Author: Author AIN

ಗಾಜಾಪಟ್ಟಿಯಲ್ಲಿ ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಸೇನೆ ನಡೆಸುತ್ತಿರುವ ಯುದ್ಧದಲ್ಲಿ ಭಾರತ ಮೂಲದ 19 ವರ್ಷದ ಯೋಧನೋರ್ವ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತ ಯೋಧನನ್ನು 19 ವರ್ಷದ ಸಾರ್ಜೆಂಟ್ ಓಜ್ ಡೇನಿಯಲ್ ಎಂದು ಗುರುತಿಸಲಾಗಿದೆ. ಹಮಾಸ್ ಜೊತೆಗಿನ ಇಸ್ರೇಲಿ ಯೋಧರ ಸಂಘರ್ಷ 143ನೇ ದಿನಕ್ಕೆ ಕಾಲಿಟ್ಟಿದ್ದು, ಈ ವೇಳೆ ಭಾರತೀಯ ಮೂಲದ 19 ವರ್ಷದ ಇಸ್ರೇಲಿ ಯೋಧ ಮೃತಪಟ್ಟಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಘೋಷಿಸಿದೆ. “ಭಾರತೀಯ ಮೂಲದವರು ಮತ್ತು ಅಕ್ಟೋಬರ್ 7 ರಂದು ಗಾಜಾಕ್ಕೆ ಅಪಹರಿಸಲ್ಪಟ್ಟ ಸಾರ್ಜೆಂಟ್ ಓಜ್ ಡೇನಿಯಲ್ ಅವರು ಸತ್ತಿದ್ದಾರೆ ಎಂದು ಘೋಷಿಸಲಾಗಿದೆ” ಎಂದು ಭಾರತದಲ್ಲಿನ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ತಿಳಿಸಿದ್ದಾರೆ. ಅಕ್ಟೋಬರ್ 7, 2023 ರಂದು ಹಮಾಸ್ ಅಪಹರಿಸಿದ 253 ಒತ್ತೆಯಾಳುಗಳಲ್ಲಿ ಡೇನಿಯಲ್ ರನ್ನೂ ಕೂಡ ಪಟ್ಟಿಮಾಡಲಾಗಿತ್ತು. ಗುಪ್ತಚರ ವರದಿಗಳ ಆಧಾರದ ಮೇಲೆ ಸೇನೆಯ ಮುಖ್ಯ ರಬ್ಬಿ ಡೇನಿಯಲ್ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ವರದಿಗಳ ಪ್ರಕಾರ ಡೇನಿಯಲ್ ದೇಹ ಇನ್ನೂ…

