ಬಾಂಗ್ಲಾದೇಶದ ಮುಹಮ್ಮದ್ ಯೂನುಸ್ ನೇತೃತ್ವದ ಸರ್ಕಾರವು ಭಾರತದಲ್ಲಿನ ತನ್ನ ರಾಯಭಾರಿ ಸೇರಿದಂತೆ ಐದು ರಾಯಭಾರಿಗಳಿಗೆ ತಮ್ಮ ಹುದ್ದೆಗಳನ್ನು ತ್ಯಜಿಸಿ ತಕ್ಷಣ ಢಾಕಾಗೆ ಮರಳುವಂತೆ ಆದೇಶಿಸಿದೆ ಎಂದು ಬಾಂಗ್ಲಾ ದಿನಪತ್ರಿಕೆ ವರದಿ ಮಾಡಿದೆ ಮಧ್ಯಂತರ ಸರ್ಕಾರವು ಬ್ರಸೆಲ್ಸ್, ಕ್ಯಾನ್ಬೆರಾ, ಲಿಸ್ಬನ್, ನವದೆಹಲಿಯಲ್ಲಿರುವ ತನ್ನ ರಾಯಭಾರಿಗಳನ್ನು ಮತ್ತು ನ್ಯೂಯಾರ್ಕ್ ನಲ್ಲಿರುವ ವಿಶ್ವಸಂಸ್ಥೆಯ ಖಾಯಂ ನಿಯೋಗವನ್ನು ವಾಪಸ್ ಕರೆಸಿಕೊಂಡಿದೆ. ಇವರಲ್ಲಿ ಮುಸ್ತಾಫಿಜುರ್ ರೆಹಮಾನ್, ಭಾರತದ ಹೈಕಮಿಷನರ್; ಮುಹಮ್ಮದ್ ಅಬ್ದುಲ್ ಮುಹಿತ್, ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ರಾಯಭಾರಿ ಮತ್ತು ಖಾಯಂ ಪ್ರತಿನಿಧಿ; ಮೆಹಬೂಬ್ ಹಸನ್ ಸಲೇಹ್, ಬೆಲ್ಜಿಯಂ ರಾಯಭಾರಿ * ಅಲ್ಲಮ ಸಿದ್ದಿಕಿ, ಆಸ್ಟ್ರೇಲಿಯಾದ ಹೈಕಮಿಷನರ್ ಮತ್ತು ಪೋರ್ಚುಗಲ್ ನ ರಾಯಭಾರಿ ರೆಜಿನಾ ಅಹ್ಮದ್. ಬ್ರಿಟನ್ ನ ಹೈಕಮಿಷನರ್ ಸೈದಾ ಮುನಾ ತಸ್ನೀಮ್ ಅವರನ್ನು ಇದೇ ರೀತಿ ಮರಳುವಂತೆ ಕೇಳಿಕೊಳ್ಳಲಾದ ನಂತರ ಪ್ರಮುಖ ರಾಜತಾಂತ್ರಿಕ ಪುನರ್ರಚನೆ ನಡೆದಿದೆ. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಭಾರತದೊಂದಿಗಿನ ಬಾಂಗ್ಲಾದೇಶದ ಸಂಬಂಧವು ಹದಗೆಟ್ಟಿದೆ. ಆಗಸ್ಟ್ 5 ರಂದು…
Author: Author AIN
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ದಿನೇ ದಿನವೇ ಬೆನ್ನು ನೋವಿನ ಸಮಸ್ಯೆ ಕಾಡುತ್ತಿದೆ. ಇದರಿಂದ ದರ್ಶನ್ ಸಾಕಷ್ಟು ತೊಂದರೆ ಅನುಭವಿಸ್ತಿದ್ದಾರೆ. ಬಳ್ಳಾರಿ ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೆ ದರ್ಶನ್ ಪರದಾಡುತ್ತಿದ್ದಾರೆ. ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದರ್ಶನ್ಗೆ ಸ್ಕ್ಯಾನ್ ಮಾಡಿಸಲು ವೈದ್ಯರು ಸೂಚನೆ ನೀಡಿದ್ದಾರೆ. ಆದರೆ, ದರ್ಶನ್ ಅವರು ಸ್ಕ್ಯಾನ್ ಮಾಡಿಸೋದಕ್ಕೆ ರೆಡಿ ಇಲ್ಲ. ‘ನಾನು ಬೆಂಗಳೂರಿಗೆ ಹೋದ್ಮೇಲೆ ಸ್ಕ್ಯಾನ್ ಮಾಡಿಸ್ತೀನಿ. ಸದ್ಯಕ್ಕೆ ನೋವು ನಿವಾರಕ ಮಾತ್ರೆ ಕೊಡಿ ಸಾಕು’ ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ದರ್ಶನ್ ಅವರು ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಶುಕ್ರವಾರ (ಅಕ್ಟೋಬರ್ 4) ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ ಅವರು ಜಾಮೀನು ಸಿಕ್ಕೇ ಸಿಗುತ್ತದೆ ಎನ್ನುವ…
ಜಪಾನಿನ ವಿಮಾನ ನಿಲ್ದಾಣದಲ್ಲಿ ಹೂಳಲಾಗಿದ್ದ ಎರಡನೇ ಮಹಾಯುದ್ಧದ ಯುಎಸ್ ಬಾಂಬ್ ಸ್ಫೋಟಗೊಂಡಿದ್ದು, ಟ್ಯಾಕ್ಸಿವೇಯಲ್ಲಿ ದೊಡ್ಡ ಕುಳಿ ಉಂಟಾಗಿದೆ. ಪರಿಣಾಮ 80 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೈಋತ್ಯ ಜಪಾನ್ ನ ಮಿಯಾಝಾಕಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಾಗ ಹತ್ತಿರದಲ್ಲಿ ಯಾವುದೇ ವಿಮಾನ ಇರಲಿಲ್ಲ. ಇದರಿಂದ ಯಾವುದೇ ಅನಾಹುತ ಸಂಭವಿಸಲ್ಲ ಎಂದು ಭೂ ಮತ್ತು ಸಾರಿಗೆ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ವಯಂ ರಕ್ಷಣಾ ಪಡೆಗಳು ಮತ್ತು ಪೊಲೀಸರ ತನಿಖೆಯಲ್ಲಿ ಸ್ಫೋಟವು 500 ಪೌಂಡ್ ಯುಎಸ್ ಬಾಂಬ್ ನಿಂ ಸಂಭವಿಸಿದೆ ಮತ್ತು ಹೆಚ್ಚಿನ ಅಪಾಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದರ ಹಠಾತ್ ಸ್ಫೋಟಕ್ಕೆ ಕಾರಣವೇನೆಂದು ಅವರು ನಿರ್ಧರಿಸುತ್ತಿದ್ದರು. ಹತ್ತಿರದ ವಾಯುಯಾನ ಶಾಲೆ ರೆಕಾರ್ಡ್ ಮಾಡಿದ ವೀಡಿಯೊದಲ್ಲಿ ಸ್ಫೋಟವು ಕಾರಂಜಿಯಂತೆ ಗಾಳಿಯಲ್ಲಿ ಡಾಂಬರು ತುಂಡುಗಳನ್ನು ಉಗುಳುತ್ತಿರುವುದನ್ನು ತೋರಿಸಿದೆ. ಜಪಾನಿನ ದೂರದರ್ಶನದಲ್ಲಿ ಪ್ರಸಾರವಾದ ವೀಡಿಯೊಗಳು ಟ್ಯಾಕ್ಸಿವೇಯಲ್ಲಿ ಸುಮಾರು 7 ಮೀಟರ್ ವ್ಯಾಸ ಮತ್ತು…
ಬಾಲಿವುಡ್ ನಟ ಗೋವಿಂದ ಕಾಲಿಗೆ ತಮ್ಮದೇ ಗನ್ ನಿಂದ ಮಿಸ್ ಫೈಯರ್ ಆಗಿದ್ದು ಸದ್ಯ ಚೇರತಿಸಿಕೊಳ್ಳುತ್ತಿದ್ದಾರೆ. ಪಿಸ್ತೂಲ್‌ನಿಂದ ಆಕಸ್ಮಿಕವಾಗಿ ಗುಂಡು ಹಾರಿ ಬುಲೆಟ್ ಕಾಲಿಗೆ ತಗುಲಿದೆ ಅಂತ ಗೋವಿಂದ ಪೊಲೀಸರ ಬಳಿ ಹೇಳಿದ್ದಾರೆ. ಆದ್ರೆ ಗೋವಿಂದ್ ಹೇಳಿಕೆ ಪೊಲೀಸರಿಗೆ ಸಮಾಧಾನ ತಂದಿಲ್ಲ. ಬೇರೇನೋ ನಡೆದಿದೆ ಎಂದು ಅನುಮಾನ ಶುರುವಾಗಿದ್ದು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಗೋವಿಂದ್ ಮತ್ತೆ ಸುದ್ದಿಯಾಗಿರೋದು ಅವರ ಮೂಢನಂಬಿಕೆಗಳಿಂದಾಗಿ. ಮುಂಬೈನಲ್ಲಿ ಜನಿಸಿದ ಗೋವಿಂದ 1980ರ ದಶಕದ ಕೊನೆಯಲ್ಲಿ ಮತ್ತು 1990ರ ದಶಕದ ಆರಂಭದಲ್ಲಿ ಹಿಂದಿ ಚಿತ್ರರಂಗವನ್ನು ಆಳಿದವರಲ್ಲಿ ಒಬ್ಬರು. ನಾಲ್ಕು ದಶಕಗಳ ಕಾಲದ ತಮ್ಮ ವೃತ್ತಿಜೀವನದಲ್ಲಿ 165ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಮಾರ್ಚ್‌ನಲ್ಲಿ, ಲೋಕಸಭೆ ಚುನಾವಣೆಗೆ ಒಂದು ತಿಂಗಳ ಮೊದಲು, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ್ದರು. ಸುಮಾರು ಎರಡು ದಶಕಗಳ ನಿವೃತ್ತ ಜೀವನದ ನಂತರ ಗೋವಿಂದ ಮತ್ತೆ ಹಾಗೆ ರಾಜಕೀಯ ಕ್ಷೇತ್ರಕ್ಕೆ ಮರು ಪ್ರವೇಶ ಮಾಡಿದ್ದರು. 2004ರ ಚುನಾವಣಾ ಯುದ್ಧದಲ್ಲಿ ಮುಂಬೈ ಉತ್ತರ…
ನಟಿ ಸಮಂತಾ ಹಾಗೂ ನಟ ನಾಗಚೈತನ್ಯ ಬಗ್ಗೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ತೆಲಂಗಾಣ ಅರಣ್ಯ ಸಚಿವೆ ಕೊಂಡಾ ಸುರೇಖಾ ಇದೀಗ ಕ್ಷಮೆ ಕೇಳಿದ್ದಾರೆ. ಅವರು ತಮ್ಮ ಉದ್ದೇಶವನ್ನು ಹೇಳಿ ಮಾತನ್ನು ಹಿಂಪಡೆದಿದ್ದಾರೆ. ಸಮಂತಾ ಬಗ್ಗೆ ಸುರೇಖಾ ಹೇಳಿದ್ದ ಅಶ್ಲೀಲ ಕಮೆಂಟ್ ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಜೂನಿಯರ್ ಎನ್ಟಿಆರ್, ನಾಗ ಚೈತನ್ಯ ಸೇರಿದಂತೆ ಅನೇಕರು ಈ ಬಗ್ಗೆ ಧ್ವನಿ ಎತ್ತಿದ್ದರು. ಈಗ ಈ ಸಂಬಂಧ ಸುರೇಖಾ ಸ್ಪಷ್ಟನೆ ನೀಡಿ ಪ್ರಕಟಣೆ ಹೊರಡಿಸಿದ್ದಾರೆ. ‘ಎನ್ ಕನ್ವೆಷನ್ ಹಾಲ್ ಉಳಿಸಿಕೊಳ್ಳಲು ಸಮಂತಾ ಅವರನ್ನು ಕಳುಹಿಸುವಂತೆ ನಾಗಾರ್ಜುನ ಬಳಿ ಕೆಟಿಆರ್ ಕೇಳಿದ್ದರು. ಆ ಬಳಿಕ ನಾಗಾರ್ಜುನ ಅವರು ಸಮಂತಾ ಬಳಿ ಹೋಗಿ ಈ ಡೀಲ್ ಬಗ್ಗೆ ಮಾತನಾಡಿದ್ದರು. ಆದರೆ, ಇದಕ್ಕೆ ಒಪ್ಪದ ಸಮಂತಾ ಪತಿ ನಾಗ ಚೈತನ್ಯ ಇಂದ ವಿಚ್ಛೇದನ ಪಡೆದರು’ ಎಂದು ಸುರೇಖಾ ಹೇಳಿಕೆ ನೀಡಿದ್ದರು. ಜೊತೆಗೆ ನಟಿಯರ ಫೋನ್ನ ಕೆಟಿ ರಾಮ್ ರಾವ್ ಟ್ಯಾಪ್ ಮಾಡಿ ನಂತರ ಬ್ಲ್ಯಾಕ್ಮೇಲ್ ಮಾಡುತ್ತಿದ್ದರು ಎಂದು…
