ಸಾಮಾನ್ಯವಾಗಿ ಒಂದು ಕಂಪೆನಿಯಲ್ಲಿ ಕೆಲಸ ಮಾಡುವವರು ಹೆಚ್ಚಾಗಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಫೋನ್ ಗಳನ್ನು ಬಳಸುತ್ತಾರೆ. ಅದರ ಜೊತೆಗೆ ಕೈಯಲ್ಲೊಂದು ಲ್ಯಾಪ್ ಟಾಪ್ ಇದ್ದೆ ಇರುತ್ತದೆ. ಆದರೆ ಗೂಗಲ್ ಸಿಇಒ ಸುಂದರ್ ಪಿಚೈ ಎಷ್ಟು ಫೋನ್ ಗಳನ್ನು ಬಳಸುತ್ತಾರೆ ಎಂದು ತಿಳಿದರೆ ಶಾಕ್ ಆಗ್ತೀರಾ. ಗೂಗಲ್ ಮತ್ತು ಆಲ್ಫಾಬೆಟ್‌ನ ಸಿಇಒ ಸುಂದರ್ ಪಿಚೈ ಇತ್ತೀಚೆಗೆ ಸಂದರ್ಶನದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ತಮ್ಮ ಟೆಕ್ ಅಭ್ಯಾಸಗಳ ಬಗ್ಗೆ ಮಾತನಾಡಿದ ಸುಂದರ್ ಪಿಚೈ ವಿವಿಧ ಕಾರಣಗಳಿಗಾಗಿ ಒಂದೇ ಬಾರಿಗೆ 20 ಕ್ಕೂ ಹೆಚ್ಚು ಫೋನ್‌ಗಳನ್ನು ಬಳಸುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ಜನರು ಕೇವಲ ಒಂದು ಮೊಬೈಲ್ ಫೋನ್ ಅನ್ನು ನಿರ್ವಹಿಸಲು ಹೆಣಗಾಡುತ್ತಿರುವ ಸಮಯದಲ್ಲಿ, ಪಿಚೈ ಅವರು ಬಹಿರಂಗಪಡಿಸಿದ ಮಾತು ಬಹಳಷ್ಟು ಮಂದಿಗೆ ತುಂಬಾನೇ ಅದ್ಭುತ ಅಂತ ಅನ್ನಿಸಬಹುದು. ನಿಜವಾಗಿಯೂ ಅವರು ಇಷ್ಟೊಂದು ಫೋನ್‌ಗಳನ್ನು ಬಳಸುತ್ತಾರಂತೆ, ತನ್ನ ಕೆಲಸದ ಭಾಗವಾಗಿ ಅವರು ಎಲ್ಲಾ ಸಾಧನಗಳಲ್ಲಿ ಗೂಗಲ್ ಉತ್ಪನ್ನಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಖಚಿತಪಡಿಸಿಕೊಳ್ಳಲು ವಿವಿಧ…
Author: Author AIN
ಕನ್ನಡ ಕಿರುತೆರೆಯಲ್ಲಿ ಹಾಗೂ ಹಿರಿತೆರೆಯಲ್ಲಿ ಮಿಂಚಿದ ನಟಿ ಜ್ಯೋತಿ ರೈ ಸದ್ಯ ಪರಭಾಷೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ ನಟನೆಯ ಮೂಲಕವೇ ಆಫರ್ ಗಿಟ್ಟಿಸಿಕೊಂಡ ಚೆಲುವೆ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಮಿಂಚು ಹರಿಸುತ್ತಿದ್ದಾರೆ. ಇತ್ತೀಚೆಗೆ ಜ್ಯೋತಿರೈ ಸಾಮಾಜಿಕ ಜಾಲಾ ತಾಣದಲ್ಲಿ ತಮ್ಮ 2ನೇ ಮದುವೆ ವಿಚಾರ ರಿವೀಲ್ ಮಾಡಿದ್ದರು. ತೆಲುಗು ನಿರ್ದೇಶಕ ಸುಕು ಪೂರ್ವಜ್ ಜೊತೆ ಮದುವೆ ಆಗಿರುವ ವಿಚಾರವನ್ನು ನಟಿ ಬಹಿರಂಗಪಡಿಸಿದ್ದರು. ಈ ಮಧ್ಯೆ ನಟಿ ಮತ್ತಷ್ಟು ಹಾಟ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಜ್ಯೋತಿ ರೈ ಇನ್‌ಸ್ಟಾಗ್ರಾಮ್‌ನಲ್ಲಿ ಸಖತ್ ಬೋಲ್ಡ್ ಆಗಿರುವ ಫೋಟೋಗಳನ್ನು ಆಗಾಗ ಶೇರ್ ಮಾಡುತ್ತಲೇ ಇರುತ್ತಾರೆ. ಹಾಗೆಯೇ ನಟಿಯ ಫೋಟೋಗೆ ಸಖತ್ ಲೈಕ್ ಕಾಮೆಂಟ್ ಬರುತ್ತಿದೆ. ಒಂದು ಮಗುವಿನ ತಾಯಿ ಆಗಿದ್ದರೂ ಸಿಕ್ಕಾಪಟ್ಟೆ ಗ್ಲಾಮರಸ್ ಆಗಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ. ವಯಸ್ಸು 38 ಆಗಿದ್ದರೂ ಇಪ್ಪತ್ತರ ಹುಡುಗಿಯರನ್ನು ನಾಚಿಸುವಂತೆ ಕ್ಯಾಮರಾ ಮುಂದೆ ಜ್ಯೋತಿ ರೈ ಕಾಣಿಸಿಕೊಳ್ಳುತ್ತಾರೆ. ಸಣ್ಣ ಫ್ರಾಕ್, ಟಾಪ್ ಧರಿಸಿ ಹೊಸ ಫೋಟೊಗಳನ್ನು ಇದೀಗ…
ಜಪಾನ್‌ನಲ್ಲಿ ವಯಸ್ಸಾಗುತ್ತಿರುವವರ ಜನಸಂಖ್ಯೆ ಹೆಚ್ಚುತ್ತಿದ್ದು ಜನನ ಪ್ರಮಾಣ ತೀರಾ ಕಡಿಮೆಯಾಗುತ್ತಿದೆ. ಮತ್ತೊಂದೆಡೆ ಈಗಾಗಲೇ ಆರ್ಥಿಕ ಸಮಸ್ಯೆಗಳು ತಲೆದೋರಿದೆ. ಜಪಾನ್ ನ ಜನಸಂಖ್ಯಾ ಅಸಮತೋಲನವು ಅಲ್ಲಿನ ಸಾಂಸ್ಕೃತಿಕ ಪರಂಪರೆ ಮೇಲೂ ಪ್ರಭಾವ ಬೀರಿದೆ. ಈ ಹಿನ್ನೆಲೆಯಲ್ಲಿ ಪುರಾತನಕಾಲದಿಂದಲೂ ಜಪಾನ್‌ನಲ್ಲಿ ಆಚರಿಸಲಾಗುತ್ತಿದ್ದ ಸೋಮಿನ್ ಹಬ್ಬವು (ಪುರುಷರ ಅರೆಬೆತ್ತಲೆ ಹಬ್ಬ) ಈ ವರ್ಷ ಶಾಶ್ವತವಾಗಿ ಕೊನೆಗೊಂಡಿದೆ. ಜಪಾನ್ನ ಪುರುಷರು ಜಗಳದಲ್ಲಿ ತೊಡಗುವ ವಿಲಕ್ಷಣ ಉತ್ಸವಕ್ಕೆ ಸೊಮಿನ್-ಸಾಯಿ ಎಂದು ಕರೆಯಲಾಗುತ್ತಿದೆ. ಈ ಉತ್ಸವದಲ್ಲಿ ಸಾವಿರಾರು ಪುರುಷರು ತಮ್ಮ ಸೊಂಟಕ್ಕೆ ಮಾತ್ರ ಬಟ್ಟೆ ಕಟ್ಟಿಕೊಂಡು ಬಹುತೇಕ ಬೆತ್ತಲಾಗಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಈ ಉತ್ಸವದಲ್ಲಿ ಭಾಗವಹಿಸುತ್ತಿರುವ ಜನರಿಗೆ ತುಂಬಾ ವಯಸ್ಸಾಗುತ್ತಿರುವ ಕಾರಣ 1000 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಉತ್ಸವವನ್ನು ಕೊನೆಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೊಕುಸೆಕಿಜಿ ದೇವಾಲಯ ತಿಳಿಸಿದೆ. ಈ ದೇವಾಲಯದ ಹೇಳಿಕೆಯನ್ನು ಉಲ್ಲೇಖಿಸಿದ ಅಸಾಹಿ ಶಿಂಬುನ್ ಪತ್ರಿಕೆಯು ವರದಿ ಮಾಡಿದೆ. ಈ ಸಂಪ್ರದಾಯವನ್ನು ಮುಂದುವರಿಸಲು ಉತ್ತರಾಧಿಕಾರಿಗಳ ಕೊರತೆಯೂ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಶನಿವಾರ ಕೊನೆಯ ಬಾರಿಗೆ…
