ಆಸ್ಟ್ರೇಲಿಯಾ ವಿರುದ್ಧದ ಸರಣಿ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್ ಕೊಡಲು BCCI ನಿರ್ಧಾರ ಮಾಡಿದೆ. https://ainlivenews.com/resign-or-i-will-kill-you-like-baba-siddique-woman-who-threatened-up-cm-arrested/ ಪ್ರಸ್ತುತ ತಂಡದಲ್ಲಿರುವ ಹಿರಿಯ ಆಟಗಾರರೆಂದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಈ ನಾಲ್ವರಲ್ಲಿ ಇಬ್ಬರು ಭಾರತ ತಂಡದಿಂದ ಹೊರಬೀಳಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅದಕ್ಕೂ ಮುನ್ನ ಈ ನಾಲ್ವರು ಉತ್ತಮ ಪ್ರದರ್ಶನ ನೀಡಿದರೆ ತಂಡದಲ್ಲೇ ಉಳಿದುಕೊಳ್ಳಬಹುದು. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನಾಲ್ವರ ಪಾಲಿಗೆ ನಿರ್ಣಾಯಕ. ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ತಲುಪಲು ವಿಫಲರಾದರೆ, ಹಿರಿಯ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇಬ್ಬರು ಆಟಗಾರರಿಗೆ ಗೇಟ್ ಪಾಸ್ ನೀಡಲಿದ್ದಾರೆ. ಇನ್ನುಳಿದ ಹಿರಿಯ ಆಟಗಾರರ ಪ್ರದರ್ಶನದ ಮೇಲೂ ನಿಗಾಯಿಡುವಂತೆ ಆಯ್ಕೆ ಸಮಿತಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ…
Author: AIN Author
ಮುಂಬೈ: 10 ದಿನದೊಳಗಾಗಿ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ರನ್ನ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡುವುದಾಗಿ ಬೆದರಿಕೆಯ ಸಂದೇಶ ಕಳುಹಿಸಿದ್ದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಟ್ರಾಫಿಕ್ ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಪ್ ಸಹಾಯವಾಣಿ ಸಂಖ್ಯೆಗೆ ಶನಿವಾರ ಸಂಜೆ ಅಪರಿಚಿತ ನಂಬರ್‌ನಿಂದ ಜೀವ ಬೆದರಿಕೆ ಸಂದೇಶ ಬಂದಿದೆ. ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡಲಾಗುವುದು ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. https://ainlivenews.com/need-to-lose-weight-fast-eat-chia-seeds-at-this-time-of-day/ ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ಯುಪಿ ಸಿಎಂ ಕೊಲೆ ಬೆದರಿಕೆ ಹಿಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯ ಸರಮಾಲೆಯ ನಡುವೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿಗೂ ಬೆದರಿಕೆ ಬಂದಿದೆ. ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಅವರನ್ನು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು.
