Author: Author AIN

ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ ಚಲನಚಿತ್ರ ಅಕಾಡೆಮಿಯು ಸೇರಿದೆ. ಹಲವು ದಿನಗಳಿಂದ ಅಧ್ಯಕ್ಷ ಸ್ಥಾನಕ್ಕೆ ಹಲವಾರು ಹೆಸರುಗಳು ಕೇಳಿ ಬಂದಿದ್ದವು, ಅದರಲ್ಲಿ ಸಾಧು ಕೋಕಿಲಾ ಹೆಸರೂ ಸಹ ಸೇರಿಕೊಂಡಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಮತ್ತು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಸಾಧು ಕೋಕಿಲಾ ಅವರನ್ನೇ ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎನ್ನುವ ಮಾತೂ ಕೇಳಿ ಬಂದಿತ್ತು. ಅದೀಗ ನಿಜವಾಗಿದ್ದು ಸಾಧು ಕೋಕಿಲಾ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Read More

ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಕಮ್ ಐಎಎಸ್ ಅಧಿಕಾರಿ ಕೆ.ಶಿವರಾಮ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಾಳೆ ಅಂದರೆ ಮಾರ್ಚ್ 1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕೆ.ಶಿವರಾಮ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ 4:18ಕ್ಕೆ ಕೆ.ಶಿವರಾಮ್ ನಿಧನರಾಗಿದ್ದು, ಶುಕ್ರವಾರ (ಮಾ.1) ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಭಿಮಾನಿಗಳಿಗೆ, ಆಪ್ತರಿಗೆ ಅಂತಿಮ ದರ್ಶನ ಅವಕಾಶವಿದೆ ಎಂದು ಅಳಿಯ ಪ್ರದೀಪ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.  ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಭಾರಿಗೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಶಿವರಾಮ್ ಆ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ನಿನ್ನೆಯಷ್ಟೇ ಶಿವರಾಮ್ ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು, ಅಳಿಯ ಪ್ರದೀಪ್ ನಿನ್ನೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಅವರ ಕಂಡೀಷನ್ ಕ್ರಿಟಿಕಲ್ ಆಗಿದೆ ಎಂದಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಕೆಲಸ ಮಾಡಿ ಎಲ್ಲಾ ಕಡೆಯೂ ಸೈ…

Read More

ಸಿನಿಮಾ ನಟ, ನಿವೃತ್ತ ಐಎಎಸ್​ ಅಧಿಕಾರಿ ಕೆ. ಶಿವರಾಮ್​ ನಿಧನಕ್ಕೆ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದ ಶಿವರಾಮ್​ ಚಿತ್ರರಂಗದಲ್ಲೂ ಸಕ್ರಿಯರಾಗಿದ್ದರು. 1993ರಲ್ಲಿ ತೆರೆಕಂಡ ‘ಬಾ ನಲ್ಲೆ ಮಧುಚಂದ್ರಕೆ’ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದ್ದ ಶಿವರಾಮ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇಂದಿಗೂ ಶಿವರಾಮ್ ನಟಿಸಿದ್ದ ಸಿನಿಮಾಗಳ ಹಾಡುಗಳು ಎವರ್ ಗ್ರೀನ್ ಹಾಡುಗಳಾಗಿ ಜನಮಾನಸದಲ್ಲಿ ಅಚ್ಚಳಿದಿವೆ. ಬಡ ಕುಟುಂಬದಿಂದ ಬಂದ ಶಿವರಾಮ್ ಕೆಎಎಸ್​ ಹಾಗೂ ಐಎಎಸ್​ ಅಧಿಕಾರಿಯಾಗಿ ಸಾಧನೆ ಮಾಡಿದ್ದಾರೆ. ನಟ ಆಗಬೇಕು ಎಂಬ ಆಸೆ ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಸ್ನೇಹಿತರೊಬ್ಬರ ಜೊತೆ ಸುಮ್ಮನೇ ಮಾತನಾಡುವಾಗ ಸಿನಿಮಾ ಮಾಡಬೇಕು ಎಂಬ ಹಂಬಲ ಅವರಿಗೆ ಚಿಗುರಿತು. ಅದನ್ನು ಈಡೇರಿಸಿಕೊಳ್ಳಲು ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಚಿತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಆ ಮೂಲಕ ಸಿನಿಮಾ ಹೀರೋ ಆದ ಮೊದಲ ಐಎಎಸ್​ ಅಧಿಕಾರಿ ಎಂಬ ಖ್ಯಾತಿ ಸಿಕ್ಕಿತ್ತು. ಅಧಿಕಾರಿಯಾಗಿಯೂ ಜೊತೆಗೆ…

Read More

ವ್ಯಕ್ತಿಯೋರ್ವ ತನ್ನ ವಿಮೆ ಹಣ ಪಡೆಯಲು ತನ್ನ ಎರಡು ಕಾಲುಗಳನ್ನು ಕತ್ತರಿಸಿಕೊಂಡ ಘಟನೆ ಅಮೆರಿಕದ ಮಿಸೌರಿಯಲ್ಲಿ ನಡೆದಿದೆ. 60 ವರ್ಷದ ವ್ಯಕ್ತಿ ಆರೋಗ್ಯ ವಿಮೆ ಹಣವನ್ನು ಪಡೆಯಲು ತನ್ನ ಎರಡು ಕಾಲುಗಳನ್ನು ಕತ್ತರಿಸಿದ್ದಾರೆ. ಇತಿಹಾಸದಲ್ಲೇ ಇದೊಂದು ವಿಚಿತ್ರ ಪ್ರಕರಣ ಎಂದು ಪ್ರಕರಣದ ತನಿಖಾಧಿಕಾರಿ ಹೊವೆಲ್ ಕೌಂಟಿ ಶೆರಿಫ್ ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಈತ ತನ್ನ ಎರಡೂ ಕಾಲುಗಳನ್ನು ಕತ್ತರಿಸಿದ್ದ. ಇದಲ್ಲದೇ ವಿಮೆ ಹಣ ಪಡೆಯಲು ಟ್ರ್ಯಾಕ್ಟರ್‌ನ ಹಿಂಬದಿಯಲ್ಲಿ ಅಳವಡಿಸಿದ್ದ ಮೊವರ್‌ನಿಂದ ಕಾಲು ತುಂಡಾಗಿದೆ ಎಂದು ಹೇಳಿದ್ದರು. ಆದರೆ, ಈ ಅಪಘಾತದ ನಂತರ ಅವರ ಕಾಲು ಎಲ್ಲಿಯೂ ಪತ್ತೆಯಾಗಿರಲ್ಲಿಲ್ಲ. ಇದಲ್ಲದೇ ಕಾಲಿನ ಗಾಯ ಮೊವರ್‌ನಿಂದ ಕಾಲು ಕತ್ತರಿಸಿದಂತೆ ಕಾಣಿಸುತ್ತಿರಲಿಲ್ಲ. ಇದರಿಂದ ಪೊಲೀಸರಲ್ಲಿ ಅನುಮಾನ ಹುಟ್ಟಿಕೊಂಡಿದೆ. ತನಿಖೆಯ ವೇಳೆ ವ್ಯಕ್ತಿ ಪಾರ್ಶ್ವವಾಯುವಿನಿಂದ ತನ್ನ ಎರಡು ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಎಂದು ತಿಳಿದುಬಂದಿದೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವ್ಯಕ್ತಿ ಟ್ರ್ಯಾಕ್ಟರ್ ಹೇಗೆ ಚಲಾಯಿಸಿದ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ವೇಳೆ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಸತ್ಯಾಂಶ ತಿಳಿದು…

