ಸೂರ್ಯಗ್ರಹಣಕ್ಕೆ ಹಿಂದೂ ಧರ್ಮದ ಜ್ಯೋತಿಷ್ಯದಲ್ಲಿ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದ್ದು, ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಸೂರ್ಯಗ್ರಹಣದ ಸಂದರ್ಭದಲ್ಲಿ ಭೂಮಿಯ ಮೇಲೆ ಸೂರ್ಯನ ಬೆಳಕು ಕಡಿಮೆಯಾಗುತ್ತದೆ ಅಥವಾ ಸಂಪೂರ್ಣವಾಗಿ ಕಣ್ಮರೆಯಾಗುತ್ತದೆ. ಸಾಮಾನ್ಯವಾಗಿ, ಸೂರ್ಯಗ್ರಹಣವು ಅಮಾವಾಸ್ಯೆಯ ದಿನದಂದು ಸಂಭವಿಸುತ್ತದೆ. 2024 ರಲ್ಲಿ ಎರಡು ಸೂರ್ಯ ಗ್ರಹಣಗಳು ಮತ್ತು ಎರಡು ಚಂದ್ರ ಗ್ರಹಣಗಳು ಸಂಭವಿಸಲಿವೆ. ಈ ವರ್ಷದ ಮೊದಲ ಸೂರ್ಯಗ್ರಹಣವು ಏಪ್ರಿಲ್ 8, 2024 ರಂದು ಸಂಭವಿಸಿತು. ಇದರ ಪರಿಣಾಮವು ಯುನೈಟೆಡ್ ಸ್ಟೇಟ್ಸ್ ಮತ್ತು ಅದರ ಹತ್ತಿರದ ದೇಶಗಳಲ್ಲಿ ಗೋಚರಿಸಿತು. ಭಾರತದಲ್ಲಿ ಕಾಣುವುದಿಲ್ಲ. ಇಂದು ವರ್ಷದ ಎರಡನೇ ಸೂರ್ಯಗ್ರಹಣ ಸಂಭವಿಸಲಿದೆ. ಹಾಗಾದ್ರೆ ಈ ಬಾರಿ ಎಲ್ಲೆಲ್ಲಿ ಸೂರ್ಯಗ್ರಹಣ ಸಂಭವಿಸುತ್ತಿದೆ ಗೊತ್ತಾ. ಈ ವರ್ಷದ ಎರಡನೇ ಸೂರ್ಯಗ್ರಹಣವು ಇಂದು ಸಂಭವಿಸಲಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಈ ಎರಡನೇ ಸೂರ್ಯಗ್ರಹಣವು ರಿಂಗ್ ಆಫ್ ಫೈರ್ ಅನ್ನು ರೂಪಿಸುತ್ತದೆ. ಚಂದ್ರನು ಸೂರ್ಯನೊಂದಿಗೆ ಹೊಂದಿಕೆಯಾದಾಗ ಇದು ರೂಪುಗೊಳ್ಳುತ್ತದೆ. ಆದಾಗ್ಯೂ, ಭೂಮಿಯಿಂದ ಸೂರ್ಯನ…
Author: Author AIN
ಹಮಾಸ್ ನಾಯಕರ ಹತ್ಯೆ ಬಳಿಕ ಇರಾಕ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ ಜೋರಾಗಿದೆ. ಇದೀಗ ಇಸ್ರೇಲ್ ಮೇಲೆ ಇರಾನ್ ಮತ್ತೆ ಭೀಕರ ದಾಳಿ ನಡೆಸಿದೆ. ಇಸ್ರೇಲ್ ಮೇಲೆ 400 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಇರಾನ್ ಉಡಾಯಿಸಿದೆ. ಇರಾನ್‌ನ ಪ್ರಮುಖ ನಗರಗಳಿಂದ ಇಸ್ರೇಲ್ ಗುರಿಯಾಗಿಸಿ, ಕ್ಷಿಪಣಿ ದಾಳಿ ನಡೆಸಲಾಗಿದೆ. ಇರಾನ್‌ನ ಪ್ರಮುಖ ನಗರಗಳಾದ ಇಸ್ಫಹಾನ್, ತಬ್ರಿಜ್, ಖೋರಮಾಬಾದ್, ಕರಾಜ್ ಮತ್ತು ಅರಾಕ್‌ಸೇರಿದಂತೆ ಹಲವೆಡೆಯಿಂದ ಇಸ್ರೇಲ್ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಉಡಾಯಿಸಲಾಗಿದೆ. ಹಮಾಸ್ ನಾಯಕ ಹತ್ಯೆಗೆ ಪ್ರತಿಕಾರವಾಗಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸುವ ನಿರ್ಧಾರವನ್ನು ಇರಾನ್‌ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಮಾಡಿದೆ ಅಂತ ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಜುಲೈ 31ರಂದು ಟೆಹ್ರಾನ್‌ನಲ್ಲಿ ಫೆಲೆಸ್ತೀನ್ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ನನ್ನು ಇಸ್ರೇಲ್ ಹತ್ಯೆ ಮಾಡಲಾಗಿತ್ತು. ಸೆಪ್ಟೆಂಬರ್ 27 ರಂದು ಬೈರುತ್, ಲೆಬನಾನ್‌ನಲ್ಲಿ ತನ್ನ ಬೃಹತ್ ವೈಮಾನಿಕ ದಾಳಿಯಲ್ಲಿ, ಇಸ್ರೇಲ್ ಇರಾನಿನ ಬ್ರಿಗೇಡಿಯರ್ ಜನರಲ್ ಅಬ್ಬಾಸ್ ನಿಲ್ಫೊರೌಶನ್…
ಜಪಾನ್ ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (ಎಲ್ ಡಿಪಿ) ನಾಯಕ ಶಿಗೆರು ಇಶಿಬಾ ದೇಶದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಸಂಸತ್ತಿನಲ್ಲಿ ನಡೆದ ಮತದಾನದಲ್ಲಿ ಇಶಿಬಾ ಅವರನ್ನು ಆಯ್ಕೆ ಮಾಡಲಾಗಿದ್ದು ಇಶಿಬಾ ಅವರು ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ಜಪಾನ್ ಸಂಸತ್ತಿನ ಕೆಳ ಮತ್ತು ಮೇಲ್ಮನೆ ಎರಡರಲ್ಲೂ ಪ್ರಧಾನಿ ಸ್ಥಾನಕ್ಕಾಗಿ ಕಳೆದ ವಾರ ಎಲ್ಡಿಪಿ ಅಧ್ಯಕ್ಷ ಸ್ಥಾನವನ್ನು ಗೆದ್ದ ಇಶಿಬಾ ಅವರ ಹೆಸರನ್ನು ಅನುಮೋದಿಸಿದವು. ಹಗರಣಗಳಿಂದ ಕುಖ್ಯಾತಿ ಪಡೆದಿರುವ ಎಲ್ಡಿಪಿಯ ಮೇಲೆ ಮತದಾರರ ವಿಶ್ವಾಸವನ್ನು ಪುನಃಸ್ಥಾಪಿಸಲು ಇಶಿಬಾ ಬಹಳ ಶ್ರಮಪಡಬೇಕಾಗಲಿದೆ. ಹೀಗಾಗಿ ಅವರ ಅಧಿಕಾರಾವಧಿಯು ಬಹಳಷ್ಟು ಸವಾಲುಗಳಿಂದ ಕೂಡಿತ್ತು. ಕಳೆದ ವಾರ ನಡೆದ ಚುನಾವಣೆಯಲ್ಲಿ ಆರ್ಥಿಕ ಭದ್ರತಾ ಸಚಿವ ಸನೇ ತಕೈಚಿ ಅವರನ್ನು ಸೋಲಿಸುವ ಮೂಲಕ ಇಶಿಬಾ ತಮ್ಮ ಐದನೇ ಪ್ರಯತ್ನದಲ್ಲಿ ಎಲ್ಡಿಪಿ ನಾಯಕನಾಗಿ ಜಯ ಘಳಿಸಿದರು. ಇಶಿಬಾ 215 ಮತಗಳನ್ನು ಗಳಿಸಿ 194 ಮತ ಪಡೆದ ತಕೈಚಿ ಅವರನ್ನು ಹಿಂದಿಕ್ಕಿದರು. ಇದಕ್ಕೂ ಮುನ್ನ ಸೋಮವಾರ, ಇಶಿಬಾ ಅಕ್ಟೋಬರ್ 9ರಂದು…
ಸ್ಯಾಂಡಲ್ ವುಡ್ ಖ್ಯಾತ ನಟಿ ರಚಿತಾ ರಾಮ್ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಕ್ಷಮೆ ಯಾಚಿಸಿದ್ದಾರೆ. ಅಕ್ಟೋಬರ್ 3ರಂದು ರಚಿತಾ ರಾಮ್ 32ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ಬಾರಿ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹಾಗಾಗಿ ನಟಿ ಫ್ಯಾನ್ಸ್ ಬಳಿ ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ರಚಿತಾ ರಾಮ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಶೇರ್ ಮಾಡಿದ್ದಾರೆ. ಸೀರೆಯುಟ್ಟು, ಅದಕ್ಕೆ ತಕ್ಕ ಆಭರಣ ತೊಟ್ಟು, ಹಣೆಗೆ ಬಿಂದಿ ಇಟ್ಟು, ಮಲ್ಲಿಗೆ ಮುಡಿದು ಸಾಂಪ್ರದಾಯಿಕ ನೋಟದಲ್ಲಿ ಬಹಳ ಸೊಗಸಾಗಿ ಕಾಣಿಸಿಕೊಂಡಿರುವ ಫೋಟೋವನ್ನು ನಟಿ ಪೋಸ್ಟ್ ಮಾಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ಎಲ್ಲರೂ ಚೆನ್ನಾಗಿದ್ದೀರಿ ಎಂದು ಭಾವಿಸುತ್ತಾ, ಈ ಬಾರಿ ಚಿತ್ರೀಕರಣ ಇರುವುದರಿಂದ ನನ್ನ ಹುಟ್ಟುಹಬ್ಬ (ಅಕ್ಟೋಬರ್ 3) ಆಚರಣೆಯನ್ನು ನಾನು ಮಾಡಿಕೊಳ್ಳುತ್ತಿಲ್ಲ ಎಂದು ಹೇಳಲು ಇಚ್ಚಿಸುತ್ತೇನೆ. ಎಲ್ಲರಿಗೂ ಕ್ಷಮೆ ಯಾಚಿಸುತ್ತಾ, ಎಂದಿನಂತೆ ಪ್ರತೀ ಭಾನುವಾರ ಚಿತ್ರೀಕರಣ ಮುಗಿಸಿ ಬಂದ ನಂತರ ಸಿಗುತ್ತೇನೆ.’ – ನಿಮ್ಮ ಪ್ರೀತಿಯ ರಚ್ಚು ಎಂದು ಬರೆದುಕೊಂಡಿದ್ದಾರೆ. ಪೋಸ್ಟ್ಗೆ…
ಸದಾ ವಿವಾದಗಳಿಂದ ಸುದ್ದಿಯಾಗುವ ನಟಿ ವನಿತಾ ವಿಜಯ್ಕುಮಾರ್ ಇದೀಗ ನಾಲ್ಕನೇ ಮದುವೆಯಾಗಲು ರೆಡಿಯಾಗಿದ್ದಾರೆ. ಸದ್ಯ ವನಿತಾ ವಿಜಯ್ ಕುಮಾರ್ ಅವರಿಗೆ 43 ವರ್ಷ ವಯಸ್ಸಾಗಿದ್ದು ಮತ್ತೆ ಮದುವೆಯಾಗಲು ಮುಂದಾಗಿದ್ದಾರೆ. ಹಿಂದಿನ ಮೂವರು ಪತಿಯರಿಗೆ ಡಿವೋರ್ಸ್ ನೀಡಿರುವ ವನಿತಾ ಇದೀಗ ಹಳೇ ಗೆಳೆಯ ರಾಬರ್ಟ್ಗೆ ಪ್ರಪೋಸ್ ಮಾಡಿದ್ದು ಅದರ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಡಲ ತೀರದಲ್ಲಿ ವನಿತಾ ವಿಜಯ್ಕುಮಾರ್ ಅವರು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಈ ಫೋಟೋದಲ್ಲಿ ರಾಬರ್ಟ್ ಅವರು ನಗು ಬೀರಿದ್ದಾರೆ. ‘ದಿನಾಂಕ ನೆನಪಿಟ್ಟುಕೊಳ್ಳಿ. 5 ಅಕ್ಟೋಬರ್ 2024. ವನಿತಾ ವಿಜಯ್ ಕುಮಾರ್ ಲವ್ಸ್ ರಾಬರ್ಟ್’ ಎಂದು ಈ ಫೋಟೋಗೆ ಕ್ಯಾಪ್ಷನ್ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ. ಈ ಫೋಟೋವನ್ನು ರಾಬರ್ಟ್ ಕೂಡ ಶೇರ್ ಮಾಡಿಕೊಂಡಿದ್ದು, ‘ವಿಆರ್. ದೊಡ್ಡ ಘೋಷಣೆ. 5 ಅಕ್ಟೋಬರ್ 2024’ ಎಂದು ಬರೆದುಕೊಂಡಿದ್ದಾರೆ. ವನಿತಾ ವಿಜಯ್ಕುಮಾರ್ ಅವರು 2000ನೇ ಇಸವಿಯಲ್ಲಿ ಮೊದಲ ಮದುವೆ ಆಗಿದ್ದರು. ಆದರೆ 2007ರಲ್ಲಿ ಅವರು ವಿಚ್ಛೇದನ ಪಡೆದರು.…
ಬಾಲಿವುಡ್ ಹಿರಿಯ ನಟ ಗೋವಿಂದ್ ಅ.1ರಂದು ಮುಂಜಾನೆ ತಮ್ಮದ್ದೇ ಗನ್ ನಿಂದ ಕಾಲಿಗೆ ಆಕಸ್ಮಿಕವಾಗಿ ಫೈರ್ ಮಾಡಿಕೊಂಡಿದ್ದರು. ಗುಂಡಿನ ಸದ್ದು ಕೇಳುತ್ತಿದ್ದಂತೆ ಕುಟುಂಬಸ್ಥರು ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ವಿಷಯ ತಿಳಿದ ಅಭಿಮಾನಿಗಳು ಕಂಗಲಾಗಿದ್ದರು. ಸದ್ಯ ನಟನ ಆರೋಗ್ಯ ಸುಧಾರಿಸಿದೆ. ಕಾಲಿಗೆ ಹೊಕ್ಕಿದ್ದ ಗುಂಡನ ತೆಗೆದ ವೈದ್ಯರು 8ರಿಂದ 