ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ಗರಿಗೆದರುತ್ತಿದೆ. ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹಾಗೂ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭರ್ಜರಿಯಾಗಿಯೇ ಮತಭೇಟೆಗೆ ಇಳಿದಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಇಬ್ಬರ ನಡುವಿನ ಪೈಪೋಟಿ ತೀವ್ರಗೊಳ್ಳುತ್ತಿದ್ದು, NDA ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ ಪರವಾಗಿ ಆರ್ಯವೈಶ್ಯ ಸಮಾಜದ ಮುಖಂಡರ ಮನೆ ಮನೆಗೆ ತೆರಳಿ ವಿಧಾನ ಪರಿಷತ್ ಶಾಸಕರಾದ ಟಿ.ಎ ಶರವಣ ಅವರು ಮತಯಾಚನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ಸುರೇಶ್ , ಸುಬ್ಬಯ ಶೆಟ್ಟಿ ಸೇರಿದಂತೆ ಹಲವಾರು ಸಮಾಜದ ನಾಯಕರು ಹಾಜರಿದ್ದರು. ಇನ್ನೂ ಈ ವೇಳೆ ಮಾತನಾಡಿದ ಟಿ.ಎ ಶರವಣ ಅವರು, ನಿಖಿಲ್ ಕುಮಾರಸ್ವಾಮಿರವರು NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ಗೆಲುವಿಗಾಗಿ ಎಲ್ಲರೂ ಸೇರಿ ಶ್ರಮಿಸಬೇಕಾಗಿದೆ. ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು ಕ್ಷೇತ್ರದ ಒಳಿತಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರು ಕೇಂದ್ರ ಸಚಿವರಾಗಿರುವುದರಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿ, ಜೆಡಿಎಸ್…
Author: AIN Author
ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಭಾನುವಾರ ಬಿಡುಗಡೆಗೊಳಿಸಿದರು. https://ainlivenews.com/f-you-just-invest-1-lakh-1-crore-is-enough-it-will-be-yours-how-do-you-know/ ಬಿಜೆಪಿ ಜಾರ್ಖಂಡ್‌ನಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ. ನೀಡುವುದು ಸೇರಿದಂತೆ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ಬಿಜೆಪಿ ಪ್ರಣಾಳಿಕೆ ಏನು? * ಪ್ರತಿ ಮನೆಗೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್ ಮತ್ತು ವಾರ್ಷಿಕ 2 ಉಚಿತ ಸಿಲಿಂಡರ್ * ನುಸುಳುಕೋರರು ಆಕ್ರಮಿಸಿಕೊಂಡಿರುವ ಆದಿವಾಸಿಗಳ ಭೂಮಿಯನ್ನು ಆದಿವಾಸಿಗಳಿಗೆ ಹಿಂದಿರುಗಿಸುವುದಾಗಿ ಪ್ರತಿಜ್ಞೆ * ಬುಡಕಟ್ಟು ಜನಾಂಗದವರನ್ನು ಮದುವೆಯಾಗುವ ನುಸುಳುಕೋರರ ಮಕ್ಕಳಿಗೆ ಬುಡಕಟ್ಟು ಸ್ಥಾನಮಾನ ರದ್ದು * ಆದಿವಾಸಿಗಳನ್ನು ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ವ್ಯಾಪ್ತಿಯಿಂದ ಹೊರಗಿಡಲಾಗುವುದು * ಪ್ರಶ್ನೆ ಪತ್ರಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದಾಗಿ ಭರವಸೆ * 5 ವರ್ಷಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ಅವಕಾಶಗಳನ್ನು ಖಾತರಿಪಡಿಸುತ್ತೇವೆ * 2,87,500 ಸರ್ಕಾರಿ ಹುದ್ದೆಗಳ ನೇಮಕಾತಿ ಪಾರದರ್ಶಕವಾಗಿ ನಡೆಯಲಿದ್ದು, ಮೊದಲ…
ಬೆಂಗಳೂರು: ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಮೂವರು ಖತರ್ನಾಕ್‌ಗಳನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಸಾಫ್ಟ್‌ವೇರ್ ಮೂಲಕ ಹ್ಯಾಕ್ ಮಾಡಿ ಕಾರುಗಳ ಡೋರ್ ಓಪನ್ ಮಾಡುತ್ತಿದ್ದರು. ಇದರಿಂದ ಸುಲಭವಾಗಿ ಕಾರು ಕದ್ದು ಎಸ್ಕೇಪ್ ಆಗುತ್ತಿದ್ದರು. ಸದ್ಯ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. https://ainlivenews.com/f-you-just-invest-1-lakh-1-crore-is-enough-it-will-be-yours-how-do-you-know/ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕಾರು ಕಳವು ಮಾಡಿರುವುದು ಗೊತ್ತಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.