Read More

ವಿಶ್ವ ಬ್ಯಾಂಕ್ ನ ಜಾಗತಿಕ ಪರಿಸರ ಸೌಲಭ್ಯದ ಸ್ವತಂತ್ರ ಮೌಲ್ಯಮಾಪನ ಕಚೇರಿಯ ನಿರ್ದೇಶಕಿಯಾಗಿ ಭಾರತ ಮೂಲದ ಅರ್ಥಶಾಸ್ತ್ರಜ್ಞೆ ಗೀತಾ ಬತ್ರಾ ನೇಮಕಗೊಂಡಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರದಿಂದ ಈ ಪ್ರತಿಷ್ಠಿತ ಸ್ಥಾನವನ್ನು ಹೊಂದಿರುವ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಗೀತಾ ಅವರದ್ದು. ವಿಶ್ವ ಬ್ಯಾಂಕ್‌ನೊಂದಿಗೆ ಸಂಯೋಜಿತವಾಗಿರುವ GEF ನ ಸ್ವತಂತ್ರ ಮೌಲ್ಯಮಾಪನ ಕಚೇರಿಯಲ್ಲಿ ಮೌಲ್ಯಮಾಪನಕ್ಕಾಗಿ ಮುಖ್ಯ ಮೌಲ್ಯಮಾಪಕ ಮತ್ತು ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಫೆಬ್ರವರಿ 9 ರಂದು ವಾಷಿಂಗ್ಟನ್‌ನಲ್ಲಿ ನಡೆದ 66 ನೇ GEF ಕೌನ್ಸಿಲ್ ಸಭೆಯಲ್ಲಿ ಪಾತ್ರಕ್ಕಾಗಿ ಬತ್ರಾ ಅವರ ನಾಮನಿರ್ದೇಶನವು ಸರ್ವಾನುಮತದ ಅನುಮೋದನೆಯನ್ನು ಪಡೆಯಿತು. 57ರ ಹರೆಯದ ಗೀತಾ ಬತ್ರಾ, GEF ನ ಫಲಿತಾಂಶಗಳು ಮತ್ತು ಕಾರ್ಯಕ್ಷಮತೆಯ ಮೇಲೆ ಗಟ್ಟಿಯಾದ ಮೌಲ್ಯಮಾಪನದ ಪುರಾವೆಗಳ ವಿತರಣೆ, ಪರಿಸರ ಮೌಲ್ಯಮಾಪನದಲ್ಲಿ GEF IEO ಅನ್ನು ಮುಂಚೂಣಿಯಲ್ಲಿಡಲು ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ IEO ತಂಡಗಳ ಬಲವರ್ಧನೆಗೆ ಒತ್ತು ನೀಡುತ್ತಾ ತಮ್ಮ ಪ್ರಮುಖ ಆದ್ಯತೆಗಳನ್ನು ವಿವರಿಸಿದರು. ಹೊಸದಿಲ್ಲಿಯಲ್ಲಿ ಜನಿಸಿದ ಬತ್ರಾ ಅವರು ಮುಂಬೈ…

