರು ನಟಿಸಿದ್ದ ‘ಮನಸಾಲಜಿ’ ಸಿನಿಮಾಗೆ ದೀಪಕ್ ಅರಸ್ ಅವರು ನಿರ್ದೇಶನ ಮಾಡಿದ್ದರು. ಆ ಸಿನಿಮಾ 2011ರಲ್ಲಿ ಬಿಡುಗಡೆ ಆಗಿತ್ತು. ಬಳಿಕ…
ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದ ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶದಿಂದ ಪಲಾಯನಗೊಂಡಿದ್ದರು. ಇದೀಗ ಹಸೀನ ವಿರುದ್ಧ ಸಾಮೂಹಿಕ ಹತ್ಯೆ ಆರೋಪ ಕೇಳಿ ಬಂದಿದ್ದು ಅವರ ಬಂಧನಕ್ಕೆ ದೇಶದ ಅಂತರರಾಷ್ಟ್ರೀಯ ಅಪರಾಧ ಪ್ರಕರಣಗಳ ನ್ಯಾಯಮಂಡಳಿಯು ಆದೇಶ ಹೊರಡಿಸಿದೆ. ನ್ಯಾ. ಗುಲಾಮ್ ಮೊರ್ತುಜಾ ಮಜೂಂದಾರ್ ಅವರ ಅಧ್ಯಕ್ಷತೆಯ ನ್ಯಾಯಮಂಡಳಿಯು ಶೇಖ್ ಹಸೀನಾ ಅವರನ್ನು ಒಳಗೊಂಡು 50 ಜನರ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ. ‘ಪ್ರಕರಣದಲ್ಲಿ ಅತ್ಯಂತ ಪ್ರಭಾವಿಯಾದವರನ್ನು ಬಂಧಿಸದಿದ್ದರೆ, ತನಿಖೆ ನಡೆಸುವುದೇ ಕಷ್ಟವಾಗಲಿದೆ’ ಎಂದು ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಜೂಲ್ ಇಸ್ಲಾಂ ನ್ಯಾಯಮಂಡಳಿಗೆ ಮನವಿ ಮಾಡಿದ್ದರು. ‘ಶೇಖ್ ಹಸೀನಾ ಹಾಗು ಅವರ ಅವಾಮಿ ಲೀಗ್ ಪಕ್ಷದ ಮುಖಂಡರ ವಿರುದ್ಧ ಕೊಲೆ, ಸಾಮೂಹಿಕ ಹತ್ಯೆ ಸೇರಿದಂತೆ ಇದುವರೆಗೂ ಒಟ್ಟು 60 ದೂರುಗಳು ದಾಖಲಾಗಿವೆ. ಹಸೀನಾ ಅವರ ಪುತ್ರ ಸಾಜೀದ್ ವಾಜೆದ್ ಅವರು ಕೆಲ ದಿನಗಳ ಹಿಂದೆ ಪ್ರತಿಕ್ರಿಯಿಸಿ, ‘ನಮ್ಮ ತಾಯಿ ಯಾವುದೇ ತಪ್ಪು ಮಾಡಿಲ್ಲ. ಆದರೂ ಬಾಂಗ್ಲಾದೇಶದಲ್ಲಿ ನಡೆಯುವ ತನಿಖೆಯನ್ನು ಅವರು ಎದುರಿಸಲಿದ್ದಾರೆ’ ಎಂದಿದ್ದರು.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಉಮಾಶ್ರೀ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಪುಟ್ಟಕ್ಕನ ಮಕ್ಕಳು ಧಾರವಾಹಿ ಆರಂಭದಿಂದಲೂ ಟಿಆರ್ ಪಿ ರೇಟ್ ನಲ್ಲಿ ಮೊದಲ ಸ್ಥಾನದಲ್ಲಿದೆ. ಆರಂಭದಿಂದಲೂ ಜನರ ಮನಸ್ಸು ಗೆಲ್ಲುತ್ತಿರುವ ಪುಟ್ಟಕ್ಕನ ಮಕ್ಕಳು ಧಾರವಾಹಿ ಇದೀಗ ಮಹಾ ತಿರುವು ಪಡೆದುಕೊಂಡಿದೆ. ಪುಟ್ಟಕ್ಕನ ಹುಟ್ಟುಹಬ್ಬಕ್ಕೆ ಎರಡೆರಡು ಸರ್ಪ್ರೈಸ್ ಕೊಡೋಕೆ ಸ್ನೇಹಾ ತಯಾರಾಗಿದ್ದಾಳೆ. ಒಂದು ಕಡೆ ಬಂಗಾರಮ್ಮನನ್ನು ಬಡಿಸಿಕೊಂಡು ಹೋಗಿರುವ ಸ್ನೇಹಾಗೆ ಮತ್ತೊಂದೆಡೆ ಸಹನಾ ಸಿಕ್ಕಿದ್ದಾಳೆ. ಅದೇ ಕಾರಣಕ್ಕೆ ಈ ಧಾರವಾಹಿ ಮುಕ್ತಾಯ ಕಾಣುತ್ತಿದೆ ಎಂದು ಹೇಳಲಾಗುತ್ತಿದೆ. ಜೀ ವಾಹಿನಿ ಪ್ರೋಮೋ ಶೇರ್ ಮಾಡಿಕೊಂಡಿದೆ.ಈ ಪ್ರೋಮೋ ನೋಡಿ ವೀಕ್ಷಕರು ಈ ಧಾರಾವಾಹಿ ಅಂತ್ಯ ಕಾಣಬಹುದು ಎಂದು ಕಮೆಂಟ್ ಮಾಡುತ್ತಿದ್ದಾರೆ. ಈ ಗಾಸಿಪ್ ಬೆನ್ನಲ್ಲೇ ಸ್ನೇಹಾ ಪಾತ್ರಧಾರಿ ಸಂಜನಾ ಅವರು ಇನ್‌ಸ್ಟಾದಲ್ಲಿ ಹೊಸ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ. ಕೆಲವೊಂದು ಗುಡ್ ಬೈ ಹೇಳೋದು ತುಂಬ ಕಷ್ಟ. ಆದರೆ ಬೆಳವಣಿಗೆಗೆ ಅದು ತುಂಬಾ ಮುಖ್ಯ ಎಂದು ಸಂಜನಾ ತಮ್ಮ ಇನ್ ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಹೀಗಾಗಿ…
ಎಲ್ ಜಿ ಕಂಪೆನಿ ಬಗ್ಗೆ ಸಾಕಷ್ಟು ಜನರಿಗೆ ಗೊತ್ತೆ ಇದೆ. ದಕ್ಷಿಣ ಕೊರಿಯಾ ಮೂಲದ ಎಲ್ ಜಿ ಕಂಪೆನಿ ಕೊಂಚ ವಿರಾಮದ ಬಳಿಕ ಮತ್ತೆ ಸ್ಮಾರ್ಟ್ಫೋನ್ ಉತ್ಪಾದಿಸಲು ಮುಂದಾಗಿದ್ದು, ಆ ಮೂಲಕ ಗ್ರಾಹಕರಿಗೆ ಶುಭ ಸುದ್ದಿ. ಎಲ್ಜಿ ಕಂಪನಿ ಸ್ಮಾರ್ಟ್ಫೋನ್ ರಿಲೀಸ್ ಮಾಡಲು ಮುಂದಾಗಿದ್ದು, ಅದಕ್ಕಾಗಿ ಪೇಟೆಂಟ್ಗೆ ಅರ್ಜಿ ಸಲ್ಲಿಸಿದೆ. ಆ ಮೂಲಕ 2021ರ ಎಪ್ರಿಲ್ನಲ್ಲಿ ನಿರ್ಗಮಿಸಿದ ಕ್ಷೇತ್ರವನ್ನು ಮರು ಪ್ರವೇಶಿಸುವ ಉದ್ದೇಶವನ್ನು ಹೊಂದಿದೆ. ಈ ಹಿಂದೆ ಎಲ್ಜಿ ಜಾಗತಿಕವಾಗಿ ಪ್ರಮುಖ ಮೊಬೈಲ್ ತಯಾರಕರಲ್ಲಿ ಒಂದಾಗಿ ಗುರುತಿಸಲ್ಪಟ್ಟಿದೆ. ನವೀನ ವಿನ್ಯಾಸ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪರಿಚಯಿಸಿತ್ತು. ಆದರೆ ಬದಲಾಗುತ್ತಿರುವ ಮಾರುಕಟ್ಟೆಯಲ್ಲಿ ಉಳಿದ ಸ್ಮಾರ್ಟ್ಫೋನ್ ಕಂಪನಿಗಳ ವಿರುದ್ಧ ಸ್ಪರ್ಧಿಸಲಾಗದೆ ಮೊಬೈಲ್ ವಿಭಾಗವನ್ನು ಮುಚ್ಚಿತ್ತು. ಎಲ್ಜಿ ಕಂಪನಿ ಗೃಹಉಪಯೋಗಿ ಎಲೆಕ್ಟ್ರಿಕ್ ಸಾಧನಗಳನ್ನು ಉತ್ಪಾದಿಸುತ್ತಾ ಬಂದಿದೆ. ಅದರ ಜೊತೆಗೆ ಸ್ಮಾರ್ಟ್ಫೋನ್ ಡಿಸ್ಪ್ಲೇ ಮತ್ತು ಕ್ಯಾಮೆರಾ ಸಂವೇದಕವನ್ನು ಹಿಡಿದು ಸ್ಮಾರ್ಟ್ಟಿವಿಗಳವರೆಗೆ ಎಲ್ಲವನ್ನೂ ಉತ್ಪಾದಿಸುತ್ತದೆ. ಇದೀಗ ರೋಲ್ ಮಾಡಬಹುದಾದ ಸ್ಮಾರ್ಟ್ಫೋನ್ ತಯಾರಿಸಲು ಪೇಟೆಂಟ್ಗೆ ಅರ್ಜಿ ಸಲ್ಲಿಸಿದೆ. ಈಗಾಗಲೇ ಸ್ಯಾಮ್ಸಂಗ್…
ಬ್ರಿಟನ್ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ಅವರು ತಾವು ತಂಗಿದ್ದ ಹೋಟೆಲ್ ಕೊಠಡಿಯ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಲಿಯಾಮ್ ಪಾಯ್ನ್ ಅವರಿಗೆ 31 ವರ್ಷ ವಯಸ್ಸಾಗಿದ್ದು ಅವರು ಅರ್ಜೆಂಟೀನಾದ ರಾಜಧಾನಿ ಬೋನಸ್ ಐರಿಸ್ನಲ್ಲಿ ಲಿಯಾಮ್ ಹೋಟೆಲ್ ನ್ಲಿ ತಂಗಿದ್ದರು. ಲಿಯಾಮ್ ಸಾವಿಗೆ ಮುನ್ನ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಡಿರುವ ಕರೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬೋನಸ್ ಐರಿಸ್ ಪೊಲೀಸರು, ಲಿಯಾಮ್ ಅವರು ಕಾಸಾ ಸರ್ ಹೋಟೆಲ್ನ ಮೂರನೇ ಮಹಡಿಯ ತನ್ನ ಕೋಣೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಳಗೆ ಹಾರಿದ ಕೂಡಲೇ ಲಿಯಾಮ್ ಸಾವನ್ನಪ್ಪಿದ್ದಾರೆ. ‘ಸಂಜೆ ಐದು ಗಂಟೆ ವೇಳೆಗೆ ಘಟನೆ ನಡೆದಿದ್ದು, ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದರು ಆ ವೇಳೆಗಾಗಲೆ ಲಿಯಾಮ್ ನಿಧನ ಹೊಂದಿದ್ದರು. ಆತ ಬಹಳ ಒರಟು ಹಾಗೂ ಮಾದಕ ದ್ರವ್ಯ ವ್ಯಸನಿಯಾಗಿದ್ದ, ಮಾದಕ ವಸ್ತು ಸೇವಿಸಿಯೇ ಆತ ಈ ಕೃತ್ಯ ಎಸಗಿಕೊಂಡಿದ್ದಾನೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಸಲಿಗೆ…
ಬಿಗ್ ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಗಳಾಗಿ ದೊಡ್ಮನೆಗೆ ಎಂಟ್ರಿಕೊಟ್ಟಿರುವ ಉಗ್ರಂ ಮಂಜು ಹಾಗೂ ಧರ್ಮ ಕೀರ್ತಿರಾಜ್ ಒಟ್ಟಿಗೆ ಸಿನಿಮಾ ಮಾಡಿದ್ದು ಸದ್ಯ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಿಗ್ ಬಾಸ್ ಮನೆಗೆ ಎಂಟ್ರಿಕೊಡುವ ಮೊದಲೇ ಈ ಚಿತ್ರದಲ್ಲಿ ಇಬ್ಬರು ನಟಿಸಿದ್ದು ಚಿತ್ರವಲ್ಲಿ ವಿಶೇಷ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸದ್ಯ ಸಿನಿಮಾ ಟೀಸರ್ ರಿಲೀಸ್ ಮಾಡಲಾಗಿದೆ. ಉಗ್ರಂ ಮಂಜು ಹಾಗೂ ಧರ್ಮ ಕೀರ್ತಿ ರಾಜ್ ನಟನೆಯ ಸಿನಿಮಾಗೆ ‘ಟೆನೆಂಟ್’ ಎಂದು ಹೆಸರಿಡಲಾಗಿದ್ದು ಚಿತ್ರದಲ್ಲಿ ಧರ್ಮ ಮತ್ತು ಮಂಜು ಜೊತೆಗೆ ತಿಲಕ್, ರಾಕೇಶ್ ಮಯ್ಯ, ಸೋನು ಗೌಡ ಸಹ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶ್ರೀಧರ್ ಶಾಸ್ತ್ರೀ ಎಂಬುವವರು ಚಿತ್ರವನ್ನು ನಿರ್ದೇಶನ ಮಾಡಿದ್ದು, ಈಚೆಗಷ್ಟೇ ಟೀಸರ್ ರಿಲೀಸ್ ಆಗಿದೆ. ಸದ್ಯ ಟೀಸರ್ ಸಾಕಷ್ಟು ಗಮನ ಸೆಳೆಯುತ್ತಿದೆ. ‘ಟೆನೆಂಟ್’ ಒಂದು ಕ್ರೈಮ್ ಥ್ರಿಲ್ಲರ್ ಸಿನಿಮಾ. ಸದ್ಯ ರಿಲೀಸ್ ಆಗಿರುವ ಟೀಸರ್ ಆಕರ್ಷಕವಾಗಿದ್ದು, ಕೂತೂಹಲ ಮೂಡಿಸುವಂತೆ ಇದೆ ಮತ್ತು ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ. ‘ನವಗ್ರಹ’ ಸಿನಿಮಾದಲ್ಲಿ ‘ಕಣ್ ಕಣ್ಣ…
ಬರೋಬ್ಬರು ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಧ್ರುವ ಸರ್ಜಾಗೆ ಹ್ಯಾಟ್ಸ್ ಆಫ್ ಹೇಳಿದ್ದಾರೆ. ಮಾರ್ಟಿನ್ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮೊಟ್ಟ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ರಿಲೀಸ್ ಆದ ಒಂದೇ ತಿಂಗಳಲ್ಲಿ ಒಟಿಟಿಗೆ ಬರಲು ಸಜ್ಜಾಗಿದೆ. ಎರಡು ದಿನಗಳ ಹಿಂದೆಯಷ್ಟೇ ‘ಮಾರ್ಟಿನ್’ ಸಕ್ಸಸ್ ವಿಚಾರಕ್ಕೆ ಧ್ರುವ ಸರ್ಜಾ ಚಿತ್ರತಂಡದೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಈ ಬೆನ್ನಲ್ಲೇ ಇದೀಗ ಒಟಿಟಿಗೆ ಮಾರ್ಟಿನ್ ಎಂಟ್ರಿಕೊಡಲು ಸಜ್ಜಾಗಿದೆ. ಕರ್ನಾಟಕದಲ್ಲಿ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ನಲ್ಲಿ 20 ಕೋಟಿಗೆ ಹೆಚ್ಚು ಕಲೆಕ್ಷನ್ ಮಾಡಿರುವ ‘ಮಾರ್ಟಿನ್’ ಇನ್ನು ಒಂದೇ ತಿಂಗಳಲ್ಲಿ ಒಟಿಟಿಗೆ ಬರಲಿದೆ. ಈ ಬಗ್ಗೆ ಧ್ರುವ ಸರ್ಜಾ ಆಪ್ತರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಚಿತ್ರದ ಡಿಜಿಟಲ್ ರೈಟ್ಸ್ ಹಾಗೂ ಟಿವಿ ರೈಟ್ಸ್ ಬಗ್ಗೆ ಜೀ ನೆಟ್ವರ್ಕ್ ಜೊತೆ ಮಾತುಕತೆ ನಡೆಯುತ್ತಿದ್ದು, ಇನ್ನೂ ಸಿನಿಮಾ ಸೇಲ್ ಆಗಿಲ್ಲ. ಈ ವಿಚಾರವಾಗಿ…
ಭಾರತ ಮತ್ತು ಕೆನಡಾ ನಡುವಿನ ಬಾಂಧವ್ಯ ಹದಗೆಡಲು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ನೇರ ಹೊಣೆ ಎಂದು ಭಾರತ ವಿದೇಶಾಂಗ ಸಚಿವಾಲಯ ಹೇಳಿದೆ. ಖಾಲಿಸ್ತಾನಿ ಪ್ರತ್ರ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಸಂಬಂಧ ಬುಧವಾರ ತನಿಖಾ ಆಯೋಗದ ಮುಂದೆ ಹಾಜರಾದ ಟ್ರುಡೊ, ‘ನಿಜ್ಜರ್ ಹತ್ಯೆಯಲ್ಲಿ ಭಾರತದ ಏಜೆಂಟರ್‌ಗಳ ಪಾತ್ರವಿದೆ ಎಂದು ಆರೋಪಿಸಿದಾಗ ನನ್ನಲ್ಲಿ ಯಾವುದೇ ಬಲವಾದ ಪುರಾವೆಗಳಿರಲಿಲ್ಲ, ಗುಪ್ತಚರ ಮಾಹಿತಿ ಮಾತ್ರ ಇತ್ತು’ ಎಂದು ಒಪ್ಪಿಕೊಂಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್, ‘ನಾವು ಈವರೆಗೂ ಹೇಳಿಕೊಂಡು ಬಂದಿದ್ದೇ ಇಂದು ನಿಜವಾಗಿದೆ. ಭಾರತ ಮತ್ತು ಭಾರತದ ರಾಜತಾಂತ್ರಿಕರ ವಿರುದ್ಧ ಆರೋಪ ಮಾಡುತ್ತಾ ಬಂದಿರುವ ಕೆನಡಾ, ತಾನು ಮಾಡಿರುವ ಗಂಭೀರ ಆರೋಪಗಳನ್ನು ರುಜುವಾತು ಮಾಡುವ ಯಾವುದೇ ಪುರಾವೆಗಳನ್ನು ನಮಗೆ ಪ್ರಸ್ತುತಪಡಿಸಿಲ್ಲ’ ಎಂದರು. ‘ಅಲಕ್ಷ್ಯದ ನಡವಳಿಕೆಯಿಂದ ಭಾರತ-ಕೆನಡಾ ಸಂಬಂಧದ ಮೇಲೆ ಉಂಟಾದ ಹಾನಿಯ ಸಂಪೂರ್ಣ ಹೊಣೆ ಕೆನಡಾ ಪ್ರಧಾನಿ ಟ್ರುಡೊ ಅವರ ಮೇಲಿದೆ’ ಎಂದು ಹೇಳಿದರು.