ಡೆಹ್ರಾಡೂನ್: ಬಸ್‌ವೊಂದು ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ 35 ಮಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ 20 ಮಂದಿ ಸಾವನ್ನಪ್ಪಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. https://ainlivenews.com/need-to-lose-weight-fast-eat-chia-seeds-at-this-time-of-day/ ಸದ್ಯ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ತಲಾ 4 ಲಕ್ಷ ರೂ. ಪರಿಹಾರ: ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1…
Author: AIN Author
ಬೆಂಗಳೂರು: ವಧು ಹುಡುಕಿಕೊಡದ ಮ್ಯಾಟ್ರಿಮೋನಿ ಪೋರ್ಟಲ್ಗೆ 60 ಸಾವಿರ ದಂಡವನ್ನು ಕೋರ್ಟ್ ವಿಧಿಸಿದೆ. ಗ್ರಾಹಕರ ನ್ಯಾಯಾಲಯ ಈ ದಂಡವನ್ನು ವಿಧಿಸಿದೆ. https://ainlivenews.com/virat-kohli-hinted-that-he-will-stay-with-rcb-for-three-more-years-then/ ಬೆಂಗಳೂರಿನ ಎಂಎಸ್ ನಗರ ನಿವಾಸಿ ಕೆಎಸ್ ವಿಜಯಕುಮಾರ್ ಅವರು ತಮ್ಮ ಮಗ ಬಾಲಾಜಿಗೆ ಕನ್ಯೆ ಹುಡುಕುತ್ತಿದ್ದರು. ಅದರಂತೆ, ವಿಜಯಕುಮಾರ್ ಅವರು ಕಲ್ಯಾಣ ನಗರದಲ್ಲಿರುವ ದಿಲ್ ಮಿಲ್ ಮ್ಯಾಟ್ರಿಮೋನಿಗೆ ಭೇಟಿ ನೀಡಿದ್ದರು. ಈ ವೇಳೆ ಸಂಸ್ಥೆ ಬಾಲಾಜಿಗೆ 45 ದಿನಗಳಲ್ಲಿ ವಧು ಹುಡುಕುವುದಾಗಿ ಭರವಸೆ ನೀಡಿತ್ತು. ಬಳಿಕ, ಕೆಸ್ ವಿಜಯಕುಮಾರ್ ಅವರು ಮಾರ್ಚ್ 17 ರಂದು ಸಂಸ್ಥಗೆ ತಮ್ಮ ಮಗನ ಮಗನ ಭಾವಚಿತ್ರ ಮತ್ತು ಅಗತ್ಯ ದಾಖಲೆಗಳನ್ನು ನೀಡಿದ್ದರು. ಜೊತೆಗೆ 30 ಸಾವಿರ ರೂ. ಶುಲ್ಕ ಪಾವತಿಸಿದ್ದರು. 45 ದಿನಗಳು ಕಳೆದರೂ ಸಂಸ್ಥೆ ವಧು ಹುಡುಕಿಕೊಡುವಲ್ಲಿ ವಿಫಲವಾಯಿತು. ಆಗ, ವಿಜಯಕುಮಾರ್ ಅವರು ಹಣ ಮರಳಿಸುವಂತೆ ಹೇಳಿದರು. ಆದರೆ, ಸಂಸ್ಥೆ ಮಾತ್ರ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ. ಹೀಗಾಗಿ, ವಿಜಯಕುಮಾರ್ ಅವರು ಮಾರ್ಚ್ 30 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಆಗ, ಸಂಸ್ಥೆ…
2027ರವರೆಗೆ ಆರ್‌ಸಿಬಿ ತಂಡದೊಂದಿಗೇ ಉಳಿಯುವ ಸುಳಿವನ್ನು ಕಿಂಗ್ ಕೊಹ್ಲಿ ಕೊಟ್ಟಿದ್ದಾರೆ. https://ainlivenews.com/the-matter-is-over-confusion-from-bjp-lakshmana-savadi/ ಐಪಿಎಲ್ ಕ್ರೀಡಾಕೂಟ 2008ರಿಂದ ಪ್ರಾರಂಭಗೊಂಡಾಗಿನಿಂದಲೂ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡದೊಂದಿಗೇ ಗುರುತಿಸಿಕೊಂಡಿದ್ದಾರೆ. 