10 ಹೊಲಿಗೆ ಹಾಕಿದ್ದಾರೆ. ‘ಗೋವಿಂದ ಅವರಿಗೆ 8ರಿಂದ 10 ಹೊಲಿಗೆ ಹಾಕಿದ್ದೇವೆ. ಇನ್ನು ಎರಡು-ಮೂರು ದಿನದಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ. ಮೊಣಕಾಲಿನಿಂದ ಎರಡು ಇಂಚು ಕೆಳಗಿನ ಜಾಗದಲ್ಲಿ ಅವರಿಗೆ ಗುಂಡೇಟು ಆಗಿದೆ’ ಎಂದು ಮುಂಬೈನ ಖಾಸಗಿ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ತಮ್ಮ ಭದ್ರತೆಗಾಗಿ ಇಟ್ಟುಕೊಂಡಿದ್ದ ರಿವೋಲ್ವಾರ್ ಆಕಸ್ಮಿಕವಾಗಿ ಫೈರ್ ಆದ ಪರಿಣಾಮದಿಂದ ಗೋವಿಂದ ಅವರಿಗೆ ಗುಂಡೇಟು ತಗುಲಿತ್ತು. ಆಪ್ತರು ಮತ್ತು ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡಿ ಗೋವಿಂದ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಗೋವಿಂದ ಸಹೋದರ ಕೀರ್ತಿ ಕುಮಾರ್, ಮಗಳು ಟೀನಾ ಅಹುಜಾ ಮುಂತಾದವರು ಆಸ್ಪತ್ರೆಗೆ ಆಗಮಿಸಿ ನಟನ ಆರೋಗ್ಯ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಏಕಾಏಕಿ ನೆಚ್ಚಿನ ನಟನನ್ನು ಅಡ್ಮಿಟ್ ಮಾಡಿದ್ದು ತಿಳಿದು ಅಭಿಮಾನಿಗಳು ಕಂಗಾಲಾಗಿದ್ದರು. ಇದೀಗ ಆಸ್ಪತ್ರೆ ಮೂಲಗಳು ರಜನಿಕಾಂತ್ ಅವರಿಗೆ ಏನಾಗಿದೆ ಎಂಬುದನ್ನು ತಿಳಿಸಿದ್ದಾರೆ. ‘ಸೂಪರ್ ಸ್ಟಾರ್’ ರಜನಿಕಾಂತ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದೆ. ಅದಕ್ಕೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ತನಾಳ ಉಬ್ಬಿದ್ದರಿಂದ ಸ್ಟೆಂಟ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸೆ.30ರಂದು ರಜನಿಕಾಂತ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ರಕ್ತನಾಳದಲ್ಲಿ ಊತ ಕಾಣಿಸಿಕೊಂಡಿತ್ತು. ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಹಿರಿಯ ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಸ್ಟೆಂಟ್ ಹಾಕಿದ್ದು ಸದ್ಯ ರಜನಿಕಾಂತ್ ಆರೋಗ್ಯ ಸುಧಾರಿಸುತ್ತಿದೆ ಎಂದು ಆಸ್ಪತ್ರೆಯ ಕಡೆಯಿಂದ ಹೆಲ್ತ್ ಅಪ್ಡೇಟ್ ನೀಡಲಾಗಿದೆ. ಆದಷ್ಟು ಬೇಗ ರಜನಿಕಾಂತ್ ಅವರು ಗುಣಮುಖರಾಗಲಿ ಎಂದು ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ. ‘ರಜನಿಕಾಂತ್ ಆರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಎರಡು ದಿನಗಳಲ್ಲಿ ಅವರು…
ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಗೆ ಬೆಂಕಿ ಹತ್ತಿಕೊಂಡ ಪರಿಣಾಮ ಬಸ್ ನಲ್ಲಿದ್ದ 25 ಮಂದಿ ಸಾವನ್ನಪ್ಪಿರುವ ಘಟನೆ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಹೊರವಲಯದಲ್ಲಿ ಸಂಭವಿಸಿದೆ. ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ಬಸ್ ಹೊತ್ತಿ ಉರಿದಿದೆ. ಘಟನೆಯ ವೇಳೆ ಬಸ್ ನಲ್ಲಿ ಶಿಕ್ಷಕರು ಸೇರಿದಂತೆ 44 ಜನರಿದ್ದರು. ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಬ್ಯಾಂಕಾಕ್‌ನ ರಂಗ್‌ಸಿಟ್ ಶಾಪಿಂಗ್ ಮಾಲ್ ಬಳಿಯ ಫಾಹೋನ್ ಯೋಥಿನ್ ರಸ್ತೆಯಲ್ಲಿ ಬಸ್ ಗೆ ಬೆಂಕಿ ಹತ್ತಿಕೊಂಡಿದೆ. ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ ಎಂದು ಆಂತರಿಕ ಸಚಿವ ಅನುಟಿನ್ ಚಾರ್ನ್‌ವಿರಾಕುಲ್ ಹೇಳಿದ್ದಾರೆ. ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ, 25 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಒಂದು ಟೈರ್ ಸ್ಫೋಟಗೊಂಡ ನಂತರ ಬಸ್ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಘಟನಾಸ್ಥಳದಲ್ಲಿದ್ದ ರಕ್ಷಣಾ ಸಿಬ್ಬಂದಿ ಹೇಳಿದ್ದಾರೆ.…
ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು ಈ ವೇಳೆ ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ ಎಂದಿದ್ದಾರೆ. ನೆತನ್ಯಾಹು ಅವರೊಂದಿಗಿನ ಮಾತುಕತೆಯ ವಿವರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದೇನೆ. ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ಪ್ರಾದೇಶಿಕ ಉದ್ವಿಗ್ನ ಸ್ಥಿತಿಯನ್ನು ತಡೆಗಟ್ಟುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯ ಎಂದಿದ್ದಾರೆ. ಶಾಂತಿ ಸ್ಥಾಪಿಸುವ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಬದ್ಧ ಎಂದು ಮೋದಿ ಹೇಳಿದ್ದಾರೆ. ಆದರೆ ಮೋದಿ ಯಾವುದೇ ನಿರ್ದಿಷ್ಟ ಘಟನೆಯನ್ನು ಉಲ್ಲೇಖಿಸಿಲ್ಲ. ಕಳೆದ ವಾರ ಲೆಬನಾನ್‌ನಲ್ಲಿ ನಡೆದ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇಸ್ರೇಲಿ ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯ ನಾಯಕ ಹಸನ್ ನಸ್ರಲ್ಲಾ ಸೇರಿದಂತೆ ಏಳು ಉನ್ನತ ಶ್ರೇಣಿಯ ಕಮಾಂಡರ್‌ಗಳು ಮತ್ತು ಅಧಿಕಾರಿಗಳನ್ನು ಹತ್ಯೆ ಮಾಡಲಾಗಿದೆ.