Read More

ಪಾಕಿಸ್ತಾನದ ಖ್ಯಾತ ಗಾಯಕಿ ಶಾಜಿಯಾ ಮಂಜೂರ್ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಹನಿಮೂನ್ ಬಗ್ಗೆ ಪ್ರಶ್ನೆ ಮಾಡಿದ ಹಾಸ್ಯ ಕಲಾವಿದನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಹಾಸ್ಯಕಲಾವಿದ ಶೆರ್ರಿ ನನ್ಹಾಗೆ ಗಾಯಕಿ ಶಾಜಿಯಾ ಮಂಜೂರ್ ಕಪಾಳ ಮೋಕ್ಷ ಮಾಡಿದ್ದು, ಇಬ್ಬರ ನಡುವೆ ವಾಗ್ವಾದ ಉಂಟಾಗಿದೆ. “ಸಾರ್ವಜನಿಕ ಬೇಡಿಕೆ” ಯ ಹಿನ್ನೆಲೆಯಲ್ಲಿ ಗಾಯಕಿ ಶಾಜಿಯಾ ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಆದರೆ ಹಾಸ್ಯ ಕಲಾವಿದ ಕೇಳಿದ ಪ್ರಶ್ನೆಯಿಂದ ಆಕ್ರೋಶಗೊಂಡ ಗಾಯಕ ಲೈವ್ ನಲ್ಲೇ ಕಪಾಳಮೋಕ್ಷ ಮಾಡಿದ್ದಾರೆ.ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. “ನಾವು ಮದುವೆಯಾದ ನಂತರ, ಶಾಜಿಯಾ, ನಾನು ತಕ್ಷಣ ನಿನ್ನನ್ನು ನಮ್ಮ ಹನಿಮೂನ್‌ಗೆ ಮಾಂಟೆ ಕಾರ್ಲೋಗೆ ಕರೆದುಕೊಂಡು ಹೋಗುತ್ತೇನೆ. ನೀವು ಯಾವ ವಿಮಾನದ ವಿಭಾಗದಲ್ಲಿ (ಕ್ಲಾಸ್ ನಲ್ಲಿ) ಸಂಚರಿಸಲು ಬಯಸುತ್ತೀರಿ ಎಂದು ನನಗೆ ತಿಳಿಸುವಿರಾ?, ಎಂದು ಶೆರ್ರಿ ನನ್ಹಾ ತಮಾಷೆಯಾಗಿ ಕೇಳಿದ್ದಕ್ಕೆ ಮಂಜೂರ್ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ. ಈ ಪ್ರಶ್ನೆ ಕೇಳಿದ ಹಾಸ್ಯಕಲಾವಿದನನ್ನು ಮೂರನೇ ದರ್ಜೆಯ ವ್ಯಕ್ತಿ ಎಂದು ಗಾಯಕಿ ನಿಂದಿಸಿದ್ದಾರೆ. ಮಹಿಳೆಯರೊಂದಿಗೆ ಮಾತನಾಡುವ ರೀತಿ ಇದೇನಾ?…

Read More

ಬಾಲಿವುಡ್ ಬ್ಯೂಟಿ ನಟಿ ತಾಪ್ಸಿ ಪನ್ನು ಮದುವೆಯ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ತಾಪ್ಸಿ ಬಹುಕಾಲದ ಗೆಳೆಯನನ್ನು ವರಿಸಲಿದ್ದು ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ, ಈ ಬಗ್ಗೆ ನಟಿ ತಾಪ್ಸಿ ಪ್ರತಿಕ್ರಿಯೆ ನೀಡಿದ್ದಾರೆ. ತಾಪ್ಸಿ ಪನ್ನು ಅವರು ಬ್ಯಾಡ್ಮಿಂಟನ್​ ಆಟಗಾರ ಮಥಾಯಸ್​ ಬೋ ಜೊತೆ 10 ವರ್ಷದಿಂದ ಪ್ರೀತಿಯಲ್ಲಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇವರು ಶೀಘ್ರವೇ ಹಸೆಮಣೆ ಏರಲಿದ್ದಾರೆ ಎನ್ನಲಾಗಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ತಾಪ್ಸಿ ಪನ್ನು,  ‘ನನ್ನ ವೈಯಕ್ತಿಕ ವಿಚಾರದಲ್ಲಿ ನಾನು ಎಂದಿಗೂ ಸ್ಪಷ್ಟನೆ ನೀಡಲ್ಲ’ ಎಂದಿದ್ದಾರೆ. ತಾಪ್ಸಿ ಪನ್ನು ಅವರು ಈ ವರ್ಷ ಮಾರ್ಚ್ ತಿಂಗಳಲ್ಲಿ ಮಥಾಯಸ್​ ಬೋ ಅವರನ್ನು ಮದುವೆ ಆಗಲಿದ್ದಾರೆ ಎಂದು ವರದಿ ಆಗಿತ್ತು. ಅಷ್ಟೇ ಅಲ್ಲ, ಸಿಖ್ ಹಾಗೂ ಕ್ರೈಸ್ತ ಸಮುದಾಯದ ಸಂಪ್ರದಾಯದಂತೆ ಈ ವಿವಾಹ ನೆರವೇರಲಿದೆ ಎಂದು ವರದಿ ಆಗಿತ್ತು. ಈ ಜೋಡಿಯ ಮದುವೆ ಉದಯಪುರದಲ್ಲಿ ನಡೆಯಲಿದ್ದು ಕೇವಲ ಎರಡು ಕುಟುಂಬದವರನ್ನು ಮಾತ್ರವೇ ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ. ಈ ವಿಚಾರವನ್ನು…

