Author: AIN Author

ರನ್ ಮಷಿನ್ ವಿರಾಟ್ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕಳೆದ 16 ವರ್ಷಗಳಿಂದ ಕ್ರಿಕೆಟ್​ ಜಗತ್ತಿನಲ್ಲಿ ಮಿಂಚುತ್ತಿರುವ ಕೊಹ್ಲಿ, ಹಲವಾರು ದಾಖಲೆಗಳನ್ನು ಬರೆದಿದ್ದಾರೆ ಮತ್ತು ಮುರಿದಿದ್ದಾರೆ. ಈ ದಾಖಲೆ ಯಾರು ಮುರಿಯಲು ಅಸಾಧ್ಯ. https://ainlivenews.com/suspicion-surrounding-guruprasads-death-explosive-truth-revealed-in-preliminary-report/ ಏಕದಿನ ಕ್ರಿಕೆಟ್‌ನಲ್ಲಿ 50 ಶತಕ:ಏಕದಿನ ಕ್ರಿಕೆಟ್​ನಲ್ಲಿ ಕೊಹ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿ ದಾಖಲೆ ಬರೆದಿದ್ದಾರೆ. ಈ ಹಿಂದೆ ಸಚಿನ್ ತೆಂಡೂಲ್ಕರ್​ 463 ಏಕದಿನ ಪಂದ್ಯಗಳಲ್ಲಿ 49 ಶತಕಗಳನ್ನು ಬಾರಿಸಿದ್ದರೆ, ವಿರಾಟ್ ಕೇವಲ 295 ಪಂದ್ಯಗಳಲ್ಲೇ 50 ಶತಕಗಳನ್ನು ಪೂರೈಸಿದ್ದಾರೆ. 80 ಅಂತಾರಾಷ್ಟ್ರೀಯ ಶತಕ:ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಹೆಸರಲ್ಲಿದೆ. ಅವರು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 100 ಶತಕಗಳನ್ನು ಪೂರೈಸಿದ್ದಾರೆ. ನಂತರದ ಸ್ಥಾನದಲ್ಲಿ ವಿರಾಟ್​ ಕೊಹ್ಲಿ ಇದ್ದಾರೆ. ಇವರು ಇದುವರೆಗೆ ಒಟ್ಟು 80 ಅಂತಾರಾಷ್ಟ್ರೀಯ ಶತಕಗಳನ್ನು ಸಿಡಿಸಿದ್ದಾರೆ. ಶೂನ್ಯ ಎಸೆತಕ್ಕೆ ವಿಕೆಟ್​:ವಿರಾಟ್​ ಕೊಹ್ಲಿ ಹೆಸರಲ್ಲಿ ಅಪರೂಪದ ದಾಖಲೆಯೊಂದಿದೆ. ಇದು ಈವರೆಗೂ ಯಾರಿಂದಲೂ ಮುರಿಯಲು ಸಾಧ್ಯವಾಗಿಲ್ಲ. 2011ರಲ್ಲಿ ಟೀಂ…

Read More

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನ ಸಭೆ ಉಪ ಚುನಾವಣೆಯ ಪ್ರಚಾರ ಕಾರ್ಯಕ್ರಮ ಮುಗಿಸಿಕೊಂಡು ಭಾನುವಾರ ರಾತ್ರಿ ಹುಬ್ಬಳ್ಳಿ ಗೆ ಮರಳಿದ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ನಿವಾಸದಲ್ಲಿ ಭೋಜನ ಸವಿದರು. ಸಂತೋಷನಗರ ಮಧುರಾ ಪಾರ್ಕ್‌ ನಲ್ಲಿರುವ ತಮ್ಮ ಮನೆಗೆ ಆಗಮಿಸುತ್ತಿದ್ದಂತೆ ಸಿದ್ದರಾಮಯ್ಯ ಅವರನ್ನು ಅಬ್ಬಯ್ಯ ಹಾಗೂ ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು ಸ್ವಾಗತಿಸಿದರು.‌ ಶಿಗ್ಗಾಂವ ಉಪ ಚುನಾವಣಾ ಪ್ರಚಾರ ಮುಗಿಸಿ ನೇರವಾಗಿ ಹುಬ್ಬಳ್ಳಿಗೆ ಆಗಮಿಸಿದ ಅವರು ಮುಖ ್ಯ ಮಂತ್ರಿ ಸಿದ್ಧರಾಮಯ್ಯ ನವರು ನಾಟಿ ಕೋಳಿ ಸಾರು,ಮಟನ್ ಬಿರಿಯಾನಿ,ಖಡಕ್ ಜೋಳದ ರೊಟ್ಟಿ ಊಟ ಸವಿದರು. ಒಂದು ಕಡೆ ಸಸ್ಯಹಾರಿ ಇನ್ನೊಂದು ಕಡೆ ಮಾಂಸಹಾರಿ ಭರ್ಜರಿ ಬಗೆ ಬಗೆಯ ಉತ್ತರ ಕರ್ನಾಟಕ ಭಾಗದ ವಿಶೇಷ ಖಾದ್ಯದ ರುಚಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯಾ ನವರು ಸವಿದರು. https://ainlivenews.com/do-you-sleep-less-at-night-if-so-beware-of-these-diseases/ ಹುಬ್ಬಳ್ಳಿಯಲ್ಲಿರುವ ಶಾಸಕ ಪ್ರಸಾದ ಅಬ್ಬಯ್ಯ ಅವರ ಮನೆಗೆ ತೆರಳಿದ ಸಿಎಂ ಸಿದ್ಧರಾಮಯ್ಯಗೆ ಶಾಸಕ ಪ್ರಸಾದ…

Read More

ತುಮಕೂರು: ಅನುಮಾನಸ್ಪದವಾಗಿ ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿ ಬಳಿಯಿರುವ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಅಭಿಲಾಷ್(13) ಮೃತ ವಿದ್ಯಾರ್ಥಿ. https://ainlivenews.com/do-you-sleep-less-at-night-if-so-beware-of-these-diseases/ ಸದ್ಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ವಸತಿ ಶಾಲೆ ಪ್ರಿನ್ಸಿಪಾಲ್, ವಾರ್ಡನ್ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವುದಾಗಿ ಆರೋಪಿಸಲಾಗಿದೆ. ಮೃತ ವಿದ್ಯಾರ್ಥಿ ಅಭಿಲಾಷ್, ಶಕುನಿ ತಿಮ್ಮನಹಳ್ಳಿಯ ನಿವಾಸಿ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಹುಬ್ಬಳ್ಳಿ: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ‌ ಮೇರೆಗೆ ಮುಖ್ಯ ಪೇದೆಯೊಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೇಶ್ವಾಪುರ ಠಾಣೆ ವ್ಯಾಪ್ತಿಯ ಶಬರಿ ನಗರದ ಎಂ.ಎ. ಖಾದಿರನವರ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈತನು ರವಿವಾರ ಮಧ್ಯಾಹ್ನ 9 ವರ್ಷದ ಬಾಲಕಿ ಪುಸಲಾಯಿಸಿ ಮನೆಗೆ ಕರೆಯಿಸಿ ಅನುಚಿತ ವರ್ತನೆ ತೋರಿದ್ದಾನೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿರುವ ಈತನು ಮೂರು ಮಕ್ಕಳ ತಂದೆಯಾಗಿದ್ದರೂ ಇಂತಹ ದುವರ್ತನೆ ತೋರಿದ್ದಾನೆ. ಬಾಲಕಿಯ ಪೋಷಕರು ಅನುಚಿತ ವರ್ತನೆ ತೋರಿರುವ ಎಚ್‌ಸಿಗೆ ಧರ್ಮದೇಟು ನೀಡಿದ್ದಾರೆ. ಅಲ್ಲದೇ ಕೇಶ್ವಾಪುರ ಪೊಲೀಸರಿಗೆ ಅವನನ್ನು ಒಪ್ಪಿಸಿದ್ದಾರೆ. https://ainlivenews.com/do-you-sleep-less-at-night-if-so-beware-of-these-diseases/ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ‌. ಈ ಘಟನೆಗೆ ಸಂಬಂಧಿಸಿ ಹು-ಧಾ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ ಆತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Read More

ಕಾನ್ಪುರ: ಖಾಸಗಿ ಆಸ್ಪತ್ರೆಯೊಂದರ ನಿರ್ದೇಶಕ 22 ವರ್ಷದ ನರ್ಸ್ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಅತ್ಯಾಚಾರವೆಸಗುವ ಮುನ್ನ ನರ್ಸ್‌ಗೆ  ಅಮಲು ಬೆರೆಸಿದ ತಂಪು ಪಾನೀಯವನ್ನು ನೀಡಲಾಗಿತ್ತು ಎಂದು ಶಂಕಿಸಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.  ಕಲ್ಯಾಣಪುರದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಅಭಿಷೇಕ್ ಪಾಂಡೆ ಮಾತನಾಡಿ, ಮಹಿಳೆ ಕಳೆದೆರಡು ತಿಂಗಳುಗಳಿಂದ ಕಲ್ಯಾಣಪುರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. https://ainlivenews.com/do-you-sleep-less-at-night-if-so-beware-of-these-diseases/ ಭಾನುವಾರ ಸಂಜೆ, ಆಸ್ಪತ್ರೆಯಲ್ಲಿ ನಿರ್ದೇಶಕ ಆಯೋಜಿಸಿದ್ದ ಪಾರ್ಟಿಯಲ್ಲಿ ನರ್ಸ್ ಪಾಲ್ಗೊಂಡಿದ್ದಳು. ಕೆಲಸದ ನೆಪದಲ್ಲಿ ಆಕೆಯನ್ನು ರಾತ್ರಿ ಸಮಯದಲ್ಲಿ ಆಸ್ಪತ್ರೆಯಲ್ಲಿ ಇರುವಂತೆ ನಿರ್ದೇಶಕ ಹೇಳಿದ್ದು, ಮಧ್ಯರಾತ್ರಿ ಆಕೆಯನ್ನು ಕೋಣೆಗೆ ಕರೆದು ಬಲವಂತವಾಗಿ ಒಳಗೆ ಎಳೆದುಕೊಂಡು ಹೋಗಿ ಬಾಗಿಲು ಹಾಕಿ ಕೃತ್ಯವೆಸಗಿದ್ದಾನೆ ಎಂದು ತಿಳಿಸಿದ್ದಾರೆ. ಈ ಘಟನೆಯನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ನರ್ಸ್‌ಗೆ ನಿರ್ದೇಶಕ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿಯ ಗುರುತನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಬಂಧನದ ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಂತ್ರಸ್ತೆಯ…

Read More

ಬೆಂಗಳೂರು:- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲಾಗಿದೆ. https://ainlivenews.com/keralas-kochi-model-water-metro-has-reached-mangalore/ ಪ್ರಕರಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆರೋಪಿ ನಂಬರ್​ 1 ಆಗಿದ್ದಾರೆ. ಜೆಡಿಎಸ್​ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಆರೋಪಿ ನಂಬರ್​ 2 ಆಗಿದ್ದಾರೆ. ಮತ್ತು ಜೆಡಿಎಸ್​ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್​ 3 ಆಗಿದ್ದಾರೆ. ಬಿಎನ್​ಎಸ್​ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್​ಐಆರ್​ ದಾಖಲಾಗಿದೆ.

