ಇತ್ತೀಚೆಗೆ ಸಿನಿಮಾ ವಿಮರ್ಷಕರ ಸಂಖ್ಯೆ ಹೆಚ್ಚುತ್ತಿದೆ. ಚಿತ್ರ ನೋಡಿ ಬಂದು ಸೋಷಿಯಲ್ ಮೀಡಿಯಾದಲ್ಲಿ ವಿಮರ್ಷೆ ತಿಳಿಸುತ್ತಾರೆ. ಈ ವಿಮರ್ಷೆ ನೋಡಿ ಸಾಕಷ್ಟು ಜನ ಥಿಯೇಟರ್ ಗೆ ಎಂಟ್ರಿಕೊಡ್ತಾರೆ. ಆದರಂತೆ ಇತ್ತೀಚೆಗೆ ರಿಲೀಸ್ ಆದ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾಗಳಿಗೆ ಕೆಟ್ಟ ವಿಮರ್ಶೆ ಸಿಕ್ಕವು. ‘ಕಂಗುವ’ ಸಿನಿಮಾ ನೋಡಿ ಬಂದ ಎಲ್ಲರೂ ಸಾಕಷ್ಟು ಟೀಕೆ ವ್ಯಕ್ತಪಡಿಸಿದರು. ಸಿನಿಮಾ ನೋಡುತ್ತೇನೆ ಎಂದು ಹೊರಡಬೇಕು ಎಂದುಕೊಂಡಿದ್ದವರಿಗೆ ಈ ವಿಮರ್ಶೆಯಿಂದ ಹಿನ್ನಡೆ ಆಯಿತು. ಇದನ್ನು ಗಮನದಲ್ಲಿ ಇಟ್ಟುಕೊಂಡು ತಮಿಳುನಾಡು ನಿರ್ಮಾಪಕರ ಸಂಘ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ವಿಮರ್ಶೆ ಎಂದರೆ ಸಿನಿಮಾ ಬಗ್ಗೆ ಸಂಪೂರ್ಣ ವಿವರ ಇರಬೇಕು. ಆದರೆ, ಇಲ್ಲಿ ಆ ರೀತಿ ಆಗುವುದಿಲ್ಲ. ಸಿನಿಮಾ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂದಷ್ಟೇ ಹೇಳಲಾಗುತ್ತದೆ. ಈ ರೀತಿಯ ವಿಮರ್ಶೆಗಳಿಂದಲೇ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾ ಹಿನ್ನಡೆ ಅನುಭವಿಸಿತು ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಈ ಕಾರಣಕ್ಕೆ ತಮಿಳು ನಿರ್ಮಾಪಕರ ಸಂಘದವರು ಥಿಯೇಟರ್ ಮುಂಭಾಗದಲ್ಲಿ ಸಿನಿಮಾ ವಿಮರ್ಶೆ ಮಾಡೋದನ್ನು ಬ್ಯಾನ್ ಮಾಡಿದ್ದಾರೆ.…
Author: Author AIN
ಬಹುನಿರೀಕ್ಷಿತ ಪುಷ್ಪ 2 ಬಿಡುಗಡೆಗೆ ಇನ್ನೆನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಬಾಕಿ ಇದೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ್ ನಟನೆಯ ಈ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ಅದ್ದೂರಿಯಾಗಿ ತೆರೆಗೆ ತರ್ತಿದೆ. ಸಿನಿಮಾದ ಪ್ರಚಾರಕ್ಕೆಂದೇ ಸುಮಾರು 50 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಸಿನಿಮಾದ ಒಟ್ಟು ಬಜೆಟ್ 500 ಕೋಟಿಗೂ ಹೆಚ್ಚಾಗಿದೆ. ಸಿನಿಮಾಕ್ಕೆ ಹೂಡಿರುವ ಬಂಡವಾಳ ವಾಪಸ್ ಪಡೆಯಲು ಟಿಕೆಟ್ ದರಗಳನ್ನು ಹೆಚ್ಚಿಸಲು ಚಿತ್ರತಂಡ ಮುಂದಾಗಿದೆ. ಆದರೆ ಇದಕ್ಕೆ ಅಲ್ಲು ಅರ್ಜುನ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಿನಿಮಾ ಟಿಕೆಟ್ ದರಗಳ ಮೇಲೆ ನಿಯಂತ್ರಣ ಹೇರಲಾಗಿದೆ. ಒಂದೊಮ್ಮೆ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗುವುದಿದ್ದರೆ ಸರ್ಕಾರದಿಂದ ಅನುಮತಿ ಪಡೆದ ಬಳಿಕವಷ್ಟೆ ಟಿಕೆಟ್ ದರಗಳನ್ನು ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಟಿಕೆಟ್ ದರ ಎಷ್ಟು ಹೆಚ್ಚಿಸಬೇಕು, ಎಷ್ಟು ದಿನಗಳ ಕಾಲ ಟಿಕೆಟ್ ದರ ಹೆಚ್ಚಿಗೆ ಇರಬೇಕು ಎಂಬಿತ್ಯಾದಿಯನ್ನು ಸರ್ಕಾರವೇ ಸೂಚಿಸುತ್ತದೆ. ಇದೀಗ ‘ಪುಷ್ಪ 2’ ಸಿನಿಮಾದ ಟಿಕೆಟ್ ದರ ಹೆಚ್ಚಳ…
ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಆಟ ಜೋರಾಗುತ್ತಿದೆ. 50ನೇ ದಿನಕ್ಕೆ ವೈಲ್ಡ್ ಕಾರ್ಡ್ ಮೂಲಕ ಶೋಭಾ ಶೆಟ್ಟಿ ಹಾಗೂ ರಜತ್ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ವೇದಿಕೆಗೆ ಕಾಲಿಡ್ತಿದ್ದಂಗೆ ಇಬ್ಬರು ಸಾಕಷ್ಟು ಮಾತನಾಡಿದ್ದರು. ಅಲ್ಲದೆ ಶೋಭಾ ಶೆಟ್ಟಿ ಜೋರು ಧ್ವನಿಯಲ್ಲಿ ಕಿರುಚಾಡುತ್ತಾ ಎಲ್ಲರಿಗೂ ನಡುಕ ಹುಟ್ಟಿಸಲು ಪ್ರಯತ್ನಿಸಿದ್ದರು. ಆದರೆ ಮೊದಲ ಆಟದಲ್ಲೇ ಶೋಭಾ ಶೆಟ್ಟಿಗೆ ಹಿನ್ನಡೆ ಆಗಿದೆ ಇದರಿಂದ ಶೋಭಾ ಕಣ್ಣೀರು ಹಾಕಿದ್ದಾರೆ. ಇಂದಿನ ಸಂಚಿಕೆಯಲ್ಲಿನ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ. ಅದರಲ್ಲಿ ಶೋಭಾ ಮತ್ತು ಭವ್ಯಾ ಗೌಡ ನೇತೃತ್ವದಲ್ಲಿ ಎರಡು ಟೀಮ್‌ಗಳಾಗಿ ವಿಂಗಡಿಸಿದ್ದಾರೆ. ಎದುರಾಳಿ ತಂಡ ಭವ್ಯಾಗಿಂತ ವೇಗವಾಗಿ ಟಾಸ್ಕ್ ಪೂರ್ಣಗೊಳಿಸಬೇಕು ಎಂಬ ಆತುರದಲ್ಲಿ ಶೋಭಾ ಆಟ ಆಡುವಾಗ ಎತ್ತರದಿಂದ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಸಹಸ್ಪರ್ಧಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ. ಎತ್ತರದಿಂದ ಬಿದ್ದರೂ ಕೂಡ ಅವರು ಆಟ ನಿಲ್ಲಿಸಲಿಲ್ಲ. ದೇವರ ಸ್ಮರಣೆ ಮಾಡುತ್ತಾ ಆಟ ಮುಂದುವರಿಸಿದರು. ಹಾಗಿದ್ದರೂ ಕೂಡ ಅವರಿಗೆ ಗೆಲವು ಸಿಗಲಿಲ್ಲ. ಅಂತಿಮವಾಗಿ…
ಸಂಭಾವ್ಯ ವಾಯುದಾಳಿಯ ಮಾಹಿತಿ ಪಡೆದ ನಂತರ ಉಕ್ರೇನ್ ರಾಜಧಾನಿ ಕೀವ್‍ನಲ್ಲಿನ ಅಮೆರಿಕದ ರಾಯಭಾರ ಕಚೇರಿಯನ್ನು ಮುಚ್ಚಲಾಗಿದೆ ಎಂದು ವರದಿಯಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ರಾಯಭಾರ ಕಚೇರಿಯನ್ನು ಮುಚ್ಚಲಾಗುವುದು ಮತ್ತು ರಾಯಭಾರ ಕಚೇರಿಯ ಸಿಬ್ಬಂದಿಗಳಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳಲು ಸೂಚಿಸಲಾಗಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ಕಾನ್ಸುಲರ್ ವ್ಯವಹಾರಗಳ ವಿಭಾಗ ಹೇಳಿದೆ. ವಾಯುದಾಳಿಯ ಎಚ್ಚರಿಕೆ ಕೇಳಿಬಂದರೆ ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಲು ಸಿದ್ಧವಾಗಿರುವಂತೆ ಅಮೆರಿಕದ ಪ್ರಜೆಗಳಿಗೆ ರಾಯಭಾರ ಕಚೇರಿ ಸೂಚಿಸಿದೆ. ಅಮೆರಿಕ ಒದಗಿಸಿದ ಎಟಿಎಸಿಎಂಎಸ್ ಕ್ಷಿಪಣಿಗಳನ್ನು ಬಳಸಿ ಮಂಗಳವಾರ ಉಕ್ರೇನ್ ರಶ್ಯದ ವಿರುದ್ಧ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ರಾಯಭಾರ ಕಚೇರಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಅಮೆರಿಕ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ನೂತನ ಸರ್ಕಾರದ ಶಿಕ್ಷಣ ಇಲಾಖೆಯ ಮುಖ್ಯಸ್ಥೆಯನ್ನಾಗಿ WWE ಮಾಜಿ ಸಿಇಒ ಲಿಂಡಾ ಮೆಕ್‌ಮಹೋನ್ ರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಲಿಂಡಾ ಅವರನ್ನು “ಪೋಷಕರ ಹಕ್ಕುಗಳ ಪ್ರಬಲ ವಕೀಲೆ” ಎಂದು ಬಣ್ಣಿಸಿರುವ ಟ್ರಂಪ್, “ನಾವು ಶಿಕ್ಷಣವನ್ನು ಮರಳಿ ರಾಜ್ಯಗಳಿಗೆ ಕಳಿಸಲಿದ್ದೇವೆ ಹಾಗೂ ಈ ಪ್ರಯತ್ನದ ನೇತೃತ್ವವನ್ನು ಲಿಂಡಾ ವಹಿಸಿಕೊಳ್ಳಲಿದ್ದಾರೆ” ಎಂದಿದ್ದಾರೆ. ಲಿಂಡಾ ಜನವರಿಯಲ್ಲಿ ಶ್ವೇತ ಭವನಕ್ಕೆ ಮರಳಲಿರುವ ಡೊನಾಲ್ಡ್ ಟ್ರಂಪ್ ರ ಪರಿವರ್ತನೆ ತಂಡದ ಸಹ ಮುಖ್ಯಸ್ಥೆಯಾಗಿದ್ದಾರೆ. ಈ ತಂಡಕ್ಕೆ ಸರಕಾರದ ಸುಮಾರು 4,000 ಹುದ್ದೆಗಳನ್ನು ಭರ್ತಿ ಮಾಡುವ ಗುರಿ ನೀಡಲಾಗಿದೆ. ಕನೆಕ್ಟಿಕಟ್ ಶಿಕ್ಷಣ ಮಂಡಳಿಯಲ್ಲಿ ಎರಡು ವರ್ಷ ಹಾಗೂ ಖಾಸಗಿ ಕ್ಯಾಥೊಲಿಕ್ ಶಾಲೆಯಾದ ಸೇಕ್ರೆಡ್ ಹಾರ್ಟ್ ವಿಶ್ವವಿದ್ಯಾಲಯದಲ್ಲಿ 16 ವರ್ಷಗಳ ಕಾಲ ಲಿಂಡಾ ಕಾರ್ಯನಿರ್ವಹಿಸಿದ್ದಾರೆ ಎಂದು ಅವರ ಶೈಕ್ಷಣಿಕ ಕ್ಷೇತ್ರದ ಅನುಭವದ ಕುರಿತು ಟ್ರಂಪ್ ಉಲ್ಲೇಖಿಸಿದ್ದಾರೆ. ಅಮೆರಿಕ ಸೆನೆಟ್ ಗೆ ಸ್ಪರ್ಧಿಸಲು 2009ರಲ್ಲಿ ತರಾತುರಿಯಲ್ಲಿ WWE ತೊರೆದಿದ್ದ ಲಿಂಡಾ, ಟ್ರಂಪ್ ರ ಪ್ರಮುಖ…
ಗಾಝಾದಲ್ಲಿರುವ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಹೊರತಂದರೆ ಅವರಿಗೆ 5 ದಶಲಕ್ಷ ಡಾಲರ್ ಬಹುಮಾನ ನೀಡುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. ಗಾಝಾದಲ್ಲಿರುವ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಹೊರತರುವವರ ಮತ್ತು ಅವರ ಕುಟುಂಬದವರ ಸುರಕ್ಷತೆಯನ್ನು ನಾವು ಖಾತರಿಪಡಿಸುತ್ತೇವೆ. ಜೊತೆಗೆ ಬಿಡುಗಡೆಗೊಳಿಸಿದ ಪ್ರತೀ ಒತ್ತೆಯಾಳಿಗೆ ತಲಾ 5 ದಶಲಕ್ಷ ಡಾಲರ್ ನಂತೆ ಪುರಸ್ಕಾರ ದೊರೆಯುತ್ತದೆ ಎಂದು ನೆತನ್ಯಾಹು ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ. ನಮ್ಮ ಒತ್ತೆಯಾಳುಗಳಿಗೆ ತೊಂದರೆ ನೀಡುವ ಧೈರ್ಯ ಮಾಡಿದವರು ಸತ್ತವರೆಂದು ಪರಿಗಣಿಸಲಾಗುತ್ತದೆ. ಅವರು ಎಲ್ಲಿಯೇ ಇದ್ದರೂ ಬೆನ್ನಟ್ಟಿ ಹಿಡಿಯುತ್ತೇವೆ ಎಂದು ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ. ಗಾಝಾ ನಗರದ ದಕ್ಷಿಣದಲ್ಲಿರುವ ನೆಟ್‍ಝರಿಮ್ ಕಾರಿಡಾರ್ ಗೆ ಭೇಟಿ ನೀಡಿ ಇಸ್ರೇಲ್ ಸೈನಿಕರ ಜತೆ ಮಾತನಾಡಿದ ಅವರು ` ಗಾಝಾವನ್ನು ಹಮಾಸ್ ಆಳಬಾರದು ಎಂಬುದು ನಮ್ಮ ಯುದ್ಧದ ಮುಖ್ಯ ಗುರಿಯಾಗಿದೆ. ಒತ್ತೆಯಾಳುಗಳನ್ನು ಪತ್ತೆಹಚ್ಚಿ ಅವರನ್ನು ಮನೆಗೆ ತರುವ ಪ್ರಯತ್ನ ಮುಂದುವರಿದಿದೆ. ನಾವು ಕೈಚೆಲ್ಲುವುದಿಲ್ಲ. ಅವರನ್ನು ಜೀವಂತ ರಕ್ಷಿಸಲು ಸಾಧ್ಯವಾಗದಿದ್ದರ ಮೃತದೇಹವನ್ನಾದರೂ ಪತ್ತೆಹಚ್ಚುತ್ತೇವೆ’ ಎಂದು ಹೇಳಿರುವುದಾಗಿ ವರದಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಪವಿತ್ರಾ ಗೌಡ ಜೈಲು