ಬೆಂಗಳೂರು: ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಗುರುಪ್ರಸಾದ್ ಕನ್ನಡ ಚಿತ್ರರಂಗದ ಅದ್ಭುತ ಪ್ರತಿಭಾವಂತ ನಿರ್ದೇಶಕ. ಚಿತ್ರರಂಗಕ್ಕೆ ಬಂದು ಬೇರೆಲ್ಲರಂತೆ ಕಷ್ಟ ಪಡಬಾರದು,ಇತರರಿಗೆ ಹೊರೆಯಾಗಬಾರದು ಎಂದು ವ್ಯವಸ್ಥಿತವಾಗಿ ಬಣ್ಣದ ಜಗತ್ತಿಗೆ ಬಂದಿದ್ದವರು ಗುರುಪ್ರಸಾದ್. ಆದರೆ ಇಂಥ ಗುರುಪ್ರಸಾದ್ ಎಲ್ಲಿ ಎಡವಿದರೋ ಗೊತ್ತಿಲ್ಲ. ಯಾವೆಲ್ಲವನ್ನೂ ತಪ್ಪು ಅಂತಾ ಗುರು ಗುರುತು ಮಾಡಿ ಹೇಳುತ್ತಿದ್ದರೋ ಅದೇ ಯಡವಟ್ಟುಗಳನ್ನು ಸ್ವತಃ ಮಾಡಿಕೊಂಡರು. https://ainlivenews.com/f-you-just-invest-1-lakh-1-crore-is-enough-it-will-be-yours-how-do-you-know/ ನಿರ್ದೇಶಕ ಗುರುಪ್ರಸಾದ್ ಕಳೆದ ವರ್ಷ ಚೆಕ್ ಬೌನ್ಸ್ ಕೇಸ್ವೊಂದರಲ್ಲಿ ಅರೆಸ್ಟ್ ಆಗಿದ್ದರು.ಇದಾದ ಬಳಿಕ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂಬ ಮಾತುಗಳು ಕೇಳಿಬರುತ್ತಿವೆ. ಅಷ್ಟೇ ಅಲ್ಲದೆ ಜಯನಗರದ…
ಕೋಲಾರ: ಸರ್ಕಾರಿ ಜಾಗಗಳನ್ನು ವೋಟ್ ಬ್ಯಾಂಕ್ʼಗಾಗಿ ಮುಸ್ಲಿಮರಿಗೆ ಕೊಡುತ್ತಿದ್ದಾರೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ ಕಾಂಗಗ್ರೆಸ್ ವಿರುದ್ಧ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೂಗಳ ಸ್ಮಶಾನ ಜಾಗ, ರೈತರ ಜಾಗ, ವಂಶಪಾರಂಪರ್ಯವಾಗಿ ಬಂದ ಜಮೀನುಗಳನ್ನು ರಾತ್ರೋರಾತ್ರಿ ಖಾತೆ ಬದಲಾವಣೆ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದವರ ಅಸಲಿ ಬಣ್ಣ ಈಗ ಎಲ್ಲರಿಗೂ ಗೊತ್ತಾಗುತ್ತಿದೆ ಎಂದರು. ಕೋಲಾರದ ಸಂಗೊಂಡಹಳ್ಳಿ ದೇವಸ್ಥಾನ ಜಾಗದಲ್ಲಿ ಮಸೀದಿ ನಿರ್ಮಿಸಿದ್ದಾರೆ. ಕುಡಿಯನೂರು, ಲಕ್ಕೂರು ಆಂಜನೇಯ ದೇವಸ್ಥಾನದ ಜಾಗ, ಮುಳಬಾಗಿಲಿನ ಬೆಟ್ಟದ ಕೆಳಗಡೆಯ ಜಾಗ, ಅಂತರಗಂಗೆ ಬೆಟ್ಟದ ಸರ್ಕಾರಿ ಜಾಗಗಳನ್ನು ವೋಟ್ ಬ್ಯಾಂಕ್ ಗಾಗಿ ಮುಸ್ಲಿಮರಿಗೆ ಕೊಡುತ್ತಿದ್ದಾರೆ. https://ainlivenews.com/f-you-just-invest-1-lakh-1-crore-is-enough-it-will-be-yours-how-do-you-know/ ಹಿಂದೂಸ್ತಾನ – ಪಾಕಿಸ್ತಾನ ಅಂತ ದೇಶ ವಿಭಜನೆ ವೇಳೆ ಎಲ್ಲಾ ಜಾಗವೂ ಹಿಂದೂಸ್ತಾನಕ್ಕೆ ಸೇರಿದ್ದು. ಆದ್ರೆ ಈಗ ಲಕ್ಷಾಂತರ ಕೋಟಿ ರೂ. ಮೌಲ್ಯದ ಜಮೀನುಗಳನ್ನು ಕಾನೂನು ಬಾಹಿರವಾಗಿ ವಕ್ಫ್ ಬೋರ್ಡ್ ಗೆ ಬರೆದಿದ್ದಾರೆ. ಸಚಿವ ಜಮೀರ್ ಅಹಮದ್ ಖಾನ್ ಪಾಕಿಸ್ತಾನ ಏಜೆಂಟ್ ಆಗಿದ್ದಾರೆ. ಪಾಕಿಸ್ತಾನದವರ ಮೇಲೆ ಹೆಚ್ಚು ಪ್ರೀತಿಯಾಗಿ ಅಧಿಕಾರಿಗಳ…
ಬೆಂಗಳೂರು: ನಿರ್ದೇಶಕ, ನಟ, ಬರಹಗಾರ ಮಠ ಖ್ಯಾತಿಯ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದು ಈಗ ಎಲ್ಲರಲ್ಲೂ ಅಚ್ಚರಿಯನ್ನುಂಟು ಮಾಡಿದೆ. ಇನ್ನೂ ನಟ ತಬಲಾ ನಾಣಿ ಗುರುಪ್ರಸಾದ್ ಕಂಬನಿ ಮಿಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನಗೆ ಕನ್ನಡ ಚಿತ್ರರಂಗದಲ್ಲಿ ಜೀವನ ಕೊಟ್ಟವರು ಗುರುಪ್ರಸಾದ್ ಎಂದಿದ್ದಾರೆ. ಗುರುಪ್ರಸಾದ್ ಆತ್ಮಹತ್ಯೆ ಸುದ್ದಿ ಕೇಳಿ ಬೇಜಾರಾಯಿತು. ಅವರು 10 ಜನಕ್ಕೆ ಆಗೋವಷ್ಟು ಬುದ್ಧಿವಂತ, ಅವರಿಗೆ ಅಷ್ಟು ತಲೆ ಇತ್ತು. ಏನಿಕ್ಕೆ ಹೀಗೆ ಮಾಡಿಕೊಂಡರು ಗೊತ್ತಾಗುತ್ತಿಲ್ಲ. ಸಹವಾಸಗಳ ಸಮಸ್ಯೆನೋ, ಕೆಟ್ಟ ಚಟಗಳ ಸಮಸ್ಯೆಯೋ ತಿಳಿಯುತ್ತಿಲ್ಲ. ಈಗ ನಾವೇನಾದ್ರೂ ಮಾತನಾಡಿದ್ರೆ ಗುರು ನಿಂದನೆಯಾಗುತ್ತದೆ. ನನಗೆ ಚಿತ್ರರಂಗದಲ್ಲಿ ಜೀವನ ಕೊಟ್ಟವರು ಗುರುಪ್ರಸಾದ್. ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಟೀಮ್ ಅದೆಷ್ಟು ಚೆನ್ನಾಗಿತ್ತು ಎಂದು ಸ್ಮರಿಸಿದರು. https://ainlivenews.com/f-you-just-invest-1-lakh-1-crore-is-enough-it-will-be-yours-how-do-you-know/ ಕಡೆಯದಾಗಿ ಒಂದು ಫಂಕ್ಷನ್‌ನಲ್ಲಿ ಸಿಕ್ಕಿದ್ದರು. ಎಷ್ಟು ಟ್ಯಾಲೆಂಟೆಡ್ ಆಗಿದ್ರೂ, ಅವರು ಹೀಗೆ ಮಾಡಿಕೊಂಡಿದ್ದಾರೆ ಅಂದರೆ ನಂಬೋಕೆ ಆಗ್ತಿಲ್ಲ. ಕೆಲಸದಲ್ಲಿ ಪಾದರಸದ ಹಾಗೇ ಇದ್ರೂ, ಒಂದು ಕೇಳಿದ್ರೆ 10 ಉತ್ತರ ಕೊಡುತ್ತಿದ್ದರು. ಮೊದಲ ಬಾರಿಗೆ ಅವರನ್ನು ಭೇಟಿಯಾದಾಗ ಒಂದು…
