Author: Author AIN

ಕನ್ನಡದ ಖ್ಯಾತ ನಟ ರಿಷಬ್ ಶೆಟ್ಟಿ ‘ಕಾಂತಾರ’ ಸಿನಿಮಾ ಮಾಡಿದ ಬಳಿಕ ಡಿವೈನ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಸದ್ಯ ಕಾಂತಾರ ಪಾರ್ಟ್ 1ಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಈ ಮಧ್ಯೆ ರಿಷಬ್ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್ ನಟಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಾಂತಾರ ಚಿತ್ರದ ಚಿತ್ರೀಕರಣ ಕರಾವಳಿಯಲ್ಲಿ ನಡೆಯುತ್ತಿದೆ. ಹಾಗಾಗಿ ರಿಷಬ್ ಶೆಟ್ಟಿ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಆದರೆ ಇತ್ತೀಚೆಗೆ ಏಕಾಏಕಿ ಜ್ಯೂ.ಎನ್‌ಟಿಆರ್ ಜೊತೆ ಕಾಣಿಸಿಕೊಂಡು ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದ್ದರು. ಹೀಗಾಗಿ ರಿಷಬ್ ಶೆಟ್ಟಿ ಜೊತೆ ಜ್ಯೂನಿಯರ್ ಎನ್ ಟಿ ಆರ್ ನಟಿಸುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಕಾಂತಾರ ಚಿತ್ರದ ಚಿತ್ರೀಕರಣ ನಡೆಯುತ್ತಿರುವುದರಿಂದ ರಿಷಬ್ ಶೆಟ್ಟಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಈ ಮಧ್ಯೆ ಟಾಲಿವುಡ್ ಯಂಗ್ ಟೈಗರ್ ಜ್ಯೂ.ನ್‌ಟಿಆರ್ ಜೊತೆ ಪತ್ನಿ ಪ್ರಗತಿ ಸಮೇತ ಕಾಣಿಸಿಕೊಂಡಿದ್ದಾರೆ. ಆಗ ಎಲ್ಲರೂ ಸೇರಿ ಫೋಟೊ ತೆಗೆಸಿಕೊಂಡರು. ಫೋಟೋ ನೋಡಿದ ನೆಟ್ಟಿಗರು ಜ್ಯೂ.ನ್‌ಟಿಆರ್ ಕೂಡ ಬಣ್ಣ ಹಚ್ಚಲಿದ್ದಾರೆ ಎಂದು ಮಾತನಾಡ್ತಿದ್ದಾರೆ. ಆದರೆ ಚಿತ್ರದಲ್ಲಿ ನಟಿಸುವ ಕುರಿತು ಯಾವುದೇ ಸ್ಪಷ್ಟನೆ…

Read More

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ಬಹುನಿರೀಕ್ಷಿತ ‘ಭೈರತಿ ರಣಗಲ್’ ಸಿನಿಮಾದ ಚಿತ್ರೀಕರಣ 70%ರಷ್ಟು ಮುಗಿದಿದೆ. ಅಲ್ಲವು ಅಂದುಕೊಂಡತೆ ಆದರೆ ಇದೇ ಆಗಸ್ಟ್ 15ಕ್ಕೆ ಚಿತ್ರ ತೆರೆಗೆ ಬರಲಿದೆ.  ಈ ಮಧ್ಯೆ ಚಿತ್ರದಲ್ಲಿ ನಟ ಶ್ರೀಮುರಳಿ ಇರುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು ಅದಕ್ಕೀಗ ಸ್ಪಷ್ಟನೆ ಸಿಕ್ಕಿದೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಚಿತ್ರದುರ್ಗಕ್ಕೆ ಆಗಮಿಸಿದ ನಟ ಶ್ರೀಮುರುಳಿ, ‘ಬಘೀರ’ ಸಿನಿಮಾ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಬಹುನಿರೀಕ್ಷಿತ ‘ಭೈರತಿ ರಣಗಲ್’ ಸಿನಿಮಾದಲ್ಲಿ ಶ್ರೀಮುರಳಿ ನಟಿಸುತ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಟ ಈ ಚಿತ್ರದಲ್ಲಿ ನಾನು ನಟಿಸುತ್ತಿಲ್ಲ ಎಂದಿದ್ದಾರೆ. ಭೈರತಿ ರಣಗಲ್ ಚಿತ್ರದಲ್ಲಿ ನಾನು ನಟನೆ ಮಾಡ್ತಿಲ್ಲ. ಅದು ಶಿವಣ್ಣ ಮಾಮನ ಮೂವಿ ಮಾತ್ರ ಅದ್ರಲ್ಲಿ ನಾನಿಲ್ಲ. `ಮಫ್ತಿ’ ಚಿತ್ರದ ಪ್ರೀಕ್ವೆಲ್ ಕಥೆ ಅದಾಗಿದೆ, ಅದ್ರಲ್ಲಿ ನಾನಿಲ್ಲ ಎಂದು ಶ್ರೀಮುರಳಿ ಸ್ಪಷ್ಟನೆ ನೀಡಿದ್ದಾರೆ. ‘ಭೈರತಿ ರಣಗಲ್’ ಸೀಕ್ವೆಲ್ ಬಗ್ಗೆ ಕೇಳಿದಕ್ಕೆ ನೋ ಕಾಮೆಂಟ್ಸ್ ಎಂದ ನಟ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಭೈರತಿ ರಣಗಲ್…

Read More

ನೇಪಾಳದಲ್ಲಿ 16 ವರ್ಷಗಳ ಹಿಂದೆ ನಡೆದ ಬೃಹತ್ ಪ್ರತಿಭಟನೆಗಳು ಆಗಿನ ರಾಜ ಜ್ಞಾನೇಂದ್ರ ಶಾ ಅವರನ್ನು ಸಿಂಹಾಸನ ತೊರೆದು ಪ್ರಜಾಪ್ರಭುತ್ವಕ್ಕೆ ಹಾದಿ ಮಾಡಿಕೊಡುವಂತೆ ಮಾಡಿತ್ತು. ಇದೀಗ ಅದೇ ರಾಜ ಜ್ಞಾನೇಂದ್ರ ಶಾ ಅವರನ್ನು ಪುನಃ ಸಿಂಹಾಸನಕ್ಕೇರಿಸಲು ದೇಶದಲ್ಲಿ ಪ್ರತಿಭಟನೆಯ ಆರಂಭವಾಗಿದೆ. ಈ ಬಾರಿ ಪ್ರತಿಭಟನಕಾರರು ಜ್ಞಾನೇಂದ್ರ ಶಾ ಅವರನ್ನು ರಾಜನಾಗಿ ಸಿಂಹಾಸನದಲ್ಲಿ ಮತ್ತೆ ಕೂರಿಸಬೇಕು, ಹಿಂದೂ ಧರ್ಮವನ್ನು ರಾಷ್ಟ್ರ ಧರ್ಮವಾಗಿ ಮರಳಿ ಸ್ಥಾಪಿಸಬೇಕೆಂದು ಹೋರಾಟಕ್ಕೆ ಮುಂದಾಗಿದ್ದಾರೆ. ದೇಶದ ಪ್ರಮುಖ ರಾಜಕೀಯ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಆಡಳಿತ ವಿಫಲವಾಗಿದೆ ಎಂದು ರಾಜಪ್ರಭುತ್ವದ ನಿಷ್ಠರು ಆರೋ‍ಪಿಸುತ್ತಿದ್ದು, ರಾಜಕಾರಣಿಗಳ ನಡೆಯಿಂದ ಜನಸಾಮಾನ್ಯರು ಹತಾಶರಾಗಿರುವುದು ಕಾಣಬರುತ್ತಿದೆ. ದೇಶದಲ್ಲಿನ ಸದ್ಯದ ವ್ಯವಸ್ಥೆಯಿಂದಾಗಿ ಬೆಳೆಯುತ್ತಿರುವ ಹತಾಶೆಯು ಆಮೂಲಾಗ್ರ ಬದಲಾವಣೆಯ ಒಕ್ಕೊರಲ ಕೂಗಿಗೆ ಕಾರಣವಾಗಿದೆ. ರಾಜಪ್ರಭುತ್ವದ ಪರವಾದ ರ‍್ಯಾಲಿಗಳು ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿವೆ. ಹೆಚ್ಚಿನ ಜನರು ತಮ್ಮ ಮನೆಗಳು ಮತ್ತು ಅಂಗಡಿಮುಂಗಟ್ಟು, ವಾಣಿಜ್ಯಮಳಿಗೆಗಳ ಮುಂದೆ ಮಾಜಿ ದೊರೆ ಮತ್ತು ಅವರ ಪೂರ್ವಜರ ಭಾವಚಿತ್ರಗಳನ್ನು ಪ್ರದರ್ಶಿಸುತ್ತಿದ್ದಾರೆ. ‘ಮರಳಿ ಬನ್ನಿ ದೊರೆ, ದೇಶವನ್ನು…