Read More

ಮಂಗಳೂರು: ದೇಶದ ಮೊದಲ ಜಲ ಮೆಟ್ರೋ ಸೇವೆ ಕೇರಳದಲ್ಲಿ ಕಳೆದ ವರ್ಷ ಆರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ವಾಟರ್‌ ಮೆಟ್ರೋ ಯೋಜನೆಯನ್ನು ಏಪ್ರಿಲ್‌ 25ರಂದು ಉದ್ಘಾಟಿಸಿದ್ದರು. ಅದರಂತೆ ಕೇರಳದ ಕೊಚ್ಚಿ ಮಾದರಿಯಲ್ಲಿ ಕರ್ನಾಟಕದ ಕರಾವಳಿ ನಗರ ಮಂಗಳೂರಿನಲ್ಲೂ ವಾಟರ್‌ ಮೆಟ್ರೋ ಸೇವೆ ಸಿಗುವ ಸಾಧ್ಯತೆಯಿದೆ. ಕರ್ನಾಟಕ ಮಾರಿಟೈಮ್ ಬೋರ್ಡ್ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ಸಮಗ್ರವಾದ ಯೋಜನಾ ವರದಿಯನ್ನು ತಯಾರಿಸಲು ನಿರ್ಧರಿಸಿದ್ದು ಟೆಂಡರ್‌ ಆಹ್ವಾನಿಸಿದೆ. ಈ ಸಾರಿಗೆ ಜಾಲ ನೇತ್ರಾವತಿ ಮತ್ತು ಗುರುಪುರ ನದಿಗಳ ಎರಡೂ ದಡಗಳಲ್ಲಿ ಬಜಾಲ್‌ನಿಂದ ಮರವೂರುವರೆಗೆ ಸಂಪರ್ಕ ಕಲ್ಪಿಸಲಿದೆ. ಹಂತ ಹಂತವಾಗಿ ಯೋಜನೆ ಅನುಷ್ಠಾನಗೊಳ್ಳಲಿದೆ. ಆರಂಭದಲ್ಲಿ ನೇತ್ರಾವತಿ-ಗುರುಪುರ ನದಿ ಹಿನ್ನೀರಿನ ಉದ್ದಕ್ಕೂ ಸುಮಾರು 30 ಕಿಲೋಮೀಟರ್‌ ದೂರದವರೆಗೆ ಬೋಟ್‌ ಸಂಚರಿಸಲಿದೆ. ಈ ಮಾರ್ಗದಲ್ಲಿ ಒಟ್ಟು 17 ನಿಲ್ದಾಣಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. https://ainlivenews.com/do-you-sleep-less-at-night-if-so-beware-of-these-diseases/ ಕೊಚ್ಚಿಯ ನಂತರ ಮಂಗಳೂರು ವಾಟರ್‌ ಮೆಟ್ರೋ ಯೋಜನೆ ಎರಡನೇ ಅತಿದೊಡ್ಡ ಜಲ ಸಾರಿಗೆ ವ್ಯವಸ್ಥೆಯಾಗಿದೆ. ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸಂಪರ್ಕಿತ ಪ್ರದೇಶಗಳಲ್ಲಿ ಸಮಗ್ರ ಅಭಿವೃದ್ಧಿಯನ್ನು…