ಬಾಲಿವುಡ್ ನಟ ವರುಣ್ ಧವನ್ ಸಖತ್ ಖುಷಯಲ್ಲಿದ್ದಾರೆ. ಇದಕ್ಕೆ ಕಾರಣ ವರುಣ್ ಧವನ್ ಹಾಗೂ ನತಾಶಾ ದಂಪತಿ ಸದ್ಯದಲ್ಲೇ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ಸಂತಸದಲ್ಲಿದ್ದಾರೆ. ಸದ್ಯ ವರುಣ್ ಧವನ್ ಫೋಟೋವೊಂದನ್ನು ಶೇರ್ ಮಾಡಿ ತಾವು ಅಪ್ಪನಾಗುತ್ತಿರುವ ಸಂತಸವನ್ನು ಹಂಚಿಕೊಂಡಿದ್ದಾರೆ. ವರುಣ್ ಧವನ್ ಮತ್ತು ನತಾಶಾ ದಲಾಲ್ ಶೀಘ್ರದಲ್ಲೇ ಪೋಷಕರಾಗಲಿದ್ದಾರೆ. ಸದ್ಯದಲ್ಲೇ ದಂಪತಿ ಮನೆಗೆ ಮಗುವಿನ ಆಗಮನದಿಂದ ಸಂತಸ ಮೂಡಲಿದೆ. ಈ ವಿಷಯವನ್ನು ಸ್ವತಃ ವರುಣ್ ಅವರೇ ಪತ್ನಿಯ ಬೇಬಿ ಬಂಪ್ ಫೋಟೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ. ಪತ್ನಿ ಗರ್ಭಿಣಿಯಾಗಿರುವ ಬಗ್ಗೆ ಸ್ವತಃ ವರುಣ್ ತಮ್ಮ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ಅವರು ಬ್ಲ್ಯಾಕ್ ಅಂಡ್ ವೈಟ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ನತಾಶಾ ತನ್ನ ಮಗುವಿನ ಬಂಪ್ ತೋರಿಸುತ್ತಿದ್ದು, ಪತ್ನಿ ನತಾಶಾ ಮುಂದೆ ಮಂಡಿಯೂರಿನಿಂತ ವರುಣ್ ಧವನ್ ಮೊಣಕಾಲುಗಳ ಮೇಲೆ ಬೇಬಿ ಬಂಪ್ಗೆ ಪ್ರೀತಿಯ ಮುತ್ತು ನೀಡಿದ್ದಾರೆ. ಫೋಟೋ ಹಂಚಿಕೊಂಡ ವರುಣ್ ನಿಮ್ಮೆಲ್ಲರ ಆಶೀರ್ವಾದ ನಮ್ಮ ಕುಟುಂಬದ ಮೇಲಿರಲಿ ಎಂದಿದ್ದಾರೆ.
ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ 37 ವರ್ಷಗಳಿಂದ ಜೈಲಿನಲ್ಲಿದ್ದ ವ್ಯಕ್ತಿ ನಿರ್ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಆತನನ್ನು ತಕ್ಷಣವೇ ಬಿಡುಗಡೆಗೊಳಿಸಿ 14 ದಶಲಕ್ಷ ಡಾಲರ್ ಪರಿಹಾರ ನೀಡುವಂತೆ ಅಮೆರಿಕದ ಫ್ಲೋರಿಡಾ ರಾಜ್ಯದ ನ್ಯಾಯಾಲಯ ಆದೇಶ ಹೊರಡಿಸಿದೆ. ಫ್ಲೋರಿಡಾದ ತಾಂಪಾ ನಗರದಲ್ಲಿ 1983ರಲ್ಲಿ 19 ವರ್ಷದ ಬಾರ್ಬರಾ ಗ್ರಾಮ್ಸ್ ಎಂಬ ಯುವತಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಪ್ರಕರಣದ ಸಂಬಂಧ 18 ವರ್ಷದ ರಾಬರ್ಟ್ ಡ್ಯುಬೋಯ್ಸ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದು ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಆ ಬಳಿಕ ಅದನ್ನು ಜೀವಾವಧಿ ಶಿಕ್ಷೆಗೆ ಇಳಿಸಲಾಗಿತ್ತು. 