Read More

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ನಾಲ್ಕು ಬಾರಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಮುಹಮ್ಮದ್ ಇಶಾಖ್ ದರ್ ಅವರನ್ನು ವಿದೇಶಾಂಗ ಸಚಿವರಾಗಿ ನೇಮಕ ಮಾಡಲಾಗಿದೆ. ಭಾರತ, ಅಫ್ಗಾನಿಸ್ತಾನ ಸೇರಿದಂತೆ ನೆರೆಯ ದೇಶಗಳೊಂದಿಗೆ ಹಲವು ಸಮಸ್ಯೆ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ವಿದೇಶಾಂಗ ಸಚಿವ ಸ್ಥಾನವು ಮಹತ್ವದ್ದಾಗಿದೆ. ಇಂಥ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳಲ್ಲಿ ಕಡಿಮೆ ಅನುಭವ ಹೊಂದಿರುವ ದರ್ ಅವರಿಗೆ ಪ್ರಮುಖ ಖಾತೆ ನೀಡಲಾಗಿದೆ. ಕಾಶ್ಮೀರಿ ಜನಾಂಗದ ದರ್ ಅವರು ವೃತ್ತಿಯಿಂದ ಚಾರ್ಟಡ್ ಅಕೌಂಟೆಂಟ್ ಆಗಿದ್ದು, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್‌-ಎನ್‌) ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಜತೆಗೆ ಪಕ್ಷದ ವರಿಷ್ಠ ನವಾಜ್ ಷರೀಫ್ ಅವರ ನಂಬಿಕಸ್ಥ ಬೆಂಬಲಿಗರಾಗಿದ್ದಾರೆ.

Read More

ಪುಟ್ಟಗೌರಿ ಧಾರವಾಹಿ ಮೂಲಕ ಪ್ರೇಕ್ಷಕರ ಮನ ಗೆದ್ದು, ಬಿಗ್ ಬಾಸ್ ಮನೆಗೆ ಹೋಗಿ ಬಂದಿರುವ ನಟಿ ಸಾನ್ಯಾ ಐಯ್ಯರ್ ಬಿಗ್ ಸ್ಕ್ರೀನ್ ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ನಟಿ ಸಾನ್ಯಾ ಐಯ್ಯರ್ ಅವರು ಹಲವು ವಿಚಾರಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಸಾನ್ಯಾ  ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದು, ಆಗಾಗ ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ನಟಿ ಸಾನ್ಯಾ ಅಯ್ಯರ್ ಸಖತ್ ಬ್ಯುಸಿಯಾಗಿದ್ದಾರೆ. ಸಾನ್ಯಾ ಐಯ್ಯರ್ ಹಂಚಿಕೊಳ್ಳುವ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ನೆಗೆಟಿವ್ ಕಮೆಂಟ್ ಬರುತ್ತದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಳ್ಳದ ಸಾನ್ಯಾ ಮತ್ತೆ ಮತ್ತೆ ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಸದಾ ತಮ್ಮ ಫೋಟೋ ಶೂಟ್ ಗಳಿಂದ ಸುದ್ದಿಯಾಗೋ ಸಾನ್ಯಾ ಮತ್ತೊಂದು ಫೋಟೋ ಶೂಟ್ ಮಾಡಿಸಿದ್ದಾರೆ. ಫೋಟೋದಲ್ಲಿ ಸಾನ್ಯಾ ಸಕ್ಕತ್ತಾಗೆ ಮಿಂಚಿದ್ದಾರೆ. ಗೌರಿ ಸಿನಿಮಾದ ಮೂಲಕ ಸಾನ್ಯಾ ಅಯ್ಯರ್  ನಾಯಕಿಯಾಗಿ ಗಾಂಧಿನಗರಕ್ಕೆ ಎಂಟ್ರಿಕೊಡ್ತಿದ್ದಾರೆ. ಈ ಚಿತ್ರದಲ್ಲಿ ಸಾನ್ಯಾಗೆ ನಾಯಕನಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ…

