ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶ್ವೇತಭವನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲೋನ್ ಮಸ್ಕ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಟೆಸ್ಲಾ, ಸ್ಟಾರ್ಲಿಂಗ್ ಮತ್ತು ಸ್ಪೇಸ್‌ಎಕ್ಸ್‌ನ ಮುಖ್ಯಸ್ಥರಾದ ಎಲಾನ್ ಮಸ್ಕ್ ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ಸರ್ಕಾರದ ದಕ್ಷತೆಯ ಇಲಾಖೆಯ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮತ್ತು ಎಲೋನ್ ಮಸ್ಕ್ ಭೇಟಿ ಕೂಡ ಮಹತ್ವ ಪಡೆದುಕೊಂಡಿದೆ. ಈ ಹಿಂದೆ ಭಾರತವು ಟೆಸ್ಲಾ ಕಾರುಗಳನ್ನು ಸ್ವಾಗತಿಸಲು ಸಿದ್ಧವಾಗಿತ್ತು, ಜೊತೆಗೆ ಉತ್ಪಾದನೆಯನ್ನು ಉತ್ತೇಜಿಸಲು ಹಲವು ನೀತಿಗಳನ್ನು ಜಾರಿಗೆ ತಂದಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಎಲೋನ್ ಮಸ್ಕ್ ಭಾರತ ಭೇಟಿಯನ್ನು ರದ್ದುಗೊಳಿಸಿ ಚೀನಾಕ್ಕೆ ತೆರಳಿದ್ದರು. ಈಗ ಎಲಾನ್ ಮಸ್ಕ್ ಭಾರತದಲ್ಲಿ ಉತ್ಪಾದನೆಗೆ ಬದ್ಧರಾಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಆದರೂ ಟ್ರಂಪ್ ಹಾಗೂ ಮೋದಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಎಲೋನ್ ಮಸ್ಕ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದಾಗ ಎಲೆಕ್ಟ್ರಿಕ್…
Author: Author AIN
ಬೆಂಗಳೂರು,ಫೆ.13-ರಾಜಧಾನಿ ಬೆಂಗಳೂರಿಗೆ ದಕ್ಷ ಮತ್ತು ಪ್ರಾಮಾಣಿಕರಾಗಿರುವ ಸಚಿವರೊಬ್ಬರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಬೇಕೆಂದು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ಪುಟಗಳ ಪತ್ರ ಬರೆದಿರುವ ಮುನಿರತ್ನ ಅವರು, ಬೆಂಗಳೂರಿಗೆ ದಕ್ಷ ಮತ್ತು ಪ್ರಾಮಾಣಿಕರಾಗಿರುವವರು ಉಸ್ತುವಾರಿಗಳಾಗಿ ನೇಮಕ ಮಾಡಬೇಕಾದ ಅಗತ್ಯವಿದೆ. ಒಂದು ವೇಳೆ ಮುಖ್ಯಮಂತ್ರಿಗಳಿಗೆ ಬೆಂಗಳೂರಿನ ಬಗ್ಗೆ ನಿಜವಾದ ಕಳಕಳಿ ಇದ್ದರೆ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ ಅವರುಗಳನ್ನು ನೇಮಕ ಮಾಡುವಂತೆ ಪತ್ರದಲ್ಲಿ ಒತ್ತಾಯ ಮಾಡಿದ್ದಾರೆ. ಒಂದು ವೇಳೆ ಇವರ ಬದಲಿಗೆ ಬೇರೊಬ್ಬರನ್ನು ನೇಮಕ ಮಾಡಬೇಕೆಂಬ ಇಚ್ಛೆ ಇದ್ದರೆ ಸಚಿವ ದಿನೇಶ್ ಗುಂಡೂರಾವ್ ಇಲ್ಲವೇ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರನ್ನಾದರೂ ನೇಮಕ ಮಾಡುವಂತೆಯೂ ಮನವಿ ಮಾಡಿದ್ದಾರೆ. 16ನೇ ಆಯವ್ಯಯದಲ್ಲಿ ಬೆಂಗಳೂರು ನಗರಕ್ಕೆ ನೀಡುವ ಅನುದಾನಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಆಂಧ್ರಪ್ರದೇಶದ ಮುಖ್ಯಂತ್ರಿಗಳ ಸಹಚರರು ಹಾಗೂ ಕೆಲವು ಬಲಿಷ್ಟ ಗುತ್ತಿಗೆದಾರರು ನಮ್ಮ ಕರ್ನಾಟಕ ರಾಜ್ಯದ ಗುತ್ತಿಗೆದಾರರ ಮೇಲೆ ಸವಾರಿ…
ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ ಬಂದಿಳಿದಿದ್ದಾರೆ. ಇದೇ ವೇಳೆ ಟ್ರಂಪ್ ಸರ್ಕಾರದಲ್ಲಿ ಹೊಸದಾಗಿ ಆಯ್ಕೆಯಾದ ಯುಎಸ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ತುಳಸಿ ಗಬ್ಬಾರ್ಡ್ ಅವರೊಂದಿಗಿನ ಭೇಟಿಯ ಫೋಟೊವನ್ನು ಹಂಚಿಕೊಂಡ ಪ್ರಧಾನಿ ಮೋದಿ, ತುಳಸಿ ಅವರೊಂದಿಗೆ ಭಾರತ-ಯುಎಸ್ ಸ್ನೇಹದ ಬಗ್ಗೆ ಚರ್ಚಿಸಿದೆ. ಟ್ರಂಪ್ ಅವರ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ ನೇಮಕಗೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದೇನೆ ಎಂದು ತಿಳಿಸಿದ್ದಾರೆ. ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಮೋದಿ ಅವರನ್ನು ಭಾರತೀಯ ಅನಿವಾಸಿಗಳ ಬೃಹತ್ ಜನಸಮೂಹ ಸ್ವಾಗತಿಸಿ ಅವರಿಗೆ ಕೃತಜ್ಞತೆ ಸಲ್ಲಿಸಿತು. ಚಳಿಗಾಲದ ಚಳಿಯಲ್ಲಿ ಬೆಚ್ಚಗಿನ ಸ್ವಾಗತ! ಶೀತ ಹವಾಮಾನದ ಹೊರತಾಗಿಯೂ, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ವಲಸಿಗರು ನನ್ನನ್ನು ವಿಶೇಷ ಸ್ವಾಗತದೊಂದಿಗೆ ಬರಮಾಡಿಕೊಂಡಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು ಎಂದು ಮೋದಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ರಾಯಚೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ. ಕಳೆದ ಜ.21ರಂದು ಸಿಂಧನೂರಿನ ಬಳಿ ನಡೆದಿದ್ದ ಅಪಘಾತದಲ್ಲಿ ಮಂತ್ರಾಲಯ ರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಜಯಸಿಂಹ (23) ತೀವ್ರ ಗಾಯಗೊಂಡಿದ್ದರು. https://ainlivenews.com/police-firing-on-murder-accused-in-vijayapur/ ಜಯಸಿಂಹ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ ತೀವ್ರ ಗಾಯಗಳಾಗಿದ್ದ ಪರಿಣಾಮ, ಕಳೆದ 23 ದಿನಗಳಿಂದಲೂ ಸಹ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. https://www.youtube.com/watch?v=H6cS4XugLMI ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಗೆ ಹೊರಟಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ, ನಾಲ್ವರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದರು. ಈ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರು: ಆಗ್ನೇಯ ವಿಭಾಗದ ಸೆನ್ ಎಸಿಪಿ ಗೋವರ್ಧನ್ ಹಾಗೂ ಮಹಿಳಾ ಎಸಿಪಿ ವಿರುದ್ಧ ಗಂಭೀರ ಆರೋಪ ಕೇಳಿಬಂದದ್ದು, ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೌದು ಎಸಿಪಿ ಗೋವರ್ಧನ್ ಪತ್ನಿ ತನ್ನ ಗಂಡ ಹಾಗೂ ಮತ್ತೊಬ್ಬ ಮಹಿಳಾ ಅಧಿಕಾರಿಯ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. https://ainlivenews.com/vivo-phone-to-be-launched-at-an-affordable-price-its-features-are-guaranteed-to-shock-you/ ಡಿವೈಎಸ್ಪಿ ಆಗಿ ಆಯ್ಕೆ ಆದಾಗಿನಿಂದ ಕುಟುಂಬವನ್ನು ದೂರ ಮಾಡಿದ್ದಾರೆ. ಅವರದೇ ಬ್ಯಾಚ್‌ನ ಮಹಿಳಾ ಅಧಿಕಾರಿಯ ಜೊತೆ ಸಂಬಂಧ ಹೊಂದಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಗೋವರ್ಧನ್ ಪತ್ನಿ ಅಮೃತ ದೂರು ನೀಡಿದ್ದಾರೆ. ಮಹಿಳಾ ಅಧಿಕಾರಿ ಹಾಗೂ ಗೋವರ್ಧನ್ ನಡುವಿನ ಚಾಟ್ ಸಿಕ್ಕಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಪ್ರತಿ ವರ್ಷ ಫೆಬ್ರವರಿ 13 ರಂದು ವಿಶ್ವ ರೇಡಿಯೋ ದಿನವನ್ನು ಆಚರಿಸಲಾಗುತ್ತದೆ. ಅಸಂಖ್ಯಾತ ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ವಾಟ್ಸಾಪ್ ವ್ಯಾಪಕ ಬಳಕೆಯ ಸಮಯದಲ್ಲಿಯೂ ಸಹ, ರೇಡಿಯೋ ಅತ್ಯಂತ ಸ್ಥಿತಿಸ್ಥಾಪಕ ಮತ್ತು ದೂರಗಾಮಿ ಸಂವಹನ ಮಾಧ್ಯಮವಾಗಿ ಉಳಿದಿದೆ. ಜಾಗತಿಕ ಮಟ್ಟದಲ್ಲಿ ರೇಡಿಯೋ ವ್ಯಾಪಕವಾಗಿ ಇಂದಿಗೂ ಚಾಲ್ತಿಯಲ್ಲಿದೆ. ಇದು ಪ್ರಜಾಪ್ರಭುತ್ವದ ಪ್ರವಚನಕ್ಕೆ ವೇದಿಕೆಯನ್ನು ಒದಗಿಸುತ್ತದೆ. ಸಾರ್ವಜನಿಕರಿಗೆ ಮಾಹಿತಿಯನ್ನು ತಲುಪಿಸಲು ರೇಡಿಯೋ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಇದು ಉಚಿತ, ಪ್ರಜಾಪ್ರಭುತ್ವ ಮತ್ತು ವಿಶ್ವಾಸಾರ್ಹವಾಗಿದೆ. ಈ ಕಾರಣದಿಂದಾಗಿ, ಇದು ವಿಶಾಲವಾದ ವ್ಯಾಪ್ತಿಯನ್ನು ಹೊಂದಿದೆ. ಇಂದು ಇಂಟರ್‌ನೆಟ್, ಟಿವಿ, ಪತ್ರಿಕೆಗಳಿದ್ದರೂ ಹೆಚ್ಚಿನ ಮಟ್ಟದ ಪ್ರೇಕ್ಷಕರನ್ನು ರೇಡಿಯೋ ಹೊಂದಿದೆ. ವಿಶ್ವ ರೇಡಿಯೋ ದಿನ: ಇತಿಹಾಸ ಯುನೆಸ್ಕೋ ಅದರ 39ನೇ ಅಧಿವೇಶನದ ಭಾಗವಾಗಿ 2011ರ ಜನರಲ್ ಕಾನ್ಫರೆನ್ಸ್ನಲ್ಲಿ ಫೆಬ್ರವರಿ 13ರನ್ನು ವಿಶ್ವ ರೇಡಿಯೋ ದಿನವನ್ನಾಗಿ ಘೋಷಿಸಿತು. ಫೆಬ್ರವರಿ 13 ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಪ್ರಸಾರ ಸೇವೆಯಾದ ಯುನೈಟೆಡ್ ನೇಷನ್ಸ್ ರೇಡಿಯೋ ಸ್ಥಾಪನೆಯ ವಾರ್ಷಿಕೋತ್ಸವದ ದಿನವಾಗಿದೆ. ಇದನ್ನು 1946ರಲ್ಲಿ ಸ್ಥಾಪಿಸಲಾಯಿತು. ಅದರ 64ನೇ…
ಅವರಿಬ್ರು ದೂರದ ಊರಿಂದ ಬೆಂಗಳೂರಿಗೆ ಹೊಟ್ಟೆ ಪಾಡಿಗಾಗಿ ಬಂದು ಜೀವ್ನ ಮಾಡ್ತಿದ್ರು. ಆಟೋ ಓಡಿಸುತ್ತಿದ್ದ ಇವರು ಒಳ್ಳೆಯ ಸ್ನೇಹಿತರು ಕೂಡ ಆಗಿದ್ದರು. ಆದರೆ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಕ್ಷುಲ್ಲಕ ಕಾರಣಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಇಷ್ಟಕ್ಕೂ ಈ ಘಟನೆ ನಡೆದಿರುವುದು ಎಲ್ಲಿ ಅಂತೀರಾ. ಈ ಸ್ಟೋರಿ ನೋಡಿ. ಹೀಗೆ ರಕ್ತದ ಮಡುವಿನಲ್ಲಿ ಬಿದ್ದಿರುವ ಈತನ ಹೆಸರು ಜಗದೀಶ್ ಹೊಟ್ಟೆ ಪಾಡಿಗಾಗಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ಅದ್ರೆ ಕ್ಷುಲ್ಲಕ ಕಾರಣಕ್ಕೆ ತನ್ನ ಸ್ನೇಹಿತನಿಂದಲೇ ಕೊಲೆಯಾಗಿದ್ದಾನೆ.ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ಜಗದೀಶ್ ಗೆ ಸಿದ್ದೇಶ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು. https://ainlivenews.com/vivo-phone-to-be-launched-at-an-affordable-price-its-features-are-guaranteed-to-shock-you/ ಇತ್ತೀಚಿಗೆ ಇವರಿಬ್ಬರೂ ಪ್ರಾಣ ಸ್ನೇಹಿತರಂತೆ ಪ್ರತಿದಿನವೂ ಕೆಲಸ ಮುಗಿದ ಮೇಲೆ ಜೊತೆಯಲ್ಲಿ ಕುಳಿತು ಎಣ್ಣೆ ಪಾರ್ಟಿ ಮಾಡಿ ಮನೆಗೆ ಹೋಗುತ್ತಿದ್ದರು. ಅದೇ ರೀತಿ ನೆನ್ನೆ ರಾತ್ರಿ ಸಹ ಎಣ್ಣೆ ಪಾರ್ಟಿ ಮಾಡಲು ಸಮೀಪದಲ್ಲೇ ಇದ್ದ ತಿರುಮಲ ಬಾರ್ ಗೆ ಹೋಗಿ ಕುಡಿದು…
2025 ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದೆ. ಇದರೊಂದಿಗೆ ಅಭಿಮಾನಿಗಳಲ್ಲಿ ದಿನೇ ದಿನೇ ಉತ್ಸಾಹ ಹೆಚ್ಚುತ್ತಿದೆ. ಆದಾಗ್ಯೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಋತುವಿನ ಮೊದಲು ತಮ್ಮ ಹೊಸ ನಾಯಕನನ್ನು ಘೋಷಿಸಿದೆ. ಈ ಬಾರಿ ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್ಸಿಬಿ ತಂಡ ಕಣಕ್ಕಿಳಿಯಲಿದೆ. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್ಗೆ ವಹಿಸಲಾಗಿದೆ. https://ainlivenews.com/vivo-phone-to-be-launched-at-an-affordable-price-its-features-are-guaranteed-to-shock-you/ ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ 31 ವರ್ಷದ ಪಾಟಿದಾರ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ. ಇದಕ್ಕೂ…
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಸ್ನೇಹಿತರ ಜೊತೆಗೆ ಮಹಾಕುಂಭಮೇಳಕ್ಕೆ ತೆರಳಿರುವ ರಮೇಶ್ ಜಾರಕಿಹೊಳಿ, ಪ್ರಯಾಗ್‌ರಾಜ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. https://www.youtube.com/watch?v=n0_1u4pd3Jw ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗಾಗಿ ಒತ್ತಾಯಿಸಿ ಓಡಾಟ ನಡೆಸುತ್ತಿದ್ದು, ಇದರ ಮಧ್ಯೆಯೂ ಪ್ರಯಾಗ್‌ರಾಜ್ ಗೆ ಭೇಟಿ ನೀಡಿದ್ದು, ಪುಣ್ಯಸ್ನಾನ ಮಾಡಿದ್ದಾರೆ. ಮೊನ್ನೆಯಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಪತ್ನಿ ಸಮೇತ ಪ್ರಯಾಗ್‌ರಾಜ್ ಗೆ ಭೇಟಿ ನೀಡಿ, ಪುಣ್ಯಸ್ನಾನ ಮಾಡಿದ್ದರು.
