Author: Author AIN

ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ. ಪ್ರಕರಣದ ಎ15 ಆರೋಪಿ ಕಾರ್ತಿಕ್, ಎ16 ಕೇಶವಮೂರ್ತಿ ಹಾಗೂ ಎ17 ನಿಖಿಲ್ ನಾಳೆ ತುಮಕೂರು ಕಾರಾಗೃಹದಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ. ರೇಣುಕಾಸ್ವಾಮಿ ಕೇಸ್​ನಲ್ಲಿ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್ ಈ ಮೂವರಿಗೂ ಹೈಕೋರ್ಟ್​ ಜಾಮೀನು ನೀಡಿತ್ತು. ಆರೋಪಿಗಳಿಗೆ ಸೆಪ್ಟೆಂಬರ್ 23 ರಂದು ಜಾಮೀನು ನೀಡಿದ್ದರು ಜೈಲಿನಿಂದ ಇನ್ನು ಬಿಡುಗಡೆ ಆಗಿರಲಿಲ್ಲ. ಇದಕ್ಕೆ ಕಾರಣ ನ್ಯಾಯಾಲಯದ ಆದೇಶ ಪ್ರತಿಯು ತುಮಕೂರು ಕಾರಾಗೃಹದ ಜೈಲು ಅಧಿಕಾರಿಗಳನ್ನ ತಲುಪಿರಲಿಲ್ಲ. ಹೀಗಾಗಿ ಮೂವರು ಇನ್ನು ಜೈಲಿನಲ್ಲೇ ಉಳಿದುಕೊಂಡಿದ್ದಾರೆ. ಮೂವರು ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ. ಹೀಗಾಗಿ ಎಲ್ಲ ಪ್ರಕ್ರಿಯೆ ಮುಗಿಸಿ ಬಿಡುಗಡೆ ಆಗಬೇಕಿದೆ. ಸದ್ಯ 17 ಆರೋಪಿಗಳ ಪೈಕಿ ಮೂವರಿಗೆ ಮಾತ್ರ ಜಾಮೀನು ನೀಡಲಾಗಿದೆ. ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್​​ನಿಂದ ಬೇಲ್ ಸಿಕ್ಕರೇ, ಎ15 ಆರೋಪಿ ಕಾರ್ತಿಕ್ ಹಾಗೂ ಎ17 ಆರೋಪಿ ನಿಖಿಲ್​ಗೆ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಮಂಜೂರು…

Read More

ತೆಲುಗು ಯೂಟ್ಯೂಬ್ರ್ ಹರ್ಷ ಸಾಯಿ ವಿರುದ್ಧ ಯುವತಿಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದಾರೆ. ಹರ್ಷ ಸಾಯಿ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದಾರೆ. ಜೊತೆಗೆ ನನ್ನ ನಗ್ನ ಫೋಟೋ ಕ್ಲಿಕ್ಕಿಸಿ, ಬ್ಲ್ಯಾಕ್​ಮೇಲ್ ಮಾಡಿದ್ದಾನೆ ಎಂದು ಆರೋಪಿಸಿ ಯುವತಿ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮುಂಬೈ ಮೂಲದ ಯುವತಿ ನಟಿಯಾಗಿದ್ದು ಕೆಲ ವರ್ಷಗಳ ಹಿಂದೆ ಹೈದರಾಬಾದ್​ಗೆ ಸಿನಿಮಾ ಅವಕಾಶಕ್ಕೆ ಬಂದಿದ್ದರು. ಬಳಿಕ ತೆಲುಗು ರಿಯಾಲಿಟಿ ಶೋವೊಂದರಲ್ಲಿ ಭಾಗವಹಿಸಿದ್ದರು. ಖಾಸಗಿ ಪಾರ್ಟಿಯಲ್ಲಿ ಹರ್ಷಸಾಯಿಯನ್ನ ಭೇಟಿಯಾಗಿದ್ದು, ಬಳಿಕ ಇಬ್ಬರ ಮಧ್ಯೆ ಸ್ನೇಹ ಬೆಳೆದು ಸಲುಗೆಯಿಂದ ಇರುತ್ತಿದ್ದರು. ಆದರೆ ಹರ್ಷ ಸಾಯಿ ಮದುವೆ ಆಗುವುದಾಗಿ ಹೇಳಿ, ತನ್ನನ್ನು ಬಳಸಿಕೊಂಡಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾರೆ. ಅಲ್ಲದೇ ಯುವತಿಯ ನಗ್ನ ಫೋಟೋ ತೆಗೆದು ಬ್ಲ್ಯಾಕ್​ಮೇಲ್ ಮಾಡಿ ಕೋಟಿ ಲೆಕ್ಕದಲ್ಲಿ ಹಣ ವಸೂಲಿ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಈ ಬಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನರಸಿಂಗಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್‌ ಸ್ಟಾರ್ ಹರ್ಷ ಸಾಯಿ ಹಾಗೂ ಇವರ ತಂದೆ…