Read More

ಪಾಕಿಸ್ತಾನದ ಇಸ್ಲಮಾಬಾದ್‍ನಿಂದ ಕೆನಡಾದ ಟೊರಂಟೊಗೆ ಆಗಮಿಸಿದ ಪಾಕಿಸ್ತಾನ್ ಇಂಟರ್‍ನ್ಯಾಷನಲ್ ಏರ್‍ಲೈನ್ಸ್(ಪಿಐಎ)ನ ಗಗನಸಖಿ ಟೊರಂಟೊದಲ್ಲಿ ನಾಪತ್ತೆಯಾಗಿರುವ ಕುರಿತು ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ. ಟೊರಂಟೊದಲ್ಲಿ ತನ್ನ ಹೋಟೆಲ್ ಕೋಣೆಯಲ್ಲಿ `ಧನ್ಯವಾದಗಳು ಪಿಐಎ’ ಎಂಬ ಚೀಟಿಯ ಜತೆಗೆ ತನ್ನ ಸಮವಸ್ತ್ರವನ್ನು ಇಟ್ಟು ಗಗನಸಖಿ ಮರ್ಯಾಮ್ ರಝಾ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ `ಡಾನ್’ ವರದಿ ಮಾಡಿದೆ. ಪಾಕಿಸ್ತಾನ್ ಇಂಟರ್‍ನ್ಯಾಷನಲ್ ಏರ್‍ಲೈನ್ಸ್ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಪಾಕಿಸ್ತಾನದಲ್ಲಿ ತಮ್ಮ ಭವಿಷ್ಯದ ಕುರಿತ ಅನಿಶ್ಚಿತತೆಯ ಕಾರಣ ವೃತ್ತಿಪರರು ವಿದೇಶದಲ್ಲಿ ಆಶ್ರಯ ಪಡೆಯುವ ಪ್ರಮಾಣ ಹೆಚ್ಚಿದೆ. ಕಳೆದ ತಿಂಗಳು ಪಿಐಎ ಫ್ಲೈಟ್ ಅಟೆಂಡೆಂಟ್ ಫೈಝಾ ಮುಖ್ತಾರ್ ಕರಾಚಿಯಿಂದ ಕೆನಡಾಕ್ಕೆ ಆಗಮಿಸಿದ ಬಳಿಕ ನಾಪತ್ತೆಯಾಗಿದ್ದರು ಎಂದು ಪಿಐಎ ವಕ್ತಾರ ಅಬ್ದುಲ್ಲಾ ಹಫೀಝ್ ಖಾನ್ ತಿಳಿಸಿದ್ದಾರೆ. ಕಳೆದ ವರ್ಷ ಪಿಐಎ ಸಂಸ್ಥೆಯ ಕನಿಷ್ಠ 7 ಸಿಬಂದಿಗಳು ಕೆನಡಾದಲ್ಲಿ ನಾಪತ್ತೆಯಾಗಿದ್ದಾರೆ. ಕೆನಡಾದಲ್ಲಿ `ಆಶ್ರಯ ನಿಯಮ’ ಸರಳಗೊಳಿಸಿರುವುದು ಪಾಕಿಸ್ತಾನದ ವೃತ್ತಿಪರರು ಕೆನಡಾದಲ್ಲಿ ಆಶ್ರಯ ಕೋರಲು ಪ್ರಮುಖ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.