ನವದೆಹಲಿ: ಚೀನಾದ ನಿರ್ದೇಶನದ ಮೇರೆಗೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಮತ್ತು ರಾಂಬನ್ ಜಿಲ್ಲೆಗಳನ್ನು ಸಂಪರ್ಕಿಸುವ ಚೆನಾಬ್ ರೈಲ್ವೆ ಸೇತುವೆ ಬಗ್ಗೆ ಪಾಕಿಸ್ತಾನ ಮತ್ತು ಚೀನಾದ ಗುಪ್ತಚರ ಸಂಸ್ಥೆ ಐಎಸ್‌ಐ ಮಾಹಿತಿ ಸಂಗ್ರಹ ಮಾಡುತ್ತಿದೆ ಎಂದು ವರದಿಯಾಗಿದೆ. ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯು ಇತ್ತೀಚೆಗೆ ಪ್ರಾಯೋಗಿಕ ಕಾರ್ಯಾಚರಣೆ ಪ್ರಾರಂಭಿಸಿತು. ಈ ಸೇತುವೆ ಜಮ್ಮು ಮತ್ತು ಕಾಶ್ಮೀರ ಹಾಗೂ ದೇಶದ ಇತರ ಭಾಗಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಮೂಲಗಳ ಪ್ರಕಾರ ಪಾಕಿಸ್ತಾನ ಮತ್ತು ಚೀನಾದ ಗುಪ್ತಚರ ಸಂಸ್ಥೆಗಳು ಈ ಸೇತುವೆಯ ಬಗ್ಗೆ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಿವೆ. https://ainlivenews.com/by-following-this-method-if-you-grow-a-ball-flower-you-can-earn-lakhs-in-1-acre/ ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಈ ಸೇತುವೆಯ ನಿರ್ಮಾಣ ಪೂರ್ಣಗೊಳಿಸಲು ಸರ್ಕಾರಕ್ಕೆ 20 ವರ್ಷಗಳು ಬೇಕಾಯಿತು. ಇದರ ನಿರ್ಮಾಣಕ್ಕೆ ಸಮಯದ ಮಿತಿ ಹೇರಿರಲಿಲ್ಲ. ಜಮ್ಮುವಿನ ಮೂಲಕ ಹಾದುಹೋಗುವ 272 ಕಿಮೀ ಉದ್ದದ ಸೇತುವೆ ಆಲ್-ವೆದರ್ ರೈಲ್ವೆ ವಿಭಾಗದ ಒಂದು ಭಾಗವಾಗಿದೆ, ಇದು ಅಂತಿಮವಾಗಿ ಕಾಶ್ಮೀರವನ್ನು ಸಂಪರ್ಕಿಸಲಿದೆ. ಭಾರಿ ಹಿಮಪಾತದಿಂದ ಚಳಿಗಾಲದಲ್ಲಿ ರಸ್ತೆಗಳ ಬ್ಲಾಕ್…