Read More

ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸಲಾಗುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಇರುವುದು ಪತ್ತೆಯಾಗಿದ್ದ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಯಾರೇ ಆಗಲಿ ಶಿಕ್ಷೆಗೆ ಒಳಪಡುತ್ತಾರೆ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಪವನ್ ಕಲ್ಯಾಣ್, ‘ಸನಾತನ ಧರ್ಮ ರಕ್ಷಣಾ ಬೋರ್ಡ್’ ಅನ್ನು ರಾಷ್ಟ್ರಮಟ್ಟದಲ್ಲಿ ಸ್ಥಾಪನೆ ಮಾಡಬೇಕೆಂದು ಸಹ ಹೇಳಿದ್ದರು. ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದ ಪ್ರಕಾಶ್ ರೈ, ‘ಆತಂಕವನ್ನು ಹೆಚ್ಚು ಮಾಡಬೇಡಿ, ದೇಶದಲ್ಲಿ ಈಗಿರುವ ಕೋಮು ಗಲಭೆ ಸಾಕು’ ಎಂದಿದ್ದರು. ಪ್ರಕಾಶ್ ರೈ ಹೇಳಿಕೆ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ್ದ ಪವನ್ ಕಲ್ಯಾಣ್, ‘ಪ್ರಕಾಶ್ ರೈ ಅವರೇ ನೀವು ಪಾಠ ಕಲಿಯಬೇಕಿದೆ. ನಿಮ್ಮ ಬಗ್ಗೆ ಗೌರವ ಇದೆ. ಆದರೆ ಪ್ರಕಾಶ್ ರೈ ಮಾತ್ರವಲ್ಲ ಜಾತ್ಯಾತೀತರು ಎಂದು ಹೇಳಿಕೊಳ್ಳುವ ಎಲ್ಲರೂ ಪಾಠ ಕಲಿಯಬೇಕಿದೆ. ಜಾತ್ಯಾತೀತತೆಯ ಹೆಸರಲ್ಲಿ ನೀವು ಹದ್ದುಗಳನ್ನು ಮೀರುತ್ತಿದ್ದೀರಿ. ನಾವು ತೀವ್ರ…