Read More

ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿದ್ದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಸದ್ಯ ಸೈಲೆಂಟ್ ಆಗಿದ್ದಾರೆ. ಪುಷ್ಕರ್ ಇತ್ತೀಚೆಗೆ ಕೊಂಚ ಮಟ್ಟಿಗೆ ಸಿನಿಮಾಗಳಿಂದ ದೂರವಿದ್ದಾರೆ. ಇದೀಗ ನಟ ರಕ್ಷಿತ್ ಶೆಟ್ಟಿ ಜೊತೆ ಸಿನಿಮಾ ಮಾಡುವ ಕುರಿತು ಪುಷ್ಕರ್ ಪ್ರತಿಕ್ರಿಯಿಸಿದ್ದಾರೆ. ಕಿರಿಕ್ ಪಾರ್ಟಿಯಂತಹ ಸೂಪರ್ ಹಿಟ್ ಸಿನಿಮಾವನ್ನು ನೀಡಿದ್ದ ರಕ್ಷಿತ್ ಶೆಟ್ಟಿ ಹಾಗೂ ಪುಷ್ಕರ್ ಮಧ್ಯೆ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ಕೆಲವು ವಿಚಾರಕ್ಕೆ ಮನಸ್ತಾಪ ಉಂಟಾಗಿತ್ತು. ಆ ಬಳಿಕ ಇಬ್ಬರು ಬೇರೆ ಬೇರೆಯಾಗಿದ್ದರು. ಈ ಮಧ್ಯೆ ಪುಷ್ಕರ್ ಮತ್ತೆ ರಕ್ಷಿತ್ ಜೊತೆ ಸಿನಿಮಾ ಮಾಡ್ತಾರೆ ಎಂದು ಹೇಳಲಾಗಿತ್ತು. ಆದರೆ ಅದಕ್ಕೆ ಪುಷ್ಕರ್ ಸದ್ಯಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ. ‘ನನ್ನ ಹಾಗೂ ರಕ್ಷಿತ್ ಶೆಟ್ಟಿ ಮಧ್ಯೆ ಯಾವುದೇ ಹೇಟ್​ ರಿಲೇಶನ್​ಶಿಪ್​ ಇಲ್ಲ. ಇಬ್ಬರೂ ಗೌರವಯುತವಾಗಿ ನಮ್ಮದೇ ಸ್ಪೇಸ್​ನಲ್ಲಿ ಇದ್ದೇವೆ. ರಕ್ಷಿತ್ ಶೆಟ್ಟಿ ಸಿನಿಮಾ ಮಾಡಲು 10-20 ನಿರ್ಮಾಪಕರು ರೆಡಿ ಇದ್ದಾರೆ. ನಾನು ಹಣ ಹಾಕ್ತೀನಿ ಡೇಟ್ ಕೊಡಿ ಎಂದು ಅವರು ಕೇಳುತ್ತಾ ಇರುತ್ತಾರೆ. ಹೀಗಾಗಿ,…

Read More

ಬಂಗಾರಪ್ಪ ಅವರ ಕುಟುಂಬ ಒಡೆದುಹೋಗಿದ್ದು ಅವರ ಮನೆ ಒಂದು ಮಾಡಲು ಪ್ರಯತ್ನ ಮಾಡುತ್ತೀರಾ ಎಂಬ ಪ್ರಶ್ನೆಗೆ ನಟ ಹಾಗೂ ಬಂಗಾರಪ್ಪ ಅವರ ಅಳಿಯ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಂಗಾರಪ್ಪ ಅವರ ಮಗಳು, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಚುನಾವಣಾ ಕೆಲಸಗಳಿಗಗಿ ಈಗಾಗಲೇ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಪಡೆದಿರುವ ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕೆಲಸ ಆರಂಭಿಸಿದ್ದಾರೆ. ಬಂಗಾರಪ್ಪ ಪುತ್ರರಾದ ಸಚಿವ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ನಡುವೆ ವೈಮನಸ್ಯವಿದೆ. ಹೀಗಾಗಿ ಬಂಗಾರಪ್ಪ ಮನೆ ಒಡೆದ ಮನೆಯಂತಾಗಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅವರಿಗೆ ಬಂಗಾರಪ್ಪ ಮನೆ ಒಂದು ಮಾಡುತ್ತೀರಾ ಎಂಬ ಪ್ರಶ್ನೆ ಎದುರಾಗಿದೆ. ಬಂಗಾರಪ್ಪ ಅವರ ಮನೆ ಒಂದು ಮಾಡುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವರಾಜ್ ಕುಮಾರ್ ‘ಬಂಗಾರಪ್ಪ ಅವರ ಮನೆ ಒಂದು ಮಾಡಲು ನಾನು ಅವರ ಮನೆ ಅಳಿಯ, ಮಗನಲ್ಲ’ ಎಂದಿದ್ದಾರೆ. ಆ ಮೂಲಕ ಬಂಗಾರಪ್ಪ…

Read More

ಲೋಕಸಭೆ ಚುನಾವಣೆಗೆ ಇನ್ನೆನ್ನು ಕೆಲ ತಿಂಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಗವರ್ನರ್‌ಗೆ ಸಲ್ಲಿಸಿದ್ದಾರೆ. ಹರಿಯಾಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ಯ ಆಡಳಿತ ಸಮ್ಮಿಶ್ರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಖಟ್ಟರ್ ತಮ್ಮ ಸ್ಥಾನವನ್ನು ತ್ಯಜಿಸಿದ್ದಾರೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ಉಭಯ ಪಕ್ಷಗಳು ವಿಫಲವಾದ ಕಾರಣ ಹರಿಯಾಣದಲ್ಲಿ ಬಿಜೆಪಿ ಮತ್ತು ಜೆಜೆಪಿ ನಡುವಿನ ಮೈತ್ರಿ ಮುರಿದು ಬೀಳುವ ಹಂತದಲ್ಲಿದೆ. ಈ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದು, ಅವರ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.