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಪ್ರತಿಷ್ಟಿತ ಏರಿಯಾದಲ್ಲಿ ಅನಧಿಕೃತ ಆಸ್ಪತ್ರೆ ಕಟ್ಟಡ ತಲೆ ಎತ್ತಿದ್ದು, ಬಿಬಿಎಂಪಿ ನಿರ್ಲಕ್ಷ್ಯ ವಹಿಸಿದೆ. ಇರುವ ನಿಯಮಗಳನ್ನೆಲ್ಲ ಉಲ್ಲಂಘಿಸಿ ಕಟ್ಟಡ ತಲೆ ಎತ್ತುತ್ತಿದ್ದರೆ, ಮತ್ತೊಂದೆಡೆ ರೆಸಿಡೆನ್ಸಿಯಲ್ ಏರಿಯಾದಲ್ಲಿ ನಿರ್ಮಾಣವಾಗುತ್ತಿರುವ ಈ ಆಸ್ಪತ್ರೆ ಕಟ್ಟಡ ಅಕ್ಕಪಕ್ಕದ ನಿವಾಸಿಗಳಿಗೆ ಮತ್ತಷ್ಟು ಸಂಕಷ್ಟ ತಂದಿಟ್ಟಿದೆ. ಸತತ ನಾಲ್ಕು ವರ್ಷಗಳಿಂದ ಇಲ್ಲಿನ ಜನರು ಕಟ್ಟಡ ನಿರ್ಮಾಣ ಬೇಡ ಎಂದು ಹೋರಾಟ ನಡೆಸ್ತಿದ್ದರೂ ಕೂಡ ಪಾಲಿಕೆ ಮೌನವಾಗಿರುವುದು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. https://ainlivenews.com/another-big-golmal-case-in-muda-do-you-know-what/ ಇತ್ತೀಚೆಗಷ್ಟೇ ಬಾಬುಸ್ ಪಾಳ್ಯದ ಅನಧಿಕೃತ ಕಟ್ಟಡ ಕುಸಿದು 9 ಜನ ಕಾರ್ಮಿಕರು ಬಲಿಯಾಗಿದ್ದರು. ಇದಾದ ಬಳಿಕ ರಾಜಧಾನಿಯ ಅನಧಿಕೃತ ಕಟ್ಟಡಗಳ ಬಗ್ಗೆ ಸರ್ವೇ ಮಾಡಿ ಕ್ರಮ ಕೈಗೊಳ್ಳುವಂತೆ ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿಗೆ ಖಡಕ್ ಸೂಚನೆ ನೀಡಿದ್ದರು. ಆದರೆ, ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪಾಲಿಕೆ ಬೊಬ್ಬೆಹಾಕಿದರೂ ರಾಜಧಾನಿಯ ಅನಧಿಕೃತ ಕಟ್ಟಡಗಳಿಗೆ ಮಾತ್ರ ಕಡಿವಾಣ ಬಿದ್ದಿಲ್ಲ. ಕಮ್ಮನಹಳ್ಳಿಯ ರಾಮಸ್ವಾಮಿಪಾಳ್ಯದಲ್ಲಿಅನಧಿಕೃತ ಆಸ್ಪತ್ರೆ ಕಟ್ಟಡ ತಲೆ ಎತ್ತುತ್ತಿರುವ ಬಗ್ಗೆ ಪಾಲಿಕೆ ಅಧಿಕಾರಿಗಳು ಕಂಡರೂ ಕಾಣದಂತಿದ್ದಾರೆ. 15…
ಬೆಂಗಳೂರು:- ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಲ್ಲೂ ಟ್ರಾಫಿಕ್ ಜಾಮ್ ಉಂಟಾಗಿದೆ. https://ainlivenews.com/notice-that-43-tourist-spots-are-waqf-property/ ಬೆಂಗಳೂರು-ತುಮಕೂರು ರಸ್ತೆ, ಕೆ.ಆರ್ ಪುರಂ ಮುಖ್ಯರಸ್ತೆ ಹಾಗೂ ಗೊರಗುಂಟೆಪಾಳ್ಯದಿಂದ ಗೋವರ್ಧನ್ ವೃತ್ತದ ವರೆಗೂ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾನುವಾರ ತಡರಾತ್ರಿಯಿಂದಲೇ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದ್ದು, ಇದರಿಂದ ಅನ್ಯಜಿಲ್ಲೆಯ ಉದ್ಯೋಗಿಗಳು ಪರದಾಡುವಂತಾಗಿದೆ. ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಜನ ದಾಂಗುಡಿ ಇಡುತ್ತಿದ್ದಾರೆ. ಹೀಗಾಗಿ ತುಮಕೂರು ರಸ್ತೆಯಲ್ಲಿ ಜನರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಟ್ರಾಫಿಕ್‌ಗೆ ಬೇಸತ್ತು ನಾಗಸಂಧ್ರ ಮೆಟ್ರೋ ನಿಲ್ದಾಣದ ಬಳಿ ಇಳಿದು ಜನ ಮೆಟ್ರೋ ಸಂಚಾರದ ಮೊರೆ ಹೋಗುತ್ತಿದ್ದಾರೆ. ಈ ಹಿನ್ನಲೆ ನಾಗಸಂಧ್ರ ಮೆಟ್ರೋ ನಿಲ್ದಾಣ ಫುಲ್ ರಶ್ ಆಗಿದೆ. ನಗರದ ಗೊರಗುಂಟೆಪಾಳ್ಯದ ಬಳಿಯೂ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆ ಇದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆ ನೀಡಲಾಗುತ್ತದೆ. ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರು. ಇದೆ. ಹೀಗಾಗಿ ಪ್ರಾಧಿಕಾರದ ಹಣಕಾಸು ಶಾಖೆ ಅವರು ಬ್ಯಾಂಕ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ. ಈ ಪತ್ರಕ್ಕೆ ಬ್ಯಾಂಕ್ ಬರೋಡಾ ವ್ಯವಸ್ಥಾಪಕರು ಉತ್ತರ ನೀಡಿ ನೀವು ಕೇಳಿರುವ 93 ಜನರ ಹಣ ಬ್ಯಾಂಕ್‌ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. https://ainlivenews.com/need-to-lose-weight-fast-eat-chia-seeds-at-this-time-of-day/ ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡು ನಕಲಿ ಮಾಡಿಕೊಂಡು ಹಣ…