Read More

ಪುನೀತ್ ರಾಜ್ ಕುಮಾರ್ ನಟನೆಯ ನಿನ್ನೆಂದಲೇ ಚಿತ್ರದಲ್ಲಿ ನಟಿಸಿ ಕನ್ನಡಿಗರ ಮನ ಗೆದ್ದಿದ್ದ ನಟಿ ಎರಿಕಾ ಫರ್ನಾಂಡಿಸ್ ಬೀಚ್ ನಲ್ಲಿ ಬಿಕಿನಿ ತೊಟ್ಟು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬೀಚ್‌ನಲ್ಲಿ ಬಿಕಿನಿ ತೊಟ್ಟು ಕ್ಯಾಮಾರಾಗೆ ಸಖತ್ ಪೋಸ್ ಕೊಟ್ಟಿದ್ದಾರೆ. ಕನ್ನಡದ ನಿನ್ನಿಂದಲೇ ಮತ್ತು ಬುಗುರಿ ಚಿತ್ರದಲ್ಲಿ ಎರಿಕಾ ಫರ್ನಾಂಡಿಸ್ ಅಭಿನಯಿಸಿದ್ದರು. 2015ರಲ್ಲಿ ಬುಗುರಿ ಸಿನಿಮಾದಲ್ಲಿ ನಟಿಸಿದ ಬಳಿಕ ಎರಿಕಾ ಸ್ಯಾಂಡಲ್ ವುಡ್ ಗೆ ಮರಳಿ ಎಂಟ್ರಿಕೊಡಲಿಲ್ಲ. ಸದ್ಯ ಎರಿಕಾ ಬಾಲಿವುಡ್‌ನಲ್ಲಿ ವೆಬ್ ಸಿರೀಸ್ ಮತ್ತು ಸೀರಿಯಲ್ ನಲ್ಲಿ ಬ್ಯುಸಿಯಾಗಿದ್ದಾರೆ. ಎರಿಕಾ ಫರ್ನಾಂಡಿಸ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ಪ್ರತಿ ಚಟುವಟಿಕೆಗಳನ್ನೂ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಳ್ಳುತ್ತಾರೆ. ಅದರಂತೆ ಇದೀಗ ಬೀಚ್‌ನಲ್ಲಿ ಪೋಸ್ ಕೊಟ್ಟಿರೋ ಫೋಟೋಗಳನ್ನು ಶೇರ್ ಮಾಡಿದ್ದು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ. ಬೀಚ್ ನಲ್ಲಿ ಮಸ್ತ್ ಎಂಜಾಯ್ ಮಾಡಿರುವ ಎರಿಕಾ ಅಲ್ಲಿನ ಫೋಟೋಗಳನ್ನು ಹಂಚಿಕೊಂಡು, Beach time where you’re shore to have a…

Read More

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ ನಡುಕ ಹುಟ್ಟಿಕೊಳ್ಳುತ್ತೆ. ಆರೋಗ್ಯ ವಂತರು ಕೂಡ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಕೆಲವೇ ದಿನಗಳಲ್ಲಿ ಕೊನೆಯುಸಿರೆಳೆಯುತ್ತಿದ್ದಾರೆ. ಕ್ಯಾನ್ಸರ್ ಆರಂಭದಲ್ಲಿ ಚಿಕಿತ್ಸೆ ಇದ್ದರೂ, ವಿವಿಧ ರೀತಿಯ ಕ್ಯಾನ್ಸರ್‌ಗಳಿಗೆ ಇಂದಿಗೂ ಚಿಕಿತ್ಸೆ ಇಲ್ಲದೆ ರೋಗಿಗಳು ಸಾವಿನ ಕದ ತಟ್ಟುತ್ತಾರೆ. ಆದರೆ ಕ್ಯಾನ್ಸರ್‌ಗೆ ಔಷಧಿ ಕಂಡುಹಿಡಿಯುವ ಕಾರ್ಯ ದಶಕಗಳಿಂದಲೂ ನಡೆಯುತ್ತಿದೆ. ಈ ನಡುವೆ ರಷ್ಯಾ ಕ್ಯಾನ್ಸರ್‌ನ ಒಂದು ವಿಧಕ್ಕೆ ಚುಚ್ಚು ಮದ್ದು ಕಂಡುಹಿಡಿದಿರುವುದಾಗಿ ಹೇಳಿತ್ತು, ಆದರೆ ಆ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ವರದಿಯಾಗಿಲ್ಲ. ಆದರೆ ಇದೀಗ ಭಾರತದಲ್ಲಿ ಕ್ಯಾನ್ಸರ್‌ಗೆ ಔಷಧಿ ಕಂಡು ಹಿಡಿದಿರುವ ಕುರಿತು ಸುದ್ದಿ ಹೊರ ಬಿದ್ದಿದ್ದು ಇದು ಕೋಟ್ಯಾಂತರ ರೋಗಿಗಳ ಮುಖದಲ್ಲಿ ಆಶ ಕಿರಣ ಮುಡಿಸಿದೆ. ಟಾಟಾ ಮೆಮೋರಿಯಲ್ ಸೆಂಟರ್‌ನ ಸಂಶೋದಕರು ಕ್ಯಾನ್ಸರ್‌ ಮಾತ್ರೆ ಕಂಡುಕೊಂಡಿದಿದ್ದು ಈ ಬಗ್ಗೆ ಟಾಟಾ ಮೆಮೋರಿಯಲ್ ಸೆಂಟರ್‌ನ ನಿರ್ದೇಶಕ ಡಾ. ರಾಜೇಂದ್ರ ಬಡ್ವೆ ಟಿವಿ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.…

Read More

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಸಿನಿಮಾಗಳ ಜೊತೆ ಜೊತೆಗೆ ರಾಜಕೀಯ ಜೀವನವನ್ನು ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಈ ಮಧ್ಯೆ ಜಗ್ಗೇಶ್ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಇಂಥವರ ವಿರುದ್ಧ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದು, ತಮ್ಮ ವಿರುದ್ಧ ಅವಹೇಳನಾಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಜಗ್ಗೇಶ್ ಅಭಿಮಾನಿಗಳ ಜೊತೆ ಸದಾ ಟಚ್ ನಲ್ಲಿದ್ದಾರೆ. ಜೊತೆಗೆ ತಮ್ಮ ಸಿನಿಮಾಗಳ ಬಗ್ಗೆ, ರಾಜಕೀಯ ವಿಚಾರಗಳ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಾ ಇರುತ್ತಾರೆ. ಇದೇ ಸೋಶಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬಗ್ಗೆ ಕೆಲವರು ಅಪಪ್ರಚಾರ ಮಾಡಿದ್ದಿದೆ. ಕೆಲವು ಸುದ್ದಿ ಮಾಧ್ಯಮಗಳು ಜಗ್ಗೇಶ್​ ಅವರನ್ನು ಟೀಕಿಸಿದ್ದು, ಇದಕ್ಕೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದೆ.…

Read More

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಈ ವರ್ಷ ಅಂದರೆ 2024ರ ಸೆಪ್ಟೆಂಬರ್​ನಲ್ಲಿ ದೀಪಿಕಾ ಮಗುವಿಗೆ ಜನ್ಮ ನೀಡdಲಿದ್ದಾರೆ ಎಂದು ರಣವೀರ್ ಸಿಂಗ್ ತಿಳಿಸಿದ್ದಾರೆ. ಈ ವಿಷಯವನ್ನು ರಣವೀರ್ ಸಿಂಗ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಮಗುವಿಗೆ ಸಂಬಂಧಿಸಿದ ಬಟ್ಟೆ, ಶೂ, ಆಟಿಕೆ, ಟೋಪಿ ಮುಂತಾದ ವಸ್ತುಗಳಿರುವ ಚಿತ್ರವನ್ನು ಶೇರ್ ಮಾಡುವ ಮೂಲಕ ದೀಪಿಕಾ ಹಾಗೂ ರಣವೀರ್ ಮಗುವಿನ ನಿರೀಕ್ಷೆಯಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ‘ಸೆಪ್ಟೆಂಬರ್​ 2024 ’ ಎಂದು ಇದರಲ್ಲಿ ಬರೆಯಲಾಗಿದೆ. 2018ರಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಪ್ರೀತಿಸಿ ಮದುವೆ ಆಗಿದ್ದಾರೆ. ಮದುವೆಯಾಗಿ ಆರು ವರ್ಷಗಳ ಬಳಿಕ ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದು ಸದ್ಯ ದೀಪಿಕಾ ಎರಡು ತಿಂಗಳ ಗರ್ಭಿಣಿ. ಇದೇ ವರ್ಷ ಸೆಪ್ಟೆಂಬರ್​ನಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ. ದೀಪಿಕಾ ಪಡುಕೋಣೆ ಅವರು ಪ್ರೆಗ್ನೆಂಟ್​ ಆಗಿರಬಹುದು ಎಂಬ ಗಾಸಿಪ್​ ಹಲವು ದಿನಗಳಿಂದ…

Read More