Read More

ಸ್ಯಾಂಡಲ್‌ವುಡ್ ನಟ ಶ್ರೀಮುರಳಿ ದಂಪತಿ ಕಾರು ಬರುವುದು ಲೇಟ್ ಆದ ಹಿನ್ನೆಲೆಯಲ್ಲಿ ಆಟೋದಲ್ಲಿ ಮನೆಗೆ ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ, ಪತ್ನಿ ವಿದ್ಯಾ ಜೊತೆ ಆಟೋದಲ್ಲಿ ತೆರಳಿದ್ದಾರೆ. ನಟನ ಸರಳತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಕಾರ್ ಬರೊದು ಲೇಟ್ ಆಗುತ್ತೆ ಅಂತ ಹಾಗೇ ಆಟೋಲೆ ಹೋಗೊಣ ಅನ್ಕೊಂಡ್ವಿ. ಆಟೋ ಸಿಗದೇ ನಡೆದು ನಡೆದು ಸಾಕಾಗಿತ್ತು (ನನ್ನ ಹೆಂಡತಿಗೆ ಕೋಪಾನು ಸ್ಟಾರ್ಟ್ ಆಗುತ್ತಿತ್ತು) ಆಗ ನನ್ನ ಆಪತ್ಭಾದವರಂತೇ ಇಬ್ಬರು ಹುಡುಗರು ನಮ್ಮನ್ನು ನೋಡಿ ಸಾಕಾಗಿ, ಆಟೋ ಹಿಡಿದು ನಮ್ಮ ಬಳಿ ತಂದರು. ಅವರಿಗೆ ಧನ್ಯವಾದ ಆಟೋ ಅಣ್ಣ ನಮ್ಮನ್ನು ಮನೆಗೆ ಸುರಕ್ಷಿತವಾಗಿ ಡ್ರಾಪ್ ಮಾಡಿದರು ಎಂದು ನಟ ಶ್ರೀಮುರಳಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಶ್ರೀಮುರುಳಿ ಪರಾಕ್, ಬಘೀರ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಎರಡು ಸಿನಿಮಾದಲ್ಲೂ ಡಿಫರೆಂಟ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Read More

ಇತ್ತೀಚೆಗೆ ಸೆಲೆಬ್ರಿಟಿಗಳಿಗೆ ಡೀಪ್ ಫೇಕ್ ವಿಡಿಯೋ ಸಖತ್ ಸದ್ದು ಮಾಡುತ್ತಿವೆ. ಯಾರದ್ದೋ ದೇಹಕ್ಕೆ ನಟಿಯರ ಮುಖವನ್ನು ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗುತ್ತಿದೆ. ಈ ರೀತಿಯ ಕೆಲಸ ಮಾಡುವವರಿಗೆ ತಕ್ಕ ಶಿಕ್ಷೆ ನೀಡಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದ್ದರು ಮತ್ತೆ ಮತ್ತೆ ಅದೇ ಕೆಲಸ ಆಗುತ್ತಿದೆ. ಈ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸದ್ದು ಮಾಡಿತ್ತು. ಇದೀಗ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ. ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ದಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಯುವತಿಯೊಬ್ಬರು ಸಣ್ಣ ಬಟ್ಟೆ ಧರಿಸಿ ಲಿಫ್ಟ್ ಏರುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಮುಖವನ್ನು ಅಂಟಿಸಲಾಯಿತು. ಅನೇಕರು ಇದು ರಶ್ಮಿಕಾ ಎಂದೇ ಭಾವಿಸಿದ್ದರು. ಜೊತೆಗೆ ಬಟ್ಟೆ ಬಗ್ಗೆ ಅವರಿಗೆ ಪಾಠ ಮಾಡಿದ್ದರು. ಆ ಬಳಿಕ ಇದು ದೊಡ್ಡ ಸುದ್ದಿಯಾಗಿ ಡೀಪ್ ಫೇಕ್ ವಿಡಿಯೋ ವಿರುದ್ಧ ಸಾಕಷ್ಟು ಮಂದಿ…

Read More