ಟೀಮ್ ಇಂಡಿಯಾ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದ್ದು, ಸ್ಟಾರ್ ವಿಕೆಟ್ ಕೀಪರ್ ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ. https://ainlivenews.com/rain-alert-chance-of-rain-again-in-karnataka-from-next-week/ ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್ ಸಾಹ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಬಂಗಾಳ ಪರ ಕಣಕ್ಕಿಳಿದಿರುವ ಸಾಹ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ 17 ವರ್ಷಗಳ ಸುದೀರ್ಘ ವೃತ್ತಿಜೀವನವನ್ನು ಕೊನೆಗೊಳಿಸಲು ವೃದ್ಧಿಮಾನ್ ಸಾಹ ನಿರ್ಧರಿಸಿದ್ದಾರೆ. ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ ಸಾಹ 15 ವರ್ಷಗಳ ಕಾಲ ಬಂಗಾಳ ಪರವಾಗಿ ಮತ್ತು 2 ವರ್ಷಗಳ ಕಾಲ ತ್ರಿಪುರಾ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ. ಇನ್ನು 2010 ರಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ವೃದ್ಧಿಮಾನ್ ಸಾಹ 40 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ 56 ಇನಿಂಗ್ಸ್ ಆಡಿರುವ ಅವರು 3 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1353 ರನ್…
ವಿಜಯಪುರ: ರೈತರ ಭೂಮಿಯನ್ನ ವಕ್ಫ್ ಬೋರ್ಡ್ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ. ಸ್ಮಾರಕಗಳೂ ಸೇರಿದಂತೆ ವಿಜಯಪುರ ಜಿಲ್ಲೆಯ 43 ಪ್ರವಾಸಿ ತಾಣಗಳು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ನೂರಾರು ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ಭೂಮಿ ವಕ್ಫ್ ಆಸ್ತಿ ಎಂದು ಮಂಡಳಿ ಹೊನವಾಡ ಗ್ರಾಮದ 15 ರೈತರಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿತ್ತು. ಕಳೆದ ಒಂದು ದಿನದ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. https://ainlivenews.com/need-to-lose-weight-fast-eat-chia-seeds-at-this-time-of-day/ ಈ ಬೆನ್ನಲ್ಲೇ ವಿಜಯಪುರದಲ್ಲಿ ಪ್ರವಾಸಿ ತಾಣಗಳಿಗೆ ನೋಟಿಸ್ ನೀಡಿರುವುದು ಬೆಳಕಿಗೆ ಬಂದಿದೆ. ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್ ನೋಟಿಸ್ ನೀಡಿದ್ದು, ಇದಕ್ಕೆ ಸಂಸದ ರಮೇಶ್ ಜಿಗಜಿಣಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಪ್ರವಾಸಿ ತಾಣಗಳು, ಸ್ಮಾರಕಗಳಿಗೆ ನೀಡಿರುವ ವಕ್ಫ್ ನೋಟಿಸ್‌ಗಳನ್ನು ಹಿಂಪಡೆಯುವಂತೆ ಸರ್ಕಾರ ಆದೇಶ ನೀಡಬೇಕು ಎಂದು…
ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ ವಾರದಿಂದ ಮತ್ತೆ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainlivenews.com/bjp-protests-across-karnataka-today/ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ ಎಚ್ಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದಾವಣಗೆರೆ: ಹರಿಹರದ ಕೋಮರನಹಳ್ಳ ಗುಡ್ಡದಲ್ಲಿ ಮುಸಲ್ಮಾನರು ಝಂಡಾ ಕಟ್ಟೆ ಮಾಡಿ, ಅಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಆರೋಪ ಮಾಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಕ್ಫ್ ಬೋರ್ಡ್ ಆಸ್ತಿ ವಿವಾದದ ವಿಚಾರವಾಗಿ ಪ್ರತಿಕ್ರಿಯಿಸಿದರು. ಗುಡ್ಡದ ಅರಣ್ಯ ಪ್ರದೇಶದಲ್ಲಿ ಇವರು ಹೀಗೆ ಒತ್ತುವರಿ ಮಾಡಿಕೊಂಡರೆ ಇಲಾಖೆಯವರು ಸುಮ್ನೆ ಇರ್ತಾರೆ. ಆದರೆ ರೈತರ ಮೇಲೆ ಮಾತ್ರ ದಬ್ಬಾಳಿಕೆ ಮಾಡ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://ainlivenews.com/need-to-lose-weight-fast-eat-chia-seeds-at-this-time-of-day/ ವಕ್ಫ್ ಬೋರ್ಡ್ ದೇಶಕ್ಕೆ ಮಾರಕವಾದ ಮಂಡಳಿಯಾಗಿದೆ. ಕಾಂಗ್ರೆಸ್‍ನ ಕೆಲ ನಾಯಕರು ಸದ್ದಿಲ್ಲದೆ ಭೂಮಿಯನ್ನು ವಕ್ಫ್‌ಗೆ ನೀಡಿದ್ದಾರೆ. ಯಾವಾಗ ಜನಾಕ್ರೋಶ ಆರಂಭವಾಯ್ತೋ ಆಗ ರಾಜ್ಯ ಸರ್ಕಾರ ಯು-ಟರ್ನ್ ಹೊಡೆದಿದೆ. ಮೂರು ಕ್ಷೇತ್ರಗಳ ಉಪಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಎಂದು ನೋಟಿಸ್ ವಾಪಸ್ಸು ಪಡೆದಿದ್ದೇವೆ ಎಂದು ಹೇಳಿದ್ದಾರೆ. ಅದರ ಜೊತೆ ಪಹಣಿಯಲ್ಲಿರುವ ವಕ್ಫ್ ಹೆಸರನ್ನು ಕೂಡ ತೆಗೆಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು:- ವಿಜಯಪುರ ಸೇರಿ ರಾಜ್ಯದ ಅನೇಕ ಜಿಲ್ಲೆಗಳ ರೈತರಿಗೆ ವಕ್ಫ್ ಬೋರ್ಡ್ ಕೊಟ್ಟಿರುವ ನೋಟಿಸ್ ವಿರುದ್ಧ ವಿಪಕ್ಷ ಬಿಜೆಪಿ ಕಿರಿಕಾರಿದ್ದು, ಇಂದು ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. https://ainlivenews.com/griha-lakshmi-is-a-woman-who-bought-a-khara-pudi-modo-machine-with-money/ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ ಕಾರಣವಾದ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಎಲ್ಲ ತಾಲೂಕುಗಳ ತಾಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇನ್ನೂ ಸರ್ಕಾರದ ಸೂಚನೆ ನಂತರವೂ ಬಿಜೆಪಿ ಪ್ರತಿಭಟನೆಗೆ ಮುಂದಾಗಿರೋದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆ. ರೈತರ ಹಿತಾಸಕ್ತಿ ರಕ್ಷಣೆಯ ಸದುದ್ದೇಶ ಇಲ್ಲ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ರಾಜ್ಯದ ಜನರನ್ನು ಸಿಎಂ ಕೋರಿದ್ದಾರೆ.