2018ರಲ್ಲಿ `ಇನೊಸೆನ್ಸ್ ಪ್ರೊಜೆಕ್ಸ್ ಆರ್ಗನೈಸೇಷನ್’ ಎಂಬ ಎನ್‍ಜಿಒ ಸಂಸ್ಥೆ ಈ ಪ್ರಕರಣದ ಮರು ತನಿಖೆಗೆ ನಡೆಸಿದ ಪ್ರಯತ್ನದ ಫಲವಾಗಿ ನ್ಯಾಯಾಧಿಕಾರಿಗಳು ಡಿಎನ್‍ಎ ಪರೀಕ್ಷೆಗೆ ಆದೇಶಿಸಿದರು. 1983ರಲ್ಲಿ ಡಿಎನ್‍ಎ ಪರೀಕ್ಷೆಯ ಕ್ರಮ ಆರಂಭವಾಗಿರಲಿಲ್ಲ ಮತ್ತು ಸಂತ್ರಸ್ತೆಯ ದೇಹದ ಮೇಲಿನ ಗಾಯದ ಗುರುತು ಹಾಗೂ ಆರೋಪಿಯ ಹಲ್ಲಿನ ಗುರುತು ಒಂದಕ್ಕೊಂದು ಹೋಲುತ್ತದೆ ಎಂಬ ಆಧಾರದಲ್ಲಿ ಶಿಕ್ಷೆ ಘೋಷಿಸಿರುವುದು ಸರಿಯಲ್ಲ…
ಅಮೆರಿಕದ ಸ್ಯಾನ್‍ಡಿಯಾಗೊ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಯಾನ್‍ಡಿಯಾಗೊದ ಯುನಿವರ್ಸಿಟಿ ಸಿಟಿ ಪ್ರದೇಶದ ಶಾಪಿಂಗ್ ಮಾಲ್‍ನ ಬಳಿ ಗುಂಡಿನ ದಾಳಿ ನಡೆದಿದ್ದು ಆರೋಪಿ ಪರಾರಿಯಾಗಿದ್ದಾನೆ. ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದು ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ಮುಂದುವರಿದಿದೆ ಎಂದು ಸ್ಯಾನ್‍ಡಿಯಾಗೊ ಪೊಲೀಸ್ ಇಲಾಖೆಯ ಮುಖ್ಯಾಧಿಕಾರಿ ರಾಬರ್ಟ್ ಹೇಮ್ಸ್ ಮಾಹಿತಿ ನೀಡಿದ್ದಾರೆ.
ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾಯಿಯಾಗುವ ಸಂಭ್ರಮದಲ್ಲಿರುವ ಅದಿತಿ ಪ್ರಭುದೇವ್ ಅವರ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಅದಿತಿಯ ಸೀಮಂತ ಶಾಸ್ತ್ರದ ಫೋಟೋಗಳು ವೈರಲ್ ಆಗಿದೆ. ಹಸಿರು ಬಣ್ಣದ ಸೀರೆಯುಟ್ಟು ನಟಿ ಸಖತ್ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಅದಿತಿ ಮುಖದಲ್ಲಿ ತಾಯಿಯಾಗಿರುವ ಸಂಭ್ರಮ ಎದ್ದು ಕಾಣುತ್ತಿದೆ ಮನೆಗೆ ಹೊಸ ಅಥಿತಿಯ ಆಗಮನಕ್ಕೆ ದಂಪತಿ ಸಖತ್ ಖುಷಿಯಾಗಿದ್ದಾರೆ. 2024ರ ಹೊಸ ವರ್ಷದ ದಿನ ದಿನ ತಾಯಿಯಾಗುತ್ತಿರುವ ಗುಡ್ ನ್ಯೂಸ್ ಹಂಚಿಕೊಂಡಿದ್ರು. ಇದೀಗ ನಟಿ ಅದಿತಿ ಪ್ರಭುದೇವ ಶಾಸ್ತ್ರೋಕ್ತವಾಗಿ ತಮ್ಮ ಸೀಮಂತ ಮಾಡಿಸಿಕೊಂಡಿದ್ದಾರೆ. ಅದಿತಿ ಪ್ರಭುದೇವ ಶ್ರೀಮಂತ ಶಾಸ್ತ್ರಕ್ಕೆ ಅನೇಕ ಸ್ಯಾಂಡಲ್‌ವುಡ್ ನಟ-ನಟಿಯರು ಕೂಡ ಆಗಮಿಸಿದ್ರು. ನಟ ಶರಣ್ ಕೂಡ ಕಾರ್ಯಕ್ರಮಕ್ಕೆ ಬಂದು ಅದಿತಿಗೆ ಶುಭ ಹಾರೈಸಿದರು. ಬೆಂಗಳೂರಿನ ಅದಿತಿ ಅವರ ನಿವಾಸದಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸೀಮಂತ ಶಾಸ್ತ್ರ ನಡೆದಿದೆ. ‘ಧೈರ್ಯಂ’, ‘ಬಜಾರ್’, ‘ಸಿಂಗ್’, ‘ಬ್ರಹ್ಮಚಾರಿ’, ‘ಒಂಬತ್ತನೆ ದಿಕ್ಕು’, ‘ತೋತಾಪುರಿ’, ‘ತ್ರಿಬಲ್ ರೈಡಿಂಗ್’ ಮುಂತಾದ ಚಿತ್ರಗಳಲ್ಲಿ…