Read More

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾಗಿರುವ ಪ್ರಕರಣ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ. ಇದು ಆಂಧ್ರ ಪ್ರದೇಶದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಆಂಧ್ರ ಡಿಸಿಎಂ ನಟ ಪವನ್ ಕಲ್ಯಾಣ್, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾದ ಬಳಿಕ 11 ದಿನದ ಪ್ರಾಯಶ್ಚಿತ್ತ ದೀಕ್ಷೆ ತೆಗೆದುಕೊಂಡಿದ್ದಾರೆ. ಮಾತ್ರವಲ್ಲದೆ ಕನಕದುರ್ಗ ದೇವಾಲಯದ ಸ್ವಚ್ಛತೆಯಲ್ಲಿಯೂ ಸಹ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಲಡ್ಡು ಬಗ್ಗೆ ಮಾತನಾಡಿದವರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಅಂತೆಯೇ ನಟ ಕಾರ್ತಿ ಕಾರ್ಯಕ್ರಮವೊಂದರಲ್ಲಿ ಲಡ್ಡು ಬಗ್ಗೆ ಮಾತನಾಡಿದ್ದಕ್ಕೆ ಪವನ್ ಕಲ್ಯಾಣ್ ಎಚ್ಚರಿಕೆ ನೀಡಿದ್ದರು. ಇದೀಗ ಕಾರ್ತಿ, ಪವನ್ ಕಲ್ಯಾಣ್ ಬಳಿ ಕ್ಷಮೆ ಕೇಳಿದ್ದಾರೆ. ‘ಪ್ರೀತಿಯ ಪವನ್ ಕಲ್ಯಾಣ್ ಅವರೇ, ನಿಮ್ಮ ಬಗ್ಗೆ ಅಪಾರ ಗೌರವ, ಪ್ರೀತಿ ಇದೆ. ಈಗ ಉಂಟಾಗಿರುವ ಉದ್ದೇಶಪೂರ್ವಕ ತಪ್ಪುಗ್ರಹಿಕೆಗೆ ನಾನು ಕ್ಷಮೆಯಾಚಿಸುತ್ತೇನೆ. ವೆಂಕಟೇಶ್ವರ ಸ್ವಾಮಿಯ ವಿನಮ್ರ ಭಕ್ತನಾಗಿರುವ ನಾನು, ಯಾವಾಗಲೂ ನಮ್ಮ ಸಂಪ್ರದಾಯಗಳ ಬಗ್ಗೆ ಗೌರವ ಇಟ್ಟುಕೊಂಡಿರುವ ವ್ಯಕ್ತಿವಾಗಿದ್ದೇನೆ’ ಎಂದಿದ್ದಾರೆ. ಕಾರ್ತಿ ನಟನೆಯ ‘ಮೆಯಿಳಾಗನ್’ ಸೆಪ್ಟೆಂಬರ್ 27ಕ್ಕೆ ರಿಲೀಸ್ ಆಗುತ್ತಿದೆ. ಈ ಸಿನಿಮಾ…

Read More

ತಿರುಪತಿ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಕೋಲಾಹಲ ಎಬ್ಬಿಸಿದೆ. ಆಂಧ್ರ ಪ್ರದೇಶ ಸರ್ಕಾರ, ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದೇವಾಲಯದ ಶುಭ್ರತೆಗೆ ನಿರ್ದೇಶಿಸಿದೆ. ಅಲ್ಲದೆ, ಲಡ್ಡು ಮಾಡಲು ತುಪ್ಪ ಸರಬರಾಜು ಮಾಡುತ್ತಿದ್ದ ಏಜೆನ್ಸಿ ವಿರುದ್ಧ ದೂರು ಸಹ ದಾಖಲಾಗಿದೆ. ಈ ಬಗ್ಗೆ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡುತ್ತಿದೆ. ಲಡ್ಡು ವಿವಾದದ ಬಗ್ಗೆ ಮಾತನಾಡುತ್ತಿರುವವರಿಗೆ ನಟ ಹಾಗೂ ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ತಿರುಗೇಟು ನೀಡುತ್ತಿದ್ದಾರೆ. ಇದೀಗ ಲಡ್ಡು ಬಗ್ಗೆ ಮಾತನಾಡಿದ ಖ್ಯಾತ ನಟ ಕಾರ್ತಿಗೆ ಪವನ್ ಕಲ್ಯಾಣ್ ಎಚ್ಚರಿಕೆ ನೀಡಿದ್ದಾರೆ. ಕಾರ್ತಿ ನಟನೆಯ ‘ಮೆಯಿಳಾಗನ್’ ಸೆಪ್ಟೆಂಬರ್ 27ಕ್ಕೆ ರಿಲೀಸ್ ಆಗುತ್ತಿದೆ. ಈ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲಿ ‘ಸತ್ಯಂ-ಸುಂದರಂ’ ಹೆಸರಿನಲ್ಲಿ ತೆರೆಗೆ ಬರುತ್ತಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ಕಾರ್ತಿ ಇತ್ತೀಚೆಗಷ್ಟೆ ಹೈದರಾಬಾದ್​ಗೆ ಆಗಮಿಸಿದ್ದರು. ಈ ವೇಳೆ ನಿರೂಪಕಿ, ‘ಲಡ್ಡು ಬೇಕಾ’ ಎಂದು ಜಾಹೀರಾತಿನ ಡೈಲಾಗ್…