ಸೇರಿ 5 ತಿಂಗಳು ಕಳೆದಿದ್ದರು ಜಾಮೀನು ಸಿಕ್ಕಿಲ್ಲ. ಹಲವು ಭಾರಿ ಬೇಲ್ ಗೆ ಅರ್ಜಿ ಸಲ್ಲಿಸಿದ್ದರು ಅದು ವರ್ಕೌಟ್ ಆಗಿಲ್ಲ. ಇಂದು ಪ್ರಕರಣದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಬೇಲ್ ಸಿಗುವ ನಿರೀಕ್ಷೆಯಲ್ಲಿ ಪವಿತ್ರಾ ಗೌಡ ಇದ್ದಾರೆ. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ್, ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಲಾಗುವುದು. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಈವರೆಗೂ ಸರ್ಜರಿ ಮಾಡಿಸಿಲ್ಲ. ಆ ಬಗ್ಗೆ ಅವರು ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಬೇಕಿದೆ. ಇನ್ನೂ ಯಾಕೆ ಸರ್ಜರಿ ಮಾಡಿಸಿಲ್ಲ, ಬೆನ್ನು ನೋವಿಗೆ ಚಿಕಿತ್ಸೆ ಯಾವ ಹಂತದಲ್ಲಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ದರ್ಶನ್ ಪರ ವಕೀಲರು ಹೈಕೋರ್ಟ್ಗೆ ಇಂದು ಪ್ರತಿಕ್ರಿಯೆ…
ಸಂಗೀತ ಮಾಂತ್ರಿಕ ಎಆರ್ ರೆಹಮಾನ್ 29 ವರ್ಷಗಳ ಸುದೀರ್ಘ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಸೈರಾ ಬಾನುಗೆ ಡಿವೋರ್ಸ್ ಘೋಷಿಸಿದ ಬೆನ್ನಲೇ ರೆಹಮಾನ್ ತಂಡದ ಸದಸ್ಯರಾದ ಬಾಸಿಸ್ಟ್ ವಾದಕಿ ಮೋಹಿನಿ ಡೇ ತಮ್ಮ ಪತಿ, ಸಂಯೋಜಕ ಮಾರ್ಕ್ ಹಾರ್ಟ್ಸುಚ್‌ನಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಸುದ್ದಿಯನ್ನು ಮೋಹಿನಿ ಡೇ ಸ್ಪಷ್ಟಪಡಿಸಿದ್ದಾರೆ. ರೆಹಮಾನ್ ತಮ್ಮದೇ ಟ್ರೂಫ್ ಹೊಂದಿದ್ದು, ಈ ಟ್ರೂಫ್ನಲ್ಲಿ ಮೋಹಿನಿ ಅವರು ಬಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಬರೆದುಕೊಂಡಿರುವ ಮೋಹಿನಿ, “ಭಾರವಾದ ಹೃದಯದಿಂದ, ಮಾರ್ಕ್ ಮತ್ತು ನಾನು ಬೇರ್ಪಟ್ಟಿದ್ದೇವೆ ಎಂದು ಘೋಷಿಸುತ್ತೇವೆ. ಮೊದಲನೆಯದಾಗಿ, ನಮ್ಮ ಸ್ನೇಹಿತರು ಮತ್ತು ಕುಟುಂಬಕ್ಕೆ, ಇದು ನಮ್ಮ ನಡುವಿನ ಪರಸ್ಪರ ನಿರ್ಧಾರ. ನಾವು ಉತ್ತಮ ಸ್ನೇಹಿತರಾಗಿದ್ದರೂ, ನಮ್ಮ ಜೀವನದಲ್ಲಿ ಇಬ್ಬರಿಗೂ ಬೇರೆ ಬೇರೆ ಅಂಶಗಳು ಬೇಕಾಗಿವೆ. ಪರಸ್ಪರ ಒಪ್ಪಂದ ಪಡೆದು ಬೇರೆ ಆಗುತ್ತಿದ್ದೇವೆ. ಖಾಸಗಿತನಕ್ಕೆ ಆದ್ಯತೆ ನೀಡಿ ಎಂದಿದ್ದಾರೆ. ಡಿವೋರ್ಸ್ ಜತೆಗೆ ಮುಂದೆ ಅನೇಕ ಹೊಸ ಯೋಜನೆಗಳ ಮೂಲಕ ಕನ್‌ಬ್ಯಾಕ್ ಆಗುವುದಾಗಿ ಹೇಳಿಕೊಂಡಿದ್ದಾರೆ…
