ಬೆಂಗಳೂರು:- HD ಕುಮಾರಸ್ವಾಮಿ, ಪುತ್ರ ನಿಖಿಲ್ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲಾಗಿದ್ದು, ಕೇಂದ್ರ ಸಚಿವರೇ A1 ಆರೋಪಿ ಆಗಿದ್ದಾರೆ. https://ainlivenews.com/this-is-the-reason-for-bloating-in-girls-during-period-here-is-the-expert-information/ ಎಡಿಜಿಪಿ ಚಂದ್ರಶೇಖರ್‌ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು. ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್‌ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು. ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆ ಹೆಚ್‌ಡಿಕೆ, ನಿಖಿಲ್ ಹಾಗೂ ಆಪ್ತ ಸುರೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
Author: AIN Author
ಮಹಿಳೆಯರಿಗೆ ಪ್ರತಿ ತಿಂಗಳು ಮುಟ್ಟಿನ ಸಮಸ್ಯೆಯಿಂದ ನೋವು ಹಾಗೂ ಸಂಕಟಗಳು ಕಾಡುವುದು ಸಾಮಾನ್ಯ. ಮುಟ್ಟಿನ ಸಂದರ್ಭದಲ್ಲಿ ಗರ್ಭಾಶಯದ ಸ್ನಾಯುಗಳು ಸಂಕುಚಿತಗೊಂಡು, ಅಂತರ್ನಿರ್ಮಿತ ಒಳಪದರಗಳನ್ನು ಹೊರಹಾಕುವ ಕಾರ್ಯದಲ್ಲಿ ತೊಡಗಿಕೊಂಡಿರುತ್ತದೆ. ಅಂತಹ ಸಂದರ್ಭದಲ್ಲಿ ಸ್ನಾಯುಗಳು ತೀವ್ರವಾದ ಸೆಳೆತ ಮತ್ತು ನೋವಿಗೆ ಒಳಗಾಗುತ್ತದೆ. ಕೆಲವರು ಋತುಚಕ್ರದ ಸಂದರ್ಭದಲ್ಲಿ ವಾಕರಿಕೆ, ಅತಿಸಾರ, ತಲೆನೋವು ಮತ್ತು ಬೆನ್ನು ನೋವಿನಂತಹ ಸಮಸ್ಯೆಗಳಿಂದ ಜರ್ಜರಿತರಾಗುತ್ತಾರೆ. https://ainlivenews.com/do-you-sleep-less-at-night-if-so-beware-of-these-diseases/ ಇನ್ನೂ ಋತುಚಕ್ರ ಬರುವ ಮುನ್ನ ದೇಹದಲ್ಲಿ ಅನೇಕ ಹಾರ್ಮೋನ್ ಬದಲಾವಣೆಗಳು ಸಂಭವಿಸುತ್ತವೆ. ಈ ಕಾರಣದಿಂದಾಗಿ, ದೇಹದಲ್ಲಿ ಗ್ಯಾಸ್ ಮತ್ತು ಇತರ ಜಠರಗರುಳಿನ (ಜಿಐ) ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಅವಧಿಗೆ ಮುನ್ನ ಅಥವಾ ಅವಧಿಯಲ್ಲಿ ಅತಿಯಾದ ಅನಿಲ ಉತ್ಪಾದನೆಯು ಅನೇಕ ದೈಹಿಕ ಸಮಸ್ಯೆಗಳನ್ನು ಉಂಟುಮಾಡಬಹುದು. ಈ ಕಾರಣದಿಂದಾಗಿ, ಕರುಳಿನಲ್ಲಿ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಮುಟ್ಟಿನ ಮೊದಲು ಗ್ಯಾಸ್ ರಚನೆಯು PMS ನ ಸಾಮಾನ್ಯ ಲಕ್ಷಣವಾಗಿದೆ ಮತ್ತು ಸಾಮಾನ್ಯವಾಗಿ ಹಾರ್ಮೋನುಗಳ ಏರಿಳಿತಗಳಿಂದ ಉಂಟಾಗುತ್ತದೆ. ಈಸ್ಟ್ರೊಜೆನ್: ಹೆಚ್ಚುತ್ತಿರುವ ಈಸ್ಟ್ರೊಜೆನ್ ಮಟ್ಟಗಳು ನಿಮ್ಮ ಕರುಳಿನಲ್ಲಿ ಅನಿಲ, ಮಲಬದ್ಧತೆ ಮತ್ತು ಅನಿಲವನ್ನು ಉಂಟುಮಾಡಬಹುದು.…
ರಾಮನಗರ: ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಅಕ್ಕೂರು ಹೊಸಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಉಪ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಭಾರೀ ಉಮೇದಿನಿಂದ ನಮ್ಮ ವಿರುದ್ಧ ದ್ವೇಷ ಸಾಧನೆ ಮಾಡುತ್ತಿದೆ. ಇದಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಕೊಡುತ್ತೇನೆ ಎಂದರು. ಎಫ್ ಐಆರ್ ಪ್ರತಿಯನ್ನು ಓದಿದೆ. ಅದರಲ್ಲಿರುವ ದೂರಿನ ಸಾರಾಂಶವನ್ನೂ ಓದಿದೆ. ಅದು ಸಂಪೂರ್ಣ ಹಾಸ್ಯಾಸ್ಪದ ಹಾಗೂ ದುರದ್ದೇಶಪೂರಿತ ಎನ್ನುವುದು ನನಗೆ ಅರ್ಥವಾಯಿತು. ಅಲ್ಲಿ ದೂರುದಾರರೇ ಹೇಳಿಕೊಂಡಿದ್ದಾರೆ, ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ಮಾಡಿ ನನ್ನ ವಿರುದ್ಧ ಆರೋಪ ಮಾಡಿದರು. ಅದಕ್ಕೆ ಕ್ರಮ ಕೈಗೊಳ್ಳಿ ಎಂದು ಕೇಳಿದ್ದಾರೆ. ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದೇನೆ ಎಂದು ಹೇಳಿಕೊಂಡಿದ್ದಾರೆ? ಬೇಕಾದರೆ ನನ್ನ ಮಾಧ್ಯಮಗೋಷ್ಠಿಯ ವಿಡಿಯೋ…
ಬೆಂಗಳೂರು:- ಕೆಲಸ ಇಲ್ಲದೇ ಖಾಲಿ ಕೂತಿರುವ ಯುವಕ, ಯುವತಿಯರಿಗೆ ಬಂಪರ್ ಅವಕಾಶ ಬಂದಿದೆ. ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಟ್ರೈನಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. https://ainlivenews.com/the-staff-committed-suicide-in-the-tahsildars-room-a-death-note-was-found-at-the-spot/ ಟ್ರೈನಿ ಇಂಜಿನಿಯರ್ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಅಧಿಸೂಚನೆಯಲ್ಲಿ 23 ಟ್ರೈನಿ ಇಂಜಿನಿಯರ್ ಮತ್ತು 54 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಒಳಗೊಂಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಬಿಇಎಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನವೆಂಬರ್ 9 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ * ಟ್ರೈನಿ ಇಂಜಿನಿಯರ್ – 23 ಹುದ್ದೆಗಳು ಪ್ರಾಜೆಕ್ಟ್ ಎಂಜಿನಿಯರ್ – 54 ಹುದ್ದೆಗಳು ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ * ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 2024 ರ ಅಧಿಸೂಚನೆ ಪ್ರಕಾರ ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಬಿ.ಎಸ್‌ಸಿ, ಬಿ.ಇ ಹಾಗೂ ಬಿ.ಟೆಕ್ ಪದವಿ ಹೊಂದಿದವರು…
ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರು ತಂಡಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ. https://ainlivenews.com/muda-scam-high-court-notice-to-cm-siddaramaiah/ ನವೆಂಬರ್ 22ನೇ ತಾರೀಕಿನಿಂದ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತ ಟ್ರೋಪಿ ಗೆದ್ದಿತ್ತು. 2016 ರಿಂದಲೂ ಟೀಮ್ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲ್ಲುತ್ತಲೇ ಬಂದಿದೆ. ಟೀಮ್ ಇಂಡಿಯಾ ಈಗಿರೋ ಪರಿಸ್ಥಿತಿ ನೋಡಿದ್ರೆ ಗೆಲ್ಲೋದು ಕಷ್ಟವಾಗಿದೆ. ಆಸೀಸ್ ಸರಣಿಗೆ ಆಟಗಾರರನ್ನು ಸಜ್ಜುಗೊಳಿಸಲು ಸಿದ್ಧತೆ ಆರಂಭಿಸಿರೋ ಬಿಸಿಸಿಐಗೆ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರದ್ದೇ ದೊಡ್ಡ ಚಿಂತೆಯಾಗಿದೆ ಭಾರತ ಇದೇ ತಿಂಗಳು ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪಂತ್ ಬಗ್ಗೆ ಬಿಗ್ ಅಪ್ಡೇಟ್ ಒಂದು ಹೊರಬಿದ್ದಿದೆ. ಇದು ಕ್ಯಾಪ್ಟನ್ ರೋಹಿತ್ ಶರ್ಮಾ ಅವರು ಚಿಂತಿಸುವಂತೆ ಮಾಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದೊಡ್ಡ ಹಿನ್ನಡೆ…
ಬೆಳಗಾವಿ: ತಹಸೀಲ್ದಾರ್ ಕಚೇರಿಯಲ್ಲಿ ತಹಶಿಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕಸಹಾಯಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶಿಲ್ದಾರ್ ಆಫೀಸ್‌ನಲ್ಲಿ ನಡೆದಿದೆ. ತಹಶಿಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರನಾಗಿದ್ದಾರೆ. ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿಯೇ ನೇಣುಬಿಗಿದುಕೊಂಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. https://ainlivenews.com/do-you-sleep-less-at-night-if-so-beware-of-these-diseases/ ಇನ್ನು ಸರ್ಕಾರಿ ನೌಕರ ಆತ್ಮಹತ್ಯೆಗೆ ಶರಣಾಗುವ ಮುನ್ನ ರಾಜ್ಯ ಸರ್ಕಾರದ ಪ್ರಭಾವಿ ಸಚಿವರ ಆಪ್ತ ಸಹಾಯಕನ (ಪಿಎ) ಹೆಸರು ಬರೆದಿಟ್ಟಿದ್ದಾರೆ. ಬೆಳಗಾವಿಯ ತಹಶಿಲ್ದಾರ್ ಬಸವರಾಜ್ ನಾಗರಾಳ ಚೇಂಬರ್‌ನಲ್ಲಿಯೇ ಕೆಲಸ ಮಾಡುತ್ತಿದ್ದ ಎಫ್‌ಡಿಸಿ ರುದ್ರಣ್ಣ ಯಡಣ್ಣವರ ಇದೇ ಬೆಳಗಾವಿ ಜಿಲ್ಲೆಯ ರಾಯಭಾಗ ಮೂಲದರಾಗಿದ್ದರು. ಇನ್ನು ನೌಕರ ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂದಿದ್ದಾರೆ. ಘಟನಾ ಸ್ಥಳಕ್ಕೆ ತಹಶಿಲ್ದಾರ್, ಖಡೇಬಜಾರ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನ.26ಕ್ಕೆ ಸಿಬಿಐ ತನಿಖೆ ಭವಿಷ್ಯ ನಿರ್ಧಾರ ಆಗಲಿದೆ. https://ainlivenews.com/the-name-of-waqf-is-also-in-the-pahani-of-annadaneswar-math/ ಪ್ರಕರಣ ಸಂಬಂಧ ನಡೆದ ತನಿಖೆಯ ವರದಿಯನ್ನು ನವೆಂಬರ್ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ. ಸಿಬಿಐ, ಲೋಕಾಯುಕ್ತ ಪೊಲೀಸರು, ಪ್ರಕರಣದ ಎ1 ಸಿಎಂ ಸಿದ್ದರಾಮಯ್ಯ ಮತ್ತು ಎ2 ಪಾರ್ವತಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ. ಸ್ನೇಹಪ್ರಿಯ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದಮಂಡನೆ ಮಾಡಿದರು. ಮತ್ತು ಲೋಕಾಯುಕ್ತ ಪರವಾಗಿ ರಾಜ್ಯ ಅಭಿಯೋಜಕ ಬಿ.ಎನ್. ಜಗದೀಶ್ ವಾದ ಮಂಡಿಸಿದರು. ವಿಚಾರಣೆಯಲ್ಲಿ ಲೋಕಾಯುಕ್ತ ಪೊಲೀಸ್, ಸಿಬಿಐ, ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಪ್ರತಿವಾದಿಗಳಾಗಿದ್ದಾರೆ. ಒಂದು ವೇಳೆ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶಿಸಿದರೆ ಲೋಕಾಯುಕ್ತರ ತನಿಖೆ ಸ್ಥಗಿತಗೊಳ್ಳಲಿದೆ.
ಗದಗ: ವಿಜಯಪುರದಲ್ಲಿ ವಕ್ಫ್ ಆಸ್ತಿ ವಿವಾದ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ರೈತರ ಜಮೀನನ್ನು ವಕ್ಫ್ ಖಾತೆಗೆ ಸೇರಿಸಲು ತೋರಿದ ಕೈಚಳಕ ಬಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹೋರಾಟಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಪಹಣಿಗಳಲ್ಲಿದ್ದ ವಕ್ಫ್ ಹೆಸರನ್ನು ಡಿಲೀಟ್ ಮಾಡಲಾಗಿದೆ. ಇದರ ಬೆನ್ನಲ್ಲೇ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಅನ್ನದಾನೇಶ್ವರ ಮಠದ ಆಸ್ತಿಯಲ್ಲೂ ವಕ್ಫ್ ಹೆಸರು ನಮೂದಿಸಲಾಗಿದೆ. ಹೌದು ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭವಾದ ಶ್ರೀ ಅಮ್ಮದಾನೇಶ್ವರ ವಿದ್ಯಾವರ್ಧಕ ಪ್ರಸಾದ ನಿಲಯ ಸಮಿತಿಯ ಉಚಿತ ಪ್ರಸಾದ ನಿಲಯಕ್ಕೆ ಸೇರಿದ 15.06 ಎಕರೆಯಲ್ಲಿ 11.19 ಎಕರೆ ವಕ್ಫ್ ಆಸ್ತಿ ಎಂದು ನಮೂದು ಆಗಿದೆ. ಕೋಡಿಕೊಪ್ಪ ವೀರಪ್ಪಜ್ಜನವರ ಹಾಗೂ ಬಾಗಲಕೋಟೆ ವೈರಾಗ್ಯದ ಮಲ್ಲಣಾರ್ಯರ ಉಚಿತ ಪ್ರಸಾದ ನಿಲಯದ ಆಸ್ತಿ ಸರ್ವೆ ನಂಬರ್ 410/2ಬಿ ಈಗ ರಹಮಾನ ಶಾವಲಿ ದರ್ಗಾ ವಕ್ಫ್ ಆಸ್ತಿ ಎಂದು ನೋಂದಣಿಯಾಗಿದೆ. https://ainlivenews.com/do-you-sleep-less-at-night-if-so-beware-of-these-diseases/ ಲಿಂಗೈಕ್ಯ ಡಾ. ಅಭಿನವ ಅನ್ನದಾನ ಸ್ವಾಮೀಜಿಗಳು ಶ್ರೀಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂ. 11ರಲ್ಲಿ…