ತಮಗೆ ಅನಿಸಿದ್ದನ್ನು ನೇರಾ ನೇರವಾಗಿ ಹೇಳುವ ನಟ ಜಗ್ಗೇಶ್ ಆಗಾಗ ವಿವಾದಕ್ಕೆ ಸಿಲುಕಿಕೊಳ್ಳುತ್ತಾರೆ. ಇದೀಗ ಜಗ್ಗೇಶ್ ಆಡಿದ ಮಾತೊಂದು ವಿವಾದಕ್ಕೆ ಕಾರಣವಾಗಿದ್ದು ಇದರಿಂದ ಕ್ಷತ್ರಿಯ ಸಮುದಾಯದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದು, ಕೂಡಲೇ ಅವರು ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಡೆಸುವುದಾಗಿಯೂ, ಮನೆಗೆ ಮುತ್ತಿಗೆ ಹಾಕುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ‘ರಂಗನಾಯಕ’ ಸಿನಿಮಾದ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡಿದ್ದರು. ಈ ವೇಳೆ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ ಬಂಧನಕ್ಕೆ ಒಳಗಾದ ವಿಷಯ ಮಾತನಾಡುತ್ತಾ, ‘ಯಾವನೋ ಕಿತ್ತೋದ್ ನನ್ ಮಗ ರಿಯಲ್ ಹುಲಿ ಉಗುರು ಹಾಕ್ಕೋಂಡ್ ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ’ ಎಂದು ಸಂತೋಷ್ ಹೆಸರು ಹೇಳದೆ ಮಾತನಾಡಿದ್ದರು. ಈ ಬಗ್ಗೆ ಮಾತನಾಡಿದ್ದ ವರ್ತೂರು ಸಂತೋಷ್, ‘ಅವರು ದೊಡ್ಡವರು, ಎಲ್ಲದಕ್ಕೂ ಉತ್ತರ ಕೊಡಬೇಕಿಲ್ಲ, ನಾವು ಸುಮ್ಮನಿದ್ದರೆ ಅದೇ ಉತ್ತರ, ‘ಕಾಲಾಯ ತಸ್ಮೈ ನಮಃ’ ಎಂದಿದ್ದರು. ರಾಜ್ಯಸಭಾ ಸದಸ್ಯರೂ ಆಗಿರುವ ಜಗ್ಗೇಶ್ ಅವರು ವರ್ತೂರು ಸಂತು ಬಗ್ಗೆ ಕೀಳು…
ಕಿರಣಿ ಅಂಗಡಿಯಲ್ಲಿ ಮಕ್ಕಳಿಗೆ ಚಾಕಲೇಟ್ ಖರೀದಿಸಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಯಶ್ ಸಿನಿಮಾಗೆ ಬಂಡವಾಳ ಹೂಡಲು ನಿರ್ಮಾಪಕರು ತುದಿಗಾಲಲ್ಲಿ ನಿಂತಿದ್ದಾರೆ. ಕೋಟಿ ಕೋಟಿ ಇನ್ವೆಸ್ಟ್ ಮಾಡೋಕೆ ನಾ ಮುಂದು ತಾ ಮುಂದು ಎಂದು ಕ್ಯೂನಲ್ಲಿ ನಿಂತಿದ್ದಾರೆ. ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ರು ಸಖತ್ ಸಿಂಪಲ್. ಯಶ್ ಜೊತೆಗೆ ನಟಿ ರಾಧಿಕಾ ಪಂಡಿತ್ ಕೂಡ ಅಷ್ಟೇ ಸರಳ. ಈ ಜೋಡಿ ತಮ್ಮ ಸರಳತೆಯ ಮೂಲಕವೇ ಗಮನ ಸೆಳೆದಿದ್ದಾರೆ. ಯಶ್ ಈಗಾಗಲೇ ಹೊಸ ಸಿನಿಮಾ ಘೋಷಣೆ ಮಾಡಿದ್ದು ಹಾಲಿವುಡ್ ಲೆವೆಲ್ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಸಿದ್ಧರಾಗಿದ್ದಾರೆ. ನಟ ಯಶ್ ತಮ್ಮ ಕುಟುಂಬದೊಟ್ಟಿಗೆ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದರು. ಒಂದು ದಿನ ಮಠದಲ್ಲಿಯೇ ಉಳಿದುಕೊಂಡಿದ್ದರು. ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದ ವೇಳೆ ಮಕ್ಕಳಿಗಾಗಿ ಸಾಮಾನ್ಯ ಅಂಗಡಿಯಲ್ಲಿ ಚಾಕಲೇಟ್ ಕೊಡಿಸಿದರು. ಮಾತ್ರವಲ್ಲದೆ ಪತ್ನಿ ರಾಧಿಕಾ ಪಂಡಿತ್ಗೆ ಐಸ್ಕ್ಯಾಂಡಿ ಸಹ ಕೊಡಿಸಿದ್ದಾರೆ.…
ಸ್ಮಾರ್ಟ್ ಫೋನ್ ಗಳು ನಿತ್ಯ ಒಂದೊಂದು ರೀತಿಯಲ್ಲಿ ಮಾರುಕಟ್ಟೆಗೆ ಪರಿಚಯವಾಗುತ್ತವೆ. ಇವತ್ತು ಬಿಡುಗಡೆಯಾದ ಫೋನ್ ಇನ್ನೂ ಕೆಲವೇ ದಿನಗಳಲ್ಲಿ ಮತ್ತಷ್ಟು ವಿನ್ಯಾಸ ಹೊಸ ಪೀಚರ್ಸ್ ನಲ್ಲಿ ಮಾರುಕಟ್ಟೆಗೆ ಬರುತ್ತವೆ. ಇದೀಗ ಐಫೋನ್ ಕೂಡ ಹೊಸ ವಿನ್ಯಾಸದಲ್ಲಿ ಜನರ ಕೈಗೆಟುಕಲಿದೆ. ಪ್ರಸ್ತುತ, ಮಾರುಕಟ್ಟೆಯಲ್ಲಿ ಮಡಚಬಹುದಾದ ಸ್ಮಾರ್ಟ್ಫೋನ್ಗಳ ಇದೀಗ ಖ್ಯಾತ ಸ್ಮಾರ್ಟ್ ಫೋನ್ ದೈತ್ಯ ಆ್ಯಪಲ್ ಕೂಡ ಈ ಕ್ಷೇತ್ರಕ್ಕೆ ಕಾಲಿಡಲಿದೆಯಂತೆ. ಸದ್ಯದಲ್ಲೇ ಆ್ಯಪಲ್ ನಿಂದ ಫೋಲ್ಡಬಲ್ ಫೋನ್ ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಬಂದಾಗಿನಿಂದ ಆ್ಯಪಲ್ ಫೋನ್‌ಗಳ ಮಾರಾಟವು ಕಡಿಮೆಯಾಗುತ್ತಿದೆ. ಅದರಲ್ಲೂ ಚೀನಾದ ಮಾರುಕಟ್ಟೆಯಲ್ಲಿ ಹುವಾವೆಯ ಫೋಲ್ಡಬಲ್ ಫೋನ್‌ಗಳಿಂದಾಗಿ ಆ್ಯಪಲ್ ಫೋನುಗಳಿಗೆ ಬೇಡಿಕೆ ಕಮ್ಮಿ ಆಗಿದೆಯಂತೆ. ಈ ಹಿನ್ನೆಲೆಯಲ್ಲಿ ಇದೀಗ ಆ್ಯಪಲ್ ಸಂಸ್ಥೆ ಕೂಡ ಫೋಲ್ಡಬಲ್ ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಜ್ಜಾಗಿದೆ. ಇತರ ಕಂಪನಿಗಳಿಂದ ಬರುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಲುವಾಗಿ ಆ್ಯಪಲ್ ಕೂಡ ಫೋಲ್ಡಬಲ್ ಫೋನ್‌ಗಳನ್ನು ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಆ್ಯಪಲ್…