ಬೆಳಗಾವಿ: ನಗರದ ಪ್ರತಿಯೊಂದು ಬೀದಿಯಲ್ಲಿ ಕನ್ನಡದ ಬಾವುಟಗಳು ರಾರಾಜಿಸುತ್ತಿತ್ತು. ಆದರೆ ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ MES ಸಂಘಟನೆ ಕರಾಳ ದಿನ ಆಚರಣೆ ಮಾಡಿದ್ದಾರೆ. ಹೌದು ನವೆಂಬರ್ 1ರಂದು ‘ಕರಾಳ ದಿನ’ ಆಚರಣೆಗೆ ಬೆಳಗಾವಿ ಜಿಲ್ಲಾಡಳಿತ ನಿಷೇಧ ಹೇರಿದ ಬಳಿಕವೂ ನಗರದಲ್ಲಿ ಬೃಹತ್ ‘ಕರಾಳ ದಿನ’ ರ್‍ಯಾಲಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಕರಾಳ ದಿನಾಚರಣೆಯಲ್ಲಿ ಭಾಗವಿಸಿದ ಎಲ್ಲರ ವಿರುದ್ಧವೂ ದೂರು ದಾಖಲಾಗಿದೆ. ಮಹರಾಷ್ಟ್ರ ಏಕೀಕರಣ ಸಮಿತಿಯ 46 ಜನ ಮುಖಂಡರು ಸೇರಿದಂತೆ 1,500 ಜನರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಜಿ ಶಾಸಕ ಮನೋಹರ ಕಿಣೇಕರ, ಎಮ್ಇಡಿ ಮುಖಂಡ ಶುಭಂ ಶಳಕೆ, ರಮಾಕಾಂತ ಕೊಂಡುಸ್ಕರ, ವಿಕಾಸ ಕಲಘಟಗಿ ಶಿವಸೇನೆ ಮುಖಂಡ ಪ್ರಕಾಶ ಮರಗಾಳೆ ಸೇರಿದಂತೆ 46 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. https://ainlivenews.com/f-you-just-invest-1-lakh-1-crore-is-enough-it-will-be-yours-how-do-you-know/ ಎಂಇಎಸ್ ಕಾರ್ಯಕರ್ತರು ನವೆಂಬರ್ 1ರಂದು ಜಿಲ್ಲಾಡಳಿತ ಅನುಮತಿ ಇಲ್ಲದೇ ಕರಾಳ ದಿನ ಮೆರವಣಿಗೆ ಮಾಡಿದ್ದರು. ನಗರದ ಧರ್ಮವೀರ ಸಂಭಾಜಿ ಮೈದಾನದಿಂದ ಮರಾಠಾ ಮಂದಿರವರೆಗೂ ಮೆರವಣಿಗೆ…
ಬೆಂಗಳೂರು: ಶಕ್ತಿ ಯೋಜನೆ ಬಹಳ ದಿನ ನಡೆಯುವುದಿಲ್ಲ ಎಂದು ಹೇಳಿರುವ ಆರ್ ಅಶೋಕ್ ಹೇಳಿಕೆಗೆ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಬಹಿರಂಗ ಚರ್ಚೆಗೂ ಆಹ್ವಾನಿಸಿದ್ದಾರೆ. ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ. ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಏಕೆಂದರೆ ಅಂಕಿಅಂಶಗಳು ಇದನ್ನು ಸಾಬೀತುಪಡಿಸುತ್ತವೆ. ನಾವು ನಿಮ್ಮಗಳ ರೀತಿ ಗಾಳಿಯಲ್ಲಿ ಗುಂಡು ಹಾರಿಸೊಲ್ಲ, ಅಂಕಿಅಂಶಗಳೇ ನಮ್ಮ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂದರು. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಯಾವ ಸಾಧನೆಗಳನ್ನು ಮಾಡಿದ್ದೀರ ಎಂಬ ಪಟ್ಟಿ ಕೊಟ್ಟರೆ ನಾವು ನಿಮ್ಮೊಡನೆ ನೇರಾನೇರ ಚರ್ಚಿಸಲು ಬಯಸುತ್ತೇವೆ ಎಂದು ಆಹ್ವಾನ ನೀಡಿದ್ದಾರೆ. https://ainlivenews.com/f-you-just-invest-1-lakh-1-crore-is-enough-it-will-be-yours-how-do-you-know/ ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಅಧಿಕಾರಾವಧಿಯಲ್ಲಿ ಎಂಬ ಕಟುವಾದ ಸತ್ಯ ನಿಮಗೆ ತಿಳಿದಿದ್ದರೂ ಸಹ ಜಾಣ ಕುರುಡು ತೋರುವ ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಮ್ಮ…
ಮುಂಬೈ: ತನ್ನ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಪಟ್ಟಕ್ಕೇರಿ, ನಂತರದ ಸೀಸನ್ನಲ್ಲೂ ಫೈನಲ್ಗೇರಿದ್ದ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ರಶೀದ್ ಖಾನ್, ನಾಯಕ ಶುಭಮನ್ ಗಿಲ್ ಸೇರಿ ಐವರು ಪ್ರಮುಖ ಆಟಗಾರರನ್ನ ತಂಡದಲ್ಲೇ ಉಳಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಗುಜರಾತ್ ಟೈಟಾನ್ಸ್ ತಂಡ ಲೀಗ್ ಸುತ್ತಿನಲ್ಲೇ ಹೊರಬಿದ್ದಿತ್ತು. ಹೀಗಾಗಿ ಮುಂದಿನ ಆವೃತ್ತಿಗೆ ಬಲಿಷ್ಠ ತಂಡ ಕಟ್ಟಲು ಸಿದ್ದವಾಗಿರುವ ಗುಜರಾತ್, ಮೆಗಾ ಹರಾಜಿಗೂ ಮುನ್ನ ಐವರು ಆಟಗಾರರನ್ನು ತನ್ನಲ್ಲೇ ಉಳಿಸಿಕೊಂಡಿದೆ. https://ainlivenews.com/by-following-this-method-if-you-grow-a-ball-flower-you-can-earn-lakhs-in-1-acre/ ಅವರಲ್ಲಿ ನಾಯಕ ಶುಭ್ಮನ್ ಗಿಲ್, ರಶೀದ್ ಖಾನ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಶಾರುಖ್ ಖಾನ್ ಸೇರಿದರೆ, ಉಳಿದಂತೆ ಅನುಭವಿ ಆಟಗಾರರಾದ ಮೊಹಮ್ಮದ್ ಶಮಿ, ಡೇವಿಡ್ ಮಿಲ್ಲರ್, ಉಮೇಶ್ ಯಾದವ್, ಕೇನ್ ವಿಲಿಯಮ್ಸನ್ ಅವರನ್ನು ತಂಡದಿಂದ ಬಿಡುಗಡೆ ಮಾಡಿದೆ. ಗಿಲ್‌ಗಿಂತಲೂ ರಶೀದ್ ದುಬಾರಿ! * ರಶೀದ್ ಖಾನ್ – 18 ಕೋಟಿ ರೂ. * ಶುಭಮನ್ ಗಿಲ್ – 16.5 ಕೋಟಿ ರೂ. * ಸಾಯಿ ಸುದರ್ಶನ್ – 8.5…