Read More

ಇದು ಟೆಕ್ನಾಲಜಿ ಯುಗ. ಪ್ರತಿಯೊಂದು ಟೆಕ್ನಾಲಜಿಯಲ್ಲೇ ನಡೆಯುತ್ತಿದೆ. ಇದೀಗ ಬೆಂಗಳೂರಿನ ಆಟೋ ಚಾಲಕನ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆಟೋ ಚಾಲಕ ಬಾಡಿಗೆ ಪಾವತಿಗೆ ಯುಪಿಐ ಕ್ಯೂಆರ್ ಕೋಡ್ ಆಟೋದಲ್ಲಿ ಅಂಟಿಸಿಲ್ಲ, ಬದಲಾಗಿ ಈ ಚಾಲಕನ ಸ್ಮಾರ್ಟ್‌ವಾಚ್‌ನಲ್ಲಿ ಯುಪಿಐ ಕ್ಯೂಆರ್ ಕೋಡ್ ತೋರಿಸಿ ಪಾವತಿ ಮಾಡಿಸಿಕೊಳ್ಳುತ್ತಾನೆ. ಈ ಫೋಟೋ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಬೆಂಗಳೂರು ಐಟಿ ಸಿಟಿ. ಇಲ್ಲಿ ತಂತ್ರಜ್ಞಾನ, ತಾಂತ್ರಿಕ ವಿಚಾರಗಳಲ್ಲಿ ಇತರ ಎಲ್ಲಾ ನಗರಗಳಿಗಿಂತ ಮುಂದಿದೆ. ಇದು ಹಲವು ಬಾರಿ ಸಾಬೀತಾಗಿದೆ. ಈ ಪೈಕಿ ಇದೀಗ ಬೆಂಗಳೂರು ಆಟೋ ಚಾಲಕನ ಸ್ಮಾರ್ಟ್‌ವಾಚ್‌ನಲ್ಲಿ ಯುಪಿಐ ಕ್ಯೂಆರ್ ಕೋಡ್ ಇದೀಗ ಭಾರಿ ಸದ್ದು ಮಾಡುತ್ತಿದೆ. ಬೆಂಗಳೂರಿನ ಆಟೋ ಚಾಲಕ ಹೈಟೆಕ್ ತಂತ್ರಜ್ಞಾನ ಬಳಸಿಕೊಂಡಿದ್ದಾನೆ. ಯುಪಿಐ ಪಾವತಿಗೆ ಸಾಮಾನ್ಯವಾಗಿ ಆಟೋ ಚಾಲಕರು ತಮ್ಮ ಆಟೋದಲ್ಲಿ ಕ್ಯೂಆರ್ ಕೋಡ್ ಅಂಟಿಸಿರುತ್ತಾರೆ. ಅಥವಾ ಕ್ಯೂಆರ್ ಕೋಡ್ ಫೋಟೋವನ್ನು ಲ್ಯಾಮಿನೇಷನ್ ಮಾಡಿಸಿಕೊಂಡು, ಪ್ಲಾಸ್ಟಿಕ್ ಒಳಗೆ ಇಟ್ಟುಕೊಂಡಿರುತ್ತಾರೆ. ಆದರೆ ಈ ಆಟೋ ಚಾಲಕ ಹೀಗೆ…

Read More

ಫ್ರಾನ್ಸ್ ಈಗ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಸಾರ್ವಜನಿಕ ಕೊರತೆಯನ್ನು ಎದುರಿಸುತ್ತಿದೆ ಎಂದು ಹೊಸದಾಗಿ ನೇಮಕ ಗೊಂಡಿರುವ ಆರ್ಥಿಕ ಸಚಿವ ಆಂಟೊಯಿನ್ ಅರ್ಮಾಂಡ್ ಹೇಳಿದ್ದಾರೆ. ಈ ಹೇಳಿಕೆಯ ಮೂಲಕ ಹೊಸ ವಿತ್ತ ಸಚಿವರು, ಫ್ರಾನ್ಸ್ ನ ಆರ್ಥಿಕ ಸ್ಥಿತಿಯನ್ನು ಮರಳಿ ಹಳಿಗೆ ತರುವುದಕ್ಕೆ ಸಂಪತ್ಭರಿತ ಹಾಗೂ ದೊಡ್ಡ ಉದ್ಯಮಿಗಳಿಗೆ ಹೆಚ್ಚಿನ ತೆರಿಗೆ ವಿಧಿಸುವ ಸಾಧ್ಯತೆಗಳ ಸುಳಿವನ್ನು ನೀಡಿದ್ದಾರೆ. ಆಂಟೊಯಿನ್ ಅರ್ಮಾಂಡ್ ಅವರು ಸರ್ಕಾರದ ಮಿತಿಮೀರಿದ ವೆಚ್ಚವನ್ನು ಕಡಿತಗೊಳಿಸುವ ಪ್ರಯತ್ನದಲ್ಲಿ ಒಕ್ಕೂಟಗಳು ಮತ್ತು ಮೇಲಧಿಕಾರಿಗಳ ಸಂಸ್ಥೆಗಳನ್ನು ಒಳಗೊಂಡಂತೆ ಆರ್ಥಿಕತೆಗೆ ಸಂಬಂಧಪಟ್ಟವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ಸರ್ಕಾರದ ಮಿತಿಮೀರಿದ ವೆಚ್ಚ ರಾಷ್ಟ್ರೀಯ ಉತ್ಪಾದನೆಯ ಶೇ.5.6ರಷ್ಟು ಅಥವಾ ಅದಕ್ಕಿಂತಲೂ ಹೆಚ್ಚು ತಲುಪುವ ಸಾಧ್ಯತೆ ಇದ್ದು, ಇದು ಯುರೋಪಿಯನ್ ಯೂನಿಯನ್ ಮಿತಿಯ 2 ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. “ಕಳೆದ 50 (ವರ್ಷಗಳಲ್ಲಿ) ಒಂದು ಅಥವಾ ಎರಡು ಬಿಕ್ಕಟ್ಟಿನ ವರ್ಷಗಳನ್ನು ಹೊರತುಪಡಿಸಿ, ನಮ್ಮ ಇತಿಹಾಸದಲ್ಲಿ ನಾವು ಅತ್ಯಂತ ಕೆಟ್ಟ ಕೊರತೆಯನ್ನು ಹೊಂದಿದ್ದೇವೆ” ಎಂದು ಅರ್ಮಾಂಡ್ ಬ್ರಾಡ್‌ಕಾಸ್ಟರ್ ಫ್ರಾನ್ಸ್…

Read More

ಬಾಲಿವುಡ್‌ ನಟಿ ಐಶ್ವರ್ಯ ರೈ ಇಂದಿಗೂ ಸಿನಿಮಾ ರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಐಶ್ವರ್ಯಾಗೆ ಸಾಕಷ್ಟು ಆಫರ್ ಗಳು ಬರ್ತಿದ್ದು ಅಳೆದು ತೂಗಿ ಅವುಗಳನ್ನು ಸೆಲೆಕ್ಟ್ ಮಾಡುತ್ತಿದ್ದಾರೆ. ಸದ್ಯ ಐಶ್ವರ್ಯಾ ಪ್ಯಾರಿಸ್ ಫ್ಯಾಷನ್ ವೀಕ್ ನಲ್ಲಿ ಕೆಂಪು ಬಣ್ಣದ ಬಟ್ಟೆ ತೊಟ್ಟು ಬೆಕ್ಕಿನ ನಡಿಗೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಪ್ಯಾರಿಸ್ ನಲ್ಲಿ ನಡೆದ ಫ್ಯಾಷನ್ ವೀಕ್ ನಲ್ಲಿ ಅಮ್ಮನ ಜೊತೆ ಆರಾಧ್ಯ ಕೂಡ ತೆರಳಿದ್ದರು. ಆರಾಧ್ಯ ಜೊತೆಗೆ ಐಶ್ವರ್ಯ ರೈ ಹಾಗೂ ಇತರರು ಫೋಟೋ ತೆಗೆಸಿಕೊಂಡು ಖುಷಿಪಟ್ಟಿದ್ದಾರೆ. ತಮ್ಮ ವೈವಾಹಿಕ ಜೀವನದ ಕೆಲವೊಂದು ಸುದ್ದಿಗಳ ನಡುವೆಯೂ ಐಶ್ವರ್ಯಾ ಪ್ಯಾರಿಸ್ ಫ್ಯಾಷನ್ ವೀಕ್ ನಲ್ಲಿ ಮಿಂಚಿದ್ದಾರೆ. ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ನಡುವೆ ಏನೂ ಸರಿಯಿಲ್ಲ. ಇನ್ನೇನು ಇಬ್ಬರೂ ಡಿವೋರ್ಸ್ ಪಡೆಯುತ್ತಾರೆ. ಎಲ್ಲವೂ ಮುಗಿಯಿತು. ಹೀಗೆ ಹಲವು ತಿಂಗಳುಗಳಿಂದಲೂ ಸುದ್ದಿ ಹಬ್ಬುತ್ತಲೇ ಇದೆ. ಆದರೆ, ಈಗ ನೋಡಿದ್ರೆ, ಐಶ್ವರ್ಯ ರೈ ತಮ್ಮ ವೆಡ್ಡಿಂಗ್ ರಿಂಗ್ ಧರಿಸಿಕೊಂಡೇ ಫ್ಯಾಷನ್ ವೀಕ್‌ನಲ್ಲಿ ವಾಕ್ ಮಾಡಿರೋದು ಸಾಕಷ್ಟು ಕುತೂಹಲಕ್ಕೆ…

Read More

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಪತ್ತೆಯಾಗಿರುವುದು ಕೋಲಾಹಲ ಎಬ್ಬಿಸಿದೆ. ಲಡ್ಡು ಮಾಡಲು ಬಳಸಲಾದ ತುಪ್ಪದಲ್ಲಿ ದನದ ಕೊಬ್ಬು ಪತ್ತೆಯಾಗಿದೆ. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿತರಣೆಯಾಗುತ್ತಿರುವ ಪ್ರಸಾದದ ಸ್ವಚ್ಛತೆ ಬಗ್ಗೆ ಸ್ಥಳೀಯ ಸರ್ಕಾರ ಹಾಗೂ ದೇವಾಲಯದ ಆಡಳಿತ ಮಂಡಳಿಗಳು ಜಾಗೃತೆಯಾಗಿವೆ. ಇನ್ನು ಕೆಲವರು ಈ ವಿಷಯವಾಗಿ ತಮಗೆ ತೋಚಿದಂತೆ ಹೇಳಿಕೆಗಳನ್ನು ನೀಡುತ್ತಿದ್ದು, ತಿರುಪತಿ ಮಾತ್ರವೇ ಅಲ್ಲ, ಬೇರೆ ಕೆಲವು ದೇವಾಲಯಗಳ ಪ್ರಸಾದಗಳಲ್ಲಿಯೂ ಇಂಥಹಾ ಕಲಬೆರೆಕೆ ಸಾಮಾನ್ಯ ಎಂಬ ಹೇಳಿಕೆಗಳು ಕೇಳಿ ಬರ್ತಿದೆ. ಇದೀಗ ನಿರ್ದೇಶಕ ಮೋಹನ್ ಜಿ ನೀಡಿದ ಹೇಳಿಕೆ ಆಧರಿಸಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಇದೀಗ ತಮಿಳು ನಿರ್ದೇಶಕರೊಬ್ಬರನ್ನು ದೇವಾಲಯದ ಪ್ರಸಾದದ ಕುರಿತಾಗಿನ ಹೇಳಿಕಗೆ ತಿರುಚಿ ಪೊಲೀಸರು ಬಂಧಿಸಿದ್ದಾರೆ. ‘ಬಕಾಸುರನ್’, ‘ದ್ರೌಪದಿ’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶಿಸಿ ಚರ್ಚೆಯಲ್ಲಿರುವ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್ ಅವರನ್ನು ತಿರುಚಿ ಪೊಲೀಸರು ಬಂಧಿಸಿದ್ದಾರೆ. ಪಳನಿ ದೇವಾಲಯದ ಪ್ರಸಾದದ ಕುರಿತಾದ ಹೇಳಿಕೆ ನೀಡಿದ್ದಕ್ಕಾಗಿ…

Read More

ತಿರುಪತಿಯಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಸೇರಿಸಲಾಗಿದೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಇದನ್ನು ಪ್ರತಿಯೊಬ್ಬರು ಖಂಡಿಸುತ್ತಿದ್ದಾರೆ. ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿರುಪತಿಯ ಲಡ್ಡುಗಳನ್ನು ತಯಾರಿಸಲು ಕಳಪೆ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದರು.  ಸರ್ಕಾರದ ನಿರ್ಧಾರಗಳ ಬಗ್ಗೆ ಟೀಕೆ ಮಾಡಿದ ನಟ ಪ್ರಕಾಶ್​ ರಾಜ್​ಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ವಾರ್ನಿಂಗ್ ಕೊಟ್ಟಿದ್ದಾರೆ. ಲಡ್ಡು ವಿವಾದದ ಕುರಿತು ಮಾತನಾಡಿದ್ದ ಪ್ರಕಾಶ್ ರಾಜ್ ಹೇಳಿಕೆಗೆ  ಆಂಧ್ರ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ರು. ವಿಜಯವಾಡ ದುರ್ಗಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಪವನ್ ಕಲ್ಯಾಣ್ ನಾನು ಯಾವ ಧರ್ಮವನ್ನು ದೂಷಿಸಿಲ್ಲ ಎಂದಿದ್ದಾರೆ. ಹಿಂದೂ, ಸನಾತನ ಧರ್ಮದ ಬಗ್ಗೆ ಮಾತನಾಡಿದ್ರೆ ನಟ ಪ್ರಕಾಶ್ ರಾಜ್ ಆಕ್ಷೇಪ ವ್ಯಕ್ತಪಡಿಸೋದು ಯಾಕೆ? ಇಲ್ಲಿ ನಾನು ಯಾವುದೇ ಧರ್ಮವನ್ನು ದೂಷಿಸಿಲ್ಲ, ದೇವರ ಮೂರ್ತಿಗಳ ಶಿರಚ್ಛೇದ ಮಾಡಿದ್ರೆ…

Read More