36 ವರ್ಷದ ಬಲಗೈ ಬ್ಯಾಟರ್ ಆದ ವಿರಾಟ್ ಕೊಹ್ಲಿ ಇನ್ನೂ ಇನ್ನೂ ಎಷ್ಟು ವರ್ಷಗಳ ಕಾಲ ಐಪಿಎಲ್ ಕ್ರೀಡಾಕೂಟದಲ್ಲಿ ಮುಂದುವರಿಯಲಿದ್ದಾರೆ ಎಂಬ ಕುರಿತು ವದಂತಿಗಳು ಹರಡಿರುವ ಹೊತ್ತಿನಲ್ಲೇ ಅವರು 2027ರವರೆಗೆ ಆರ್‌ಸಿಬಿ ತಂಡದಲ್ಲೇ ಮುಂದುವರಿದು, ಆ ತಂಡದೊಂದಿಗಿನ ತಮ್ಮ 20 ವರ್ಷಗಳ ಪಯಣವನ್ನು ಮುಕ್ತಾಯಗೊಳಿಸುವ ಸುಳಿವು ನೀಡಿದ್ದಾರೆ. ಐಪಿಎಲ್ ಕ್ರೀಡಾಕೂಟದಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನೆಂಬ ಹಿರಿಮೆ ಹೊಂದಿರುವ ವಿರಾಟ್ ಕೊಹ್ಲಿ, 131.97 ಸ್ಟ್ರೈಕ್ ರೇಟ್ ನಲ್ಲಿ 8,000ಕ್ಕಿಂತ ಹೆಚ್ಚು ರನ್ ಗಳನ್ನು ಕಲೆಹಾಕಿದ್ದಾರೆ. ಈ ರನ್ ಗಳ ಮೊತ್ತದಲ್ಲಿ ಎಂಟು ಶತಕಗಳು ಹಾಗೂ 55 ಅರ್ಧ ಶತಕಗಳು ಸೇರಿವೆ. ಈ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿರುವ ವಿರಾಟ್ ಕೊಹ್ಲಿ, “ನನ್ನ ವೃತ್ತಿ ಜೀವನದ ಕೊನೆಗೆ 20 ವರ್ಷಗಳು ಪೂರ್ಣಗೊಳ್ಳಲಿವೆ ಹಾಗೂ ಆ 20 ವರ್ಷಗಳನ್ನು…
ಬೆಂಗಳೂರು:- ಚನ್ನಪಟ್ಟಣ ಜನ “ಕೈ” ಬಿಡಲ್ಲ ಅನ್ನೋ ನಂಬಿಕೆ ಇದೆ ಎಂದು DK ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಚನ್ನಪಟ್ಟಣದಲ್ಲಿ ರಣರಂಗ ಆಡಿದವರೆಲ್ಲಾ ಮುಗಿದು ಹೋಗಿದ್ದಾರೆ. ನಾವು ಮಾಡಿದ ಕೆಲಸಕ್ಕೆ ಪಟ್ಟಿ ಹಾಕಿ ಚನ್ನಪಟ್ಟಣದ ಜನ ಮಾರ್ಕ್ಸ್ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. https://ainlivenews.com/yadagiri-a-farmer-commits-suicide-because-he-cant-bear-the-debt/ ಚನ್ನಪಟ್ಟಣದಲ್ಲಿ ಯಾವ ರಣನೂ ಇಲ್ಲ, ರಂಗವೂ ಇಲ್ಲ. ಮತದಾರನ ಹೃದಯ ಗೆಲ್ಲಬೇಕು. ನಾವು ಮಾಡಿರುವ ಕೆಲಸಕ್ಕೆ, ಮಾಡುತ್ತಿರುವ ಕೆಲಸಕ್ಕೆ ಜನ ಗುರುತಿಸಿ ಎಂದು ಕೇಳಲು ಹೋಗುತ್ತಿದ್ದೇವೆ. ರಣರಂಗ ಆಡಿದವರೆಲ್ಲ ಮುಗಿದು ಹೋಗಿದ್ದಾರೆ. ಈಗ ಏನಿದ್ದರೂ ಜನರ ಲಾಭ ಮಾತ್ರ ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ಟಾಂಗ್ ಕೊಟ್ರು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾಯಕ ಆದವನು ಮತದಾರರಿಗೆ ಏನು ಕೊಡುತ್ತಾನೆ, ಯಾವ ರೀತಿ ಸಹಾಯ ಮಾಡುತ್ತಾನೆ ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಅದು ಬಹಳ ಮುಖ್ಯ. ಯಾರು ಏನೇನು ಮಾಡಿದ್ದಾರೆ ಅನ್ನೋ ಪಟ್ಟಿ ಈ…
ಹುಬ್ಬಳ್ಳಿ: ಬಿಜೆಪಿ ತನ್ನ ಕಾಲದಲ್ಲಿ ಮಾಡಿದ ಕೋವಿಡ್ ಹಗರಣದಿಂದಲೇ ರಾಜ್ಯದಲ್ಲಿ ಸಾವಿನ ಸಂಖ್ಯೆ ಜಾಸ್ತಿ ಆಗಿದೆ. ಕೊರೋನಾ ಸಾಂಕ್ರಾಮಿಕಗಿಂತ ಬಿಜೆಪಿ ಮಾಡಿದ ಭ್ರಷ್ಟಾಚಾರದಿಂದಲೇ ತುಂಬಾ ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಗಂಭೀರ ಆರೋಪ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸುತ್ತಿದೆ ಎಂಬ ಬಿಜೆಪಿಯವರ ಆರೋಪ ವಿಷಯವಾಗಿ ರವಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ತಮ್ಮ ಕಾಲದಲ್ಲಿ ಅಭಿವೃದ್ಧಿ ಮಾಡಿಲ್ಲ. ಆದರೆ ಕೊರೋನಾ ನೆಪದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದಾರೆ. https://ainlivenews.com/need-to-lose-weight-fast-eat-chia-seeds-at-this-time-of-day/ ಈ ವೇಳೆ ಕಾಳಸಂತೆಯಲ್ಲಿ ಇಂಜೆಕ್ಷನ್ ಮಾರಾಟ ಮಾಡಿದರು ಎಂದು ಕುಟುಕಿದರು. ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ನಾವು ಅಭಿವೃದ್ಧಿ ಮೂಲಕ ಮತ ಕೇಳುತ್ತಿದ್ದೇವೆ. ಈ ಬಾರಿ ಶಿಗ್ಗಾವಿಯಲ್ಲಿ ಅಭಿವೃದ್ಧಿ v/s ಭ್ರಷ್ಟಾಚಾರದ ನಡುವೆ ಉಪಚುನಾವಣೆ ನಡೆಯುತ್ತಿದೆ. ನಾವು ಗೆದ್ದೆ ಗೆಲ್ಲುತ್ತೇವೆ ಎಂದರು
ಹುಬ್ಬಳ್ಳಿ: ವಕ್ಫ್ ವಿಷಯ ಮುಗಿದು ಹೋಗಿದೆ. ಉಪ ಚುನಾವಣೆ ಇರುವ ಕಾರಣಕ್ಕೆ ಬಿಜೆಪಿಯವರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಕುಟುಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರನ್ನು ನಾನು ಬಹಳ ಹತ್ತರದಿಂದ ನೋಡಿದ್ದೇನೆ. ಏನೋ ಒಂದು ಸತ್ತು ಹೋಗಿದೆ ಅಂದರೂ ಅವರು ಹಲ್ಲು ಕಿಸಿಯುತ್ತಾರೆ. ಚುನಾವಣೆ ಇಲ್ಲದಿದ್ದರೆ ಮಾತನಾಡುತ್ತಿರಲಿಲ್ಲ. ಇದೀಗ ಉಪ ಚುನಾವಣೆ ಇರುವ ಕಾರಣಕ್ಕೆ ವಕ್ಫ್ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು. https://ainlivenews.com/need-to-lose-weight-fast-eat-chia-seeds-at-this-time-of-day/ ಶಿಗ್ಗಾವಿ ಕ್ಷೇತ್ರದಲ್ಲಿ ಬೊಮ್ಮಾಯಿ ವಿರೋಧಿ ಅಲೆ ಇದೆ. ಕಾರಣ ಅಲ್ಲಿ ನಾವೇ ಗೆಲ್ಲುತ್ತೇವೆ. ಈ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ ಮೂರು ಪುರಸಭೆ, ಆರು ಜಿಲ್ಲಾ ಪಂಚಾಯತ್ , 23 ತಾಲೂಕ ಪಂಚಾಯತ್ ವಾರು ಹಾಗೂ ಅನೇಕ ಹಿರಿಯರ ಜತೆ ಸಭೆ ಮಾಡಿದ್ದೇವೆ. ಪಕ್ಷದ ಪದಾಧಿಕಾರಿಗಳಿಗೆ ಹಲವು ಸೂಚನೆ ಕೊಟ್ಟಿದ್ದೇವೆ. ನಮ್ಮ ಪ್ರಕಾರ ಶಿಗ್ಗಾವಿಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗ್ಯಾರಂಟಿ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಎಂ ಮತ್ತು ಡಿಸಿಎಂ…