Read More

ಬೆಂಗಳೂರು:- ಡೈರೆಕ್ಟರ್ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಅಂಶಗಳು ಬೆಳಕಿಗೆ ಬರುತ್ತಿದೆ. https://ainlivenews.com/good-news-for-gold-lovers-both-gold-and-silver-prices-are-down/ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಮಾದನಾಯಕನಹಳ್ಳಿ ಪೊಲೀಸರಿಗೆ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿರುವುದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿರ್ಧರಿಸಿದ್ದ ಗುರುಪ್ರಸಾದ್, ಹೊಸದಾಗಿ ಹಗ್ಗ ಖರೀದಿ ಮಾಡಿದ್ದರಂತೆ. ಹಾಗೇ ಹಗ್ಗ ಖರೀದಿ ಮಾಡಿಕೊಂಡು ಮನೆಗೆ ಬಂದು ಕಿಟಕಿಯಿಂದ ಹೊರಗೆ ಯಾರಿಗೂ ಕಾಣಬಾರದು ಎಂದು ಹೊಸದಾಗಿ ಕರ್ಟನ್‌ಗಳು ಹಾಕಿ ಕವರ್ ಮಾಡಿದ್ದಾರೆ. ನಂತರ ಮನೆಯ ಬಾಗಿಲಿನ ಒಳಗಿನಿಂದಲೇ ಚಿಲಕ ಹಾಕಿ ಅಲ್ಲೇ ಇದ್ದ ದಿವಾನ್ ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಅನ್ನುವುದು ತನಿಖೆ ವೇಳೆ ಬಹಿರಂಗವಾಗಿದೆ ಗುರುಪ್ರಸಾದ್ ಆತ್ಮಹತ್ಯೆಗೆ ಆರ್ಥಿಕ ಕಾರಣಗಳೇನಾದರು ಇದೆಯಾ ಅಥವಾ ವೈಯಕ್ತಿಕ ಕಾರಣಗಳಾ ಅನ್ನುವ ವಿಚಾರಕ್ಕೂ ತನಿಖೆ ನಡೆಯುತ್ತಿದೆ. ಅದರ ಜೊತೆಗೆ ಆತ್ಮಹತ್ಯೆ ನಡೆದಿದ್ದು ಯಾವಾಗ ಅನ್ನುವುದಕ್ಕೂ ಉತ್ತರ ಸಿಕ್ಕಿದೆ. ಗುರುಪ್ರಸಾದ್, ಕಳೆದ ಅ.29ರಂದು ಕೊನೆಯ ಬಾರಿಗೆ ಸಂಪರ್ಕಕ್ಕೆ ಸಿಕ್ಕಿದ್ದಾರೆ. ಆ ನಂತರ ಯಾರ ಸಂಪರ್ಕಕ್ಕೂ ಸಿಗಲಿಲ್ಲ. ಫ್ಲಾಟ್‌ಗೆ ಅ.29ರಂದು ಸಂಜೆ…

Read More

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ ಆಗಿದೆ. https://ainlivenews.com/if-duniya-had-gone-without-vijay-the-family-members-would-have-to-attend-guruprasads-funeral-too/ ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,600 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 5ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,550 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,240 ರೂ 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,180 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 96 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ:…

Read More

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನವೆಂಬರ್‌ 6 ಬುಧವಾರ  10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಈಗಾಗಲೇ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು. ಸಿದ್ದರಾಮಯ್ಯನವರ 40 ವರ್ಷದ ಇತಿಹಾಸದಲ್ಲಿ ಇಲ್ಲಿಯವರೆಗೆ ತನ್ನ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಗಲಿ ಇತರ ವಿಚಾರಣಾ ಸಂಸ್ಥೆಯಿಂದ ನೋಟಿಸ್‌ ಸ್ವೀಕರಿಸಿರಲಿಲ್ಲ. ಆದರೆ ಈಗ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ನೋಟಿಸ್‌ ಸ್ವೀಕರಿಸಿದ್ದಾರೆ. https://ainlivenews.com/do-you-sleep-less-at-night-if-so-beware-of-these-diseases/ ಇನ್ನೂ ನವೆಂಬರ್ 6ರಂದು ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಅವರು ವಿಚಾರಣೆಗೆ ಹಾಜರಾಗುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುತ್ತಾರೋ ಇಲ್ಲವೋ ಎಂಬ ಅನುಮಾನ ಬಲವಾಗಲು ಕಾರಣ, ನವೆಂಬರ್ 6ರಂದು ಮುಖ್ಯಮಂತ್ರಿಗಳ ದಿನಚರಿ. ಸೋಮವಾರ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ವಾಟ್ಸ್​​ಆ್ಯಪ್ ಗ್ರೂಪ್​ನಲ್ಲಿ ನವೆಂಬರ್ 6ರ ಅವರ ದಿನದ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಮೊದಲ ಬಾರಿ ತನಿಖೆ ಎದುರಿಸುತ್ತಿರುವ…

Read More