ಲೆಬನಾನ್‌ನಲ್ಲಿ ಇತ್ತೀಚೆಗೆ ಸಂಘಟಿತ ಪೇಜರ್ ಹಾಗೂ ವಾಕಿಟಾಕಿಗಳು ಸ್ಫೋಟಗೊಂಡು ಹಲವರು ಮೃತಪಟ್ಟಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಭಾರತ ಸರ್ಕಾರ ವಿದೇಶದಲ್ಲಿ ಸಿದ್ಧವಾದ ಇಂಥ ಉಪಕರಣಗಳು ಭಾರತದ ಭದ್ರತೆಯ ಮೇಲೆ ದುಷ್ಪರಿಣಾಮ ಬೀರಬಲ್ಲವು ಎಂದು ಅನುಮಾನ ವ್ಯಕ್ತಪಡಿಸಿದೆ. ಭಾರತ ಸರ್ಕಾರವು ಸಿಸಿ ಕ್ಯಾಮೆರಾದಂಥ ‘ಕಣ್ಗಾವಲು ಮಾರುಕಟ್ಟೆ’ಯಲ್ಲಿ ವಿದೇಶಿ ಉಪಕರಣಗಳ ಮೇಲೆ ನಿರ್ಬಂಧ/ನಿಯಂತ್ರಣ ಹೇರಲು ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಯೊಬ್ಬರು, ‘ಪೇಜರ್ ಸ್ಫೋಟಗಳ ಬಳಿಕ ಭಾರತ ಸರ್ಕಾರ ಹೆಚ್ಚು ಎಚ್ಚರಿಕೆ ವಹಿಸಿದೆ. ಸರ್ಕಾರದ ಕಣ್ಗಾವಲು ಕ್ಯಾಮೆರಾ ನೀತಿಯು ಅ.8 ರಂದು ಜಾರಿಗೆ ಬರುವ ಸಾಧ್ಯತೆ ಇದೆ. ಇದು ಮಾರುಕಟ್ಟೆಯಿಂದ ಚೀನಾದ ಕಂಪನಿಗಳನ್ನು ಪರಿಣಾಮಕಾರಿಯಾಗಿ ತೆಗೆದುಹಾಕುತ್ತದೆ ಮತ್ತು ಭಾರತೀಯ ಕಂಪನಿಗಳಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ. ಸಂಶೋಧನಾ ವಿಶ್ಲೇಷಕ ವರುಣ್ ಗುಪ್ತಾ ಪ್ರತಿಕ್ರಿಯಿಸಿ, ‘ಪ್ರಸ್ತುತ, ಸಿಪಿ ಪ್ಲಸ್, ಹಿಕಿವಿಷನ್ ಮತ್ತು ದಹುವಾ ಎಂಬ ಕಂಪನಿಗಳು ಭಾರತ ಕಣ್ಗಾವಲು ಮಾರುಕಟ್ಟೆಯಲ್ಲಿ ಶೇ.60ರಷ್ಟು ಪಾಲು ಹೊಂದಿವೆ. ಈ ಪೈಕಿ ಸಿಪಿ ಪ್ಲಸ್ ಮಾತ್ರ ಭಾರತದ್ದು. ಉಳಿದವು ಚೀನೀ ಕಂಪನಿಗಳು.…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್ ಅಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಜಾಮೀನಿನ ಮೇಲೆ ಹೊರಬರಲು ಎದುರು ನೋಡುತ್ತಿರುವ ದರ್ಶನ್ ವಿರುದ್ಧ ಶೀಘ್ರದಲ್ಲೇ ಮತ್ತೊಂದು ಆರೋಪಪಟ್ಟಿ ಸಲ್ಲಿಕೆ ಆಗಲಿದೆ. ಕೆಲ ದಿನಗಳ ಹಿಂದೆ ತೀವ್ರ ಸಂಚಲನ ಸೃಷ್ಟಿಸಿದ್ದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಪಡೆ ಪ್ರಕರಣ ಸಂಬಂಧ ದರ್ಶನ್ ಹಾಗೂ ರೌಡಿಗಳ ವಿರುದ್ಧ ಶೀಘ್ರದಲ್ಲೇ ಪೊಲೀಸರು ಆರೋಪ ಪಟ್ಟಿ ಸಲ್ಲಿಸಲಿದ್ದಾರೆ. ವಿಶೇಷ ಸೌಲಭ್ಯ ಪಡೆದ ದರ್ಶನ್ ಹಾಗೂ ಇಬ್ಬರು ರೌಡಿಗಳ ವಿರುದ್ಧ ತನಿಖೆಯಲ್ಲಿ ಸಾಕಷ್ಟು ಪುರಾವೆ ಸಿಕ್ಕಿದ್ದು, ಈ ಕೃತ್ಯಕ್ಕೆ ಕಾರಾಗೃಹದ ಸಿಬ್ಬಂದಿ ಸಹಕರಿಸಿರುವುದು ಗೊತ್ತಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಎಲ್ಲ ಮಾಹಿತಿಯನ್ನು ಕ್ರೋಢೀಕರಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಮುಂದಾಗಿದ್ದಾರೆ. ಈ ಪ್ರಕರಣದ ತನಿಖೆ ಮುಕ್ತಾಯ ಹಂತ ತಲುಪಿದ್ದು ಪೊಲೀಸರು ಆರೋಪ ಪಟ್ಟಿ ಸಲ್ಲಿಕೆಗೆ ಅಂತಿಮ ಹಂತದ ತಯಾರಿ ನಡೆಸಿದ್ದಾರೆ. ಈ ಆರೋಪ ಪಟ್ಟಿಯ…
ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್ ತನ್ನ 8 ಮಂದಿ ಯೋಧರನ್ನು ಕಳೆದುಕೊಂಡಿದೆ. ಇದು ಮಧ್ಯಪ್ರಾಚ್ಯ ಸಂಘರ್ಷದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮಂಗಳವಾರ ನಡೆದ ಇರಾನ್‌ನ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಕಳೆದ ವಾರ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಕೊಂದಿದ್ದಕ್ಕೆ ಪ್ರತಿಕ್ರಿಯೆಯಾಗಿ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಹೇಳಿಕೊಂಡಿತ್ತು. ಎರಡು ಪ್ರತ್ಯೇಕ ದಾಳಿಗಳಲ್ಲಿ ತನ್ನ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ತಿಳಿಸಿದೆ. ಇದು ತಿಂಗಳಲ್ಲಿ ಇಸ್ರೇಲಿ ಪಡೆಗಳ ವಿರುದ್ಧ ನಡೆದ ಅತ್ಯಂತ ಮಾರಣಾಂತಿಕ ದಾಳಿಗಳಲ್ಲಿ ಒಂದಾಗಿದೆ. ವೈದ್ಯ ಸೇರಿದಂತೆ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನಾ “22 ವರ್ಷದ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಅವರು ಲೆಬನಾನ್‌ನಲ್ಲಿ ಯುದ್ಧದ ಸಮಯದಲ್ಲಿ ಹುತಾತ್ಮರಾಗಿದ್ದಾರೆ” ಎಂದು ಇಸ್ರೇಲ್ ಮಿಲಿಟರಿ ಪ್ರಕಟಣೆಯಲ್ಲಿ ತಿಳಿಸಿತ್ತು. ಲೆಬನಾನ್ ರಾಜಧಾನಿಯಲ್ಲಿ ಸೀಮಿತ ಮತ್ತು ಸ್ಥಳೀಯ ಭೂ…
ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಹೀಗಾಗಿ ವಿಜಯ್ ಸಿನಿಮಾಗಳಿಂದ ದೂರವಾಗಲು ನಿರ್ಧರಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ನೋವುಂಟು ಮಾಡಿದೆ. ಈ ಮಧ್ಯೆ ವಿಜಯ್ ನಟನೆಯ ಕೊನೆಯ ಸಿನಿಮಾಗೆ ಯಾರು ನಾಯಕಿಯಾಗ್ತಾರೆ ಎಂಬ ಕುತೂಹಲ ಮನೆ ಮಾಡಿತ್ತು. ಇದಕ್ಕೆ ಸ್ಪಷ್ಟನೆ ಸಿಕ್ಕಿದ್ದು ಕರಾವಳಿ ಬೆಡಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸಿ ಸಕ್ಸಸ್ ಕಂಡಿದ್ದ ನಟಿ ಪೂಜಾ ಹೆಗ್ಡೆಗೆ ಕೆಲ ಸಮಯದಿಂದ ಹೇಳಿಕೊಳ್ಳಲು ಸಕ್ಸಸ್ ಸಿಗುತ್ತಿಲ್ಲ. ಆದರೆ ಅವಕಾಶಗಳು ಮಾತ್ರ ಕೊಂಚವೂ ಕಮ್ಮಿಯಾಗಿಲ್ಲ. ಇದೀಗ ಕಾಲಿವುಡ್‌ನಲ್ಲಿ ಮತ್ತೊಂದು ಬಂಪರ್ ಆಫರ್ ಗಿಟ್ಟಿಸಿಕೊಂಡಿದ್ದಾರೆ. ಮತ್ತೊಮ್ಮೆ ಸ್ಟಾರ್ ನಟ ವಿಜಯ್ ದಳಪತಿಗೆ ಪೂಜಾ ಹೆಗ್ಡೆ ನಾಯಕಿಯಾಗಿದ್ದು, ಈ ಸುದ್ದಿಯನ್ನು ಕೆವಿಎನ್ ನಿರ್ಮಾಣ ಸಂಸ್ಥೆ ತಿಳಿಸಿದೆ. ವಿಜಯ್ ನಟನೆಯ ಕೊನೆಯ ಸಿನಿಮಾ ‘ದಳಪತಿ 69ನೇ’ ಚಿತ್ರಕ್ಕೆ ನಾಯಕಿ ಯಾರಾಗ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮತ್ತೊಮ್ಮೆ ವಿಜಯ್ ಜೊತೆ ರೊಮ್ಯಾನ್ಸ್ ಮಾಡುವ ಅವಕಾಶವನ್ನು ಪೂಜಾ…
ತಮಿಳು ಚಿತ್ರರಂಗದ ಖ್ಯಾತ ನಟ ಸಿಂಬು ವೈವಾಹಿಕ ಜೀವನಕ್ಕೆ ಕಾಲಿಡ್ತಿದ್ದಾರೆ ಎಂಬ ಸುದ್ದಿ ಕಳೆದ ಕೆಲ ದಿನಗಳಿಂದ ಸಖತ್ ಸದ್ದು ಮಾಡುತ್ತಿದೆ. ಬೆಂಗಳೂರಿನ ಬೆಡಗಿ ನಿಧಿ ಅಗರ್ವಾಲ್ ಜೊತೆ ಸಿಂಬು ಮದುವೆಗೆ ಸಜ್ಜಾಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಮದುವೆ ಸುದ್ದಿ ಬಗ್ಗೆ ನಟ ಸಿಂಬು ಟೀಮ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ತೆಲುಗು ನಟಿ ನಿಧಿ ಅಗರ್ವಾಲ್ ಹಾಗೂ ಸಿಂಬು ಪ್ರೀತಿಸುತ್ತಿದ್ದಾರೆ. ಸದ್ಯದಲ್ಲೇ ನಿಶ್ಚಿತಾರ್ಥ ನಡೆಯಲಿದ್ದು ಅದ್ದೂರಿಯಾಗಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸದ್ದು ಮಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಂಬು ಇದೊಂದು ಬೇಸ್ ಲೆಸ್ ಸುದ್ದಿ. ಈ ವಿಚಾರ ವದಂತಿಯಷ್ಟೇ, ಸತ್ಯವಲ್ಲ ಎಂದಿದ್ದಾರೆ. ಅಂದಹಾಗೆ, 2021ರಲ್ಲಿ ‘ಈಶ್ವರನ್’ ಎಂಬ ಸಿನಿಮಾದಲ್ಲಿ ಸಿಂಬುಗೆ ನಾಯಕಿಯಾಗಿ ನಿಧಿ ನಟಿಸಿದ್ದರು. ಈ ಸಿನಿಮಾ ನಂತರ ಇಬ್ಬರ ಡೇಟಿಂಗ್ ಬಗ್ಗೆ ವದಂತಿ ಹಬ್ಬಿತ್ತು. ಇನ್ನೂ ಈ ಹಿಂದೆ ತ್ರಿಷಾ, ಹನ್ಸಿಕಾ ಮೋಟ್ವಾನಿ, ನಯನತಾರಾ ಜೊತೆ ಸಿಂಬು ಡೇಟಿಂಗ್ ಮಾಡಿದ್ದರು ಎನ್ನಲಾದ ಸುದ್ದಿಗಳು ಹರಿದಾಡಿತ್ತು. ಯಾವುದು ಮದುವೆಯವರೆಗೂ ಬರಲಿಲ್ಲ.…