ಹುಬ್ಬಳ್ಳಿ: ವಕ್ಫ್ ಗೆಜೆಟ್ ನೋಟಿಫಿ ಕೇಶನ್ ಮಾಡಿರುವುದರಲ್ಲಿ ಬಿಜೆಪಿ ಪಾಲಿದೆ. ಅವರೇ ನೋಟಿಸ್ ಕೊಟ್ಟು ನಾಟಕ ಮಾಡುತ್ತಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹರಿಹಾಯ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿಚಾರವಾಗಿ ಮೊದಲು ಪತ್ರ ಬರೆದಿದ್ದು ಬಿಜೆಪಿಯವರು. ಇದೀಗ ಚುನಾವಣೆ ಇದೆ ಎಂದು ನಾಟಕ ಮಾಡುತ್ತಿದ್ದಾರೆ. ಇದು ಕಪಟ ರಾಜಕೀಯ ನಾಟಕ. ಈ ವಿಚಾರವಾಗಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಕೇವಲ ಹಿಂದೂ ರೈತರು ಅಲ್ಲ, ಮುಸ್ಲಿಂ ರೈತರ ಜಮೀನಿಗೂ ನೋಟಿಸ್ ಕೊಡಲಾಗಿದೆ ಎಂದರು. https://ainlivenews.com/need-to-lose-weight-fast-eat-chia-seeds-at-this-time-of-day/ ವಕ್ಫ್ ಹಾಗೂ ಮಠ ರಾಷ್ಟ್ರೀಕರಣ ಮಾಡಿ ಅನ್ನುವುದುಅಪಾಯಕಾರಿ. ನಾವು ಮಾತನಾಡುವುದಕ್ಕೆ ಹೋದರೆ ಇವರ ಏನೇನೋ ಮಾತಾಡುತ್ತಾರೆ. ನಾವು ಎಲ್ಲಾ ಮಾತನಾಡಬೇಕಾಗುತ್ತದೆ ಎಂದರು. ಗದಗ ಜಿಲ್ಲೆಯಲ್ಲಿ ಯಾರಿಗೂ ನೋಟಿಸ್ ಕೊಟ್ಟಿಲ್ಲ.ವಕ್ಫ್ ಅಂದರೆ ದಾನ. ಅದು ಕೂಡ ಸರ್ಕಾರದ ಒಂದು ಭಾಗ. ದಾನ ಕೊಟ್ಟ ಜಮೀನು ವಿಚಾರವಾಗಿ ಮೇಲ್ವಿಚಾರಣೆ ಮಾಡುತ್ತಾರೆ. ನಾವು ನಿಮ್ಮ ಭೂಮಿ ತೆಗೆದುಕೊಳ್ಳಲು ಬರಲ್ಲ. ಶಿಗ್ಗಾವಿ ಉಪ ಚುನಾವಣೆ ಕಣ ರಂಗೇರುತಿದೆ. ಕಾಂಗ್ರೆಸ್ ಕಾರ್ಯಕರ್ತರು…
ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸುಗೂರು ಗ್ರಾಮದಲ್ಲಿ ನಡೆದಿದೆ. ಬಸವರಾಜ(47) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿರುವ ಮರಕ್ಕೆ ನಿನ್ನೆ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://ainlivenews.com/need-to-lose-weight-fast-eat-chia-seeds-at-this-time-of-day/ ಬ್ಯಾಂಕ್ ಹಾಗೂ ಕೈಸಾಲ ಸೇರಿ 5 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. 4 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದನು. ಅಧಿಕ ಮಳೆಯಿಂದ ಹತ್ತಿ ಬೆಳೆ ನಷ್ಟವಾಗಿತ್ತು. ಬೆಳೆ ಹಾನಿ ಹಾಗೂ ಸಾಲಬಾಧೆಯಿಂದ ನೊಂದಿದ್ದ ರೈತ ಬಸವರಾಜ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟೀಮ್ ಇಂಡಿಯಾ ಸೋಲಿನ ಬಗ್ಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸಚಿನ್ ತೆಂಡೂಲ್ಕರ್, ಟೀಮ್ ಇಂಡಿಯಾ ಪ್ರದರ್ಶನದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ಸರಣಿ ಸೋಲಿನ ಬಗ್ಗೆ ಅವರು 3 ದೊಡ್ಡ ಪ್ರಶ್ನೆಗಳನ್ನು ಕೇಳಿದ್ದಾರೆ https://ainlivenews.com/bcci-gate-pass-for-star-players-after-the-series-against-australia/#google_vignette ತವರು ನೆಲದಲ್ಲಿ ಭಾರತ ತಂಡವು 3-0 ಸೋತಿರುವುದು ಅರಗಿಸಿಕೊಳ್ಳಲಾಗದ ವಿಷಯ. ಇದು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸಮಯ. ಈ ಸೋಲಿಗೆ ಕಾರಣ ತಯಾರಿಯ ಕೊರತೆಯೇ? ಕಳಪೆ ಶಾಟ್ ಆಯ್ಕೆಯೇ? ಅಥವಾ ಪಂದ್ಯದ ಅಭ್ಯಾಸದ ಕೊರತೆಯೇ?’ ಎಂದು ಸಚಿನ್ ತೆಂಡೂಲ್ಕರ್ ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನಿಸಿದ್ದಾರೆ. ಟೀಮ್ ಇಂಡಿಯಾ ವೈಫಲ್ಯವನ್ನು ಪ್ರಶ್ನಿಸಿರುವ ಸಚಿನ್ ತೆಂಡೂಲ್ಕರ್ ಇಬ್ಬರು ಯುವ ಆಟಗಾರರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶುಭ್ಮನ್ ಗಿಲ್ 90 ರನ್ ಗಳಿಸಿದ್ದರು. ಪಂತ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಗಳಿಸುವಲ್ಲಿ ಯಶಸ್ವಿಯಾದರು. ಶುಭ್ಮನ್ ಗಿಲ್ ಮೊದಲ ಇನ್ನಿಂಗ್ಸ್‌ನಲ್ಲಿ ಕ್ರೀಸ್ ಕಚ್ಚಿ ಆಡುವುದನ್ನು ತೋರಿಸಿದರು ಮತ್ತು…
ಆಸ್ಟ್ರೇಲಿಯಾ ವಿರುದ್ಧದ ಸರಣಿ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್ ಕೊಡಲು BCCI ನಿರ್ಧಾರ ಮಾಡಿದೆ. https://ainlivenews.com/resign-or-i-will-kill-you-like-baba-siddique-woman-who-threatened-up-cm-arrested/ ಪ್ರಸ್ತುತ ತಂಡದಲ್ಲಿರುವ ಹಿರಿಯ ಆಟಗಾರರೆಂದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಈ ನಾಲ್ವರಲ್ಲಿ ಇಬ್ಬರು ಭಾರತ ತಂಡದಿಂದ ಹೊರಬೀಳಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅದಕ್ಕೂ ಮುನ್ನ ಈ ನಾಲ್ವರು ಉತ್ತಮ ಪ್ರದರ್ಶನ ನೀಡಿದರೆ ತಂಡದಲ್ಲೇ ಉಳಿದುಕೊಳ್ಳಬಹುದು. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನಾಲ್ವರ ಪಾಲಿಗೆ ನಿರ್ಣಾಯಕ. ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ತಲುಪಲು ವಿಫಲರಾದರೆ, ಹಿರಿಯ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇಬ್ಬರು ಆಟಗಾರರಿಗೆ ಗೇಟ್ ಪಾಸ್ ನೀಡಲಿದ್ದಾರೆ. ಇನ್ನುಳಿದ ಹಿರಿಯ ಆಟಗಾರರ ಪ್ರದರ್ಶನದ ಮೇಲೂ ನಿಗಾಯಿಡುವಂತೆ ಆಯ್ಕೆ ಸಮಿತಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ…