ಬಿಗ್ ಬಾಸ್ ಕನ್ನಡಸ ಸೀಸನ್ 11ಕ್ಕೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿಕೊಟ್ಟ ಸಿಂಗರ್ ಹನುಮಂತ ಬೇರೆಲ್ಲಾ ಸ್ಪರ್ಧಿಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಆರಂಭದಿಂದಲೂ ಪ್ರೇಕ್ಷಕರ ಮನಗೆದ್ದ ಹನುಮಂತ ದೊಡ್ಮನೆಯಲ್ಲಿ ಪ್ರತಿವಾರವೂ ಸೇಫ್ ಆಗ್ತಿದ್ದಾರೆ. ನೋಡುಗರು ಆತನನ್ನು ದೊಡ್ಮನೆಯಲ್ಲಿಯೇ ಉಳಿಸಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಸಿಂಗರ್ ಹನುಮಂತ ಬಿಗ್ ಬಾಸ್ ಆಟವನ್ನು ತೊರೆಯುವ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಧನರಾಜ್ ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ‘ಬಿಗ್ ಬಾಸ್ಗೆ ನಾನು ನೇರವಾಗಿ ಹೇಳಿಬಿಡುತ್ತೇನೆ. ಕಷ್ಟ ಆಗುತ್ತಿದೆ ನನ್ನನ್ನು ಕಳಿಸಿ ಬಿಡಿ’ ಎಂದು ಹನುಮಂತ ಅವರು ಹೇಳಿದ್ದಾರೆ. ‘ನೀನು ಯಾಕೆ ಶೋಭಕ್ಕನ ಥರ ಆಡುತ್ತಿದ್ದೀಯ’ ಎಂದು ಧನರಾಜ್ ಅವರು ಹೇಳಿದರು. ಯಾಕೆಂದರೆ, ಶೋಭಾ ಶೆಟ್ಟಿ ಕೂಡ ಇದೇ ರೀತಿ ಮಾತನಾಡಿ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಿದ್ದರು. ತಮ್ಮ ಮನಸ್ಸಿನ ಗೊಂದಲ ಏನು ಎಂಬುದನ್ನು ಹನುಮಂತ ವಿವರಿಸಿದ್ದಾರೆ. ‘ಶೋಭಕ್ಕನ ರೀತಿ ಏನೂ ಇಲ್ಲ. ನಾವು ಬಾಯಿ ಸತ್ತವರ ರೀತಿ ಇರೋಕೆ ಆಗಲ್ಲ. ಮಾತಾಡೋಕೆ ಬರುತ್ತಿಲ್ಲ. ತಲೆ ಸ್ವಿಚ್ ಆಫ್…
Author: Author AIN
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನ ಈ ಯೋಜನೆಯಿಂದ ಬಹುತೇಕರು ಪ್ರಯೋಜನ ಪಡೆದಿದ್ದಾರೆ. ರಾಜ್ಯದೆಲ್ಲೆಡೆ ಗೃಹಲಕ್ಷ್ಮಿ ಯೋಜನೆ ಬಗ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆದರೆ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಜನರಿಗೆ ಸಿಕ್ಕಿಲ್ಲ. ಹೌದು, ಕಳೆದ ಎರಡು ತಿಂಗಳಿಂದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಬಿದ್ದಿಲ್ಲ. ಹಲವರು ಈ ಬಗ್ಗೆ ಗೊಂದಲಕ್ಕೂ ಒಳಗಾಗಿದ್ದಾರೆ. ಆದರೆ ಇದೀಗ ಗೃಹಲಕ್ಷ್ಮಿ 16ನೇ ಕಂತಿನ ಹಣದ ಬಗ್ಗೆ ಸ್ಪಷ್ಟ ಮಾಹಿತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ. https://ainlivenews.com/do-you-need-300-units-of-free-electricity-for-your-home-if-so-apply-for-this-scheme/ 16 ನೇ ಕಂತಿನ ಹಣ ಇದೇ ತಿಂಗಳು ಅಂದರೆ ಜನವರಿ 14ನೇ ತಾರೀಖಿನಿಂದ ಗೃಹಲಕ್ಷ್ಮಿ 16ನೇ ಕಂತಿನ 2000 ಹಣವನ್ನು ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿಸಿದ್ದಾರೆ ಮತ್ತು ಜನವರಿ 30ನೇ ತಾರೀಖಿನ ಒಳಗಡೆ ಪ್ರತಿಯೊಬ್ಬರ ಖಾತೆಗೂ ಕೂಡ 16ನೇ ಕಂತಿನ ಹಣವನ್ನು ಜಮಾ…
ರೈತರ ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿವೆಯಾದರೂ, ಮಾಹಿತಿಯ ಕೊರತೆಯಿಂದಾಗಿ ರೈತರಿಗೆ ಯೋಜನೆಗಳ ಸೌಲಭ್ಯಗಳು ಸಿಗುತ್ತಿಲ್ಲ. ಕೃಷಿಯಲ್ಲಿ ಆಧುನಿಕತೆ ತರಲು ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ, ಬೀಜ, ಗೊಬ್ಬರ, ಖರೀದಿಗೆ ಪ್ರೋತ್ಸಾಹಧನ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಶೇ.90ರಷ್ಟು ಸಹಾಯಧನ ಕೃಷಿ ಯಾಂತ್ರೀಕರಣ ಯೋಜನೆಯಡಿ ರೈತರಿಗೆ ಶೇ.90ರಷ್ಟು ಸಹಾಯಧನ ಸಿಗುತ್ತದೆ. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಿಂದ ಲಭ್ಯತೆ ಆಧಾರದ ಮೇಲೆ ಕೃಷಿ. ಯಂತ್ರೋಪಕರಣಗಳನ್ನು ರೈತರಿಗೆ ನೀಡಲಾಗುವುದು. ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್ , ಟ್ರ್ಯಾಕ್ಟರ್ ಚಾಲಿತ ಎಂ.ಬಿ.ಪ್ಲೋ, ರೋಟೋವೇಟರ್,ರೋಟೋವೇಟರ್,ಡಿಸ್ಕ್ ಫ್ಲೋ, ಡಿಸ್ಕ್ ಹ್ಯಾರೋ ಸೇರಿದಂತೆ ಇನ್ನಿತರ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಸಿಗಲಿದೆ. ಸಹಾಯಧನ ಪಡೆಯಲು ಅಗತ್ಯ ದಾಖಲೆಗಳು? ರೈತರ ಜಮೀನಿನ ಪಹಣಿ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಪಹಣಿ ಜಂಟಿಯಾಗಿದ್ದರೆ ಒಪ್ಪಿಗೆ ಪ್ರಮಾಣ ಪತ್ರ ಕಡ್ಡಾಯವಾಗಿ ಬೇಕು. ರೈತರು ಫ್ರೂಟ್ಸ್ ಐಡಿ ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…
ಬೆಂಗಳೂರು: ವಾಸ್ತು ಪ್ರಕಾರ ನೀವು ಮನೆ ಕಟ್ಟಿದರೆ, ವಾಸ್ತು ಪ್ರಕಾರ ನಡೆದುಕೊಂಡರೆ ನಿಮ್ಮ ಜೀವನದಲ್ಲಿ ಯಶಸ್ಸು ಎನ್ನುವುದು ಕಟ್ಟಿಟ್ಟ ಬುತ್ತಿ. ಮನೆ ಕಟ್ಟಲು ಮಾತ್ರವಲ್ಲದೆ, ನೀವು ಧರಿಸುವ ಬಟ್ಟೆಗಳು, ಪೂಜಾ ಕೋಣೆ, ನಿಮ್ಮ ಪರ್ಸ್‌ಗೆ ಸಂಬಂಧಿಸಿದಂತೆ ಕೂಡಾ ವಾಸ್ತು ನಿಯಮವಿದೆ. ಅಷ್ಟೇ ಅಲ್ಲ ನೀವು ಧರಿಸುವ ಪಾದರಕ್ಷೆ ವಿಚಾರದಲ್ಲಿ ಕೂಡಾ ನೀವು ವಾಸ್ತುವನ್ನು ಪಾಲಿಸಿದರೆ ಸಂತೋಷ ಎನ್ನುವುದು ಸದಾ ಕಾಲ ನಿಮ್ಮ ಪಾಲಿಗೆ ಇರಲಿದೆ. ಚಪ್ಪಲಿಗಳನ್ನು ಅಥವಾ ಬೂಟುಗಳನ್ನು ನಾವೇಕೆ ತಲೆಕೆಳಗಾಗಿ ಇಡಬಾರದು ಎಂಬುದು ನಿಮಗೆ ತಿಳಿದಿದೆಯೇ..? ಅಷ್ಟಕ್ಕೂ ಅದರ ಹಿಂದಿನ ಕಾರಣವೇನು..? ನಾವು ಧರಿಸುವ ಚಪ್ಪಲಿ ಅಥವಾ ಬೂಟುಗಳನ್ನು ತಲೆಕೆಳಗಾಗಿ ಇಡುವುದರಿಂದ ಜೀವನದಲ್ಲಿ ಹಲವಾರು ಸಮಸ್ಯೆಗಳು ಎದುರಿಸಬೇಕಾಗುತ್ತದೆ ಎಂದು ಶಾಸ್ತ್ರ ಹೇಳುತ್ತದೆ. ಚಪ್ಪಲಿ ಅಥವಾ ಬೂಟುಗಳನ್ನು ನಾವೇಕೆ ತಲೆಕೆಳಗಾಗಿ ಇಡಬಾರದು ಗೊತ್ತೇ..? ಮನೆಯಲ್ಲಿ ಅಪಶ್ರುತಿ: ಶೂ ಮತ್ತು ಚಪ್ಪಲಿಯನ್ನು ತಲೆಕೆಳಗಾಗಿ ಇಟ್ಟುಕೊಳ್ಳುವುದರಿಂದ ಮನೆಯಲ್ಲಿ ಕಲಹ ಉಂಟಾಗುವುದರ ಜೊತೆಗೆ ವಿನಾಕಾರಣ ಕುಟುಂಬದ ಸದಸ್ಯರ ನಡುವೆ ಜಗಳಗಳು ಸೃಷ್ಟಿಯಾಗುತ್ತದೆ ಎನ್ನುವ ನಂಬಿಕೆಯಿದೆ. ಈ…
ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದು ಕರೆಯಲ್ಪಡುವ ಉಚಿತ ವಸತಿ ಯೋಜನೆಯಡಿ ನೀವು ಮನೆಯನ್ನು ಪಡೆಯಲು ಬಯಸಿದರೆ, ನೀವು ಈ ಕೆಳಗಿನವುಗಳನ್ನು ಮಾಡಬೇಕಾಗಿದೆ. ಈ ಪೋಸ್ಟ್‌ನಲ್ಲಿ ನೀವು ಅದರ ಬಗ್ಗೆ ನೋಡಬಹುದು. ಪ್ರಧಾನಮಂತ್ರಿ ಆವಾಸ್ ಯೋಜನೆ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 25 ಜೂನ್ 2015 ರಂದು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ ವಸತಿರಹಿತರು ಮನೆ ನಿರ್ಮಿಸಲು ಅಥವಾ ಖರೀದಿಸಲು ಪ್ರಯೋಜನವನ್ನು ಪಡೆಯುತ್ತಾರೆ. ಅದಕ್ಕೆ ಕೆಲವು ಅರ್ಹತೆಗಳಿರಬೇಕು. ನೀವು ಆ ಅರ್ಹತೆಗಳನ್ನು ಹೊಂದಿದ್ದರೆ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಫಲಾನುಭವಿಗಳ ಪಟ್ಟಿಯನ್ನು rhreporting.nic.in ನಲ್ಲಿ ಕಾಣಬಹುದು. ಈ ಯೋಜನೆಗೆ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಉದ್ದೇಶವೇನು? ಬಡತನ ರೇಖೆಗಿಂತ ಕೆಳಗಿರುವ ಮತ್ತು ಸ್ವಂತ ಮನೆ ನಿರ್ಮಿಸಲು ಸಾಧ್ಯವಾಗದ ಜನರು ಈ ಯೋಜನೆಯ ಮೂಲಕ ಸ್ವಂತ ಮನೆ ನಿರ್ಮಿಸಿಕೊಳ್ಳಬಹುದು ಫಲಾನುಭವಿಗಳಿಗೆ ಅರ್ಹತೆ ಅಭ್ಯರ್ಥಿಯು ಈ ಕೆಳಗಿನ ಯಾವುದೇ ಅರ್ಹತೆಗಳನ್ನು ಹೊಂದಿರಬೇಕು. ಒಂದು ಅಥವಾ ಎರಡು ಕೊಠಡಿಗಳು, ಕಚ್ಚಾ ಗೋಡೆಗಳು, ಕಚ್ಚಾ…
ಬಾಲಿವುಡ್ ನಟ ಆಮೀರ್ ಖಾನ್ ಪುತ್ರ ಜುನೈದ್ ಖಾನ್ ಹಾಗೂ ನಟಿ ಶ್ರೀದೇವಿ ಪುತ್ರಿ ಖುಷಿ ಕಪೂರ್ ಡ್ಯುಯೆಟ್ ಮೂಡ್ ನಲ್ಲಿದ್ದಾರೆ. ಈ ಜೋಡಿಯ ಹೊಸ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದ ಈ ಸಿನಿಮಾದ ಹಾಡು ರಿಲೀಸ್ ಆಗಿದೆ ‘ಲವ್ಯಾಪಾ’ ಸಿನಿಮಾದ ಲವ್ಲಿ ಸಾಂಗ್‌ವೊಂದು ರಿಲೀಸ್ ಆಗಿದೆ ಸಾಕಷ್ಟು ಸದ್ದು ಮಾಡುತ್ತಿದೆ. ‘ಲವ್ಯಾಪಾ’ ಸಿನಿಮಾದ ಮೂಲಕ ಜುನೈದ್ ಖಾನ್ ಮತ್ತು ಖುಷಿ ಕಪೂರ್ ಬಣ್ಣದ ಬದುಕಿಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ‘ಲವ್ಯಾಪಾ ಹೋ ಗಯಾ’ ಎಂಬ ರೊಮ್ಯಾಂಟಿಕ್ ಸಾಂಗ್ ರಿಲೀಸ್ ಆಗಿದ್ದು, ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಕಲರ್‌ಫುಲ್ ಸೆಟ್‌ನಲ್ಲಿ ಜುನೈದ್ ಮತ್ತು ಖುಷಿ ಮಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಇನ್ನೂ ಈ ಸಿನಿಮಾವನ್ನು ಅದ್ವೈತ್ ಚಂದನ್ ನಿರ್ದೇಶನ ಮಾಡಿದ್ದಾರೆ. ಈ ವರ್ಷ ಫೆ.7ರಂದು ರಿಲೀಸ್ ಆಗಲಿದೆ. ಹಾಡಿನ ಮೂಲಕ ಗಮನ ಸೆಳೆದಿರುವ ಈ ಜೋಡಿ ಚಿತ್ರರಂಗದಲ್ಲಿ ಸದ್ದು ಮಾಡ್ತಾರಾ ಕಾದು ನೋಡಬೇಕಿದೆ.
ಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಗಳು ಸಾಮಾನ್ಯ ಅನ್ನೋ ಹಾಗಾಗಿದೆ. ಅದರಲ್ಲೂ ಸೆಲೆಬ್ರಿಟಿಗಳು ನಾ ಮುಂದು ತಾ ಮುಂದು ಎಂದು ಜಿದ್ದಿಗೆ ಬಿದ್ದು ಡಿವೋರ್ಸ್ ಪಡೆದುಕೊಳ್ಳುತ್ತಿದ್ದಾರೆ. ಅಂತೆಯೇ ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ನಡುವಿನ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದ್ದು, ಶೀಘ್ರವೇ ಡಿವೋರ್ಸ್ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬರ್ತಿದೆ. ಮೂಲಗಳ ಪ್ರಕಾರ ಇಬ್ಬರು ಪ್ರತ್ಯೇಕವಾಗಿದ್ದು ವಿಚ್ಛೇದನ ಪ್ರಕ್ರಿಯೆಗಳು ಇನ್ನೂ ಅಂತಿಮಗೊಂಡಿಲ್ಲ. ಎಲ್ಲಾ ಷರತ್ತುಗಳು ಪೂರ್ಣಗೊಂಡ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇಬ್ಬರು ದೂರ ದೂರವಾಗಲು ಯಾವುದೇ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ದಂಪತಿ ಪ್ರತ್ಯೇಕವಾಗಿ ತಮ್ಮ ಜೀವನವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ವದಂತಿಗೆ ಪೂರಕ ಎಂಬಂತೆ ಇಬ್ಬರೂ ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ದಾರೆ. ಚಹಲ್ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದರೆ ಧನಶ್ರೀ ಚಹಲ್ ಅವರೊಂದಿಗೆ ಫೋಟೋ ಡಿಲೀಟ್ ಮಾಡಿದ್ದಾರೆ. ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ…
ಟೀಂ ಇಂಡಿಯಾದ ಖ್ಯಾತ ಬೌಲರ್ ಯುಜವೇಂದ್ರ ಚಹಲ್ ಮತ್ತು ಪತ್ನಿ ಧನಶ್ರೀ ವರ್ಮಾ ಅವರನ್ನು ಕ್ರಿಕೆಟ್ ಲೋಕದಲ್ಲಿ ಕ್ಯೂಟ್ ಜೋಡಿ ಎಂದು ಕರೆಯಲಾಗುತ್ತದೆ. ಚಹಾಲ್ ಮತ್ತು ಧನಶ್ರೀ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಪೋಟೋಗಳನ್ನು ಹಾಕುವ ಮೂಲಕ ಇವರಿಬ್ಬರೂ ಎಂದಿಗೂ ಸಂತಸದಿಂದ ಇರುತ್ತಿದ್ದರು. ಆದರೆ ಇದೀಗ ಇವರಿಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆಯೇ ಎಂಬ ಅನುಮಾನ ಮೂಡಿದೆ. ಹೌದು ಯುಜವೇಂದ್ರ ಚಹಲ್ ಮತ್ತು ಪತ್ನಿ ಧನಶ್ರೀ ಶೀಘ್ರವೇ ಡಿವೋರ್ಸ್ ಪಡೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಆಪ್ತ ಮೂಲಗಳ ಪ್ರಕಾರ ಇಬ್ಬರು ಪ್ರತ್ಯೇಕವಾಗುವುದು ನಿಜ. ವಿಚ್ಛೇದನ ಪ್ರಕ್ರಿಯೆಗಳು ಇನ್ನೂ ಅಂತಿಮಗೊಂಡಿಲ್ಲ. ಎಲ್ಲಾ ಷರತ್ತುಗಳು ಪೂರ್ಣಗೊಂಡ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ. ಇಬ್ಬರು ಪ್ರತ್ಯೇಕವಾಗಲು ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ದಂಪತಿ ಪ್ರತ್ಯೇಕವಾಗಿ ತಮ್ಮ ಜೀವನವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ವದಂತಿಗೆ ಪೂರಕ ಎಂಬಂತೆ ಇಬ್ಬರೂ ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ದಾರೆ. ಚಹಲ್ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದರೆ ಧನಶ್ರೀ ಚಹಲ್ ಅವರೊಂದಿಗೆ ಫೋಟೋ…
ಹುಬ್ಬಳ್ಳಿ : ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎಸ್.ಬಿ.ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಪರೀಕ್ಷೆ ಸಿದ್ಧತೆಗೆ ಉಚಿತ ತರಬೇತಿಯನ್ನು ಜನವರಿ 6 ರಿಂದ 24 ರವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಪರೀಕ್ಷಾ ಪೂರ್ವ ತರಬೇತಿಗೆ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡಗಳೊಂದಿಗೆ ಜನವರಿ 6 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕುವೆಂಪು ರಸ್ತೆ, ನವನಗರ ಹುಬ್ಬಳ್ಳಿ ಕಚೇರಿಗೆ ಹಾಜರಾಗಬೇಕು. ತರಬೇತಿಯು ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. https://ainlivenews.com/under-this-scheme-you-will-get-a-subsidy-of-1-5-lakhs-for-a-solar-pump-set-apply-today/ ತರಬೇತಿ ಮಾತ್ರ ಉಚಿತವಾಗಿದ್ದು, ಇನ್ನಿತರ ಯಾವುದೇ ಸೌಲಭ್ಯ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288, 9164192155, 8453208555 ಸಂಪರ್ಕಿಸಬಹುದು. ಅರ್ಹ ಅಭ್ಯರ್ಥಿಗಳು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ನಮ್ಮ ಶಾಲೆಯ ಚರಕ ಪರಿಸರ ಸಂಘದಿಂದ ಪ್ಲಾಸ್ಟಿಕ್ ತ್ಯಜಿಸುವ ಕೈಚೀಲ ಬಳಸುವ ಅಭಿಯಾನದಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕೈಚೀಲಗಳನ್ನು ಗಳನ್ನು ಹಂಚುವ ಮೂಲಕ ಜಾಗೃತಿಯನ್ನು ಮೂಡಿಸುವ ಒಂದು ಚಿಕ್ಕ ಪ್ರಯತ್ನ ಮಾಡುತ್ತಿದ್ದೇವೆ.ಈ ನಮ್ಮ ಅಭಿಯಾನದಿಂದ ಪ್ಲಾಸ್ಟಿಕ್ ಬಳಕೆ ಕಡಿಮೆಯಾದರೆ ನಮ್ಮ ಪರಿಸರ ಸಂಘದ ಉದ್ದೇಶ ಈಡೇರಿದಂತಾಗುತ್ತದೆ ಎಂದು ಪಿ. ಆರ್. ಒಡೆಯರ ವಿಜ್ಞಾನ ಶಿಕ್ಷಕರು ಹೇಳಿದರು. ರಬಕವಿ ಬಸ್ ನಿಲ್ದಾಣದ ನಿಯಂತ್ರಣ ಅಧಿಕಾರಿಗಳಾದ ಆದ ನಾವಿ ಅವರು ಕೂಡ ಈ ಒಂದು ಪರಿಸರ ಸಂಘದ ಕಾರ್ಯಕ್ಕೆ ಸಹಕರಿಸಿದರು.ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಯರಗಟ್ಟಿಸರಕಾರಿ ಮಾದರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಚರಕ ಪರಿಸರ ಸಂಘದ” ವತಿಯಿಂದ “ಪ್ಲಾಸ್ಟಿಕ್ ತ್ಯಜಿಸಿ ಕೈಚಿಲಗಳನ್ನು ಬಳಸಿ ” ಎಂಬ ಕಾರ್ಯಕ್ರಮದಡಿಯಲ್ಲಿ ರಬಕವಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ, ಬಸ್ ಚಾಲಕರಿಗೆ, ನಿರ್ವಾಹಕರಿಗೆ ಹಾಗೂ ಸಾರ್ವಜನಿಕರಿಗೆ ಕೈಚಿಲಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಪ್ರೌಢಶಾಲೆಯ ಪರಿಸರ ಸಂಘದ ಸಂಚಾಲಕರಾದ ಪರಶುರಾಮ ಒಡೆಯರ. ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕರಾದ ಅಮಿತ…