ಬೆಂಗಳೂರು :- ಪೋಷಕರೇ ಈ ಸುದ್ದಿ ಮಿಸ್ ಮಾಡ್ದೆ ನೋಡಿ. ನಿಮ್ಮ ಮಕ್ಕಳನ್ನು ಹೊರಗೆ ಬೈಕ್ ನಲ್ಲಿ ಕರೆದು ಕೊಂಡು ಹೋಗುವಾಗ, ಶಾಲೆಗೆ ಹೋಗುವಾಗ, ಇನ್ನೂ ಮುಂದೆ ಈ ನಿಯಮ ಪಾಲಿಸೋದು ಕಡ್ಡಾಯ ಆಗಿದೆ. https://ainlivenews.com/snehamai-krishna-expressed-doubt-about-the-lokayukta-investigation/ ವಾಹನ ಸವಾರರ ಸುರಕ್ಷತೆಗಾಗಿ ಸರ್ಕಾರ ಹಾಗೂ ಸಾರಿಗೆ ಇಲಾಖೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇತ್ತೀಚೆಗೆ 4 ವರ್ಷದ ಒಳಗಿನ ಮಕ್ಕಳನ್ನು ಶಾಲೆ ಅಥವಾ ಇತರೆ ಕೆಲಸಗಳಿಗೆ ಹಿಂದೆ, ಮುಂದೆ ಕೂರಿಸಿಕೊಂಡು ಬೈಕ್ ಚಲಾವಣೆ ಮಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದೆ. 4 ವರ್ಷ ಒಳಗಿನ ಮಕ್ಕಳನ್ನು ಬೈಕ್‌ಗಳಲ್ಲಿ ಕರೆದುಕೊಂಡು ಹೋಗುವಾಗ ಶಿಶು ಕವಚ ಹಾಕದಿದ್ದರೆ ಕೇಸ್ ಹಾಗೂ ದಂಡವನ್ನು ಸಾರಿಗೆ ಇಲಾಖೆ ಹಾಕುತ್ತಿದೆ. ಮಕ್ಕಳಿಗೆ ಸೇಫ್ಟಿ ಬೆಲ್ಟ್ ಹಾಕದ ಪೋಷಕರಿಗೆ 1,000 ರೂ. ದಂಡ ಹಾಕುತ್ತಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆ 2019ರ ಅನ್ವಯ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳು ಸೇಫ್ಟಿ ಧಾರಣೆ ಮಾಡುವುದು ಕಡ್ಡಾಯ. ಈ ಬಗ್ಗೆ…
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅನುಮಾನ ವ್ಯಕ್ತಪಡಿಸಿದ್ದಾರೆ. https://ainlivenews.com/rohit-unavailable-for-test-series-from-next-year/ ಮುಡಾ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸುವ ಮೊದಲು ತನಿಖೆ ನಡೆಯುವ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಈಗ ಲೋಕಾಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದರೂ ಸೂಕ್ತ ತನಿಖೆ ನಡೆಯುವ ಬಗ್ಗೆ ಅನುಮಾನಿಸುತ್ತಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಒಂದೇ ಕಾರಣಕ್ಕೆ ಸಿಎಂರನ್ನು ವಿಚಾರಣೆಗೆ ಕರೆಸಲಾಗುತ್ತಿದೆ, ಆದರೆ ವಿಚಾರಣೆ ಸರಿಯಾದ ನಿಟ್ಟಿನಲ್ಲಿ ಸಾಗುತ್ತದೆಯೇ ಎಂಬ ಸಂಶಯ ಕಾಡುತ್ತಿದೆ ಎಂದು ಕೃಷ್ಣ ಹೇಳಿದರು.