ಗದಗ : ಕಿರು ಮತ್ತು ಸಣ್ಣ ಸಾಲ ಬಲವಂತ ಕ್ರಮಗಳ ಪ್ರತಿಬಂಧಕ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಸಿಕ್ಕಿದ್ದು, ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಕ್ಕೆ ಕಾನೂನು ಎಚ್ ಕೆ ಪಾಟೀಲ್ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಬಡವರ ಪರ ಜನ ಪರ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಿದ್ದಾರೆ. ಇಂಥಹ ಜನ ಪರ ಕಾನೂನು ಅವಶ್ಯ ಇದೆ. ಸಾಲ ವಸೂಲಿ ಕಿರುಕುಳ, ಬಡ್ಡಿ ಶೋಷಣೆ ದಂಧೆ ನಿಲ್ಲಿಸಬೇಕೆಂಬುದು ಸರ್ಕಾರದ ಪ್ರಯತ್ನ. ಸುಗ್ರೀವಾಜ್ಞೆ ಜಾರಿಗೆ ತರಲು ಚಿಂತನ ಮಂಥನ ಮಾಡಿ ಜನ ಪರ ಕಾನೂನು ತರಲಾಗಿದೆ. ಸಿಎಂ ಮಾರ್ಗದರ್ಶನದ ಜೊತೆಗೆ ಮುಖ್ಯಕಾರ್ಯದರ್ಶಿಗಳು ಶ್ರಮ ಪಟ್ಟಿದ್ದಾರೆ ಅವರಿಗೆ ಅಭಿನಂದನೆಗಳು ಎಂದರು. https://ainlivenews.com/police-firing-on-murder-accused-in-vijayapur/ ರೈತರು, ಮಹಿಳೆಯರು, ಕೃಷಿ ಕಾರ್ಮಿಕರ, ಬೀದಿ ಬದ ವ್ಯಾಪಾರಿಗಳು ಹೀಗೆ ಸಮಾಜದ ದುರ್ಬಲ ವರ್ಗಕ್ಕೆ ಸಹಾಯವಾಗಲು ಸುಗ್ರೀವಾಜ್ಞೆಹೊರಡಿಸಲಾಗಿದೆ. ಅಡ ಇಟ್ಟುಕೊಳ್ಳುವುದು, ವ್ಯಕ್ತಿಗಳ ಕೂಡಿಹಾಕುವುದನ್ನ ಉಲ್ಲೇಖಿಸಿಲಾಗುದೆ. ನೂತನ ಕಾನೂನು ಜನರಿಗೆ ಕಿರುಕುಳ ಕೊಡುವವರಿಗೆ ಬಗ್ಗು ಬಡಿಯಲು ಸಹಕಾರಿಯಾಗಿದೆ. ಬಡ್ಡಿ, ಚಕ್ರಬಡ್ಡಿ ಹಾಕುವುದು, ಅವಮಾನ ಮಾಡುವುದು ಹೊಡೆಯುವು…