ಬೆಂಗಳೂರು:- ಡೈರೆಕ್ಟರ್ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಅಂಶಗಳು ಬೆಳಕಿಗೆ ಬರುತ್ತಿದೆ. https://ainlivenews.com/good-news-for-gold-lovers-both-gold-and-silver-prices-are-down/ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಮಾದನಾಯಕನಹಳ್ಳಿ ಪೊಲೀಸರಿಗೆ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿರುವುದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿರ್ಧರಿಸಿದ್ದ ಗುರುಪ್ರಸಾದ್, ಹೊಸದಾಗಿ ಹಗ್ಗ ಖರೀದಿ ಮಾಡಿದ್ದರಂತೆ. ಹಾಗೇ ಹಗ್ಗ ಖರೀದಿ ಮಾಡಿಕೊಂಡು ಮನೆಗೆ ಬಂದು ಕಿಟಕಿಯಿಂದ ಹೊರಗೆ ಯಾರಿಗೂ ಕಾಣಬಾರದು ಎಂದು ಹೊಸದಾಗಿ ಕರ್ಟನ್‌ಗಳು ಹಾಕಿ ಕವರ್ ಮಾಡಿದ್ದಾರೆ. ನಂತರ ಮನೆಯ ಬಾಗಿಲಿನ ಒಳಗಿನಿಂದಲೇ ಚಿಲಕ ಹಾಕಿ ಅಲ್ಲೇ ಇದ್ದ ದಿವಾನ್ ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಅನ್ನುವುದು ತನಿಖೆ ವೇಳೆ ಬಹಿರಂಗವಾಗಿದೆ ಗುರುಪ್ರಸಾದ್ ಆತ್ಮಹತ್ಯೆಗೆ ಆರ್ಥಿಕ ಕಾರಣಗಳೇನಾದರು ಇದೆಯಾ ಅಥವಾ ವೈಯಕ್ತಿಕ ಕಾರಣಗಳಾ ಅನ್ನುವ ವಿಚಾರಕ್ಕೂ ತನಿಖೆ ನಡೆಯುತ್ತಿದೆ. ಅದರ ಜೊತೆಗೆ ಆತ್ಮಹತ್ಯೆ ನಡೆದಿದ್ದು ಯಾವಾಗ ಅನ್ನುವುದಕ್ಕೂ ಉತ್ತರ ಸಿಕ್ಕಿದೆ. ಗುರುಪ್ರಸಾದ್, ಕಳೆದ ಅ.29ರಂದು ಕೊನೆಯ ಬಾರಿಗೆ ಸಂಪರ್ಕಕ್ಕೆ ಸಿಕ್ಕಿದ್ದಾರೆ. ಆ ನಂತರ ಯಾರ ಸಂಪರ್ಕಕ್ಕೂ ಸಿಗಲಿಲ್ಲ. ಫ್ಲಾಟ್‌ಗೆ ಅ.29ರಂದು ಸಂಜೆ…
Author: AIN Author
ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ ಆಗಿದೆ. https://ainlivenews.com/if-duniya-had-gone-without-vijay-the-family-members-would-have-to-attend-guruprasads-funeral-too/ ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 73,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 80,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 73,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,600 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 5ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,550 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,240 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,180 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 96 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ:…