Read More

ಪಂಜಾಬಿಯ ಖ್ಯಾತ ಸಂಗೀತ ಸಂಯೋಜಕ, ಗಾಯಕ ಬಂಟಿ ಬೈನ್ಸ್ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಬಂಟಿ ಮೊಹಾಲಿ ರೆಸ್ಟೋರೆಂಟ್ ನಲ್ಲಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಿಂದ ಅದೃಷ್ಟವಶಾತ್‍ ಬಂಟಿಗೆ ಯಾವುದೇ ಅಪಾಯವಾಗಿಲ್ಲ. ಅವರಿಗೆ ಯಾವುದೇ ಗುಂಡು ತಗುಲಿಲ್ಲ ಎಂದು ಹೇಳಲಾಗುತ್ತಿದೆ. ವ್ಯಕ್ತಿಯೊರ್ವ ಬಂಟಿಯ ಬಳಿ ಒಂದು ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಿದ್ದನಂತೆ. ಆದರೆ ಬಂಟಿ ದುಡ್ಡನ್ನು ಕೊಡಲು ನಿರಾಕರಿಸಿದ ಕಾರಣಕ್ಕಾಗಿ ಈ ಶೂಟೌಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಗ್ಯಾಂಗ್ ಸ್ಟರ್ ಲಕ್ಕಿ ಪಾಟಿಯಲ್ ಹೆಸರಿನಲ್ಲಿ ಈ ಕೊಲೆ ಬೆದರಿಕೆ ಬಂದಿದ್ದು, ಕೆನಡಾದಿಂದ ಅವನು ಕಾರ್ಯನಿರ್ವಹಿಸುತ್ತಿದ್ದಾನೆಂದು ಎಂದು ಪಂಜಾಬ್ ನ ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ. ಜೊತೆಗೆ ಕುಖ್ಯಾತಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೊತೆಗೆ ಈತನ ಸಂಪರ್ಕವಿದೆ ಎಂದು ಹೇಳಲಾಗುತ್ತಿದೆ.

Read More

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಸಿದ ಪದವೊಂದು ಅವರನ್ನು ಸಾಕಷ್ಟು ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ. ನಿರ್ಮಾಪಕ ಉಮಾಪತಿ ಹಾಗೂ ದರ್ಶನ್ ನಡುವೆ ನಡೆಯುತ್ತಿರುವ ವಾಕ್ ಸಮರ ದಿನದಿಂದ ದಿನಕ್ಕೆ ನಾನಾ ತಿರುವು ಪಡೆದುಕೊಳ್ಳುತ್ತಿದೆ. ಈ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ದರ್ಶನ್ ವಿರುದ್ಧ ಮಹಿಳೆಯೊಬ್ಬರು ಖಾಸಗಿ ದೂರು ದಾಖಲಿಸಿದ್ದಾರೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್‌ನಲ್ಲಿ ರೇಣುಕಮ್ಮ ಎಂಬುವವರು ದರ್ಶನ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳೆಯರ ಬಗ್ಗೆ ಅಗೌರವವಾಗಿ ದರ್ಶನ್ ಮಾತನಾಡಿದ್ದಾರೆ ಎಂದು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ರೇಣುಕಮ್ಮ ದೂರು ದಾಖಲಿಸಿದ್ದರು. ಐಪಿಸಿ ಸೆಕ್ಷನ್ 295(ಎ) (ಮಹಿಳೆಯರಿಗೆ ಅವಮಾನ), 509 (ಮಹಿಳೆಯ ಮಾನಕ್ಕೆ ಅಡ್ಡಿ ಮಾಡುವ ಉದ್ದೇಶದಿಂದ ಬಳಸಿದ ಭಾಷೆ), 298 (ಧಾರ್ಮಿಕ ಭಾವನೆಗಳಿಗೆ ಧಕ್ಕೆ), 504 (ಶಾಂತಿ ಭಂಗಕ್ಕೆ ಪ್ರಚೋದನೆ) ಅಡಿ ಕೇಸ್ ದಾಖಲಿಸುವಂತೆ ರೇಣುಕಮ್ಮ ಖಾಸಗಿ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸದ ಕಾರಣ ರೇಣುಕಮ್ಮ ಈಗ ಕೋರ್ಟ್ ಮೊರೆ ಹೋಗಿ…