ಗುಪ್ತಚರ ಮೂಲಕ ಹಿಜ್ಬುಲ್ಲಾ ಭದ್ರಕೋಟೆಗಳು ಮತ್ತು ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಿ ಇಸ್ರೇಲಿ ರಕ್ಷಣಾ ಪಡೆಗಳು ಮಂಗಳವಾರ ದಕ್ಷಿಣ ಲೆಬನಾನ್‌ನಲ್ಲಿ ಉದ್ದೇಶಿತ ಕಾಲಾಳುಪಡೆ, ಯುದ್ಧ ವಾಹನಗಳು ಮತ್ತು ಫಿರಂಗಿ ದಾಳಿ ನಡೆಸಿವೆ. ಸೀಮಿತ ಮತ್ತು ಸ್ಥಳೀಯ ದಾಳಿಗಳು ಗಡಿಯ ಸಮೀಪವಿರುವ ಹಳ್ಳಿಗಳಲ್ಲಿ ಕೇಂದ್ರೀಕೃತವಾಗಿವೆ, ಉತ್ತರ ಭಾಗದಲ್ಲಿ ಇಸ್ರೇಲಿ ಸಮುದಾಯಗಳಿಗೆ ಬೆದರಿಕೆಗಳನ್ನು ತಟಸ್ಥಗೊಳಿಸುವ ಗುರಿಯನ್ನು ಹೊಂದಿವೆ ಎನ್ನಲಾಗಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಐಡಿಎಫ್, ರಾಜಕೀಯ ಶ್ರೇಣಿಯ ನಿರ್ಧಾರಕ್ಕೆ ಅನುಗುಣವಾಗಿ ಕೆಲವು ಗಂಟೆಗಳ ಹಿಂದೆ IDF ಸೀಮಿತ, ಸ್ಥಳೀಯ ಮತ್ತು ಗುರಿಪಡಿಸಿದ ದಾಳಿಗಳನ್ನು ಹಿಜ್ಬುಲ್ಲಾ ಭಯೋತ್ಪಾದಕ ಗುರಿಗಳು ಮತ್ತು ದಕ್ಷಿಣ ಲೆಬನಾನ್‌ನಲ್ಲಿನ ಮೂಲಸೌಕರ್ಯಗಳ ವಿರುದ್ಧ ನಿಖರವಾದ ಗುಪ್ತಚರ ಆಧಾರದ ಮೇಲೆ ಪ್ರಾರಂಭಿಸಿದೆ ಎಂದು ಬರೆದುಕೊಂಡಿದೆ. ಈ ಗುರಿಗಳು ಗಡಿಯ ಸಮೀಪವಿರುವ ಹಳ್ಳಿಗಳಲ್ಲಿವೆ ಮತ್ತು ಉತ್ತರ ಇಸ್ರೇಲ್‌ನಲ್ಲಿರುವ ಇಸ್ರೇಲಿ ಸಮುದಾಯಗಳಿಗೆ ತಕ್ಷಣದ ಅಪಾಯವನ್ನುಂಟುಮಾಡುತ್ತವೆ ಎಂದು ಅದು ಸೇರಿಸಿದೆ. ಜನರಲ್ ಸ್ಟಾಫ್ ಮತ್ತು ನಾರ್ದರ್ನ್ ಕಮಾಂಡ್ ಅಭಿವೃದ್ಧಿಪಡಿಸಿದ ಯೋಜನೆಯ ಪ್ರಕಾರ ದಕ್ಷಿಣ ಲೆಬನಾನ್‌ನಲ್ಲಿ ಕಾರ್ಯಾಚರಣೆಗಳು…