ರಾಜ್ಯ ಸರ್ಕಾರ ಕಳೆದ ಕೆಲ ದಿನಗಳ ಹಿಂದೆ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಮೂಲಕ ಜನರಿಗೆ ಶಾಕ್ ನೀಡಿತ್ತು. ಇದರಿಂದ ಸರ್ಕಾರದ ವಿರುದ್ಧ ಪ್ರತಿಯೊಬ್ಬರು ತಿರುಗಿ ಬಿದ್ದಿದ್ದರು. ಇದೀಗ ಜನರ ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತುಕೊಂಡ ಸಿಎಂ ಸಿದ್ದರಾಮಯ್ಯ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ…
ಬೆಂಗಳೂರು: ಮನೆಯಲ್ಲಿ ಸ್ನಾನಕ್ಕೆ ಅಂತಾ ನೀರು ಕಾಯಿಸಲು ಹೀಟರ್ ಅನ್ನು ಹಾಕಲಾಗಿತ್ತು… ಆದ್ರೆ ಅದೇ ವಾಟರ್ ಹೀಟರ್ ನಿಂದು ಒಂದು ಪ್ರಾಣವೇ ಹಾರಿಹೋಗಿದೆ. ಸ್ನಾನಕ್ಕೆಂದು ಹೀಟರ್ ಹಾಕಿದ್ದ ವೇಳೆ ಮಗು ಅದನ್ನು ಕೈಯಲ್ಲಿ ಹಿಡಿದಿದೆ. ಈ ವೇಳೆ ಮಗುವನ್ನು ರಕ್ಷಿಸಲು ಹೋಗಿ ತಾಯಿ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಆವಲಹಳ್ಳಿ ಠಾಣಾ ವ್ಯಾಪ್ತಿಯ ಕೆ.ದೊಮ್ಮಸಂದ್ರ ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ. ಅರುಣಾ (31) ಮೃತ ದುರ್ದೈವಿ. https://ainlivenews.com/goru-channabasapsa-was-elected-as-the-president-of-the-87th-all-india-kannada-sahitya-sammelan/ ಸ್ನಾನಕ್ಕೆಂದು ಹೀಟರ್ ಮೂಲಕ ನೀರು ಕಾಯಿಸಲು ಹಾಕಿದ್ದಳು. ತನ್ನ ಒಂದೂವರೆ ವರ್ಷದ ಮಗು ಲಿತ್ವಿಕ್ ಆಟವಾಡುವಾಗ ಅದನ್ನು ಹಿಡಿದುಕೊಂಡು ಚೀರಾಡಿದಾಗ ತಾಯಿ ಅದನ್ನು ತಪ್ಪಿಸಲು ಹೋಗಿ ಗಂಭೀರ ಗಾಯಕೊಂಡಿದ್ದಳು. ಕೂಡಲೇ ಅಕ್ಕಪಕ್ಕದವರೆಲ್ಲ ಆಕೆಯನ್ನು ಸಮೀಪದ ಆಸ್ಪತ್ರೆಗೆ ಸೇರಿಸಿದ್ದಾರೆ. ಅದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾಳೆ. ಇನ್ನೂ ಮಗು ಕೂಡಾ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.