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 6 ಬುಧವಾರ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಈಗಾಗಲೇ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು. ಸಿದ್ದರಾಮಯ್ಯನವರ 40 ವರ್ಷದ ಇತಿಹಾಸದಲ್ಲಿ ಇಲ್ಲಿಯವರೆಗೆ ತನ್ನ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಗಲಿ ಇತರ ವಿಚಾರಣಾ ಸಂಸ್ಥೆಯಿಂದ ನೋಟಿಸ್ ಸ್ವೀಕರಿಸಿರಲಿಲ್ಲ. ಆದರೆ ಈಗ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ನೋಟಿಸ್ ಸ್ವೀಕರಿಸಿದ್ದಾರೆ. https://ainlivenews.com/do-you-sleep-less-at-night-if-so-beware-of-these-diseases/ ಇನ್ನೂ ನವೆಂಬರ್ 6ರಂದು ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಅವರು ವಿಚಾರಣೆಗೆ ಹಾಜರಾಗುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುತ್ತಾರೋ ಇಲ್ಲವೋ ಎಂಬ ಅನುಮಾನ ಬಲವಾಗಲು ಕಾರಣ, ನವೆಂಬರ್ 6ರಂದು ಮುಖ್ಯಮಂತ್ರಿಗಳ ದಿನಚರಿ. ಸೋಮವಾರ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ನವೆಂಬರ್ 6ರ ಅವರ ದಿನದ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಮೊದಲ ಬಾರಿ ತನಿಖೆ ಎದುರಿಸುತ್ತಿರುವ…
ರಾಯಚೂರು: ಬಿಜೆಪಿಯವರು ತಮ್ಮ ಆಂತರಿಕ ಸಮಸ್ಯೆಗಳನ್ನು ಮುಚ್ಚಿಕೊಳ್ಳಲು ವಕ್ಫ್ ವಿಚಾರದಲ್ಲಿ ಹೋರಾಟ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಆರೋಪ ಮಾಡಲು ಬಿಜೆಪಿಯವರಿಗೆ ಬೇರೆ ಯಾವುದೇ ವಿಷಯಗಳಿಲ್ಲ ಎಂದು ಸಣ್ಣನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಆಂತರಿಕ ಸಮಸ್ಯೆಗಳನ್ನು ಎಲ್ಲರಿಗೂ ಗೊತ್ತಿದೆ. ವಿಜಯೇಂದ್ರ ಗ್ರೂಪ್, ಅವರನ್ನು ಸ್ಥಾನದಿಂದ ತೆಗೆಯಬೇಕು ಎನ್ನುವ ಇನ್ನೊಂದು ಗುಂಪು ಇದೆ. ಅದನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಸರ್ಕಾರ, ಮುಖಂಡರ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ. ತಮ್ಮ ಆಂತರಿಕ ಸಮಸ್ಯೆಗಳನ್ನು ಇಟ್ಟುಕೊಂಡು ಒಬ್ಬರಿಗೊಬ್ಬರು ಸವಾಲ್ ಹಾಕಿಕೊಳ್ಳುತ್ತಿದ್ದಾರೆ. ವಿಜಯೇಂದ್ರ ಗ್ರೂಪ್, ಬಸನಗೌಡ ಯತ್ನಾಳ, ರಮೇಶ್ ಜಾರಕಿಹೊಳಿ ಗ್ರೂಪ್ ಇದೆ ಎಂದು ಎಲ್ಲರಿಗೂ ಗೊತ್ತಿದೆ ಎಂದರು. https://ainlivenews.com/do-you-sleep-less-at-night-if-so-beware-of-these-diseases/ ರಾಜ್ಯದಲ್ಲಿ ನಮ್ಮ ಗ್ಯಾರಂಟಿಗಳು, ಅಭಿವೃದ್ಧಿ ಕಾರ್ಯಗಳು ವ್ಯವಸ್ಥಿತವಾಗಿ ನಡೆಯುತ್ತಿವೆ. ಆದರೆ ವಕ್ಫ್ ನೋಟಿಸ್ ವಿಚಾರಕ್ಕೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಬಸವರಾಜ್ ಬೊಮ್ಮಾಯಿ ಸಿಎಂ ಇದ್ದಾಗಲೇ ನೋಟಿಸ್ ಕೊಟ್ಟಿದ್ದಾರೆ. ಆ ಕುರಿತು ನಮ್ಮ…