Read More

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಮರಿಯಮ್ ನವಾಜ್ ಅವರ ವೀಡಿಯೊ ಒಂದು ವೈರಲ್‌ ಆಗಿದೆ. ಮರಿಯಮ್ ನವಾಜ್ ತನ್ನ ತಂದೆ ನವಾಜ್ ಷರೀಫ್ ಅವರ ಪಾದ ಮುಟ್ಟಿ ಆಶೀರ್ವಾದ ಪಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವರದಿಯ ಪ್ರಕಾರ, ಈ ವೀಡಿಯೊ ಪಂಜಾಬ್ ವಿಧಾನಸಭೆಯಲ್ಲಿ ಮರಿಯಮ್ ನವಾಜ್ ಮುಖ್ಯಮಂತ್ರಿ ಚುನಾವಣೆಯಲ್ಲಿ ಗೆದ್ದು ನಂತರ ತನ್ನ ತಂದೆಯನ್ನು ಭೇಟಿಯಾಗಲು ಹೋದ ಸಮಯದದ್ದಾಗಿದೆ. ಪಾಕಿಸ್ತಾನದ ಹಿರಿಯ ಪತ್ರಕರ್ತ ಹಮೀದ್ ಮಿರ್ ಅವರು ಫೆಬ್ರವರಿ 26ರಂದು ಮರಿಯಮ್ ನವಾಜ್ ಅವರ ಈ ವಿಡಿಯೋವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಈ ಸಂಪ್ರದಾಯ ಯಾವ ಧರ್ಮದಲ್ಲಿದೆ?’ ಎಂದು ಪ್ರಶ್ನಿಸಿದ್ದಾರೆ. ಈ ವೀಡಿಯೊದಲ್ಲಿ, ಮರಿಯಮ್ ನವಾಜ್ ತನ್ನ ತಂದೆ ನವಾಜ್ ಷರೀಫ್ ಅವರ ಪಾದಗಳಿಗೆ ನಮಸ್ಕರಿಸುತ್ತಿದ್ದಾರೆ ಮತ್ತು ನವಾಜ್ ಷರೀಫ್ ಕೂಡ ತಮ್ಮ ಮಗಳ ಬೆನ್ನು ತಟ್ಟುವ ಮೂಲಕ ಆಶೀರ್ವದಿಸಿದ್ದಾರೆ.

Read More

ಮಲಯಾಳಂ ಚಿತ್ರ ರಂಗದ ಖ್ಯಾತ ನಟಿ ಲೆನಾ ಕುಮಾರ್ ಎರಡನೇ ಮದುವೆಯಾಗಿದ್ದಾರೆ.  ಒಂದು ತಿಂಗಳ ಹಿಂದೆಯೇ ಮದುವೆಯಾಗಿರುವ ನಟಿ ಇದೀಗ ಮಾಹಿತಿಯನ್ನು ರಿವೀಲ್ ಮಾಡಿದ್ದಾರೆ.  ನಿನ್ನೆ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಇಸ್ರೋ ನಡೆಸುತ್ತಿರುವ ಗಗನಯಾನ್ ಗೆ ಆಯ್ಕೆಯಾದ ನಾಲ್ವರ ಹೆಸರನ್ನು ಪ್ರಕಟಿಸುತ್ತಿದ್ದಂತೆಯೇ ಲೆನಾ ಕೂಡ ತಮ್ಮ ಮದುವೆ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಗಗನಯಾನ್ ಗೆ ಹೊರಟಿರುವ ನಾಲ್ವರ ಪೈಕಿ ಲೆನಾ ಮದುವೆ ಆಗಿರುವ ಹುಡುಗ ಕೂಡ ಒಬ್ಬರು. ಪ್ರಶಾಂತ್ ಬಾಲಕೃಷ್ಣ ನಾಯರ್ ಜೊತೆ ಜನವರಿ 17ರಂದು ಲೆನಾ ಮದುವೆ ಆಗಿದ್ದಾರೆ. ಈ ವಿಚಾರವನ್ನು ಸ್ವತಃ ನಟಿಯೇ ಹೇಳಿಕೊಂಡಿದ್ದಾರೆ. ಈ ವಿಷಯವನ್ನು ಹೇಳುವುದಕ್ಕಾಗಿ ನಾನು ಈ ದಿನ ಕಾಯುತ್ತಿದ್ದೆ ಎಂದು ನಟಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಪ್ರಶಾಂತ್ ಬಾಲಕೃಷ್ಣ ನಾಯರ್ ಗ್ರೂಪ್ ಕ್ಯಾಪ್ಟನ್ ಆಗಿ ಭಾರತೀಯ ವಾಯುಸೇನೆಯಲ್ಲಿ ಪೈಲಟ್ ಆಗಿ ಕೆಲಸ ಮಾಡಿದ್ದಾರೆ. ಮೂರು ಸಾವಿರಕ್ಕೂ ಹೆಚ್ಚು ಗಂಟೆಗಳ ಕಾಲ ವಿಮಾನ ಹಾರಟ ಮಾಡಿದ ಹೆಮ್ಮೆ ಅವರದ್ದು. ಯುದ್ಧ…

Read More

ರಾಂಗ್ ರೂಟ್ ನಲ್ಲಿ ಕಾರು ಚಲಾಯಿಸಿದ್ದಲ್ಲದೇ, ಪೊಲೀಸರ ಜೊತೆ ಗಲಾಟೆ ಮಾಡಿಕೊಂಡಿದ್ದ ತೆಲುಗು ನಟಿ ಸೌಮ್ಯ ಜಾನು ವಿರುದ್ಧ ಹೈದರಾಬಾದ್ ನ ಬಂಜಾರ ಹಿಲ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುರ್ತು ಕಾರಣದಿಂದಾಗಿ ರಾಂಗ್ ರೂಟ್ ನಲ್ಲಿ ಬಂದೆ. ಪೊಲೀಸರು ನನ್ನನ್ನು ಕೆಟ್ಟದಾಗಿ ನಿಂದಿಸಿದರು ಎಂದು ನಟಿ ಹೇಳಿಕೆ ನೀಡಿದ್ದಾರೆ. ತಾಯಿಗೆ ಔಷಧಿ ತರಬೇಕಿತ್ತು ಎನ್ನುವ ಕಾರಣಕ್ಕಾಗಿ ಸೌಮ್ಯ, ತಮ್ಮ ಕಾರನ್ನು ರಾಂಗ್ ರೂಟ್ ನಲ್ಲಿ ಚಲಾಯಿಸಿದ್ದಾರೆ. ಇವರ ಕಾರನ್ನು ತಡೆದ ಟ್ರಾಫಿಕ್ ಹೋಮ್ ಗಾರ್ಡ್ ದಂಡ ಕಟ್ಟುವಂತೆ ಹೇಳಿದ್ದಾರೆ. ಈ ವಿಚಾರವಾಗಿ ಇಬ್ಬರ ಮಧ್ಯ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಹೋಮ್ ಗಾರ್ಡ್ ಸಮವಸ್ತ್ರ ಹರಿದಿದ್ದು ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೌಮ್ಯ ಜಾನು ಕುಡಿದು ಕಾರು ಚಲಾಯಿಸುತ್ತಿದ್ದರು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ತನಗೆ ಕುಡಿಯುವ ಅಭ್ಯಾಸವಿಲ್ಲ ಎಂದು ನಟಿ ಹೇಳಿಕೊಂಡಿದ್ದಾರೆ. ಪೊಲೀಸ್ ತಮ್ಮೊಂದಿಗೆ ಅನುಚಿತ ವರ್ತನೆ ಮಾಡಿದ್ದೇ ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣ ಎಂದು ಸೌಮ್ಯ…