ಬೆಂಗಳೂರು:- ಕರ್ನಾಟಕದ ಹಲವೆಡೆ ನವೆಂಬರ್ 9 ರಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://ainlivenews.com/i-want-ajjampir-qadri-very-much-qadri-was-ready-to-give-up-mla-seat-for-me-cm-siddaramaiah/ ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಹುಲಗೂರ ಗ್ರಾಮದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರನ್ನು ಗೆಲ್ಲಿಸಿ ಎಂದರು. ಕೊರೋನಾ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬಸವರಾಜ ಬೊಮ್ಮಾಯಿ. ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದ ಏಕೈಕ ಸರ್ಕಾರ ಬೊಮ್ಮಾಯಿ ಅವರದ್ದಾಗಿತ್ತು. ಕೋವಿಡ್ ಸಂದರ್ಭದಲ್ಲೂ, ಸಂಕಷ್ಟದಲ್ಲಿ ನರಳುವಾಗಲೂ ಲಂಚ ಪಡೆದವರ ಪುತ್ರನನ್ನು ಸೋಲಿಸಿ ಎಂದರು. ಅಜ್ಜಂಪೀರ್ ಖಾದ್ರಿ ನನಗೆ ತುಂಬಾ ಬೇಕಾದವರು. ನನಗಾಗಿ ಖಾದ್ರಿ ಶಾಸಕ ಸ್ಥಾನ ತ್ಯಜಿಸಲು ಸಿದ್ದರಾಗಿದ್ದರು. ನಾನು ಸೋತು, ಖಾದ್ರಿ ಗೆದ್ದಿದ್ದಾಗ ಸ್ವತಃ ಖಾದ್ರಿಯವರೇ ಬಂದು ಅವರು…
ಬೆಂಗಳೂರು:- ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಬೆಚ್ಚಿ ಬೀಳಿಸುವ ಘಟನೆ ಜರುಗಿದೆ. ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಹಸುಗೂಸು ಎಸೆದು ದುರುಳರು ಕೊಲೆಗೈದ ಘಟನೆ ನಗರದ ಆನೇಕಲ್ ತಾಲ್ಲೂಕಿನ ಇಗ್ಗಲೂರುನಲ್ಲಿ ಜರುಗಿದೆ. https://ainlivenews.com/a-car-collided-with-a-bike-two-dead-two-more-seriously/ ಆರೂವರೆ ತಿಂಗಳಿಗೆ ಸಿಜೇರಿಯನ್ ಮೂಲಕ ಮನು ಮತ್ತು ಹರ್ಷಿತಾ ದಂಪತಿಗೆ ಮಗು ಜನಿಸಿತ್ತು. ಮಗುವಿಗೆ ಉಸಿರಾಟದ ತೊಂದರೆಯಿಂದಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಗು ಸಂಪೂರ್ಣ ಚೇತರಿಕೆ ಕಂಡ ಹಿನ್ನೆಲೆ ವಾರದ ಹಿಂದೆ ಮನೆಗೆ ಕರೆತರಲಾಗಿತ್ತು. ಆದರೆ ತಾಯಿ ಶೌಚಾಲಯಕ್ಕೆ ಹೋದಾಗ ಮಗು ಇದ್ದಕ್ಕಿದ್ದಂತೆ ಕಾಣೆಯಾಗಿದೆ. ಈ ಬಗ್ಗೆ ಸೂರ್ಯನಗರ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರ ಪರಿಶೀಲನೆ ವೇಳೆ ಮನೆಯ ಸಿಂಟೆಕ್ಸ್ ನೀರಿನ ಟ್ಯಾಂಕ್‌ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.
ರಾಯಚೂರು:- ನಗರದ ಹೊರವಲಯದ ಪವರ್ ಗ್ರಿಡ್ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿದ ಘಟನೆ ಜರುಗಿದೆ. https://ainlivenews.com/a-constable-was-brutally-murdered-a-week-before-the-wedding/ ನಾಲ್ವರಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಬಳಿ ಜರುಗಿದೆ. ಶರಣಬಸವ, ಶಿವು ಮೃತರು ಎಂದು ಹೇಳಲಾಗಿದೆ. ಇರ್ಫಾನ್ ಹಾಗೂ ಗರೀಬ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಚೂರಿನಿಂದ ಕಲ್ಲೂರಿಗೆ ಕಟ್ಟಡ ಕೆಲಸಕ್ಕಾಗಿ ನಿತ್ಯವು ಪ್ರಯಾಣಿಸುತ್ತಿದ್ದರು. ಒಂದೇ ಬೈಕನಲ್ಲಿ ನಾಲ್ವರು ಹೊರಟಿದ್ದಾಗ ಪವರ್ ಗ್ರಿಡ್ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಕಾರು ಸಹಿತ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಳ ಶೋಧಕ್ಕೆ ಮುಂದಾಗಿದ್ದಾರೆ.
ಹಾಸನ:- ಮದುವೆಗೆ ಒಂದು ವಾರ ಇರುವಾಗಲೇ ಭೀಕರವಾಗಿ ಕಾನ್ಸ್‌ಟೇಬಲ್ ಕೊಲೆಯಾದ ಘಟನೆ ಜರುಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಹರೀಶ್.ವಿ ಕೊಲೆಯಾದ ಪೊಲೀಸ್ ಕಾನ್ಸ್‌ಟೇಬಲ್. ಹರೀಶ್ ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. https://ainlivenews.com/is-it-torture-to-wake-up-early-in-the-morning-if-so-then-follow-these-tips/ ಇದೇ ತಿಂಗಳು 11 ರಂದು ಹರೀಶ್ ವಿವಾಹ ನಿಶ್ಚಯವಾಗಿತ್ತು. ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಶೀತ, ಕೆಮ್ಮು, ಜ್ವರ, ತಲೆನೋವು, ಆ್ಯಸಿಡಿಟಿ, ಮಲಬದ್ಧತೆ, ಮೈ-ಕೈ ನೋವು ಹೀಗೆ ಏನೇ ಸಮಸ್ಯೆಗಳು ಎದುರಾದರೂ ಜನರು ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಪ್ರಾರಂಭವಾದ ಕೂಡಲೆ ಮಾತ್ರೆಗಳನ್ನು ಸೇವಿಸುತ್ತಾರೆ. ಅದರಲ್ಲೂ ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಭಾರತೀಯ ಬ್ರಾಂಡ್ ಡೋಲೋ 650 ದೇಶದ ಅತ್ಯಂತ ಜನಪ್ರಿಯ ಔಷಧಿಯಾಗಿ ಹೊರಹೊಮ್ಮಿದೆ. ಇದು ದೇಶದಲ್ಲೇ ಹೆಚ್ಚು ಮಾರಾಟವಾಗುವ ಔಷಧಿ ಎನಿಸಿಕೊಂಡಿದೆ. ಡೊಲೊ 650 ಮಾತ್ರ ಒಂದರಿಂದ 5.7 ಶತಕೋಟಿ ರೂಪಾಯಿಗಳ ಆದಾಯ ಗಳಿಸಿದೆ. ಡೋಲೋ 650 ಮಾತ್ರೆ ಹೆಚ್ಚಾಗಿ ಸೇವಿಸುವ ಮುನ್ನ ಎಚ್ಚರ ಅತಿಯಾದರೆ ಅಮೃತವೂ ವಿಷ ಎನ್ನುವಂತೆ ಕೊರೊನಾ ಡೋಲೋ 650 ಮಾತ್ರೆ ಸೇವನೆ ಮಾಡುವುದು ಕೂಡ ಆರೋಗ್ಯಕ್ಕೆ ಬಹಳ ಅಪಾಯಕಾರಿಯಾಗಿದೆ.. ಕೊರೊನಾ ರೋಗ ಕಾಣಿಸಿಕೊಂಡವರಿಗೂ ವೈದ್ಯರು ಕೂಡ ಪ್ಯಾರಾಸಿಟಮಾಲ್ ಔಷಧಿಯಾದ ಡೋಲೋ 650 ಮಾತ್ರೆಯನ್ನು ಸೇವಿಸಲು ಸೂಚಿಸಿದರು.. ಹೀಗಾಗಿಯೇ ಜನರು ಸಾಂಕ್ರಮಿಕ ರೋಗದ ಸಂದರ್ಭದಲ್ಲಿ ತಮ್ಮ ಮನೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರಾಥಮಿಕ ಚಿಕಿತ್ಸೆ ಎನ್ನುವಂತೆ ಡೋಲೋ 650 ಮಾತ್ರೆಯನ್ನು ತಂದು ಇಟ್ಟು ಕೊಂಡಿದ್ದಾರೆ..…