Read More

ಕಾರ್, ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಭೋಜ್‌ಪುರಿ ನಟಿ ಅಂಚಲ್ ತಿವಾರಿ, ಸಿಮ್ರನ್ ಶ್ರೀವಾತ್ಸವ್, ಗಾಯಕ ಚೋಟು ಪಾಂಡೆ ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಬಿಹಾರದ ಕೈಮೂರ್ನ್ ದೇವಕಲಿ ಗ್ರಾಮದ ಬಳಿ ಕಾರ್ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.  ಹಿಂದಿನಿಂದ ವೇಗವಾಗಿ ಬಂದ ಲಾರಿ ಅಪಘಾತಕ್ಕೀಡಾಗಿದ್ದ ಕಾರ್‌ಗೆ ಗುದ್ದಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಟ್ರಕ್, ಎಸ್‌ಯುವಿ ಮತ್ತು ಮೋಟಾರ್‌ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಭೋಜ್‌ಪುರಿ ಗಾಯಕ ಛೋಟು ಪಾಂಡೆ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೇ ಭೋಜ್‌ಪುರಿ ನಟಿ ಸಿಮ್ರಾನ್ ಶ್ರೀವಾಸ್ತವ ಕೂಡ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವರದಿ ಪ್ರಕಾರ, ಭಾನುವಾರ ಸಂಜೆ ಮೊಹಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ದೇವಕಾಲಿ ಗ್ರಾಮದ ಬಳಿ ಜಿಟಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಸೋಮವಾರ ಗುರುತಿಸಲಾಗಿದ್ದು, ಭೋಜ್‌ಪುರಿ ಗಾಯಕ ವಿಮಲೇಶ್ ಪಾಂಡೆ ಅಲಿಯಾಸ್ ಛೋಟು ಪಾಂಡೆ ಕೂಡ ಅವರಲ್ಲಿದ್ದಾರೆ…

Read More

ಫ್ರೀಕಿ ದೇಶದ ಮಾಲಿಯ ಕೆನಿಬಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತವಾದ ಬಸ್ ಬಸ್ ಬುರ್ಕಿನಾ ಫಾಸೊಗೆ ಹೋಗುತ್ತಿತ್ತು. ಈ ವೇಳೆ ಬಸ್ ಸೇತುವೆಯಿಂದ ಕೆಳಗೆ ಬಿದ್ದು ಭೀಕರ ದುರಂತ ಸಂಭವಿಸಿದೆ ಎಂದು  ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪಶ್ಚಿಮ ಆಫ್ರಿಕಾದಲ್ಲಿ ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿದೆ. ಮಾಲಿಯ ಕಳಪೆ ರಸ್ತೆಗಳು ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಕಾರಣವೆಂದು ಉಲ್ಲೇಖಿಸಲಾಗಿದೆ. ಪ್ರಪಂಚದಾದ್ಯಂತದ ಎಲ್ಲಾ ರಸ್ತೆ ಸಾವುಗಳಲ್ಲಿ ಕಾಲು ಭಾಗದಷ್ಟು ಆಫ್ರಿಕಾದಲ್ಲಿ ಸಂಭವಿಸುತ್ತವೆ.

Read More